ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ – ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಭಾರಿ ಮಳೆಯಿಂದಾಗಿ ಮತ್ತು ಭಾರಿ ವಾಹನಗಳ ಸಂಚಾರದಿಂದ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವವಿರುವ ಹಿನ್ನೆಲೆ, ಸಾರ್ವಜನಿಕ ಹಿತದೃಷ್ಠಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ಕರ್ಣಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989 ರ ಕಲಂ 221 (ಎ)(2) & (5) ರನ್ವಯ ರಾಷ್ಟ್ರೀಯ ಹೆದ್ದಾರಿ 169 ಎ ಆಗುಂಬೆ ಘಾಟಿಯ ಮೂಲಕ ಸೆಪ್ಟಂಬರ್ 30 ರವರೆಗೆ ಲಘು ವಾಹನ ಸಂಚಾರಕ್ಕೆ ಮಾತ್ರ ಅನುವು ಮಾಡಿ, ಭಾರಿ ವಾಹನಗಳ ಸಂಚಾರವನ್ನು ನಿರ್ಬಂಧಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶಿಸಿರುತ್ತಾರೆ. ತೀರ್ಥಹಳ್ಳಿಯಿಂದ ಉಡುಪಿ ಕಡೆಗೆ ಸಂಚರಿಸುವ ಭಾರಿ ವಾಹನಗಳು ತೀರ್ಥಹಳ್ಳಿ-ನಗರ-ಕುಂದಾಪುರ ಹಾಗೂ ಉಡುಪಿ ಮಾರ್ಗವಾಗಿ ಮತ್ತು ಚಿಕ್ಕಮಗಳೂರಿನಿಂದ ಉಡುಪಿ ಕಡೆಗೆ ಬರುವ ಭಾರಿ ವಾಹನಗಳು ಬಾಳೆಹೊನ್ನೂರು-ಮಾಗುಂಡಿ-ಕಳಸ-ಕುದುರೆಮುಖ-ಎಸ್.ಕೆ ಬಾರ್ಡರ್ ಮಾರ್ಗವಾಗಿ ಸಂಚರಿಸಬೇಕು. ನರಸಿಂಹರಾಜಪುರದಿಂದ ಉಡುಪಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗ ದೊಂದಿಗೆ ತಿಂಗಳ ಅಂಗಳ ಸಂವಾದ ಕಾರ್ಯಕ್ರಮ ಹಾಗೂ ಸನ್ಮತಿ ಪತ್ರಿಕೆಯ ಮೇ ತಿಂಗಳ ಸಂಚಿಕೆ ಬಿಡುಗಡೆ ಕಾರ್ಯಕ್ರಮ ಶುಕ್ರವಾರ ಉಡುಪಿ ಪತ್ರಿಕಾ ಭವನದಲ್ಲಿ ಜರಗಿತು. ಪತ್ರಿಕೆಯನ್ನು ಉಡುಪಿ ಅಂತರ್ಜಲ ನಿರ್ದೇಶನಾಲಯದ ಹಿರಿಯ ಭೂ ವಿಜ್ಞಾನಿ ಡಾ.ದಿನಕರ ಶೆಟ್ಟಿ ಮಾತನಾಡಿ, ಪತ್ರಕರ್ತರು ಪತ್ರಿಕಾ ಭವನದ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ಅಂತರ್ಜಲ ಮರುಪೂರಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಅದೇ ರೀತಿ ಸನ್ಮತಿ ಪತ್ರಿಕೆಯ ಮೂಲಕ ಪತ್ರಕರ್ತರ ಚಟುವಟಿಕೆಗಳನ್ನು ಪ್ರತಿಯೊಬ್ಬರಿಗೆ ತಿಳಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ಪತ್ರಕರ್ತರು ಓದಿಗೆ ಒತ್ತು ನೀಡಿ ತಮ್ಮ ಜ್ಞಾನವನ್ನು ಸಂಪಾದಿಸಿಕೊಳ್ಳಬೇಕು. ಅದೇ ರೀತಿ ಪರಿಸರಕ್ಕೆ ಇನ್ನು ಹೆಚ್ಚಿನ ಕೊಡುಗೆ ನೀಡ ಬೇಕು ಎಂದರು. ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ವಹಿಸಿದ್ದರು. ಉಡುಪಿ ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಂಕಿತ್ ಶೆಟ್ಟಿ ಉಪಸ್ಥಿತರಿದ್ದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾರ್ಮಿಕರಿಗೆ ಕೂಲಿ ನೀಡುವ ವಿಚಾರದಲ್ಲಿ ಮಾತನಾಡಿ, ಪೊಲೀಸರಿಗೆ ಮಾಹಿತಿ ನೀಡದಂತೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ನಕ್ಸಲ್ ಪದ್ಮನಾಭ ನೀಲುಗುಳಿಯನ್ನು ದೋಷಮುಕ್ತ ಗೊಳಿಸಿ ಕುಂದಾಪುರದಲ್ಲಿರುವ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ಆದೇಶ ನೀಡಿದ್ದಾರೆ. 2005ರಲ್ಲಿ ಕುಂದಾಪುರ ತಾಲೂಕಿನ ಹಳ್ಳಿಹೊಳೆಯ ಕೋಟುಗುಳಿ ಎಂಬಲ್ಲಿ ಗುರುದತ್ತ ಚಾತ್ರ ಎನ್ನುವವರ ಮನೆ ಸಮೀಪ ಓರ್ವ ಮಹಿಳೆ ಹಾಗೂ ಏಳು ಮಂದಿ ಪುರುಷರಿದ್ದ ತಂಡ ಬಂದೂಕು ಸಹಿತ ಆಗಮಿಸಿ ದೂರುದಾರ ಗುರುದತ್ತ ಅವರ ಬಳಿ ಕೆಲಸಗಾರರಿಗೆ ಸರಿಯಾದ ಸಂಬಳ ನೀಡದಿರುವ ಬಗ್ಗೆ ವಿಚಾರಿಸಿದ್ದರು. ಇದಾದ ಬಳಿಕ ಪೊಲೀಸರಿಗೆ ಯಾವುದೇ ಮಾಹಿತಿ ನೀಡದಂತೆ ಜೀವ ಬೆದರಿಕೆ ಹಾಕಿ ಈ ತಂಡ ಸ್ಥಳದಿಂದ ತೆರ ಳಿತ್ತು. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಗುರುದತ್ತ ಚಾತ್ರ ಪ್ರಕರಣ ದಾಖಲಿಸಿದ್ದರು. ಇದರಲ್ಲಿ ಪದ್ಮನಾಭ ನೀಲುಗುಳಿ ಸಹಿತ ಏಳು ಮಂದಿ ಶಂಕಿತ ನಕ್ಸಲರ ಹೆಸರನ್ನು ಉಲ್ಲೇಖಿಸಲಾಗಿದ್ದು ಅವರೆಲ್ಲಾ ಕಾಡು ಪ್ರದೇಶದಲ್ಲಿ ನಿಷೇಧಿತ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮೇ. 2026ರಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯೇಟ್ ಪರೀಕ್ಷೆಯಲ್ಲಿ ಆಳ್ವಾಸ್ ಬಿ.