Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಭಾರತದ ಪ್ರಸಿದ್ಧ ಆರ್ಥಿಕ ತಜ್ಞರು ಹಾಗೂ ಮಾಜಿ ಪ್ರಧಾನಮಂತ್ರಿಗಳಾದ ಡಾ. ಮನಮೋಹನ್ ಸಿಂಗ್‌ ಅವರ ನಿಧನದ ಹಿನ್ನೆಲೆಯಲ್ಲಿ  ಹಟ್ಟಿಅಂಗಡಿ ವಸತಿ ಶಾಲೆಯಲ್ಲಿ ಡಿ. 27 ರಂದು ಮೌನ ಪ್ರಾರ್ಥನೆಯ ಮೂಲಕ ಶ್ರದ್ಧಾಂಜಲಿಯನ್ನು ಅರ್ಪಿಸಲಾಯಿತು. ಶಾಲೆಯ ಸಂಯೋಜಕರಾದ ಸವಿತಾ ಭಟ್ ಪ್ರಾಸ್ತಾವಿಕವಾಗಿ ಮಾತನಾಡುತ್ತಾ “ಹತ್ತು ವರ್ಷಗಳಷ್ಟು ದೀರ್ಘಕಾಲ ಭಾರತದ ಪ್ರಧಾನಿಯಾಗಿದ್ದು, ಕಾಯಕವೇ ಕೈಲಾಸವೆಂದು ಸದಾ ಕಾರ್ಯದಲ್ಲಿಯೇ ತಮ್ಮನ್ನು ತೊಡಗಿಸಿಕೊಂಡ ಮಹಾನ್ ಚೇತನ ಮನಮೋಹನ ಸಿಂಗ್. ಗ್ರಾಮಗಳ ಅಭಿವೃದ್ಧಿಗೆ ವಿಶೇಷ ಆದ್ಯತೆಯನ್ನು ನೀಡಿದವರು. ಮಾಹಿತಿ ತಂತ್ರಜ್ಞಾನ ಕ್ಶೇತ್ರದಲ್ಲಿ ಭಾರತವು ಸಾಧಿಸಿದ ಅಭಿವೃದ್ಧಿಯಲ್ಲಿ ಇವರದ್ದು ಸಿಂಹಪಾಲು. ಮೌನವಾಗಿದ್ದು ಕಾರ್ಯ ನಿರ್ವಹಿಸುವ ಇವರ ಜೀವನ ವಿದ್ಯಾರ್ಥಿಗಳಿಗೆ ಆದರ್ಶಪ್ರಾಯವಾದುದು.” ಎಂದರು. ಮನಮೋಹನಸಿಂಗರ ಭಾವಚಿತ್ರಕ್ಕೆ ಪುಷ್ಪಾಂಜಲಿಯೊಂದಿಗೆ ಗೌರವ ನಮನ ಸಲ್ಲಿಸಲಾಯಿತು. ನಂತರ ಶಾಲೆಯ ಉಪಪ್ರಾಂಶುಪಾಲರಾದ ರಾಮ ದೇವಾಡಿಗ ಮಾತನಾಡುತ್ತಾ “ಯಾವುದೇ ವ್ಯಕ್ತಿ ಉತ್ತಮವಾಗಿ ಬೆಳೆಯಬೇಕಾದರೆ ಉತ್ತಮ ವಿದ್ಯಾಭ್ಯಾಸ ಅತ್ಯಗತ್ಯ. ಮನಮೋಹನ್ ಸಿಂಗ್‌ ಅವರ ವಿದ್ಯಾರ್ಥಿಜೀವನ ಆಕ್ಸ್‌ಫರ್ಡ್‌ನಂತಹ ಜಗದ್ವಿಖ್ಯಾತ ಸಂಸ್ಥೆಯಲ್ಲಿ ನಡೆದಿದ್ದು ಅವರ ಜೀವನದ ಉತ್ಕರ್ಷಕ್ಕೆ ಕಾರಣವಾಯಿತು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಮ್ಮು ಕಾಶ್ಮೀರದ ಪೂಂಛನಲ್ಲಿ ಡಿ.24 ರಂದು ಸಂಭವಿಸಿದ ಅಪಘಾತದಲ್ಲಿ ಹುತಾತ್ಮರಾದ ಯೋಧ ಬೀಜಾಡಿ ಕೆಳಮನೆಯ ಅನೂಪ್ ಪೂಜಾರಿ ಅವರ ಮನೆಗೆ ಶುಕ್ರವಾರ ಸಂಜೆ ವಿಧಾನಸಭೆ ಸ್ವೀಕರ್ ಯು.ಟಿ. ಖಾದರ್ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ಅನೂಪ್ ಪೂಜಾರಿ ಅವರ ಪತ್ನಿಗೆ ಸರಕಾರಿ ಉದ್ಯೋಗ ನೀಡುವಂತೆ ಸ್ಥಳೀಯರು ಹಾಗೂ ಕುಟುಂಬದವರು ಮನವಿ ಮಾಡಿದ್ದು, ಮುಖ್ಯಮಂತ್ರಿ ಅವರೊಂದಿಗೆ ಈ ಕುರಿತು ಮಾತನಾಡುವುದಾಗಿ ಯು.ಟಿ.