ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ನಾಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಂದಾಪುರದ ಕಡೆಗೆ ಸಾಗುತ್ತಿದ್ದ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇರ್ವರಿಗೆ ಗಂಭೀರ ಗಾಯಗೊಂಡ ಘಟನೆ ಗುರುವಾರ ನಡೆದಿದೆ. ಕಾರಿನಲ್ಲಿದ್ದ ಇರ್ವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಕೇರಳ ಮೂಲದವರು ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಬೈಂದೂರು ಪೋಲಿಸರು ಭೇಟಿ ನೀಡಿದರು. ಗಾಯಳುಗಳನ್ನು ಸ್ಥಳೀಯರ ಸಹಾಯದಿಂದ ತಕ್ಷಣ ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬೈಂದೂರು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯೂತ್ ಜಿ.ಎಸ್.ಬಿ., ಕೊಡಿಯಾಲ್ ಸ್ಪೋರ್ಟ್ಸ್ ಅಸೋಸಿಯೇಷನ್ ಅವರು ಜ. 4 ಹಾಗೂ 5 ರಂದು ಏರ್ಪಡಿಸಿದ ‘ಆಲ್ ಇಂಡಿಯಾ ಜಿ.ಎಸ್.ಬಿ. ಬ್ಯಾಡ್ಮಿಂಟನ್ ಲೀಗ್’ ಟೂರ್ನಮೆಂಟ್-2024ರಲ್ಲಿ ರಾಷ್ಟ್ರೀಯ ಹಾಗೂ ರಾಜ್ಯಮಟ್ಟದ 225 ಆಟಗಾರರು ಭಾಗವಹಿಸಿದ್ದರು. ಕುಂದಾಪುರದ ಆರ್ಡಿ ಸಂತೋಷ ಕಾಮತ್ ಮಾಲಕತ್ವದ ‘ರೋಶನ್ ಚ್ಯಾಲೆಂಜರ್ಸ್ ಕುಂದಾಪುರ ಜಯಗಳಿಸಿ ಚಾಂಪಿಯನ್ ಆಗಿ ಟ್ರೋಫಿ ಪಡೆದುಕೊಂಡಿತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಪ ನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ಮತ್ತು ಡಾನ್ ಬಾಸ್ಕೊ ಪದವಿ ಪೂರ್ವ ಕಾಲೇಜು ಚಿತ್ತಾಪೂರ, ಯಾದಗಿರಿ ಇವರ ಸಂಯುಕ್ತ ಆಶ್ರಯದಲ್ಲಿ ಜ.5 ರಿಂದ ಜ.6 ರವರೆಗೆ ಯಾದಗಿರಿಯಲ್ಲಿ ನಡೆದ ರಾಜ್ಯ ಮಟ್ಟದ ಟೆನ್ನಿಕೋಯಿಟ್ ಪಂದ್ಯಾಟದಲ್ಲಿ ಉಡುಪಿ ಜಿಲ್ಲಾ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ವೈಷ್ಣವಿ, ರಿಷಾ ಮತ್ತು ಅಂಶು ಉಡುಪಿ ಜಿಲ್ಲಾ ತಂಡದಿಂದ ಸ್ಪರ್ಧಿಸಿ ವಿಜೇತರಾಗಿದ್ದಾರೆ. ಉಡುಪಿ ಜಿಲ್ಲಾ ಬಾಲಕರ ತಂಡದಲ್ಲಿ ವಿದ್ಯಾರ್ಥಿಗಳಾದ ದೃಶ್ಯ, ಸಾಕೇತ್, ಅಕ್ಷಯ್ ಪ್ರತಿನಿಧಿಸಿ ಉತ್ತಮ ಪ್ರದರ್ಶನ ನೀಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಗಂಗೊಳ್ಳಿ ಗ್ರಾಮದ ನಿವಾಸಿ ನಾರಾಯಣ ಮೊಗವೀರ (59) ಅವರು ಸರ್ವಮಂಗಲೇ ಮೀನುಗಾರಿಕಾ ಪರ್ಷಿನ್ ಬೋಟ್ನಲ್ಲಿ ಜ.2ರಂದು ಮೀನುಗಾರಿಕೆ ಮಾಡುತ್ತಿದ್ದ ಸಮಯದಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿ ಅವರ ಸುಳಿವು ಇನ್ನೂ ಕೂಡ ಪತ್ತೆಯಾಗಿಲ್ಲ. ಸಮುದ್ರದಲ್ಲಿ ನಾಪತ್ತೆಯಾಗಿರುವ ಸಹೋದರನನ್ನು ಹುಡುಕಲು ಜಿಲ್ಲಾಡಳಿತ ಸಹಕಾರ ನೀಡಬೇಕೆಂದು ವಿಶ್ವನಾಥ ಗಂಗೊಳ್ಳಿ ಮನವಿ ಮಾಡಿದ್ದಾರೆ. ನಾರಾಯಣ ಮೊಗವೀರ ಅವರು ತಮ್ಮ ಹೊಟ್ಟೆ ಪಾಡಿಗೆಂದು ಜ. 2 ರಂದು ಪರ್ಷಿನ್ ಬೋಟ್ ಮೂಲಕ ಮೀನುಗಾರಿಕೆಗೆ ತೆರಳಿದ್ದರು. ಮೀನುಗಾರಿಕೆ ಮಾಡುತ್ತಿದ್ದ ಸಮಯದಲ್ಲಿ ಕಾಲು ಜಾರಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದಾರೆ. ಜ.7ರ ತನಕವೂ ಅವರ ಸುಳಿವು ಸಿಗದೆ ಇರುವುದರಿಂದ ಕುಟುಂಬ ಕಂಗಾಲಾಗಿದೆ. ಮುಳುಗು ತಜ್ಞ ದಿನೇಶ್ ಖಾರ್ವಿ ತಂಡ ಮತ್ತು ಗಂಗೊಳ್ಳಿ ಕರಾವಳಿ ಕಾವಲು ಪಡೆ ಪೊಲೀಸರ ಸಹಕಾರದಿಂದ ಹಾಗೂ ಖಾಸಗಿ ಬೋಟ್ ಸಹಾಯದಿಂದ ಕಳೆದ ಆರು ದಿನಗಳಿಂದ ಸಮುದ್ರದಲ್ಲಿ ಹುಡುಕಾಟ ಮಾಡಿದ್ದರೂ ಸುಳಿವು ಸಿಕ್ಕಿಲ್ಲ, ಖಾಸಗಿ ಬೋಟ್ ಗೆ ಡಿಸೆಲ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಗೃಹ ಆರೋಗ್ಯ ಯೋಜನೆಗೆ ಈಗಾಗಲೇ ಕೋಲಾರ ಜಿಲ್ಲೆಯಲ್ಲಿ ಅಧಿಕೃತವಾಗಿ ಚಾಲನೆ ನೀಡಲಾಗಿದ್ದು, 2025 ರ ಜನವರಿ ಯಿಂದ ಉಡುಪಿ ಜಿಲ್ಲೆಯಲ್ಲಿಯೂ ಈ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ಜನಸಾಮಾನ್ಯರಲ್ಲಿ ಹೆಚ್ಚುತ್ತಿರುವ ರಕ್ತದೊತ್ತಡ, ಮಧುಮೇಹ ಮುಂತಾದ ಪ್ರಮುಖ ಅಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಹಾಗೂ ಇವುಗಳ ಸಂಭವನೀಯತೆಯನ್ನು ಪರಿಹರಿಸುವುದು ಈ ಯೋಜನೆಯ ಪ್ರಾಥಮಿಕ ಉದ್ದೇಶವಾಗಿದೆ. ಗೃಹ ಆರೋಗ್ಯ ಯೋಜನೆಯ ಪ್ರಮುಖ ಅಂಶಗಳು:ಗ್ರಾಮೀಣ ಪ್ರದೇಶದಲ್ಲಿ ಆರೋಗ್ಯ ಕಾರ್ಯಕರ್ತರು ಮನೆ ಭೇಟಿ ನೀಡಿ, ಪ್ರಮುಖ 6 ಅಸಾಂಕ್ರಾಮಿಕ ಕಾಯಿಲೆಗಳಿಗೆ ಪ್ರಾಥಮಿಕ ಹಂತದ ತಪಾಸಣೆ, ಬಾಯಿ, ಸ್ತನ ಮತ್ತು ಗರ್ಭಕಂಠದ ಕ್ಯಾನ್ಸರ್ ಹಾಗೂ ಮಾನಸಿಕ ರೋಗಗಳಿಗೆ ಪ್ರಾಥಮಿಕ ಹಂತದ ತಪಾಸಣೆ ನಡೆಸಲಿದ್ದಾರೆ. ಮಧುಮೇಹ ಮತ್ತು ಅಧಿಕ ರಕ್ತದೊತ್ತಡ (ಬಿ.ಪಿ) ಗೆ ಉಚಿತ ಔಷಧಿ ವಿತರಿಸಲಿದ್ದಾರೆ. ನಿದ್ರೆಯಲ್ಲಿ ಉಸಿರು ಕಟ್ಟುವಿಕೆ, ಬಿ.ಎಂ.ಐ ಅಸಮತೋಲನ, ಧೂಮಪಾನ ಮತ್ತು ಆಪ್ತ ಸಮಾಲೋಚನೆ ನಡೆಸಲಿದ್ದು, ಸಾರ್ವಜನಿಕರು ಈ ಯೋಜನೆಯ ಸಂಪೂರ್ಣ ಪ್ರಯೋಜನ ಪಡೆದುಕೊಂಡು ಮನೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶ್ರೀ ರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಬೈದೆಬೆಟ್ಟು ಕೊಕ್ಕರ್ಣೆ, ದುರ್ಗಾ ಆಂಗ್ಲ ಮಾಧ್ಯಮ ಶಾಲೆ ಕೊಕ್ಕರ್ಣೆ ಅಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಚಿತ್ರಕಲೆಯಲ್ಲಿ ಕೊಂಚಾಡಿ ರಾಧಾ ಶೆಣೈ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ಸಂಜಿತ್ ಎಂ. ದೇವಾಡಿಗ ದ್ವಿತೀಯ ಸ್ಥಾನ ಪಡೆದಿರುತ್ತಾನೆ. ಈತ ಚಿತ್ರಕಲಾ ಶಿಕ್ಷಕ, ಸ್ಯಾಕ್ಸೋಫೋನ್ ಕಲಾವಿದ ಮಾಧವ ದೇವಾಡಿಗ ಹಾಗೂ ಗಣಿತ ಉಪನ್ಯಾಸಕಿ ಸಾವಿತ್ರಿ ಎಸ್. ದೇವಾಡಿಗ ಗಂಗೊಳ್ಳಿ ಅವರ ಸುಪುತ್ರ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೃಷಿ ಇಲಾಖೆ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಆತ್ಮಯೋಜನೆಯಡಿ ನೇರಗುತ್ತಿಗೆ ಆಧಾರದಲ್ಲಿ ಸಹಾಯಕ ತಾಂತ್ರಿಕ ವ್ಯವಸ್ಥಾಪಕರು-01 ಹುದ್ದೆಯ ನೇಮಕಾತಿಗಾಗಿ ಷರತ್ತಿಗೊಳಪಟ್ಟು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕೃಷಿ/ಕೃಷಿ ಸಂಬಂಧಿತ ವಿಷಯಗಳಲ್ಲಿ ಪದವಿ ಹಾಗೂ ಕ್ಷೇತ್ರ ಮಟ್ಟದಲ್ಲಿ ಒಂದು ವರ್ಷ ಹೆಚ್ಚಿನ ಅನುಭವವುಳ್ಳ ಅಭ್ಯರ್ಥಿಗಳು ಜನವರಿ 18 ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರು, ಸಿ ಬ್ಲಾಕ್, 2ನೇ ಮಹಡಿ, ಕೊಠಡಿ ಸಂಖ್ಯೆ: ಸಿ-304, ರಜತಾದ್ರಿ, ಮಣಿಪಾಲ, ಉಡುಪಿ ಜಿಲ್ಲೆ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವವು ಇತ್ತೀಚಿಗೆ ನೆರವೇರಿತು. ಬೈಂದೂರು ವಿಧಾನಸಭಾ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ನಾವುಂದ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನರಸಿಂಹ ದೇವಾಡಿಗ ಅವರು ಅಧ್ಯಕ್ಷತೆ ವಹಿಸಿದರು. ನಾವುಂದ ಗ್ರಾಮ ಪಂಚಾಯತ್ ಸದಸ್ಯರಾದ ಜಾನಕಿ ಮೊಗವೀರ ಮತ್ತು ರಾಮ ಪೂಜಾರಿ ಅವರು ಅತಿಥಿಗಳಾಗಿ ಆಗಮಿಸಿದ್ದರು. ಕಾಲೇಜು ಪ್ರಾಂಶುಪಾಲರಾದ ಸುಜಾತಾ ಎಂ., ಉಪಪ್ರಾಂಶುಪಾಲಾರದ ಶಶಿಕಲಾ ನಾಯ್ಕ್, ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷರಾದ ಪ್ರವೀಣ್ ಪೂಜಾರಿ, ಎಸ್. ಡಿ. ಎಂ. ಸಿ. ಅಧ್ಯಕ್ಷರಾದ ಸತೀಶ್ ಚಂದನ್ ಉಪಸ್ಥಿತರಿದ್ದರು. ಗಣಿತ ಅಧ್ಯಾಪಕಿಯಾದ ಮುಕ್ತಾ ಅವರು ಸ್ವಾಗತಿಸಿದರು. ಗಣಿತ ಉಪನ್ಯಾಸಕಿಯಾದ ಸಾವಿತ್ರಿ ಎಸ್. ಅವರು ಧನ್ಯವಾದ ಸಮರ್ಪಿಸಿದರು. ಇತಿಹಾಸ ಉಪನ್ಯಾಸಕರಾದ ಗಣೇಶ ಎಂ. ಮತ್ತು ಅಧ್ಯಾಪಕರಾದ ಕರುಣಾಕರ್ ಶೆಟ್ಟಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೈಂದೂರು ತಾಲೂಕಿನವರಾಗಿದ್ದು, ಪ್ರಥಮ ವರ್ಷದ ಇಂಜಿನಿಯರಿಂಗ್ ಶಿಕ್ಷಣಕ್ಕೆ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ 3.5 ಲಕ್ಷ ರೂ. ವಿದ್ಯಾರ್ಥಿ ಸಹಾಯ ಧನ ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ನಿಂದ ವಿತರಿಸಲಾಯಿತು. ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ದೂರವಾಣಿ ಇಲಾಖೆಯ ನಿವೃತ್ತ ಹಿರಿಯ ಅಧಿಕಾರಿ ಜಿ. ಶ್ರೀಧರ ಶೆಟ್ಟಿ ವಂಡ್ಸೆ, ಸಹಾಯ ಧನ ವಿತರಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಿದರು. “ಸಾಮಾಜಿಕ ಧುರೀಣ ದಿವಂಗತ ಗಿಳಿಯಾರು ಕುಶಲ ಹೆಗ್ಡೆ ಅವರು ವಿದ್ಯಾರ್ಥಿಗಳನ್ನು ತುಂಬ ಪ್ರೀತಿಸುತ್ತಿದ್ದರು. ಕಷ್ಟದಲ್ಲಿದ್ದವರಿಗೆ ಸಹಾಯ ಮಾಡುತ್ತಿದ್ದರು. ವಿದ್ಯಾರ್ಥಿ ಜೀವನ ಬಹಳ ಅಮೂಲ್ಯವಾಗಿದ್ದು, ವಿಶ್ವಾಸಾರ್ಹವಾದ ಬದುಕು ನಡೆಸುವ ಹೆಜ್ಜೆಯಾಗಿದೆ. ಪೋಷಕರು ವಿದ್ಯಾರ್ಥಿಗಳಲ್ಲಿ ಉತ್ತಮ ಸಂಸ್ಕೃತಿ ಬೆಳೆಸಬೇಕು. ವಿದ್ಯಾರ್ಥಿಗಳೂ ಶಿಕ್ಷಣ ಪೂರೈಸಿ ಸಂಪಾದನೆಯ ಶಕ್ತಿ ಪಡೆದಾಗ ಸಮಾಜ ಮೆಚ್ಚುವಂತೆ ಜೀವನದಲ್ಲಿ ಸಾಧನೆ ಮಾಡಬೇಕು.” ಎಂದರು. ಹಿರಿಯ ವಕೀಲರಾದ ಜಿ. ಸಂತೋಷ ಕುಮಾರ್ ಶೆಟ್ಟಿ ಮಾತನಾಡಿ, “ಹೆತ್ತವರು ಮಕ್ಕಳ ಭವಿಷ್ಯಕ್ಕಾಗಿ ಕಷ್ಟಪಟ್ಟು ಉನ್ನತ ಶಿಕ್ಷಣ ಒದಗಿಸಿದಾಗ ಅವರು ಹೆಮ್ಮೆ ಪಡುವಂತೆ, ಸಮಾಜ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮಹಿಳಾ ಮಂಡಲ ರಿ. ಕೋಟ ತನ್ನ ಅರವತ್ತರ ಸಡಗರದಲ್ಲಿ ನೀಡುವ ಸಾಧನ ಪುರಸ್ಕಾರವನ್ನು ಕೋಟ ವಿವೇಕ ಬಾಲಕಿಯರ ಪ್ರೌಢಶಾಲೆಯ ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಾದ ನರೇಂದ್ರ ಕುಮಾರ್ ಕೋಟ ಅವರಿಗೆ ನೀಡಿ ಗೌರವಿಸಲಿದೆ. ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕ, ಕಥೆಗಾರ, ವಿಮರ್ಶಕ, ಲೇಖಕ, ಅಂಕಣ ಬರಹಗಾರ, ನಿರೂಪಕ, ನಟ, ರಾಜ್ಯ ಸಂಪನ್ಮೂಲ ವ್ಯಕ್ತಿ, ಕಿರುಚಿತ್ರಗಳ ನಿರ್ಮಾಪಕ, ಶಿಕ್ಷಣ ಕ್ಷೇತ್ರಗಳ ಕಲಿಕೆಯ ನಾವೀನ್ಯ ವಿನ್ಯಾಸಗಾರ, ಕಾದಂಬರಿಕಾರ 50 ಮಿಕ್ಕಿದ ಲೇಖನಗಳ ಮತ್ತು 28 ಕೃತಿಗಳ ರಚನಕಾರ ಕಾರಂತ ಥೀಮ್ ಪಾರ್ಕಿನ ಕಾರ್ಯಕ್ರಮಗಳ ರೂವಾರಿ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡ ’ಸುಗಂಧಿ’ ಚಲನಚಿತ್ರದ ನಿರ್ಮಾಪಕ ಸದಾ ಹೊಸ ಆವಿಷ್ಕಾರದ ಚಿಂತಕರಾಗಿರುವ ಶ್ರೀಯುತರಿಗೆ ನೀಡಿ ಗೌರವಿಸಲಾಗುವುದೆಂದು ಪ್ರಕಟಣೆ ತಿಳಿಸಿದೆ.
