ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಗಾಂಧಿ ಮೈದಾನದ ಎದುರು ಸರ್ವಿಸ್ ರಸ್ತೆಯ ಚರಂಡಿಯ ಮೇಲ್ ಹಾಸಿನ ಮೇಲೆ ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದಾರೆ. ಅವರು ಡಿ. 27ರಂದು ತೀವ್ರ ಅಸ್ವಸ್ಥಗೊಂಡಿದ್ದು ಸ್ಥಳೀಯರು ಚಿಕಿತ್ಸೆ ಬಗ್ಗೆ ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತ ಪಟ್ಟಿದ್ದಾರೆ. ಈ ಬಗ್ಗೆ ಕುಂದಾಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾಡಿನ ಪ್ರಸಿದ್ಧ ನಿಯತಕಾಲಿಕೆಗಳಲ್ಲಿ ಪ್ರಕಟಣೆ ಕಂಡಿರುವ ಲೇಖಕ, ಮಾಜಿ ಸೈನಿಕ ಬೈಂದೂರು ಚಂದ್ರಶೇಖರ ನಾವಡರ ಸೈನ್ಯ ಹಿನ್ನೆಲೆಯ ಕಥಾಸಂಕಲನ ‘ಕಂಟೋನ್ಮೆಂಟ್ ಕಥೆಗಳು’ ಜ .5 ಭಾನುವಾರದಂದು ನಾಗೂರು ಕೃಷ್ಣಲಲಿತ ಕಲಾಮಂದಿರದಲ್ಲಿ ಬೆಳಿಗ್ಗೆ 11 ಗಂಟೆಗೆ ಲೋಕಾರ್ಪಣೆಗೊಳ್ಳಲಿದೆ. ಸಮಾರಂಭದಲ್ಲಿ ಕ.ಸಾ.ಪ ಉಡುಪಿ ಜಿಲ್ಲೆಯ ಗೌರವ ಕಾರ್ಯದರ್ಶಿ ಸುಬ್ರಹ್ಮಣ್ಯ ಶೆಟ್ಟಿ ಅವರು ಕೃತಿ ಲೋಕಾರ್ಪಣೆ ಮಾಡಲಿರುವರು. ಲಾವಣ್ಯ ಬೈಂದೂರು ಅಧ್ಯಕ್ಷ ಬಿ. ನರಸಿಂಹ ನಾಯಕ್ ಅಧ್ಯಕ್ಷತೆ ವಹಿಸಲಿರುವರು ಹಾಗೂ ಸುರಭಿ ಬೈಂದೂರು ಅಧ್ಯಕ್ಷ ಆನಂದ ಮದ್ದೋಡಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.29: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕರ ಮಂಡಳಿ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಜಗದೀಶ್ ಪೂಜಾರಿ ನೇತೃತ್ವದ 13 ಮಂದಿಯ ತಂಡ ಗೆಲುವು ಸಾಧಿಸಿದೆ. ಸಾಮಾನ್ಯ ಮೀಸಲು ಕ್ಷೇತ್ರದಿಂದ ಜಗದೀಶ ಪಿ. ಪೂಜಾರಿ, ನರಸಿಂಹ ದೇವಾಡಿಗ, ಸತೀಶ್ ಕುಮಾರ್ ಶೆಟಿ, ಶ್ರೀನಿವಾಸ ಪೂಜಾರಿ, ಗಣೇಶ್ ಪೂಜಾರಿ, ಪ್ರಭಾಕರ ಎಂ. ಖಾರ್ವಿ, ಹರಿಶ್ಚಂದ್ರ ಆಚಾರ್ಯ ಆಯ್ಕೆಗೊಂಡರು. ಮಹಿಳಾ ಮೀಸಲು ಕ್ಷೇತ್ರದಿಂದ ಲಕ್ಷ್ಮೀ, ಶಕುಂತಲಾ ಆಯ್ಕೆಗೊಂಡರು. ಪ್ರವರ್ಗ ಎ ಮೀಸಲು ಕ್ಷೇತ್ರದಿಂದ ಗಣೇಶ್ ಪೂಜಾರಿ, ಪ್ರವರ್ಗ ಬಿ. ಮೀಸಲು ಕ್ಷೇತ್ರದಿಂದ ವೀರೇಂದ್ರ ಹೆಗ್ಡೆ ಆಯ್ಕೆಗೊಂಡರು. ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ರಾಮ ಕಂತಿಹೊಂಡ, ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರದಿಂದ ಸುರೇಶ್ ನಾಯ್ಕ್ ಆಯ್ಕೆಗೊಂಡರು. ಸಹಕಾರ ಅಭಿವೃದ್ಧಿ ಅಧಿಕಾರಿಯಾದ ಸುನೀಲ್ ಕುಮಾರ್ ಸಿ. ಎಮ್ ಚುನಾವಣಾ ಅಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಸುರೇಶ್ ಅಳ್ವೆಗದ್ದೆ ಸಹಕರಿಸಿದರು. ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ಸಂಘದಲ್ಲಿ ಒಂದಿಷ್ಟು ಸದಸ್ಯರಿಗೆ ಮತ…
ಕುಂದಾಪ್ರ ಡಾಟ್ ಕಾಂ ಸುದ್ದಿಇ.ಕುಂದಾಪುರ: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ ಆಫ್ ಇಂಡಿಯಾ ನವದೆಹಲಿ ನವೆಂಬರ್ 2024 ರಲ್ಲಿ ಏರ್ಪಡಿಸಿದ ಸಿಎ ಫೈನಲ್ ಪರೀಕ್ಷೆಯಲ್ಲಿ ಕುಂದಾಪುರ-ಕೋಣಿ ಗ್ರಾಮದ ಅಕ್ಷಯ ಪೂಜಾರಿ ತೇರ್ಗಡೆ ಹೊಂದಿ ಸಿಎ ಪದವಿ ಪಡೆದಿದ್ದಾರೆ. ಕುಂದಾಪುರದ ಮೆ| ಟಿ. ಎನ್. ಪ್ರಭು ಎಂಡ್ ಕೋ. ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯಲ್ಲಿ ತರಬೇತಿ ಪಡೆದು ಸಾಧನೆ ಮಾಡಿದ್ದಾರೆ. ಈತ ಕೋಣ್ಸಾಲ್ ಮನೆ, ಕೋಣಿ ಬಾಬು ಪೂಜಾರಿ ಮತ್ತು ಪದ್ದು ಪೂಜಾರಿ ಅವರ ಪುತ್ರ. ಲೆಕ್ಕ ಪರಿಶೋಧಕ ಟಿ. ಎನ್. ಪ್ರಭು ಹಾಗೂ ಸಂಸ್ಥೆಯ ಸಹೋದ್ಯೋಗಿಗಳು ಇವರ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಐ.ಸಿ.ಎ.ಐ. ನಡೆಸಿದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಕುಂದಾಪುರದ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಾದ ಶ್ರವಣ್ ಶೆಟ್ಟಿ, ಅರುಣ್ ಶೆಟ್ಟಿ, ಮತ್ತು ಅರುಣ್ ಕುಮಾರ್ ಉತ್ತೀರ್ಣರಾಗಿದ್ದಾರೆ. ಅವರ ಸಾಧನೆಗೆ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಬಿ.ಎಂ. ಸುಕುಮಾರ್ ಶೆಟ್ಟಿ, ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಸಂಸ್ಥೆಯ ಪರವಾಗಿ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕೇಂದ್ರೀಯ ಕ್ಷಯರೋಗ ವಿಭಾಗದ ಮುಖ್ಯ ಸಹಾಯಕ ನಿರ್ದೇಶಕ ಡಾ. ರಘುರಾಮ್ ರಾವ್, ವಿಶ್ವ ಆರೋಗ್ಯ ಸಂಸ್ಥೆಯ ರಾಷ್ಟ್ರೀಯ ಸಲಹೆಗಾರ ಡಾ. ಮ್ರಿಜೆನ್ ದೆಖ, ಕೇಂದ್ರೀಯ ಕ್ಷಯ ರೋಗ ವಿಭಾಗದ ತಾಂತ್ರಿಕ ಅಧಿಕಾರಿ ಶಶಾಂಕ್ ಮಾಳವಿಯ ಮತ್ತು ಕೆ.ಎಚ್.ಪಿ.ಟಿ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನ್ ಎಚ್.