Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಕಾಲೇಜು ಮಟ್ಟದಲ್ಲಿ ಕ್ರೀಡೆಗೆ ಪ್ರಾಮುಖ್ಯತೆಯನ್ನು ನೀಡಿದರೆ ಮಾತ್ರ ದೇಶದಲ್ಲಿ ಕ್ರೀಡೆ ಬೆಳೆಯಲು ಸಾಧ್ಯ ಎಂದು ಕರ್ನಾಟಕ ರಾಜ್ಯ ಅಮೆಚ್ಯೂರ್ ಕಬಡ್ಡಿ ಅಸೋಸಿಯೇಷನ್ ಅಧ್ಯಕ್ಷ ರಾಕೇಶ್ ಮಲ್ಲಿ ಹೇಳಿದರು. ಇಲ್ಲಿರುವ ಆಳ್ವಾಸ್ ಕಾಲೇಜಿನ ಮುಂಡ್ರೆದಗುತ್ತು ಕೆ. ಅಮರನಾಥ ಶೆಟ್ಟಿ ಸ್ಮಾರಕ ಶೆಟ್ಟಿ ಸಭಾಂಗಣದಲ್ಲಿ ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನ ಆತಿಥ್ಯದಲ್ಲಿ ನಡೆದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ರಾಜ್ಯ) ಮಟ್ಟದ ಪುರುಷರ ಮತ್ತು ಮಹಿಳಾ ಕಬಡ್ಡಿ ಚಾಂಪಿಯನ್‌ಶಿಪ್‌ನಲ್ಲಿ ಅವರು ಮಾತನಾಡಿದರು. ಕ್ರೀಡೆಯನ್ನು ಬೆಳೆಸುವಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠನದ ಕೊಡುಗೆ ಅಪಾರ. ಸರ್ಕಾರದ ನೆರವಿಲ್ಲದೆಯೂ ಆಳ್ವಾಸ್ ಸಂಸ್ಥೆ ಕ್ರೀಡಾಪಟುಗಳ ಬೆಳವಣಿಗೆಗೆ ಶ್ರಮ ಪಡುತ್ತಿದೆ. ಈ ಮಾದರಿ ದೇಶದಲ್ಲೇ ಮೊದಲು ಎಂದರು. ಮುಂದಿನ ದಿನಗಳಲ್ಲಿ ನಮ್ಮ ಫೆಡರೇಶನ್ ಕಪ್ ಅನ್ನು ಆಳ್ವಾಸ್‌ನಲ್ಲೆ ನಡೆಸಲಾಗುವುದು ಎಂದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ವೈದ್ಯಕೀಯ ವಿದ್ಯಾರ್ಥಿಗಳು ದೇಶಿಯ ಕ್ರೀಡೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ 15 ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯ ಹಾಗೂ 8 ಡಾ. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯ ಸೇರಿದಂತೆ ಒಟ್ಟು 23 ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಹೆಚ್.ಎಂ.ಐ.ಎಸ್ ತಂತ್ರಾಂಶದ ಮೂಲಕ ಇಲಾಖಾ ವೆಬ್‌ಸೈಟ್ www.sw.kar.nic.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ: 0820-2574892 ಹಾಗೂ ಉಡುಪಿ ದೂ.