Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲಾ ಮಟ್ಟದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಜನವರಿ 25 ರಂದು ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವು ಇದೆ ಜನವರಿ 25 ರಂದು ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದರು. ಖ್ಯಾತ ಉಪನ್ಯಾಸಕರಿಂದ ಮತದಾರರ ದಿನಾಚರಣೆ ಕುರಿತು ಉಪನ್ಯಾಸ ಸಹ ನಡೆಯಲಿದ್ದು, ಯುವ ಮತದಾರರಿಗೆ ಹೊಸ ಎಪಿಕ್ ಕಾರ್ಡ್ಗಳನ್ನು ಇದೇ ಸಂದರ್ಭದಲ್ಲಿ ವಿತರಿಸಲಾಗುವುದು ಎಂದ ಅವರು, ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತೆಕ್ಕಟ್ಟೆ ಲಯನ್ಸ್ ಕ್ಲಬ್‌ ವತಿಯಿಂದ ಕನ್ಯಾಕುಮಾರಿಯ ಖಾಸಗಿ ಹೋಟೆಲ್‌ನಲ್ಲಿ ಅಂತರಾಜ್ಯ ಟ್ವಿನ್ನಿಂಗ್ ಕಾರ್ಯಕ್ರಮ ಇತ್ತೀಚಿಗೆ ನಡೆಯಿತು. ಮುಖ್ಯ ಅತಿಥಿಯಾಗಿದ್ದ ಗ್ಯಾಬ್ರಿಯಲ್ ಮಾತನಾಡಿ, ತೆಕ್ಕಟ್ಟೆ ಲಯನ್ಸ್ ಕ್ಲಬ್ ಸದಸ್ಯರು ಕನ್ಯಾಕುಮಾರಿಗೆ ಬಂದು ಲಯನ್ಸ್ ಕ್ಲಬ್‌ ಮೂಲಕ ನಾವೆಲ್ಲರೂ ಒಂದೇ ಕುಟುಂಬದವರಾಗಿದ್ದೇವೆ ಎನ್ನುವುದನ್ನು ತೋರಿಸಿಕೊಟ್ಟಿರುತ್ತಾರೆ ಎಂದು ಸಂತೋಷವನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹರ್ಷವರ್ಧನ್ ಶೆಟ್ಟಿ ವಹಿಸಿ, ಎಲ್ಲರನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ರಾಮನಾಥನ್, ವೇಲ್ ಮುತ್ತುರಾಮನ್, ಗ್ಯಾಬ್ರಿಯಲ್ ಕಮಲೇಶ್, ಪೊನ್ನಸಕ್ಕೆ, ಕಿಶೋರ್ ಶೆಟ್ಟಿ, ರಮೇಶ್ ಕೆ. ಶೆಟ್ಟಿ, ಉಪಸ್ಥಿತರಿದ್ದರು. ಜ್ಯೋತಿ ಕೆ. ಶೆಟ್ಟಿ ಪ್ರಾರ್ಥಿಸಿ, ಶಂಕರ ಶೆಟ್ಟಿ ಬವಳಾಡಿ ಧ್ವಜವಂದನೆ ನೆರವೇರಿಸಿದರು. ಶೋಭಾ ಎಸ್. ಶೆಟ್ಟಿ ನೀತಿ ಸಂಹಿತೆಯನ್ನು ವಾಚಿಸಿದರು. ಸ್ಥಾಪಕಾಧ್ಯಕ್ಷ ಸೀತಾರಾಮ್ ಶೆಟ್ಟಿ ಅವರು ಪ್ರಾಸ್ಥಾವಿಸಿ, ಲಯನ್ಸ್ ಧರ್ಮರಾಜ್ ಮುದಲಿಯಾರ್‌ ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ಕಿಶೋರ್ ಕುಮಾರ್ ಶೆಟ್ಟಿ ವಂದಿಸಿದರು. ಕಾರ್ಯಕ್ರಮದಲ್ಲಿ ತಿರುನಲ್ವೇಲಿಯ ಮೂರು ಕ್ಲಬ್‌ಗಳಾದ ಲಯನ್ಸ್ ಕ್ಲಬ್ ಪಾಲಾಯಂ ಕೋಟೆ ಕಿಂಗ್ಸ್, ಲಯನ್ಸ್ ಕ್ಲಬ್ ತಿರುನೆಲ್ವೇಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಂದ ವಿವಿಧ ಪತ್ರಿಕಾಲಯಗಳಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ. ಒಟ್ಟು ಐವರು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶವಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಎರಡು ತಿಂಗಳ ಅವಧಿಗೆ ವಿವಿಧ ಪತ್ರಿಕಾ ಕಚೇರಿಗಳಲ್ಲಿ ತರಬೇತಿ ಪಡೆಯಲು ಅವಕಾಶ ಕಲ್ಪಿಸಲಾಗುವುದು. ತರಬೇತಿ ಅವಧಿಯಲ್ಲಿ ಮಾಸಿಕ 20,000 ರೂ. ಶಿಷ್ಯವೇತನ ನೀಡಲಾಗುವುದು. ಅಭ್ಯರ್ಥಿಗಳು ರಾಜ್ಯದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದಿರಬೇಕು. ವಯಸ್ಸು 28 ವರ್ಷ ಮೀರಿರಬಾರದು. ಅರ್ಹತಾ ಪರೀಕ್ಷೆಯ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. ಆಸಕ್ತ ಅಭ್ಯರ್ಥಿಗಳು ಜನವರಿ 20 ರ ಒಳಗಾಗಿ ತಮ್ಮ ಸ್ವ-ವಿವರ, ದೂರವಾಣಿ ಸಂಖ್ಯೆ, ಇ-ಮೇಲ್ ವಿಳಾಸ, ಆರ್ಥಿಕ ಸ್ಥಿತಿ, ಅಂಕಪಟ್ಟಿಗಳ ಮಾಹಿತಿಯನ್ನು ಸ್ಕ್ಯಾನ್ ಮಾಡಿ karnatakamediaacademy@gmail.com ಗೆ ಇ-ಮೇಲ್ ಮೂಲಕ ಕಳುಹಿಸಬಹುದಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗುಡ್ಡಮ್ಮಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಾನುವಾರ ಷಷ್ಠಿ ಮಹೋತ್ಸವವು  ಸಂಭ್ರಮದಿಂದ ಜರಗಿತು. ಆನುವಂಶಿಕ ಮೊಕೇಸರ ಬಿ. ಅರುಣ್ ಕುಮಾರ್ ಶೆಟ್ಟಿ, ಅಭಿನಂದನ್ ಶೆಟ್ಟಿ ಅರ್ಚಕರು ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಜ. 5ರಂದು ಬೆಳಗ್ಗೆ ಗಣಪತಿ ಪ್ರಾರ್ಥನೆ, ಪುಣ್ಯಾಹ, ಪ್ರಧಾನಹೋಮ, ನವಕಲಶಾಭಿಷೇಕ, ಸಂಹಿತ ಪಾರಾಯಣ, ಕಲಶಾಭಿಷೇಕ ನಡೆಯಿತು. ತದನಂತರ ಹಣ್ಣುಕಾಯಿ, ಮಂಗಳಾರತಿ, ಹರಿವಾಣ ನೈವೇದ್ಯ ಸೇವೆಯಲ್ಲಿ ಭಕ್ತರು ಪಾಲ್ಗೊಂಡರು. ಮಡೆ ಪ್ರದಕ್ಷಿಣೆ, ಶ್ರೀ ನಾಗದರ್ಶನ ದರ್ಶನ ಕಾರ್ಯಕ್ರಮದಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡರು. ಇಂದಿನ ಕಾರ್ಯಕ್ರಮಬೆಳಗ್ಗೆ 6.30ಕ್ಕೆ ಹಾಲಿಟ್ಟು ಸೇವೆ, ಬೆಳಗ್ಗೆ 9.30ಕ್ಕೆ ನಾಗಮಂಡಲ, 11 ಗಂಟೆಗೆ ತುಲಾಭಾರ ಸೇವೆ ನಡೆಯಲಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಎಲ್ಲಾ ಜನ್ಮಗಳಲ್ಲಿ ಪುಣ್ಯವನ್ನು ಮಾಡಿದಾಗ ಪಾಪದಿಂದ ಮುಕ್ತನಾಗಿ ಪರಿಶುದ್ಧನಾದಾಗ ಮನುಷ್ಯ ಜನ್ಮ ಪಡೆಯುತ್ತಾನೆ. ಮನುಷ್ಯ ಜನ್ಮ ಪಡೆದಾಗ ಮತ್ತುಳಿದ ಎಲ್ಲಾ ಜೀವಿಗಳಂತೆ ಸುಮ್ಮನೆ ಜೀವನವನ್ನು ವ್ಯರ್ಥ ಮಾಡದೆ ಆ ಮನುಷ್ಯ ಜನ್ಮ ಸಾರ್ಥಕ ಆಗಬೇಕಾದರೆ ಭಗವಂತನ ಭಜನೆ ಮಾಡಬೇಕು, ಜನಹಿತ ಕಾರ್ಯಗಳನ್ನು ಉತ್ತಮ ಕಾರ್ಯ ಮಾಡುತ್ತಿರಬೇಕು ಎಂದು ತಾಳಗುಪ್ಪ ಪ್ರಣವ ಪೀಠ ಕೂಡ್ಲಿ ಬಾರಂಗಿ ಮಹಾಸಂಸ್ಥಾನ ಮಠದ ವಿದ್ವಾನ್ ಸಿದ್ಧವೀರ ಸ್ವಾಮೀಜಿ ಹೇಳಿದರು. ಕುಂದಾಪುರ ತಾಲೂಕಿನ ನಾಯಕವಾಡಿ-ಗುಜ್ಜಾಡಿಯ ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲದ ಸುವರ್ಣ ಮಹೋತ್ಸವ ಸಮಾರಂಭ ’ಸುವರ್ಣ ಸಂಗಮ’ವನ್ನು ಶುಕ್ರವಾರ ಸಂಜೆ ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಸಂಘ ಸಂಸ್ಥೆಗಳು ತನ್ನ ನಿರಂತರತೆಯನ್ನು ಕಾಪಾಡಿಕೊಂಡು ಒಂದು ಹಂತಕ್ಕೆ ಬರಬೇಕಾದರೆ ತುಂಬಾ ಪ್ರಯತ್ನ, ತಾಳ್ಮೆ ಅವಶ್ಯಕ. ಇಂತಹ ತಾಳ್ಮೆ ಪ್ರಯತ್ನದ ಪ್ರತಿಫಲವಾಗಿ ಶ್ರೀ ಚೆನ್ನಬಸವೇಶ್ವರ ಯುವಕ ಮಂಡಲ 50ರ ಸಂಭ್ರಮವನ್ನು ಸಂತೋಷದಿಂದ ಆಚರಿಸುತ್ತಿದೆ. ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ ಸಾಂಸ್ಕೃತಿಕವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಇತರ ಸಂಘ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಆರ್ಮಿ ಶಿರೂರು ಗ್ರಾಮದ ನಿವಾಸಿ ಮೂಸಾ ಅವರ ಪುತ್ರ ಮೊಹಮ್ಮದ್ ಅದ್ವಾನ್ (34) ಬೆಂಗಳೂರಿನಲ್ಲಿ ಬಟ್ಟೆ ವ್ಯಾಪಾರ ಕೆಲಸ ಮಾಡಿಕೊಂಡಿದ್ದು, ಡಿ. 