ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಮ್ಮು ಕಾಶ್ಮೀರದ ಪೂಂಛನಲ್ಲಿ ಡಿ.24 ರಂದು ಸಂಭವಿಸಿದ ಅಪಘಾತದಲ್ಲಿ ಹುತಾತ್ಮರಾದ ಯೋಧ ಬೀಜಾಡಿ ಕೆಳಮನೆಯ ಅನೂಪ್ ಪೂಜಾರಿ ಅವರ ಮನೆಗೆ ಶುಕ್ರವಾರ ಸಂಜೆ ವಿಧಾನಸಭೆ ಸ್ವೀಕರ್ ಯು.ಟಿ. ಖಾದರ್ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಅನೂಪ್ ಪೂಜಾರಿ ಅವರ ಪತ್ನಿಗೆ ಸರಕಾರಿ ಉದ್ಯೋಗ ನೀಡುವಂತೆ ಸ್ಥಳೀಯರು ಹಾಗೂ ಕುಟುಂಬದವರು ಮನವಿ ಮಾಡಿದ್ದು, ಮುಖ್ಯಮಂತ್ರಿ ಅವರೊಂದಿಗೆ ಈ ಕುರಿತು ಮಾತನಾಡುವುದಾಗಿ ಯು.ಟಿ.ಖಾದರ್ ಹೇಳಿದರು. ದೇಶ ಕಾಯುವ ನಮ್ಮೂರ ಯುವಕನ ಆಕಾಲಿಕ ನಿಧನ ತೀವ್ರ ನೋವನ್ನುಂಟು ಮಾಡಿದೆ. ದುರಂತದಲ್ಲಿ ಮೃತಪಟ್ಟ ರಾಜ್ಯದ ಸೈನಿಕರ ಕುಟುಂಬದವರಿಗೂನ ಸರಕಾರದಿಂದ ದೊರಕುವ ರಾಜ್ಯ ಸವಲತ್ತುಗಳನ್ನು ನೀಡುವ ಬಗ್ಗೆ ಮುಖ್ಯಮಂತ್ರಿಗಳು ಹೇಳಿದ್ದು ಇದನ್ನು ಶೀಘ್ರ ಅನೂಪ್ ಕುಟುಂಬದವರಿಗೂ ಒದಗಿಸಲು ಪ್ರಯತ್ನಿಸಲಾಗುತ್ತದೆ. ಹುತಾತ್ಮ ಯೋಧನ ಹೆಸರಿನಲ್ಲಿ ಸ್ಮಾರಕ ನಿರ್ಮಾಣ ಸೇರಿದಂತೆ ಯಾವುದೇ ಕಾರ್ಯಕ್ರಮ ರೂಪಿಸುವುದಿದ್ದರೂ, ಸ್ಥಳೀಯ ಆಡಳಿತ ತೀರ್ಮಾನ ಕೈಗೊಳ್ಳಲಿ. ಸರಕಾರದಿಂದ ಅಗತ್ಯ ಸಹಕಾರ ನೀಡಲು ಬದ್ದರಿದ್ದೇವೆ,’ ಎಂದರು. ಮಾಜಿ ಸಚಿವ ವಿನಯಕುಮಾರ ಸೊರಕೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೆರಾಡಿಯ ಆದಿತ್ಯ ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದಾನೆ. ಈತ ಚಪ್ಪರಮಕ್ಕಿ ಕೆರಾಡಿ ಜ್ಯೋತಿ ಹಾಗೂ ರಾಜೀವ್ ಶೆಟ್ಟಿ ದಂಪತಿಗಳ ಪುತ್ರ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಕರ್ನಾಟಕದ ಲೋಕಾಯುಕ್ತರಾದ ಜಸ್ಟೀಸ್ ಬಿ. ಎಸ್ ಪಾಟೀಲ್ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ತಾಯಿ ಮೂಕಾಂಬಿಕೆ ದರ್ಶನ ಪಡೆದು ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೆ. ಬಾಬು ಹೆಗ್ಡೆ ಶ್ರೀ ದೇವಿಯ ಪ್ರಸಾದ ಹಾಗೂ ಸ್ಮರಣಿಕೆ ನೀಡಿ ದೇವಸ್ಥಾನದ ವತಿಯಿಂದ ಗೌರವಿಸಲಾಯಿತು. ವ್ಯವಸ್ಥಾಪನ ಸಮಿತಿ ಸದಸ್ಯರಾದ ರಘುರಾಮ ದೇವಾಡಿಗ, ಧನಾಕ್ಷಿ ಪೂಜಾರಿ, ಮಾಲಿಂಗ ನಾಯ್ಕ್ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ‘ಸರ್ಟಿಫಿಕೆಟ್ಗಿಂತ ಸಂಸ್ಕಾರ ಮುಖ್ಯ. ಶಿಕ್ಷಣವು ಸಂಸ್ಕಾರಭರಿತ ಮನಸ್ಸನ್ನು ಕಟ್ಟುವ ಪ್ರಕ್ರಿಯೆ ಎಂದು ಮಂಗಳೂರು ವಿಶ್ವವಿದ್ಯಾಲಯದ ಎಸ್ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ. ಧನಂಜಯ ಕುಂಬ್ಳೆ ಹೇಳಿದರು. ಆಳ್ವಾಸ್ ಮುಂಡ್ರೆದೆಗುತ್ತು ಕೆ. ಅಮರನಾಥ ಶೆಟ್ಟಿ ಕೃಷಿಸಿರಿ ವೇದಿಕೆಯಲ್ಲಿ ಗುರುವಾರ ನಡೆದ ಆಳ್ವಾಸ್ ಇಂಗ್ಲಿಷ್ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಶಾಲೆಗಳ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ವಿದ್ಯಾವಂತರಾದವರೇ ಸಮಾಜಘಾತುಕ ಕಾರ್ಯಗಳಲ್ಲಿ ತೊಡಗಿಕೊಂಡರೆ ಅಂತಹ ವಿದ್ಯೆಗೆ ಏನು ಬೆಲೆ ಮಾನವೀಯ ಸಂವೇದನೆಯನ್ನುಂಟು ಮಾಡುವ ಶಿಕ್ಷಣ ನಮಗೆ ಬೇಕಾಗಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಂತಹ ಶಿಕ್ಷಣವನ್ನು ನೀಡುತ್ತಿರುವುದು ಶ್ಲಾಘನೀಯ ಎಂದರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಮಾತನಾಡಿ, ನಾವು ಅಕ್ಷರಸ್ಥರಾದರೆ ಸಾಲದು. ನಾವು ವಿದ್ಯಾಂತರಾಗಬೇಕು. ಅಕ್ಷರಸ್ಥರೆಲ್ಲರೂ ವಿದ್ಯಾವಂತರಾಗಲು ಸಾಧ್ಯವಿಲ್ಲ. ಸಂಸ್ಕಾರ ಭರಿತ ಅಕ್ಷರಸ್ಥ ಮಾತ್ರ ವಿದ್ಯಾವಂತ. ಅಕ್ಷರ ಕಲಿತ ವ್ಯಕ್ತಿ ದುಷ್ಟನೂ, ಭ್ರಷ್ಟನೂ ಆಗಬಹುದು. ಆದರೆ ಸಂಸ್ಕಾರ ಕಲಿತ ವ್ಯಕ್ತಿ ಎಂದಿಗೂ ದುಷ್ಟ, ಭ್ರಷ್ಟ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಳ್ಳಿಹೊಳೆ ಗ್ರಾಮದ ರವೀಂದ್ರ (40) ಅವರು ಗೋಪಾಲ ಅವರ ಬೈಕಿನಲ್ಲಿ ಗೋಪಾಲ ಅವರನ್ನು ಸಹ ಸವಾರನ್ನಾಗಿ ಕುಳ್ಳಿರಿಸಿಕೊಂಡು ಡಿ. 25ರಂದು ಅಮಾಸೆಬೈಲುನಿಂದ ಸಿದ್ದಾಪುರ ಬರುತ್ತಿದ್ದರು. ಸಿದ್ದಾಪುರ ಗ್ರಾಮದ ಕಾರಿಮಕ್ಕಿ ಹೈಗುಳಿ ದೈವಸ್ಥಾನ ಬಳಿ ಎದುರು ಕಡೆಯಿಂದ ಅತೀ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡರು. ಸ್ಥಳೀಯ ಸಹಕಾರದಿಂದ ಕೋಟೇಶ್ವರ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಳಾವರ ಗ್ರಾಮದ ಸಳ್ವಾಡಿಯ ಉದಯ ಅವರ ಪುತ್ರಿ ಮುಗ್ಧ (25) ಅವರು ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಡಿ. 