ಸಂಖ್ಯೆ: 0820-2528884, ಕುಂದಾಪುರ ದೂ.ಸಂಖ್ಯೆ: 08254-230609/ 298089 ಹಾಗೂ ಕಾರ್ಕಳ ದೂ.ಸಂಖ್ಯೆ: 08258-232133/ 298134 ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: 2025-26 ಜಿ.ಎಸ್.ಬಿ ಸಮಾಜದ ಶ್ರೀ ಕಾಶೀ ಮಠದ ಪರಮಪೂಜ್ಯ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ ಶತಮಾನೋತ್ಸವ ವರ್ಷ ಆಚರಣೆಯ ಕುರಿತು ಜಿ.ಎಸ್.ಬಿ ಸರ್ವ ದೇವಾಲಯ ಒಕ್ಕೂಟದ  ಕುಂದಾಪುರ ವಲಯದ ಪೂರ್ವಭಾವಿ ಮಾಹಿತಿ ಸಭೆ ಕೋಟೇಶ್ವರ ಶ್ರೀ ಪಟ್ಟಾಭಿ ರಾಮಚಂದ್ರ ದೇವಸ್ಥಾನದಲ್ಲಿ ನಡೆಯಿತು. ಕಾಶೀ ಮಠಾಧೀಶ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ನಿರ್ಧರಿಸಲಾಯಿತು. ಸರ್ವ ದೇವಾಲಯ ಒಕ್ಕೂಟದ ಅಧ್ಯಕ್ಷ ಅತುಲ್ ಕುಡ್ವ ವಿಸ್ತೃತ ಮಾಹಿತಿ ನೀಡಿದರು. ಗುರುಗಳ ಜನ್ಮ ಶತಮಾನೋತ್ಸವ ಆಚರಿಸುವುದು ನಮ್ಮೆಲ್ಲರ ಸೌಭಾಗ್ಯ ಎಂದರು. ಸುಧೀಂದ್ರ ಫಲೋದ್ಯಾನಸುಮಾರು 1 ಲಕ್ಷಕ್ಕೂ ಹೆಚ್ಚು ವಿವಿಧ ಬಗೆಯ ಹಣ್ಣುಗಳ ಸಸಿಯನ್ನು ನೆಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಊರಿನ ಸಮಾಜ ಬಾಂಧವರು ಮನೆ, ಕಛೇರಿ, ಉದ್ಯಮ ಹಾಗೂ ಇನ್ನಿತರ ಕಡೆಗಳಲ್ಲಿ ಈ ಕಾರ್ಯಕ್ರಮವನ್ನು ಏರ್ಪಡಿಸಬಹುದು ಎಂದರು. ಶ್ರೀ ಸುಧೀಂದ್ರ ಸ್ವಾಮೀಜಿ ಪಾದುಕೆ ರಥಯಾತ್ರೆಗುರುವರ್ಯರ ಪಾದುಕೆಯ ರಥಯಾತ್ರೆ ಜುಲೈ 7 ರಂದು ಶ್ರೀಮದ್ ವರದೇಂದ್ರ ತೀರ್ಥ ಸ್ವಾಮೀಜಿಯವರ ಆರಾಧನಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.  ಕುಂದಾಪುರ: ಮದ್ರಾಸ್  ಐ.ಐ.ಟಿ ವತಿಯಿಂದ 2024ರ ಆರ್ಕಿಟೆಕ್ಚರ್  ಆಪ್ಟಿಟ್ಯೂಡ್  ಟೆಸ್ಟ್ ( ಎ.ಎ.ಟಿ ) ಪರೀಕ್ಷೆಯನ್ನು ಹಮ್ಮಿಕೊಳ್ಳಲಾಗಿತ್ತು. ಕೆಲವೇ ಐ ಐ ಟಿ ಕಾಲೇಜುಗಳಲ್ಲಿ ಆರ್ಕಿಟೆಕ್ಚರ್ ಕಲಿಯಲು ಅವಕಾಶವಿರುತ್ತದೆ. ಇಂತಹ ಅತ್ಯಂತ ಕಷ್ಟಕರವಾದ ಪರೀಕ್ಷೆಯಲ್ಲಿಯೂ ಕಾರ್ಕಳದ ಕ್ರಿಯೇಟಿವ್ ಪಿಯು ಕಾಲೇಜಿನ ವಿದ್ಯಾರ್ಥಿ ಶಮಿತ್. ಎನ್ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿಯ ಸಾಧನೆಯನ್ನು ಶಿಕ್ಷಣ ಪ್ರತಿಷ್ಠಾನದ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಶಿಸ್ತು, ಸಮಯಪ್ರಜ್ಞೆ, ಸೃಜನಶೀಲತೆ, ಕ್ರೀಡಾಮನೋಭಾವ ಜೊತೆಗೆ ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯ ಅಪಾರ ಎಂದು ಸ್ಕೌಟ್ಸ್ ಮತ್ತು ಗೈಡ್ಸ್‌ನ ಜಿಲ್ಲಾ ಮುಖ್ಯ ಆಯುಕ್ತರಾದ ಆಳ್ವಾಸ್ ಶಿಕ್ಷಣ ಪ್ರತಿಷ್ಠನದ ಡಾ. ಎಂ ಮೋಹನ ಆಳ್ವ ಹೇಳಿದರು. ನಗರದ ಸ್ವರಾಜ್ ಮೈದಾನದ ಸ್ಕೌಟ್ಸ್ – ಗೈಡ್ಸ್ ಕನ್ನಡ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ, ಮೂಡುಬಿದಿರೆ ಸ್ಥಳೀಯ ಸಂಸ್ಥೆ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠತನದ ಮೂಡುಬಿದಿರೆ ಸಹಯೋಗದಲ್ಲಿ ನಡೆದ 2024-205 ಸಾಲಿನ ಎಸ್ಸಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕ ಪಡೆದ ಪ್ರತಿಭಾನ್ವಿತ ಸ್ಕೌಟ್ಸ್ ಮತ್ತು ಗೈಡ್ಸ್ ಮತ್ತು ರೋವರ್ಸ್ ರೆಂಜರ್ಸ್‌ಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣದ ಪಠ್ಯ ಕಲಿಕೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದ ಮಕ್ಕಳು ಶೈಕ್ಷಣಿಕ ಪರೀಕ್ಷೆಗಳಲ್ಲಿ ಉತ್ತಮ ಅಂಕ ಗಳಿಸಿರುವುದು ಅಭಿನಂದನಾರ್ಹ ಎಂದರು. ಉತ್ತಮ ಅಂಕಗಳನ್ನು ಗಳಿಸಿದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಿಮ್ಮದು ವೇದಿಕೆ ನಮ್ಮದು ಕಾರ್ಯಕ್ರಮದಡಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ 96ನೇ ತಿಂಗಳ ಕಾರ್ಯಕ್ರಮ ಇತ್ತೀಚೆಗೆ ಯಶಸ್ವಿಯಾಗಿ ನಡೆಯಿತು. ವೇದಿಕೆಯಲ್ಲಿ ಸದಾನಂದ ಕುಂದಾಪುರ, ಗಣೇಶ್ ಪೂಜಾರಿ ಗಂಗೊಳ್ಳಿ, ಮಾಲತಿ ಗಣೇಶ್ ಪೂಜಾರಿ, ಶ್ರೀಧರ್ ನಾಯಕ್ ಗುಡ್ಡೆಯಂಗಡಿ ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ರವರು ಉಪಸ್ಥಿತರಿದ್ದರು. ಅಕಾಡೆಮಿಯ ವತಿಯಿಂದ ಉದಯೋನ್ಮುಖ ಕೊಳಲು ವಾದಕ ಶಾಮ್ ಜಿ.