ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಧರ್ಮದ ಆಚರಣೆಯಲ್ಲಿ ವೈವಿಧ್ಯತೆ, ವ್ಯತ್ಯಾಸ ಇದ್ದರೂ ಧರ್ಮ ಎಂದೂ ಒಂದೇ. ಧರ್ಮದ ಆಚರಣೆ ಮಾಡದಿದ್ದವರು ನಾಸ್ತಿಕರು. ಜಗತ್ತಿನ ಸಾಮರಸ್ಯಕ್ಕೆ ಧರ್ಮ ಅವಶ್ಯಕ. ಧರ್ಮದ ಆಧಾರದಲ್ಲಿ ಇರುವುದರಿಂದಲೇ ಜಗತ್ತಿನಲ್ಲಿ ಸಹಬಾಳ್ವೆ, ವಿಶೇಷ ಬಾಂಧವ್ಯ, ಅಹಿಂಸೆ ನೋಡಬಹುದು. ಧರ್ಮದ ಅಡಿಯಲ್ಲಿ ನಡೆದಾಗ ಸಾರ್ಥಕ ಜೀವನ ನಡೆಸಲು ಸಾಧ್ಯವಾಗುತ್ತದೆ. ಹೀಗಾಗಿ ಧರ್ಮದ ಜಾಗೃತಿ ಆಗಬೇಕು, ಚಿಂತನೆಗಳು ನಡೆಯಬೇಕಿದೆ. ಧರ್ಮದ ಅರಿವು ಆಗಬೇಕು, ಹಿಂದು ಧರ್ಮದ ಪರಂಪರೆ, ಸಂಸ್ಕೃತಿಯನ್ನು ಬೆಳೆಸುವ ಕೈಂಕರ್ಯ ಆಗಬೇಕು. ಎಲ್ಲರೂ ಧರ್ಮದ ಆಚರಣೆ ಮಾಡುತ್ತಿರಬೇಕು ಎಂದು ಉಡುಪಿ ಶ್ರೀ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ಸ್ವಾಮಿಗಳು ಹೇಳಿದರು. ಸೇವಾ ಸಂಘ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ಇದರ ಸುವರ್ಣ ಮಹೋತ್ಸವ-2024ಅಂಗವಾಗಿ ಗಂಗೊಳ್ಳಿಯ ಸ. ವಿ. ಪದವಿಪೂರ್ವ ಕಾಲೇಜಿನ ವಠಾರದಲ್ಲಿ ಬುಧವಾರ ಸಂಜೆ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿ ಅವರು ಮಾತನಾಡಿದರು. ವಿದ್ಯಾದೇವತೆಯಾಗಿರುವ ಶ್ರೀ ಶಾರದಾ ಮಾತೆಯ ವಿಶೇಷ ಉಪಾಸನೆಯನ್ನು ನವರಾತ್ರಿಯ ಪರ್ವಕಾಲದಲ್ಲಿ ಮಾಡುತ್ತಿರಬೇಕು.…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: 14 ವರ್ಷದೊಳಗಿನ ಬಾಲ ಕಾರ್ಮಿಕರುಗಳು ಮಲ್ಪೆಯ ಮೀನುಗಾರಿಕಾ ಬಂದರಿನಲ್ಲಿ ಮೀನು ಹೆಕ್ಕುವ ಕಾರ್ಯಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ. ಕಾರ್ಯಪಡೆಯ ಅಧಿಕಾರಿಗಳು ಇದಕ್ಕೆ ಕಡಿವಾಣ ಹಾಕಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘದ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಲ್ಪೆ ಬಂದರಿನಲ್ಲಿ ಬೆಳಗಿನ ಜಾವ ನಡೆಯುವ ಮೀನಿನ ಹರಾಜು ಕೇಂದ್ರಗಳಲ್ಲಿ ಮಕ್ಕಳು ಮೀನು ಹೆಕ್ಕುವ ಕಾರ್ಯದಲ್ಲಿ ತೊಡಗುತ್ತಿದ್ದಾರೆ. ಈ ಹಿಂದೆ ದಾಳಿ ನಡೆಸಿದರೂ ಕಡಿವಾಣ ಹಾಕಲು