Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಸರಸ್ವತಿ ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ – ಬಾಲಕಿಯರ ಟೆನ್ನಿಕಾಯ್ಟ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವುದು ಶ್ಲಾಘನೀಯ. ವಿದ್ಯಾರ್ಥಿನಿಯರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ ವಿಶೇಷ ತರಬೇತಿ ನೀಡಿ ವಿದ್ಯಾರ್ಥಿಗಳ ಸಾಧನೆಗೆ ಉತ್ತೇಜನ ನೀಡಿದ್ದಾರೆ. ಶೈಕ್ಷಣಿಕ ಸಾಧನೆಯ ಜೊತೆಗೆ ಕ್ರೀಡಾ ಕ್ಷೇತ್ರದಲ್ಲಿ ಕೂಡ ಕಾಲೇಜು ಸಾಧನೆಯ ಪಥದಲ್ಲಿ ಸಾಗಿ ಬರುತ್ತಿದೆ. ವಿದ್ಯಾರ್ಥಿಗಳೊಂದಿಗೆ ಕಾಲೇಜು ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ ಉಪಸ್ಥಿತರಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಛಾಯಾಗ್ರಾಹಕರ ವಿವಿಧೋದ್ದೇಶ ಸಹಕಾರಿ ಸಂಘ ನಿ. ಕುಂದಾಪುರ ಇದರ 2023-24 ನೇ ಸಾಲಿನ ಹತ್ತನೆ ವರ್ಷದ ವಾರ್ಷಿಕ ಮಹಾಸಭೆಯು ಮಂಗಳವಾರದಂದು ಸಂಘದ ಸಹಕಾರಿ ಕಛೇರಿಯಲ್ಲಿ ಸೊಸೈಟಿ ಅಧ್ಯಕ್ಷರಾದ ಗಿರೀಶ್ ಜಿ. ಕೆ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಎಸ್‌ಕೆಪಿಎ ಕುಂದಾಪುರ – ಬೈಂದೂರು ವಲಯದ ಅಧ್ಯಕ್ಷರಾದ ದಿವಾಕರ್ ಶೆಟ್ಟಿ ಉಪ್ಪುಂದ, ಪತ್ರಕರ್ತ ಸಂಘದ ಅಧ್ಯಕ್ಷರಾದ ನಾಗರಾಜ್ ರಾಯಪ್ಪನಮಠ, ಸೊಸೈಟಿ ಉಪಾಧ್ಯಕ್ಷರಾದ ಗಣೇಶ್ ಪೂಜಾರಿ, ಎಸ್‌ಕೆಪಿಎ ಕುಂದಾಪುರ – ಬೈಂದೂರು ವಲಯ ಪ್ರಧಾನ ಕಾರ್ಯದರ್ಶಿ ದಿನೇಶ್ ರಾಯಪ್ಪನ‌ ಮಠ ಹಾಗೂ ಸೊಸೈಟಿಯ ನಿರ್ದೇಶಕರುಗಳು, ಸದಸ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ಮಮತಾ ಸಂಘದ ವಾರ್ಷಿಕ ವರದಿಯನ್ನು ಮಂಡಿಸಿದರು, ಪ್ರೀತಿ ಶೆಟ್ಟಿ ಸ್ವಾಗತಿಸಿದರು, ಮಮತಾ ವಂದಿಸಿದರು ಹಾಗೂ ಮಾನ್ಯ ಪ್ರಾರ್ಥಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಸೋಮವಾರದಂದು ನಡೆದ ಉಡುಪಿ ಜಿಲ್ಲಾ ಮಟ್ಟದ  ಪದವಿಪೂರ್ವ ಬಾಲಕ/ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಜನತಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ. ಬಾಲಕರ ವಿಭಾಗದಲ್ಲಿ ಕ್ರಮವಾಗಿ – ವಿಘ್ನೇಶ್, ರತನ್, ರಿತೇಶ್, ನವಾಜ್, ಜಿತೇಂದ್ರ, ಚರಣ್ ಹಾಗೂ ಬಾಲಕಿಯರ ವಿಭಾಗದಲ್ಲಿಅನುಷಾ ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸ್ಟಾಫ್ ಸೆಲೆಕ್ಷನ್ ಕಮೀಷನ್ ಕೇಂದ್ರ ನೇಮಕಾತಿ ಪ್ರಾಧಿಕಾರದ ವತಿಯಿಂದ ಕೇಂದ್ರ ಸಶಸ್ತ್ರ ಪೋಲೀಸ್ ಮತ್ತು ಎಸ್‌ಎಸ್‌ ಈ ಪಡೆಗಳಲ್ಲಿ ಕಾನ್‌ಸ್ಟೇಬಲ್ ಮತ್ತು ಅಸ್ಸಾಂ ರೈಫಲ್ ಮ್ಯಾನ್ ಹುದ್ದೆಗಳ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತಿದ್ದು, ಮಾನ್ಯತೆ ಪಡೆದ ಮಂಡಳಿಯಿಂದ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್ www.ssckkr.kar.nic.in ಮತ್ತು https://ssc.gov.in ಪೋರ್ಟಲ್ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ನೊಂದಣಿಗೆ ಅಕ್ಟೋಬರ್ 14 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-25502520 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ, ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮಗಳ ವತಿಯಿಂದ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ, ಭೂ ಒಡೆತನ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಯ ಸೌಲಭ್ಯಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಆಯಾ ನಿಗಮದ ವ್ಯಾಪ್ತಿಯಲ್ಲಿ ಬರುವ ಅರ್ಹ ಪರಿಶಿಷ್ಟ ಜಾತಿಯ ಫಲಾಪೇಕ್ಷಿಗಳು ವೆಬ್‌ಸೈಟ್ https://sevasindhu.karnataka.gov.in ನಲ್ಲಿ ಗ್ರಾಮ ಒನ್, ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ವ್ಯವಸಾಯ ಸೇವಾ ಸಹಕಾರಿ ಸಂಘ ಸಂಘವು ಪ್ರಧಾನ ಕಚೇರಿ ಸೇರಿದಂತೆ 9 ಶಾಖೆಗಳ ಮೂಲಕ 7 ಗ್ರಾಮಗಳ ಜನತೆಗೆ ಆರ್ಥಿಕ ವ್ಯವಹಾರ ಕಲ್ಪಿಸಿ, ಪ್ರಸಕ್ತ ಸಾಲಿನಲ್ಲಿ ಸುಮಾರು 762.59 ಕೋಟಿಗೂ ಮೀರಿ ವ್ಯವಹಾರ ನಡೆಸಿ, ಸುಮಾರು 1.45 ಕೋಟಿ ರೂ. ನಿವ್ವಳ ಲಾಭಗಳಿಸಿದೆ ಎಂದು ಸಂಘದ ಅಧ್ಯಕ್ಷ ಟಿ. ನಾರಾಯಣ ಹೆಗ್ಡೆ ಹೇಳಿದರು. ಯಡ್ತರೆ ಬಂಟರ ಭವನದಲ್ಲಿ ಸೋಮವಾರ ನಡೆದ ಸಂಘದ ವಾರ್ಷಿಕ ಸರ್ವಸದಸ್ಯರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಂಘದ ಠೇವಣಾತಿ ಅವಿರತವಾಗಿ ಏರುತ್ತಿದ್ದು, ವರದಿ ವರ್ಷದಲ್ಲಿ ಸುಮಾರು 3.92 ಕೋಟಿ ರೂ. ಏರಿಕೆಯಾಗಿದ್ದು, ಶೇ. 