ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯ ಉಡುಪಿ, ಬ್ರಹ್ಮಾವರ, ಕುಂದಾಪುರ ಹಾಗೂ ಕಾರ್ಕಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್, ಪುರಸಭೆ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ ಒಟ್ಟು 57 ಅಂಗನವಾಡಿ ಕಾರ್ಯಕರ್ತೆ ಹಾಗೂ 136 ಅಂಗನವಾಡಿ ಸಹಾಯಕಿಯರ ಗೌರವಸೇವೆ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿ, ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿರುತ್ತದೆ. ಪ್ರಸ್ತುತ ಅರ್ಜಿ ಸಲ್ಲಿಸುವ ಕಾಲಾವಧಿ ಮುಗಿದಿದ್ದು, ಅರ್ಜಿ ಸಲ್ಲಿಸುವಾಗ ವೆಬ್ಸೈಟ್ನಲ್ಲಿ ಒಟ್ಟು 4 ವಿವಿಧ ಹಂತಗಳಿದ್ದು, ಇದರಲ್ಲಿ ಕೆಲವು ಅರ್ಜಿದಾರರಿಗೆ 01ನೇ ಹಂತದಲ್ಲಿಯೇ “Application Successfully Uploaded’’ಎಂಬ ಮೇಸೆಜ್ ಅವರುಗಳ ಮೊಬೈಲ್ಗೆ ಸ್ವೀಕೃತವಾಗಿರುವುದರಿಂದ ಅರ್ಜಿಗಳನ್ನು ಪೂರ್ಣಗೊಳಿಸಿರುವುದಿಲ್ಲ. ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ 400 ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗೆ 156 ಅಪೂರ್ಣ ಅರ್ಜಿಗಳು ಸ್ವೀಕೃತವಾಗಿರುತ್ತದೆ. ಅರ್ಜಿ ಸಲ್ಲಿಸುವ 4 ಹಂತಗಳನ್ನು ಪೂರ್ಣಗೊಳಿಸದೇ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ಡಿಸೆಂಬರ್ 26 ರಿಂದ 2025 ರ ಜನವರಿ 5 ರ ವರೆಗೆ ಅರ್ಜಿಗಳನ್ನು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಎಲ್ಲಾ ತಂಬಾಕು ಉತ್ಪನ್ನಗಳ ಮಾರಾಟಗಾರರು, ಕಡ್ಡಾಯವಾಗಿ ಪ್ರತ್ಯೇಕ ಪರವಾನಿಗೆ ಪಡೆದು ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಬೇಕು ಮತ್ತು ಶಾಲಾ ಆವರಣದಿಂದ ಕನಿಷ್ಟ 100 ಮೀಟರ್ ಅಂತರದಲ್ಲಿ ಯಾವುದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದು ಕೋಟ್ಪಾ 2003 ರ ಕಾಯಿದೆಯಂತೆ ನಿಷೇಧಿಸಲಾಗಿದೆ. ತಂಬಾಕು ಉತ್ಪನ್ನಗಳ ಮಾರಾಟ ಕಂಡುಬಂದಲ್ಲಿ ಉದ್ದಿಮೆ ಪರವಾನಿಗೆ ರದ್ದುಪಡಿಸಿ, ದಂಡ ವಿಧಿಸಿ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಬೈಂದೂರು ಪಟ್ಟಣ ಪಂಚಾಯತ್ನ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಾ. ಶಿವರಾಮ ಕಾರಂತ ಪ್ರತಿಷ್ಠಾನ ರಿ.ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ರಿ. ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ, ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಕೊಡಮಾಡುವ ನಾಲ್ಕನೇ ವರ್ಷದ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಜನತಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿ.ಯು.ಸಿ. ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ತನ್ವಿತಾ ವಿಶೇಷ ಪುರಸ್ಕಾರಕ್ಕೆ ಆಯ್ಕೆಯಾಗಿರುತ್ತಾರೆ. ತನ್ವಿತಾ ಪ್ರೌಢ ಶಿಕ್ಷಣದ ಸಮಯದಲ್ಲಿ ಯೋಗ ಸ್ಪರ್ಧೆಯಲ್ಲಿ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿಗಳನ್ನು ಪಡೆದಿರುತ್ತಾಳೆ. ಈ ಸಾಧನೆಯನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರವನ್ನು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಡಿ.28 ರಂದು ಮಧ್ಯಾಹ್ನ 2.30 ಗಂಟೆಗೆ ಪ್ರದಾನ ಮಾಡಲಾಗುವುದೆಂದು ಡಾ. ಶಿವರಾಮ ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷರಾದ ಆನಂದ್ ಸಿ. ಕುಂದರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ವ್ಯಾಪ್ತಿಯಲ್ಲಿ ಬರುವ 45- ಗಂಗೊಳ್ಳಿ ಗ್ರಾಮ ಪಂಚಾಯತ್ಗೆ ಸಂಬಂಧಿಸಿದಂತೆ, ಕರ್ನಾಟಕ ಪಂಚಾಯತ್ ರಾಜ್ (ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ) ನಿಯಮ 1995 ರ ನಿಯಮ (3) ಹಾಗೂ ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 45(1) ರಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ. ಗಂಗೊಳ್ಳಿ ಗ್ರಾಮ ಪಂಚಾಯತ್ನ ಮೊದಲ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ ಆಯ್ಕೆ ಮಾಡುವ ಸಲುವಾಗಿ ಕುಂದಾಪುರ ತಾಲೂಕು ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಮೊ.ನಂ: 9449143880 ಅವರನ್ನು ಗೊತ್ತುಪಡಿಸಿದ ಅಧಿಕಾರಿಯಾಗಿ ನೇಮಕ ಮಾಡಿ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಆದೇಶಿಸಿರುತ್ತಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಗ್ರಾಹಕರ ರಕ್ಷಣೆಗಾಗಿಯೇ ಅನೇಕ ಹಕ್ಕು ಮತ್ತು ಕಾನೂನುಗಳಿವೆ. ಇವುಗಳನ್ನು ಪ್ರತಿಯೊಬ್ಬರೂ ತಿಳಿದುಕೊಂಡಾಗ ಮಾತ್ರ ದೈನಂದಿನ ಸರಕು ಮತ್ತು ಸೇವೆಗಳನ್ನು ಪಡೆಯುವಲ್ಲಿ ಕೆಲವೊಮ್ಮೆ ಎದುರಿಸುವ ವಂಚನೆ ಮತ್ತು ಮೋಸದಿಂದ ಪಾರಾಗಲು ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್ ಹೇಳಿದರು. ಅವರು ಅಂದು ನಗರದ ಎಸ್.