Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ,ಜೂ.15: ಬಕ್ರೀದ್ ಹಬ್ಬದ ಆಚರಣೆಯ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿಗಳನ್ನು ಉಲ್ಲಂಘನೆ ಮಾಡಿ ಅನಧೀಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ಮಾಡುವುದು ಕಂಡುಬAದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆಯನ್ನು ತಡೆಗಟ್ಟುವ ಕುರಿತು ಜಿಲ್ಲೆಯಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಅನಧಿಕೃತವಾಗಿ ಜಾನುವಾರುಗಳ ವಧೆ ಹಾಗೂ ಸಾಗಾಣಿಕೆ ಮಾಡುತ್ತಿರುವುದು ಕಂಡುಬAದಲ್ಲಿ ಈ ಬಗ್ಗೆ ಸಂಬಂಧಿಸಿದ ಹತ್ತಿರದ ಪೋಲೀಸ್ ಠಾಣೆಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಅಂದ ಅವರು, ಅಧಿಕೃತ ಜಾನುವಾರು ಸಾಗಾಣಿಕೆ ಮಾಡಬೇಕಾದ ಸಂದರ್ಭದಲ್ಲಿ ಪಶುಸಂಗೋಪನಾ ಇಲಾಖೆ ನಿಗಧಿಪಡಿಸಿದ ನಮೂನೆಯಲ್ಲಿ ಅನುಮತಿ ಹಾಗೂ ಸದ್ರಿ ವ್ಯಾಪ್ತಿಯ ಪೋಲಿಸ್ ಠಾಣೆಗಳ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದರು. ಅನಧಿಕೃತ ಜಾನುವಾರು ಸಾಗಾಣಿಕೆಯಲ್ಲಿ ವಶಪಡಿಸಿಕೊಂಡ ಜಾನುವಾರುಗಳನ್ನು ಸಂರಕ್ಷಿಸಿ,…

Read More

ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ರಿ. ನಾವುಂದ ಇದರ ನವೀಕೃತ ಪ್ರಧಾನ ಕಛೇರಿ ಹಾಗೂ ಮೇಲಂತಸ್ತಿನ ಕಟ್ಟಡ ಉದ್ಘಾಟನಾ ಸಮಾರಂಭ, ದಿನಾಂಕ : 15.06.2024ನೇ ಶನಿವಾರ ಸಮಯ : ಬೆಳಗ್ಗೆ ಗಂಟೆ 10.30ಕ್ಕೆ ಸ್ಥಳ : ಸಂಘದ ಪ್ರಧಾನ ಕಛೇರಿ ಮುಂಭಾಗದಿಂದ ಕುಂದಾಪ್ರ ಡಾಟ್‌ ಕಾಂ ನೇರಪ್ರಸಾರ ಯಕ್ಷರಾಘವ ಪ್ರತಿಷ್ಠಾನ & ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ಯಕ್ಷಗಾನ. ದಿ. ಕಾಳಿಂಗ ನಾವಡರ ವಿರಚಿತ ಪ್ರಸಂಗ – ನಾಗಶ್ರೀ ಹಿಮ್ಮೇಳ: ಜನ್ಸಾಲೆ ರಾಘವೇಂದ್ರ ಆಚಾರ್ಯ, ಸುನೀಲ್‌ ಭಂಡಾರಿ ಕಡತೋಕ, ಸುಜನ್‌ ಕುಮಾರ್‌ ಹಾಲಾಡಿ.ಮುಮ್ಮೇಳ: ಶಿಥಿಲ – ಕಡಬಾಳು ಉದಯ ಹೆಗಡೆ, ಶುಭ್ರಾಂಗ – ವಿಜಯ ಬೇರೊಳ್ಳಿ, ಶ್ವೇತದತ್ತ – ದರ್ಶನ್‌ ಭಟ್ಟ, ಶೈಥಿಲ್ಯ – ಪವನ ಸಾಣ್ಮನೆ, ಕೈರವ – ರವೀಂದ್ರ ದೇವಾಡಿಗ, ದಾರಿಕೆ – ಸುಬ್ರಹ್ಮಣ್ಯ ಹೆಗ್ಡೆ ಯಲಗುಪ್ಪ, ನಾಗಶ್ರೀ – ಸುಧೀರ್‌ ಉಪ್ಪೂರು, ಸಖಿ – ಸಂತೋಷ ಹೆಂಗವಳ್ಳಿ, ಸಖಿ+ರಾಜ ಭಟ – ಶ್ರೀಧರ ಕುಡ್ಲ

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ರಕ್ತದಾನಿಗಳ ದಿನಾಚರಣೆ ಅಂಗವಾಗಿ ರಕ್ತದಾನ ಶಿಬಿರ ಜರುಗಿತು. ಕಾರ್ಯಕ್ರಮವನ್ನು ಉಡುಪಿಯ ಉಪ ಡ್ರಗ್ಸ್ ನಿಯಂತ್ರಣಾಧಿಕಾರಿ ಶಂಕರ್ ನಾಯ್ಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕುಂದಾಪುರ ತಾಲೂಕು ಘಟಕದ ಅಧ್ಯಕ್ಷ ಜಯಕರ ಶೆಟ್ಟಿ, ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ| ಸತ್ಯನಾರಾಯಣ ಮತ್ತು ರೆಡ್ ಕ್ರಾಸ್ ಸಂಸ್ಥೆ ಕಾಲೇಜಿನ ಕಾರ್ಯಕ್ರಮಾಧಿಕಾರಿಣಿ ವಿದ್ಯಾರಾಣಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಅಧಿಕ ಬಾರಿ ರಕ್ತದಾನ ಮಾಡಿದವರನ್ನು ಗುರುತಿಸಿ ಸನ್ಮಾನಿಸಲಾಯಿತು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: “ಸಂವಹನ ಕಲೆಯೆಂಬುದು ಔಪಚಾರಿಕವಾಗಿ ಮಾತನಾಡುವಾಗ ಮಾತ್ರವಲ್ಲ, ಅನೌಪಚಾರಿಕವಾಗಿ ದಿನನಿತ್ಯ ವ್ಯವಹರಿಸುವಾಗ ಸಭ್ಯತೆಯಿಂದ ಸಂಭೋದಿಸಿ ಮೃದು ಧಾಟಿಯಲ್ಲಿ ಮಾತನಾಡುವಾಗಲೂ ಮನಗಾಣಬೇಕಾದ ವಿಚಾರ” ಎಂದು ತೆಕ್ಕಟ್ಟೆಯ ಕಾಮಾಕ್ಷಿ ಫಾರ್ಮ್ಸ್ ನ ಉದಯೋನ್ಮುಖ ಕೃಷಿ ಉದ್ಯಮಿ ದಿವ್ಯಾ ನಾಯಕ್ ಹೇಳಿದರು. ಕುಂದಾಪುರದ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾದ ‘ಸಂವಹನ ಕಲೆ’ ಉಪನ್ಯಾಸದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಾಲೇಜಿನ ಹಿಂದಿ ವಿಭಾಗದ ಮುಖ್ಯಸ್ಥೆಯಾದ  ಜಯಶೀಲಾ ಪೈ ಸಂಪನ್ಮೂಲ ವ್ಯಕ್ತಿಯನ್ನು ಸಭೆಗೆ ಪರಿಚಯಿಸಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕೃಷಿ ಕ್ಷೇತ್ರದಲ್ಲಿನ ವಿಶಿಷ್ಟ ಪ್ರಯೋಗಗಳಿಗಾಗಿ ದಿವ್ಯಾ ನಾಯಕ್ ಇವರನ್ನು ಗೌರವಿಸಲಾಯಿತು. ಕಾಲೇಜಿನ ಕನ್ನಡ ವಿಭಾಗದ ದೀಪ್ತಿ ಕೆ. ಇವರು ಧನ್ಯವಾದ ಸಲ್ಲಿಸಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕೃಷ್ಣಮೂರ್ತಿ ಡಿ.ಬಿ ಅವರು ಕಾರ್ಯಕ್ರಮ ನಿರೂಪಿಸಿದರು. 