5.82ರಷ್ಟು ಹೆಚ್ಚಳವಾಗಿದೆ. ವರದಿ ವರ್ಷದ ಪ್ರಾರಂಭದಲ್ಲಿ ಸುಮಾರು 55.88ಕೋಟಿ ರೂ. ಹೊರಬಾಕಿ ಸಾಲಯಿದ್ದು, ಪ್ರಸಕ್ತ ಸಾಲಿನಲ್ಲಿ 61.42ಕೋಟಿ ರೂ. ಸಾಲ ವಿತರಿಸಲಾಗಿದೆ. ವರ್ಷಾಂತ್ಯದಲ್ಲಿ ಸದಸ್ಯರಿಂದ ಬರಬೇಕಾದ ಸಾಲಗಳ ಪೈಕಿ ಕೃಷಿ ಪೂರಕ ಸಾಲ ಶೇ. 99.72, ಕೃಷಿಯೇತರ ಸಾಲ ಶೇ. 99.60 ವಸೂಲಿಯಾಗಿ ಒಟ್ಟಾರೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಸ್ಸಿ ನರ್ಸಿಂಗ್ ಮತ್ತು ಜಿ.ಎನ್.ಎಮ್ ನರ್ಸಿಂಗ್ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ  ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನ ಸೌಲಭ್ಯ ಪಡೆಯಲು ವೆಬ್‌ಸೈಟ್ https://sevasindhu.karnataka.gov.in/sevasindhu/DepartmentServices ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ದೂ.ಸಂಖ್ಯೆ: 0820-2573596 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ನೆಲ ಮಹಡಿ, ಮೌಲಾನಾ ಆಜಾದ್ ಭವನ, ಪಶು ಚಿಕಿತ್ಸಾಲಯದ ಹತ್ತಿರ, ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೆಂಗಳೂರು, ಸೆ. 14 ಮತ್ತು 15 ರಂದು ಬೆಂಗಳೂರಿನ ಕೋರಮಂಗಲದಲ್ಲಿ ನಡೆದ ಅಖೀಲ ಕರ್ನಾಟಕ ಕರ್ನಾಟಕ ಸ್ಫೊರ್ಟ್ಸ್ ಕರಾಟೆ ಅಸೋಸಿಯೆನ್ ವತಿಯಿಂದ ನಡೆದ 15ನೇ ರಾಜ್ಯ ಮಟ್ಟದ ಸಬ್ ಜೂನಿಯರ್ ಕರಾಟೆ ಚಾಂಪಿಯೆನ್ ಶಿಫ್ 2024 ಇದರಲ್ಲಿ ಗುರುಕುಲ ಪಬ್ಲಿಕ್ ಸ್ಕೂಲ್ ವಕ್ವಾಡಿಯ 8ನೇ ತರಗತಿ ವಿದ್ಯಾರ್ಥಿನಿ ಝಾರಾ, ಸಬ್ ಜೂನಿಯರ್ ವಿಭಾದ 13ರ ವಯೋಮಿತಿಯ ಉಡುಪಿ ಜಿಲ್ಲೆಯಿಂದ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ ಪಡೆದು, ರಾಜ್ಯ ಮಟ್ಟದಲ್ಲಿ ಆರಿಸಿ ಬಂದು, ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯೆನ್ ಶಿಪ್‍ಗೆ ಆಯ್ಕೆಯಾಗಿದ್ದಾಳೆ. ಈ ಕ್ರೀಡಾ ಕೂಟದಲ್ಲಿ, ರಾಜ್ಯದ 31 ಜಿಲ್ಲೆಯ 1220 ಕ್ರೀಡಾಳುಗಳು ಭಾಗವಹಿಸಿದ್ದರು. ಕುಮಿಟೆ ವಿಭಾಗದಲ್ಲಿ ರಾಜ್ಯ ಚಾಂಪಿಯೆನ್ ಆಗಿರುತ್ತಾಳೆ. ಅವಳಿಗೆ ಕುಂದಾಪುರದ ಕೆ.