ಎಲ್. ಅವರು ಗಂಗೊಳ್ಳಿಗೆ ಶುಕ್ರವಾರ ಭೇಟಿ ನೀಡಿದರು. ಗಂಗೊಳ್ಳಿಯ ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕರ ಕಛೇರಿಯಲ್ಲಿ ಗ್ರಾಮ ಪಂಚಾಯತ್ ಗಂಗೊಳ್ಳಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ ಇದರ ವತಿಯಿಂದ ಹಮ್ಮಿಕೊಂಡಿದ್ದ ಗ್ರಾಮ ಆರೋಗ್ಯ ಕಾರ್ಯಕ್ರಮವನ್ನು ವೀಕ್ಷಿಸಿದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು, ನೈರ್ಮಲ್ಯ, ಸಮಗ್ರ ಆರೋಗ್ಯ, ಉಪಶಾಮಕ ಆರೈಕೆ ಹಾಗೂ ಗ್ರಾಮ ಪಂಚಾಯತ್ನ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಿ ಮಾಹಿತಿ ಪಡೆದುಕೊಂಡರು. ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಎಚ್‌ಒ ನಯನಾ ಮತ್ತು ಆಶಾ ಕಾರ್ಯಕರ್ತೆ ಕಲ್ಪನಾ ಅವರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ದೇಶ ಅಭಿವೃದ್ಧಿಯಾಗಬೇಕಾದರೆ ಭಾರತೀಯ ನಾರಿಶಕ್ತಿ ಎಚ್ಚೆತ್ತುಕೊಂಡು ಪುರುಷರಿಗೆ ಸರಿಸಮಾನರಾಗಿ ನಿಲ್ಲಬೇಕು. ಕಾರಣ ಸಮಾಜದಲ್ಲಿ ದೇವರಿಂದಲೂ ಸಾಧ್ಯವಾಗದ ಕೆಲವು ವಿಚಾರಗಳನ್ನು ಮಹಿಳೆಯರು ಸಾಧಿಸಿ ತೋರಿಸುತ್ತಾರೆ. ಪ್ರಸ್ತುತ ಸಮಾಜದಲ್ಲಿ ಮಹಿಳೆಯರ ಬಗ್ಗೆ ಇರುವ ದೃಷ್ಠಿಕೋನಗಳು ಬದಲಾಗಬೇಕಿದೆ ಎಂದು ಬೆಳಗಾವಿ ಜಿಲ್ಲೆ ಕಿತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಮೀನಾಕ್ಷಿ ಅಶೋಕ್ ಹೇಳಿದರು. ನಾಗೂರು ಶ್ರೀ ಗೋಪಾಲಕೃಷ್ಣ ಕಲಾಮಂದಿರದಲ್ಲಿ ಶುಕ್ರವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಜ್ಞಾನವಿಕಾಸ ಮಹಿಳಾ ವಿಚಾರಗೋಷ್ಠಿಯಲ್ಲಿ ಉಪನ್ಯಾಸ ನೀಡಿದರು. ಸಂಸ್ಕೃತಿ, ಸಂಸ್ಕಾರಗಳನ್ನು ಉಳಿಸಿ ಬೆಳೆಸುವಲ್ಲಿ ಮಹಿಳೆ ತರ ಪಾತ್ರ ಹಿರಿದಾಗಿದೆ. ಜ್ಞಾನವಿಕಾಸ ಒಂದು ಸಂಸ್ಕಾರಯುತ ಸಂಘಟನೆಯಾಗಿದ್ದು, ಸಾಮಾನ್ಯ ಮಹಿಳೆಯರ ಜೀವನದಲ್ಲಿ ಶಿಸ್ತು, ಸಾಮಾಜಿಕ ಜವಾಬ್ದಾರಿ ಹಾಗೂ ಸಮಾಜಮುಖಿ ಕಳಕಳಿಯನ್ನು ಬೆಳೆಸುತ್ತಿದೆ. ಎಲ್ಲಾ ಬೆರಳುಗಳು ಸಮಾನವಾಗಿಲ್ಲದಿದ್ದರೂ ಕೆಲಸ ಮಾಡುವಾಗ ಎಲ್ಲವೂ ಒಂದಾಗುವಂತೆ ಪ್ರತೀ ಒರ್ವ ಮಹಿಳೆಯಲ್ಲಿ ಅಭಿಪ್ರಾಯಗಳು ವ್ಯತಿರಿಕ್ತವಾದರೂ ಕೂಡ ಅವರಿಗೆ ಅಗತ್ಯ ವೇದಿಕೆ ನಿರ್ಮಿಸಿ ಸಮಾನರನ್ನಾಗಿಸಿದೆ. ಶಿಕ್ಷಣ, ಸಾಮಾನ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರು ಇವರು ನಡೆಸಿದ 2024- 25ನೇ ಸಾಲಿನ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲಮಾಧ್ಯಮ ಪ್ರೌಢ ಶಾಲೆಯ 7 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 16 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 3 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಶೇ.100 ಫಲಿತಾಂಶ ಪಡೆದಿರುತ್ತಾರೆ . ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ಲಾರಿಗೆ ಅದೆ ಮಾರ್ಗದಲ್ಲಿ ಸಾಗುತ್ತಿದ್ದ ಇನ್ನೊಂದು ಲಾರಿ ಮೂವತ್ತು ಮುಡಿ ಸೇತುವೆ ಬಳಿ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕ ಗಂಭೀರ ಸ್ವರೂಪದ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ ಘಟನೆ ಶುಕ್ರವಾರ ನಡೆದಿದೆ. ಆಂಬ್ಯುಲೆನ್ಸ್ ಇಬ್ರಾಹಿಂ ಗಂಗೊಳ್ಳಿ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದರು. ಕುಂದಾಪುರ ಠಾಣೆ ಪೊಲೀಸ್ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಮಹಜರು ನಡೆಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಕೇಂದ್ರೀಯ ಕ್ಷಯರೋಗ ವಿಭಾಗದ ಮುಖ್ಯ ಸಹಾಯಕ ನಿರ್ದೇಶಕರಾದ ಡಾ. ರಘುರಾಮ್, ವಿಶ್ವ ಆರೋಗ್ಯ ಸಂಸ್ಥೆಯ ರಾಷ್ಟ್ರೀಯ ಸಲಹೆಗಾರರಾದ ಡಾ. ಮ್ರಿಜೆನ್ ದೆಖ, ಕೇಂದ್ರೀಯ ಕ್ಷಯ ರೋಗ ವಿಭಾಗದ ತಾಂತ್ರಿಕ ಅಧಿಕಾರಿ ಶಶಾಂಕ್ ಮಾಳವಿಯ ಮತ್ತು ಕೆಎಚ್ಪಿ. ಟಿ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನ್ ಎಚ್. ಎಚ್ ಇವರುಗಳು ಡಿ. 27ರಂದು ವಂಡ್ಸೆ ಗ್ರಾಮ ಪಂಚಾಯತ್ಗೆ ಭೇಟಿ ನೀಡಿದರು. ಸಮಗ್ರ ಆರೋಗ್ಯ, ಉಪಶಾಮಕ ಆರೈಕೆ ಹಾಗೂ ಗ್ರಾಮ ಪಂಚಾಯತ್ನ ವಿವಿಧ ಯೋಜನೆಗಳ ಬಗ್ಗೆ ಚರ್ಚಿಸಿ, ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಕೆಎಚ್ಪಿ.ಟಿಯ ಡಾ. ಸ್ವರೂಪ್, ಅನ್ನಾ ಫರ್ನಾಂಡೀಸ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗೀತಾ ಅವಿನಾಶ್, ಉಪಾಧ್ಯಕ್ಷರಾದ ಗೋವರ್ಧನ ಜೋಗಿ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯರಾದ ಉದಯ ಕುಮಾರ ಶೆಟ್ಟಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ, ಕಾರ್ಯದರ್ಶಿ ಸುರೇಶ್ ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು. ಗ್ರಾ.ಪಂ. ಮಾಜಿ…
