ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಥಾಯ್ಲೆಂಡ್ ನಲ್ಲಿ ನೆಡೆಯುವ ಅಂತರಾಷ್ಟ್ರೀಯ ಮಟ್ಟದ ವರ್ಷಿಣಿ ಯೋಗ ಎಜ್ಯುಕೇಶನ್ ಆಂಡ್ ಕಲ್ಚರಲ್ ಸ್ಪೋರ್ಟ್ಸ್ ಟ್ರಸ್ಟ್ ಶಿವಮೊಗ್ಗ ಇವರ ವತಿಯಿಂದ ಆಯೋಜಿಸಿದ್ದ ಅಂತರಾಷ್ಟ್ರೀಯ ಯೋಗ ಚಾಂಪಿಯನ್ ಶಿಫ್ ಸ್ಪರ್ಧೆಗೆ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಧನ್ವಿ ಪೂಜಾರಿ ಮರವಂತೆ ಆಯ್ಕೆಯಾಗಿರುತ್ತಾಳೆ. ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಡಿಸೆಂಬರ್ 10 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಗ್ರಾಫಿಕ್ ಡಿಸೈನ್ (ಕಂಪ್ಲಿಟೇಡ್ ಪೋಟೋ ಶ್ಯಾಪ್ ಕೋರ್ಸ್), ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 9901472710 ಅಥವಾ 8105774936 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರತಿ ಕುಟಂಬಗಳು ತಮ್ಮ ಮನೆಯ ಮೇಲ್ಛಾವಣಿಯಲ್ಲಿ ಸೋಲಾರ್ ವಿದ್ಯುತ್ ಅಳವಡಿಸಿಕೊಳ್ಳುವ ಮೂಲಕ ವಿದ್ಯುತ್ ವೆಚ್ಚದ ಹೊರೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಸೂರ್ಯ ಘರ್ ಯೋಜನೆಯನ್ನು ಜಾರಿಗೊಳಿಸಿದ್ದು, ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಉಡುಪಿ -ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ ಉಡುಪಿ ಜಿಲ್ಲೆ ಇವರ ವತಿಯಿಂದ ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ, ಮಾಹಿತಿ ಕಾರ್ಯಾಗಾರ ಮತ್ತು ಸವಲತ್ತು ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯುತ್ ಹೊಂದಿಲ್ಲದ ಕುಟುಂಬದ ಮನೆಗಳಿಗೆ ಮೊದಲ ಆದ್ಯತೆ ನೀಡಿದಾಗ ಈ ಯೋಜನೆ ಯಶಸ್ವಿಯಾಗುತ್ತದೆ ಎಂದ ಅವರು, ಗ್ರಾಮ ಪಂಚಾಯತ್ ಹಾಗೂ ಸ್ಥಳೀಯ ಸಂಸ್ಥೆಗಳು ಈ ಯೋಜನೆಯ ಕುರಿತು ಸಾರ್ವಜನಿಕರಿಗೆ ಮಾಹಿತಿ ಒದಗಿಸಬೇಕು. ಇದರ ಅಡಿಯಲ್ಲಿ ಒದಗಿಸಲಾಗುವ ಸಹಾಯಧನದ ಕುರಿತು ಮಾಹಿತಿ ನೀಡಬೇಕು ಎಂದರು. ಸೂರ್ಯ ಘರ್ ಯೋಜನೆಯಡಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ, ನಾಗಮಂಗಲ ತಾಲೂಕು ಮಂಡ್ಯ ಜಿಲ್ಲೆಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ 17ರ ವಯೋಮಾನದ ಬಾಲಕರ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಅವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾಸ್ ಪಿಯು ಕಾಲೇಜಿನ ದ್ವಿತೀಯ ಪಿಯು ವಿಜ್ಞಾನ ಮತ್ತು ವಾಣಿಜ್ಯ ವಿದ್ಯಾರ್ಥಿಗಳಿಗೆ ಒಂದು ದಿನದ “ವೃತ್ತಿ ಮಾರ್ಗದರ್ಶನ ಮತ್ತು ಆಪ್ತಸಲಹೆ” ಕಾರ್ಯಾಗಾರ ನಡೆಯಿತು. ಮದರ್ ತೆರೇಸಾಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಶಮಿತಾರಾವ್ ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಾಗಾರವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ರಾಷ್ಟೀಯ ಪದವಿ ಪೂರ್ವ ವಿದ್ಯಾರ್ಥಿ, ಶಿಕ್ಷಕರ ಮತ್ತುಪಾಲಕರ ಸಂಘ ಸ್ಥಾಪಕರಾದ ಮಿತೇಶ್ ಮೂಡುಕೊಣಾಜೆ ಅವರು ಕಾರ್ಯಕ್ರಮದಲ್ಲಿ ಮಾತನಾಡಿ, ಇಂದಿನ ತಂತ್ರಜ್ಞಾನದ ಯುಗದಲ್ಲಿ ಉದ್ಯೋಗಕೌಶಲ್ಯ ಮತ್ತು ವೃತ್ತಿ ಕೌಶಲ್ಯ ಅಗತ್ಯವಾಗಿದೆ. ಜಾಗತೀಕರಣದ ಪ್ರಸ್ತುತ ಸಂದರ್ಭದಲ್ಲಿ ಬಹು ಕೌಶಲ್ಯ ಕಾರ್ಮಿಕರ ಬೇಡಿಕೆ ಹೆಚ್ಚಾಗಿದೆ. ಭಾರತದಂತಹ ಅಭಿವೃದ್ಧಿಹೊಂದುತ್ತಿರುವ ರಾಷ್ಟ್ರದಲ್ಲಿ ಗುಣಮಟ್ಟದ ಕೌಶಲ್ಲ್ಯಾಭಿವೃದ್ಧಿ ಮತ್ತು ತರಬೇತಿ ಅಗತ್ಯ, ತಮ್ಮವೃತ್ತಿ ಆಯ್ಕೆಗಳನ್ನು ಗುರುತಿಸಲು ಮತ್ತು ಅಪೇಕ್ಷಿತ ವೃತ್ತಿಯನ್ನು ಆಯ್ಕೆಮಾಡಲು ಸೂಕ್ತ ಸಲಹೆ ಮತ್ತು ಮಾರ್ಗದರ್ಶನ ಅತೀ ಅವಶ್ಯಕವಾಗಿದೆ ಎಂದು ವಿದ್ಯಾರ್ಥಿಗಳಿಗೆ ನೀಟ್, ಸಿಇಟಿ ಪರೀಕ್ಷಾಮಾಹಿತಿ, ಪರೀಕ್ಷಾದ್ವಂದ್ವಗಳು, ಭವಿಷ್ಯದಲ್ಲಿ ವೃತ್ತಿಯೋಜನೆ, ಕೋರ್ಸ್ಆಯ್ಕೆ, ವೃತ್ತಿಪರಿವರ್ತನೆ, ಸ್ವಯಂನಿರ್ಧಾರ, ಸ್ಪರ್ಧಾತ್ಮಕ ಪರೀಕ್ಷೆ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.07: ಇಲ್ಲಿನ ಕೋಡಿ ಬೀಚಿನಲ್ಲಿ ಈಜಾಡಲು ತೆರಳಿದ್ದ ಮೂವರು ಸಹೋದರರು ಸಮುದ್ರಪಾಲಾಗಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದರೆ, ಗಂಭೀರ ಸ್ಥಿತಿಯಲ್ಲಿದ್ದ ಇನ್ನೋರ್ವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರು ಸಹೋದರರು ಸಂಜೆ 6 ಗಂಟೆ ಸುಮಾರಿಗೆ ಕೊಡಿಯ ಸಮುದ್ರದಲ್ಲಿ ಈಜಾಡಲು ತೆರಳಿದ್ದು ಈ ವೇಳೆ ಅವಘಡ ನಡೆದಿದೆ. ಅಂಪಾರು ಗ್ರಾಮದ ಮೂಡುಬಗೆಯ ನಿವಾಸಿ ದಾಮೋದರ್ ಪ್ರಭು ಎಂಬುವರ ಪುತ್ರ ಧನರಾಜ್ (23) ಸಾವನ್ನಪ್ಪಿದ್ದರೆ, ಅವರ ಇನ್ನೊರ್ವ ಪುತ್ರ ಧನುಷ್ (20) ಗಂಭೀರ ಸ್ಥಿತಿಯಲ್ಲಿ ಕುಂದಾಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ದಾಮೋದರ್ ಅವರ ಸಹೋದರನ ಪುತ್ರ ದರ್ಶನ್ (18) ಸಮುದ್ರ ಪಾಲಾಗಿದ್ದು, ಪತ್ತೆಗಾಗಿ ಹುಡುಕಾಟ ನಡೆಸಲಾಗಿದೆ. ಗಂಭೀರ ಸ್ಥಿತಿಯಲ್ಲಿರುವ ಧನುಷ್ ಸುರತ್ಕಲ್ ಎನ್ಐಟಿಕೆ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಅವಘಡ ಗಮನಕ್ಕೆ ಬರುತ್ತಿದ್ದಂತೆ ಬೆಂಗಳೂರಿನ ಪ್ರವಾಸಿಗರು ತಕ್ಷಣ ಸಮುದ್ರಕ್ಕೆ ಹಾರಿ ರಕ್ಷಣೆಗೆ ಮುಂದಾದರು. ಬಳಿಕ ಸ್ಥಳೀಯರು ಇಬ್ಬರನ್ನು ಕುಂದಾಪುರದ ಆಸ್ಪತ್ರೆಗೆ ಕಳುಹಿಸಲು ಸಹಕರಿಸಿದ್ದಾರೆ. ದರ್ಶನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಹೊಸೂರು ಸಂಚಲನ ಆಶ್ರಯದಲ್ಲಿ 3 ದಿನಗಳ ರಾಜ್ಯಮಟ್ಟದ ನಾಟಕೋತ್ಸವ, ವನಸಿರಿಯಲ್ಲೊಂದು ರಂಗ ಸುಗ್ಗಿ ರಂಗ ಸಂಚಲನ 2024 ಕಾರ್ಯಕ್ರಮವು ಡಿ.16ರಿಂದ 18ರ ತೂದಳ್ಳಿ ಹೊಸೂರಿನ ಕೆ.ವಿ ಸುಬ್ಬಣ್ಣ ವನರಂಗದಲ್ಲಿ ಪ್ರತಿದಿನ ಸಂಜೆ 7-ಕ್ಕೆ ನಡೆಯಲಿದೆ ಎಂದು ಸಂಚಲನ ಹೊಸೂರು ಖಜಾಂಜಿ ನಾಗಪ್ಪ ಮರಾಠಿ ಹೇಳಿದರು. ಅವರು ಬೈಂದೂರು ಪ್ರೆಸ್ ಕ್ಲಬ್ನಲ್ಲಿ ಶನಿವಾರ ನಡೆದ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕಳೆದ 16 ವರ್ಷದಿಂದ ಪರಿಶಿಷ್ಠ ಪಂಗಡದ ಮರಾಠಿ ಕಲಾವಿದರ ರಂಗ ತಂಡವಾಗಿರುವ ಸಂಚಲನ ರಿ. ಹೊಸೂರು ಮೂಲಕ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಾಟಕೋತ್ಸವವನ್ನು ಆಯೋಜಿಸುತ್ತಾ ಬರಲಾಗುತ್ತಿದ್ದು ಈ ವರ್ಷವು 3 ದಿನಗಳ ಕಾಲ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಡಿ.16ರಂದು ನಡೆಯುವ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಬೈಂದೂರು ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ವಹಿಸಲಿದ್ದಾರೆ. ಗಂಗೊಳ್ಳಿ ಎಸ್.ವಿ ಕಾಲೇಜಿನ ಉಪನ್ಯಾಸಕರಾದ ಸುಜಯೀಂದ್ರ ಹಂದೆ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬೈಂದೂರು ವಲಯ ಮರಾಟಿ ಸಮಾಜ ಸುಧಾರಕರ ಸಂಘದ ಅಧ್ಯಕ್ಷರಾದ ಭೋಜ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ, ನಾಗಮಂಗಲ ತಾಲೂಕು ಮಂಡ್ಯ ಜಿಲ್ಲೆಯಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ 14ರ ವಯೋಮಾನದ ಬಾಲಕರ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ. ಅವರಿಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಲಾರಿ ಮತ್ತು ಕೆಂಪುಕಲ್ಲು ಕೋರೆ ಮಾಲಕರ ಸಂಘದ ಎರಡು ಬಣಗಳ ನಡುವಿನ ಮುಸುಕಿನ ಗುದ್ದಾಟ, ತಾರಕಕ್ಕೇರಿ, ಒಂದೇ ದಿನ ಎರಡು ಪ್ರತ್ಯೇಕ ಹೋರಾಟ ನಡೆದ ಘಟನೆ ಶನಿವಾರ ಬೈಂದೂರಿನಲ್ಲಿ ನಡೆದಿದೆ. ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಮರಳು ಮತ್ತು ಕೆಂಪುಕಲ್ಲು ಗಣಿಗಾರಿಕೆಗೆ ಅನುಮತಿ ನೀಡಬೇಕು ಎಂದು ಆಗ್ರಹಿಸಿ ಶಾಸಕ ಗುರುರಾಜ ಗಂಟಿಹೊಳೆ, ದಿವಾಕರ್ ಶೆಟ್ಟಿ ಅವರ ನೇತೃತ್ವದಲ್ಲಿ ಇಲ್ಲಿನ ಆಡಳಿತಸೌಧದ ಎದುರು ಪ್ರತಿಭಟನೆ ನಡೆದರೆ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ಬೈಂದೂರು ರೈತ ಸಂಘದ ಅಧ್ಯಕ್ಷ ದೀಪಕ್ಕುಮಾರ್ ಶೆಟ್ಟಿ, ವಿಜಯಕುಮಾರ ಶೆಟ್ಟಿ ಅವರ ನೇತೃತ್ವದಲ್ಲಿ ಲಾರಿ ಮತ್ತು ಕೆಂಪುಕೋರೆ ಮಾಲಕರು ಹಾಗೂ ಕಾರ್ಮಿಕರು, ಇಲ್ಲಿನ ಅಂಡರ್ಪಾಸ್ನಿಂದ ಮೆರವಣೆಗೆ ಮೂಲಕ ಬೈಂದೂರು ತಾಲೂಕು ಆಡಳಿತಸೌಧಕ್ಕೆ ತೆರಳಿ ತಹಶೀಲ್ದಾರ ಅವರಿಗೆ ಮನವಿಪತ್ರ ಸಲ್ಲಿಸಿದರು. ಶಾಸಕ ಗುರುರಾಜ ಗಂಟಿಹೊಳೆ ಮಾತನಾಡಿ, ಹಲವು ತಿಂಗಳಿನಿಂದ ಜಿಲ್ಲೆಯಾದ್ಯಂತ ಮರಳು ಮತ್ತು ಕೆಂಪುಕಲ್ಲು ಗಣಿಗಾರಿಕೆ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಕೂಲಿ ಕಾರ್ಮಿಕರು ಬೀದಿ ಬೀಳುವಂತಾಗಿದೆ, ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಕುಂದಾಪುರದ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಗುರು ವೇದಿಕ್ ಮಾಥ್ಸ್-2024ರ ಅಂತಾರಾಷ್ಟ್ರೀಯ ಮಟ್ಟದ ಆನ್ಲೈನ್ ಸ್ಪರ್ಧೆಯಲ್ಲಿ ಭಾಗವಹಿಸಿ ಅತ್ತ್ಯುತ್ತಮ ಪ್ರತಿಭೆ ತೋರ್ಪಡಿಸಿರುತ್ತಾರೆ. ವಿಜೇತರ ಯಾದಿ:ರಿಷಿ ಎಸ್. ಶೆಟ್ಟಿ ತೃತೀಯ ಸ್ಥಾನ ಪ್ರೇರಕ ಪ್ರಶಸ್ತಿ ಚಾಂಪಿಯನ್1.ನಿಖಿಲ್ ಜಿ ಶೆಟ್ಟಿ2.ಆತ್ಮಿಕಾ3.ಶ್ರೀಲಕ್ಷ್ಮಿ ಸಮಾಧಾನಕರ ಬಹುಮಾನ1.ದಿವ್ಯಾ ಆರ್ ಶೆಟ್ಟಿ2.ತನಿಶಾ ಶೆಟ್ಟಿ3.ರಾಜೇಶ್ವರಿ4.ಅಬಿಗೈಲ್ ರಾಜಿ5.ರಶ್ಮಿತಾ6.ಕಿಶನ್ ಶೆಟ್ಟಿ7.ಶ್ರೀರಕ್ಷಾ ವಿದ್ಯಾರ್ಥಿಗಳು ಕ್ರಮವಾಗಿ ಪ್ರಶಸ್ತಿ ಪಡೆದಿರುತ್ತಾರೆ. ಅವರಿಗೆ ಅಬಾಕಸ್ ಮತ್ತು ವೇದಿಕ್ ಮ್ಯಾರ್ಥ್ಸ್ ಶಿಕ್ಷಕಿ ಗೀತಾ ತರಬೇತಿ ನೀಡಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಗೆ ಆಡಳಿತಮಂಡಳಿ, ಮುಖ್ಯಶಿಕ್ಷಕರು, ಬೋಧಕ ಮತ್ತು ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಶುಭಾಶಯ ಕೋರಿರುತ್ತಾರೆ.