ಡಿ.ಎಫ್. ಕರಾಟೆ ಶಾಲೆಯ ಕಿಯೋಷಿ ಕಿರಣ್, ಶಿಹಾನ್ ಸಂದೀಪ್ ವಿ.ಕೆ., ಶಿಹಾನ್ ಕೀರ್ತಿ ಜಿ.ಕೆ., ಸೇನ್ ಸಾಯಿ ಶಿಹಾನ್ ಶೇಖ್, ಬಸ್ರೂರು, ಹಾಗೂ ಸೇನ್ ಸಾಯಿ ಶಶಾಂಕ್ ಶೆಣೈ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಪಡೆಯುವ ಅವಧಿಯಲ್ಲಿ ಶಿಷ್ಯವೇತನ ಸೌಲಭ್ಯ ಪಡೆಯಲು ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಸೆಪ್ಟಂಬರ್ 30 ರ ವರೆಗೆ ವಿಸ್ತರಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಂಬಂಧಿಸಿದ ಸೂಕ್ತ ದಾಖಲೆಗಳನ್ನು ಒಂದು ವಾರದ ಒಳಗಾಗಿ ಉಪ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ ಇಲ್ಲಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕಸ್ತೂರಿ ರಂಗನ್ ವರದಿ ಅನುಷ್ಠಾನ ಮತ್ತು ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆಯ ಆತಂಕದಲ್ಲಿರುವ ಜಡ್ಕಲ್ / ಮುದೂರು ಗ್ರಾಮಕ್ಕೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿದರು. ಬಳಿಕ ಅಲ್ಲಿನ ನಿವಾಸಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದರು. ಈ ಸಂದರ್ಭ ಮಾತನಾಡಿದ ಶಾಸಕ ಗಂಟಿಹೊಳೆ, ಮೀಸಲು ಅರಣ್ಯ ಮತ್ತು ಬಫರ್ ಝೋನ್ ಪ್ರದೇಶಗಳಲ್ಲಿ ವಾಸಮಾಡುತ್ತಿರುವ ನಿವಾಸಿಗಳಿಗೆ ಕಸ್ತೂರಿ ರಂಗನ್ ವರದಿ ಅನುಷ್ಠಾನದಿಂದ ಆಗಬಹುದಾದ ಸಮಸ್ಯೆಗಳಿಗೆ ಭಯಗೊಂಡಿರುವ ಜಡ್ಕಲ್, ಮುದೂರು ಗ್ರಾಮದ ಜನರು ಈಗಾಗಲೇ ಅಸಮಾಧಾನ ಹೊರಹಾಕಿದ್ದಾರೆ. ಜೊತೆಗೆ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ ಮುಟ್ಟಿಸುವ ಮೂಲಕ ಉಡುಪಿ ಜಿಲ್ಲೆಯಲ್ಲಿ ಮೊದಲ ಹೋರಾಟಕ್ಕೆ ಮುನ್ನುಡಿ ಬರೆದಂತಾಗಿದೆ. ಈ ಪ್ರತಿಭಟನೆ ಕಿಚ್ಚು ಇಡೀ ಉಡುಪಿ ಜಿಲ್ಲೆಗೆ ಪಸರಿಸಿ. ಒಂದು ಜನಂದೋಲನವಾಗಿ ಪರಿವರ್ತನೆಗೊಂಡಾಗ ನಮ್ಮ ಹೋರಾಟಕ್ಕೆ ನಿಶ್ಚಿತವಾಗಿ ಫಲ ದೊರೆಯಲಿದೆ. ಈ ಹೋರಾಟದ ನಮ್ಮೆಲ್ಲರ ಹೋರಾಟವಾಗಬೇಕಿದೆ. ಯಾವುದೇ ಮಟ್ಟದ ಹೋರಾಟಕ್ಕೆ ಎಲ್ಲಿಗೆ ಕರೆದರೂ ನಿಮ್ಮ ಜೊತೆಗಿದ್ದೇನೆ ಎನ್ನುವ ಭರವಸೆ ನೀಡಿದರು. ಪ್ರತಿಭಟನೆಗೆ ಒಂದು…

Read More