ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ವಂಡ್ಸೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವದ ಕಾರ್ಯಕ್ರಮಕ್ಕೆ ಶಾಲಾ ಧ್ವಜಾರೋಹ್ಹಣದ ಮೂಲಕ ಚಾಲನೆ ನೀಡಲಾಯಿತು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಡಾ. ಪೂರ್ಣಿಮಾ ಟಿ. ಧ್ವಜಾರೋಹಣ ನೆರವೇರಿಸಿದರು. ವಂಡ್ಸೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಗೋವರ್ಧನ್ ಜೋಗಿ ಕಾರ್ಯಕ್ರಮ ಉದ್ದೇಸಿಸಿ ಮಾತನಾಡಿ, ಮನೆ ಹಾಗೂ ಶಾಲೆ ವಿಶ್ವದ ಅತ್ಯಂತ ಸುಂದರ ಸ್ಥಳಗಳು. ಜಾತಿ ಧರ್ಮ ಭೇದ ವಿಲ್ಲದ ಸ್ಥಳವೆಂದರೆ ಅದು ಶಾಲೆ. ಶಾಲೆ ವಾರ್ಷಿಕೋತ್ಸವವೆಂದರೆ ಮಕ್ಕಳ ಹಬ್ಬ ಎಂದರು. ಗ್ರಾಮ ಪಂಚಾಯತ್ ವಂಡ್ಸೆಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಉದಯಕುಮಾರ್ ಶೆಟ್ಟಿ, ಹಳೇವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂದೇಶ ಶೆಟ್ಟಿ, ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ನಾಗರಾಜ ಶೆಟ್ಟಿ, ಶ್ರೀಧರ್ ರಾವ್, ವಿದ್ಯಾರ್ಥಿ ಆರಾಧ್ಯ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತತೆಯರು ಉಪಸ್ಥಿತರಿದ್ದರು. ಪ್ರಭಾರ ಮುಖ್ಯ್ಯಪಾಧ್ಯಯರಾದ ಸದಾಶಿವ ಸ್ವಾಗತಿಸಿದರು. ಸಹಶಿಕ್ಷಕ ಸೋಮಯ್ಯ ಜನ್ನು ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು. ದೈಹಿಕ ಶಿಕ್ಷಣ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಫ್ರೆಂಡ್ಸ್ ಮಾರಿಕಾಂಬ ಕ್ರಿಕೆಟರ್ಸ್ ಕಳವಾಡಿ ಇದರ 2025-26ನೇ ಸಾಲಿನ ನೂತನ ಅಧ್ಯಕ್ಷರಾಗಿ ಪೂರ್ಣಚಂದ್ರ ಶೆಟ್ಟಿ ಹಾಗೂ ಕಾರ್ಯದರ್ಶಿಯಾಗಿ ಸುರೇಂದ್ರ ದೇವಾಡಿಗ ಅವರನ್ನು ಆಯ್ಕೆಮಾಡಲಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಲಾಗಿದೆ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಫ್ಟ್ ಇನ್ಸಿಟ್ಯೂಟ್ (ಈಅI) ಮೈಸೂರು ಹಾಗೂ ಇನ್ಸಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ (Iಊಒ) ಬೆಂಗಳೂರು ಇವರ ಮೂಲಕ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ರಾಜ್ಯಾದ್ಯಂತ 20 ರಿಂದ 45 ವರ್ಷದೊಳಗಿನ ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಂದ ತರಬೇತಿ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿ ವಿವರ:ಫುಡ್ ಮತ್ತು ಬಿವರೇಜ್ ಸರ್ವೀಸ್ ಸ್ಟೀವರ್ಡ್ ತರಬೇತಿಗೆ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳ ಗುರಿ -100 ಹಾಗೂ ಪರಿಶಿಷ್ಟ ಪಂಗಡದ – 49 ಅಭ್ಯರ್ಥಿಗಳ ಗುರಿ ನಿಗಧಿಪಡಿಸಲಾಗಿದ್ದು, ಕನಿಷ್ಟ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು, ರೂಮ್ ಅಟೆಂಡೆಂಟ್ ತರಬೇತಿಗೆ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳ ಗುರಿ – 30 ಹಾಗೂ ಪರಿಶಿಷ್ಟ ಪಂಗಡದ – 19 ಅಭ್ಯರ್ಥಿಗಳ ಗುರಿ ನಿಗಧಿಪಡಿಸಲಾಗಿದ್ದು, ಕನಿಷ್ಟ ಐದನೇ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿರುದ್ಧ ಲೋಕಸಭೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಹಾಗೂ ಉಡುಪಿ ಜಿಲ್ಲೆ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಸದನದಲ್ಲಿ ಅವಾಚ್ಯ ಪದ ಬಳಕೆ ಮಾಡಿದ ಶಾಸಕ ಸಿ.ಟಿ. ರವಿ ವಿರುದ್ಧ ಬೈಂದೂರು ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಸಮಿತಿ, ಎಸ್.ಸಿ ಘಟಕ ಹಾಗೂ ಕಿಸಾನ್ ಘಟಕ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ಬಿಜೆಪಿ ನಾಯಕರ ನಡೆಯನ್ನು ಖಂಡಿಸಿದರು. ಈ ವೇಳೆ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರವಿಂದ್ ಪೂಜಾರಿ, ಮಾಜಿ ಅಧ್ಯಕ್ಷ ಮದನ್ ಕುಮಾರ್ ಉಪ್ಪುಂದ, ಯುವ ಕಾಂಗ್ರೆಸ್ ಅಧ್ಯಕ್ಷ ಶೇಖರ್ ಪೂಜಾರಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೂರ್ಯಕಾಂತಿ, ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ವೀರಭದ್ರ ಗಾಣಿಗ, ಎಸ್.ಸಿ. ಘಟಕದ ಅಧ್ಯಕ್ಷ ಮಂಜುನಾಥ ನಾಗೂರು, ಮುಖಂಡರುಗಳಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಊರನ್ನು ಸಾಂಸ್ಕೃತಿಕವಾಗಿ ಶ್ರೀಮಂತವನ್ನಾಗಿಡಲು ಕಲಾ ಸಂಸ್ಥೆಗಳ ಪಾತ್ರ ಹಿರಿದು. ಆ ನಿಟ್ಟಿನಲ್ಲಿ ಕಳೆದ ಎರಡೂವರೆ ದಶಕದಿಂದ ಸಕ್ರೀಯವಾಗಿರುವ ಯುಸ್ಕೋರ್ಡ್ ಟ್ರಸ್ಟ್ ಇನ್ನಿತರ ಕಲಾ ಸಂಸ್ಥೆಗಳ ಪೋಷಕ ಸಂಸ್ಥೆಯಾಗಿಯೂ ಬೆಳೆದಿದೆ ನಿಂತಿದೆ ಎಂದು ಆಡಿಟರ್ ಹಾಗೂ ಟ್ಯಾಕ್ಸ್ ಕನ್ಸಲ್ಟೆಂಟ್ ಜತೀಂದ್ರ ಮರವಂತೆ ಹೇಳಿದರು. ಅವರು ಶುಕ್ರವಾರ ಯುಸ್ಕೋರ್ಡ್ ಟ್ರಸ್ಟ್ ರಿ. ಬೈಂದೂರು ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಇಲ್ಲಿನ ಶಾರದಾ ವೇದಿಕೆಯಲ್ಲಿ ಆಯೋಜಿಸಲಾದ ವರ್ಷ ವೈಭವ – 3 ದಿನಗಳ ಯಕ್ಷ – ನಾಟಕೋತ್ಸವದ 2ನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಲೆಯನ್ನು ಆಸ್ವಾದಿಸುವ ಮನಸ್ಸುಗಳು ಹೆಚ್ಚಿದಂತೆ ಕಲಾವಿದರು ಹಾಗೂ ಕಲಾ ಸಂಸ್ಥೆಗಳು ಇನ್ನಷ್ಟು ಗಟ್ಟಿಗೊಳ್ಳುತ್ತವೆ ಎಂದರು. ಇನ್ನರ್‌ವೀಲ್ ಕ್ಲಬ್ ಅಧ್ಯಕ್ಷೆ ಗುಲಾಬಿ ಮರವಂತೆ, ಸುರಭಿ ರಿ. ಬೈಂದೂರು ಅಧ್ಯಕ್ಷ ಆನಂದ ಮದ್ದೋಡಿ ಉಪಸ್ಥಿತರಿದ್ದರು. ಯುಸ್ಕೋರ್ಡ್ ಟ್ರಸ್ಟ್ ಅಧ್ಯಕ್ಷ ಸುಧಾಕರ ಪಿ. ಬೈಂದೂರು ಸ್ವಾಗತಿಸಿದರು. ಕಾರ್ಯದರ್ಶಿ ಕೃಷ್ಣಮೂರ್ತಿ ಉಡುಪ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬಳಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಗೋದಲಿಯಲ್ಲಿ ಬಾಲ ಯೇಸು ಜನನದ ದರ್ಶನ, ಕ್ಯಾರೆಲ್ ಹಾಡಿದ ವಿದ್ಯಾರ್ಥಿಗಳ ಗುಂಪು, ನಡುವೆ ಬಂದ ಸಂತ ಕ್ಲಾಸ್, ವಿದ್ಯುದ್ದೀಪಾಲಂಕಾರದಿಂದ ಕಂಗೊಳಿಸಿದ ಕ್ರಿಸ್‌ಮಸ್ ಮರ- ಸಭಾಂಗಣ, ಏಂಜೆಲ್ಸ್, ಜಿಂಗಲ್ ಬೆಲ್ ಸಂಗೀತ, ಪುಟಾಣಿಗಳ ಬಾಯಿ ಸಿಹಿ ಮಾಡಿದ ಕೇಕ್. ಕರುಣಾಮಯಿ ಬಾಲಯೇಸು ಜನನದ ಕ್ರಿಸ್‌ಮಸ್ ಸಂಭ್ರಮ, ಭಕ್ತಿ -ಭಾವ , ಆರಾಧನೆಯ ಸಂಪ್ರೀತಿಯು ಆಳ್ವಾಸ್ ಕಾಲೇಜಿನ ನುಡಿಸಿರಿ ಸಭಾಂಗಣದಲ್ಲಿ ಗುರುವಾರ ಸಂಜೆ ಮೂಡಿತು. ಅದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಮ್ಮಿಕೊಂಡ ‘ಆಳ್ವಾಸ್ ಕ್ರಿಸ್‌ಮಸ್’ ಸಂಭ್ರಮಾಚರಣೆ. ಸಂದೇಶ ನೀಡಿದ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯಾಧ್ಯಕ್ಷ (ಬಿಷಪ್) ಡಾ. ಪೀಟರ್ ಪಾವ್ಲ್ ಸಲ್ಡಾನಾ, ‘ಭರವಸೆ ನಿರಾಶೆ ಮೂಡಿಸುವುದಿಲ್ಲ. ಬದುಕು ಪ್ರೀತಿಯ ಪಥ. ಜೀವನದಲ್ಲಿ ಉನ್ನತ ಭರವಸೆಯೇ ಕ್ರಿಸ್ ಮಸ್ ಸಂದೇಶ’ ಎಂದರು. ‘ಹ್ಯಾಪಿ ಕ್ರಿಸ್ ಮಸ್’ ಎಂದು ಶುಭಕೋರಿ ಮಾತು ಆರಂಭಿಸಿದ ಅವರು, ‘ಇಲ್ಲಿಗೆ ಕ್ರಿಸ್ ಮಸ್ ಬಂದಿದೆ. ಸತ್ಯ ಮತ್ತು ಬದುಕು ನಮ್ಮದಾಗಲಿ. ನಮ್ಮೆಲ್ಲ ಒಳಿತಿಗಾಗಿ ದೈವಿಕ ಮನುಷ್ಯನಾದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ ಕೇಂದ್ರದಲ್ಲಿ ಗೌರವಧನ ಆಧಾರದ ಮೇಲೆ ಯುವ ಪರಿವರ್ತಕರನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಯುವ ನೀತಿಯ ಅನ್ವಯ ರಾಜ್ಯ ಸರ್ಕಾರ ಮತ್ತು ಜನ ಆರೋಗ್ಯ ಕೇಂದ್ರ ಎಪಿಡೀಮಿಯಾಲ್ಜಿ ವಿಭಾಗ, ನಿಮ್ಹಾನ್ಸ್ ಬೆಂಗಳೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಯುವ ಸ್ಪಂದನ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿದ್ದು, ಈ ಯೋಜನೆ ಮೂಲಕ ಯುವ ಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳನ್ನು ಒದಗಿಸಲು ಜಿಲ್ಲೆಯಲ್ಲಿ ಖಾಲಿ ಇರುವ ಯುವ ಪರಿವರ್ತಕರ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಯಾವುದೇ ಪದವಿ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ ಕನಿಷ್ಠ 21 ರಿಂದ 35 ವರ್ಷದೊಳಗಿನ ಕನ್ನಡ ಭಾಷೆ ಸ್ಪಷ್ಟವಾಗಿ ಮಾತನಾಡುವ, ಸಂವಹನ ಕಲೆ ಕೌಶಲ್ಯ ಹೊಂದಿರುವ ಹಾಗೂ ಸಮುದಾಯದಲ್ಲಿ ಕೆಲಸ ಮಾಡಿರುವ ಯುವಕ ಹಾಗೂ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ತಮ್ಮ ಸಂಪೂರ್ಣ ಹೆಸರು, ವಯಸ್ಸು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿನ ನಾಗರಿಕರು ಮೌಲ್ಯಯುತವಾದ ಆಧಾರ್ ಗುರುತಿನ ಚೀಟಿಯನ್ನು ಹೊಂದುವುದು ಅವಶ್ಯ. ಹೊಸ ನೋಂದಣಿ, ಮರು ನೋಂದಣಿ ಹಾಗೂ ಬಯೋ ಮೆಟ್ರಿಕ್ ನೀಡಿ, ಆಧಾರ್ ಗುರುತಿನ ಚೀಟಿ ಚಾಲ್ತಿಯಲ್ಲಿರುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಕರೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಆಧಾರ್ ಮಾನಿಟರಿಂಗ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರಕಾರ ದೇಶದ ಪ್ರತಿಯೊಬ್ಬ ಅರ್ಹ ನಾಗರಿಕರಿಗೆ ವಿಶಿಷ್ಟ ಗುರುತಿನ ಚೀಟಿಯನ್ನು ವಿತರಿಸುತ್ತಿದೆ. ಎಲ್ಲರೂ ಈ ಗುರುತಿನ ಚೀಟಿಯನ್ನು ಹೊಂದಬೇಕು. ಆಧಾರ್ ಗುರುತಿನ ಚೀಟಿ ಹೊಂದದೇ ಇರುವವರು ಅಗತ್ಯ ದಾಖಲೆಗಳನ್ನು ನೀಡಿ ನೋಂದಾಯಿಸಬೇಕು. ಕಡ್ಡಾಯ ಬಯೋ ಮೆಟ್ರಿಕ್, ನವೀಕರಣ ಹಾಗೂ ಸ್ಯಾಚುರೇಷನ್ ಗೊಳಿಸುವುದರೊಂದಿಗೆ ಮೌಲ್ಯಯುತವಾದ ಆಧಾರ್ ಕಾರ್ಡ್ ಹೊಂದಬೇಕು ಎಂದರು. ಜಿಲ್ಲೆಯಲ್ಲಿ ಈವರೆಗೆ 14,16,407 ಜನರು ಆಧಾರ್ ನೋಂದಣಿ ಮಾಡಿಕೊಂಡಿದ್ದಾರೆ. ಅವರಲ್ಲಿ 5 ವರ್ಷದೊಳಗಿನ 35,750, 5 ರಿಂದ 18 ವರ್ಷದವರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನೆಹರೂ ಮೈದಾನದಲ್ಲಿ ಯಕ್ಷರಾತ್ರಿ ಸಂಯೋಜನೆಯಲ್ಲಿ ಜ.03 ರಂದು ಯಕ್ಷರಾತ್ರಿ ದಶಯಾನ – 2025 ಯಕ್ಷಗಾನ ಪ್ರದರ್ಶನ ನಡೆಯಲಿದೆ. ಸತತ 9 ವರ್ಷಗಳಿಂದ ಯಕ್ಷಗಾನ ಪ್ರದರ್ಶನದ ಜೊತೆಗೆ ಗೌರವ ಪುರಸ್ಕಾರ, ಅಶಕ್ತರಿಗೆ ನೆರವು ಹೀಗೆ ಹಲವಾರು ಯೋಜನೆಗಳನ್ನು ಯಕ್ಷರಾತ್ರಿಯಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ಈ ವರ್ಷ ಯಕ್ಷರಾತ್ರಿಯ ಗೌರವ ಪುರಸ್ಕಾರವಾಗಿ ಯಕ್ಷಗಾನ ಕ್ಷೇತ್ರದಲ್ಲಿ ಗೌರವ ಡಾಕ್ಟರೇಟ್ ಪಡೆದ ಡಾ. ದೀಪಕ್ ಕುಮಾರ್ ಶೆಟ್ಟಿ ಬಾರ್ಕೂರು, ಯಕ್ಷರಾತ್ರಿ ಕಲಾಗೌರವವಾಗಿ ಮಂದಾರ್ತಿ ಮೇಳದ ಹಿರಿಯ ಹಾಸ್ಯಗಾರರಾದ ಕಮಲಶಿಲೆ ಮಹಾಬಲ ದೇವಾಡಿಗ, ಪೆರ್ಡೂರು ಮೇಳದ ಪ್ರಧಾನ ಹಾಸ್ಯಗಾರರಾದ ಕಮಲಶಿಲೆ ರವೀಂದ್ರ ದೇವಾಡಿಗ, ಯುವ ಕಲಾವಿದ ಸೌಕೂರು ಮೇಳದ ಹುಟ್ಟೂರ ಗೌರವಿತರಾದ ಸುಬ್ರಹ್ಮಣ್ಯ ಗಾಣಿಗ ಕೋಣಿ ಹಾಗೂ ಯಕ್ಷರಾತ್ರಿ ಯಶೋಗಾತೆ ಪುರಸ್ಕಾರವನ್ನು ಸಮಾಜ ಸೇವಕರಾದ ಪದ್ಮಮ್ಮ ಹೊದ್ರೊಳ್ಳಿ ಅವರಿಗೆ ನೀಡಲಾಗುತ್ತಿದೆ. ಶ್ರೀ ಪೆರ್ಡೂರು ಮೇಳದವರ ಈ ವರ್ಷದ ಎರಡನೇ ಪ್ರಸಂಗ ಶ್ವೇತಾ ಬೊಳ್ಳಂಬಳ್ಳಿ ವಿರಚಿತ ಪ್ರಸಾದ ಕುಮಾರ್ ಮೊಗೆಬೆಟ್ಟು ಪದ್ಯ ರಚನೆಯ ಕ್ಷೀರಾ ಸಮುದ್ರ ಯಕ್ಷಕಾಶಿ ಹೊಸ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉದ್ಯಮಿಯಾಗಿದ್ದ ಐರೋಡಿ ಭಾಸ್ಕರ್ ಎಚ್. ಶೆಟ್ಟಿ (83) ಅವರು ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ಡಿ.20ರಂದು ನಿಧನರಾದರು. ಮೃತರು ಪತ್ನಿ, ಮೂವರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳನ್ನು ಅಗಲಿದ್ದಾರೆ. ಇವರು ದುಬೈ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಅವರ ಪತ್ನಿಯ ತಂದೆ. ಮೃತರ ಅಂತ್ಯಕ್ರಿಯೆ ಡಿ.21 ಶನಿವಾರದಂದು ಬೆಳಿಗ್ಗೆ 11 ಗಂಟೆಗೆ ಕೊಕ್ಕರ್ಣೆ ಹಳ್ಳಿಯ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
