ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸ್ವಾಭಾವಿಕವಾಗಿ ಲಭ್ಯವಿರುವ ಸೌರಶಕ್ತಿ ಬಳಕೆಯಿಂದ ವಿದ್ಯುತ್ ಶಕ್ತಿ ಉತ್ಪಾದನೆಯ ಸೋಲಾರ್ ಘಟಕಗಳನ್ನು ಜಿಲ್ಲೆಯ ಪ್ರತಿಯೊಂದು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಉಚಿತವಾಗಿ ಅಳವಡಿಸಿದ ಮಣಿಪಾಲ ಟೆಕ್ನೋಲಾಜಿಸ್ ಮತ್ತು ಸೆಲ್ಕೋ ಫೌಂಡೇಶನ್ ಸಂಸ್ಥೆಗಳ ಕಾರ್ಯ ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಅಜ್ಜರಕಾಡು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಶ್ರೀ ಕೃಷ್ಣ ಸಭಾಂಗಣದಲ್ಲಿ, ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಜಿಲ್ಲೆಯ ಆರೋಗ್ಯ ಕೇಂದ್ರಗಳಲ್ಲಿ ಸೋಲಾರ್ ಘಟಕ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಮಣಿಪಾಲ ಟೆಕ್ನೋಲಾಜಿಸ್ ಮತ್ತು ಸೆಲ್ಕೋ ಫೌಂಡೇಶನ್ ಸಂಸ್ಥೆಗಳ ಮುಖ್ಯಸ್ಥರಿಗೆ ಸೂರ್ಯ ನಮಸ್ಕಾರ– ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ 60 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಜಿಲ್ಲೆಯ ಮಣಿಪಾಲ ಟೆಕ್ನೋಲಾಜಿಸ್ ಮತ್ತು ಸೆಲ್ಕೋ ಫೌಂಡೇಶನ್ ಸಂಸ್ಥೆಗಳು ಸೋಲಾರ್ ಅಳವಡಿಸುವ ಮೂಲಕ ಅನುಕೂಲ ಮಾಡಿಕೊಟ್ಟಿವೆ. ಕಚೇರಿಯ ಕೆಲಸ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನದ ವತಿಯಿಂದ ಕಳೆದ ಕೆಲವು ವರ್ಷಗಳಿಂದ ನಾಡಿನ ಶಿಕ್ಷಣ ಹಾಗೂ ಕೃಷಿ ಕ್ಷೇತ್ರದ ಸಾಧಕರಿಗೆ ನೀಡುವ ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರಶಸ್ತಿಗೆ ಈ ಬಾರಿ ಹಿರಿಯ ಕನ್ನಡ ಸಂಶೋಧಕ, ವಿಮರ್ಶಕ, ಅನುವಾದಕ ಹಾಗೂ ವಿಶ್ರಾಂತ ಕುಲಪತಿಗಳಾದ ಡಾ. ಬಿ.ಎ. ವಿವೇಕ ರೈ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಬಿ. ಅಪ್ಪಣ್ಣ ಹೆಗ್ಡೆ ಜನ್ಮ ದಿನೋತ್ಸವ- 90 ಸಮಿತಿಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ ಮತ್ತು ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನದ ಅಧ್ಯಕ್ಷರಾದ ರಾಮ್ ಕಿಶನ್ ಹೆಗ್ಡೆ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಳೆದ ಆರು ದಶಕಗಳಿಂದ ಅಧ್ಯಯನ, ಅಧ್ಯಾಪನ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಡಾ. ಬಿ.ಎ. ವಿವೇಕ ರೈ ಅವರು ಕನ್ನಡ ಹಾಗೂ ತುಳು ಭಾಷೆಯ ಅಭಿವೃದ್ಧಿಗಾಗಿ ಸಾಕಷ್ಟು ಕೊಡುಗೆಯನ್ನು ನೀಡಿದ್ದಾರೆ. ಮೈಸೂರು ವಿಶ್ವವಿದ್ಯಾನಿಯದ ಮಂಗಳೂರು ಸ್ನಾತಕ್ಕೋತ್ತರ ಕೇಂದ್ರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಎಸ್.ವಿ.ಪಿ ಕನ್ನಡ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪುರಾಣ ಪ್ರಸಿದ್ಧ ಕೋಟೇಶ್ವರ ಮಹತೋಭಾರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಡಿ.15ರಂದು ದೇವರ ಶ್ರೀಮನ್ಮಹಾ ರಥೋತ್ಸವ ನಡೆಯಲಿದೆ. ಬೆಳಗ್ಗೆ 11.45ಕ್ಕೆ ಮಕರ ಲಗ್ನ ಸುಮುಹೂರ್ತದಲ್ಲಿ ಶ್ರೀ ಮನ್ಮಹಾ ರಥೋತ್ಸವ, ಡಿ.16ರಂದು ಚೂರ್ಣೋತ್ಸವ, ಅವಭ್ರತ ಸ್ನಾನ ಮುಂತಾದ ಧಾರ್ಮಿಕ ಕಾರ್ಯಕ್ರಮದೊಂದಿಗೆ ಸ್ಥಳೀಯ ನಾನಾ ಭಜನಾ ಮಂಡಳಿಗಳ ನೇತೃತ್ವದಲ್ಲಿ ಭಜನೆ ಹಾಗೂ ಮಂಗಲೋತ್ಸವ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮ ಅಂಗವಾಗಿ ಡಿ.15ರಂದು ರಾತ್ರಿ 8ಕ್ಕೆ ಮಿತ್ರದಳದ ಮಿತ್ರೆಯರಿಂದ ‘ತನನಂ ತನನಂ’ ನೃತ್ಯ ವೈವಿಧ್ಯ ಹಾಗೂ ಡಿ.16ರಂದು ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ತಾಳಮದ್ದಳೆ ದಕ್ಷಯಜ್ಞ ಕಾರ್ಯಕ್ರಮ ಶಾಂತಾರಾಮ ನಡೆಯಲಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸುಮಾರು ಮೂರು ದಶಕಗಳ ಕಾಲ ಗಂಗೊಳ್ಳಿ ಪಂಚಾಯಿತಿಯಲ್ಲಿ ಅಧಿಕಾರ ನಡೆಸುತ್ತಿದ್ದ ಬಿಜೆಪಿ ಬೆಂಬಲಿತರ ಸುದೀರ್ಘ ಅವಧಿಯ ಆಳ್ವಿಕೆಯನ್ನು ಕೊನೆಗೊಳಿಸಿ ಕಾಂಗ್ರೆಸ್ ಪಕ್ಷದ ಪರವಾಗಿರುವ ಅಭ್ಯರ್ಥಿಗಳ ಪರ ಮತ ನೀಡಿದ ಗಂಗೊಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮಗ್ರ ಮತದಾರರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ತಿಳಿಸಿದ್ದಾರೆ. ರಾಜ್ಯದ ಪ್ರಮುಖ ಬಂದರು ನಗರಿಗಳಲ್ಲಿ ಒಂದಾಗಿರುವ ಗಂಗೊಳ್ಳಿಯ ಸ್ಥಳೀಯ ಸಮಸ್ಯೆಗಳನ್ನು ಕಡೆಗಣಿಸಿದ್ದರಿಂದ ಹಾಗೂ ಜನರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳು ಕಳೆದ ವರ್ಷಗಳಲ್ಲಿ ನಡೆಯದೆ ಇದ್ದುದರಿಂದ ಗಂಗೊಳ್ಳಿ ಪ್ರಬುದ್ಧ ಮತದಾರರು, ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಟ್ಟು ಕಾಂಗ್ರೆಸ್ ಪರವಾದ ಅಭ್ಯರ್ಥಿಗಳಿಗೆ ಹೆಚ್ಚಿನ ಮತ ನೀಡುವ ಮೂಲಕ ಐತಿಹಾಸಿಕ ನಿರ್ಧಾರ ಹಾಗೂ ಬದಲಾವಣೆ ಮಾಡಿದ್ದಾರೆ. ಗಂಗೊಳ್ಳಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಹಗಲಿರುಳು ಶೃಮಿಸಿದ ಪಕ್ಷದ ಕಾರ್ಯಕರ್ತರು, ವೀಕ್ಷಕರು ಹಾಗೂ ಮುಖಂಡರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೋಟೇಶ್ವರದ ಕೃಷ್ಣಾಪುರ ಸರಕಾರಿ ಪದವಿಪೂರ್ವ ಕಾಲೇಜಿನ ಸಮಾಜಶಾಸ್ತ್ರ ಉಪನ್ಯಾಸಕ ರವಿಚಂದ್ರ ಭಂಡಾರಿ ಅವರಿಗೆ ಚೆನ್ನೈನ ವಿಮೆನ್ಸ್ ಕ್ರಿಶ್ಚಿಯನ್ ಕಾಲೇಜು ಮತ್ತು ಬೋಧಿ ಇಂಟರ್ನ್ಯಾಷನಲ್ ಜರ್ನಲ್ ಇಂಡಿಯಾ ಪ್ರಶಸ್ತಿ ಲಭಿಸಿದೆ. ಇವರುಗಳು ಶಿಕ್ಷಣ ಕ್ಷೇತ್ರದಲ್ಲಿ ಸಾಧಿಸಿದ ಅಮೋಘ ಸೇವೆಗಾಗಿ ಕೊಡಮಾಡುವ ಬೋಧಿ ಇಂಟರ್ನ್ಯಾಷನಲ್ ಅಕಾಡೆಮಿಕ್ ಆಂಡ್ ರಿಸರ್ಚ್ ಎಕ್ಸಲೆನ್ಸ್ ಅವಾರ್ಡ್ಸ್ -2024 ಇದರ ಬೋಧಿ ಶ್ರೇಷ್ಟ ಶಿಕ್ಷಣ ತಜ್ಞ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಸಾಧಿಸಬೇಕಾದರೆ ವಿಭಿನ್ನವಾಗಿ ಆಲೋಚಿಸುವ ಶಕ್ತಿಯನ್ನು ಬೆಳೆಸಿಕೊಳ್ಳಬೇಕು. ಕಲಿಯಲು ಮನಸ್ಸಿನ ಹಸಿವಿರಬೇಕು, ಕಲಿಕಬೇಕೆಂಬ ತುಡಿತವಿರಬೇಕು. ಕಲಿಕೆಯಲ್ಲಿ ಫೋಕಸ್ ಮಾಡಬೇಕು. ಕಷ್ಟಪಟ್ಟಾದರೂ ಕಲಿಕೆಯಲ್ಲಿ ಮನಸ್ಸು ನೀಡಬೇಕು. ಮನಸ್ಸನ್ನು ಹಿಡಿತದಲ್ಲಿಟ್ಟುಕೊಂಡು ವಿದ್ಯಾಭ್ಯಾಸ ಮಾಡಬೇಕು. ವಿದ್ಯಾರ್ಥಿ ಜೀವನದಲ್ಲಿ ಬರುವ ಪ್ರತಿಯೊಂದು ಸವಾಲುಗಳನ್ನು ಧೈರ್ಯವಾಗಿ ಎದುರಿಸಿ ಸಾಧಿಸುವ ಛಲವನ್ನು ಹೊಂದಬೇಕು. ವಿದ್ಯೆ ನಮ್ಮ ಸಮಸ್ಯೆಗಳಿಗೆ ಪರಿಹಾರವಲ್ಲ. ಉನ್ನತ ಶಿಕ್ಷಣ ಜೀವನೋಪಾಯವನ್ನು ಕಲಿಸಿದರೆ, ಬಾಲ್ಯದಲ್ಲಿ ದೊರೆಯುವ ಶಿಕ್ಷಣ ನಾವು ಹೇಗೆ ಜೀವಿಸಬಹುದು ಎಂಬುದನ್ನು ಕಲಿಸುತ್ತದೆ ಎಂದು ಇಸ್ರೋದ ಗ್ರೂಪ್ ಡೈರೆಕ್ಟರ್ ಡಾ. ನಾಗೇಶ ಎಸ್.ಕೆ. ಹೇಳಿದರು. ಗಂಗೊಳ್ಳಿಯ ಸ.ವಿ. ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಶುಕ್ರವಾರ ಜಿ. ಎಸ್. ವಿ. ಎಸ್. ಅಸೋಸಿಯೇಶನ್ ಪ್ರಾಯೋಜಿತ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಜಿ. ಎಸ್. ವಿ. ಎಸ್. ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಜಿ. ವೆಂಕಟೇಶ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇನ್ಸ್ಟಿಟ್ಯೂಟ್ ಆಫ್ ಕರಾಟೆ ಅಲೈಡ್ ಆರ್ಟ್ಸ್ ಮಂಗಳೂರು, ಇವರ ಪುತ್ತೂರಿನಲ್ಲಿ ಜರುಗಿದ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ಶಿಪ್ನಲ್ಲಿ ಪಿಎಮ್ ಶ್ರೀ ಕುವೆಂಪು ತೆಕ್ಕಟ್ಟೆ ಶಾಲೆಯ ವಿದ್ಯಾರ್ಥಿಗಳು ಕಟಾ ಮತ್ತು ಕುಮಿಟೆ ವಿಭಾಗದಲ್ಲಿ 2 ಚಿನ್ನ, 5 ಬೆಳ್ಳಿ, 20 ಕಂಚಿನ ಪದಕಗಳನ್ನು ಪಡೆದಿರುತ್ತಾರೆ. ಅವರು ಸೆನ್ಸಿ ಸತೀಶ ಕಿಣಿ ಕೋಟ ಅವರಲ್ಲಿ ತರಬೇತಿ ಪಡೆದಿರುತ್ತಾರೆ. ವಿದ್ಯಾರ್ಥಿಗಳನ್ನು ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಹಾಗೂ ಶಾಲಾ ಎಸ್ಡಿಎಮ್ಸಿ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಮಿಷನ್ ವತಿಯಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನ ಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ 1ನೇ ತರಗತಿಯಿಂದ 7ನೇ ತರಗತಿವರೆಗಿನ ಸರ್ಕಾರಿ ಶಾಲೆಯ ಎಲ್ಲಾ ಮಕ್ಕಳಿಗೆ ಉಚಿತವಾಗಿ 95,000 ಶಾಲಾ ಬ್ಯಾಗ್ಗಳನ್ನು ನೀಡಿದರು. ಅವರು ಶಿವಮೊಗ್ಗ ನಗರದ ದುರ್ಗಿಗುಡಿ ಅಲ್ಲಿರುವ ಸರ್ಕಾರಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬ್ಯಾಗ್ ವಿತರಿಸಿ ಮಾತನಾಡಿದರು. ಮುಂದಿನ ದಿನಗಳಲ್ಲಿ 8 ರಿಂದ 10 ನೇ ತರಗತಿಯ ಸರ್ಕಾರಿ ಪ್ರೌಢ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಶಾಲಾ ಬ್ಯಾಗ್ ವಿತರಣೆ ಮಾಡುವ ಗುರಿಯನ್ನು ಹೊಂದಿದ್ದು, ಅದರ ಜೊತೆಗೆ ಉಚಿತವಾಗಿ ಸ್ವೆಟರ್, ನೋಟ್ ಪುಸ್ತಕ ಹಾಗೂ ಇನ್ನಿತರೆ ಕಲಿಕಾ ಉಪಕರಣಗಳನ್ನು ರಾಷ್ಟ್ರೀಯ ಸಾಕ್ಷರತಾ ಮಿಷನ್ ವತಿಯಿಂದ ನೀಡಲಾಗುವುದೆಂದು ಪತ್ರಿಕಾ ಪ್ರಕಟಣೆಯಲ್ಲಿ ಸಂಸದರಾದ ಬಿ.