Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯ ಮೈಸೂರು ಇವರ ಆಶ್ರಯದಲ್ಲಿ 2024ರಲ್ಲಿ ನಡೆದ ವಿಶೇಷ ಸಂಗೀತ, ನೃತ್ಯ ಹಾಗೂ ತಾಳವಾದ್ಯ ಪರೀಕ್ಷೆಯಲ್ಲಿ ಕುಂದಾಪುರದ ನಮಸ್ವಿ ಎಸ್. ಶೆಟ್ಟಿಗಾರ್ ಅವರು ಭರತನಾಟ್ಯ ಕಿರಿಯ ದರ್ಜೆ ಪರೀಕ್ಷೆಯಲ್ಲಿ 92.85% ಅಂಕಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಈಕೆ ಶ್ರುತಿ ಭಟ್ ಉದ್ಯಾವರ ಹಾಗೂ ಪ್ರಸ್ತುತ ಆನಂದ್ ಕೇರಳ ಅವರಲ್ಲಿ ಭರತನಾಟ್ಯ ಅಭ್ಯಾಸವನ್ನು ಮಾಡುತ್ತಿದ್ದಳು. ಅವರು ಕುಂದಾಪುರ ತಾಲೂಕಿನ ಶ್ರೀಧರ್ ಕುಮಾರ್ ಹಾಗೂ ಲಾವಣ್ಯ ಶ್ರೀಧರ್ ದಂಪತಿಗಳ ಪುತ್ರಿ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್. ಎಸ್. ಬೋಸರಾಜು ಇಂದು ಭೇಟಿ ನೀಡಿ, ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ದೇವಳದ ವತಿಯಿಂದ ಸಚಿವರನ್ನು ಗೌರವಿಸಲಾಯಿತು. ಈ ವೇಳೆ ದೇವಳದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕೆ. ಬಾಬು ಶೆಟ್ಟಿ, ಸದಸ್ಯರಾದ ರಾಜೇಶ ಕಾರಂತ್, ಧನಾಕ್ಷಿ ಪೂಜಾರಿ, ಸುಧಾ ಕೆ. ಮೊಗವೀರ, ದೇವಳದ ಕಾರ್ಯನಿರ್ವಾಣಾಧಿಕಾರಿ ಪ್ರಶಾಂತ್ ಶೆಟ್ಟಿ ಮತ್ತು ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಎಸ್. ರಾಜು ಪೂಜಾರಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅರವಿಂದ ಪೂಜಾರಿ, ವಂಡ್ಸೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಶೆಟ್ಟಿ ಹಾಗೂ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ಇನ್‌ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸುವ ಪ್ರಾರಂಭಿಕ ಹಂತದ ಸಿಎಮ್‌ಎ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ  ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಪ್ರಥಮ ಹಂತದಲ್ಲಿಯೇ ಮಹೋನ್ನತ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ವೈಷ್ಣವಿ ಹಾಗೂ ಕಾರ್ತಿಕ್ ಕೆ. ಬಿಲ್ಲವ ಅವರು ಸಿ.