Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಕ್ರಿಯೆಗಳು ಕುಂಠಿತವಾಗಿ ನಡೆಯುತ್ತಿವೆ. ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ಅನಾನುಕೂಲ ಉಂಟಾಗಿವೆ. ಕಾಮಗಾರಿಯ ವೇಗದ ಮಿತಿಯನ್ನು ಹೆಚ್ಚಿಸಿ, ಶೀಘ್ರದಲ್ಲಿ ಪೂರ್ಣಗೊಳಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 66, 169 ಹಾಗೂ 169ಎ ರಲ್ಲಿ ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳು, ಅಸಮರ್ಪಕ ದಾರಿದೀಪ ನಿರ್ವಹಣೆ, ಚರಂಡಿಗಳ ನಿರ್ಮಾಣ, ಪಾದಚಾರಿ ಮಾರ್ಗದಲ್ಲಿ ಇಂಗು ಗುಂಡಿಗಳು ಹಾಗೂ ಇನ್ನಿತರ ಸಮಸ್ಯೆಗಳ ಕುರಿತು ಚರ್ಚಿಸುವ ಸಲುವಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರಾವಳಿ ಜಂಕ್ಷನ್‌ನಿಂದ ಮಲ್ಪೆವರೆಗಿನ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಅಗತ್ಯವಿರುವ ಭೂಮಿಯ ಸ್ವಾಧೀನ ಪ್ರಕ್ರಿಯೆ ಕಾರ್ಯವು ತುಂಬಾ ವಿಳಂಬವಾಗುತ್ತಿದೆ. ಭೂಮಿಯ ಮಾಲೀಕರುಗಳಿಗೆ ವೈಜ್ಞಾನಿಕವಾಗಿ ಪರಿಹಾರದ ಮೊತ್ತವನ್ನು ಆದ್ಯತೆಯ ಮೇಲೆ ನೀಡಿ, ಭೂಮಿಯನ್ನು ಸ್ವಾಧೀನಪಡಿಸಿಕೊಂಡು ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ರಾಷ್ಟ್ರೀಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ಕರಾವಳಿಯ ಸಪ್ತ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೋಟೇಶ್ವರದಲ್ಲಿ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಮನ್ಮಹಾರಥೋತ್ಸವ ಭಾನುವಾರ ಸಡಗರ ಸಂಭ್ರಮದಿಂದ ಜರುಗಿತು. ಬೆಳಗ್ಗೆ ತಂತ್ರಿಗಳು ಶ್ರೀದೇವರ ರಥಾರೋಹಣ ಪೂರ್ವ ವಿಧಿಗಳನ್ನು ನೆರವೇರಿಸಿದ ಬಳಿಕ ರಥೋತ್ಸವಕ್ಕೆ ಚಾಲನೆ ನೀಡಿದರು. ಶ್ರೀದೇವರಿಗೆ ಶತರುದ್ರಾಭಿಷೇಕ ಇನ್ನಿತರ ಧಾರ್ಮಿಕ ವಿಧಿ ನಡೆದ ಬಳಿಕ ಸಹಸ್ರಾರು ಭಕ್ತರ ಜಯಘೋಷದೊಂದಿಗೆ ಭವ್ಯ ರಥೋತ್ಸವ ನಡೆಯಿತು. ಅಪಾರ ಸಂಖ್ಯೆಯ ಜನಸ್ತೋಮ ರಥೋತ್ಸವದಲ್ಲಿ ಪಾಲ್ಗೊಂಡು ಶ್ರೀಕೋಟಿಲಿಂಗೇಶ್ವರ ದೇವರ ದರ್ಶನ ಪಡೆದು ಪುನೀತರಾದರು. ಸಂಜೆ ಬಸವನಗುಡಿ ಸನ್ನಿಧಿಯಿಂದ ಶ್ರೀದೇವರಿಗೆ ಅಭಿಮುಖವಾಗಿ ರಥ ಏಳೆದ ಬಳಿಕ ರಥಾಅವರೋಹಣದ ವಿಧಿ ಸಮಾಪನಗೊಂಡವು. ದೇವಳದ ರಥೋತ್ಸವದ ಸಂದರ್ಭ ಗರುಡ ದರ್ಶನ ಆಗುವುದು ವಾಡಿಕೆ. ರಥೋತ್ಸವಕ್ಕೆ ಚಾಲನೆ ಸಿಗುತ್ತಿರುವಂತೆಯೇ ಗರುಡ ದರ್ಶನ ಆಗಿದ್ದು ರಥಕ್ಕೆ ಎರಡು ಸುತ್ತು ಬಂದು ನಿರ್ಗಮಿಸುತ್ತದೆ. ಗರುಡದರ್ಶನ ವೀಕ್ಷಿಸಲು ಸಹಸ್ರಾರು ಭಕ್ತರು ನೆರೆದಿದ್ದು ಗರುಡ ರಥಕ್ಕೆ ಸುತ್ತು ಹೊಡೆಯುತ್ತಿರುವಂತೆಯೇ ರೋಮಾಂಚನಗೊಂಡರು. ನವ ವಧುವರರು ವಾಡಿಕೆಯಂತೆ ಹಬ್ಬಕ್ಕೆ ಬಂದು ಕೊಡಿ (ಕಬ್ಬು) ಕೊಂಡು…

Read More

ಕುಂದಾಪ್ರ ಡಾಟ ಕಾಂ ಸುದ್ದಿ.ಉಡುಪಿ: ಸಿರಿಧಾನ್ಯಗಳನ್ನು ಸಾರ್ವಜನಿಕರು ತಮ್ಮ ದೈನಂದಿನ ಆಹಾರ ಸೇವನೆಯಲ್ಲಿ ಬಳಕೆಮಾಡಿಕೊಂಡಲ್ಲಿ ಉತ್ತಮ ಆರೋಗ್ಯವನ್ನು ಹೊಂದಲು ಸಹಕಾರಿಯಾಗುತ್ತದೆ. ಇದಕ್ಕೆ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಕರೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಸಿರಿಧಾನ್ಯಗಳನ್ನು ನಮ್ಮ ಪೂರ್ವಜರು ಈ ಹಿಂದೆ ಪಾರಂಪರಿಕ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವುದರೊಂದಿಗೆ ಸಾವಯವ ಗೊಬ್ಬರವನ್ನು ಉಪಯೋಗಿಸಿ, ಅಲ್ಪ ಪ್ರಮಾಣದ ನೀರಿನ ಬಳಕೆಯೊಂದಿಗೆ ಬೆಳೆಗಳನ್ನು ಬೆಳೆಯುತ್ತಿದ್ದರು. ಇವುಗಳಲ್ಲಿ ಪೌಷ್ಠಿಕತೆಯು ಸತ್ವಗಳು ಸಹ ಹೆಚ್ಚು ಇರುತ್ತದೆ. ಇವುಗಳನ್ನು ಜನಸಾಮಾನ್ಯರು ಪ್ರತಿನಿತ್ಯದ ಆಹಾರ ಪದಾರ್ಥಗಳಲ್ಲಿ ಬಳಕೆಮಾಡಿಕೊಳ್ಳುವುದು ಒಳಿತು ಎಂದರು. ಸಾರ್ವಜನಿಕರಲ್ಲಿ ಸಿರಿಧಾನ್ಯಗಳ ಬಳಕೆಯ ಮಹತ್ವವನ್ನು ತಿಳಿಸುವ ಉದ್ದೇಶದಿಂದ ರಾಜ್ಯ ಮಟ್ಟದಲ್ಲಿ ವಿವಿಧ ರೀತಿಯ ಸಿರಿಧಾನ್ಯಗಳ ಸ್ಪರ್ಧೆ ಹಾಗೂ ಸಿರಿಧಾನ್ಯಗಳ ಪ್ರದರ್ಶನಗಳನ್ನು ಆಯೋಜಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಸಿರಿಧಾನ್ಯಗಳನ್ನು ಹೆಚ್ಚಾಗಿ ಬಳಸುವ ಮೂಲಕ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: “ಪಿ.ಯು.ಸಿ ಹಂತದಲ್ಲಿ ಮುಂದಿನ ವ್ಯಾಸಂಗದ ಆಯ್ಕೆಯ‌ ಬಗ್ಗೆ ಗೊಂದಲ, ಅನಿಶ್ಚಿತತೆ ಸಹಜವಾಗಿರುವಂಥದ್ದು. ವಿದ್ಯಾರ್ಥಿಗಳು ಚೆನ್ನಾಗಿ ಅಭ್ಯಸಿಸಿದರೆ ಕಡಿಮೆ ವೆಚ್ಚದಲ್ಲಿ ಮೆಡಿಕಲ್/ ಇಂಜಿನಿಯರಿಂಗ್ ಶಿಕ್ಷಣ ಪಡೆಯಬಹುದು. ಜ್ಞಾನ ಪಡೆದುಕೊಳ್ಳುವ ಪ್ರಯತ್ನದಲ್ಲಿ ಯಶಸ್ವಿಯಾದರೆ ಹಣ ತಾನಾಗೇ ಬರುತ್ತದೆ. ನನ್ನ ಈ ಸಾಧನೆಗೆ ಆರ್. ಎನ್. ಎಸ್ ಕಾಲೇಜು ಪ್ರೇರಣೆ. ಇಲ್ಲಿನ ಉಪನ್ಯಾಸಕರ ಸತತ ಪ್ರೋತ್ಸಾಹದಿಂದ ನನ್ನ‌ ಹಾಗೆ ಹಲವಾರು ವಿದ್ಯಾರ್ಥಿಗಳು ಇಂದು ಉತ್ತಮ ಸಾಧನೆ ಮಾಡಿದ್ದಾರೆ” ಎಂದು ಮಂಗಳೂರಿನ ಫಾದರ್ ಮುಲ್ಲರ್ಸ್ ಮೆಡಿಕಲ್ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಪಕರಾಗಿರುವ  ಡಾ. ಶ್ರೀಶಂಕರ್ ಬಾಯಿರಿ ಅವರು  ಅಭಿಪ್ರಾಯಪಟ್ಟರು. ಅವರು ಆರ್. ಎನ್.ಎಸ್ ವೈಭವ – ಕುಂದಾಪುರದ ಆರ್. ಎನ್. ಶೆಟ್ಟಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಆಚರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಸಂಚಾಲಕರಾದ ಬಿ.ಎಮ್ ಸುಕುಮಾರ ಶೆಟ್ಟಿ ಅವರು‌ ಮಾತನಾಡಿ, ಯಶಸ್ಸಿನ ಹೊಸದಿಶೆಯತ್ತ ಸಾಗುತ್ತಿರುವ ಆರ್. ಎನ್. ಎಸ್ ಪಿ.ಯು ಕಾಲೇಜಿನ ಬಗ್ಗೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಸ್ವಾಭಾವಿಕವಾಗಿ ಲಭ್ಯವಿರುವ ಸೌರಶಕ್ತಿ ಬಳಕೆಯಿಂದ ವಿದ್ಯುತ್ ಶಕ್ತಿ ಉತ್ಪಾದನೆಯ ಸೋಲಾರ್ ಘಟಕಗಳನ್ನು ಜಿಲ್ಲೆಯ ಪ್ರತಿಯೊಂದು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಉಚಿತವಾಗಿ ಅಳವಡಿಸಿದ ಮಣಿಪಾಲ ಟೆಕ್ನೋಲಾಜಿಸ್ ಮತ್ತು ಸೆಲ್ಕೋ ಫೌಂಡೇಶನ್ ಸಂಸ್ಥೆಗಳ ಕಾರ್ಯ ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಅಜ್ಜರಕಾಡು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಶ್ರೀ ಕೃಷ್ಣ ಸಭಾಂಗಣದಲ್ಲಿ, ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಜಿಲ್ಲೆಯ ಆರೋಗ್ಯ ಕೇಂದ್ರಗಳಲ್ಲಿ ಸೋಲಾರ್ ಘಟಕ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಮಣಿಪಾಲ ಟೆಕ್ನೋಲಾಜಿಸ್ ಮತ್ತು ಸೆಲ್ಕೋ ಫೌಂಡೇಶನ್ ಸಂಸ್ಥೆಗಳ ಮುಖ್ಯಸ್ಥರಿಗೆ ಸೂರ್ಯ ನಮಸ್ಕಾರ– ಅಭಿನಂದನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ 60 ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಜಿಲ್ಲೆಯ ಮಣಿಪಾಲ ಟೆಕ್ನೋಲಾಜಿಸ್ ಮತ್ತು ಸೆಲ್ಕೋ ಫೌಂಡೇಶನ್ ಸಂಸ್ಥೆಗಳು ಸೋಲಾರ್ ಅಳವಡಿಸುವ ಮೂಲಕ ಅನುಕೂಲ ಮಾಡಿಕೊಟ್ಟಿವೆ. ಕಚೇರಿಯ ಕೆಲಸ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನದ ವತಿಯಿಂದ ಕಳೆದ ಕೆಲವು ವರ್ಷಗಳಿಂದ ನಾಡಿನ ಶಿಕ್ಷಣ ಹಾಗೂ ಕೃಷಿ ಕ್ಷೇತ್ರದ ಸಾಧಕರಿಗೆ ನೀಡುವ ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರಶಸ್ತಿಗೆ ಈ ಬಾರಿ ಹಿರಿಯ ಕನ್ನಡ ಸಂಶೋಧಕ, ವಿಮರ್ಶಕ, ಅನುವಾದಕ ಹಾಗೂ ವಿಶ್ರಾಂತ ಕುಲಪತಿಗಳಾದ ಡಾ. ಬಿ.ಎ. ವಿವೇಕ ರೈ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಬಿ. ಅಪ್ಪಣ್ಣ ಹೆಗ್ಡೆ ಜನ್ಮ ದಿನೋತ್ಸವ- 90 ಸಮಿತಿಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವ ಮತ್ತು ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನದ ಅಧ್ಯಕ್ಷರಾದ ರಾಮ್‌ ಕಿಶನ್ ಹೆಗ್ಡೆ ಜಂಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಳೆದ ಆರು ದಶಕಗಳಿಂದ ಅಧ್ಯಯನ, ಅಧ್ಯಾಪನ ಹಾಗೂ ಸಂಶೋಧನಾ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಡಾ. ಬಿ.ಎ. ವಿವೇಕ ರೈ ಅವರು ಕನ್ನಡ ಹಾಗೂ ತುಳು ಭಾಷೆಯ ಅಭಿವೃದ್ಧಿಗಾಗಿ ಸಾಕಷ್ಟು ಕೊಡುಗೆಯನ್ನು ನೀಡಿದ್ದಾರೆ. ಮೈಸೂರು ವಿಶ್ವವಿದ್ಯಾನಿಯದ ಮಂಗಳೂರು ಸ್ನಾತಕ್ಕೋತ್ತರ ಕೇಂದ್ರ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಎಸ್.ವಿ.