ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬಸ್ರೂರು ಶ್ರೀ ಕಾಶೀ ಮಠಕ್ಕೆ ಗೋವಾ ರಾಜ್ಯದ ಮುಖ್ಯಮಂತ್ರಿ ಡಾ. ಪ್ರಮೋದ್ ಪಾಂಡುರಂಗರಾವ್ ಸಾವಂತ್ ಅವರು ಗುರುವಾರ ಸಂಜೆ ಭೇಟಿ ನೀಡಿದರು. ದೇವರ ಹಾಗೂ ದೇವಳದ ಪ್ರಾಂಗಣದಲ್ಲಿರುವ ಉಭಯ ಗುರುಗಳ ವೃಂದಾವನಗಳ ದರ್ಶನ ಪಡೆದ ಸಿಎಂ ಪ್ರಮೋದ ಸಾವಂತ್, ಬಾಲಕಾಶ್ರಮದ ಮಕ್ಕಳೊಂದಿಗೆ ಕೆಲಕಾಲ ಕುಶಲೋಪರಿ ನಡೆಸಿದರು. ಮಠಕ್ಕೆ ಭೇಟಿ ನೀಡಿದ ಅವರನ್ನು ಮಠದ ಆಡಳಿತ ಮಂಡಳಿ ಸದಸ್ಯರು ಶಾಲು ಹೊದಿಸಿ ದೇವರ ಪ್ರಸಾದ ನೀಡಿ ಗೌರವಿಸಿದರು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ರಂಗನಾಥ ಪಡಿಯಾರ್, ಬಿ.ಗಣೇಶ ಕಾಮತ್, ರಾಮಚಂದ್ರ ಪಡಿಯಾರ್, ದಿನಕರ ಶೆಣೈ, ಪದ್ಮನಾಭ ಶೆಣೈ ಕುಂದಾಪುರ, ದೇವಳದ ಅರ್ಚಕ ಸುರೇಂದ್ರ ಭಟ್, ಸಮಾಜ ಭಾಂದವರು, ಮತ್ತಿತರರು ಉಪಸ್ಥಿತರಿದ್ದರು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾನಿಲಯ ಮೈಸೂರು ನಡೆಸಿದ ಭರತನಾಟ್ಯ ಜೂನಿಯರ್‌ಗ್ರೇಡ್ ಪರೀಕ್ಷೆಯಲ್ಲಿ ಮೇಘನಾ ಪ್ರಭು ಕೊಕ್ಕರ್ಣೆ ಅವರು 93.75% ಅಂಕದೊಂದಿಗೆ ಉತ್ತೀರ್ಣರಾಗಿದ್ದಾರೆ. ಈಕೆ ಉಡುಪಿಯ ರಾಧಾಕೃಷ್ಣ ನೃತ್ಯನಿಕೇತನದ ಗುರು ಹಾಗೂ ನೃತ್ಯ ವಿದುಷಿ ವೀಣಾಮುರಳೀಧರ ಸಾಮುಗ ಇವರ ಶಿಷ್ಯೆ. ಅವರು ಕೊಕ್ಕರ್ಣೆ ದೀಪಕ್ ಪ್ರಭು ಮತ್ತು ಗಾಯತ್ರಿ ಡಿ .ಪ್ರಭು ದಂಪತಿಗಳ ಮಗಳಾಗಿದ್ದು ಬ್ರಹ್ಮಾವರ ಲಿಟ್ಲ್ ರಾಕ್ ಇಂಡಿಯನ್ ಸ್ಕೂಲ್‌ನಲ್ಲಿ ಎಂಟನೆಯ ತರಗತಿಯಲ್ಲಿ ಶಿಕ್ಷಣಪಡೆಯುತ್ತಿದ್ದು, ಯಕ್ಷಗಾನ, ಭಜನೆಗಳಲ್ಲಿ ಹಾರ್ಮೋನಿಯಂ, ತಬಲಗಳನ್ನು ನುಡಿಸುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ರಹ್ಮಾವರ ತಾಲ್ಲೂಕಿನ ವಂಡಾರು ಗ್ರಾಮದ ಬೋರ್ಡ್ ಗಲ್ಲು ಎಂಬಲ್ಲಿ ವನ್ಯಪ್ರಾಣಿಗಳ ಹತ್ಯೆಗೈಯ್ಯಲು ವಂಡಾರು ಬ್ಲಾಕ್ ಅರಣ್ಯ ಪ್ರದೇಶದೊಳಗೆ ರಾತ್ರಿ ವೇಳೆ ಬಂದ ಭಟ್ಕಳ – ಶಿರೂರು ಮೂಲದ ಮೂವರು ವನ್ಯಜೀವಿ ಹಂತಕ ಆರೋಪಿಗಳನ್ನು ಶಂಕರನಾರಾಯಣ ವಲಯ ಅರಣ್ಯ ಅಧಿಕಾರಿಗಳ ತಂಡ ಬಂಧಿಸಿದೆ. ಭಟ್ಕಳದ ಮೊಹಮ್ಮದ್ ಅಶ್ರಫ್ ಯಾನೆ ಮಾವಿಯಾ, ಶಿರೂರಿನವರಾದ ವಾಸೀಂ ಅಕ್ರಂ, ಆಲಿ ಬಾವು ಯಾಸಿನ್ ಬಂಧಿತರು. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಆರೋಪಿಗಳಿಂದ ಒಂದು ಬಂದೂಕು, 11 ಕಾಡತೂಸು, 4 ಚಾಕುಗಳು, 01 ಮಚ್ಚು, 01 ಟಾರ್ಚ್, 03 ಮೊಬೈಲುಗಳು ಹಾಗೂ ಸಂಚಾರಕ್ಕೆ ಬಳಸಿದ ಒಂದು ಆಟೋ ರಿಕ್ಷಾವನ್ನು ವಶ ಪಡೆಯಲಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ ಅರೋಪಿಗಳು ಶಂಕರನಾರಾಯಣ ಅರಣ್ಯ ವಲಯದ ವಂಡಾರಿನ ಬಳಿ ಕಾಡು ಪ್ರಾಣಿಯನ್ನು ಹತ್ಯೆಗೈದು, ಕಾಡು ಪ್ರದೇಶದಲ್ಲಿ ಕರುಳನ್ನು ಎಸೆದಿದ್ದರು. ಇದರ ಸ್ಯಾಂಪಲ್ ಭಾರತೀಯ ವೈಡ್ ಲೈಫ್ ಸಂಸ್ಥೆಯಲ್ಲಿ ಪರೀಕ್ಷೆ ನಡೆಸಲಾಗಿದ್ದು, ಇದು ಕಾಡುಕೋಣ ಎಂಬುದಾಗಿ ದೃಢಪಟ್ಟಿರುತ್ತದೆ. ವನ್ಯಪ್ರಾಣಿ ಹತ್ಯೆ ಮಾಡಲಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇವರ ವತಿಯಿಂದ ನಡೆಸುತ್ತಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳಲ್ಲಿ 6ನೇ ತರಗತಿಗೆ ಪ್ರವೇಶಾತಿ ಕಲ್ಪಿಸಲು ನಡೆಯಲಿರುವ ಪ್ರವೇಶ ಪರೀಕ್ಷೆಯು ಜಿಲ್ಲೆಯ ಒಟ್ಟು ಎರಡು ಪರೀಕ್ಷಾ ಕೇಂದ್ರಗಳಲ್ಲಿ ಫೆ. 15ರಂದು ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು, ನಡೆಯಬಹುದಾದದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ನಿಗಧಿಪಡಿಸಿದ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 ರ ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಆದೇಶಿಸಿರುತ್ತಾರೆ. ಈ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಗಳ 200 ಮೀ. ಸುತ್ತ ಸೈಬರ್ ಮತ್ತು ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ, ಯಾವುದೇ ಸಾರ್ವಜನಿಕರು 5 ಜನ ಅಥವಾ ಅದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉತ್ತರ ಪ್ರದೇಶದ ಪ್ರಯಾಗ್‌ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ವಿಶೇಷ ರೈಲು ಒದಗಿಸುವಂತೆ ಗೌರವಾನ್ವಿತ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರಲ್ಲಿ ಮನವಿ ಮಾಡಿದ್ದು, ಇದೀಗ ಅಧಿಕೃತ ಪ್ರಕಟಣೆಯನ್ನು ರೈಲ್ವೆ ಇಲಾಖೆ ಪ್ರಕಟಿಸಿದೆ. ಫೆ. 