Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಬಾಲ ಕಾರ್ಮಿಕ ಪದ್ಧತಿ ಒಂದು ಅನಿಷ್ಠ ಪದ್ಧತಿಯಾಗಿದ್ದು, ಬಾಲ ಕಾರ್ಮಿಕ ಪದ್ಧತಿಯ ದುಷ್ಪರಿಣಾಮಗಳ ಬಗ್ಗೆ ನಿರಂತರವಾಗಿ ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಉಡುಪಿ ಜಿಲ್ಲೆಯನ್ನು ಬಾಲ ಕಾರ್ಮಿಕ ಮುಕ್ತ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ ಪುರುಷೋತ್ತಮ ಹೇಳಿದರು. ಅವರು ಇಂದು ನಗರದ ಮಿಷನ್ ಕಂಪೌಂಡ್ ಬಳಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮಕ್ಕಳ ರಕ್ಷಣೆಗಾಗಿ ಸಂವಿಧಾನವು ಅನೇಕ ಕಾನೂನು ಹಾಗೂ ಕಾಯಿದೆಗಳನ್ನು ಜಾರಿಗೆ ತಂದಿದ್ದು, ಕಾಯಿದೆಗಳಲ್ಲಿ ತಿದ್ದುಪಡಿಗಳನ್ನು ಸಹ ಮಾಡಲಾಗಿದೆ. ಸರಕಾರವು ಮಕ್ಕಳ ಶ್ರೇಯೋಭಿವೃದ್ಧಿಗೆ ಅನೇಕ ಸೌಲಭ್ಯಗಳನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಾಣಿಜ್ಯ ವಿಭಾಗದ ವಿಧ್ಯಾರ್ಥಿಗಳಿಗೆ ಕಾಲೇಜಿನ ಆರಂಭದ ದಿನದಿಂದಲು ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡುತ್ತಾ ಬಂದಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನವನ್ನು ಹೆಚ್ಚಿಸುವ ಸಲುವಾಗಿ ಕಾರ್ಕಳದ ಪವರ್ ಪಾಯಿಂಟ್ ಬ್ಯಾಗ್ ಇಂಡಸ್ಟ್ರಿ ಹಾಗೂ ಮೂಡಬಿದ್ರೆಯ ಪವರ್ ಪಾಯಿಂಟ್ ಬ್ಯಾಟರಿ ಇಂಡಸ್ಟ್ರಿಗೆ ಭೇಟಿ ನೀಡಿ, ಇಲ್ಲಿ ವಿದ್ಯಾರ್ಥಿಗಳು ಉತ್ಪಾದನಾ ಪ್ರಕ್ರಿಯೆ , ಹೂಡಿಕೆ ಹಾಗೂ ವಿತರಣೆಯ ಬಗ್ಗೆ ಸಮಗ್ರವಾದ ಮಾಹಿತಿಯನ್ನು ಪಡೆದರು. ಅಲ್ಲದೆ ಮಕ್ಕಳಲ್ಲಿ ನಮ್ಮ ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿ ಯನ್ನು ಉಳಿಸುವ ಹಾಗೂ ಬೆಳೆಸುವ ನಿಟ್ಟಿನಲ್ಲಿ ಕಾರ್ಕಳದ ಕೋಟಿ ಚೆನ್ನಯ ಥೀಮ್ ಪಾರ್ಕ್ ಗೆ ಭೇಟಿ ನೀಡಲಾಯಿತು. ಕೈಗಾರಿಕಾ ಭೇಟಿ, ರಾಷ್ಟ್ರೀಯ ಸೇವಾ ಯೋಜನೆ, ವ್ಯಕ್ತಿತ್ವ ವಿಕಸನ ಕಾರ್ಯಕ್ರಮ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವುದು ಈ ಸಂಸ್ಥೆಯ ವಿಶೇಷ. ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಉಮೇಶ್, ಚಂದ್ರಕಾಂತ್, ಮಹೇಶ್ ಶೆಣೈ, ಸುಧಿಕ್ಷಾ ಪೈ, ಕೃಪಾ, ಜ್ಯೋತಿ ಮತ್ತಿತರರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ,ಜೂ.12: ಹೆದ್ದಾರಿ ರಸ್ತೆ ಕಾಮಗಾರಿಗಳನ್ನು ಆಧುನಿಕ ತಂತ್ರಜ್ಞಾನ ಯಂತ್ರಗಳ ಬಳಕೆ ಹಾಗೂ ಹೆಚ್ಚು ಕಾರ್ಮಿಕರುಗಳನ್ನು ನಿಯೋಜಿಸುವುದರೊಂದಿಗೆ ಆದಷ್ಟು ತ್ವರಿತವಾಗಿ ಕಾಮಗಾರಿಗಳನ್ನು ಆದ್ಯತೆಯ ಮೆರೆಗೆ ಪೂರ್ಣಗೊಳಿಸಲು ಮುಂದಾಗಬೇಕೆಂದು ಅಭಿಯಂತರುಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಕುರಿತ ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಸಂತೆಕಟ್ಟೆ ಅಂಡರ್‌ಪಾಸ್, ಇಂದ್ರಾಳಿ ಸೇತುವೆ, ಕರಾವಳಿ ಜಂಕ್ಷನ್‌ನಿಂದ ಮಲ್ಪೆ ರಸ್ತೆ, ಪರ್ಕಳದಿಂದ ಆಗುಂಬೆವರೆಗಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳು ನಡೆಯುತ್ತಿವೆ. ಕಾಮಗಾರಿಗಳು ಮಂದಗತಿಯಲ್ಲಿದ್ದು ಇದರಿಂದ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟಾಗುತ್ತಿವೆ ಎಂಬ ದೂರುಗಳು ಪ್ರತಿನಿತ್ಯ ಕೇಳಿಬರುತ್ತಿದೆ. ಕಾಮಗಾರಿಯ ವೇಗವನ್ನು ಹೆಚ್ಚಿಸುವುದರೊಂದಿಗೆ ಅಲ್ಪ ಸಮಯದಲ್ಲಿ ಪೂರ್ಣಗೊಳಿಸಲು ಅಧಿಕಾರಿ ಹಾಗೂ ಗುತ್ತಿಗೆದಾರರು ಕಾರ್ಯಪ್ರವೃತರಾಗಬೇಕು ಎಂದರು. ಕಲ್ಸಂಕ ಬಳಿ ರಸ್ತೆ ಕಾಮಗಾರಿಯು ದಿನವೊಂದಕ್ಕೆ 10 ಮೀಟರ್ ಸಹ ಆಗುತ್ತಿಲ್ಲ. ಈ ರೀತಿ ಕಾಮಗಾರಿಯನ್ನು ಮಾಡಿದರೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕಡಲ ಕೊರೆತ ತಡೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ತಲಾ 5 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು. ಉಡುಪಿ ಜಿಲ್ಲಾ ಪಂಚಾಯತ್ ಡಾ.ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಬುಧವಾರ ನಡೆದ ಪ್ರಗತಿ ಪರಿಶೀಲನಾ ಸಭೆ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಕಡಲ ಕೊರೆತದ ಶಾಶ್ವತ ಪರಿಹಾರಕ್ಕಾಗಿ ಡಿಪಿಆರ್ ಸಿದ್ಧಪಡಿಸಲಾಗಿದ್ದು, ಇದಕ್ಕೆ ರಾಜ್ಯ ಸರ್ಕಾರದಿಂದ ಮಾತ್ರ ಪರಿಹಾರ ನೀಡಲು ಸಾಧ್ಯವಿಲ್ಲ.ಕೇಂದ್ರ ಮತ್ತು ರಾಜ್ಯ ಸರ್ಕಾರ ಸಮನ್ವಯತೆಯೊಂದಿಗೆ ಕೆಲಸ ಮಾಡಬೇಕು ಎಂದರು. ನಟ ದರ್ಶನ್ ಪ್ರಕರಣದಲ್ಲಿ ಕಾನೂನು ವ್ಯಾಪ್ತಿಯಲ್ಲಿ ಕ್ರಮ: ದೇಶದ ಕಾನೂನು ಎಲ್ಲರಿಗೂ ಒಂದೇ, ಕಾನೂನಿನ ಮುಂದೆ ಎಲ್ಲರೂ ಸಮಾನರು, ರಾಷ್ಟ್ರಪತಿಯಾಗಲಿ, ಸ್ಟಾರ್ ಆಗಲಿ, ಕೂಲಿ ಕಾರ್ಮಿಕನೇ ಆಗಲಿ. ಸರಕಾರ ಯಾರ ಒತ್ತಡಕ್ಕೂ ಮಣಿಯುವುದಿಲ್ಲ. ಕಾನೂನಿನ ಎಲ್ಲರೂ ಒಂದೇ. ಯಾರನ್ನು ರಕ್ಷಿಸುವ ಪ್ರಶ್ನೆ ಇಲ್ಲ. ರಾಜ್ಯ ಸರ್ಕಾರ ಕೂಡ ಯಾರ ಪರ ನಿಲ್ಲುವುದಿಲ್ಲ ಎಂದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಭಂಡಾರ್‌ರ್ಕಾಸ್ ಪದವಿ ಪೂರ್ವ ಕಾಲೇಜಿನಲ್ಲಿ “ಇಕೋಕ್ಲಬ್ ಉದ್ಘಾಟನೆ ಮತ್ತು ವಿಶ್ವಪರಿಸರ ದಿನಾಚರಣೆ” ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿದ್ದ ಕುಂದಾಪುರದ ಸರಕಾರಿ ಜ್ಯೂನಿಯರ್ ಕಾಲೇಜಿನ ಉಪಪ್ರಾಂಶುಪಾಲರಾದ ಕಿರಣ್ ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಪರಿಸರ ದಿನಾಚರಣೆ ಒಂದು ದಿನಕ್ಕೆ ಮಾತ್ರ ಸೀಮಿತವಾಗಿರದೇ ವಿದ್ಯಾರ್ಥಿಗಳೆಲ್ಲರೂ ಜೀವನ ಪರ್ಯಂತ ಪರಿಸರ ಸಂರಕ್ಷಣೆಯ ಬಗೆಗೆ ಒಲವನ್ನು ತೋರಿಸಬೇಕು. ಪ್ಲಾಸ್ಟಿಕ್ ಮುಕ್ತ ಸ್ವಚ್ಛ ಪರಿಸರದಿಂದ ಕೂಡಿದ ಸಮಾಜವನ್ನು ನಿರ್ಮಾಣ ಮಾಡಬೇಕು. ನೀರಿನ ದುರ್ಬಳಕೆಯನ್ನು ತಡೆಯಬೇಕು. ಹಾಗಿದ್ದರೆ ಮಾತ್ರ ಸಧೃಡ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು. ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ|. ಶುಭಕರಾಚಾರಿ ಮಾತನಾಡಿ ನಮ್ಮ ಸುತ್ತಲಿನ ಸಸ್ಯಶ್ಯಾಮಲೇಯನ್ನು ಸಂರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಹಾಗಿದ್ದರೆ ಮಾತ್ರ ನಾವು ಶುದ್ಧವಾದ ಗಾಳಿಯನ್ನು ಉಸಿರಾಡಬಹುದು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಮ್. ಗೊಂಡ ವಹಿಸಿದ್ದರು. ಜೀವಶಾಸ್ತ್ರ ಉಪನ್ಯಾಸಕಿ ಡಾ.ಸರೋಜ ಎಮ್ ಕಾರ್ಯಕ್ರಮ ನಿರ್ವಹಿಸಿ ಸ್ವಾಗತಿಸಿದರು. ರಸಾಯನಶಾಸ್ತ್ರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮುಂಗಾರು ಮಳೆಯಲ್ಲಿ ನೆರೆ ಸೇರಿದಂತೆ ಮತ್ತಿತರ ಅವಘಡಗಳಿಂದ ಜನ ಜಾನುವಾರುಗಳಿಗೆ ಸಾವು ನೋವುಗಳು ಆಗದಂತೆ ಹಾಗೂ ಆಸ್ತಿ ಹಾನಿ‌ ಆಗದಂತೆ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದರು. ಉಡುಪಿ ಜಿಲ್ಲಾ ಪಂಚಾಯತ್ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವರು, ಈ ಬಾರಿ ಹವಾಮಾನ ಇಲಾಖೆ, ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದ್ದು, ಸಿಡಿಲು ಬಡಿತದಿಂದ ಈಗಾಗಲೇ ಮೂರು ಜನರು ಸಾವನ್ನಪ್ಪಿದ್ದಾರೆ. ಮುಂದಿನ ದಿನಗಳಲ್ಲಿ ಮಳೆಯಿಂದ ಹಾನಿಗೊಳಗಾದವರಿಗೆ ಬೇಗ ಪರಿಹಾರ ಒದಗಿಸಬೇಕು ಎಂದು ಆದೇಶಿಸಿದರು. ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಮಳೆ ನೀರು ಸರಾಗವಾಗಿ ಹರಿಯುವಂತೆ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಸ್ಥಳೀಯ ಸಂಸ್ಥೆಗಳು ಕೈಗೊಂಡಿರುವ ಕಾಮಗಾರಿಗಳ ಪರಿಶೀಲನೆಗೆ ಸಿಇಒಗೆ ಸೂಚನೆ ನೀಡಿದ ಸಚಿವರು, ಉಡುಪಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ನಿರ್ವಹಣಾ ವಿಭಾಗವು ಪ್ರಥಮ ಬಿ.ಬಿ.ಎ. ವಿದ್ಯಾರ್ಥಿಗಳೊಂದಿಗೆ ಬ್ರಹ್ಮಾವರದ ಉಪ್ಪೂರಿನ ಕೆ.ಎಮ್.