ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಜಪಾನ್‌ನ ಸೋಜೊ ವಿಶ್ವವಿದ್ಯಾಲಯದ ಫ್ಯಾಕಲ್ಟಿ ಆ್ಯಂಡ್ ಗ್ರಾಜ್ಯುವೇಟ್ ಸ್ಕೂಲ್ ಆಫ್ ಎಂಜಿನಿಯರಿಂಗ್ ಜೊತೆ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜು ಮಹತ್ವದ ಶೈಕ್ಷಣಿಕ ವಿನಿಮಯ ಒಡಂಬಡಿಕೆ ಸೋಮವಾರ ಮಾಡಿಕೊಂಡಿತು.ಶಿಕ್ಷಣ, ಸಂಶೋಧನೆ, ಬೋಧಕ, ಆಡಳಿತ ವರ್ಗ, ಸಂಶೋಧನಾ ಪ್ರಕಟಣೆಗಳು ಸೇರಿದಂತೆ ವಿವಿಧ ವಲಯದಲ್ಲಿ ಪರಸ್ಪರ ಸ್ವಾತಂತ್ರವನ್ನು ಕಾಯ್ದುಕೊಂಡು ವಿನಿಮಯ, ಬೌದ್ಧಿಕ ಆಸ್ತಿಗಳ ರಕ್ಷಣೆ ಸೇರಿದಂತೆ ಶೈಕ್ಷಣಿಕ ಅಭ್ಯುದಯದ ದೃಷ್ಟಿಯ ಐದು ವರ್ಷಗಳ ಒಪ್ಪಂದಕ್ಕೆ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ.ಪೀಟರ್ ಫೆರ್ನಾಂಡಿಸ್ ಹಾಗೂ ಫ್ಯಾಕಲ್ಟಿ ಆ್ಯಂಡ್ ಗ್ರಾಜ್ಯುವೇಟ್ ಸ್ಕೂಲ್ ಆಫ್ ಎಂಜಿನಿಯರಿಂಗ್ ಅಧ್ಯಕ್ಷ ಡಾ.ನಗಾಟೊ ಒನೊ ಸಹಿ ಮಾಡಿದರು. ಶೈಕ್ಷಣಿಕ ವಿನಿಮಯಕ್ಕೆ ಸಂಬಂಧಿಸಿದ ಬೋಧನೆ, ವಸತಿ ಸೌಕರ್ಯ, ಆರ್ಥಿಕ ಜವಾಬ್ದಾರಿ, ಬೌದ್ಧಿಕ ಆಸ್ತಿ ರಕ್ಷಣೆ, ಅವಧಿ, ತಿದ್ದುಪಡಿ ಸೇರಿದಂತೆ ಪ್ರಮುಖ ವಿಚಾರಗಳನ್ನು ಒಡಂಬಡಿಕೆ ಒಳಗೊಂಡಿದೆ.ಜಪಾನ್‌ನ ಸೋಜೊ ವಿಶ್ವವಿದ್ಯಾಲಯದ ಫ್ಯಾಕಲ್ಟಿ ಆ್ಯಂಡ್ ಗ್ರಾಜ್ಯುವೇಟ್ ಸ್ಕೂಲ್ ಆಫ್ ಎಂಜಿನಿಯರಿಂಗ್‌ನ ಪರಿಣಾಮಕಾರಿ ಎಂಜಿನಿಯರಿಂಗ್‌ನ ಪ್ರಗತಿ ಸಂಶೋಧನಾ ಕೇಂದ್ರದ ಮುಖ್ಯಸ್ಥರಾದ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಐಸಿಎಂಆರ್-2024ರಲ್ಲಿ ಪರಿಸರ ನಾಯಕತ್ವಕ್ಕಾಗಿ ಎಂಐಟಿ ಮಾಹೆ ಮಣಿಪಾಲದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಡಾ. ಬಾಲಕೃಷ್ಣ ಎಸ್. ಮದ್ದೋಡಿ ಅವರಿಗೆ ಪ್ರತಿಷ್ಠಿತ ಗ್ಲೋಬಲ್ ಎಕ್ಸಲೆನ್ಸ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಪರಿಸರ ಶಿಕ್ಷಣ ಮತ್ತು ಸಾಮಾಜಿಕ ಸ್ವಯಂ ಸೇವಾ ಕ್ಷೇತ್ರದ ಅವರ ದಣಿವರಿಯದ ಸಮರ್ಪಣೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆಮಾಡಲಾಗಿತ್ತು. ಭಾರತ ಸರ್ಕಾರದ ಎಸ್.