17ರಂದು ಮಧ್ಯಾಹ್ನ 12.30 ಗಂಟೆಗೆ ಉಡುಪಿಯಿಂದ ಹೊರಟು ಕುಂಭಮೇಳದತ್ತ ಪ್ರಯಾಣ ಬೆಳೆಸಲಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯ ಯಾತ್ರಾರ್ಥಿಗಳಿಗೆ ಇದು ಬಹಳಷ್ಟು ಉಪಕಾರಿಯಾಗಿದ್ದು ಅತ್ಯಂತ ಕಡಿಮೆ ಖರ್ಚಿನಲ್ಲಿ ಕುಂಭಮೇಳಕ್ಕೆ ಹೋಗಿ ಬರಬಹುದು. ಈ ರೈಲು ಸೇವೆಯನ್ನು ಹೆಚ್ಚಿನ ಭಕ್ತಾದಿಗಳು ಉಪಯೋಗಿಸುವಂತೆ ಕೇಳಿಕೊಳ್ಳುತ್ತೇನೆ. ನನ್ನ ಮನವಿಯನ್ನು ಪುರಸ್ಕರಿಸಿದ ಕೇಂದ್ರ ರೈಲ್ವೆ ಇಲಾಖೆಯ ಸಚಿವರಾದ ಅಶ್ವಿನಿ ವೈಷ್ಣವ್ ಅವರಿಗೆ ವಿಶೇಷ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಫೆ.14ರಂದು ಬೆಳಿಗ್ಗೆಯಿಂದ ಟಿಕೆಟ್ ಲಭ್ಯವಿದ್ದು ರೈಲ್ವೆ ಇಲಾಖೆಯ ವೆಬ್‌ಸೈಟ್ ಅಥವಾ ಆಯಾ ರೈಲು ನಿಲ್ದಾಣಗಳ ಟಿಕೆಟ್ ಕೌಂಟರ್‌ನಲ್ಲಿ ಟಿಕೆಟ್ ಪಡೆದುಕೊಳ್ಳಬಹುದಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟ್ರ ಮಟ್ಟದಲ್ಲಿ ನಡೆದ ಜೆಇಇ ಮೈನ್ಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಕಾಲೇಜು ಪ್ರಾರಂಭದ ಮೂರನೇ ವರ್ಷದಲ್ಲೇ ಅಪ್ರತಿಮ ಸಾಧನೆ ಮೆರೆದಿದ್ದಾರೆ. ಗ್ರಾಮೀಣ ಭಾಗದ ಪರಿಸರದಲ್ಲಿ ಆರಂಭಗೊಂಡಿರುವ ಶಿಕ್ಷಣ ಸಂಸ್ಥೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅತ್ಯುತ್ತಮ ತರಬೇತಿ ನೀಡುತ್ತಾ ಉತ್ತಮ ಶಿಕ್ಷಣ ನೀಡುತ್ತಿದೆ. ಜೆಇಇ ಮೈನ್ಸ್ 2025ರ ಮೊದಲನೇ ಪ್ರವೇಶ ಪರೀಕ್ಷೆಯಲ್ಲಿ ವಿದ್ಯಾರ್ಥಿ ಗಿರೀಶ್ ಪೈ 98.921 ಪರ್ಸಂಟೈಲ್, ನಿಶ್ಚಿತ್ 98.674 ಪರ್ಸಂಟೈಲ್, ಆಕಾಶ್ ಹೆಬ್ಬಾರ್ 98.078 ಪರ್ಸಂಟೈಲ್, ಧೀರಜ್ ಜಿ.ಡಿ.97.787ಪರ್ಸಂಟೈಲ್, ಚಿರಂತನ್ 95.866 ಪರ್ಸಂಟೈಲ್, ಶಶಾಂಕ್ 93.722 ಪರ್ಸಂಟೈಲ್, ಪ್ರಸಾದ್ 93.701 ಪರ್ಸಂಟೈಲ್, ಶ್ರದ್ಧಾ 93.155,ಪರ್ಸಂಟೈಲ್, ಲಿಖಿತ್ 90.789 ಪರ್ಸಂಟೈಲ್, ರಿಯಾನ್ 90.563 ಪರ್ಸಂಟೈಲ್, ಅನಿರುದ್ದ್ 90.329 ಪರ್ಸಂಟೈಲ್ ಪಡೆದು ಜೆಇಇ ಅಡ್ವನ್ಸ್ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು, ಬೋಧಕ,ಬೋಧಕೇತರ ವೃಂದವರು ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ.ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಎಂಟರ್‌ಪ್ರಿನೋರ್‌ಶಿಪ್ ವಿಷಯದ ಬಗ್ಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಗರಿಷ್ಟ 5 ಲಕ್ಷ ರೂ. ಗಳ ಸಹಾಯಧನ ನೀಡಲು ಉದ್ದೇಶಿಸಲಾಗಿರುತ್ತದೆ. ಸದರಿ ತರಬೇತಿ ಹಾಗೂ ಸಹಾಯಧನಕ್ಕಾಗಿ ಜಿಲ್ಲೆಯ ಪ.ಜಾತಿಗೆ ಸೇರಿದ 04 ಅಭ್ಯರ್ಥಿಗಳಿಗೆ ಹಾಗೂ ಪ.ಪಂಗಡಕ್ಕೆ ಸೇರಿದ 03 ಅಭ್ಯರ್ಥಿಗಳ ಗುರಿಯನ್ನು ನಿಗಧಿಪಡಿಸಲಾಗಿರುತ್ತದೆ. ಸದರಿ ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಜಾರಿಗೊಳಿಸಲು ಉದ್ದೇಶಿಸಲಾಗಿರುತ್ತದೆ. ಜಿಲ್ಲೆಯಲ್ಲಿ ಸದರಿ ತರಬೇತಿ ಪಡೆಯಲು ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರುವ 20 ರಿಂದ 45 ವರ್ಷದ ವಯೋಮಿತಿಯೊಳಗಿನ ಆಸಕ್ತಿ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಫೆಬ್ರವರಿ 25 ರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಡ್ಡರ್ಸೆಯ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಪ್ರಸಕ್ತ ಶೈಕ್ಷಣಿಕ ವರ್ಷದ ಕುಂದಾಪುರದ ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ವಿಶೇಷ ಶಿಬಿರದಲ್ಲಿ ಕೆಸರಲ್ಲೊಂದಿನ ಎನ್ನುವ ವಿಶೇಷ ಕಾರ್ಯಕ್ರಮ ಬನ್ನಾಡಿ ಕಂಬಳಗದ್ದೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿದ ಸಂಸ್ಥೆಯ ಅಧ್ಯಕ್ಷರಾದ ಬಿ.ಎಂ. ಸುಕುಮಾರ ಶೆಟ್ಟಿ ಅವರು ಮಾತನಾಡಿ, ವಡ್ಡರ್ಸೆ ನಾಡಿಗೆ ಅನೇಕ ಗಣ್ಯರನ್ನು ಕೊಟ್ಟ ಗ್ರಾಮ. ಐತಿಹಾಸಿಕ ಮಹತ್ವ ಹೊಂದಿದ ಬನ್ನಾಡಿ ಕಂಬಳ ಗದ್ದೆಯಲ್ಲಿ ನಮ್ಮ ಸಂಸ್ಥೆಯ ಎನ್.ಎಸ್.ಎಸ್. ಸ್ವಯಂಸೇವಕರು ವೈವಿಧ್ಯಮಯ ಗ್ರಾಮೀಣ ಕ್ರೀಡೆಗಳಲ್ಲಿ ಪಾಲ್ಗೊಳ್ಳುತ್ತಿರುವುದು ಖುಷಿಯ ಸಂಗತಿ. ಗ್ರಾಮದ ಚರಿತ್ರೆಯನ್ನು ಅವಲೋಕಿಸುವುದರ ಜೊತೆಗೆ, ವಿದ್ಯಾರ್ಥಿಗಳು ಊರವರ ಪ್ರೀತಿಗೆ ಪಾತ್ರರಾಗಿರುವುದು ಉಲ್ಲೇಖನೀಯ ಎಂದರು. ಕಂಬಳಗದ್ದೆಯಲ್ಲಿ ನಡೆಯುವ ವಿವಿಧ ಕ್ರೀಡೆಗಳಿಗೆ ಕಂಬಳದ ಕೋಣಗಳಿಗೆ ಆರತಿ ಎತ್ತುವ ಮೂಲಕ ಗೋವಾದ ಓಎನ್‌ಜಿಸಿಯ ನಿವೃತ್ತ ಚೀಫ್ ಮ್ಯಾನೇಜರ್ ಬನ್ನಾಡಿ ನಾರಾಯಣ ಆಚಾರ್ ಚಾಲನೆ ನೀಡಿದರು. ಎನ್.ಎಸ್.