ಎಂ.ಎ. ಇಂಟರ್‌ಮೀಡಿಯೇಟ್ ಪ್ರೋಗ್ರಾಮ್‌ಗೆ ಅರ್ಹತೆ ಪಡೆದಿದ್ದಾರೆ. ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ಹಾಗೂ ವೀ ರೀಚ್ ಸಂಸ್ಥೆಯ ನುರಿತ ತರಬೇತುದಾರರಿಂದ ವಿದ್ಯಾರ್ಥಿಗಳು ತರಬೇತಿ ಹಾಗೂ ಮಾರ್ಗದರ್ಶನ ಪಡೆದು ಈ ಸಾಧನೆಗೈದಿದ್ದಾರೆ. ಅವರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಸಿದ್ದಾಪುರ ಮಡಾಮಕ್ಕಿ ಗ್ರಾಮದ ಶಿರಂಗೂರು ಎನ್ನುವಲ್ಲಿ ಆವರಣವಿಲ್ಲದ ಬಾವಿಗೆ ಆಕಸ್ಮಿಕವಾಗಿ ಬಿದ್ದು ಸತೀಶ್ (47) ಅವರು ಸಾವನ್ನಪ್ಪಿದ ಘಟನೆ ಜ. 9ರಂದು ರಾತ್ರಿ ಸಂಭವಿಸಿದೆ. ಅವರು ತಾಯಿ ಗಂಗಮ್ಮ ಅವರೊಂದಿಗೆ ಶಿರಂಗೂರಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದು, ಜ. 9ರ ರಾತ್ರಿ ಊಟ ಮಾಡಿ ಮನೆಯಲ್ಲಿ ಮಲಗಿದ್ದು, ಮೂತ್ರ ವಿಸರ್ಜನೆಗೆಂದು ಹೊರಗಡೆ ಹೋದವರು ಆವರಣವಿಲ್ಲದ ಬಾವಿಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಅಮಾಸೆಬೈಲು ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಜ. 17 ರಿಂದ 23 ರವರೆಗೆ ಕರ್ನಾಟಕ ಕ್ರೀಡಾಕೂಟವನ್ನು ಸುವ್ಯವಸ್ಥಿತವಾಗಿ ನಡೆಸಲು ರಚಿಸಿರುವ ಸಮಿತಿಯ ಸದಸ್ಯರುಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿ, ಕ್ರೀಡಾಕೂಟವನ್ನು ಯಶಸ್ವಿಗೊಳಿಸಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕರ್ನಾಟಕ ಕ್ರೀಡಾಕೂಟ -2025 ಆಯೋಜನೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ನಡೆಯುತ್ತಿರುವ ಕರ್ನಾಟಕ ಕ್ರೀಡಾಕೂಟದಲ್ಲಿ ಭಾಗವಹಿಸಲು ಆಗಮಿಸುವ ಕ್ರೀಡಾ ಪಟುಗಳಿಗೆ, ತೀರ್ಪುಗಾರರಿಗೆ ಹಾಗೂ ಅಧಿಕಾರಿಗಳಿಗೆ ತಂಗಲು ವಸತಿ ಗೃಹಗಳ ವ್ಯವಸ್ಥೆ, ಊಟೋಪಚಾರ, ಕುಡಿಯುವ ನೀರಿನ ವ್ಯವಸ್ಥೆ, ಕ್ರೀಡಾ ಚಟುವಟಿಕೆ ನಡೆಸಲು ಸುವ್ಯವಸ್ಥಿತ ಮೈದಾನ ಸೇರಿದಂತೆ ಮತ್ತಿತರ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಮಾಡುವುದರ ಜೊತೆಗೆ ಯಾವುದೇ ರೀತಿಯಲ್ಲಿ ಕಿಂಚಿತ್ತೂ ತೊಂದರೆಗಳಾಗದಂತೆ ಉಪ ಸಮಿತಿಯ ಸದಸ್ಯರುಗಳು ಜವಾಬ್ದಾರಿ ವಹಿಸಿ ಕಾರ್ಯನಿರ್ವಹಿಸಬೇಕು ಎಂದರು. ಜಿಲ್ಲೆಗೆ ಕ್ರೀಡಾ ಕೂಟಕ್ಕೆ ಆಗಮಿಸುವ ಪ್ರತಿಯೊಬ್ಬರೂ ನಮಗೆ ಅತಿಥಿಗಳಿದ್ದಂತೆ. ಅವರ ಸಂಚಾರಕ್ಕೆ ಅನುಗುಣವಾಗಿ ವಾಹನದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ಡಾನ್ ಬಾಸ್ಕೊ ಪದವಿ ಪೂರ್ವ ಕಾಲೇಜು ಚಿತ್ತಾಪೂರ, ಯಾದಗಿರಿ ಇವರ ಸಂಯುಕ್ತ ಆಶ್ರಯದಲ್ಲಿ ಜ.5 ರಿಂದ 6 ರವರೆಗೆ ಯಾದಗಿರಿಯಲ್ಲಿ ನಡೆದ ರಾಜ್ಯ ಮಟ್ಟದ ಟೆನ್ನಿ ಕಾಯ್ಟ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಿಗೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಸಹನಾ ಖಾರ್ವಿ ಮತ್ತು ಮಾನ್ಯ ಖಾರ್ವಿ ಉಡುಪಿ ಜಿಲ್ಲಾ ತಂಡದಿಂದ ಸ್ಪರ್ಧಿಸಿ ವಿಜೇತರಾಗಿದ್ದಾರೆ. ಸಹನಾ ಖಾರ್ವಿ ರಾಷ್ಟ್ರಮಟ್ಟದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿ ಬಳಗ ಅಭಿನಂದನೆ ಸಲ್ಲಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಇದೇ ಜ. 26 ರಂದು ನಡೆಯುವ ಭಾರತ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣ ಹಾಗೂ ವ್ಯವಸ್ಥಿತವಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಆಚರಣೆಯ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಾರತ ಗಣರಾಜ್ಯೋತ್ಸವ ದಿನಾಚರಣೆಯು ದೇಶಪ್ರೇಮ, ದೇಶಭಕ್ತಿ ಹಾಗೂ ಭಾರತ ಸಂವಿಧಾನ ಆಚರಣೆಯ ಪ್ರತೀಕವಾಗಿದ್ದು, ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ವಿವಿಧ ಇಲಾಖೆಗಳು ಸಮನ್ವಯತೆಯಿಂದ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿ ಗಣರಾಜ್ಯೋತ್ಸವವನ್ನು ಆಚರಿಸಬೇಕು. ಇಲಾಖೆಯ ಅಧಿಕಾರಿಗಳಿಗೆ ನೀಡಿರುವ ಜವಾಬ್ದಾರಿಯನ್ನು ಕಟ್ಟುನಿಟ್ಟಾಗಿ ಪಾಲಿಸಿ, ಲೋಪವಾಗದಂತೆ ಎಚ್ಚರ ವಹಿಸಬೇಕು ಎಂದು ಸೂಚನೆ ನೀಡಿದರು. ಭಾರತ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಜನವರಿ 26 ರಂದು ಬೆಳಿಗ್ಗೆ 9 ಕ್ಕೆ ನಗರದ ಅಜ್ಜರಕಾಡು ಮಹಾತ್ಮ ಗಾಂಧೀ ಜಿಲ್ಲಾ ಕ್ರೀಡಾಂಗಣದಲ್ಲಿ ಆಚರಿಸಲಾಗುವುದು. ಶಿಷ್ಟಾಚಾರದ ನಿಯಮಗಳಂತೆ ಭಾರತ ಗಣರಾಜ್ಯೋತ್ಸವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅವೈಜ್ಞಾನಿಕ ಲೈಟ್ ಫಿಶಿಂಗ್ ಮತ್ತು ಬುಲ್‍ಟ್ರಾಲ್ ಮೀನುಗಾರಿಕೆಯನ್ನು ಕೂಡಲೇ ನಿಷೇಧಿಸುವಂತೆ ಒತ್ತಾಯಿಸಿ ರಾಜ್ಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಒಕ್ಕೂಟದ ನೇತೃತ್ವದಲ್ಲಿ ಶುಕ್ರವಾರ ತ್ರಾಸಿಯ ಕಡಲ ಕಿನಾರೆಯಲ್ಲಿ ಸಾವಿರಾರು ದೋಣಿಗಳನ್ನು ಲಂಗರು ಹಾಕಿ, ಕರಾವಳಿಯ 3 ಜಿಲ್ಲೆಗಳ 3 ಸಾವಿರಕ್ಕೂ ಮಿಕ್ಕಿ ಮೀನುಗಾರರಿಂದ ಬೃಹತ್ ಸಭೆ ಹಾಗೂ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಯಿತು. ಈ ವೇಳೆ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಮಾತನಾಡಿ, ಕಳೆದ ಒಂದುವರೆ ವರ್ಷದಿಂದ ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಒಂದೇ ಒಂದು ಮೀನುಗಾರಿಕೆ ಮನೆಗಳು ಮಂಜೂರಾಗಿಲ್ಲ. ಕಳೆದ ವರ್ಷ ಮಂಜೂರಾಗಿದ್ದ ಮನೆಗಳನ್ನು ಕೂಡ ತಡೆ ಹಿಡಿಯಲಾಗಿದೆ. ಕಳೆದ 3-4 ವರ್ಷಗಳಿಂದ ಮರವಂತೆ ಹೊರ ಬಂದರು ಮಂಜೂರಾದ ಅನುದಾನ ವಿವಿಧ ಕಾರಣಗಳಿಂದ ಬಳಕೆಯಾಗಿಲ್ಲ. ಗಂಗೊಳ್ಳಿ ಬಂದರು ಜೆಟ್ಟಿ ಪುನರ್ ನಿರ್ಮಾಣವಾಗಿಲ್ಲ ನಾಡದೋಣಿಯವರ ಕಷ್ಟ ಅರ್ಥಮಾಡಿಕೊಳ್ಳಬೇಕಾದುದು ಸರಕಾರದಿಂದ ಹಿಡಿದು ಸಮಾಜದ ಕರ್ತವ್ಯ. ಅವೈಜ್ಞಾನಿಕವಾಗಿ ನಡೆಯುತ್ತಿರುವ ಲೈಟ್ ಫಿಶಿಂಗ್ ಸಮಸ್ಯೆ ಬಗ್ಗೆ ಅಧಿಕಾರಿಗಳು ಹಾಗೂ ಸರಕಾರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತ್ರಿವರ್ಣ ಕಲಾ ಕೇಂದ್ರ ವತಿಯಿಂದ ಕುಂದಾಪುರದ ತ್ರಿವರ್ಣ ಕಲಾ ಗ್ಯಾಲರಿಯಲ್ಲಿ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳಿಂದ ಪರಂಪರಾ-2 ಚಿತ್ರಕಲಾ ಪ್ರದರ್ಶನ ಜ.12ರ ಆದಿತ್ಯವಾರದಿಂದ 14ರ ತನಕ ನಡೆಯಲಿದೆ. ಬೆಳಿಗ್ಗೆ 10.00 ರಿಂದ ಸಂಜೆ 7.30ರ ತನಕ ಕುಂದಾಪುದ ಹಳೆ ಬಸ್‌ ನಿಲ್ದಾಣದ ಬಳಿ ಇರುವ ಸುಪ್ರಭ ಕಾಂಪ್ಲೆಕ್ಸ್‌ನ ಆರ್ಟ್‌ ಗ್ಯಾಲರಿಯಲ್ಲಿ ಕಲಾಪ್ರದರ್ಶನ ಸಾರ್ವಜನಿಕ ವಿಕ್ಷೇಣೆಗೆ ಲಭ್ಯವಿರಲಿದೆ. ಉದ್ಘಾಟನಾ ಸಮಾರಂಭ:ದಿನಾಂಕ 12.01.2025 ಅದಿತ್ಯವಾರ ಬೆಳಿಗ್ಗೆ 10.00ಕ್ಕೆ ಕುಂದಾಪುರದ ತ್ರಿವರ್ಣ ಕಲಾ ಗ್ಯಾಲರಿಯಲ್ಲಿ ಕುಂದೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ವಾಸುದೇವ ಯಡಿಯಾಳ ಅವರು ಉದ್ಘಾಟಿಸಲಿದ್ದಾರೆ. ಅತಿಥಿ ಅಭ್ಯಾಗತರಾಗಿ ಉಡುಪಿಯ ಚಿತ್ರಕಲಾ ಮಂದಿರ ಕಲಾ ವಿದ್ಯಾಲಯದ ನಿರ್ದೇಶಕರಾದ ಡಾ. ಯು. ಸಿ. ನಿರಂಜನ್, ಕುಂದಾಪುರದ ನಿವೃತ್ತ ಪ್ರಾಂಶುಪಾಲರಾದ ಡಾ. ಜಿ. ಹೆಚ್ ಪ್ರಭಾಕರ್ ಶೆಟ್ಟಿ ಮತ್ತು ಶ್ರೀ ವೆಂಕಟರಮಣ ಪಿ.ಯು. ಕಾಲೇಜಿನ ಸಂಸ್ಕೃತ ಉಪನ್ಯಾಸಕಿ ಮಮತಾ ರೈ ಉಪಸ್ಥಿತರಿರುವರು. ಪರಂಪರ ಕಲಾ ಪ್ರದರ್ಶನ:ಶತಶತಮಾನಗಳಿಂದ ಸಂಪದ್ಭರಿತ ಸುಧೀರ್ಘ ಇತಿಹಾಸಗಳುಳ್ಳ ದೇಶ ನಮ್ಮದು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗ ಕೋಟೇಶ್ವರ ಶಾಲಾ ಹಳೆ ವಿದ್ಯಾರ್ಥಿಗಳ ಸಾರಥ್ಯದಲ್ಲಿ ನಡೆಯುತ್ತಿರುವ ಶತಮಾನೋತ್ಸವ ಕಾರ್ಯಕ್ರಮದ ಶಾಲಾ ಆವರಣದಲ್ಲಿ ಗುರುವಾರ ಉದ್ಘಾಟನೆಗೊಂಡಿತು. ಕಾರ್ಯಕ್ರಮದ ಅಧ್ಯಕ್ಷತೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ವಹಿಸಿ ಮಾತನಾಡಿ, ಸ್ಥಳೀಯ ಕೋಟೇಶ್ವರದ ಕೊಡಿ ಹಬ್ಬಗಳಂತೆ, ಶಾಲೆಯ ಶತಮಾನೋತ್ಸವದ ವಾರ್ಷಿಕೋತ್ಸವ ಸಂಭ್ರಮದಿಂದ ನಡೆಯುತ್ತಿರುವು ಸಂತಸದ ಸಂಗತಿ ಎಂದರು. ಶ್ರೀಧರ್ ವಿಟ್ಟಲ್ ಕಾಮತ್ ಅಧ್ಯಕ್ಷರು ಶತಮಾನೋತ್ಸವ ಸಮಿತಿ ಕೆಪಿಎಸ್ ಪ್ರಥಮಿಕ ವಿಭಾಗ ಉಡುಪಿ ಜಿಲ್ಲಾ ಉಪನಿರ್ದೇಶಕರು ಡಿ.ಡಿ.ಪಿ. ಗಣಪತಿ ಕೆ., ಕೋಟೇಶ್ವರ ಗ್ರಾಮ ಪಂಚಾಯಿತಿನ ಅಧ್ಯಕ್ಷೆ ರಾಗಿಣಿ ದೇವಾಡಿಗ, ರಾಜೇಶ್ ಉಡುಪ ಅಧ್ಯಕ್ಷರು ಹಳೆ ವಿದ್ಯಾರ್ಥಿ ಸಂಘ ಹಾಗೂ ಶತಮಾನೋತ್ಸವ ಸಮಿತಿ ಕೆಪಿಎಸ್ ಪ್ರಾಥಮಿಕ ವಿಭಾಗ, ಉದ್ಯಮಿ ಹಾಗೂ ಶಾಲಾ ಹಳೆ ವಿದ್ಯಾರ್ಥಿ ದಿನೇಶ್ ಕಾಮತ್, ಡಾ. ಭಾಸ್ಕರ ಆಚಾರ್ಯ ಗೌರವ ಉಪಾಧ್ಯಕ್ಷರು, ಶತಮಾನೋತ್ಸವ ಸಮಿತಿ ಕೆಪಿಎಸ್ ಪ್ರಾಥಮಿಕ ವಿಭಾಗ ಪ್ರಕಾಶ್ ಶೆಟ್ಟಿ, ಪ್ರಾಂಶುಪಾಲರು ಕೆಪಿಎಸ್ ಕೋಟೇಶ್ವರ,…

Read More