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಜೂನ್ 19 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ರ ವರೆಗೆ ಹೆಬ್ರಿ ತಾಲೂಕು ಕಚೇರಿಯಲ್ಲಿ ಸಾರ್ವಜನಿಕ ಅಹವಾಲು ಮತ್ತು ಲೋಕಾಯುಕ್ತ ಜನಸಂಪರ್ಕ ಸಭೆ ನಡೆಸಲಿದ್ದಾರೆ. ಉಳಿದ ದಿನಗಳಲ್ಲಿಯೂ ಸಹ ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಉಡುಪಿ ಲೋಕಾಯುಕ್ತ ಕಚೇರಿಯ ಪೊಲೀಸ್ ಉಪಾಧೀಕ್ಷಕರು ದೂ.ಸಂಖ್ಯೆ: 0820-2958881, ಮೊ.ನಂ: 9364062581, ಪೊಲೀಸ್ ನಿರೀಕ್ಷಕರು-1 ದೂ.ಸಂಖ್ಯೆ: 0820-2536661, ಮೊ.ನಂ: 9364062695 ಹಾಗೂ ಪೊಲೀಸ್ ನಿರೀಕ್ಷಕರು-2 ದೂ.ಸಂ: 0820-2536661 ಅಥವಾ ಅರ್ಜಿದಾರರು ನಮೂನೆ 1 ಮತ್ತು 2 ರಲ್ಲಿ ಭರ್ತಿ ಮಾಡಿ, ಅಫಿಡವಿಟ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಉಡುಪಿ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರ ಕಚೇರಿಗೆ ಅಥವಾ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್ ಅಂಬೇಡ್ಕರ್ ವೀಥಿ, ಬೆಂಗಳೂರು ಇಲ್ಲಿಗೆ ಸಲ್ಲಿಸಬಹುದಾಗಿದೆ. ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ‘ಮನಸ್ಸಿನೊಳಗೆ ಮಗುತನ ಇದ್ದರೆ ಮಾತ್ರ ದೊಡ್ಡ ಮನುಷ್ಯನಾಗಲು ಸಾಧ್ಯ. ನಾವೆಲ್ಲ ಮನುಷ್ಯರಾಗೋಣ. ಮನುಷತ್ವದ ಮಹಲು ಕಟ್ಟುತ್ತಿರುವ ಮೋಹನ ಆಳ್ವರ ಜೊತೆಯಾಗೋಣ ಎಂದು ನಟ, ರಂಗಕರ್ಮಿ ಅರುಣ್ ಸಾಗರ್ ಹೇಳಿದರು. ವಿದ್ಯಾಗಿರಿಯ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ ವೇದಿಕೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾತನದ ‘ಆಳ್ವಾಸ್ ಸಂಪ್ರದಾಯ ದಿನ- 2024ʼ ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ತಮ್ಮ ಕಂಚಿನ ಕಂಠದಲ್ಲಿ ‘ವಿದ್ಯಾ ಬುದ್ಧಿ ಕಲಿಸಿದ ಗುರುವೇ ಕೊಡು ನಮಗೆ ಮತಿಯ…’ ಸಾಲುಗಳನ್ನು ಹಾಡುತ್ತಲೇ ತಮ್ಮ ಮಾತಿಗೆ ಚಾಲನೆ ನೀಡಿದ ಅವರು, ‘ಆಳ್ವಾಸ್‌ನಲ್ಲೇ ಒಂದು ನಾಡು, ಒಂದು ದೇಶ ಇದೆ. ದೇಶದ ಬೇರೆಡೆ ಇಲ್ಲದ ಗುರುಕುಲ ಆಳ್ವಾಸ್ ಎಂದು ಬಣ್ಣಿಸಿದರು. ಆಳ್ವಾಸ್ ವಿದ್ಯಾರ್ಥಿ ಶಿಲ್ಪಗಳನ್ನು ಕೆತ್ತುವ ತಾಣವಾಗಿದೆ. ಇಲ್ಲಿ ಆಳ್ವರು ಮನುಷತ್ವ ತುಂಬುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಇದು ಊರು ಚಿಕ್ಕದಾದರು ದೊಡ್ಡ ಮನಸ್ಸಿನ ಪ್ರಪಂಚ. ಸಾಹಿತ್ಯ, ಕಲೆ, ಕ್ರೀಡೆ, ಶಿಕ್ಷಣಗಳಿಗೆ ಪ್ರೋತ್ಸಾಹಿಸುವ ಆಳ್ವರು ಹಿರೋಗಿಂತ ದೊಡ್ಡ ಹೀರೋ ಎಂದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಯಾವುದೇ ವ್ಯಕ್ತಿ ಯಶಸ್ಸನ್ನು ಕಾಣಲು ಪರಿಶ್ರಮ ಮತ್ತು ಶಿಸ್ತು ಬಹಳ ಮುಖ್ಯ. ವಿದ್ಯಾರ್ಥಿಗಳು ಶಾಲೆಯ ಕಲಿಕೆಯ ಜೊತೆಯಲ್ಲಿ ಸ್ವಯಂ ಪರಿಶ್ರಮದಿಂದ ಜ್ಞಾನವನ್ನು ಪಡೆದುಕೊಳ್ಳಲು ಪ್ರಯತ್ನಿಸಬೇಕು  ಎಂದು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಕಾರ್ಯದರ್ಶಿ ಸದಾಶಿವ ನಾಯಕ್ ಎನ್  ಹೇಳಿದರು. ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಥಮ ಪಿಯುಸಿ ತರಗತಿಗಳ ಆರಂಭೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಕನ್ನಡ ಉಪನ್ಯಾಸಕ ಹೆಚ್. ಸುಜಯೀಂದ್ರ  ಹಂದೆ ಪಠ್ಯೇತರ  ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು. ಗಣಿತಶಾಸ್ತ್ರ ಉಪನ್ಯಾಸಕರಾದ ಪ್ರವೀಣ್ ಕಾಮತ್ ಕಾಲೇಜಿನ ನೀತಿ ನಿಯಮಗಳ ಬಗ್ಗೆ  ಹಾಗೂ ದೈಹಿಕ ಶಿಕ್ಷಣ ಉಪನ್ಯಾಸಕರಾದ ದೀಕ್ಷಿತ್ ಮೇಸ್ತ ಕಾಲೇಜಿನ ಕ್ರೀಡಾ ಚಟುವಟಿಕೆಗಳ ಬಗೆಗೆ ಮಾಹಿತಿ ನೀಡಿದರು.  ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ ಅಧ್ಯಕ್ಷತೆ ವಹಿಸಿದ್ದರು.  ವಿದ್ಯಾರ್ಥಿ ಪ್ರತಿನಿಧಿಗಳಾಗಿ ಸಮೀಕ್ಷಾ ಮತ್ತು ವಿಶ್ವಾಸ್ ಉಪಸ್ಥಿತರಿದ್ದರು. ಕಾಲೇಜು ಕಛೇರಿಯ ಪ್ರಬಂಧಕಿ ಪ್ರಮೋದ ಪೈ. ಎಮ್. ಜಿ. ಕಛೇರಿ ಸೌಲಭ್ಯಗಳು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಮಳೆಗಾಲದಲ್ಲಿ ಸಂಭವಿಸುವ ಪ್ರಾಕೃತಿಕ ವಿಕೋಪಗಳನ್ನು