ಎಸ್. ಶಿಬಿರಾರ್ಥಿಗಳಿಗೆ ಕೆಸರುಗದ್ದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಸ್ತುತ ಸಾಲಿನ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗುತ್ತಿದ್ದು, ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳ ಪೋಷಕರಿಂದ ಶಬ್ದ ಮಾಲಿನ್ಯದ ಕುರಿತಾದ ದೂರುಗಳು ದೂರವಾಣಿ ಮೂಲಕ ಸ್ವೀಕೃತವಾಗುತ್ತಿರುತ್ತವೆ. ಜಿಲ್ಲೆಯ ಪ್ರಜ್ಞಾವಂತ ಜನತೆ ತಮ್ಮ ತಮ್ಮ ಕಾರ್ಯಕ್ರಮಗಳಲ್ಲಿ ಶಬ್ದ ಮಾಲಿನ್ಯ ಉಂಟಾಗದಂತೆ ಕ್ರಮವಹಿಸುವುದು ಅಗತ್ಯವಾಗಿದ್ದು, ಈ ಸಂಬಂಧ ಸರ್ಕಾರದ ಸುತ್ತೋಲೆ ಸಂ.ಎಫ್.ಇ.ಇ. 128.ಇ.ಪಿ.ಸಿ.2022 ದಿನಾಂಕ:10-05-2022ರಲ್ಲಿ ನೀಡಲಾದ ಮಾರ್ಗದರ್ಶನಗಳನ್ನು ಸರಿಯಾಗಿ ಕಾರ್ಯಗತಗೊಳಿಸಲು ಹಾಗೂ ಜಿಲ್ಲೆಯ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ನಿಗಧಿಪಡಿಸಿದ ಅವಧಿಯೊಳಗೆ ಸಮಾರಂಭವನ್ನು ಮುಕ್ತಾಯಗೊಳಿಸಬೇಕು. ಅಲ್ಲದೇ ವಿಪರೀತವಾಗಿ ಶಬ್ದ ಮಾಲಿನ್ಯ ಹಾಗೂ ಅಕ್ಕ ಪಕ್ಕದವರೆಗೆ ತೊಂದರೆ ಉಂಟಾಗದಂತೆ ಮತ್ತು ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಪರೀಕ್ಷೆ ತಯಾರಿಗೆ ಹಾಗೂ ವಿದ್ಯಾರ್ಥಿಗಳು ಏಕಾಗ್ರತೆಯಿಂದ ಓದಲು ಅಡಚಣೆಯಾಗದಂತೆ ಸಾರ್ವಜನಿಕರು ಸಹಕರಿಸಬೇಕು. ಇದರ ಹೊರತಾಗಿಯೂ ಶಬ್ದ ಮಾಲಿನ್ಯದ ಕುರಿತು ದೂರುಗಳು ಸ್ವೀಕೃತವಾದಲ್ಲಿ ಪರಿಸರ (ಸಂರಕ್ಷಣೆ) ಕಾಯಿದೆ 1986 ನಿಯಮ 15 ರಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಚೇತನಾ ಪೌಂಡೇಶನ್ ಕರ್ನಾಟಕ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಕಾವ್ಯಶ್ರೀ ಚಾರಿಟೇಬಲ್ ಟ್ರಸ್ಟ್ ರಿ. ಕರ್ನಾಟಕ ಇವರ ಸಂಯುಕ್ತ ಆಶ್ರಯದಲ್ಲಿ ನೀಡಲ್ಪಡುವ ಶ್ರೀ ಕೃಷ್ಣರಾಜ ಒಡೆಯರ್ ಸದ್ಭಾವನಾ ಪ್ರಶಸ್ತಿಗೆ ಪವಿತ್ರ ದೇವಾಡಿಗ ಆಯ್ಕೆಯಾಗಿರುತ್ತಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ಫೆಬ್ರವರಿ 16 ಆದಿತ್ಯವಾರ ಬೆಳಿಗ್ಗೆ ಜಿಲ್ಲಾ ಕನ್ನಡ ಸಾಹಿತ್ಯ ಭವನ ವಿಜಯನಗರ 1ನೇ ಹಂತ ಮೈಸೂರು ಅಲ್ಲಿ ನಡೆಯಲಿರುವುದು. ಅವಳು ಮೂರ್ತಿಮನೆ ಮೊಗೇರಿ ನಾಗರಾಜ್ ದೇವಾಡಿಗ ಹಾಗೂ ಸೀತಾ ದೇವಾಡಿಗ ದಂಪತಿಯ ಪುತ್ರಿ.