ಸಾಧ್ಯವಾಗಿಲ್ಲ. ಕಾರ್ಯಪಡೆಯ ಸದಸ್ಯರುಗಳು ಆಗಿಂದಾಗ್ಗೆ ನಿರಂತರ ಅನಿರೀಕ್ಷಿತ ದಾಳಿ ಹಾಗೂ ಭೇಟಿಗಳನ್ನು ಮಾಡುವುದರೊಂದಿಗೆ ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂದು ಸೂಚನೆ ನೀಡಿದರು. ಬಾಲ ಕಾರ್ಮಿಕತೆ ಮಕ್ಕಳ ಬಾಲ್ಯ, ಅವರ ಸಾಮರ್ಥ್ಯ, ಘನತೆ ಕಸಿದುಕೊಳ್ಳುವ ಹಾಗೂ ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ನೈತಿಕವಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂದಾಪುರ ಮಂಡಲ ಬಿಜೆಪಿ ಪಕ್ಷದ ವತಿಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವಿಧಾನ ಪರಿಷತ್ ಉಪಚುನಾವಣೆಯ ಕಾರ್ಯಚಟುವಟಿಕೆಗಳ ಹಾಗೂ ಮುಂದಿನ ಯೋಜನೆಗಳ ಬಗ್ಗೆ ಕುಂದಾಪುರ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕಿಶೋರ್ ಕುಮಾರ್, ಶಾಸಕರಾದ ಕಿರಣ್ ಕುಮಾರ್ ಕೊಡ್ಗಿ, ಬಿಜೆಪಿ ಎಂಎಲ್ಸಿ ಅಭರ್ಥಿ ಕಿಶೋರ್ ಕುಮಾರ್ ಪುತ್ತೂರು, ಮಂಡಲ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ, ಸುಧೀರ್ ಕೆ. ಎಸ್, ಮಂಡಲ ನಿಕಟ ಪೂರ್ವ ಅಧ್ಯಕ್ಷರಾದ ಶಂಕರ ಅಂಕದಕಟ್ಟೆ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ನಾಗೂರು ಶ್ರೀ ಲಲಿತ ಕೃಷ್ಣ ಕಲಾ ಮಂದಿರದ ಸಭಾಂಗಣದಲ್ಲಿ ಬೈಂದೂರು ಮಂಡಲ ಬಿಜೆಪಿ ಪಕ್ಷದ ವತಿಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ವಿಧಾನ ಪರಿಷತ್ ಉಪಚುನಾವಣೆಯ ಕಾರ್ಯಚಟುವಟಿಕೆಗಳ ಹಾಗೂ ಮುಂದಿನ ಯೋಜನೆಗಳ ಬಗ್ಗೆ ಸಭೆ ನಡೆಸಲಾಯಿತು. ಸಭೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕಿಶೋರ್ ಕುಮಾರ್, ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ, ಬಿಜೆಪಿ ಎಂಎಲ್ಸಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು, ಬೈಂದೂರು ಬಿಜೆಪಿ ಮಂಡಲ ಅಧ್ಯಕ್ಷರಾದ ದೀಪಕ್ ಕುಮಾರ್ ಶೆಟ್ಟಿ, ಬಿಜೆಪಿ ಉಡುಪಿ ಜಿಲ್ಲೆಯ ಕಾರ್ಯದರ್ಶಿಗಳಾದ ರಾಘವೇಂದ್ರ ಹಾಗೂ ಪ್ರಿಯದರ್ಶಿನಿ, ಬಿಜೆಪಿ ಉಡುಪಿ ಜಿಲ್ಲೆಯ ಪ್ರಭಾರಿಯಾದ ರಾಜೇಶ್ ಕಾವೇರಿ, ಉಡುಪಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿಯಾದ ಉಮೇಶ್ ಶೆಟ್ಟಿ ಕಲ್ಗದ್ದೆ, ಬೈಂದೂರು ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿಯಾದ ಮಹೇಂದ್ರ ಪೂಜಾರಿ, ಬೈಂದೂರು ಬಿಜೆಪಿ ಮಂಡಲ ಹಾಗೂ ಪಕ್ಷದ ಹಿರಿಯರು ಹಾಗೂ ಮುಖಂಡರು ಭಾಗವಹಿಸಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆಯು ತನ್ನಲ್ಲಿರುವ 20 ವಿವಿಧ ಶಿಕ್ಷಣ ಸಂಸ್ಥೆಗಳ ಜೊತೆಗೆ ಫಾರ್ಮಸಿ ಪದವಿ ಕಾಲೇಜನ್ನು ಈ ವರ್ಷವೇ ನೂತನವಾಗಿ ಪ್ರಾರಂಭಿಸುತ್ತಿದೆ. ವಿಜ್ಞಾನ ವಿಷಯದಲ್ಲಿ ಪದವಿಪೂರ್ವ ಶಿಕ್ಷಣ ಪಡೆದ ವಿದ್ಯಾರ್ಥಿಗಳಿಗೆ 4 ವರ್ಷಗಳ ಪದವಿ ಶಿಕ್ಷಣ ಇದಾಗಿದ್ದು ಈ ವರ್ಷದಿಂದಲೇ ಅಂದರೆ, 2024-25ನೇ ಶೈಕ್ಷಣಿಕ ವರ್ಷದಿಂದಲೇ ಕಾರ್ಯಾರಂಭ ಮಾಡಲು ಫಾರ್ಮಸಿ ಕೌನ್ಸಿಲ್ ಆಫ್ ಇಂಡಿಯಾ ಅನುಮತಿ ನೀಡಿದ್ದು, ಇದು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಬೆಂಗಳೂರಿನಿಂದ ಸಂಯೋಜಿಸಲ್ಪಟ್ಟಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ತಿಳಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಸಂಸ್ಥೆಯ ಖ್ಯಾತಿಯನ್ನು ಇನ್ನಷ್ಟು ಹೆಚ್ಚಿಸುವ ಈ ಕೋರ್ಸ್ಗಾಗಿ ಈಗಾಗಲೇ ವಿಶೇಷ ಮುತುವರ್ಜಿವಹಿಸಿದ್ದು ಅನುಭವಿ ಶಿಕ್ಷಕರು, ವಿಶೇಷ ತರಗತಿ ಕೊಠಡಿಗಳು, ಆಧುನಿಕ ಪ್ರಯೋಗಾಲಯ, ನವೀನ ಗ್ರಂಥಾಲಯ, ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗಾಗಿ ವಿಶೇಷ ಸವಲತ್ತುಗಳುಳ್ಳ ವಸತಿ ನಿಲಯಗಳನ್ನು ರೂಪಿಸಲಾಗಿದೆ ಎಂದು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು. ನಮ್ಮ ಜೀವನದಲ್ಲಿ ಔಷಧಿ ಕ್ಷೇತ್ರವು ಅತ್ಯಂತ ಮಹತ್ವದ್ದಾಗಿದ್ದು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದೆಹಲಿಯಲ್ಲಿ ನಡೆದ 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ನಟ ರಿಷಬ್ ಶೆಟ್ಟಿ ಅವರಿಗೆ ಪ್ರದಾನ ಮಾಡಿದರು. ‘ಕಾಂತಾರ’ ಸಿನಿಮಾದಲ್ಲಿನ ನಟನೆಗಾಗಿ ಬೆಸ್ಟ್ ಆ್ಯಕ್ಟರ್ ನ್ಯಾಷನಲ್ ಅವಾರ್ಡ್ ಪಡೆದುಕೊಂಡಿದ್ದಾರೆ. 