ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಕೊಡೇರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಮತ್ತು ಹಳೆ ವಿದ್ಯಾರ್ಥಿಗಳ ವಾರ್ಷಿಕೋತ್ಸವ ಸಮಾರಂಭವು ಶನಿವಾರದಂದು ಕೊಡೇರಿ ಶಾಲಾ ಆವರಣದಲ್ಲಿ ಜರಗಿತು. ಅಂದು ಪೂರ್ವಾಹ್ನ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೇಖರ ಖಾರ್ವಿ ಧ್ವಜಾರೋಹಣಗೈದು ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸುರೇಶ ಎಚ್. ಖಾರ್ವಿ ಈ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರು ಮತ್ತು ಗ್ರಾಮ ಪಂಚಾಯತ್ ಸದಸ್ಯರಾದ ಆನಂದ ಪೂಜಾರಿ ಕೊಡೇರಿ, ಹಿರಿಯರು ಕೊಡುಗೈದಾನಿಗಳಾದ ಕೆ. ವಾಸುದೇವ ಕಾರಂತ, ಉದ್ಯಮಿ ಹರಿದಾಸ್ ಪ್ರಭು, ಪಂಚಾಯತ್ ಸದಸ್ಯರುಗಳಾದ ಕೃಷ್ಣ ಖಾರ್ವಿ, ರಮೇಶ ಖಾರ್ವಿ, ನೇತ್ರಾವತಿ, ಶಶಿಕಲಾ, ಶಿಕ್ಷಣ ಇಲಾಖೆಯ ಸಮನ್ವಯಾಧಿಕಾರಿ ಮಂಜುನಾಥ ದೇವಾಡಿಗ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ ಮೊಗವೀರ, ಕಾರ್ಯದರ್ಶಿ ಚಂದ್ರ ಶೆಟ್ಟಿ, ಮುಖ್ಯ ಶಿಕ್ಷಕಿ ಮರ್ಲಿ ಮೊಗವೀರ ವಿದ್ಯಾರ್ಥಿ ನಾಯಕ ರಕ್ಷಕ್ ದೇವಾಡಿಗ ಉಪಸ್ಥಿತರಿದ್ದರು. ಹಲವಾರು ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಮಾಜ ಸಸೂತ್ರವಾಗಿ ನಡೆಯಲು ಸಾಂಸ್ಕೃತಿಕ ವಾತಾವರಣ ಅತ್ಯಗತ್ಯ. ಅದು ಎಷ್ಟು ಮುಖ್ಯ ಎಂಬುದನ್ನು ಹಿರಿಯರು ಕಂಡುಕೊಂಡು ಪೋಷಿಸುತ್ತಾ ಬಂದಿದ್ದರು. ಮುಂದೆಯೂ ಕಥೆ, ಸಂಗೀತ, ನಾಟಕ ಮೊದಲಾದ ಪ್ರಕಾರಗಳನ್ನು ಪೋಷಿಸುವ ಕಾರ್ಯವಾಗಬೇಕಿದೆ ಎಂದು ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ನವೀನ್ ಹೆಚ್. ಜೆ ಹೇಳಿದರು. ಅವರು ಶನಿವಾರ ಯುಸ್ಕೋರ್ಡ್ ಟ್ರಸ್ಟ್ ರಿ. ಬೈಂದೂರು ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಇಲ್ಲಿನ ಶಾರದಾ ವೇದಿಕೆಯಲ್ಲಿ ಆಯೋಜಿಸಲಾದ ವರ್ಷ ವೈಭವ – 3 ದಿನಗಳ ಯಕ್ಷ – ನಾಟಕೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ ಕಲಾಸಕ್ತರೂ ಸಮಾಜವನ್ನು ನೋಡುವ ದೃಷ್ಟಿಕೋನವೂ ಬೆರೆಯಾದದ್ದು. ಅದನ್ನು ಪೋಷಿಸುವುದು ಮುಖ್ಯ. ಬುದ್ದಿ ಮತ್ತು ಮನಸ್ಸು ಒಟ್ಟಾಗಿ ಆಸ್ವಾದಿಸಿದರೆ ಅದೇ ಸುಂದರ ವಾತಾವರಣ ಎಂದರು. ಯಕ್ಷಗಾನ ಭಾಗವತ ಮಂಜುನಾಥ ದಾಸ್ ಅವರನ್ನು ಸನ್ಮಾನಿಸಲಾಯಿತು. ಯುಸ್ಕೋರ್ಡ್ ಕಾರ್ಯದರ್ಶಿ ಕೃಷ್ಣಮೂರ್ತಿ ಉಡುಪ ಅಧ್ಯಕ್ಷತೆ ವಹಿಸಿದ್ದರು. ಜೆಸಿಐ ಉಪ್ಪುಂದ ಅಧ್ಯಕ್ಷ ಮಂಜುನಾಥ ದೇವಾಡಿಗ, ಡಾ. ಬಿ.ಆರ್.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರ್ಕಾರಿ ಶಾಲೆ ಉಳಿದರೆ ಮಾತ್ರ ನಮ್ಮ ಖುಷಿ, ನೆನಪು ಹಾಗೂ ಸುಮಧುರ ಬಾಂಧವ್ಯ ಶಾಶ್ವತವಾಗಿರಲಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸಿ, ಸೂಕ್ತ ಸೌಲಭ್ಯ ಕಲ್ಪಿಸುವ ದೊಡ್ಡ ಕಾರ್ಯ ಆಗಬೇಕಿದೆ. ಎಲ್ಲಾ ಸರ್ಕಾರಿ ಶಾಲೆಗಳು ಉಳಿಯಬೇಕು. ಇದಕ್ಕೆ ಸ್ಥಳೀಯರ ಪ್ರೋತ್ಸಾಹದ ಜೊತೆಗೆ ಶಾಲಾ ಶಿಕ್ಷಕರು ಹಳೆ ವಿದ್ಯಾರ್ಥಿಗಳ ಉತ್ಸಾಹವು ಅಗತ್ಯವಾಗಿದೆ ಎಂದು ಉದ್ಯಮಿ ಎಚ್. ಜಯಶೀಲ ಎನ್. ಶೆಟ್ಟಿ ಹೇಳಿದರು. ಖಂಬದಕೋಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸೋಮವಾರ ತಮ್ಮ ಸಂಸ್ಥೆಯ ವತಿಯಿಂದ ಕೊಡುಗೆಯಾಗಿ ನೀಡಿದ ಶಾಲಾ ವಾಹನವನ್ನು ಹಸ್ತಾಂತರಿಸಿ ಮಾತನಾಡಿದರು. ಸರ್ಕಾರಿ ಶಾಲೆಯಲ್ಲಿ ಓದಿದ ಅನೇಕರು ಇಂದು ದೊಡ್ಡ ದೊಡ್ಡ ಹುದ್ದೆಯಲ್ಲಿದ್ದಾರೆ. ಅದಕ್ಕೆ ಸರ್ಕಾರಿ ಶಾಲೆಯೇ ಕಾರಣವಾಗಿದ್ದು, ಪ್ರಸ್ತುತ ಕಾಲಘಟ್ಟದಲ್ಲಿ ಕೆಲವು ಶಾಲೆಗಳ ಅಭಿವೃದ್ಧಿಗೆ ಶಿಕ್ಷಕರು, ಪಾಲಕರು ಉತ್ಸಾಹ ತೋರಿದರೆ ಇನ್ನು ಕೆಲವು ಶಾಲೆಯಲ್ಲಿ ವ್ಯವಸ್ಥೆಯನ್ನು ಉಪಯೋಗಿಸಿಕೊಳ್ಳಲು ಯಾರೂ ಮುಂದಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು, ಇಲ್ಲಿನ ಶಿಕ್ಷಕ ವೃಂದ, ಶಾಲಾ ಎಸ್‌ಡಿಎಂಸಿ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: “ಪ್ರತಿಭೆ ನಿಮ್ಮದು ವೇದಿಕೆ ನಮ್ಮದು” ಕಾರ್ಯಕ್ರಮದಡಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ 102 ನೇ ತಿಂಗಳ ಕಾರ್ಯಕ್ರಮ ಇತ್ತೀಚೆಗೆ ಯಶಸ್ವಿಯಾಗಿ ನಡೆಯಿತು. ಇದೇ ವೇದಿಕೆಯಲ್ಲಿ ಫಣಿಗಿರಿ ಪ್ರತಿಷ್ಠಾನ, ಶಿರೂರು ಇವರಿಂದ ಪ್ರಕಟಿತ ಡಾ. 