31ರಂದು ಸಂಜೆ 6 ಗಂಟೆಗೆ ಶಿರೂರಿನ ಮನೆಯಿಂದ ಬಟ್ಟೆ ವ್ಯಾಪಾರದ ಕೆಲಸಕ್ಕೆ ಹೋಗುವುದಾಗಿ ಹೋದವರು ಕಾಣೆಯಾಗಿದ್ದಾರೆ ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರ ಬಗ್ಗೆ ಮಾಹಿತಿ ಸಿಕ್ಕವರು ಬೈಂದೂರು ಪೊಲೀಸ್ ಠಾಣೆ (08254-251033) ಸಂಪರ್ಕಿಸಲು ಪೋಲೀಸರು ಕೋರಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನಕ್ಕೆ ಟಾಟಾ ಕನ್ಸಲ್ಟೆನ್ಸೀಸ್ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಮಾಜಿ ಸಿ.ಇ.ಒ. ಹಾಗೂ ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್ ನಿರ್ದೇಶಕರಾದ ರಾಜೇಶ್ ಗೋಪಿನಾಥನ್ ಅವರು ತಮ್ಮ ಕುಟುಂಬದೊಂದಿಗೆ ಇತ್ತೀಚಿಗೆ ಭೇಟಿ ನೀಡಿ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಆಡಳಿತ ಧರ್ಮದರ್ಶಿ ಕೆ. ಶ್ರೀರಮಣ ಉಪಾಧ್ಯಾಯ ಅವರು ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ಆಶೀರ್ವದಿಸಿದರು. ದೇವಸ್ಥಾನದ ಮ್ಯಾನೇಜರ್ ನಟೇಶ್ ಕಾರಂತ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಗಿಡಮೂಲಿಕೆಗಳನ್ನು ಬರಿ ಔಷಧ ಮಾತ್ರವಲ್ಲದೆ ಪೌಷ್ಟಿಕಾಂಶಯುಕ್ತ ಆಹಾರದ ರೀತಿಯು ಸೇವನೆ ಮಾಡುತ್ತಾರೆ, ನೈಸರ್ಗಿಕವಾಗಿ ಸಿಗುವ ಪೂರಕ ಔಷಧ ಇದಾಗಿದೆ. ಆದರೆ ಅದನ್ನು ಹೇಗೆ ಸೇವಿಸಬೇಕು ಎನ್ನುವ ಅರಿವು ನಮ್ಮಲ್ಲಿರಬೇಕು ಎಂದು ಅಮೆರಿಕಾದ ಓಹಿಒ ಸೆಂಟ್ರಲ್ ಸ್ಟೇಟ್ ವಿಶ್ವವಿದ್ಯಾಲಯದ ಜೀವಶಾಸ್ತ್ರ ಪ್ರಾಧ್ಯಾಪಕ ಡಾ. ಶರತ್ ಕೃಷ್ಣನ್ ಮಾತನಾಡಿದರು. ಆಳ್ವಾಸ್ ಆಯುರ್ವೇದ ವೈದ್ಯಕೀಯ ಕಾಲೇಜಿನ ದ್ರವ್ಯಗುಣ ವಿಜ್ಞಾನ ವಿಭಾಗ ಮತ್ತು ಬೆಂಗಳೂರಿನ ಹಿಮಾಲಯ ವೆಲ್‌ನೆಸ್ ಕಂಪನಿ ಆಶ್ರಯದೊಂದಿಗೆ ಧನ್ವಂತರಿ ಹಾಲ್‌ನಲ್ಲಿ ಶುಕ್ರವಾರ ನಡೆದ ’ಆಳ್ವಾಸ್ ಸಂಜೀವಿನಿ 2025- ಸಸ್ಯ ವರ್ಗೀಕರಣ ಮತ್ತು ಔಷಧಜ್ಞಾನ ಕುರಿತ ರಾಷ್ಟ್ರಮಟ್ಟದ ಕಾರ್ಯಾಗಾರ’ದಲ್ಲಿ ಅವರು ಮಾತನಾಡಿದರು. ಔಷಧೀಯ ಗಿಡಮೂಲಿಕೆಗಳನ್ನು ಅವಶ್ಯಕತೆಗಿಂತ ಹೆಚ್ಚು ಸೇವನೆ ಮಾಡಿದರೆ ವಿಷಕಾರಿ ಪರಿಣಾಮವನ್ನು ಬೀರುತ್ತದೆ. ಈ ರೀತಿಯ ಜ್ಞಾನ ಸಾಮಾನ್ಯ ಜನರಲ್ಲಿ ಮೂಡಿಸಬೇಕು. ಹಾಗಾಗಿ ಪ್ರತಿ ಗಿಡಮೂಲಿಕೆಯ ಬಗ್ಗೆ ನಮಗೆ ಅರಿವು ಇರಬೇಕು ಎಂದರು. ಔಷಧೀಯ ಗುಣವಿರುವ ಗಿಡಗಳನ್ನು ಗುರುತಿಸುವುದು ತುಂಬಾ ಕಠಿಣ ವಿಚಾರ. ಆದರೆ ನಮ್ಮ ಭಾರತದಲ್ಲಿ ಪುರಾತನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ಕ್ಷೇತ್ರ  ಧರ್ಮಸ್ಥಳ  ಗ್ರಾಮಾಭಿವೃದ್ಧಿ ಯೋಜನೆ  ಸಮುದಾಯ ಅಭಿವೃದ್ಧಿಯ ಜ್ಞಾನದೀಪ  ಕಾರ್ಯಕ್ರಮದ ಮೂಲಕ ಶಾಲೆಗಳಿಗೆ ಬೆಂಚು ಡೆಸ್ಕ್ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ  ಹೆಗ್ಗಡೆ ಅವರು ಮಂಜೂರು ಮಾಡಿದ್ದು, ವಂಡ್ಸೆ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ರೂ. 85,000  ಮೌಲ್ಯದ 10 ಸೆಟ್ ಬೆಂಚು ಡೆಸ್ಕ್ ವಿತರಣೆ  ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗೋವರ್ಧನ್ ಜೋಗಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಮೂಕಾಂಬಿಕಾ ಚಾರಿಟೆಬಲ್ ಟ್ರಸ್ಟ್ ಕಾರ್ಯದರ್ಶಿ ಉದಯಕುಮಾರ್ ಶೆಟ್ಟಿ, ಜನಜಾಗೃತಿ ವೇದಿಕೆಯ ಪದಾಧಿಕಾರಿ ವೆಂಕಟೇಶ್ ಶೆಟ್ಟಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಂಡ್ಸೆ ವಲಯ ಮೇಲ್ವಿಚಾರಕರಾದ ಚಂದ್ರ ಮಧುವನ, ವಂಡ್ಸೆ ಒಕ್ಕೂಟದ ದಾಮೋದರ್, ಗಿರೀಶ್, ನಯನ, ಸೇವಾಪ್ರತಿನಿಧಿ ಯಶೋಧಾ, ವನಿತಾ, ಮಮತಾ, ನಾಗರತ್ನ, ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದದವರು, ಎಸ್.ಡಿಎಂಸಿ ಅವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ದುರ್ಗಾ ಆಂಗ್ಲ ಮಾಧ್ಯಮ ಶಾಲೆ ಕೊಕ್ಕರ್ಣೆಯಲ್ಲಿ ನಡೆದ  ಉಡುಪಿ  ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಶ್ರಾವಣಿ ಮಂಜುನಾಥ ನಾಯಕ್ ಇವರು ಹಿಂದಿ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.

Read More