Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ಎಲ್ಲಾದರೂ ಇರಿ, ಹೇಗಾದರೂ ಇರಿ. ಭಾರತೀಯತೀಯತೆ ಎತ್ತಿ ಹಿಡಿಯಿರಿ. ಉತ್ತಮ ಜೀವನ ರೂಪಿಸಿಕೊಳ್ಳಲು ಭಾರತವೇ ಶ್ರೇಷ್ಠ ಎಂದು ಶ್ರೀ ಕ್ಷೇತ್ರ ಕಟೀಲಿನ ವಿದ್ವಾನ್ ಕಮಲಾದೇವಿ ಪ್ರಸಾದ ಆಸ್ರಣ್ಣ ಹೇಳಿದರು . ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಆಳ್ವಾಸ್ ಕಾಲೇಜು (ಸ್ವಾಯತ್ತ) ಸಂಸ್ಕೃತ ವಿಭಾಗ ಮತ್ತು ಪ್ರಜ್ಞಾ – ಜಿಜ್ಞಾಸಾವೇದಿ ಆಶ್ರಯದಲ್ಲಿ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಸೋಮವಾರ ಆರಂಭಗೊಂಡ 7 ದಿನಗಳ  “ಶ್ರೀಮದ್ ವಾಲ್ಮೀಕಿ ರಾಮಾಯಣ – ಶ್ರವಣಸಪ್ತಾಹ ” ಉದ್ಘಾಟಿಸಿ ಅವರು ಮಾತನಾಡಿದರು . ರಾಮಾಯಣ ಎನ್ನುವುದು ರಾಮ, ರಾಮಸ್ಯ, ಅಯಣಂ. ಅಂದರೆ ರಾಮ ನಡೆದ ದಾರಿಯಲ್ಲಿ ಸಾಗುವುದು ಎಂದರ್ಥ. ರಾಮಾಯಣ ಎಂಬ ಪೂಜ್ಯನೀಯ ಕಾವ್ಯವನ್ನು ಲೋಕಕ್ಕೆ ಕೊಡುಗೆಯಾಗಿ ನೀಡಿದ ಕೀರ್ತಿ ಶ್ರೀ ವಾಲ್ಮೀಕಿ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು. ರಾಮನ ಕಾಲದಲ್ಲಿ ಪ್ರಜಾಪ್ರಭುತ್ವ ಇಲ್ಲದ್ದಿದರೂ ಪ್ರಜೆಗಳು ರಾಮನ ಆದರ್ಶಗಳನ್ನು ಪರಿಪಾಲನೆ ಮಾಡುತ್ತಿದ್ದರು. ಕೇವಲ ರಾಮನ ಹೆಸರನ್ನು ಪೂಜಿಸುವುದಲ್ಲದೆ ರಾಮನ ನಿಜಗುಣ, ಆದರ್ಶಗಳ ಪರಿಪಾಲನೆ ಮಾಡುತ್ತಾ ಜೀವನವನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಾಮಾಜಿಕ ರಂಗದಲ್ಲಿ ಸುಧೀರ್ಘವಾಗಿ ತೊಡಗಿಸಿಕೊಂಡ ಫಲವಾಗಿ ಇಂದು ದೇವರ ಸೇವೆ ಮಾಡುವ ಅವಕಾಶ ದೊರೆತಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ದೇವಸ್ಥಾನ ಅಭಿವೃದ್ಧಿಗೆ ಶ್ರಮಿಸುವುದಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ಹೇಳಿದರು. ಅವರು ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ಬುಧವಾರ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ, ದಕ್ಷಿಣ ಭಾರತದ ಪುಣ್ಯ ಕ್ಷೇತ್ರದಲ್ಲಿ ಸೇವೆ ಮಾಡುವುದು ನಮ್ಮ ಪುಣ್ಯವೆಂದು ಭಾವಿಸುತ್ತೇನೆ. ದೇವಳದ ಅಭಿವೃದ್ಧಿಯೊಂದಿಗೆ ದೇವಸ್ಥಾನದ ಮೂಲಕ ಊರಿನ ಅಭಿವೃದ್ಧಿಗೂ ಕೈಜೋಡಿಸುವುದಾಗಿ ತಿಳಿಸಿದರು. ಬೈಂದೂರು ರೋಟರಿ ಟ್ರಸ್ಟ್ ಅಧ್ಯಕ್ಷರಾಗಿರುವ ಕೆ. ಬಾಬು ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಮೋಹನ್ ರೇವಣ್ಕರ್ ಅಧ್ಯಕ್ಷತೆ ವಹಿಸಿದ್ದರು. ರೋಟರಿ ವಲಯ 1ರ ಮಾಜಿ ಸಹಾಯಕ ಗವರ್ನರ್ ಸೋಮನಾಥನ್ ಆರ್., ನಿಯೋಜಿತ ಸಹಾಯಕ ಗವರ್ನರ್ ಐ. ನಾರಾಯಣ್, ಬೈಂದೂರು ರೋಟರಿ ಪೂರ್ವಾಧ್ಯಕ್ಷರುಗಳು, ಸದಸ್ಯರು ಉಪಸ್ಥಿತರಿದ್ದರು. ಸುಧಾಕರ ಪಿ ಸನ್ಮಾನಿತರನ್ನು ಪರಿಚಯಿಸಿದರು. ಕಾರ್ಯದರ್ಶಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಸುವರ್ಣ ಮಹೋತ್ಸವದ ಅಂಗವಾಗಿ ಗಂಗೊಳ್ಳಿಯ  ಬಾಲ  ಪ್ರತಿಭೆ ಸಂಜಿತ್ ಎಂ. ದೇವಾಡಿಗ ಅವರಿಂದ ಸಾಕ್ಸೋ ಫೋನ್ ವಾದನ ಸೇವೆ ಶಾರದಾ ಮಂಟಪದಲ್ಲಿ ನಡೆಯಿತು. ತವಿಲ್‍ನಲ್ಲಿ ನಿತ್ಯಾನಂದ ದೇವಾಡಿಗ, ತಬಲಾದಲ್ಲಿ ರಾಮಕೃಷ್ಣ ಶೆಣೈ ಮತ್ತು ತಾಳದಲ್ಲಿ ಮಾಧವ ದೇವಾಡಿಗ ಸಹಕರಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಇಂದು ಪತ್ರಿಕೆ ಉದ್ಯಮವಾಗಿ ಬೆಳೆದಿದೆ. ಸುದ್ದಿಯನ್ನು ಸ್ಮರ್ಧಾತ್ಮಕವಾಗಿ ನೀಡುವ ಒತ್ತಡ ಇರುತ್ತದೆ. ಸಂಗ್ರಹಿಸಿದ ಸುದ್ದಿಯನ್ನು ಮಾಹಿತಿ ರೂಪದಲ್ಲಿ ಹೊರ ಹಾಕುವುದು ಅಗತ್ಯ. ಒತ್ತಡ ನಡುವೆ ಪತ್ರಕರ್ತರು ಕ್ರೀಡಾ ಚಟುವಟಿಕೆಗಳಲ್ಲಿಯೂ ಭಾಗವಹಿಸುವುದರಿಂದ ಸ್ವಾಸ್ಥ ಆರೋಗ್ಯ ಕಾಪಾಡಲು ಸಾಧ್ಯಾವಾಗುತ್ತದೆ. ನಿರ್ಭಿತವಾದ ಪತ್ರಿಕೋದ್ಯಮ ಇಂದಿನ ಅತೀ ಅಗತ್ಯವಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಹೇಳಿದ್ದಾರೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಜತ ಮಹೋತ್ಸವದ ಪ್ರಯುಕ್ತ ಅಜ್ಜರಕಾಡುವಿನಲ್ಲಿರುವ ಉಡುಪಿ ಜಿಲ್ಲಾ ಕ್ರೀಡಾಂಗಣ ಹಮ್ಮಿಕೊಳ್ಳಲಾ ‘ರಜತ ಕ್ರೀಡಾ ಸಂಭ್ರಮ’ ವಾರ್ಷಿಕ ಕ್ರೀಡಾ ಕೂಟವನ್ನು ಉದ್ಘಾಟಿಸಿ, ಪಥ ಸಂಚಲನದ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು. ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಅವಿನಾಶ್ ಶೆಟ್ಟಿ ಮಾತನಾಡಿ, ಪತ್ರಿಕೋದ್ಯಮ ಪ್ರಭಾವಿ ಮಾಧ್ಯಮವಾಗಿದ್ದು, ಜನರು ಪತ್ರಿಕೆ ಓದುವ ಹಾವ್ಯಸ ಬೆಳೆಸಿಕೊಳ್ಳಬೇಕು. ಪತ್ರಕರ್ತರು ದಿನದ 30 ನಿಮಿಷಗಳನ್ನು ಕ್ರೀಡಾ ಚಟುವಟಿಕೆಗಳಿಗೆ ಮೀಸಲಿಡಬೇಕು. ಇದರಿಂದ ಆರೋಗ್ಯವಂತರಾಗಿ ರಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯ ಪಟ್ಟರು. ಅಧ್ಯಕ್ಷತೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಪ್ತಿ ಗ್ರಾಮದ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಸ್ಲಾಬ್‌ನಿಂದ ಬಿದ್ದು ಮೃತಪಟ್ಟಿದ್ದಾರೆ. ಜಾರ್ಖಂಡ್‌ನ ಲೋಹರ್ದಗಾ ಜಿಲ್ಲೆಯ ಜೋಗಿಂದರ್ ಒರೋನ್ (29) ಮೃತ ವ್ಯಕ್ತಿ. ಇವರು ಕೆಲಸಕ್ಕೆ ರಜೆ ಮಾಡಿ ಸರೋಜ್ ಒರೊನ್, ಶಬ್ಬಿರ್ ಹಾಗೂ ಮುನ್ನಾ ಒರೋನ್ ಜತೆ ಕುಡಿದು ಫ್ಯಾಕ್ಟರಿ ಕಟ್ಟಡದ ಸ್ಲಾಬ್‌ನ ಮೇಲೆ ಮೊಬೈಲ್‌ನಲ್ಲಿ ಮಾತಾಡುತ್ತಿದ್ದಾಗ ಸುಮಾರು 15 ಅಡಿ ಎತ್ತರದಿಂದ ಕೆಳಗಡೆ ಸಿಮೆಂಟ್ ನೆಲದ ಮೇಲೆ ಬಿದ್ದು ಮೃತಪಟ್ಟಿದ್ದಾರೆ. ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಿರಿಯ ಸಾಹಿತಿ, ಕಾದಂಬರಿಗಾರ, ಕೋಟೇಶ್ವರ ಅಂಕದಕಟ್ಟೆಯ  ಕೆ.ವಿ. ಕ್ರೃಷ್ಣಯ್ಯ (91) ಬೆಂಗಳೂರಿನ ಸ್ವಗ್ರೃಹದಲ್ಲಿ ನಿಧನರಾದರು. ಅವರು ಸಾತ್ವಿಕ ಸ್ವಭಾವದ, ಪ್ರತಿಭಾವಂತ ಬರಹಗಾರರಾಗಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬ್ಯಾರೀಸ್  ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ಘಟಕದ ವತಿಯಿಂದ ವಾರ್ಷಿಕ ಕ್ರೀಡಾ ಚಟುವಟಿಕೆಯ ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.  ಸಂಪನ್ಮೂಲ ವ್ಯಕ್ತಿಯಾಗಿ ಕಾಮನ್ ವೆಲ್ತ್ ನ ಅಂತರಾಷ್ಟ್ರೀಯ ಪವರ್ ಲಿಫ್ಟಿಂಗ್ ಕ್ರೀಡಾಪಟು ಸತೀಶ್ ಖಾರ್ವಿ ಅವರು ‘ಪ್ರತಿಯೊಬ್ಬ ವಿದ್ಯಾರ್ಥಿಯು ಮೊಬೈಲ್ ಬಳಕೆಯಿಂದ ದೂರ ಸರಿದು ಹೆಚ್ಚು ಸಮಯವನ್ನು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ರಾಷ್ಟ್ರಧ್ವಜವನ್ನು ರಾಷ್ಟ್ರಗೀತೆಯೊಂದಿಗೆ ತನ್ನ ಹೆಗಲಿನ ಮೇಲೆ ಹೊದಿಸಿಕೊಂಡು ವಿಜಯ ವೇದಿಕೆ ಏರಬೇಕು’ ಎಂದು ತಿಳಿಸಿದರು. ಪ್ರಾಂಶುಪಾಲೆ ಶಬೀನಾ. ಹೆಚ್ ಅವರು ತಮ್ಮ ಅಧ್ಯಕ್ಷೀಯ ನುಡಿಯಲ್ಲಿ ‘ವಿದ್ಯಾರ್ಥಿಗಳು ಪಾಠದ ಜೊತೆಗೆ ಆಟೋಟಗಳಲ್ಲಿಯೂ ಭಾಗವಹಿಸುವುದು ಬಹಳ ಮುಖ್ಯ’ ಹಾಗೂ ಪ್ರಸ್ತುತ ದಿನಗಳಲ್ಲಿನ ಕ್ರೀಡೆಯ ಮಹತ್ವದ ಕುರಿತು ತಿಳಿಸಿದರು. ವೇದಿಕೆಯಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾದ ಸೌರಭ ಹಾಗೂ ವಿದ್ಯಾರ್ಥಿ ಕ್ರೀಡಾ ಮುಖಂಡ ಮನಾಜ್ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ರಿದಾ ನಿರೂಪಿಸಿದರು. ಅನಿಷಾ ಸ್ವಾಗತಿಸಿದರು. ಮುಝಮ್ಮಿಲ್ ಗಣ್ಯರನ್ನು ಪರಿಚಯಿಸಿದರು. ಬುಶ್ರಾ ವಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸಿಬಿಐ ಆಫೀಸರ್ ಎಂದು ಹೇಳಿಕೊಂಡು ವ್ಯಕ್ತಿಯನ್ನು ವಂಚಿಸಿದ ಪ್ರಕರಣ ಕುಂದಾಪುರದಲ್ಲಿ ನಡೆದಿದೆ. ಕುಂದಾಪುರದ ನಿವಾಸಿ ಪ್ರವೀಣ್  ಕುಮಾರ್ ವಂಚನೆಗೊಳಗಾದವರು. ಅವರ ದೂರಿನನ್ವಯ ಪ್ರಕರಣ ದಾಖಲಾಗಿದೆ. ಪ್ರಕರಣದ ವಿವರ: ಅ.19ರಂದು ಇವರ ಸಂಚಾರಿ ದೂರವಾಣಿಗೆ ಕರೆ ಬಂದಿದ್ದು ನಿಮ್ಮ ಸಂಚಾರಿ ದೂರವಾಣಿ ಸಂಖ್ಯೆಯನ್ನು 2 ಗಂಟೆಯೊಳಗೆ ಸ್ಥಗಿತಗೊಳ್ಳುತ್ತದೆ. ಹೆಚ್ಚಿನ ಮಾಹಿತಿಗಾಗಿ 9 ಪ್ರೆಸ್ ಮಾಡುವಂತೆ ತಿಳಿಸಿದ ಮೇರೆಗೆ ಪ್ರೆಸ್ ಮಾಡಿದ್ದಾರೆ. ಕೂಡಲೇ ಅದು ಬೇರೆಯವರಿಗೆ ಕನೆಕ್ಟ್ ಆಗಿದೆ. ಅವರು ನಿಮ್ಮ ಆಧಾರ್ ಕಾರ್ಡ್ ಪ್ರಾಡ್ ಆಗಿದೆ ಎಂದು ತಿಳಿಸಿ ಕೂಡಲೇ ಸಿಬಿಐ ಲೋಗೊ ನಂಬರ್‌ನಿಂದ ಕರೆಮಾಡಿ ಸಿಬಿಐ ಆಫೀಸರ್ ಎಂದು ಹೇಳಿಕೊಂಡು ಮನಿ ಲ್ಯಾಂಡರಿಂಗ್‌ನಲ್ಲಿ ನಿಮ್ಮ ಮೇಲೆ ಕೇಸ್ ಆಗಿದ್ದು ನಿಮ್ಮ ದಾಖಲೆ ತೋರಿಸಿ ಎಂದಿದ್ದಾರೆ. ಅದರಂತೆ ಆಧಾರ್ ಕಾರ್ಡ್, ಪಾಸ್‌ ಪುಸ್ತಕ, ಪಾನ್‌ ಕಾರ್ಡ್ ಗಳನ್ನು ಇವರು ತೋರಿಸಿದ್ದಾರೆ. ಅರ್ಧಗಂಟೆಯ ನಂತರ ಕೆನರಾ ಬ್ಯಾಂಕ್‌ನ ಖಾತೆಯಿಂದ ಹಣ ವರ್ಗಾವಣೆಯಾಗಿರುವುದು ಸಾಬೀತಾಗಿದೆ. ಇದರ ಬಗ್ಗೆ ನಿಮ್ಮ ಮೇಲಿನ…

Read More

ಕುಂದಾಪ್ರ ಡಾಟ್ ಕಾ ಸುದ್ದಿ.ಉಡುಪಿ: ಜಿಲ್ಲೆಯ ಎಲ್ಲಾ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು ಕಾಲು ಬಾಯಿ ಜ್ವರ ರೋಗ ಲಸಿಕೆಯನ್ನು ಹಾಕಿಸುವ ಮೂಲಕ ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕರಿಸುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಸೋಮವಾರ ನೀಲಾವರ ಗೋಶಾಲೆಯಲ್ಲಿ ಕಾಲುಬಾಯಿ ರೋಗ ಲಸಿಕಾ ಅಭಿಯಾನಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿ ಮಾತನಾಡಿದರು. ಕಾಲು