11 ಶಿವಕುಮಾರ ಅಳಗೋಡು ವಿರಚಿತ ಪೌರಾಣಿಕ ಯಕ್ಷಗಾನ ಪ್ರಸಂಗಗಳ ಕೃತಿ ಬಿಡುಗಡೆ ಕಾರ್ಯಕ್ರಮವೂ ಜರಗಿತು. ಕೃತಿ ಪರಿಚಯವನ್ನು ನಾಗರತ್ನ ಹೇರ್ಳೆ ಅವರು ಮಾಡಿದರು. ಕೃತಿಯನ್ನು ಸುಜಯೀಂದ್ರ ಹಂದೆ ಅವರು ಬಿಡುಗಡೆಗೊಳಿಸಿದರು. ವೇದಿಕೆಯಲ್ಲಿ ಫಣಿಗಿರಿ ಪ್ರತಿಷ್ಠಾನದ ಅಧ್ಯಕ್ಷ ಉಮೇಶ್ ಶಿರೂರು ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಅವರು ಉಪಸ್ಥಿತರಿದ್ದರು. ತರಂಗಿಣಿ ಭಜನಾ ಮಂಡಳಿ ಉಡುಪಿ, ಇದರ ಮುಖ್ಯಸ್ಥೆ ಸುಲೇಖಾ ದಯಾನಂದ ಅವರನ್ನು ಅಕಾಡೆಮಿ ವತಿಯಿಂದ ಸಮ್ಮಾನಿಸಲಾಯಿತು. ನಂತರ ತರಂಗಿಣಿ ಭಜನಾ ಮಂಡಳಿ, ಉಡುಪಿ ಇವರು “ಭಜನ್ ಸಂಧ್ಯಾ ಕಾರ್ಯಕ್ರಮ ನಡೆಸಿಕೊಟ್ಟರು. ನಿವೃತ್ತ ಶಿಕ್ಷಕ ನಾಗೇಶ್ ಶ್ಯಾನುಭಾಗ್ ಅವರು ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆಯ ಪ್ರಯುಕ್ತ ಪೋಕ್ಸೋ ಕಾಯ್ದೆ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ ಬಗ್ಗೆ ಮಾಹಿತಿ ಕಾರ್ಯಕ್ರಮ ಶನಿವಾರ ನಡೆಯಿತು. ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯ ಪಿಎಸ್‌ಐ ಮುಕ್ತ ಅವರು ಪೋಕ್ಸೋ ಕಾಯ್ದೆ ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆ ಬಗ್ಗೆ ಮಾಹಿತಿ ನೀಡಿದರು. ಶಾಲೆಯ ಎಸ್. ಡಿ. ಎಂ. ಸಿ. ಅಧ್ಯಕ್ಷ ರವಿಶಂಕರ್ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಸ್.ಡಿ.ಎಂ.ಸಿ. ಸದಸ್ಯ ಅಶೋಕ್ ಪೂಜಾರಿ, ಎಎಸ್‌ಐ ರಾಘವೇಂದ್ರ ಪ್ರಸಾದ್, ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳಾದ ಸಂತೋಷ್, ಕೃಷ್ಣ, ಅಮರ್, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಯಶೋಧ, ಸಹಶಿಕ್ಷಕರು ಉಪಸ್ಥಿತರಿದ್ದರು, ಶಿಕ್ಷಕಿಯರಾದ ಶಾಂತಿ ಸ್ವಾಗತಿಸಿದರು. ಅನುಷಾ ಸಿ. ಬಂಗೇರ ಕಾರ್ಯಕ್ರಮ ನಿರ್ವಹಿಸಿದರು. ನಾಗರತ್ನ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಬೆಂಗಳೂರಿನ ಕ್ರೆಸ್ಟ್ ವಿವಿಯಲ್ಲಿ ನಡೆದ 38ನೇ ಅಂತರ್ ವಿವಿ ಆಗ್ನೇಯ ವಲಯದ ಸಾಂಸ್ಕೃತಿಕ ಯುವಜನೋತ್ಸವ – ‘ಕ್ರೆಸೆಂಡೋ’ದಲ್ಲಿ ಮಂಗಳೂರು ವಿವಿ ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು ಸಂಗೀತ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಗಳಿಸಿ, ಸಮಗ್ರ ವಿಭಾಗದಲ್ಲಿ ರನ್ನರ್ ಅಪ್ ಸ್ಥಾನ ಪಡೆದಿದ್ದಾರೆ. ಜಾನಪದ ವಾದ್ಯ ಮೇಳ ಪ್ರಥಮ, ಭಾರತೀಯ ಶಾಸ್ತ್ರೀಯ ಸ್ವರ ವಾದ್ಯ (ಬಾನ್ಸೂರಿ)ದಲ್ಲಿ ಪ್ರಥಮ, ಸಮೂಹ ಗೀತೆಯಲ್ಲಿ ದ್ವಿತೀಯ, ಜಾನಪದ ನೃತ್ಯ (ಗುಂಪು) ದ್ವಿತೀಯ, ಶಾಸ್ತ್ರೀಯ ಗಾಯನ ವೈಯಕ್ತಿಕದಲ್ಲಿ ದ್ವಿತೀಯ, ಶಾಸ್ತ್ರೀಯ ನೃತ್ಯದಲ್ಲಿ ತೃತೀಯ, ಭಾರತೀಯ ಲಘು ಶಾಸ್ತ್ರೀಯ ಸಂಗೀತದಲ್ಲಿ ತೃತೀಯ, ಪಾಶ್ಚಾತ್ಯ ವಾದ್ಯ ವೈಯಕ್ತಿಕ- ಐದನೇ ಸ್ಥಾನ, ಪಾಶ್ಚಾತ್ಯ ಗಾಯನ ವೈಯಕ್ತಿಕ ಐದನೇ ಸ್ಥಾನ, ಪಾಶ್ಚಾತ್ಯ ಗಾಯನ ಸಮೂಹ ಐದನೇ ಸ್ಥಾನ, ಏಕಾಂಕ ನಾಟಕದಲ್ಲಿ ಐದನೇ ಸ್ಥಾನ ಪಡೆದು ರನ್ಸ್ ಅಪ್ ಪಟ್ಟ ತನ್ನದಾಗಿಸಿಕೊಂಡಿತು. ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಆಳ್ವಾಸ್ ವಿದ್ಯಾರ್ಥಿಗಳುಭಾರತೀಯ ಶಾಸ್ತ್ರೀಯ ಸ್ವರ ವಾದ್ಯ(ಬಾನ್ಸೂರಿ)ದಲ್ಲಿ ಸ್ವಯಂ ಪ್ರಕಾಶ ಪ್ರಭು ಪ್ರಥಮ, ಶಾಸ್ತ್ರೀಯ ಗಾಯನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬ್ಯಾರೀಸ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪ್ರೇರಣೆ, ಜ್ಞಾಪಕಶಕ್ತಿ ಮತ್ತು ಅಧ್ಯಯನ ಕೌಶಲ್ಯಗಳ ಕುರಿತು ಕಾರ್ಯಾಗಾರ ಸೋಮವಾರದಂದು ನಡೆಯಿತು. ಕಾರ್ಯಾಗಾರದ ಸಂಪನ್ಮೂಲ ಬೆಂಗಳೂರಿನ ಸಿ.ಇ.ಒ ಮತ್ತು ಸಂಸ್ಥಾಪಕರಾದ ಅಮೀನ್ ಇ ಮುದಸ್ಸರ್ ಅವರು ಆಗಮಿಸಿದ್ದರು. ಸಿಗ್ಮಾ ದ್ವಿತೀಯ ಪಿಯುಸಿ ತರಗತಿಗಳಿಗೆ ಬಹುವಿಧದ ಜ್ಞಾಪಕಶಕ್ತಿಯ ತಂತ್ರಗಳನ್ನು ಮತ್ತು ವಿದ್ಯಾರ್ಥಿಗಳ ವ್ಯಕ್ತಿತ್ವ ಅಭಿವೃದ್ಧಿಗೆ ಪೂರಕವಾದ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ನಡೆಸಿದರು. ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳು ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ಪುನಶ್ಚೇತನ ಶಿಬಿರವನ್ನು ನಡೆಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ ಕೆ.