ಎಫ್. ನಂದಿನಿ ಕೈಗಾರಿಕಾ ಘಟಕಕ್ಕೆ ಭೇಟಿ ನೀಡಲಾಯಿತು. ಕಾಲೇಜಿನ ವಿದ್ಯಾರ್ಥಿಗಳಿಗೆ ಅಭಿವೃದ್ಧಿ ಹೊಂದುತ್ತಿರುವ ತಂತ್ರಜ್ಞಾನಗಳ ಬಗ್ಗೆ ಮಾಹಿತಿ ಮತ್ತು ತರಬೇತಿಗಳನ್ನು ನೀಡಲಾಯಿತು. ಕಾಲೇಜಿನ ವ್ಯವಹಾರ ಆಡಳಿತ ನಿರ್ವಹಣಾ ವಿಭಾಗದ ಪ್ರಾಧ್ಯಾಪಕರಾದ ರಜತ್ ಬಂಗೇರ, ಹಿಂದಿ ವಿಭಾಗದ ಮುಖ್ಯಸ್ಥೆ ಡಾ| ದೀಪಾ ಹಾಗೂ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವ್ಯವಹಾರ ಆಡಳಿತ ನಿರ್ವಹಣಾ ವಿಭಾಗದ ವತಿಯಿಂದ ವಿಸ್ತರಣಾ ಚಟುವಟಿಕೆಯ ಹಿನ್ನೆಲೆಯಲ್ಲಿ ಬ್ರಹ್ಮಾವರದ ಅಪ್ಪ-ಅಮ್ಮ ಅನಾಥಾಲಯಕ್ಕೆ ಭೇಟಿ ನೀಡಲಾಯಿತು. ವ್ಯವಹಾರ ಆಡಳಿತ ನಿರ್ವಹಣಾ ವಿಭಾಗದ ವಿದ್ಯಾರ್ಥಿಗಳು ದಿನಸಿ ಮತ್ತು ದೈನಂದಿನ ಅಗತ್ಯಗಳ ಕೆಲವು ವಸ್ತುಗಳನ್ನು ಅನಾಥಾಲಯಕ್ಕೆ ಕೊಡುಗೆಯಾಗಿ ನೀಡಿದರು. ಹಾಗೆಯೇ ಪ್ರಥಮ ಬಿ.ಬಿ.ಎ. ವಿದ್ಯಾರ್ಥಿಗಳು ಸಾಂಸ್ಕೃತಿಕ ಹಾಗೂ ಮನೋರಂಜನೆ ಕಾರ್ಯಕ್ರಮವನ್ನು ಪ್ರದರ್ಶಿಸಿದರು. ಈ ಸಂಧರ್ಭದಲ್ಲಿ ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಪ್ರಾಧ್ಯಾಪಕರಾದ ರಜತ್ ಬಂಗೇರ, ಹಿಂದಿ ವಿಭಾಗದ ಮುಖ್ಯಸ್ಥೆ ಡಾ| ದೀಪಾ ಹಾಗೂ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More

ಕುಂದಾಪುರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ನವೀಕೃತ ಪ್ರಧಾನ ಕಛೇರಿ ಮತ್ತು ಮೇಲಂತಸ್ತಿನ ಕಟ್ಟಡದ ಉದ್ಘಾಟನಾ ಸಮಾರಂಭವು ನಾವುಂದದಲ್ಲಿ ಜೂನ್ 15ರಂದು ಬೆಳ್ಳಿಗೆ 10.30ಕ್ಕೆ ನಡೆಯಲಿದೆ. ಕರ್ನಾಟಕ ರಾಜ್ಯಸಹಕಾರ ಮಾರಾಟ ಮಹಾಮಂಡಳಿ ಅಧ್ಯಕ್ಷರಾದ ಹಾಗೂ ಮಂಗಳೂರು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ನವೀಕೃತ ಪ್ರಧಾನ ಕಛೇರಿಯನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೈಂದೂರು ವಿಧಾನಸಭಾ ಕ್ಷೇತ್ರ ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು ವಹಿಸಿಕೊಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೈಂದೂರು ವಿಧಾನಸಭಾ ಕ್ಷೇತ್ರ ಮಾಜಿ ಶಾಸಕರಾದ ಗೋಪಾಲ ಪೂಜಾರಿ ಮತ್ತು ಬೈಂದೂರು ವಿಧಾನಸಭಾ ಕ್ಷೇತ್ರ ಮಾಜಿ ಶಾಸಕರಾದ ಬಿ.ಎಂ ಸುಕುಮಾರ ಶೆಟ್ಟಿ, ಉಡುಪಿಯ ಸಹಕಾರ ಸಂಘಗಳ ಉಪನಿಬಂಧಕರಾದ ಲಾವಣ್ಯ ಕೆ.ಆರ್, ಕುಂದಾಪುರ ಉಪವಿಭಾಗದ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್.ವಿ, ಎಂ ಮಹೇಶ ಹೆಗ್ಡೆ, ಮಲ್ಯಾಡಿ ಶಿವರಾಮ ಶೆಟ್ಟಿ, ಇಂದ್ರಾಳಿ ಜಯಕರ ಶೆಟ್ಟಿ, ಎಚ್.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಅವಧೂತ ವಿನಯ್ ಗುರೂಜಿ ಅವರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

Read More