ತಡೆಯಲು ಸಾಧ್ಯವಿಲ್ಲ. ಆದರೆ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವ ಮೂಲಕ ಅನಾಹುತಗಳನ್ನು ತಪ್ಪಿಸಬಹುದಾಗಿದೆ. ಈ ಬಗ್ಗೆ ಜನಪ್ರತಿನಿಧಿಗಳು, ಮಾಧ್ಯಮ, ಸಾರ್ವಜನಿಕ ರೊಂದಿಗೆ ಅಧಿಕಾರಿಗಳ ವಿಶೇಷ ಕಾಳಜಿಯಿದ್ದರೆ ಎಲ್ಲ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಮಳೆಗಾಲದ ಪ್ರಾಕೃತಿಕ ವಿಕೋಪ ಮುಂಜಾಗೃತಾ ಕ್ರಮಗಳ ಕುರಿತು ಇಲ್ಲಿನ ಬೈಂದೂರು ತಾಲೂಕು ಪಂಚಾಯಿತಿ ಸಭಾಭವನದಲ್ಲಿ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕ್ಷೇತ್ರ ವ್ಯಾಪ್ತಿಯಲ್ಲಿ ಈ ಬಾರಿ ಮಳೆಗಾಲ ಆರಂಭವಾಗುತ್ತಿದ್ದಂತೆ ವಂಡ್ಸೆ ಹೋಬಳಿಯಲ್ಲಿ ಒಂದು ಜೀವ ಹಾನಿ ಸೇರಿದಂತೆ 55 ಮನೆಗಳು ಭಾಗಶಃ ಹಾನಿಗೀಡಾಗಿದೆ ಹಾಗೂ ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಸುಮಾರು 30 ಪ್ರಕರಣಗಳು ಸಂಭವಿಸಿದ್ದು, ಸಂತೃಸ್ತ ಕುಟುಂಬಗಳಿಗೆ ಶೀಘ್ರ ಪರಿಹಾರ ಒದಗಿಸುವಂತೆ ಕ್ರಮ ಕೈಗೊಳ್ಳಬೇಕು ಎಂದು ತಹಸೀಲ್ದಾರರಿಗೆ ಸೂಚನೆ ನೀಡಿದರು. ನೆರೆಪೀಡಿತ ಪ್ರದೇಶಗಳನ್ನು ಗುರುತಿಸಿ, ಮುಂಜಾಗೃತಾ ಕ್ರಮವಾಗಿ ದೋಣಿ ಹಾಗೂ ಜಾಕೆಟ್ ಸೇರಿದಂತೆ ಅಗತ್ಯ ವ್ಯವಸ್ಥೆ ಕಲ್ಪಿಸಲು ತಾಲೂಕು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೊಳಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಶೋಭಾ ಸಿ. ಶೆಟ್ಟಿಯವರಿಗೆ ‘ಕಾಯಕ ಯೋಗಿʼ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಕುಂದಾಪುರದ ಲಯನ್ಸ್ ಕ್ಲಬ್ ಅಮೃತಧಾರದ ಅಧ್ಯಕ್ಷರಾದ ಆಶಾ ಶಿವರಾಮ ಶೆಟ್ಟಿ ಅವರು ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿ, ಯಾವುದೇ ವೃತ್ತಿಯನ್ನು ಆಯ್ದುಕೊಂಡರೂ ನಿಷ್ಟೆಯಿಂದ ಕರ್ತವ್ಯ ನಿರ್ವಹಿಸಬೇಕು. ಪ್ರಾಮಾಣಿಕ ಸೇವೆಯನ್ನು ಸಮಾಜ ಗುರುತಿಸುತ್ತದೆ ಎಲೆಮರೆಯ ಕಾಯಿಯಂತೆ ಸೇವೆ ಸಲ್ಲಿಸುತ್ತಿರುವವರನ್ನು ಗುರುತಿಸಿ ಸನ್ಮಾನಿಸುತ್ತಿರುವುದು ಶ್ಲಾಘನೀಯ ಎಂದರು. ಇದೇ ಸಂದರ್ಭ ವಿದ್ಯಾರ್ಥಿಗಳು ತಂದೆ-ತಾಯಿ, ಗುರುಗಳ ಬಗ್ಗೆ ಗೌರವನ್ನು ಬೆಳೆಸಿಕೊಂಡು ಸತ್ಪಂಜೆಗಳಾಗಿ ಎಂದು ಶುಭಹಾರೈಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ರಾಜ್ಯ ಮತ್ತು ಅಂತರ್-ಕಾಲೇಜು ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಸಾಧಕ ಎನ್.ಎಸ್.ಎಸ್. ಸ್ವಯಂಸೇವಕರನ್ನು ಗೌರವಿಸಲಾಯಿತು. ಉಪಪ್ರಾಂಶುಪಾಲರು ಹಾಗೂ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಸ್ತಾವಿಸಿ, ಸ್ವಾಗತಿಸಿದರು. ಕನ್ನಡ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೀಜಾಡಿಯ ಸೀತಾಲಕ್ಷ್ಮೀ ಮತ್ತು ಬಿ ಎಂ ರಾಮಕೃಷ್ಣ ಹತ್ವಾರ್ ಸರ್ಕಾರಿ ಪ್ರೌಢಶಾಲೆಯಲ್ಲಿ 2024-25ನೇ ಶೈಕ್ಷಣಿಕ ವರ್ಷದ ಶಾಲಾ ವಿದ್ಯಾರ್ಥಿ ಸಂಸತ್ ರಚನೆಯು ಸಾರ್ವತ್ರಿಕ ಚುನಾವಣೆ ಮಾದರಿಯಲ್ಲಿಯೇ ವಿದ್ಯುನ್ಮಾನ ಮತಯಂತ್ರ ಬಳಸಿ ನಡೆಸಲಾಯಿತು.  ಚುನಾವಣಾ ಅಧಿಸೂಚನೆ, ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ, ನಾಮಪತ್ರ ಹಿಂತೆಗೆತ, ನಾಮಪತ್ರ ಪರಿಶೀಲನೆ, ಚುನಾವಣಾ ಪ್ರಚಾರ, ಚುನಾವಣಾ ದಿನಾಂಕ, ಮತ ಎಣಿಕೆ ದಿನಾಂಕ ಇತ್ಯಾದಿಗಳನ್ನು ಕ್ರಮಬದ್ಧವಾಗಿ ನಿರ್ವಹಿಸಲಾಯಿತು. ಅಲ್ಲದೇ ವಿಷೇಷವಾಗಿ ನೋಟಾ ಮತದಾನಕ್ಕೂ  ಅವಕಾಶ ಕಲ್ಪಿಸಲಾಗಿತ್ತು. ಬೂತ್ ಮಟ್ಟದ ಅಧಿಕಾರಿಗಳಾಗಿ ಪ್ರತೀ ವಿದ್ಯಾರ್ಥಿಗಳಿಗೆ ಮತಚೀಟಿಗಳನ್ನು ನವ್ಯಾ ಮತ್ತು ವಂಶಿ ನೀಡಿದರು. ಪ್ರಿಸೈಡಿಂಗ್ ಅಧಿಕಾರಿಯಾಗಿ ಪ್ರಥ್ವಿ ಮೊಗವೀರ ಹಾಗೂ ಮತದಾನ ಅಧಿಕಾರಿಗಳಾಗಿ ವಿದ್ಯಾರ್ಥಿಗಳಾದ ದೀಕ್ಷಿತ್, ಸಹನಾ ಮತ್ತು ಪೂಜಾ ಕರ್ತವ್ಯ ನಿರ್ವಹಿಸಿದರು. ಮತದಾನದ ಕಂಟ್ರೋಲ್ ಯುನಿಟ್‌ಗಳನ್ನು ಶಿಕ್ಷಕಿಯರಾದ ವಿಶಾಲಾ ಹಾಗೂ ಲಿಖಿತಾ ಅವರು ನಿರ್ವಹಿಸಿದರು. ಎಲ್ಲಾ ನಾಲ್ಕು ಅಭ್ಯರ್ಥಿಗಳಿಗೆ ಮತ್ತು ಮತದಾನ ಅಧಿಕಾರಿಗಳಿಗೆ ವಿದ್ಯಾರ್ಥಿ ಮತದಾರರ ಪಟ್ಟಿಯನ್ನು ನೀಡಲಾಗಿತ್ತು. ಮತದಾನ ಕೇಂದ್ರದಲ್ಲಿ ಗುರುತಿಗಾಗಿ ತಮ್ಮ ಆಧಾರ್…

Read More