ಇ.ಎ.ಸಿ/ಎಸ್.ಇ.ಐ.ಎ.ಎ ಸಮಿತಿಯ ಸದಸ್ಯರಾಗಿರುವ ಡಾ. ಬಾಲಕೃಷ್ಣ ಮದ್ದೋಡಿ ಅವರು ಸುಸ್ಥಿರತೆ ಮತ್ತು ಪರಿಸರ ಸಂರಕ್ಷಣೆಯ ಪ್ರಬಲ ಪ್ರತಿಪಾದಕರಾಗಿದ್ದರು. ಕಳೆದ ಕೆಲವು ವರ್ಷಗಳಲ್ಲಿ ಬಾಲಕೃಷ್ಣ ಮದ್ದೋಡಿ ಅವರು ಕೈಗೊಂಡ ಪರಿಸರ ಸಂರಕ್ಷಣೆ ಬಗೆಗಿನ ಕಾರ್ಯಗಳು, 100 ವರ್ಷಗಳಿಗಿಂತ ಹೆಚ್ಚು ಹಳೆಯದಾದ 5 ಮರಗಳನ್ನು ಮರು ನೆಡುವಿಕೆ, 2000ಕ್ಕಿಂತ ಹೆಚ್ಚಿನ ಸಸಿಗಳನ್ನು ನೆಡುವುದು, 60 ಮರಗಳನ್ನು ಕಡಿಯುವುದನ್ನು ತಡೆಗಟ್ಟುವಲ್ಲಿ ಅವರ ಕೊಡುಗೆಯನ್ನು ಸಮೀಕ್ಷೆ ತೀರ್ಪುಗಾರರು ಪರಿಗಣಿಸಿ ಆಯ್ಕೆಮಾಡಲಾಗಿದೆ. ಹಸಿರು ಅಭಿವೃದ್ಧಿ, ಗ್ರೀನಥಾನ್ ಕಾರ್ಯಕ್ರಮದ ಮೂಲಕ ಕರ್ನಾಟಕದ ಸುಮಾರು 20,000 ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿ ಕಾರ್ಯಕ್ರಮ ಅವರು ಸಂಘಟಿಸಿದ್ದಾರೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರದ ವಿಧಾನಸಭಾ ವ್ಯಾಪ್ತಿಯ 22 ಪ್ರೌಢಶಾಲೆಗಳಲ್ಲಿ ನಡೆಯುವ ಉಡುಪಿ ಯಕ್ಷ ಶಿಷ್ಯ ಟ್ರಸ್ಟ್ ಆಯೋಜಿಸುತ್ತಿರುವ ಕಿಶೋರ್ ಯಕ್ಷಗಾನ ಸಂಭ್ರಮ 2024ರ ಪ್ರದರ್ಶನಗಳ ಉದ್ಘಾಟನೆ ಸಾಲಿಗ್ರಾಮ ಶ್ರೀ ಗುರು ನರಸಿಂಹ ದೇವಸ್ಥಾನದ ವೇದಿಕೆಯಲ್ಲಿ ನಡೆಯಿತು. ಶ್ರೀ ಗುರು ನರಸಿಂಹ ದೇವಸ್ಥಾನದ ಅಧ್ಯಕ್ಷರಾದ ಡಾ. ಕೆ.ಎಸ್. ಕಾರಂತರು ಜ್ಯೋತಿ ಬೆಳಗಿ ಉದ್ಘಾಟಿಸಿ ಮಾತನಾಡಿ, ಈ ಭಾಗದ ಪ್ರತಿಯೊಬ್ಬರ ಮಾತಿನಲ್ಲಿ, ಬರವಣಿಗೆಯಲ್ಲಿ ಯಕ್ಷಗಾನದ ದಟ್ಟ ಪ್ರಭಾವ ಗೋಚರವಾಗುತ್ತದೆ. ಇಂತಹ ನಮ್ಮ ಮಣ್ಣಿನ ಅಪೂರ್ವ ಕಲೆಯನ್ನು ಮಕ್ಕಳಿಗೆ ಪರಿಚಯಿಸುವ ಯಕ್ಷ ಶಿಕ್ಷಣ ಅಭಿಯಾನ ಯಶಸ್ವಿಯಾಗಲೆಂದು ನುಡಿದರು. ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ಆನಂದ ಸಿ.ಕುಂದರ್, ರಾಜಶೇಖರ್ ಹೆಬ್ಬಾರ್, ವಾಸುದೇವ ಕಾರಂತ, ಜಗದೀಶ ನಾವುಡ, ಶ್ರೀನಿವಾಸ ಉಪಾಧ್ಯಾಯ ಅಭ್ಯಾತರಾಗಿ ಪಾಲ್ಗೊಂಡು ಶುಭ ಕೋರಿದರು. ಯಕ್ಷಗಾನ ಕಲಾರಂಗದ ಎಸ್.ವಿ.ಭಟ್, ಎಚ್.ಎನ್. ಶೃಂಗೇಶ್ವರ, ಗಣೇಶ್ ಬ್ರಹ್ಮಾವರ್, ಗಣಪತಿ ಭಟ್, ನಾಗರಾಜ ಹೆಗಡೆ ಭಾಗವಿಸಿದರು. ನಾರಾಯಣ ಎಂ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಕಾರು ಢಿಕ್ಕಿಯಾಗಿ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಟ ಗೊಬ್ಬರಬೆಟ್ಟು ಬೆಲ್ಲದ ಗಣಪತಿ ದೇಗುಲದ ಸಮೀಪ ನಡೆದಿದೆ. ಸಾಲಿಗ್ರಾಮ ಬಡಾಹೋಳಿ ನಿವಾಸಿ, ಮಣೂರು ಜನತಾ ಫಿಶ್‌ಮಿಲ್‌ನ ಉದ್ಯೋಗಿ ಸುರೇಶ್ ಮರಕಾಲ (48) ಸಾವನ್ನಪ್ಪಿದ್ದಾರೆ. ಸುರೇಶ್ ಅವರು ಅಪರಾಹ್ನ ಕೆಲಸ ಮುಗಿಸಿ ಕೋಟದಿಂದ- ಸಾಲಿಗ್ರಾಮದ ಮನೆ ಕಡೆ ಸೈಕಲ್‌ನಲ್ಲಿ ತೆರಳು ತ್ತಿರುವಾಗ ಮುಡೇಶ್ವರದಿಂದ ಆಗಮಿಸುತ್ತಿದ್ದ ಕಾರು ವೇಗವಾಗಿ ಬಂದು ಸೈಕಲ್‌ಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು. ಅವರು ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಟೇಶ್ವರ ಗ್ರಾಮದ ದಿನೇಶ್, ಹರೀಶ್ ಅವರು ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಿಂದ 10 ಲಕ್ಷ ರೂ. ಸಾಲ ಪಡೆದಿದ್ದು, ಅದಕ್ಕಾಗಿ ನಕಲಿ ದಾಖಲೆ ಸೃಷ್ಟಿಸಿ, ವಂಚಿಸಿರುವುದಾಗಿ ಸೊಸೈಟಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮೇಬಲ್ ಡಿ’ ಅಲ್ಮೇಡಾ ದೂರು ನೀಡಿದ್ದಾರೆ. ಆರೋಪಿಗಳಾದ ದಿನೇಶ್ ಹಾಗೂ ಹರೀಶ್ ಅವರು ಸಾಲಕ್ಕೆ ಗೋಪಾಡಿ ಗ್ರಾಮದ 0.05 ಎಕ್ರೆ ಆಸ್ತಿಯನ್ನು ಅಡಮಾನ ಇರಿಸಿದ್ದು, ಇದನ್ನು ಕೃಷಿಯೇತರ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಲಾಗಿತ್ತು. ಗೋಪಾಡಿ ಗ್ರಾ.ಪಂ. ಪಿಡಿಒ ಗಣೇಶ ಹಾಗೂ ಕಾರ್ಯದರ್ಶಿ ಹರಿಶ್ಚಂದ್ರ ಈ ಸ್ವತ್ತು ಸಂಖ್ಯೆ ಮರೆಮಾಚಿ, ಎರಡು ನಕಲಿ ಈ ಸ್ವತ್ತು ಸಂಖ್ಯೆ ಸೃಷ್ಟಿಸಿ ಬೇನಾಮಿ ಕ್ರಯ ಪತ್ರ ಮಾಡಿ ಸೊಸೈಟಿಗೆ ಮೋಸ ಮಾಡಿರುವುದಾಗಿ ಅವರು ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಕುಂದಾಪುರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ : ವಿದ್ಯಾರ್ಥಿಗಳಿಗೆ ಜೀವನ ನಿಮ್ಮ ಕೈಯಲ್ಲಿರುವುದರಿಂದ ಆತ್ಮ ವಿಶ್ವಾಸವನ್ನು ಕಳೆದುಕೊಳ್ಳದೇ ಚಿಕ್ಕ ಚಿಕ್ಕ ಕನಸು ಕಾಣುವುದನ್ನು ಬಿಟ್ಟು ದೊಡ್ಡ ದೊಡ್ಡ ಕನಸು ಕಾಣುವ ಮೂಲಕ ವಿಭಿನ್ನ ಯೋಚನೆ, ಪ್ರಯತ್ನದ ಮೂಲಕ ಸಾಧನೆ ಮಾಡುವ ಮನಸ್ಸು ನಿಮ್ಮದಾಗಲಿ ಎಂದು ಮೂಡುಬಿದಿರೆ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ ಅವರು ಹೇಳಿದರು. ಅವರು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. ಕಾರ್ಯಕ್ರಮವನ್ನು ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಚರಲ್ ಟ್ರಸ್ಟ್ನ ಅಧ್ಯಕ್ಷರಾದ ಕೆ. ರಾಮಕೃಷ್ಣ ಕಾಮತ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಅಂಕಗಳಿಸಿ ಯಶಸ್ವಿ ಬದುಕನ್ನು ರೂಪಿಸಿಕೊಳ್ಳಿ ಎಂದು ಶುಭ ಹಾರೈಸಿದರು. ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅವರು ಶ್ರೀ ವೆಂಕಟರಮಣ ಸಂಸ್ಥೆಯ ಅಭಿವೃದ್ಧಿ ಪಥದ ಕುರಿತು ಮಾತನಾಡಿದರು. ವೇದಿಕೆಯಲ್ಲಿ ಟ್ರಸ್ಟಿ ರತ್ನಾಕರ ಶೆಣೈ, ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪುಸ್ತಕ ಲೋಕದಲ್ಲಿ ಹೊಸ ಇತಿಹಾಸ ಸೃಷ್ಟಿ ಮಾಡುತ್ತಿರುವ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಕ್ರಿಯೇಟಿವ್ ಪುಸ್ತಕ ಮನೆ ವತಿಯಿಂದ 6 ಪುಸ್ತಕಗಳ ಅನಾವರಣ ಹಾಗೂ ’ಕ್ರಿಯೇಟಿವ್ ಪುಸ್ತಕ ಪ್ರಶಸ್ತಿ-2024ರ’ ಪ್ರದಾನ ಸಮಾರಂಭದಲ್ಲಿ ಖ್ಯಾತ ಬರಹಗಾರ ಪದ್ಮರಾಜ್ ದಂಡಾವತಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್‌ನ ಶ್ರೀಕೃಷ್ಣರಾಜ ಪರಿಷತ್ ಮಂದಿರದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ ಖ್ಯಾತ ಸಾಹಿತಿಗಳಾದ ಜೋಗಿ, ಬಿ. ಆರ್. ಲಕ್ಷ್ಮಣ್ ರಾವ್, ಡಾ. ನಾ.ಸೋಮೇಶ್ವರ ಅವರು 6 ಪುಸ್ತಕಗಳನ್ನು ಬಿಡುಗಡೆ ಮಾಡಿದರು. ಕ್ರಿಯೇಟಿವ್ ಕಾಲೇಜು ಹಾಗೂ ಪುಸ್ತಕ ಮನೆ ಸಂಸ್ಥಾಪಕರಲ್ಲಿ ಒಬ್ಬರಾದ ಅಶ್ವಥ್ ಎಸ್ ಎಲ್ ಪ್ರಾಸ್ತವಿಕ ಮಾತನಾಡಿ, ಕರಾವಳಿಯಿಂದ ರಾಜಧಾನಿಗೆ ನಮ್ಮ ಪುಸ್ತಕ ಪಯಣಕ್ಕೆ ಇದು ಸಂಭ್ರಮದ ಕ್ಷಣ. ಪುಸ್ತಕ ಮನೆಯನ್ನು ರಾಜ್ಯ ಮಟ್ಟಕ್ಕೆ ತರುವ ಜತೆಗೆ ಪುಸ್ತಕ ಓದುವ ಬೆಳೆಸುವ, ಯುವ ಜನತೆಗೆ ಪುಸ್ತಕವನ್ನು ಓದುವ ಬೆಳೆಸುವ ದೊಡ್ಡ ಜವಾಬ್ದಾರಿಯನ್ನು ಹೊಂದಿದೆ. ಕ್ರಿಯೇಟಿವ್ ಶಿಕ್ಷಣ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ವಿದ್ಯಾರ್ಥಿಗಳು ಪಾಠದ ಜೊತೆಗೆ ಪಾಠೇತರ ಚಟುವಟಿಕೆಗಳಲ್ಲಿ ಕೂಡ ಹೆಚ್ಚು ತೊಡಗಿಸಿಕೊಳ್ಳಬೇಕು. ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು. ಇದರಿಂದ ವಿದ್ಯಾರ್ಥಿಗಳ ಮಾನಸಿಕ ಬೆಳವಣಿಗೆ ಆಗಿ ವಿದ್ಯಾರ್ಥಿ ಜೀವನ ಉಜ್ವಲವಾಗಲು ಸಹಾಯಕವಾಗುತ್ತದೆ. ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗಳಲ್ಲಿ ಅತ್ಯುತ್ತಮ ವಿದ್ಯಾಭ್ಯಾಸ ದೊರೆಯುತ್ತಿದ್ದು, ಇಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ಸಮಾಜದಲ್ಲಿ ಉನ್ನತ ಸ್ಥಾನಮಾನ ಪಡೆಯುವಲ್ಲಿ ಸಫಲರಾಗಿದ್ದಾರೆ ಎಂದು ಜಿ.ಎಸ್.ವಿ.ಎಸ್. ಅಸೋಸಿಯೇಶನ್ ಕಾರ್ಯದರ್ಶಿ ಎಚ್. ಗಣೇಶ ಕಾಮತ್ ಹೇಳಿದರು. ಗಂಗೊಳ್ಳಿಯ ಸ.ವಿ. ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಶನಿವಾರ ಜರಗಿದ ಗಂಗೊಳ್ಳಿಯ ಸ. ವಿ. ಆಂಗ್ಲ ಮಾಧ್ಯಮ ಶಾಲೆಯ 25ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ವಿವೇಕಾನಂದ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಹಳೆ ವಿದ್ಯಾರ್ಥಿ ಕಿರಣ್ ಎನ್. ಸ್ವಸ್ತಿ ವಾಚನಗೈದರು. ಮುಖ್ಯ ಅತಿಥಿಯಾಗಿದ್ದ ಸೌಭಾಗ್ಯಲಕ್ಷ್ಮೀ ವಿ. ಕಾಮತ್ ಬಹುಮಾನ ವಿತರಿಸಿದರು. ಶಾಲೆಯ ಶಿಕ್ಷಕ-ರಕ್ಷಕ ಸಮಿತಿ ಉಪಾಧ್ಯಕ್ಷ ಜಿ. ವಿಠಲ ಶೆಣೈ, ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ.ಸಿ. ಶುಭ ಹಾರೈಸಿದರು. ಪ್ರಾಥಮಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ 36ನೇ ವಾರ್ಷಿಕೋತ್ಸವ ಸಮಾರಂಭವು ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರಾದ ಶರಣ್ ಕುಮಾರ್ ಅವರು ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಛಲ ಮತ್ತು ಗುರಿಯಿಂದ ಮುನ್ನಡೆದು