2022ರಲ್ಲಿ ‘ಹೊಂಬಾಳೆ ಫಿಲ್ಸ್’ ಮೂಲಕ ನಿರ್ಮಾಣಗೊಂಡ ‘ಕಾಂತಾರ’ ಸಿನಿಮಾಕ್ಕೆ ಸ್ವತಃ ರಿಷಬ್ ಶೆಟ್ಟಿ ನಿರ್ದೇಶನ ಅವರೇ ನಿರ್ದೇಶನ ಮಾಡಿದ್ದರು. ಭೂತಕೋಲದ ಕಥೆ ಇರುವ ಈ ಸಿನಿಮಾದಲ್ಲಿ ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಮುಂತಾದವರು ಅಭಿನಯಿಸಿದ್ದಾರೆ. ಸಿನಿಮಾದಲ್ಲಿ ರಿಷಬ್ ಶೆಟ್ಟಿ ಅವರ ನಟನೆ ಮತ್ತು ನಿರ್ದೇಶಕನಕ್ಕೆ ಯಶ ಕಂಡಿತ್ತು. ಕನ್ನಡ ಮಾತ್ರವಲ್ಲೇ ಬೇರೆ ಬೇರೆ ಭಾಷೆಗಳಿಗೆ ಡಬ್ ಆಗಿಯೂ ಈ ಸಿನಿಮಾ ಸೂಪರ್ ಹಿಟ್ ಆಗಿತ್ತು. ಇದೀಗ ಕಾಂತಾರಾ ಪ್ರಿಲ್ವೆಲ್ ಶೂಟಿಂಗ್ ನಡೆಯುತ್ತಿದೆ. ರಿಷಬ್ ಶೆಟ್ಟಿ ಅವರು ಪ್ರಶಸ್ತಿ ಪದಾನ ಸಮಾರಂಭದಲ್ಲಿ ಪಂಚೆ ಧರಿಸಿ ತೆರಳಿದ್ದು ಗಮನ ಸೆಳೆಯಿತು. ಖ್ಯಾತಿಯ ಹೊರತಾಗಿಯೂ ನೆಲದ ಸೊಗಡನ್ನೇ ಅನುಸರಿಸುವ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಿರುಪತಿಗೆ ನೇರ ರೈಲು ಸೇವೆ ಬೇಕೆಂಬ ದಶಕಗಳ ಕನಸು ನನಸಾಗಿದ್ದು, ವಾರಕ್ಕೆರಡು ದಿನವಿರುವ ಕಾಚಿಗುಡ – ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ ರೈಲನ್ನು ಮುರುಡೇಶ್ವರದ ತನಕ ವಿಸ್ತರಿಸಲಾಗಿದೆ. ಪ್ರತಿ ಬುಧವಾರ ಮತ್ತು ಶನಿವಾರ ಸಂಜೆ 4 ಗಂಟೆಗೆ ಬೈಂದೂರು ಕುಂದಾಪುರ ಉಡುಪಿ ಮಾರ್ಗದ ಮೂಲಕ ಹೊರಡುವ ರೈಲು ಮರುದಿನ ಬೆಳಿಗ್ಗೆ 11 ಗಂಟೆಗೆ ತಿರುಪತಿ ಬಳಿಯ ರೇಣಿಗುಂಟ ನಿಲ್ದಾಣದ ಮೂಲಕ ಹೈದರಾಬಾದಿನ ಕಾಚಿಗುಡ ತಲುಪಲಿದೆ. ವಾರದಲ್ಲಿ 2 ದಿನ ಸಂಚರಿಸುವ ಕಾಚಿಗುಡ – ಮಂಗಳೂರು ಸೆಂಟ್ರಲ್ ಎಕ್ಸ್ಪ್ರೆಸ್ ರೈಲು ಮಂಗಳವಾರ ಮತ್ತು ಶುಕ್ರವಾರ ಬೆಳಿಗ್ಗೆ 6-05ಕ್ಕೆ ಹೈದರಾಬಾದಿನ ಕಾಚಿಗುಡದಿಂದ ಹೊರಟು ತಿರುಪತಿಯ ರೇಣಿಗುಂಟ ನಿಲ್ದಾಣಕ್ಕೆ ಸಂಜೆ 4-45ಕ್ಕೆ ತಲುಪಿ ಅಲ್ಲಿಂದ ಮಂಗಳೂರು ಸೆಂಟ್ರಲ್ ನಿಲ್ದಾಣಕ್ಕೆ ಬುಧವಾರ ಮತ್ತು ಗುರುವಾರ ಬೆಳಿಗ್ಗೆ 9-30ಕ್ಕೆ ತಲುಪುತ್ತಿತ್ತು. ಮಂಗಳೂರು ಸೆಂಟ್ರಲ್ ನಿಲ್ದಾಣದಿಂದ ರಾತ್ರಿ 8-05ಕ್ಕೆ ಹೊರಟು ಮರುದಿನ ಬೆಳಿಗ್ಗೆ 11-45ಕ್ಕೆ ತಿರುಪತಿಯ ರೇಣಿಗುಂಟ ನಿಲ್ದಾಣ ತಲುಪುತ್ತಿತ್ತು. ಇದೀಗ ಕಾಚಿಗುಡ – ಮಂಗಳೂರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮನುಷ್ಯನ ಹೊರನೋಟದ ಲಕ್ಷಣಗಳಿಂದ ಆತನ ವ್ಯಕ್ತಿತ್ವವನ್ನು ಅಳೆಯುವುದು ಮೂರ್ಖತನ. ಒಬ್ಬರ ಪ್ರತಿಭೆಯನ್ನು ಕೌಶಲ್ಯವನ್ನು ಅರ್ಥಮಾಡಿಕೊಳ್ಳುವ ಮತ್ತು ಅಭಿನಂದಿಸುವ ಮನೋಭಾವವನ್ನು ನಾವು ಬೆಳೆಸಿಕೊಳ್ಳಬೇಕು ಎಂದು ಯುವ ಲೇಖಕ ನರೇಂದ್ರ ಎಸ್. ಗಂಗೊಳ್ಳಿ ಅಭಿಪ್ರಾಯಪಟ್ಟರು. ಅವರು ಇತ್ತೀಚೆಗೆ ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳ ಆಶ್ರಯದಲ್ಲಿ ದೈಹಿಕ ಶಿಕ್ಷಣ ಉಪನ್ಯಾಸಕರಾದ ದೀಕ್ಷಿತ್ ಮೇಸ್ತ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ಸೂರಜ್ ಸಾರಂಗ ಇವರ ಮುತುವರ್ಜಿಯಲ್ಲಿ ನಡೆದ ಕ್ರೀಡಾ ತರಬೇತುದಾರರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು. ಯಾವುದೇ ರಂಗದಲ್ಲಿ ಉಪಕಾರ ಮಾಡಿದವರನ್ನು ಸ್ಮರಿಸುವುದು ಮತ್ತು ಗೌರವಿಸುವ ಸಂಪ್ರದಾಯವು ಸಮಾಜದಲ್ಲಿ ಉತ್ತಮ ನಡವಳಿಕೆಯನ್ನು ಪ್ರೋತ್ಸಾಹಿಸುವುದಕ್ಕೆ ನೆರವಾಗುತ್ತದೆ. ಇದು ಎಲ್ಲರ ನಡೆಯಾಗಬೇಕು ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಸರಸ್ವತಿ ವಿದ್ಯಾಲಯದ ವಿದ್ಯಾರ್ಥಿಗಳಿಗೆ ವಿವಿಧ ಕ್ರೀಡೆಗಳಲ್ಲಿ ತರಬೇತಿ ನೀಡಿದ ತರಬೇತುದಾರರನ್ನು ಮತ್ತು ಕ್ರೀಡಾ ಕೂಟಕ್ಕೆ ಪ್ರೋತ್ಸಾಹ ನೀಡಿದವರನ್ನು ಹಾಗೂ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಸರಸ್ವತಿ ವಿದ್ಯಾಲಯದ ವಿದ್ಯಾರ್ಥಿ ಕ್ರೀಡಾ ಪ್ರತಿಭೆಗಳನ್ನು ಅಭಿನಂದಿಸಲಾಯಿತು. ದೈಹಿಕ ಶಿಕ್ಷಣ ಮಾರ್ಗದರ್ಶಕರಾದ ದೀಕ್ಷಿತ್ ಮೇಸ್ತ ಮತ್ತು ಸೂರಜ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆಯಡಿ ಯುವ ಜನರನ್ನು ಸ್ವಾವಲಂಬಿ ಯಾಗಲು ಉತ್ತೇಜಿಸುವ ನಿಟ್ಟಿನಲ್ಲಿ ಬೆಂಗಳೂರಿನ ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ 18 ರಿಂದ 40 ವರ್ಷದೊಳಗಿನ ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಅನುತ್ತೀರ್ಣವಾದ ಪರಿಶಿಷ್ಟ ಜಾತಿಯ ಯುವಕ ಹಾಗೂ ಯುವತಿಯರಿಗೆ ನವೆಂಬರ್ 7 ರಿಂದ 26 ರವರೆಗೆ ಒಟ್ಟು 20 ದಿನಗಳ ಹೊಲಿಗೆ ತರಬೇತಿ ಶಿಬಿರ ಹಾಗೂ ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಅನುತ್ತೀರ್ಣವಾದ ಪರಿಶಿಷ್ಟ ಜಾತಿಯ ಮಹಿಳಾ ಅಭ್ಯರ್ಥಿಗಳಿಗೆ ನವೆಂಬರ್ 15 ರಿಂದ 26 ರವರೆಗೆ ಒಟ್ಟು 12 ದಿನಗಳ ವಿಡಿಯೋಗ್ರಾಫೀ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ. ತರಬೇತಿ ಶಿಬಿರಕ್ಕೆ ಹಾಜರಾಗುವ ಅಭ್ಯರ್ಥಿಗಳಿಗೆ ಊಟೋಪಹಾರ, ಪ್ರಮಾಣ ಪತ್ರ ಹಾಗೂ ಸಾಮಾನ್ಯ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಅರ್ಜಿ ಸಲ್ಲಿಸಲು ನವೆಂಬರ್ 2 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸೇವಾ ಸಂಗಮ ಶಿಶು ಮಂದಿರದ ಆಶ್ರಯದಲ್ಲಿ, ಸುರಭಿ ರಿ. ಬೈಂದೂರು ಸಹಕಾರದಲ್ಲಿ ಶಿಶುಮಂದಿರದ ಬಾಲ ಗೋಕುಲದ ವಿದ್ಯಾರ್ಥಿಗಳಿಗೆ 3 ದಿನಗಳ ದಸರಾ ಬೇಸಿಗೆ ಶಿಬಿರಕ್ಕೆ ಸಾಹಿತಿ ಪುಂಡಲೀಕ ನಾಯಕ್ ಅವರು ಚಾಲನೆ ನೀಡಿದರು. ಈ ವೇಳೆ ಅವರು ಮಾತನಾಡಿ ಬಾಲ್ಯಾವಸ್ಥೆಯಲ್ಲಿಯೇ ನಮ್ಮ ಭಾರತೀಯ ಸಂಸ್ಕೃತಿ, ಸಂಸ್ಕಾರ, ಕಲೆಗಳನ್ನು ಪರಿಚಯಿಸುವ ನಿಟ್ಟಿನಲ್ಲಿ ನಡೆಯುತ್ತಿರುವ ಈ ಶಿಬಿರವು ಉತ್ತಮವಾಗಿ ಮೂಡಿ ಬರಲಿ ಎಂದು ಶುಭ ಹಾರೈಸಿದರು. ಸೇವಾ ಸಂಗಮ ಟ್ರಸ್ಟ್ ಕುಂದಾಪುರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಶಿಬಿರದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸೇವಾ ಸಂಗಮ ಶಿಶುಮಂದಿರದ ಅಧ್ಯಕ್ಷರಾದ ಮಂಜುನಾಥ್ ಶೆಟ್ಟಿ ವಹಿಸಿದ್ದು ಶಿಬಿರದ ಉದ್ದೇಶ ಹಾಗೂ ಕಾರ್ಯಚಟುವಟಿಕೆ ಬಗ್ಗೆ ತಿಳಿಸಿದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ಯೋಗ ಶಿಕ್ಷಕ ಉಪ್ಪುಂದ ಜೆಸಿಐ ಅಧ್ಯಕ್ಷರಾದ ಮಂಜುನಾಥ ದೇವಾಡಿಗ ಶುಭ ಹಾರೈಸಿದರು. ಅನನ್ಯಾ ಆಚಾರ್ ಸ್ವಾಗತಿಸಿ, ಕಾರ್ಯಕ್ರಮವನ್ನು ಸುರಭಿ ನಿರ್ದೇಶಕ ಹಾಗೂ ಸೇವಾ ಸಂಗಮ ಶಿಶು ಮಂದಿರದ ಉಪಾಧ್ಯಕ್ಷರಾದ ಸುಧಾಕರ್ ಪಿ. ಬೈಂದೂರು…