ಬಾಯಿ ರೋಗವು ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆಯಾಗಿದ್ದು, ಈ ರೋಗ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ 6 ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಅ. 21 ರಿಂದ ನ. 20 ರ ವರೆಗೆ ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಜಿಲ್ಲೆಯ ಎಲ್ಲಾ ಹೈನುಗಾರರು ಪಶು ಸಂಗೋಪನಾ ಇಲಾಖೆಯ ಅಧಿಕಾರಿ / ಸಿಬ್ಬಂದಿಗಳು ಮತ್ತು ಕೆ.ಎಂ.ಎಫ್. ಸಿಬ್ಬಂದಿಗಳು ಹಾಗೂ ಗ್ರಾಮ ಮಟ್ಟದಲ್ಲಿ ಪಶು ಸಖಿಯರು ಜಾನುವಾರುಗಳಿಗೆ ಲಸಿಕೆ ನೀಡಲು ಮನೆ ಭೇಟಿ ಮಾಡಿದ ಸಂದರ್ಭದಲ್ಲಿ ಅವರುಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುವ ಮೂಲಕ ಅವರುಗಳಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು 2024 – 25ನೇ ಶೈಕ್ಷಣಿಕ ವರ್ಷದ ರಾಷ್ಟ್ರಮಟ್ಟದ ಅತ್ಯುನ್ನತ ಗೌರವವಾದ “ಎಜ್ಯುಕೇಶನ್ ವರ್ಲ್ಡ್ ಇಂಡಿಯಾ ಸ್ಕೂಲ್ ರ‍್ಯಾಂಕಿಂಗ್” ಪ್ರಶಸ್ತಿಗೆ ಪಾತ್ರವಾಗಿದೆ.   ದೇಶದಲ್ಲಿಯೇ ಅತ್ಯುತ್ತಮ ಸಹಶಿಕ್ಷಣದ ಜೊತೆಗೆ ಶೈಕ್ಷಣಿಕ ಹಾಗೂ ಸಹಪಠ್ಯ ಕ್ಷೇತ್ರಗಳಲ್ಲಿ ಮಾಡಿರುವ ಅಪರೂಪದ ಸಾಧನೆಗಳು ಮತ್ತು ಸಮಗ್ರ ಶಿಕ್ಷಣವನ್ನು ಒದಗಿಸುವಲ್ಲಿ ಶಾಲೆ ತೋರಿರುವ ಕಾಳಜಿ ಹಾಗೂ ಡೇ ಸ್ಕೂಲ್ ಶಾಲೆಗಳ ವಿಭಾಗದಲ್ಲಿ ಉತ್ತಮ ಶ್ರೇಯಾಂಕವನ್ನು ಹೊಂದಿರುವ ನೆಲೆಯಲ್ಲಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಈ ಪ್ರಶಸ್ತಿಯನ್ನು ಮೂರನೇ ಬಾರಿಗೆ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ಪಡೆದುಕೊಳ್ಳುತ್ತಿರುವುದು ಗಮನಾರ್ಹವಾಗಿದೆ. ಅಕ್ಟೋಬರ್ 17 ರಂದು ನವದೆಹಲಿಯ ಗುರುಗ್ರಾಮ್‍ನ “ಲೀಲಾ ಅಂಬಿಯೆನ್ಸ್” ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ಶಾಲೆಯ ಸಂಯೋಜಕರಾದ ಮಧು ಕೆ. ಎಲ್ ಅವರು ಶಾಲೆಯ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು. ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರೂ ಆದ ಶರಣ ಕುಮಾರ…

Read More