ಕಾಂ. ವಿದ್ಯಾರ್ಥಿಗಳಾದ ಗೋಡ್ವಿಲ್ ವಿನ್ಸ್ಟನ್ ವಾಸ್ ಶೆಟ್ಟಿ (355), ರಾಹುಲ್ ಉಮೇಶ್ (313), ಎನ್. ಚಿರಂತನಾ(312) ಹಾಗೂ ರೋಹಿತ್ ಪೂಜಾರಿ (304) ಗ್ರೂಪ್-01 ಮತ್ತು ಗ್ರೂಪ್-02 ವಿಭಾಗದಲ್ಲಿ ಮೊದಲ ಪ್ರಯತ್ನದಲ್ಲಿ ಉತ್ತಮ ಫಲಿತಾಂಶದೊಂದಿಗೆ ಉತ್ತೀರ್ಣರಾಗಿದ್ದಾರೆ. ಇಂಟರ್ ಮೀಡಿಯಟ್ ಗ್ರೂಪ್-01 ವಿಭಾಗದಲ್ಲಿ ಪ್ರಸ್ಮಿಯಾ (162), ಪನ್ನಗ ಜೈನ್ (157), ವಿಜಯ್ ಕುಮಾರ್(164), ಸಾನಿಯಾ (150), ಪ್ರಸಿದ್ಧ್ ಪೂಜಾರಿ(150), ಮೋನಿಶಾ ಕುಂದರ್(163) ಹಾಗೂ ಶ್ರೇಯಾ ಸುರೇಂದ್ರ ಪೂಜಾರಿ(150) ಉತ್ತೀರ್ಣರಾಗಿರುತ್ತಾರೆ. ಇಂಟರ್ ಮೀಡಿಯಟ್ ಗ್ರೂಪ್-02 ವಿಭಾಗದಲ್ಲಿ ಗಿರೀಶ್ (179) ಹಾಗೂ ತರುಣ್ ಕುಮಾರ್(152) ಅಂಕದೊಂದಿಗೆ ಉತ್ತೀರ್ಣರಾಗಿದ್ದಾರೆ. ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಸಂಸ್ಥೆಯ ಅಧ್ಯಕ್ಷ ಡಾ.ಎಂ. ಮೋಹನ ಆಳ್ವರು ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ನಾಗೂರು ಕೊಡೇರಿಯ ಕುಳ್ಳಿ ಗೋವಿಂದ ಖಾರ್ವಿ (72 ವರ್ಷ) ಅವರು ಗುರುವಾರ ಬೆಳಗಿನ ಜಾವ ನಿಧನರಾದರು. ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಸೇವೆ ಮತ್ತು ಜನಪರ ಕಾಳಜಿಯ ಮೂಲಕ ಜನಮನದಲ್ಲಿ ವಿಶೇಷ ಸ್ಥಾನ ಪಡೆದಿದ್ದ ಅವರು, ತಮ್ಮ ಸರಳತೆ ಮತ್ತು ಸೇವಾಭಾವದಿಂದ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕುಂದಾಪುರ ವಿಧಾನಸಭಾ ಕ್ಷೇತ್ರದ ಐರೋಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಶಕ್ತಿಕೇಂದ್ರಗಳ ಸಭೆ ಇತ್ತೀಚಿಗೆ ಸಾಸ್ತಾನದ ಶಿವಕೃಪಾ ಕಲ್ಯಾಣ ಮಂದಿರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಐರೋಡಿ ಗ್ರಾ.ಪಂ ವ್ಯಾಪ್ತಿಯ ಬಿಜೆಪಿ ಶಕ್ತಿಕೇಂದ್ರಗಳಿಗೆ ನೂತನ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಲಾಯಿತು. ಕುಂದಾಪುರ ಬಿಜೆಪಿ ಕ್ಷೇತ್ರಾಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ ಅವರು ಸಭೆಯ ಅಧ್ಯಕ್ಷತೆ ವಹಿಸಿದರು. ಕಾರ್ಯಕ್ರಮದಲ್ಲಿ ಪ್ರಸ್ತಾವಿಕ ಮಾತುಗಳನ್ನಾಡಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಪಕ್ಷ ಸಂಘಟನೆಯ ,ಬಿಜೆಪಿಯ ಸಂಘಟನಾ ವ್ಯವಸ್ಥೆಯಲ್ಲಿ 2-3 ಬೂತ್ಗಳನ್ನು ಸೇರಿಸಿ ಒಂದು ಶಕ್ತಿಕೇಂದ್ರ ಮಾಡಲಾಗುತ್ತದೆ. ಬೂತ್ ಮಟ್ಟದ ಕಾರ್ಯಕರ್ತರನ್ನು ಒಗ್ಗೂಡಿಸಿ ಪಕ್ಷದ ಕೆಲಸ ಮಾಡುವುದು ಇದರ ಉದ್ದೇಶ ಎಂದರು. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಭಾಗವಹಿಸಿ, ಪಕ್ಷ ಬಲಪಡಿಸುವಿಕೆ ಹಾಗೂ ತಳಮಟ್ಟದ ಸಂಘಟನೆ ಬಗ್ಗೆ ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು.ತಳಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವುದು ಮತ್ತು ಬೂತ್ ಮಟ್ಟದ ಸಂಘಟನೆಯನ್ನು ಚುರುಕುಗೊಳಿಸ ಬೇಕು ಎಂದು ಹೇಳಿದರು. ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕುಂದಾಪುರ ವಿಧಾನಸಭಾ ಕ್ಷೇತ್ರದ ಪಾಂಡೇಶ್ವರ ಗ್ರಾ.ಪಂ ವ್ಯಾಪ್ತಿಯ ಬಿಜೆಪಿ ಶಕ್ತಿಕೇಂದ್ರಗಳ ಸಭೆ ಬುಧವಾರ ಸಾಸ್ತಾನದ ಶಿವಕೃಪಾ ಸಭಾಗ್ರಹದಲ್ಲಿ ನಡೆಯಿತು. ಸಭೆಯಲ್ಲಿ ಪಾಂಡೇಶ್ವರ ವ್ಯಾಪ್ತಿಯ ಶಕ್ತಿಕೇಂದ್ರಗಳಿಗೆ ನೂತನ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಲಾಯಿತು. ಬಿಜೆಪಿ ಕ್ಷೇತ್ರಾಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ ಅವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪಾಂಡೇಶ್ವರ ಭಾಗದಲ್ಲಿ ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸಲು ಶಕ್ತಿ ಕೇಂದ್ರದ ನೂತನ ತಂಡ ಶ್ರಮಿಸಲಿ. ಮುಂದಿನ ದಿನಗಳಲ್ಲಿ ಶಕ್ತಿ ಕೇಂದ್ರ ವಾರು ಸದಸ್ಯತ್ವ ಅಭಿಯಾನ ಹಾಗೂ ಪೇಜ್ ಪ್ರಮುಖರ ನೇಮಕಕ್ಕೆ ಆದ್ಯತೆ ನೀಡಲಾಗುವುದು ಎಂದರು. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಬಿಜೆಪಿಯ ಬಲ ತಳಮಟ್ಟದ ಸಂಘಟನೆಯಲ್ಲಿದೆ. ಬೂತ್ ಗೆದ್ದರೆ ಎಲ್ಲವನ್ನೂ ಗೆದ್ದಂತೆ. ಹಾಗಾಗಿ ಪ್ರತಿ ಬೂತ್ನಲ್ಲಿ ಯುವಕರು, ಮಹಿಳೆಯರು, ಹಿರಿಯರನ್ನು ಸೇರಿಸಿ ಸಮಿತಿ ಬಲಪಡಿಸಿ. ಸ್ಥಳೀಯ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಜನರ ವಿಶ್ವಾಸಗಳಿಸಿ. ಸಾಮಾಜಿಕ ಜಾಲತಾಣಗಳನ್ನು ಪಕ್ಷದ ಕೆಲಸಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಜಿ.ಎಸ್.ವಿ.