ಯಶಸ್ಸು ಸಾಧಿಸುವ ಬಗ್ಗೆ ತಿಳಿಸಿ, ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಧತ್ತಿ ನಿಧಿ ಬಹುಮಾನಗಳನ್ನು ವಿತರಿಸಿದರು. ಇನ್ನೋರ್ವ ಮುಖ್ಯ ಅತಿಥಿಗಳಾದ ಸಂದೀಪನ್ ಆಂಗ್ಲಮಾಧ್ಯಮ ಶಾಲೆಯ ಅಧ್ಯಕ್ಷರಾಗಿರುವ ಸಂಜೀತ್ ಪ್ರಕಾಶ್ ರಾವ್ ಅವರು ಮಾತನಾಡಿ, ಪೋಷಕರು ತಮ್ಮ ಮಕ್ಕಳೊಂದಿಗೆ ದಿನದ ಸ್ವಲ್ಪ ಸಮಯವನ್ನಾದರೂ ಮೀಸಲಿಟ್ಟು ಅವರ ಗುರಿ ಸಾಧನೆಗೆ ಪ್ರೋತ್ಸಾಹ ನೀಡಬೇಕೆಂದು ತಿಳಿಸಿದರು. ಇವರೂ ಕೂಡ ಅಧಿಕ ಅಂಕ ಗಳಿಸಿದವರಿಗೆ ದತ್ತಿ ನಿಧಿ ಬಹುಮಾನಗಳನ್ನು ವಿತರಿಸಿದರು. ಆಡಳಿತ ಮಂಡಳಿಯ ಖಜಾಂಚಿ ಅವರಾದ ಕೆ. ಲಕ್ಷ್ಮೀ ನಾರಾಯಣ ಶೆಣೈ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಪೂರ್ವ ಪ್ರಾಥಮಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಕೃತಿಕ ವಿಕೋಪ ಸೇರಿದಂತೆ ಮುಂತಾದ ತುರ್ತು ಸಂದರ್ಭದಲ್ಲಿ ಗೃಹರಕ್ಷಕದಳದ ಸಿಬ್ಬಂದಿಗಳು ತಮ್ಮ ಜೀವವನ್ನು ಪಣಕಿಟ್ಟು ತಕ್ಷಣ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ಸಮಾಜಕ್ಕೆ ನಿಸ್ವಾರ್ಥ ಸೇವೆ ನೀಡುತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಜಿಲ್ಲಾ ಗೃಹರಕ್ಷಕ ದಳ ಕಚೇರಿ ಆವರಣದಲ್ಲಿ ಜಿಲ್ಲಾ ಗೃಹರಕ್ಷಕ ದಳ ಉಡುಪಿ ಜಿಲ್ಲೆ ಇವರ ವತಿಯಿಂದ ನಡೆದ ಅಖಿಲ ಭಾರತ ಗೃಹರಕ್ಷಕ ದಿನಾಚರಣೆ ಕಾರ್ಯಕ್ರಮವು ಉದ್ಘಾಟಿಸಿ ಮಾತನಾಡಿದರು. ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸ್ ಇಲಾಖೆಯ ಜೊತೆಗೂಡಿ, ಅವರಿಗೆ ಸಹಕಾರ ನೀಡಿ, ಕರ್ತವ್ಯ ನಿರ್ವಹಿಸುತ್ತಿರುವ ಗೃಹರಕ್ಷಕ ದಳದ ಕಾರ್ಯ ಶ್ಲಾಘನೀಯ ಎಂದ ಅವರು, ಮುಂದಿನ ದಿನಗಳಲ್ಲಿ ಗೃಹ ರಕ್ಷಕ ದಳದ ಸಿಬ್ಬಂದಿಗಳೂ ಇದೇ ರೀತಿಯಲ್ಲಿ ಸಾರ್ವಜನಿಕರಿಗೆ ಉತ್ತಮ ಸೇವೆಗಳನ್ನು ನೀಡುವಂತೆ ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಮಾತನಾಡಿ, ಗೃಹರಕ್ಷಕ ದಳವು ಪೊಲೀಸ್ ಇಲಾಖೆಯ ಒಂದು ಪ್ರಮುಖ ಅಂಗವಾಗಿದ್ದು, ಬೇರೆ ಇಲಾಖೆಯನ್ನು ಹೋಲಿಸಿದರೆ…