25ರಂದು ಕಾಳಾವರ ಗ್ರಾಮದ ಸಳ್ವಾಡಿಯಲ್ಲಿ ನಡೆದಿದೆ. ಈಕೆ ಮಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಕ್ರಿಸ್ಮಸ್ ರಜೆ ಹಿನ್ನೆಲೆಯಲ್ಲಿ ಡಿ. 25ರಂದು ಮನೆಗೆ ಬಂದಿದ್ದರು. ರಾತ್ರಿ 10.30ರ ಸುಮಾರಿಗೆ ಮನೆಯ ಬಾವಿ ಬಳಿಗೆ ಹೋಗಿದ್ದಾಗ ಆಕಸ್ಮಿಕವಾಗಿ ಬಿದ್ದರು ಎನ್ನಲಾಗಿದೆ. ಡಿ. 26ರ ಬೆಳಿಗ್ಗೆ ಮೃತದೇಹವನ್ನು ಸ್ಥಳೀಯರು, ಅಗ್ನಿಶಾಮಕದಳದವರ ಸಹಾಯದಿಂದ ಶವವನ್ನು ಮೇಲಕ್ಕೆತ್ತಲಾಯಿತು. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಮತ್ತು ರಾಷ್ಟ್ರೀಯ ಕೃಷಿ ವಿಸ್ತರಣೆ ನಿರ್ವಹಣಾ ಸಂಸ್ಥೆ, ಹೈದರಾಬಾದ್ ಇವರ ಸಹಯೋಗದಲ್ಲಿ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಅಥವಾ ಆಸಕ್ತಿ ಇರುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಸಮಗ್ರ ಕೃಷಿ ಪದ್ಧತಿಯಲ್ಲಿ 5 ದಿನಗಳ ಕಾಲ ತರಬೇತಿಯನ್ನು 2025 ರ ಜನವರಿ 7 ರಿಂದ 11 ರ ವರೆಗೆ ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಆಸಕ್ತ ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ, ಕೃಷಿ ಭೂಮಿಯ ಪಹಣಿ ಮತ್ತು ಆಧಾರ್ ಕಾರ್ಡ್ ಪ್ರತಿಯನ್ನು ವಾಟ್ಸಪ್ಪ್ ನಂಬರ್ಗೆ 9972247539 ಕಳುಹಿಸಬಹುದಾಗಿದೆ. ಜನವರಿ 5 ರ ಒಳಗಾಗಿ ಬರುವ ಮೊದಲ 40 ಅರ್ಜಿಗಳಿಗೆ ಮಾತ್ರ ಅವಕಾಶವಿದ್ದು, ಹೆಚ್ಚಿನ ಮಾಹಿತಿಗೆ ಮೇಲ್ಕಂಡ ವಾಟ್ಸಪ್ಪ್ ನಂಬರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ 2023-24 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಬಿ ವೃಂದದ ನೇಮಕಾತಿಯ ಪೂರ್ವಭಾವಿ ಮರು ಪರೀಕ್ಷೆಯು ಡಿಸೆಂಬರ್ 29 ರಂದು ಜಿಲ್ಲೆಯಲ್ಲಿ ನಿಗಧಿಪಡಿಸಿರುವ ಒಟ್ಟು 05 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಸದರಿ ಪರೀಕ್ಷೆಗೆ ಹಾಜರಾಗುವ ಪರೀಕ್ಷಾರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದಿಂದ ಈ ಕೆಳಗಿನಂತೆ ತಿಳಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ತಿಳಿಸಿದ್ದಾರೆ. ಅಭ್ಯರ್ಥಿಗಳು