ವೈ ರಾಘವೇಂದ್ರ ಅವರು ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕ್ರೀಯಾಶೀಲ ಚಟುವಟಿಕೆಗಳು ಇಲ್ಲದೇ ಹೋದರೆ ಸಮಾಜ ಬೇಗನೆ ಬಿದ್ದು ಹೋಗುತ್ತದೆ. ಈ ಹಿನ್ನೆಲೆಯಲ್ಲಿ ಸಮುದಾಯ ಹಾಗೂ ವ್ಯಕ್ತಿಗಳ ನಡುವೆ ಸಮನ್ವಯತೆ ಸಾಧಿಸುವ ನಗರಗಳು ಸಾಂಸ್ಕೃತಿಕವಾಗಿ ಬಲಿಷ್ಠವಾಗಿದ್ದು, ಪ್ರಸ್ತುತ ಗ್ರಾಮೀಣ ಭಾಗಗಳು ಕೂಡ ಈ ಸಾಲಿಗೆ ಸೇರುತ್ತಿವೆ ಎಂದು ಬೈಂದೂರು ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲರಾಧ ನಾಗರಾಜ ಶೆಟ್ಟಿ ಅವರು ಹೇಳಿದರು. ಇಲ್ಲಿನ ಶ್ರೀ ಶಾರದಾ ವೇದಿಕೆಯಲ್ಲಿ ಸೋಮವಾರ ಸುರಭಿ ರಿ. ಬೈಂದೂರು ಸಂಸ್ಥೆಯ ರೋಟರಿ ಕ್ಲಬ್ ಸಹಯೋಗದಲ್ಲಿ ಸುರಭಿ ಕಲಾಸಂಸ್ಥೆಯ 25ನೇ ವರ್ಷದ ರಜತಯಾನದ ಅಂಗವಾಗಿ ಹಮ್ಮಿಕೊಂಡ ತಿಂಗಳ ತಿರುಳು ಕಾರ್ಯಕ್ರಮದಲ್ಲಿ ಬೈಂದೂರು ರೋಟರಿ ಸದಸ್ಯರಿಂದ ಪ್ರದರ್ಶನಗೊಂಡ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಾತನಾಡಿದರು. ನಾಟಕ ಸೇರಿದಂತೆ ಕಲಾಪ್ರದರ್ಶನಗಳಿಲ್ಲದ ದೇಶ ಸಾಂಸ್ಕೃತಿಕವಾಗಿ ಬರಡಾಡುಗತ್ತದೆ ಎನ್ನುವುದಕ್ಕೆ ಅವುಗಳನ್ನು ನಿಷೇಧಿಸಿದ ದೇಶಗಳಲ್ಲಿ ಉದಾಹರಣೆ ದೊರೆಯುತ್ತದೆ. ಮನುಷ್ಯ ಪ್ರವೃತ್ತಿ ಮತ್ತು ಸ್ವಭಾವಗಳನ್ನು ಪ್ರತಿನಿಧಿಸುವ ಪಾತ್ರಗಳಿಂದ ನಾಟಕಗಳು ಕೂಡಿರುವುದರಿಂದ ಅವುಗಳಿಗೆ ಜಾಗತಿಕ ಆಯಾಮ ಇದೆ. ರಂಗಭೂಮಿ ಚಟುವಟಿಕೆಗಳು ನಿರಂತರವಾಗಿರುವ ಪ್ರದೇಶದಲ್ಲಿ ಸ್ವಭಾವ ಮತ್ತು ಪ್ರವೃತ್ತಿಯ ಆತ್ಮಾವಲೋಕನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಆರ್. ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಉತ್ಪನ್ನ ಘಟಕದ ಬಗ್ಗೆ ಮಾಹಿತಿ – ಪ್ರಾತ್ಯಕ್ಷಿಕೆ ನೀಡುವ ಸಲುವಾಗಿ ‘ಇಂಡಸ್ಟ್ರಿಯಲ್ ವಿಸಿಟ್’ ನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳು ಉಪ್ಪೂರಿನ ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟ ಫ್ಯಾಕ್ಟರಿ ಮತ್ತು ಶಿರಿಯಾರದ ತಂಪು ಪಾನೀಯ ಉತ್ಪಾದನಾ ಘಟಕ ‘ಶ್ರೀ ಕಟೀಲೇಶ್ವರಿ ಬಾಟ್ಲಿಂಗ್ ಕಂಪೆನಿ’ಗೆ ಭೇಟಿ ನೀಡಿದರು. ಇದೇ ಸಂದರ್ಭದಲ್ಲಿ ಕೋಟಾದ ಕಾರಂತ ಥೀಮ್ ಪಾರ್ಕ್ಗೂ ಭೇಟಿ ನೀಡಲಾಯಿತು. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ಸುಷ್ಮಾ ಶೆಣೈ, ಕನ್ನಡ ವಿಭಾಗದ ಮುಖ್ಯಸ್ಥರಾದ ಕೃಷ್ಣಮೂರ್ತಿ ಡಿ. ಬಿ., ಹಿಂದಿ ಉಪನ್ಯಾಸಕಿ ಜಯಶೀಲಾ ಪೈ ಹಾಗೂ ಇತರ ಉಪನ್ಯಾಸಕರು ವಿದ್ಯಾರ್ಥಿಗಳ ಜೊತೆಗೂಡಿದ್ದರು.