ಎಸ್ ಅಸೋಸಿಯೇಷನ್ ಮತ್ತು ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳ ವತಿಯಿಂದ ಗಂಗೊಳ್ಳಿಯ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳ ಸಭಾಂಗಣದಲ್ಲಿ ಸಂಸ್ಥೆಯಲ್ಲಿ ಸುದೀರ್ಘಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಉಪನ್ಯಾಸಕ ಮತ್ತು ಸಿಬ್ಬಂದಿ ವರ್ಗದವರಿಗೆ ಬೀಳ್ಕೊಡುಗೆ ಸಮಾರಂಭವು ಇತ್ತೀಚಿಗೆ ನಡೆಯಿತು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಸುದೀರ್ಘ ವರ್ಷಗಳ ಕಾಲ ಹಿಂದಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ನಾರಾಯಣ ಈ ನಾಯ್ಕ್, ವಾಣಿಜ್ಯಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಎಂ. ರಾಘವೇಂದ್ರ ಭಟ್, ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಸಮಾಜ ವಿಜ್ಞಾನ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಶ್ರೀಲತಾ, ಭೌತಶಾಸ್ತ್ರ ಪ್ರಯೋಗಾಲಯದ ಸಹಾಯಕರಾಗಿ ಸೇವೆ ಸಲ್ಲಿಸಿದ ವಿಜಯ್ ಕುಮಾರ್, ಹೈಸ್ಕೂಲ್ ವಿಭಾಗದ ಕಚೇರಿ ಸಹಾಯಕರಾಗಿ ಕಾರ್ಯನಿರ್ವಹಿಸಿದ ಯಮುನಾ ಭಾಸ್ಕರ್ ಮತ್ತು ಅಟೆಂಡರ್ ಆಗಿ ಕಾರ್ಯನಿರ್ವಹಿಸಿದ ಜೀವನ್ ನಾಯಕ್ ಇವರನ್ನು ಅಭಿನಂದಿಸಿ ಬೀಳ್ಕೊಡಲಾಯಿತು. ಉಪನ್ಯಾಸಕರಾದ ವೆಂಕಟೇಶ ಮೂರ್ತಿ ಎನ್.ಸಿ, ನರೇಂದ್ರ ಎಸ್. ಗಂಗೊಳ್ಳಿ ಮತ್ತು ಕಚೇರಿಯ ಪ್ರಮೋದ ಪೈ ಎಂ.ಜಿ ನಿವ್ರತ್ತರಿಗೆ ಶುಭ ಹಾರೈಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮನುಷ್ಯನಿಗಿರುವ ಶ್ರೇಷ್ಠ ಬಲವೆಂದರೆ ಬುದ್ದಿ ಬಲ, ಆ ಬುದ್ದಿಯ ವಿಕಾಸ ಆಗ ಬೇಕಾದರೂ, ವಿದ್ಯೆ ಅವಶ್ಯಕ, ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಪ್ರಾಪ್ತ ಆಗಬೇಕು. ಪ್ರಪಂಚದಲ್ಲಿಯೇ ಅತ್ಯಂತ ವ್ಯವಸ್ಥಿತ ವಾಗಿರುವ ದೇಶ ನಮ್ಮದು. ಆಧ್ಯಾತ್ಮಿಕ ವಿಚಾರದಲ್ಲಿ ನಮ್ಮ ದೇಶ ಸರ್ವಶ್ರೇಷ್ಠ ದೇಶ. ಇದರೊಂದಿಗೆ ಆಧುನೀಕತೆ, ಸಾಧನೆ, ಎಲ್ಲ ವ್ಯವಸ್ಥೆಗಳಲ್ಲೂ ಸರ್ವ ಉತ್ಕೃಷ್ಟ ದೇಶ ಆಗಬೇಕಾದರೆ ಎಂದು ಶ್ರೀ ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಮಹಾ ಸ್ವಾಮೀಜಿ ಹೆಮ್ಮಾಡಿಯಲ್ಲಿ ಹೇಳಿದರು. ಅವರು ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ವತಿಯಿಂದ ಸುಳ್ಸೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ವಸತಿ ನಿಲಯಗಳನ್ನು ಗುರುವಾರ ಉದ್ಘಾಟಿಸಿ, ಆಶೀರ್ವಚನ ನೀಡಿ ಮಾತನಾಡಿದರು. ದೇಶದ ಮಕ್ಕಳಲ್ಲಿ ಅಗಾಧವಾದ ಪ್ರತಿಭೆಯಿದೆ. ಆದರೆ ಪ್ರತಿಭೆ ಹೊರ ಎರಲು, ಪ್ರಕಟವಾಗಲು ಕೊರತೆಯಿದೆ. ಅದನ್ನು ನೀಗಿಸುವ ಕೆಲಸ ಇಂತಹ ಕ್ಷಣ ಸಂಸ್ಥೆಗಳಿಂದ ಆಗಬೇಕು. ಮಕ್ಕಳ ಪ್ರತಿಭೆ ಹೊರಬಂದು, ಅದರಿಂದ ದೇಶ, ಸಮಾಜ, ರಾಜ್ಯ ಮಕ್ಕಳಿಗೂ ಉಪಯೋಗ ಆಗುವಂತಾಗಲಿ. ಭಗವಂತ ನಮಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಉಡುಪಿ ಜಿಲ್ಲೆ ಪದವಿಪೂರ್ವ ವಾಣಿಜ್ಯಶಾಸ್ತ್ರ ಉಪನ್ಯಾಸಕರ ಸಂಘ ಉಡುಪಿ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ವಿವೇಕ ಪದವಿಪೂರ್ವ ಕಾಲೇಜು ಕೋಟ ಇವರ ಸಹಯೋಗದೊಂದಿಗೆ ಉಡುಪಿ ಜಿಲ್ಲೆಯ ವಾಣಿಜ್ಯಶಾಸ್ತ್ರ ಉಪನ್ಯಾಸಕರಿಗಾಗಿ ಒಂದು ದಿನದ ಪುನಶ್ಚೇತನ ಕಾರ್ಯಗಾರವು ಕೋಟದ ವಿವೇಕ ಪದವಿಪೂರ್ವ ಕಾಲೇಜಿನ ಟೆಕ್ನಾಲಜಿ ಸೆಂಟರ್ ನಲ್ಲಿ ನಡೆಯಿತು. ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವದ ಉಪ ನಿರ್ದೇಶಕರಾದ ಮಾರುತಿ ಕಾರ್ಯಗಾರವನ್ನು ಉದ್ಘಾಟಿಸಿದರು. ವಿವೇಕ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕೆ. ಜಗದೀಶ ನಾವುಡ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿ ಕೋಟ ವಿದ್ಯಾ ಸಂಘದ ಖಜಾಂಜಿ ವೆಲೇರಿಯನ್ ಮೆನೇಜಸ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಸುರತ್ಕಲ್ನ ರಿಸರ್ಚ್ ಸ್ಕಾಲರ್ ಕೀರ್ತನ್ ಅವರು ಜೆನ್ ಜಿ. ಕಲಿಕಾರ್ಥಿಗಳ ಮನಸ್ಥಿತಿಯನ್ನು ಅರ್ಥಮಾಡಿಕೊಳ್ಳುವ ಬಗೆಗೆ ದಿಕ್ಸೂಚಿ ಉಪನ್ಯಾಸವನ್ನು ನೀಡಿದರು. ಉಪನ್ಯಾಸಕರಾದ ಬಲರಾಮ ವೈದ್ಯ, ಹರೀಶ್ ಕುಮಾರ್, ಸಂತೋಷ್ ಕುಮಾರ್, ಸುರೇಂದ್ರ ಪೂಜಾರಿ ಮತ್ತು ಹೇಮಲತಾ ಲೆಕ್ಕಶಾಸ್ತ್ರ ಮತ್ತು…
