Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಅಧ್ಯಾಪಕರಾಗಿ  ಮತ್ತು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಇತಿಹಾಸ ವಿಭಾಗದ ಉಪನ್ಯಾಸಕರಾಗಿ ಒಟ್ಟಾರೆ 34 ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿ  ವಯೋನಿವೃತ್ತಿ ಹೊಂದಿದ ಹೆಚ್ ಭಾಸ್ಕರ ಶೆಟ್ಟಿ  ಮತ್ತು ನಿವೃತ್ತಿಯ ಬಳಿಕ ಎರಡು ವರ್ಷಗಳ ಕಾಲ  ದೈಹಿಕ ಶಿಕ್ಷಣ ಉಪನ್ಯಾಸಕರಾಗಿ  ವಿಶೇಷ ಸೇವೆಯನ್ನು ಸಲ್ಲಿಸಿದ ನಾಗರಾಜ ಶೆಟ್ಟಿ ಅವರ ಬೀಳ್ಕೊಡುಗೆ ಸಮಾರಂಭವು ಸರಸ್ವತಿ ವಿದ್ಯಾಲಯದ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಡೆಯಿತು. ಜಿಎಸ್‌ವಿಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶಿನಾಥ್ ಪೈ, ಜಿಎಸ್​​ವಿಎಸ್ ಅಸೋಸಿಯೇಷನ್ ಕಾರ್ಯದರ್ಶಿ ಎಚ್. ಗಣೇಶ್ ಕಾಮತ್, ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳ ಸಂಚಾಲಕ ಎನ್. ಸದಾಶಿವ ನಾಯಕ್,  ವಾಣಿಜ್ಯ ಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್., ಗಂಗೊಳ್ಳಿ  ನಿವೃತ್ತ ಉಪನ್ಯಾಸಕರನ್ನು  ಅಭಿನಂದಿಸಿ ಮಾತನಾಡಿದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ, ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಮಾಧ್ಯಮ ಪ್ರೌಢಶಾಲೆಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಕುಂದಾಪುರದ ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕೋಡಿ ಸಮುದ್ರ ತೀರದ ಸೀವಾಕ್‌ನಲ್ಲಿ ಯೋಗ ಪ್ರದರ್ಶನ ನಡೆಯಿತು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಮ್ ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಈ ಯೋಗ ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯೋಗ ಮನುಷ್ಯನ ಶರೀರ ಮತ್ತು ಮನಸ್ಸನ್ನು ಸಮತೋಲನದಲ್ಲಿರಿಸಲು ಸಹಕಾರಿಯಾಗುತ್ತದೆ. ಯೋಗವನ್ನು ಪ್ರಾಣಯಾಮ, ದೈಹಿಕ ಕಸರತ್ತು ಎನ್ನುವ ಸೀಮಿತ ಅರ್ಥದಲ್ಲಿ ಗ್ರಹಿಸದೆ, ಅದು ಬದುಕಿನ ಸರ್ವಾಂಗೀಣ ವಿಕಸನಕ್ಕೆ ಕಾರಣವಾಗುತ್ತದೆ ಎನ್ನುವುದನ್ನು ತಿಳಿಯಬೇಕು. ಯೋಗ ಆತ್ಮ ದರ್ಶನಕ್ಕೆ ಹೊರತು ಪ್ರದರ್ಶನಕ್ಕೆ ಅಲ್ಲ ಎಂದು ನಿವೃತ್ತ ಶಿಕ್ಷಕ, ಯೋಗ ತರಬೇತುದಾರ ಕರುಣಾಕರ ಶೆಟ್ಟಿ ಕಟ್ಕೇರಿ ಹೇಳಿದರು. ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಎನ್.ಸಿ.ಸಿ. ಘಟಕ ಹಾಗೂ ಯೋಗ ಮತ್ತು ಫಿಟ್‌ನೆಸ್ ಸರ್ಟಿಫಿಕೇಟ್ ಕೋರ್ಸ್ನ ಸಂಯುಕ್ತ ಆಶ್ರಯದಲ್ಲಿ ನಡೆದ ‘ವಿಶ್ವಯೋಗ ದಿನʼವನ್ನು ಉದ್ದೇಶಿಸಿ ಮಾತನಾಡಿದರು. ಇದೇ ಸಂದರ್ಭ ಯೋಗದಿಂದಾಗುವ ಪ್ರಯೋಜನಗಳನ್ನು ತಿಳಿಸಿ, ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ನೀಡಿದರು.                ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಾಸ್ತಾವಿಸಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ ಕಾರ್ಯಕ್ರಮದ ಯೋಜನೆಯಡಿ ಜಿಲ್ಲೆಯಾದ್ಯಂತ ಚರ್ಮಗಂಟು ರೋಗ ತಡೆಗಟ್ಟುವ ನಿಟ್ಟಿನಲ್ಲಿ ಜಾನುವಾರುಗಳಿಗೆ ಉಚಿತ ಲಸಿಕೆ ನೀಡುವ ಕಾರ್ಯಕ್ರಮವನ್ನು ಜುಲೈ 27 ರವರೆಗೆ ಆಯೋಜಿಸಲಾಗಿದೆ. ನಾಲ್ಕು ತಿಂಗಳ ಮೇಲ್ಪಟ್ಟ ಎಲ್ಲಾ ಜಾನುವಾರುಗಳಿಗೆ ಈ ಹಿಂದೆ ಲಸಿಕೆ ಹಾಕಿಸಿದ್ದರೂ ಕೂಡಾ ಈ ಬಾರಿಯೂ ಜಾನುವಾರು ಮಾಲೀಕರು ಜಾನುವಾರುಗಳಿಗೆ ಲಸಿಕೆ ಹಾಕಿಸುವುದರ ಮೂಲಕ ಜಿಲ್ಲೆಯಲ್ಲಿರುವ ಜಾನುವಾರುಗಳನ್ನು ಚರ್ವಗಂಟು ರೋಗದಿಂದ ರಕ್ಷಿಸಬೇಕು. ಈ ಬಗ್ಗೆ ಹೈನುಗಾರರು ಲಸಿಕೆಗಾಗಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗಳನ್ನು ಅಥವಾ ಹಾಲು ಉತ್ಪಾದಕರ ಸಹಕಾರಿ ಸಂಘಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ಮತ್ತು ಎನ್.ಸಿ.ಸಿ ಕೆಡೆಟ್ರವರ ಸಹಭಾಗಿತ್ವದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಓಂ ಯೋಗ ವಿದ್ಯಾಮಂದಿರದ ಯೋಗ ಗುರುಗಳಾದ ಬಿ.ಅಣ್ಣಪ್ಪ ಶೆಟ್ಟಿಗಾರ   ಮುಖ್ಯ ಅತಿಥಿಗಳಾಗಿ ಆಗಮಿಸಿ, ದೀಪಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು ಹಾಗೂ  ವಿದ್ಯಾರ್ಥಿ ಜೀವನದಲ್ಲಿ ಯೋಗವನ್ನು ಅಳವಡಿಸುವಂತೆ ಮಕ್ಕಳಿಗೆ ತಿಳಿಸಿದರು. ಪತಂಜಲಿ ಯೋಗ ವಿದ್ಯಾಕೇಂದ್ರದ ಯೋಗ ಗುರುಗಳಾದ ರಘುವೀರ ನಗರಕರ್ ನ್ನೋರ್ವ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಸಂಸ್ಥೆಯ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕರಾದ ಸುಬ್ರಮಣ್ಯ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ  ಕೃಷ್ಣ ಅಡಿಗರವರು ಸರ್ವರನ್ನು ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕರಾದ ವಸಂತರವರು ವಂದನಾರ್ಪಣೆಗೈದರು. ದೈಹಿಕ ಶಿಕ್ಷಣ ಶಿಕ್ಷಕರಾದ ನಾಗೇಂದ್ರ ಕಾರ್ಯಕ್ರಮವನ್ನು ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ಎನ್.ಸಿ.ಸಿ ಸ್ಕೌಟ್ಸ್ ಮತ್ತು ಗೈಡ್ಸ್ ರವರಿಂದ ಯೋಗಾಭ್ಯಾಸ ನಡೆಯಿತು. ಸಂಸ್ಥೆಯ ಎಲ್ಲಾ ದೈಹಿಕ ಶಿಕ್ಷಣ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗಿಗಳಾಗಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿರಿಯ ನಾಗರಿಕರು ಸಾಮಾಜಿಕ, ದೈಹಿಕ, ಸಾಂಸಾರಿಕ, ಮಾನಸಿಕವಾಗಿ, ದೌರ್ಜನ್ಯ, ಕಿರುಕುಳ, ಹಿಂಸೆ, ಶೋಷಣೆಗೆ ಒಳಗಾಗಿದ್ದಲ್ಲಿ ಅಥವಾ ಕೌಟುಂಬಿಕ ಸಮಸ್ಯೆ, ಮಕ್ಕಳ ಬೇಜವಬ್ದಾರಿತನ, ದುರ್ಬಲತೆ, ಅಸಹಾಯಕತೆ, ಅಭದ್ರತೆ ಮುಂತಾದ ರಕ್ಷಣೆಯಿಲ್ಲದ ಸಂದಿಗ್ಧ ಪರಿಸ್ಥಿತಿಗೆ ಒಳಗಾದ ಸಂದರ್ಭದಲ್ಲಿ ಹಿರಿಯ ನಾಗರಿಕರ ಉಚಿತ ಸಹಾಯವಾಣಿ (ಟೋಲ್ ಫ್ರೀ ನಂಬರ್) 1090 ಅಥವಾ ದೂ.ಸಂಖ್ಯೆ: 0820-2526394 ಅನ್ನು ಸಂಪರ್ಕಿಸಿ ದೂರು ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ, ಬನ್ನಂಜೆ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕೆ ಸನ್ನಿಧಿಗೆ ಸಂಸದ ಬಿ.ವೈ. ರಾಘವೇಂದ್ರ ಅವರು ದಂಪತಿ ಸಮೇತರಾಗಿ, ಶಾಸಕ ಗುರುರಾಜ್ ಗಂಟಿಹೊಳೆ ಕುಟುಂಬದೊಂದಿಗೆ ಹಾಗೂ ಸ್ಥಳೀಯ ಕಾರ್ಯಕರ್ತರೊಂದಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥನೆ ಸಲ್ಲಿಸಿದರು. ಕಳೆದ ವರ್ಷ ಎದುರಾದ ಭೀಕರ ಬರಗಾಲದ ಕಹಿ ನೆನಪು ದೂರವಾಗಿ ಉತ್ತಮ ವರ್ಷಧಾರೆಯ ನಿರೀಕ್ಷೆಯಲ್ಲಿ ರೈತಾಪಿ ವರ್ಗವು ಈಗಾಗಲೇ ಬಿತ್ತನೆಗೆ ಎಲ್ಲಾ ರೀತಿಯ ತಯಾರಿ ಮಾಡಿಕೊಂಡಿದ್ದು ಉತ್ತಮ ಮಳೆಯಾಗುವ ಮೂಲಕ ರೈತರ ಮೊಗದಲ್ಲಿ ಮಂದಹಾಸ ಮೂಡಿ ನಾಡು ಸುಭೀಕ್ಷವಾಗಿರಲಿ ಎಂದು ಪ್ರಾರ್ಥಿಸಲಾಯಿತು. ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ದೇಶದ ಚುಕ್ಕಾಣಿ ಹಿಡಿದಿದ್ದು ಉತ್ತಮ ಆಯುಷ್ಯ ಕೊಟ್ಟು ರಾಷ್ಟ್ರದ ಅಭಿವೃದ್ಧಿಗೆ ಮತ್ತಷ್ಟು ವೇಗ ಕೊಡುವ ಶಕ್ತಿ ನೀಡುವಂತೆ ಹಾಗೂ ನನ್ನ ಲೋಕಸಭಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಇನ್ನಷ್ಟು ಬಲ ಕೊಡುವಂತೆ ವಿಶೇಷವಾಗಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಶ್ರೀ ದೀಪಕ್ ಕುಮಾರ್ ಶೆಟ್ಟಿ ಅವರು, ಶ್ರೀ ವೆಂಕಟೇಶ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಳೆಗಾಲದಲ್ಲಿ ಸಾಮಾನ್ಯವಾಗಿ ಡೆಂಗ್ಯೂ, ಮಲೇರಿಯಾದಂತಹ ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿರುವುದರಿಂದ ಸುತ್ತಮುತ್ತ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು. ಗೂಡಂಗಡಿ ಮಾಲೀಕರು ತಮ್ಮಲ್ಲಿರುವ ಎಳನೀರು ಬೊಂಡವನ್ನು ಅದೇ ದಿನ ವಿಲೇವಾರಿ ಮಾಡಬೇಕು. ಚರಂಡಿಗೆ ಕಸ-ಕಡ್ಡಿ, ಪ್ಲಾಸ್ಟಿಕ್ ತ್ಯಾಜ್ಯ ಹಾಗೂ ಇತರೆ ಯಾವುದೇ ರೀತಿಯ ತ್ಯಾಜ್ಯಗಳನ್ನು ಎಸೆಯಬಾರದು. ಮನೆಯ ಸುತ್ತಮುತ್ತ ಸ್ವಚ್ಛವಾಗಿಟ್ಟುಕೊಳ್ಳಬೇಕು. ಹೂ ಕುಂಡಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ನೀರು ಶೇಖರಣೆ ಮಾಡುವಂತಹ ಪಾತ್ರೆಗಳಲ್ಲಿ ನಿತ್ಯ ನೀರು ಬದಲಾವಣೆ ಮಾಡಬೇಕು ಹಾಗೂ ಸುತ್ತಮುತ್ತ ನಿಂತ ನೀರು ಕಂಡು ಬಂದರೆ ಅವುಗಳನ್ನು ಸರಾಗವಾಗಿ ಹರಿಯಲು ಅನುವು ಮಾಡಿಕೊಡಬೇಕು. ಮಳೆಗಾಲದಲ್ಲಿ ನಿಂತ ನೀರಿನಿಂದ ಸೊಳ್ಳೆಗಳು ಉತ್ಪತ್ತಿಯಾಗುವ ಜೊತೆಗೆ ಅನೇಕ ರೀತಿಯ ಕಾಯಿಲೆಗಳು ದೇಹವನ್ನು ಬಾಧಿಸುವ ಕಾರಣ ಮುಂಜಾಗೃತಾ ಕ್ರಮವಾಗಿ ಆರೋಗ್ಯ ಹಿತದೃಷ್ಟಿಯಿಂದ ಗೃಹೋಪಯೋಗಕ್ಕೆಂದು ನೀರನ್ನು ಶೇಖರಿಸಿಡುವ ಸಿಮೆಂಟ್ ತೊಟ್ಟಿ, ಕಲ್ಲು ಚಪ್ಪಡಿಯಿಂದ ನಿರ್ಮಿಸಿದ ತೊಟ್ಟಿಗಳು, ಡ್ರಂ ಗಳು, ಬ್ಯಾರಲ್, ಮಡಕೆ ಮುಂತಾದ ಮೂಲಗಳಲ್ಲಿ ನೀರಿನ ಶೇಖರಣೆ ವೇಳೆ ಮುಂಜಾಗ್ರತೆ ವಹಿಸಬೇಕು. ನೀರು ಸಂಗ್ರಹವಾಗುವ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಉಡುಪಿ ಆಯುಷ್ ಇಲಾಖೆ, ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕುಂದಾಪುರ ತಾಲೂಕು ಆರೋಗ್ಯ ಅಧಿಕಾರಿಗಳ ಕಛೇರಿ, ತಾಲೂಕು ಸರಕಾರಿ ಆಯುಷ್ ಆಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ, 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ “ಯೋಗೋತ್ಸವ – ಪೂರ್ವಿಭಾವಿ ಯೋಗ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕುಂದಾಪುರ ತಾಲೂಕು ಆರೋಗ್ಯ ಅಧಿಕಾರಿ ಡಾ. ಪ್ರೇಮಾನಂದ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿ, ಮಹಿಳೆಯರ ಆರೋಗ್ಯದಲ್ಲಿ ಯೋಗದ ಮಹತ್ವದ ಬಗ್ಗೆ ತಿಳಿಸಿ, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕುಂದಾಪುರ ಲಯನ್ಸ್ ಕ್ಲಬ್  ಅಮೃತಧಾರದ ಅಧ್ಯಕ್ಷರಾದ ಆಶಾ ಶಿವರಾಂ ಶೆಟ್ಟಿ, ಆಯುರ್ವೇದ ಆಹಾರ ಪದ್ಧತಿಯ ಬಗ್ಗೆ ಮಾಹಿತಿಯನ್ನು ಒಳಗೊಂಡ ಕರಪತ್ರಗಳನ್ನು ಬಿಡುಗಡೆಗೊಳಿಸಿ ಯೋಗದ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ದೀಪರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಯಾದ ತಾಲೂಕು ಸರಕಾರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಅತಿಥ್ಯದಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ರಾಜ್ಯ ಮಟ್ಟದ) ಕಬಡ್ಡಿ ಪಂದ್ಯಾಟದ ಪುರುಷರ ವಿಭಾಗದಲ್ಲಿ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ಮಹಿಳಾ ವಿಭಾಗದಲ್ಲಿ ಉಜಿರೆಯ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜುಗಳು ಚಾಂಪಿಯನ್ ಆಗಿವೆ.   ಆಳ್ವಾಸ್ ಕಾಲೇಜಿನ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ (ಕೃಷಿ ಸಿರಿ) ಅಂಕಣದಲ್ಲಿ ನಡೆದ ಪುರುಷರ ಫೈನಲ್‌ನಲ್ಲಿ ಮಂಗಳೂರಿನ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಆಂಡ್ ರಿಸರ್ಚ್ ಸೆಂಟರ್ ಮಣಿಸಿದ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಪ್ರಶಸ್ತಿ ಎತ್ತಿ ಹಿಡಿಯಿತು. ಮಹಿಳಾ ವಿಭಾಗದಲ್ಲಿ ಬಾಗಲಕೋಟೆಯ ಸೃಜನ ಶ್ರೀ ಇನ್‌ಸ್ಟಿಟ್ಯೂಟ್ ಆಫ್ ನಸಿಂಗ್ ಸೈನ್ಸಸ್ ಕಾಲೇಜನ್ನು ಮಣಿಸಿದ ಉಜಿರೆಯ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜು ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಆತಿಥೇಯ ಆಳ್ವಾಸ್ ಪ್ರಕೃತಿ ಚಿಕಿತ್ಸಾ ಮತ್ತು…

Read More