ಡೌನ್ಲೋಡ್ ಮಾಡಿಕೊಂಡ ಪ್ರವೇಶ ಪತ್ರವನ್ನು ಹಾಗೂ ಅಭ್ಯರ್ಥಿಯ ಭಾವಚಿತ್ರವಿರುವ ಮೂಲ ಗುರುತಿನ ಚೀಟಿಯನ್ನು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಹಾಜರುಪಡಿಸಿದ ನಂತರವೇ ಪರೀಕ್ಷಾ ಉಪಕೇಂದ್ರವನ್ನು ಪ್ರವೇಶಿಸಲು ಅನುಮತಿ ನೀಡಲಾಗುವುದು. ಮೂಲ ಗುರುತಿನ ಚೀಟಿ ಹಾಜರುಪಡಿಸದ ಅಭ್ಯರ್ಥಿಗಳಿಗೆ ಪರೀಕ್ಷಾ ಉಪಕೇಂದ್ರವನ್ನು ಪ್ರವೇಶಿಸಲು ಅನುಮತಿ ಇರುವುದಿಲ್ಲ. ಅಭ್ಯರ್ಥಿಗಳು ಪರೀಕ್ಷಾ ದಿನಗಳಂದು ಬೆಳಗ್ಗಿನ ಹಾಗೂ ಮಧ್ಯಾಹ್ನದ ಅಧಿವೇಶನಗಳ ಪರೀಕ್ಷೆ ಪ್ರಾರಂಭವಾಗುವ 02 ಗಂಟೆ ಮೊದಲು ಕಡ್ಡಾಯವಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಮೊಬೈಲ್, ಕ್ಯಾಲ್ಕುಲೇಟರ್,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ 2023-24 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಬಿ ವೃಂದದ ಒಟ್ಟು 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಗಳು ಡಿಸೆಂಬರ್ 29 ರಂದು ಜಿಲ್ಲೆಯಲ್ಲಿ ನಿಗಧಿಪಡಿಸಿರುವ ಒಟ್ಟು 05 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು, ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 ರ ಕಲಂ 163 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾಸ್ ಪಿಯು ಕಾಲೇಜಿನ ದ್ವಿತೀಯ ಪಿಯು ವಾಣಿಜ್ಯ ವಿದ್ಯಾರ್ಥಿಗಳಿಗೆ ಒಂದು ದಿನದ ಕೈಗಾರಿಕಾ ಭೇಟಿ ಹಮ್ಮಿಕೊಳ್ಳಲಾಯಿತು. ಉಡುಪಿ ಜಿಲ್ಲೆಯ ಪ್ರತಿಷ್ಠಿತ ಕೈಗಾರಿಕೆ ಸಂಸ್ಥೆಗಳಿಗೆ 70 ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ಭೇಟಿ ನೀಡಿ, ವಿವಿಧ ದಿನ ಬಳಕೆಯ ಗ್ರಹೋಪಯೋಗಿ ವಸ್ತುಗಳ ಉತ್ಪಾದನೆ, ನೂತನ ತಂತ್ರಗಾರಿಕೆಯ ಬಳಕೆ, ಪ್ರೊಡಕ್ಷನ್ ಮತ್ತು ಪ್ರೋಸೆಸ್ಸಿಂಗ್, ಕಚ್ಚಾವಸ್ತುಗಳ ಬಳಕೆಯಿಂದ ಉತ್ಪಾದನೆಯಾಗುವ ತ್ಯಾಜ್ಯಗಳ ಮರುಬಳಕೆ, ಉದಯವಾಣಿ ದಿನಪತ್ರಿಕೆಯ ಉತ್ಪಾದನೆಯನ್ನು ಪ್ರಾಯೋಗಿಕವಾಗಿ ನೋಡಿ ಹೆಚ್ಚಿನ ತಿಳುವಳಿಕೆಯನ್ನು ಪಡೆದುಕೊಂಡರು ವಿದ್ಯಾರ್ಥಿಗಳೊಂದಿಗೆ ಉಪನ್ಯಾಸಕರಾದ ಗೀತಾ, ರಸಿಕ ಮತ್ತು ಸುಮಾ ಉಪಸ್ಥಿತರಿದ್ದರು.
