ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಗ್ರಾಮದ ಕಯ್ಯಾಣಿ ಎಂಬಲ್ಲಿ ವಿದ್ಯುತ್ ಕಂಬದಿಂದ ಬಿದ್ದು ಶೇಡಿಮನೆ ಗ್ರಾಮದ ನಿವಾಸಿ ಲಕ್ಷ್ಮಣ(30) ಅವರು ಮೃತಪಟ್ಟಿದ್ದಾರೆ. ಕಯ್ಯಾಣಿಗೆ ಹೋಗುವ ರಸ್ತೆಯ ಬಳಿ ರಜನೀಶ್ ಹಾಗೂ ಇತರರೊಂದಿಗೆ ಹೊಸದಾಗಿ ನಿಲ್ಲಿಸಿದ ವಿದ್ಯುತ್ ಕಂಬಗಳಿಗೆ ಲೈನ್ ಕೆಲಸವನ್ನು ಮಾಡಲು ಅವರು ಕಂಬ ಹತ್ತಿದ್ದು ಶನಿವಾರ ಸಂಜೆ ಒಮ್ಮೆಲೆ ಅವರಿಗೆ ಫಿಡ್ಸ್ ಕಾಯಿಲೆ ಕಾಣಿಸಿಕೊಂಡು ಜೋರಾಗಿ ಕಿರುಚಿ ಅಂದಾಜು 21 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದಿದ್ದಾರೆ. ಕೂಡಲೆ ಇತರೆ ಕೆಲಸಗಾರರು ಉಪಚರಿಸಿ 108 ಆಂಬ್ಯುಲೆನ್ಸ್ನಲ್ಲಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆತರಲಾಗಿದ್ದು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಫಿಡ್ಸ್ ಕಾಯಿಲೆಯಿಂದ ಬಳಲುತ್ತಿದ್ದರು ಎಂದು ಸಹೋದರ ರಾಮ ನೀಡಿದ ದೂರಿನಂತೆ ಶಂಕರನಾರಾಯಣ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಅಂಗವಿಕಲರ ಒಕ್ಕೂಟ,ಹಾಗೂ ಪಾಲಕರ ಉಡುಪಿ ಜಿಲ್ಲಾ ಸಮಿತಿ ಕುಂದಾಪುರ ಹಾಗೂ ಬೈಂದೂರು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಒಕ್ಕೂಟ ಮತ್ತು ವಿವಿಧ ಇಲಾಖೆಗಳ ಸಹಕಾರದೊಂದಿಗೆ ನಡೆದ ದಿವ್ಯಾಂಗರ ಸಮಾವೇಶ, ಸಾಧಕರಿಗೆ ಸನ್ಮಾನ ಮತ್ತು ಪ್ರತಿಭಾ ಪ್ರದರ್ಶನ 2024-25 ಕಾರ್ಯಕ್ರಮದ ಸಮಾರೋಪ ಸಮಾರಂಭವು ಶನಿವಾರದಂದು ಆರ್. ಎನ್. ಶೆಟ್ಟಿ ಸಭಾಭವನದಲ್ಲಿ ಅದ್ದೂರಿಯಾಗಿ ನೆರೆವೇರಿಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಹಾಗೂ ಬೈಂದೂರು ತಾಲೂಕಿನ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ಅಧ್ಯಕ್ಷರಾದ ಸಂತೋಷ್ ಜಾಲಾಡಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಡಿಸೆಂಬರ್ ತಿಂಗಳ ಎರಡದಂದು ಬೈಂದೂರು ಗಾಂಧಿ ಮೈದಾನದಲ್ಲಿ ನಡೆದ ಕ್ರೀಡಾಕೂಟದ ಬಹುಮಾನವನ್ನು ವಿತರಿಸಲಾಯಿತು. ಬಹುಮಾನ ವಿತರಣೆ ಮಾಡಿ ಮುಖ್ಯ ಅತಿಥಿಗಳಾದ ಪುರಸಭೆ ಅಧ್ಯಕ್ಷರಾದ ಮೋಹನದಾಸ ಶೆಣೈ ಅವರು ಮಾತನಾಡಿ, ದಿವ್ಯಾಂಗರಿಗೆ ನ್ಯೂನ್ಯತೆ ಶಾಪವಲ್ಲ ಇಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಪ್ರತಿಭೆಗಳು ನಮ್ಮ ಜಿಲ್ಲೆಯಲ್ಲಿದ್ದಾರೆ, ಸರ್ಕಾರ, ಸಂಘ ಸಂಸ್ಥೆಗಳು ದಿವ್ಯಾಂಗರ ಶ್ರೇಯೋಭಿವೃದ್ಧಿಗೆ ಕೆಲಸ ಮಾಡಬೇಕೆಂದು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಮುಖ್ಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಾಲಾಡಿ ಗೋಳಿಯಂಗಡಿ ಮಾರ್ಗದ ಭತ್ತಗುಳಿ ಸೇತುವೆ ಬಳಿ ಸ್ಕೂಟರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಡಿ. 21ರಂದು ನಡೆದಿದೆ. ಹರೀಶ್ ಸ್ಕೂಟರ್ನಲ್ಲಿ ಶರತ್ ಅವರನ್ನು ಕುಳ್ಳಿರಿಸಿಕೊಂಡು ಹಾಲಾಡಿಯಿಂದ ಗೋಳಿಯಂಗಡಿ ಕಡೆಗೆ ಹೋಗುತ್ತಿದ್ದಾಗ ಭತ್ತಗುಳಿ ಸೇತುವೆ ಬಳಿ ಎದುರಿನಿಂದ ಬಂದ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್ ಸವಾರರು ರಸ್ತೆಗೆ ಬಿದ್ದು, ಗಂಭೀರವಾಗಿ ಗಾಯಗೊಂಡರು. ಹಾಲಾಡಿ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮಕ್ಕಳಿಗೆ ಪ್ರಾಥಮಿಕ ಶಿಕ್ಷಣವನ್ನು ಕನ್ನಡ ಮಾಧ್ಯಮದಲ್ಲೇ ನೀಡಬೇಕು. ವಿಶೇಷವಾಗಿ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಇದರಿಂದ ಸಾಕಷ್ಟು ಪ್ರಯೋಜನಗಳಿದೆ. ಸುಮಾರು ಒಂದು ಶತಮಾನದ ಹಿಂದೆ ಏನೂ ವ್ಯವಸ್ಥೆಗಳಿಲ್ಲದ ದಿನಗಳಲ್ಲಿ ಗಂಗೊಳ್ಳಿಯಂತಹ ಗ್ರಾಮೀಣ ಬಂದರು ಪ್ರದೇಶದಲ್ಲಿ ಸ್ಥಾಪನೆಗೊಂಡ ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆ ಲಕ್ಷಾಂತರ ವಿದ್ಯಾರ್ಥಿಗಳ ಬಾಳಿನಲ್ಲಿ ಬೆಳಕಾಗಿದೆ. ಶಾಲೆಯನ್ನು ಸ್ಥಾಪಿಸಿದ ಹಿರಿಯರ ದೂರದೃಷ್ಟಿಯ ಫಲವಾಗಿ ಶಾಲೆಯ ಶೈಕ್ಷಣಿಕ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗಳ ಮೂಲಕ ಗುರುತಿಸಿಕೊಳ್ಳುವಂತಾಗಿದೆ ಎಂದು ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ಕೋ-ಆಪರೇಟಿವ್ ಸೊಸೈಟಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಗಣೇಶ ನಾಯಕ್ ಹೇಳಿದರು. ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ಬೈಲೂರು ರಾಮರಾವ್ ಶ್ಯಾನುಭಾಗ್ ರಂಗ ಮಂಟಪದಲ್ಲಿ ಶನಿವಾರ ನಡೆದ ಜಿಎಸ್ವಿಎಸ್ ಅಸೋಸಿಯೇಶನ್ ಪ್ರಾಯೋಜಿತ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ಶಾಲಾ ವಾರ್ಷಿಕೋತ್ಸವದ ಅಧ್ಯಕ್ಷತೆಯನ್ನು ಜಿಎಸ್ವಿಎಸ್ ಅಸೋಸಿಯೇಶನ್ ಅಧ್ಯಕ್ಷ ಡಾ. ಕಾಶೀನಾಥ ಪೈ ವಹಿಸಿದ್ದರು. ಶಾಲೆಯ ಹಳೆ ವಿದ್ಯಾರ್ಥಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಶಿಕ್ಷಕ – ಪಾಲಕರ ಸಭೆ ಶನಿವಾರದಂದು ಜರುಗಿತು. ಸಭೆಯನ್ನು ಉದ್ದೇಶಿಸಿ ಸಹ ಸಂಸ್ಥಾಪಕರು ಹಾಗೂ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಅವರು ವೈಯಕ್ತಿಕ ವಿಷಯಗಳಲ್ಲಿ ವಿದ್ಯಾರ್ಥಿಗಳ ಸಾಧನೆ, ತರಗತಿಗಳಲ್ಲಿ ಶಿಸ್ತು ಮತ್ತು ಅವರ ಹಾಜರಾತಿ ಶೇಖಡಾವಾರು ಬಗ್ಗೆ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ, ಸಕಾರಾತ್ಮಕ ಚಿಂತನೆ, ಪ್ರೇರಣೆ, ನಿರ್ದಿಷ್ಟ ಗುರಿ ಇತ್ಯಾದಿ ವಾಸ್ತವಾಂಶಗಳನ್ನು ಮನದಟ್ಟು ಮಾಡುವುದು ಅಗತ್ಯ ಎಂದರು. ಸಂಸ್ಥಾಪಕರಲ್ಲಿ ಓರ್ವರಾದ ಡಾ. ಬಿ ಗಣನಾಥ ಶೆಟ್ಟಿ ಅವರು ನಿತ್ಯ ಜೀವನದಲ್ಲಿ ಸಮಸ್ಯೆಗಳನ್ನು ಎದುರಿಸುವ ಕೌಶಲ ಸಹಿತ ಶಿಕ್ಷಣವೇ ನಮ್ಮ ಗುರಿ ಎಂದರು. ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪದವಿಪೂರ್ವ ಶಿಕ್ಷಣದ ಜೊತೆಗೆ ಸಿ. ಎ, ಸಿ. ಎಸ್, ಕಂಪ್ಯೂಟರ್ ಸಂಬಂಧಿತ ವಿವಿಧ ಕಲಿಕೆಗಳ ಜೊತೆಗೆ ಎನ್ ಎಸ್ ಎಸ್, ಕೆಸಡೊಂಜಿ ದಿನ, ಕೈಗಾರಿಕಾ ಪ್ರದೇಶಗಳ ಭೇಟಿಯ ಜೊತೆಗೆ ಹಲವಾರು ಕಾರ್ಯಕ್ರಮಗಳ ಆಯೋಜನೆಯ ಮೂಲಕ ನೈತಿಕ ಮತ್ತು ವ್ಯಾವಹಾರಿಕ ಜ್ಞಾನವನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಡಿ ಕೌಶಲ್ಯಾಭಿವೃದ್ಧಿ ಪಡೆದ ಅರ್ಹ ಫಲಾನುಭವಿಗಳಿಗೆ ಚಟುವಟಿಕೆಗಳನ್ನು ನಡೆಸಲು ಬ್ಯಾಂಕುಗಳು ಆರ್ಥಿಕ ನೆರವು ನೀಡಲು ಶಿಫಾರಸ್ಸು ಆದ ಎಲ್ಲಾ ಅರ್ಜಿಗಳನ್ನು ಆದ್ಯತೆಯ ಮೇಲೆ ವಿಲೇವಾರಿ ಮಾಡಿ ಎಂದು ಬ್ಯಾಂಕಿನ ಅಧಿಕಾರಿಗಳಿಗೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರಕಾರದ ಪಿಎಂ ವಿಶ್ವಕರ್ಮ ಯೋಜನೆಯಡಿ ಫಲಾನುಭವಿಗಳಿಗೆ ಸಾಲ ಸೌಲಭ್ಯ ನೀಡುವ ಸಂದರ್ಭದಲ್ಲಿ ಸ್ಟ್ಯಾಂಪ್ ಶುಲ್ಕವನ್ನು ಹೆಚ್ಚು ಪಡೆಯುತ್ತಿದ್ದಾರೆ ಎಂದು ಸಾರ್ವಜನಿಕರಿಂದ ದೂರುಗಳು ಕೇಳಿ ಬರುತ್ತಿವೆ. ಈ ಯೋಜನೆಯಡಿ ಸಾಲ ಸೌಲಭಕ್ಕೆ 500 ರೂಪಾಯಿ ಸ್ಟ್ಯಾಂಪ್ ಶುಲ್ಕ ಪಡೆಯಬೇಕು ಎಂದರು. ಪಿಎಂ ವಿಶ್ವಕರ್ಮ ಯೋಜನೆಯಡಿ ಆರ್ಥಿಕ ನೆರವು ಕೋರಿ ಬ್ಯಾಂಕುಗಳಿಗೆ ಹೋದ ಸಂದರ್ಭದಲ್ಲಿ ಅಲ್ಲಿನ ಮ್ಯಾನೇಜರ್ ಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಲೇಖಕ ಮತ್ತು ವಾಣಿಜ್ಯಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್. ಗಂಗೊಳ್ಳಿ ಅವರ ರಚನೆ ಮತ್ತು ನಿರ್ದೇಶನದಲ್ಲಿ ಇಲ್ಲಿನ ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ನಾಟಕ ಶ್ರೀ ಶಬರಿಮಲೆ ಸ್ವಾಮಿ ಅಯ್ಯಪ್ಪ ಅತ್ಯಂತ ಆಕರ್ಷಕವಾಗಿ ಮೂಡಿಬಂದು ಜನರಿಂದ ಅಪಾರವಾದ ಮೆಚ್ಚುಗೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಯಿತು. ವಾರ್ಷಿಕೋತ್ಸವದ ವೇದಿಕೆಗಳಲ್ಲಿ ಇಂತಹ ಭಕ್ತಿ ಪ್ರಧಾನ ನಾಟಕಗಳನ್ನು ಭಿನ್ನವಾಗಿ ನುರಿತ ರಂಗ ತಂಡಗಳ ರೀತಿಯಲ್ಲಿ ಕಟ್ಟಿಕೊಡುವುದು ಬಹಳ ದೊಡ್ಡ ಸವಾಲಿನ ಕೆಲಸ. ಅದರಲ್ಲೂ ಅನಿವಾರ್ಯವಾಗಿ ಕೇವಲ ಮೂರ್ನಾಲ್ಕು ದಿನಗಳ ಅವಧಿಯಲ್ಲಿ ತರಬೇತಿಯನ್ನು ಪಡೆದು ನುರಿತ ರಂಗ ತಂಡಗಳ ರೀತಿಯಲ್ಲಿ ಈ ನಾಟಕವನ್ನು ಹುಬ್ಬೇರಿಸುವಂತೆ ಚಂದಗೆ ಮನ ಮುಟ್ಟುವ ರೀತಿಯಲ್ಲಿ ಪ್ರದರ್ಶಿಸಿದ ರೀತಿ ವೀಕ್ಷಕರಿಗೆ ಅಚ್ಚರಿ ಭರಿತ ಸಂತೋಷ ನೀಡಿತ್ತು. ಮಹಿಷಾಸುರನ ಸಂಹಾರದಿಂದ ಆರಂಭವಾದ ನಾಟಕ ಮಹಿಷಿಯ ಕೋಪ, ತಪಸ್ಸು, ದುಷ್ಕಾರ್ಯಗಳು, ದೇವಲೋಕದಲ್ಲಿ ನಾರದರ ತಂತ್ರಗಾರಿಕೆ,ಹರಿಹರರ ಸಮಾಗಮ, ಅಯ್ಯಪ್ಪನ ಜನನ, ರಾಣಿಯ ಹೊಟ್ಟೆ ನೋವಿನ ನಾಟಕ, ಮಹಿಷಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸರ್ಕಾರದ ಯೋಜನೆಗಳನ್ನು ಗ್ರಾಮೀಣ ಮಟ್ಟದಲ್ಲಿ ಸಾರ್ವಜನಿಕರಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗ್ರಾಮ ಒನ್ ಸೇವಾ ಕೇಂದ್ರಗಳು ಸಹಕಾರಿಯಾಗಿವೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ ಉಡುಪಿ ಹಾಗೂ ಸೇವಾ ಸಿಂಧು / ಗ್ರಾಮ ಒನ್ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ಗ್ರಾಮ ಒನ್ ಕೇಂದ್ರಗಳ ನಿರ್ವಾಹಕರ ಗ್ರಾಮ ಒನ್ ಸಮ್ಮಿಲನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ 208 ಕ್ಕೂ ಹೆಚ್ಚು ಗ್ರಾಮ ಒನ್ ಕೇಂದ್ರಗಳೂ ಕಾರ್ಯನಿರ್ವಹಿಸುತ್ತಿದ್ದು, ಇದರಿಂದ ಸ್ಥಳೀಯ ನಿರುದ್ಯೋಗಿಗಳಿಗೆ ಉದ್ಯೋಗ ಲಭಿಸಿದಂತಾಗಿದೆ. ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಗ್ರಾಮ ಒನ್ ಸೇವಾ ಕೇಂದ್ರಗಳ ಮೂಲಕ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುತ್ತಿರುವುದಕ್ಕೆ ಶ್ಲಾಘನೆ ವ್ಯಕ್ತಪಡಿಸಿದ ಅವರು, ಮುಂದಿನ ದಿನಗಳಲ್ಲಿ ಗ್ರಾಮ ಒನ್ ಕೇಂದ್ರಗಳು ಇಲಾಖೆಗಳ ಸಮನ್ವಯೊಂದಿಗೆ ಇನ್ನಷ್ಟು ಉತ್ಸುಕತೆಯಿಂದ ಕಾರ್ಯನಿರ್ವಹಿಸಬೇಕು ಎಂದರು. ಆಯುಷ್ಮಾನ್ ಭಾರತ, ಗ್ಯಾರಂಟಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.22: ನಗರದ ವಿಠಲವಾಡಿಗೆ ತೆರಳುವ ಮಾರ್ಗದ ಮನೆಯೊಂದರಲ್ಲಿ ರಾತ್ರಿ ವೇಳೆ ಯಾರೂ ಇಲ್ಲದ ಸಂದರ್ಭ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕದ್ದೊಯ್ದ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಕುಂದಾಪುರದ ಶಿವರಾಮ ಶೆಟ್ಟಿ ಹಾಗೂ ಅವರ ಪತ್ನಿ ಮಮತಾ ಅವರು ಮನೆಗೆ ಬೀಗ ಹಾಕಿ, ಬೆಂಗಳೂರಿನ ಮಕ್ಕಳ ಮನೆಗೆ ತೆರಳಿದ್ದ ಸಂದರ್ಭ ಈ ಘಟನೆ ನಡೆದಿದೆ. ಶನಿವಾರ ಬೆಳಿಗ್ಗೆ ಕೆಲಸದಾಕೆ ಹೂವಿನ ಗಿಡಕ್ಕೆ ನೀರು ಬಿಡಲು ಬಂದ ಸಂದರ್ಭ ಮನೆಯ ಬಾಗಿಲು ಅರ್ಧ ತೆರೆದಿರುವುದು ಗಮನಕ್ಕೆ ಬಂದಿದೆ. ಅನುಮಾನಗೊಂಡು ಮನೆಯ ಯಜಮಾನರಿಗೆ ಫೋನ್ ಮಾಡಿದ್ದಾಳೆ. ಬಳಿಕ ಮನೆ ಮಾಲಕರ ಸಂಬಂಧಿ ಸ್ಥಳಕ್ಕೆ ಬಂದು ಪರಿಶೀಲಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಘಟನಾ ಸ್ಥಳಕ್ಕೆ ಶ್ವಾನ ದಳ, ಬೆರಳಚ್ಚು ತಜ್ಞರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಸುಮಾರು 20 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ, ವಜ್ರಾಭರಣ ಹಾಗೂ ಬೆಲೆಬಾಳುವ ರೇಷ್ಮೆ ಸೀರೆಗಳನ್ನು ಕದ್ದೊಯ್ದಿದ್ದಾರೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಶಿಕ್ಷಕನ ಪಾತ್ರ ಹಿರಿದು. ಉತ್ತಮ ಶಿಕ್ಷಕರಿದ್ದಲ್ಲಿ ವಿದ್ಯಾರ್ಥಿ ಹಾಗೂ ಶಾಲೆಗೆ ಎಂದಿಗೂ ಹಿನ್ನಡೆ ಎಂಬುದಿಲ್ಲ. ಸಮಾಜದಲ್ಲಿಯೂ ಶಿಕ್ಷಕ ವೃತ್ತಿಗೆ ವಿಶೇಷ ಸ್ಥಾನಮಾನವಿದೆ ಎಂದು ಮಾಜಿ ಶಾಸಕ, ಹೆಮ್ಮಾಡಿ ಶ್ರೀ ವಿ.ವಿ.ವಿ ಮಂಡಳಿ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಶನಿವಾರ ಇಲ್ಲಿನ ರತ್ತೂಬಾಯಿ ಜನತಾ ಪ್ರೌಢಶಾಲೆಯ ರತ್ತೂಬಾಯಿ ವಾರ್ಷಿಕ ಸಂಭ್ರಮ – 2024 ಉದ್ಘಾಟಿಸಿ ಮಾತನಾಡಿ ಶ್ರೀ ವಿ.ವಿ.ವಿ ಮಂಡಳಿ ಸಂಸ್ಥಾಪಕರ ಆಶಯದಂತೆ ನಡೆದುಕೊಂಡು ಬಂದಿದ್ದು, ಕಠಿಣ ಸಂದರ್ಭದಲ್ಲಿಯೂ ಶಿಕ್ಷಣ ಸಂಸ್ಥೆಗಳನ್ನು ಯಾವುದೇ ತೊಂದರೆಯಿಲ್ಲದೇ ಮುನ್ನಡೆಸಲಾಗಿದೆ. ಯಾವುದೇ ಅಡ್ಡಿ ಇಲ್ಲದಂತೆ ಇದು ಮುಂದುವರಿಯಲಿದೆ ಎಂದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ಬಾಬು ಶೆಟ್ಟಿ ಹಾಗೂ ಇತ್ತೀಚಿಗೆ ಸೇವೆಯಿಂದ ನಿವೃತ್ತರಾದ ಶಿಕ್ಷಕ ಚಂದ್ರ ಕೆ. ದೇವಾಡಿಗ, ಆದರ್ಶ ಶಿಕ್ಷಕಿ ಪ್ರಶಸ್ತಿ ಪುರಸ್ಕೃತ ನಿರ್ಮಲಾ ಪಿ.ಕೆ ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ವಿ.ವಿ.ವಿ ಮಂಡಳಿ…