ಎಂ ಅಬ್ದುಲ್ ರೆಹಮಾನ್ ಬ್ಯಾರಿ ವಹಿಸಿಕೊಂಡಿದ್ದರು. ಟ್ರಸ್ಟಿಗಳಾದ ಕಾರ್ಯಕ್ರಮದ ವೇದಿಕೆಯಲ್ಲಿ ಬ್ಯಾರೀಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಅಶ್ವಿನಿ ಶೆಟ್ಟಿ, ಉಪಪ್ರಾಂಶುಪಾಲೆ ಝಿಯಾನ, ವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ. ಪೂರ್ಣಿಮಾ .ಟಿ, ಬ್ಯಾರೀಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ಶಬೀನಾ ಹೆಚ್. ಉಪಸ್ಥಿತರಿದ್ದರು. ಡಾ. ಆಸಿಫ್ ಬ್ಯಾರಿ ಪ್ರಸ್ತಾವಿಕವಾಗಿ ಮಾತನಾಡಿದರು. ಮನಃಶಾಸ್ತ್ರ ಉಪನ್ಯಾಸಕಿ ಲಾಮಿಸ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮೂಡಬಿದಿರೆಯ ಆಳ್ವಾಸ್ ಸೆಂಟ್ರಲ್ ಶಾಲೆಯಲ್ಲಿ ಡಿ.21ರಂದು ನಡೆದ ಎಐಸಿಎಸ್ ಮಟ್ಟದ ಅಂತರ್ ಶಾಲಾ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿಯನ್ನು ಪಡೆಯಿತು. 14 ವರ್ಷದೊಳಗಿನ ಬಾಲಕರ ವಿಭಾಗದ 600 ಮೀ ಓಟದ ಸ್ಪರ್ಧೆಯಲ್ಲಿ 8ನೇ ತರಗತಿಯ ಸಿದ್ದಲಿಂಗ ಪಿ. ಓಲೇಕಾರ್ ದ್ವಿತೀಯ ಸ್ಥಾನವನ್ನು, 17 ವರ್ಷದೊಳಗಿನ ಬಾಲಕರ ವಿಭಾಗದ ಗುಂಡೆಸೆತ ಸ್ಪರ್ಧೆಯಲ್ಲಿ 10ನೇ ತರಗತಿಯ ತೇಜಸ್ ಲಕ್ಷ್ಮಣ ಸಂಭಾಜಿ ದ್ವಿತೀಯ ಸ್ಥಾನವನ್ನು ಹಾಗೂ 400ಮೀ ಓಟದ ಸ್ಪರ್ಧೆಯಲ್ಲಿ 8ನೇ ತರಗತಿಯ ಈರಣ್ಣ ಕಾಳಪ್ಪ ಪತ್ತಾರ್ ತೃತೀಯ ಸ್ಥಾನವನ್ನು, 17 ವರ್ಷದೊಳಗಿನ ಬಾಲಕಿಯರ ವಿಭಾಗದ ಎತ್ತರ ಜಿಗಿತ ಸ್ಪರ್ಧೆಯಲ್ಲಿ 9ನೇ ತರಗತಿಯ ಅನಿಕಾ ಹೆಚ್ ವೈ ತೃತೀಯ ಸ್ಥಾನವನ್ನು ಪಡೆದರು. ವಿದ್ಯಾರ್ಥಿಗಳ ಈ ಅಮೋಘ ಪ್ರದರ್ಶನದ ಕುರಿತಾಗಿ ಪ್ರತಿಕ್ರಿಯಿಸಿದ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ “2024-25ನೇ ಸಾಲಿನಲ್ಲಿ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತ್ರಾಸಿ ಬೀಚ್ ಸಮುದ್ರ ತೀರದಲ್ಲಿ ನಾಪತ್ತೆ ಆಗಿದ್ದ ಜೆಟ್ ಸ್ಕೀ ರೈಡರ್ ರೋಹಿದಾಸ್ ಯಾನೆ ರವಿ (41) ಅವರ ಶವ 36 ಗಂಟೆಗಳ ಬಳಿಕ ಸಮೀಪದ ಹೊಸಪೇಟೆ ರುದ್ರ ಭೂಮಿಯ ಹಿಂಭಾಗದ ಸಮುದ್ರ ತೀರದಲ್ಲಿ ಪತ್ತೆ ಆಗಿದೆ. ಸ್ಥಳೀಯ ಮೀನುಗಾರರಾದ ಶಾಸ ಖಾರ್ವಿ ಹಾಗು ಮೋಹನ ಖಾರ್ವಿ ಅವರು 3 ಗಂಟೆ ಸುಮಾರಿಗೆ ಮೀನುಗಾರಿಕೆ ತೆರಳಲು ಹೋಗುತ್ತಿದ್ದಾಗ ಶವ ತೇಲುತ್ತಿರುವುದನ್ನು ಗಮನಿಸಿದ್ದಾರೆ. ಸ್ಥಳೀಯ ಕರಾವಳಿ ಕಾವಲು ಪಡೆಯ ಕರಾವಳಿ ನಿಯಂತ್ರಣ ದಳದ ಸಿಬ್ಬಂದಿ ನಿಶಾಂತ್ ಖಾರ್ವಿಗೆ ಮಾಹಿತಿ ನೀಡಿ, ತದನಂತರ ಮೂವರು ಸೇರಿ ತೇಲುತ್ತಿದ್ದ ಶವವನ್ನು ಮೇಲೆಕ್ಕೆ ತಂದು, ಪೊಲೀಸರಿಗೆ ಮಾಹಿತಿ ನೀಡಿದರು. ಗಂಗೊಳ್ಳಿ 24×7 ಆಂಬ್ಯುಲೆನ್ಸ್ ಇದರ ಇಬ್ರಾಹಿಂ ಗಂಗೊಳ್ಳಿ, ಕೆ. ಎನ್. ಡಿ. ಸಿಬ್ಬಂದಿ ನಿಶಾಂತ್ ಖಾರ್ವಿ, ಬೀಚ್ ಉಸ್ತುವಾರಿ ಸಿಬ್ಬಂದಿ ಸುರೇಶ್ ಕೊಡೇರಿ, ಮೃತ ರೊಹಿದಾಸ್ ಸಹೋದ್ಯೋಗಿಗಳು ಶವವನ್ನು ತೀರದಿಂದ ಸಾಗಿಸಲು ಸಹಕರಿಸಿದರು. ಗಂಗೊಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಸದ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೂರ್‌ಕೆಲಾ, ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದ ನಿವೃತ್ತ ಎ.ಜಿ.ಎಂ. ಬೆಂಗಳೂರಿನ ಖ್ಯಾತ ಉದ್ಯಮಿ ನೈಲಾಡಿ ದೊಡ್ಡಮನೆ ಮಂಜಯ್ಯ ಶೆಟ್ಟಿ (98) ಡಿ. 14 ರಂದು ನಿಧನರಾದರು. ಕುಂದಾಪುರದ ನೈಲಾಡಿ ಮನೆಯಲ್ಲಿದ್ದು, ಅಕ್ಕ ದಿ. ನೈಲಾಡಿ ಭವಾನಿ ಶೆಡ್ತಿ, ಬಾವ ಚಿತ್ತೂರು ಮಂಜಯ್ಯ ಶೆಟ್ಟಿ ಅವರ ಪ್ರೋತ್ಸಾಹದಿಂದ ಉನ್ನತ ವಿದ್ಯಾಭ್ಯಾಸ ಪಡೆದು ಮದ್ರಾಸ್‌ನ ಅಣ್ಣಾಮಲೈ ಯುನಿವರ್ಸಿಟಿಯಲ್ಲಿ ಇಂಜಿನಿಯರಿಂಗ್ ಪದವಿ ಪಡೆದು ಕುಂದಾಪುರ ತಾಲೂಕಿನ ಬಂಟ್ಸ್ ಸಮಾಜದಲ್ಲಿ ಪ್ರಥಮ ಇಂಜಿನಿಯರ್ ಎಂದು ಸಾಧನೆ ಮಾಡಿದವರು. ರೂರ್‌ಕೆಲಾ ಉಕ್ಕಿನ ಕಾರ್ಖಾನೆಯಲ್ಲಿ ಸೇವೆ ಸಲ್ಲಿಸಿ, ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಎ.ಜಿ.ಎಂ. ಆಗಿ ನಿವೃತ್ತಿ ಪಡೆದು ಬೆಂಗಳೂರಲ್ಲಿ ಸ್ವಂತ ಉದ್ಯಮ ನಡೆಸುತ್ತಿದ್ದರು. ಬ್ರಹ್ಮಾವರ ಪಡುಬೆಟ್ಟುಬೀಡು ದಿ. ರಾಮಣ್ಣ ಶೆಟ್ಟಿ ಮತ್ತು ನೈಲಾಡಿ ದೊಡ್ಡಮನೆ ಅಕ್ಕಯ್ಯ ಶೆಟ್ಟಿ ಇವರ ಪುತ್ರರಾದ ಜನಾನುರಾಗಿಯಾಗಿದ್ದರು. ಇವರು ಪತ್ನಿ, ಮೂವರು ಪುತ್ರಿಯರು, ಓರ್ವ ಪುತ್ರನನ್ನು ಅಗಲಿದ್ದಾರೆ.