ಎಮ್.ಎಸ್.ಪಿ ಸಂಸ್ಕೃತ ಅಧ್ಯಯನ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ, ಬಳಕೆದಾರರ ವೇದಿಕೆ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಹಕರ ಸುರಕ್ಷತೆಯ ಕಾಯ್ದೆಯ ಪ್ರಕಾರ ಗ್ರಾಹಕರಾಗಿ ಮಾರುಕಟ್ಟೆಯಲ್ಲಿ ಯಾವುದೇ ವಸ್ತು ಖರೀದಿಸುವಾಗ ಅದರ ಗುಣಮಟ್ಟ, ಸುರಕ್ಷತೆ, ವಸ್ತುವಿನ ಉತ್ಪಾದನೆ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ಹೊಸ ಬಸ್ ನಿಲ್ದಾಣದಿಂದ ಉಡುಪಿ ಕಡೆಗೆ ಹೊರಟಿದ್ದ ಬಸ್ಸಿನಲ್ಲಿ ಪ್ರಯಾಣಿಕರೋರ್ವರಿಗೆ ಹೃದಯಾಘಾತವಾಗಿದ್ದು, ಚಾಲಕನ ಸಮಯಪ್ರಜ್ಞೆಯಿಂದ ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರದಿಂದ ಉಡುಪಿ ಕಡೆಗೆ ಹೊರಟಿದ್ದ ಸಮತಾ ಬಸ್ಸಿನಲ್ಲಿ ಕುಳಿತಿದ್ದ ಕೋಟ ನಿವಾಸಿ ವೆಂಕಟ್ ಎಂಬವರಿಗೆ ತೀವ್ರ ಪ್ರಮಾಣದ ಹೃದಯಾಘಾತದಿಂದ ತನ್ನ ಕಣ್ಣನ್ನು ಮುಚ್ಚಿದ್ದು ಮಾತನಾಡಿಸಿದಾಗ ಯಾವುದೇ ಪ್ರತಿಕ್ರಿಯೆ ನೀಡದೇ ಅಸ್ವಸ್ಥರಾಗಿದ್ದರು. ಇದನ್ನು ಗಮನಿಸಿದ ನಿರ್ವಾಹಕ ತಕ್ಷಣ ಈ ವಿಷಯವನ್ನು ಚಾಲಕ ರಿತೇಶ್ ಗೆ ತಿಳಿಸಿದ್ದು, ಆತ ಬಸ್ಸನ್ನು ನೇರಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲೇ ಇದ್ದ ರಿಕ್ಷಾ ಚಾಲಕರ ಸಹಾಯದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ವೆಂಕಟ್ ಅವರಿಗೆ ಪ್ರಥಮ ಚಿಕಿತ್ಸೆ ನೀಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ತಕ್ಷಣ ಅಂಬುಲೆನ್ಸ್ ನಲ್ಲಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಬಸ್ ನಿರ್ವಾಹಕ ಮತ್ತು ಚಾಲಕನ ಸಮಯಪ್ರಜ್ಞೆಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.25: ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಎಂ. ಮಹೇಶ್ ಹೆಗ್ಡೆ ನೇತೃತ್ವದ ಕಾಂಗ್ರೆಸ್ ಬೆಂಬಲಿಯ ಗುಂಪು 13 ಸ್ಥಾನಗಳನ್ನು ಪಡೆದುಕೊಂಡಿದೆ. ಇಂದು 12 ಸ್ಥಾನಗಳಿಗೆ ಚುನಾವಣೆ ನಡೆದಿದ್ದು 1 ಸ್ಥಾನ ಅವಿರೋಧ ಆಯ್ಕೆಯಾಗಿದೆ. ಸಾಮಾನ್ಯ ಕ್ಷೇತ್ರದಿಂದ ಮಹೇಶ ಹೆಗ್ಡೆ ಮೊಳಹಳ್ಳಿ, ಎಚ್. ಹರಿಪ್ರಸಾದ್ ಶೆಟ್ಟಿ, ಜಗನ್ನಾಥ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ಲವಕರ ಶೆಟ್ಟಿ, ಅನಿಲ್ ಕುಮಾರ್ ಶೆಟ್ಟಿ, ಶ್ರೀಮತಿ ಇಂದಿರಾ ಯು ಶೆಟ್ಟಿ ಆಯ್ಕೆಯಾದರು. ಮಹಿಳಾ ಮೀಸಲು ಸ್ಥಾನದಿಂದ ವಾಣಿ ಆರ್ ಶೆಟ್ಟಿ, ಚೈತ್ರ ಅಡಪ ಆಯ್ಕೆಯಾದರು. ಹಿಂದುಳಿದ ವರ್ಗ ‘ಎ’ ಮೀಸಲು ಕ್ಷೇತ್ರದಿಂದ ದಿನೇಶ ಮೊಗವೀರ ಆಯ್ಕೆಯಾದರೆ, ಹಿಂದುಳಿದ ವರ್ಗ ‘ಬಿ’ ಮೀಸಲು ಷೇತ್ರದುಂದ ಉಮೇಶ ಶೆಟ್ಟಿ ಆಯ್ಕೆಯಾದರು. ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದಿಂದ ಗಣೇಶ ಆಯ್ಕೆಯಾದರು. ಈ ಹಿಂದೆಯೇ ಪರಿಶಿಷ್ಟ ಪಂಗಡದ ಮೀಸಲು ಕ್ಷೇತ್ರಕ್ಕೆ ಗಿರೀಶ್ ಅವಿರೋಧ ಆಯ್ಕೆಯಾಗಿದ್ದರು. ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಚುನಾವಣಾ ಅಧಿಕಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಜೇಸಿಐ ಉಪ್ಪುಂದದ 21ನೇ ವರ್ಷದ ಪದಪ್ರದಾನ ಸಮಾರಂಭ ಮಂಗಳವಾರ ಮಾತ್ರಶ್ರೀ ಸಭಾಭವನ ಇಲ್ಲಿನ ಜರುಗಿತು. 2024ನೇ ಸಾಲಿನ ಅಧ್ಯಕ್ಷರಾದ ಜೇಸಿ ಮಂಜುನಾಥ್ ದೇವಾಡಿಗರು ನೂತನ ಅಧ್ಯಕ್ಷರಾದ ಜೇಸಿ ಭರತ್ ದೇವಾಡಿಗ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ವೇದಿಕೆಯಲ್ಲಿ ವಲಯಾಧ್ಯಕ್ಷರಾದ ಜೇಸಿಐ ಸೆನೆಟರ್ ಅಭಿಲಾಷ್ ಬಿ.ಎ, ಪದಪ್ರಧಾನ ಅಧಿಕಾರಿ ಅಶ್ವಿನಿ ಐತಾಳ್, ಬಿ.ಎಸ್ ಸುಮುಖ ಗ್ರೂಪ್ ಆಫ್ ಕಂಪೆನಿ ಮ್ಯಾನೇಜಿಂಗ್ ಡೈರೆಕ್ಟರ್ ಸುರೇಶ್ ಶೆಟ್ಟಿ, ಸರಕಾರಿ ನೌಕರರ ಸಂಘ ಬೈಂದೂರು ತಾಲೂಕು ಅಧ್ಯಕ್ಷ ಶೇಖರ್ ಪೂಜಾರಿ, ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಶೆಟ್ಟಿ ಕಾರಿಕಟ್ಟೆ, ಸ್ಥಾಪಕಾಧ್ಯಕ್ಷರಾದ ದಿವಾಕರ್ ಶೆಟ್ಟಿ, ಜೇಸಿರೇಟ್ ಸುಮನಾ ದೇವಾಡಿಗ, ಕಾರ್ಯದರ್ಶಿ ನರಸಿಂಹ ದೇವಾಡಿಗ ಮೊದಲಾವರು ಉಪಸ್ಥಿತರಿದ್ದರು. ನೂತನ ಅಧ್ಯಕ್ಷರು ತಮ್ಮ ಮುಂದಿನ ಯೋಜನೆಗಳ ಕುರಿತು ಮಾಹಿತಿ ನೀಡಿದರು. 2024ನೇ ಸಾಲಿನ ಅಧ್ಯಕ್ಷರಾದ ಮಂಜುನಾಥ್ ದೇವಾಡಿಗ ಸ್ವಾಗತಿಸಿ ಗತವರ್ಷದ ವರದಿ ಮಂಡಿಸಿ ತಮ್ಮ ಅವಧಿಯಲ್ಲಿ ಕಾರ್ಯನಿರ್ವಹಿಸಿದ ಪೂರ್ವಾಧ್ಯಕ್ಷರು ಹಾಗು ಸದಸ್ಯರನ್ನು ಅಭಿನಂದಿಸಿದರು. ಶ್ರೀಲತಾ ದೇವಾಡಿಗ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.25: ಕಾಶ್ಮೀರದ ಮೆಂಧರ್ ಎಂಬಲ್ಲಿ ನಡೆದ ಸೇನಾ ಟ್ರಕ್ ಅಪಘಾತದಲ್ಲಿ ಐವರು ಯೋಧರು ಮೃತಪಟ್ಟಿದ್ದು, ಈ ಪೈಕಿ ತಾಲೂಕಿನ ಬೀಜಾಡಿಯ ಅನೂಪ್ ಪೂಜಾರಿ (31) ಅವರು ಕೂಡ ಹುತಾತ್ಮರಾಗಿದ್ದಾರೆ. ಮಂಗಳವಾರ ಸಂಜೆ ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್ ಗ್ರಾಮದ ಗಡಿ ನಿಯಂತ್ರಣ ರೇಖೆಯ ಬಳಿ ಯೋಧರು ಪ್ರಯಾಣಿಸುತ್ತಿದ್ದ ಟ್ರಕ್ ರಸ್ತೆಯಿಂದ 350 ಅಡಿ ಆಳದ ಕಣಿವೆಗೆ ಉರುಳಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಸೇನಾ ವಾಹನಲ್ಲಿ 10 ಯೋಧರು ಪ್ರಯಾಣಿಸುತ್ತಿದ್ದು, ಈ ಪೈಕಿ 5 ಮಂದಿ ಹುತಾತ್ಮರಾಗಿದ್ದಾರೆ. ಉಳಿದವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರಗೆ ದಾಖಲಿಸಲಾಗಿದೆ. ಹುತಾತ್ಮ ಯೋಧ ಅನೂಪ್ ಪೂಜಾರಿ ಅವರು ಮರಾಠ ಲೈಟ್ ಇನ್ಫೆಂಟ್ರಿ ಬಟಾಲಿಯನ್ನಲ್ಲಿ ಸೇವೆ ಕಳೆದ 13 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಬೀಜಾಡಿ ನಿವಾಸಿ ಚಂದು ಪೂಜಾರಿ, ನಾರಾಯಣ ಪೂಜಾರಿ ದಂಪತಿಗಳ ಪುತ್ರರಾದ ಅನುಪ್ ಅವರಿಗೆ ವಿವಾಹವಾಗಿದ್ದು 2 ವರ್ಷದ ಹೆಣ್ಣು ಮಗುವಿದೆ. ಕಳೆದ ತಿಂಗಳು ರಜೆಗೆ ಊರಿಗೆ ಬಂದಿದ್ದ ಅವರು ಡಿ.15…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಲ್ಫ್: ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಯುಎಇ ನಲ್ಲಿ ನೆಲೆಸಿರುವ ಕುಂದಗನ್ನಡಿಗರಿಗಾಗಿ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಸ್ಪರ್ದೆಗಳು ಭಾನುವಾರ ದುಬಾಯಿನ ಜಬಿಲ್ ಪಾರ್ಕ್ ನಲ್ಲಿ ನಡೆಯಿತು. ಅನಿವಾಸಿ ಕುಂದಗನ್ನಡಿಗರು ಗಲ್ಫ್ ರಾಷ್ಟ್ರಗಳಲ್ಲಿ ತಮ್ಮ ಭಾಷಿಗರನ್ನು ಒಗ್ಗೂಡಿಸುದರ ಜೊತೆಗೆ ಭಾಷೆಯ ಅಸ್ಥಿತ್ವವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ಹಲವಾರು ವರ್ಷಗಳಿಂದ ಕೊಲ್ಲಿ ರಾಷ್ಟ್ರದಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡುಬರುತ್ತಿದೆ. ಅಂತೆಯೇ ಪ್ರತಿ ವರ್ಷದಂತೆ ಈ ವರ್ಷವು ಕೂಡ ವಿಶೇಷ ರೀತಿಯಲ್ಲಿ ಫಾಮಿಲಿ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಸ್ಫರ್ಧೆಗಳು ಅದ್ದೂರಿಯಾಗಿ ನಡೆಯಿತು.ಕಾರ್ಯಕ್ರಮದಲ್ಲಿ 100ಕ್ಕೂ ಹೆಚ್ಚು ಅರಬ್ಬ ನಾಡಿನಲ್ಲಿ ನೆಲೆಸಿರುವ ಕುಂದಗನ್ನಡಿಗರು ಭಾಗವಹಿಸಿದ್ದರು. ಆಟೋಟ ಸ್ಫರ್ಧೆಗಳಿಗೆ ಐದು ತಂಡಗಳಾಗಿ ಮಾಡಲಾಗಿದ್ದು ಪ್ರತೀ ತಂಡಗಳಿಗೆ ಕುಂದಾಪುರದ ವಿಶೇಷತೆಗಳಲ್ಲಿ ಒಂದಾದ ಪಂಚಗಂಗಾವಳಿ ನದಿಗಳಾದ ಸೌರ್ಪಣಿಕ , ವರಾಹಿ , ಖೇಟಾ , ಕುಬ್ಜಾ ಮತ್ತು ಚಕ್ರಾ ಎಂದು ಕುಂದಾಪುರದಲ್ಲಿ ಸಂಗವಿಸುವ ಐದು…