ಪಿ ಕನ್ನಡ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪುರಾಣ ಪ್ರಸಿದ್ಧ ಕೋಟೇಶ್ವರ ಮಹತೋಭಾರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಡಿ.15ರಂದು ದೇವರ ಶ್ರೀಮನ್ಮಹಾ ರಥೋತ್ಸವ ನಡೆಯಲಿದೆ. ಬೆಳಗ್ಗೆ 11.45ಕ್ಕೆ ಮಕರ ಲಗ್ನ ಸುಮುಹೂರ್ತದಲ್ಲಿ ಶ್ರೀ ಮನ್ಮಹಾ ರಥೋತ್ಸವ, ಡಿ.16ರಂದು ಚೂರ್ಣೋತ್ಸವ, ಅವಭ್ರತ ಸ್ನಾನ ಮುಂತಾದ ಧಾರ್ಮಿಕ ಕಾರ್ಯಕ್ರಮದೊಂದಿಗೆ ಸ್ಥಳೀಯ ನಾನಾ ಭಜನಾ ಮಂಡಳಿಗಳ ನೇತೃತ್ವದಲ್ಲಿ ಭಜನೆ ಹಾಗೂ ಮಂಗಲೋತ್ಸವ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮ ಅಂಗವಾಗಿ ಡಿ.15ರಂದು ರಾತ್ರಿ 8ಕ್ಕೆ ಮಿತ್ರದಳದ ಮಿತ್ರೆಯರಿಂದ ‘ತನನಂ ತನನಂ’ ನೃತ್ಯ ವೈವಿಧ್ಯ ಹಾಗೂ ಡಿ.16ರಂದು ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ ತಾಳಮದ್ದಳೆ ದಕ್ಷಯಜ್ಞ ಕಾರ್ಯಕ್ರಮ ಶಾಂತಾರಾಮ ನಡೆಯಲಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸುಮಾರು ಮೂರು ದಶಕಗಳ ಕಾಲ ಗಂಗೊಳ್ಳಿ ಪಂಚಾಯಿತಿಯಲ್ಲಿ ಅಧಿಕಾರ ನಡೆಸುತ್ತಿದ್ದ ಬಿಜೆಪಿ ಬೆಂಬಲಿತರ ಸುದೀರ್ಘ ಅವಧಿಯ ಆಳ್ವಿಕೆಯನ್ನು ಕೊನೆಗೊಳಿಸಿ ಕಾಂಗ್ರೆಸ್ ಪಕ್ಷದ ಪರವಾಗಿರುವ ಅಭ್ಯರ್ಥಿಗಳ ಪರ ಮತ ನೀಡಿದ ಗಂಗೊಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಮಗ್ರ ಮತದಾರರಿಗೂ ಕೃತಜ್ಞತೆ ಸಲ್ಲಿಸುವುದಾಗಿ ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ತಿಳಿಸಿದ್ದಾರೆ. ರಾಜ್ಯದ ಪ್ರಮುಖ ಬಂದರು ನಗರಿಗಳಲ್ಲಿ ಒಂದಾಗಿರುವ ಗಂಗೊಳ್ಳಿಯ ಸ್ಥಳೀಯ ಸಮಸ್ಯೆಗಳನ್ನು ಕಡೆಗಣಿಸಿದ್ದರಿಂದ ಹಾಗೂ ಜನರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿ ಕಾರ್ಯಗಳು ಕಳೆದ ವರ್ಷಗಳಲ್ಲಿ ನಡೆಯದೆ ಇದ್ದುದರಿಂದ ಗಂಗೊಳ್ಳಿ ಪ್ರಬುದ್ಧ ಮತದಾರರು, ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಟ್ಟು ಕಾಂಗ್ರೆಸ್ ಪರವಾದ ಅಭ್ಯರ್ಥಿಗಳಿಗೆ ಹೆಚ್ಚಿನ ಮತ ನೀಡುವ ಮೂಲಕ ಐತಿಹಾಸಿಕ ನಿರ್ಧಾರ ಹಾಗೂ ಬದಲಾವಣೆ ಮಾಡಿದ್ದಾರೆ. ಗಂಗೊಳ್ಳಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಹಗಲಿರುಳು ಶೃಮಿಸಿದ ಪಕ್ಷದ ಕಾರ್ಯಕರ್ತರು, ವೀಕ್ಷಕರು ಹಾಗೂ ಮುಖಂಡರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕೋಟೇಶ್ವರದ ಕೃಷ್ಣಾಪುರ ಸರಕಾರಿ ಪದವಿಪೂರ್ವ ಕಾಲೇಜಿನ ಸಮಾಜಶಾಸ್ತ್ರ ಉಪನ್ಯಾಸಕ ರವಿಚಂದ್ರ ಭಂಡಾರಿ ಅವರಿಗೆ ಚೆನ್ನೈನ ವಿಮೆನ್ಸ್ ಕ್ರಿಶ್ಚಿಯನ್ ಕಾಲೇಜು ಮತ್ತು ಬೋಧಿ ಇಂಟರ್ನ್ಯಾಷನಲ್ ಜರ್ನಲ್ ಇಂಡಿಯಾ  ಪ್ರಶಸ್ತಿ ಲಭಿಸಿದೆ. ಇವರುಗಳು ಶಿಕ್ಷಣ ಕ್ಷೇತ್ರದಲ್ಲಿ ಸಾಧಿಸಿದ ಅಮೋಘ ಸೇವೆಗಾಗಿ ಕೊಡಮಾಡುವ ಬೋಧಿ ಇಂಟರ್ನ್ಯಾಷನಲ್ ಅಕಾಡೆಮಿಕ್ ಆಂಡ್ ರಿಸರ್ಚ್ ಎಕ್ಸಲೆನ್ಸ್ ಅವಾರ್ಡ್ಸ್ -2024 ಇದರ ಬೋಧಿ ಶ್ರೇಷ್ಟ ಶಿಕ್ಷಣ ತಜ್ಞ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಸಾಧಿಸಬೇಕಾದರೆ ವಿಭಿನ್ನವಾಗಿ ಆಲೋಚಿಸುವ ಶಕ್ತಿಯನ್ನು ಬೆಳೆಸಿಕೊಳ್ಳಬೇಕು. ಕಲಿಯಲು ಮನಸ್ಸಿನ ಹಸಿವಿರಬೇಕು, ಕಲಿಕಬೇಕೆಂಬ ತುಡಿತವಿರಬೇಕು. ಕಲಿಕೆಯಲ್ಲಿ ಫೋಕಸ್ ಮಾಡಬೇಕು. ಕಷ್ಟಪಟ್ಟಾದರೂ ಕಲಿಕೆಯಲ್ಲಿ ಮನಸ್ಸು ನೀಡಬೇಕು. ಮನಸ್ಸನ್ನು ಹಿಡಿತದಲ್ಲಿಟ್ಟುಕೊಂಡು ವಿದ್ಯಾಭ್ಯಾಸ ಮಾಡಬೇಕು. ವಿದ್ಯಾರ್ಥಿ ಜೀವನದಲ್ಲಿ ಬರುವ ಪ್ರತಿಯೊಂದು ಸವಾಲುಗಳನ್ನು ಧೈರ್ಯವಾಗಿ ಎದುರಿಸಿ ಸಾಧಿಸುವ ಛಲವನ್ನು ಹೊಂದಬೇಕು. ವಿದ್ಯೆ ನಮ್ಮ ಸಮಸ್ಯೆಗಳಿಗೆ ಪರಿಹಾರವಲ್ಲ. ಉನ್ನತ ಶಿಕ್ಷಣ ಜೀವನೋಪಾಯವನ್ನು ಕಲಿಸಿದರೆ, ಬಾಲ್ಯದಲ್ಲಿ ದೊರೆಯುವ ಶಿಕ್ಷಣ ನಾವು ಹೇಗೆ ಜೀವಿಸಬಹುದು ಎಂಬುದನ್ನು ಕಲಿಸುತ್ತದೆ ಎಂದು ಇಸ್ರೋದ ಗ್ರೂಪ್ ಡೈರೆಕ್ಟರ್ ಡಾ. ನಾಗೇಶ ಎಸ್.ಕೆ. ಹೇಳಿದರು. ಗಂಗೊಳ್ಳಿಯ ಸ.ವಿ. ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಶುಕ್ರವಾರ ಜಿ. ಎಸ್. ವಿ. ಎಸ್. ಅಸೋಸಿಯೇಶನ್ ಪ್ರಾಯೋಜಿತ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಜಿ. ಎಸ್. ವಿ. ಎಸ್. ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಜಿ. ವೆಂಕಟೇಶ…

Read More