ಖಾದ‌ರ್ ಹೇಳಿದರು. ದೇಶ ಕಾಯುವ ನಮ್ಮೂರ ಯುವಕನ ಆಕಾಲಿಕ ನಿಧನ ತೀವ್ರ ನೋವನ್ನುಂಟು ಮಾಡಿದೆ. ದುರಂತದಲ್ಲಿ ಮೃತಪಟ್ಟ ರಾಜ್ಯದ ಸೈನಿಕರ ಕುಟುಂಬದವರಿಗೂನ ಸರಕಾರದಿಂದ ದೊರಕುವ ರಾಜ್ಯ ಸವಲತ್ತುಗಳನ್ನು ನೀಡುವ ಬಗ್ಗೆ ಮುಖ್ಯಮಂತ್ರಿಗಳು ಹೇಳಿದ್ದು ಇದನ್ನು ಶೀಘ್ರ ಅನೂಪ್ ಕುಟುಂಬದವರಿಗೂ ಒದಗಿಸಲು ಪ್ರಯತ್ನಿಸಲಾಗುತ್ತದೆ. ಹುತಾತ್ಮ ಯೋಧನ ಹೆಸರಿನಲ್ಲಿ ಸ್ಮಾರಕ ನಿರ್ಮಾಣ ಸೇರಿದಂತೆ ಯಾವುದೇ ಕಾರ್ಯಕ್ರಮ ರೂಪಿಸುವುದಿದ್ದರೂ, ಸ್ಥಳೀಯ ಆಡಳಿತ ತೀರ್ಮಾನ ಕೈಗೊಳ್ಳಲಿ. ಸರಕಾರದಿಂದ ಅಗತ್ಯ ಸಹಕಾರ ನೀಡಲು ಬದ್ದರಿದ್ದೇವೆ,’ ಎಂದರು. ಮಾಜಿ ಸಚಿವ ವಿನಯಕುಮಾರ ಸೊರಕೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೆರಾಡಿಯ ಆದಿತ್ಯ ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದಾನೆ. ಈತ ಚಪ್ಪರಮಕ್ಕಿ ಕೆರಾಡಿ ಜ್ಯೋತಿ ಹಾಗೂ ರಾಜೀವ್ ಶೆಟ್ಟಿ ದಂಪತಿಗಳ ಪುತ್ರ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಕರ್ನಾಟಕದ ಲೋಕಾಯುಕ್ತರಾದ ಜಸ್ಟೀಸ್ ಬಿ. ಎಸ್ ಪಾಟೀಲ್ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ತಾಯಿ ಮೂಕಾಂಬಿಕೆ ದರ್ಶನ ಪಡೆದು ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೆ. ಬಾಬು ಹೆಗ್ಡೆ ಶ್ರೀ ದೇವಿಯ ಪ್ರಸಾದ ಹಾಗೂ ಸ್ಮರಣಿಕೆ ನೀಡಿ ದೇವಸ್ಥಾನದ ವತಿಯಿಂದ ಗೌರವಿಸಲಾಯಿತು. ವ್ಯವಸ್ಥಾಪನ ಸಮಿತಿ ಸದಸ್ಯರಾದ ರಘುರಾಮ ದೇವಾಡಿಗ, ಧನಾಕ್ಷಿ ಪೂಜಾರಿ, ಮಾಲಿಂಗ ನಾಯ್ಕ್ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ‘ಸರ್ಟಿಫಿಕೆಟ್‌ಗಿಂತ ಸಂಸ್ಕಾರ ಮುಖ್ಯ. ಶಿಕ್ಷಣವು ಸಂಸ್ಕಾರಭರಿತ ಮನಸ್ಸನ್ನು ಕಟ್ಟುವ ಪ್ರಕ್ರಿಯೆ ಎಂದು ಮಂಗಳೂರು ವಿಶ್ವವಿದ್ಯಾಲಯದ  ಎಸ್‌ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಸಹಾಯಕ ಪ್ರಾಧ್ಯಾಪಕ ಡಾ. ಧನಂಜಯ ಕುಂಬ್ಳೆ ಹೇಳಿದರು. ಆಳ್ವಾಸ್ ಮುಂಡ್ರೆದೆಗುತ್ತು ಕೆ. ಅಮರನಾಥ ಶೆಟ್ಟಿ ಕೃಷಿಸಿರಿ ವೇದಿಕೆಯಲ್ಲಿ ಗುರುವಾರ ನಡೆದ ಆಳ್ವಾಸ್ ಇಂಗ್ಲಿಷ್ ಮಾಧ್ಯಮ ಮತ್ತು ಕನ್ನಡ ಮಾಧ್ಯಮ ಶಾಲೆಗಳ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ವಿದ್ಯಾವಂತರಾದವರೇ ಸಮಾಜಘಾತುಕ ಕಾರ್ಯಗಳಲ್ಲಿ ತೊಡಗಿಕೊಂಡರೆ ಅಂತಹ ವಿದ್ಯೆಗೆ ಏನು ಬೆಲೆ ಮಾನವೀಯ ಸಂವೇದನೆಯನ್ನುಂಟು ಮಾಡುವ ಶಿಕ್ಷಣ ನಮಗೆ ಬೇಕಾಗಿದೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಅಂತಹ ಶಿಕ್ಷಣವನ್ನು ನೀಡುತ್ತಿರುವುದು ಶ್ಲಾಘನೀಯ ಎಂದರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಆಡಳಿತಾಧಿಕಾರಿ ಬಾಲಕೃಷ್ಣ ಶೆಟ್ಟಿ ಮಾತನಾಡಿ, ನಾವು ಅಕ್ಷರಸ್ಥರಾದರೆ ಸಾಲದು. ನಾವು ವಿದ್ಯಾಂತರಾಗಬೇಕು. ಅಕ್ಷರಸ್ಥರೆಲ್ಲರೂ ವಿದ್ಯಾವಂತರಾಗಲು ಸಾಧ್ಯವಿಲ್ಲ. ಸಂಸ್ಕಾರ ಭರಿತ ಅಕ್ಷರಸ್ಥ ಮಾತ್ರ ವಿದ್ಯಾವಂತ. ಅಕ್ಷರ ಕಲಿತ ವ್ಯಕ್ತಿ ದುಷ್ಟನೂ, ಭ್ರಷ್ಟನೂ ಆಗಬಹುದು. ಆದರೆ ಸಂಸ್ಕಾರ ಕಲಿತ ವ್ಯಕ್ತಿ ಎಂದಿಗೂ ದುಷ್ಟ, ಭ್ರಷ್ಟ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹಳ್ಳಿಹೊಳೆ ಗ್ರಾಮದ ರವೀಂದ್ರ (40) ಅವರು ಗೋಪಾಲ ಅವರ ಬೈಕಿನಲ್ಲಿ ಗೋಪಾಲ ಅವರನ್ನು ಸಹ ಸವಾರನ್ನಾಗಿ ಕುಳ್ಳಿರಿಸಿಕೊಂಡು ಡಿ. 25ರಂದು ಅಮಾಸೆಬೈಲುನಿಂದ ಸಿದ್ದಾಪುರ ಬರುತ್ತಿದ್ದರು. ಸಿದ್ದಾಪುರ ಗ್ರಾಮದ ಕಾರಿಮಕ್ಕಿ ಹೈಗುಳಿ ದೈವಸ್ಥಾನ ಬಳಿ ಎದುರು ಕಡೆಯಿಂದ ಅತೀ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡರು. ಸ್ಥಳೀಯ ಸಹಕಾರದಿಂದ ಕೋಟೇಶ್ವರ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಳಾವರ ಗ್ರಾಮದ ಸಳ್ವಾಡಿಯ ಉದಯ ಅವರ ಪುತ್ರಿ ಮುಗ್ಧ (25) ಅವರು ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಡಿ. 25ರಂದು ಕಾಳಾವರ ಗ್ರಾಮದ ಸಳ್ವಾಡಿಯಲ್ಲಿ ನಡೆದಿದೆ. ಈಕೆ ಮಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡಿಕೊಂಡಿದ್ದು, ಕ್ರಿಸ್ಮಸ್‌ ರಜೆ ಹಿನ್ನೆಲೆಯಲ್ಲಿ ಡಿ. 25ರಂದು ಮನೆಗೆ ಬಂದಿದ್ದರು. ರಾತ್ರಿ 10.30ರ ಸುಮಾರಿಗೆ ಮನೆಯ ಬಾವಿ ಬಳಿಗೆ ಹೋಗಿದ್ದಾಗ ಆಕಸ್ಮಿಕವಾಗಿ ಬಿದ್ದರು ಎನ್ನಲಾಗಿದೆ. ಡಿ. 26ರ ಬೆಳಿಗ್ಗೆ ಮೃತದೇಹವನ್ನು ಸ್ಥಳೀಯರು, ಅಗ್ನಿಶಾಮಕದಳದವರ ಸಹಾಯದಿಂದ ಶವವನ್ನು ಮೇಲಕ್ಕೆತ್ತಲಾಯಿತು. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಮತ್ತು ರಾಷ್ಟ್ರೀಯ ಕೃಷಿ ವಿಸ್ತರಣೆ ನಿರ್ವಹಣಾ ಸಂಸ್ಥೆ, ಹೈದರಾಬಾದ್ ಇವರ ಸಹಯೋಗದಲ್ಲಿ ಕೃಷಿಯಲ್ಲಿ ತೊಡಗಿಸಿಕೊಂಡಿರುವ ಅಥವಾ ಆಸಕ್ತಿ ಇರುವ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಸಮಗ್ರ ಕೃಷಿ ಪದ್ಧತಿಯಲ್ಲಿ 5 ದಿನಗಳ ಕಾಲ ತರಬೇತಿಯನ್ನು 2025 ರ ಜನವರಿ 7 ರಿಂದ 11 ರ ವರೆಗೆ ಬ್ರಹ್ಮಾವರದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದೆ. ಆಸಕ್ತ ಪುರುಷ ಅಥವಾ ಮಹಿಳಾ ಅಭ್ಯರ್ಥಿಗಳು ಜಾತಿ ಪ್ರಮಾಣ ಪತ್ರ, ಕೃಷಿ ಭೂಮಿಯ ಪಹಣಿ ಮತ್ತು ಆಧಾರ್ ಕಾರ್ಡ್ ಪ್ರತಿಯನ್ನು ವಾಟ್ಸಪ್ಪ್ ನಂಬರ್‌ಗೆ 9972247539 ಕಳುಹಿಸಬಹುದಾಗಿದೆ. ಜನವರಿ 5 ರ ಒಳಗಾಗಿ ಬರುವ ಮೊದಲ 40 ಅರ್ಜಿಗಳಿಗೆ ಮಾತ್ರ ಅವಕಾಶವಿದ್ದು, ಹೆಚ್ಚಿನ ಮಾಹಿತಿಗೆ ಮೇಲ್ಕಂಡ ವಾಟ್ಸಪ್ಪ್ ನಂಬರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ 2023-24 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಬಿ ವೃಂದದ ನೇಮಕಾತಿಯ ಪೂರ್ವಭಾವಿ ಮರು ಪರೀಕ್ಷೆಯು ಡಿಸೆಂಬರ್ 29 ರಂದು ಜಿಲ್ಲೆಯಲ್ಲಿ ನಿಗಧಿಪಡಿಸಿರುವ ಒಟ್ಟು 05 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಸದರಿ ಪರೀಕ್ಷೆಗೆ ಹಾಜರಾಗುವ ಪರೀಕ್ಷಾರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದಿಂದ ಈ ಕೆಳಗಿನಂತೆ ತಿಳಿಸಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ತಿಳಿಸಿದ್ದಾರೆ. ಅಭ್ಯರ್ಥಿಗಳು ಡೌನ್‌ಲೋಡ್ ಮಾಡಿಕೊಂಡ ಪ್ರವೇಶ ಪತ್ರವನ್ನು ಹಾಗೂ ಅಭ್ಯರ್ಥಿಯ ಭಾವಚಿತ್ರವಿರುವ ಮೂಲ ಗುರುತಿನ ಚೀಟಿಯನ್ನು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಹಾಜರುಪಡಿಸಿದ ನಂತರವೇ ಪರೀಕ್ಷಾ ಉಪಕೇಂದ್ರವನ್ನು ಪ್ರವೇಶಿಸಲು ಅನುಮತಿ ನೀಡಲಾಗುವುದು. ಮೂಲ ಗುರುತಿನ ಚೀಟಿ ಹಾಜರುಪಡಿಸದ ಅಭ್ಯರ್ಥಿಗಳಿಗೆ ಪರೀಕ್ಷಾ ಉಪಕೇಂದ್ರವನ್ನು ಪ್ರವೇಶಿಸಲು ಅನುಮತಿ ಇರುವುದಿಲ್ಲ. ಅಭ್ಯರ್ಥಿಗಳು ಪರೀಕ್ಷಾ ದಿನಗಳಂದು ಬೆಳಗ್ಗಿನ ಹಾಗೂ ಮಧ್ಯಾಹ್ನದ ಅಧಿವೇಶನಗಳ ಪರೀಕ್ಷೆ ಪ್ರಾರಂಭವಾಗುವ 02 ಗಂಟೆ ಮೊದಲು ಕಡ್ಡಾಯವಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಮೊಬೈಲ್, ಕ್ಯಾಲ್ಕುಲೇಟರ್,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ 2023-24 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಬಿ ವೃಂದದ ಒಟ್ಟು 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಗಳು ಡಿಸೆಂಬರ್ 29 ರಂದು ಜಿಲ್ಲೆಯಲ್ಲಿ ನಿಗಧಿಪಡಿಸಿರುವ ಒಟ್ಟು 05 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು, ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 ರ ಕಲಂ 163 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

Read More