ಎನ್. ಪೂಜಾರಿ, ಗಂಗೊಳ್ಳಿ ಹಾಗೂ ಉಪ್ಪಿನಕುದ್ರು ಸರಕಾರಿ ಪ್ರೌಢ ಶಾಲೆಯಲ್ಲಿ 2023-24ರ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಸಮೀಕ್ಷಾ ಪೂಜಾರಿಯವರನ್ನು ಗೌರವಿಸಲಾಯಿತು. ನಂತರ ಬಾಲ ಪ್ರತಿಭೆ ಶಾಮ್ ಜಿ.ಎನ್. ಪೂಜಾರಿಯವರು ನಡೆಸಿಕೊಟ್ಟ ಕೊಳಲು ವಾದನ ಕಛೇರಿ ನೆರೆದ ಪ್ರೇಕ್ಷಕರನ್ನು ದಿಗ್ಭ್ರಮೆಗೊಳಿಸಿತು. ನಿವೃತ್ತ ಶಿಕ್ಷಕ ನಾಗೇಶ್ ಶ್ಯಾನುಭಾಗ್ ರವರು ಕಾರ್ಯಕ್ರಮ ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಅಕ್ರಮವಾಗಿ ಟಾಟಾ ಏಸ್ ವಾಹನದಲ್ಲಿ ಜಾನುವಾರು ಸಾಗಿಸುತ್ತಿದ್ದಾಗ ದಾಳಿ ನಡೆಸಿದ ಬೈಂದೂರು ಪೊಲೀಸರು ಎತ್ತು ಮತ್ತು ವಾಹನವನ್ನು ವಶಪಡಿಸಿಕೊಂಡಿದ್ದಾರೆ. ವಾಹನದಲ್ಲಿದ್ದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಸೋಮವಾರ ರಾತ್ರಿ 9.30 ರ ಸುಮಾರಿಗೆ ಘಟನೆ ನಡೆದಿದ್ದು, ಬೈಂದೂರು ಎಸೈ ತಿಮ್ಮೇಶ್.ಬಿ.ಎನ್, ಗಸ್ತಿನಲ್ಲಿದ್ದಾಗ ಬಂದ ಮಾಹಿತಿಯಂತೆ ದಾಳಿ ನಡೆಸಿದ್ದಾರೆ. ಇಬ್ಬರು ಆರೋಪಿಗಳು ಟಾಟಾ ಎಸ್ ವಾಹನದಲ್ಲಿ ಜಾನುವಾರನ್ನು ತುಂಬಿಕೊಂಡು ಶಿರೂರು ಕಡೆಯಿಂದ ಬೈಂದೂರು ಕಡೆಗೆ ಬರುತ್ತಿದ್ದರು. ಶಿರೂರು ಕೆಳಪೇಟೆ ಬಳಿ ವಾಹನ ತಪಾಸಣೆ ಮಾಡುತ್ತಿರುವಾಗ ವಾಹನವನ್ನು ತಡೆಯಲಾಯಿತು. ಟಾಟಾ ಏಸ್ ವಾಹನವನ್ನು ನಿಲ್ಲಿಸಲು ಸೂಚಿಸಿದಾಗ ಚಾಲಕನು ವಾಹನವನ್ನು ನಿಲ್ಲಿಸದೇ ಮುಂದಕ್ಕೆ ಚಲಾಯಿಸಿಕೊಂಡು ಹೋಗಿದ್ದು, ಕೂಡಲೇ ಟಾಟಾ ಎಸ್ ವಾಹನವನ್ನು ಜೀಪಿನಲ್ಲಿ ಬೆನ್ನಟ್ಟಿ ಕೊಂಡು ಹೋಗಿ ಮೊಮಿನ್ ಮೊಹಲ್ಲಾ ಬಳಿ ತಡೆದು ನಿಲ್ಲಿಸಿದಾಗ ಟಾಟಾ ಎಸ್ ವಾಹನದ ಚಾಲಕ ಮತ್ತು ಇನ್ನೊಬ್ಬ ವ್ಯಕ್ತಿಯು ವಾಹನವನ್ನು ಬಿಟ್ಟು ಪರಾರಿಯಾಗಿದ್ದಾರೆ. ವಾಹನದ ಹಿಂಬದಿಯಲ್ಲಿ ಒಂದು ಎತ್ತನ್ನು ಹಿಂಸಾತ್ಮಕವಾಗಿ ಹಳದಿ ನೈಲಾನ್ ಹಗ್ಗದಿಂದ ಕೈಕಾಲುಗಳನ್ನು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ನೇತೃತ್ವದಲ್ಲಿ‌ ಈ ಭಾರಿ ಆಯೋಜಿಸಲಾಗುತ್ತಿರುವ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಪೂರ್ವಭಾವಿ ಸಭೆ ಸೋಮವಾರ ಕಲಾಕ್ಷೇತ್ರ ಕಛೇರಿಯಲ್ಲಿ ಜರುಗಿತು. ಈ ವೇಳೆ ಕಲಾಕ್ಷೇತ್ರ ಕುಂದಾಪುರದ ಅಧ್ಯಕ್ಷ ಬಿ. ಕಿಶೋರ್ ಕುಮಾರ್ ಮಾತನಾಡಿ, ಕುಂದಾಪುರ ಊರು ಚಿಕ್ಕದಿರಬಹುದು ಆದರೆ ಇಲ್ಲಿನವರ ಸಾಧನೆ, ಸಾಧಕರನ್ನು ಬೇರೆಲ್ಲೂ ಕಾಣಲು ಸಾಧ್ಯವಿಲ್ಲ. ಹಲವು ಪ್ರಥಮಗಳಿಗೆ ಸಾಕ್ಷಿಯಾದ ಕುಂದಾಪುರ ಹಾಗೂ ಕುಂದಾಪುರ ಕನ್ನಡಕ್ಕೆ ತನ್ನದೇ ಆದ ವೈಶಿಷ್ಟ್ಯತೆ ಇದೆ. ನಮ್ಮ ಊರು, ಸಂಸ್ಕೃತಿ ಹಾಗೂ ಪರಂಪರೆಯ ನೆನಪಿಸಿಕೊಳ್ಳುವುದು ಬಹುಮುಖ್ಯ. ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಆಚರಣೆ ಅರಂಭಿಸಿದಾಗಿಂದ ಭಾಷೆಯ ಅಭಿಮಾನ ಹೆಚ್ಚಿದೆ ಎಂದರು. ಸಂಘಟಕ ವಸಂತ್ ಗಿಳಿಯಾರ್ ಮಾತನಾಡಿ, ಕನ್ನಡ ಸಾರಸತ್ವ ಜಗತ್ತಿಗೆ ಮೂಲಭೂಮಿಕೆ ಒದಗಿಸಿದ್ದು ಕುಂದಾಪ್ರ ಕನ್ನಡ. ಕೆಲವರ್ಷದ ಈಚೆಗೆ ಭಾಷೆಗೆ ಬಹುದೊಡ್ಡ ಮೌಲ್ಯ ಕಟ್ಟಿಕೊಡುವ ಕೆಲಸವಾಗುತ್ತಿದೆ. ಇದು ಹೀಗೆಯೇ ಮುಂದುವರಿಯುವುದು ಬಹುಮುಖ್ಯ ಎಂದರು. ಸಭೆಯಲ್ಲಿದ್ದ ಉದಯ ಶೆಟ್ಟಿ, ಜಾಯ್ ಜೆ. ಕರ್ವೆಲ್ಲೋ ಮಾತನಾಡಿ ಗ್ರಾಮೀಣ ಕ್ರೀಡೆಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ವಿದ್ಯಾಗಿರಿಯ ಜಗಜ್ಯೋತಿ ಬಸವೇಶ್ವರ ವೃತ್ತದ, ಜ್ಞಾನಯೋಗಿ ಸರ್ವಜ್ಞ ಆವರಣದಲ್ಲಿ ನೂತನವಾಗಿ ನಿರ್ಮಾಣವಾದ ಕಾಲೇಜು ಸಂಕೀರ್ಣ ಹಾಗೂ ವಿದ್ಯಾರ್ಥಿನಿ ವಸತಿ ನಿಲಯದ ಉದ್ಘಾಟನಾ ಸಮಾರಂಭ ನಡೆಯಿತು. ನೂತನ ಕಾಲೇಜು ಸಂಕೀರ್ಣ-‘ಜಗನ್ಮೋಹನ’ದ ಉದ್ಘಾಟನೆಯನ್ನು ಕರ್ನಾಟಕ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮಖ್ಯ ಆಯುಕ್ತ ಪಿಜಿಆರ್ ಸಿಂಧ್ಯ, ಉದ್ಯಮಿ ಕೆ. ಶ್ರೀಪತಿ ಭಟ್ ನೆರವೇರಿಸಿದರು. ಡಾ. ಎಂ ಮೋಹನ ಆಳ್ವರ ಧರ್ಮಪತ್ನಿ ದಿ. ಶೋಭಾ ಆಳ್ವರ ನೆನಪಿಗಾಗಿ ನೂತನ ವಸತಿ ನಿಲಯಕ್ಕೆ ‘ಶೋಭಾಯಮಾನ’ ಎಂದು ಹೆಸರಿಡಲಾಗಿದ್ದು, ಇದರ ಉದ್ಘಾಟನೆಯನ್ನು ಲಲಿತ ರಾಮಣ್ಣ ಶೆಟ್ಟಿ ಮತ್ತು ಜಯಶ್ರೀ ಅಮರನಾಥ್ ಶೆಟ್ಟಿ ನೇರವೇರಿಸಿದರು. ‘ಜಗನ್ಮೋಹನ’ದ ವಿಶೇಷತೆಗಳು:ಅತ್ಯಾಧುನಿಕ ವ್ಯವಸ್ಥೆಯನ್ನೊಳಗೊಂಡ ನೂತನ ಕಾಲೇಜು ಕಟ್ಟಡ- ‘ಜಗನ್ಮೋಹನ’ದಲ್ಲಿ 68 ತರಗತಿ ಕೊಠಡಿಗಳಿದ್ದು, 3 ಭೌತಶಾಸ್ತ್ರದ ಲ್ಯಾಬ್, 3 ರಸಾಯಶಾಸ್ತ್ರದ ಲ್ಯಾಬ್, 2 ಜೀವಶಾಸ್ತ್ರದ ಲ್ಯಾಬ್ ಹಾಗೂ ಒಂದು ಸುಸಜ್ಜಿತ ಕಂಪ್ಯೂಟರ್ ಲ್ಯಾಬ್‌ನ್ನು ಹೊಂದಿದೆ. ವಿಶಾಲವಾದ ಸ್ಟಡಿಹಾಲ್‌ನ್ನು ಹೊಂದಿರುವ ಈ ಕಟ್ಟಡ, ಪ್ರತಿಧ್ವನಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ವಿದ್ಯಾರ್ಥಿಗಳು ತಮಗೆ ಸಿಗುವ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಂಡು ವ್ಯಕ್ತಿತ್ವವನ್ನು ಬೆಳೆಸಿಕೊಳ್ಳುವಲ್ಲಿ ಪರಿಶ್ರಮವನ್ನು ಪಡಬೇಕು. ಆಗ ಯಶಸ್ಸು ತಾನಾಗಿಯೇ ಬರುತ್ತದೆ ಎಂದು ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಜಿ ಗೋಪಾಲ ಪೂಜಾರಿ ಅವರು ಹೇಳೀದರು. ಗಂಗೊಳ್ಳಿಯ ಬಿಲ್ಲವರ ಹಿತರಕ್ಷಣಾ ವೇದಿಕೆಯ ವತಿಯಿಂದ ನಡೆದ ಉಚಿತ ನೋಟ್ ಪುಸ್ತಕ ಮತ್ತು ಲೇಖನ ಸಾಮಗ್ರಿಗಳ ವಿತರಣಾ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಿ ಮಾತನಾಡಿದರು. ಯಾವುದೇ ಸಮಾಜದ ಅಭಿವೃದ್ಧಿಯಲ್ಲಿ ಶಿಕ್ಷಣವು ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಹಾಗಾಗಿ ಉತ್ತಮ ಶಿಕ್ಷಣವನ್ನು ಪಡೆದುಕೊಳ್ಳುವಲ್ಲಿ ಹೆಚ್ಚಿನ ಗಮನ ಹರಿಸಬೇಕು ಎಂದು ಅವರು ಹೇಳಿದರು. ಕಾರ್ಯಕ್ರಮದಲ್ಲಿ ಒಟ್ಟು 140 ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಬಿಲ್ಲವರ ಹಿತರಕ್ಷಣ ವೇದಿಕೆ ಉಪಾಧ್ಯಕ್ಷ ಜಿ.ಕೆ ವೆಂಕಟೇಶ ಕೊಡೇರಿ ಸ್ವಾಗತಿಸಿದರು. ಅನಂತ ಪೂಜಾರಿ ಕೊಡೇರಿ ಕಾರ್ಯಕ್ರಮ ನಿರ್ವಹಿಸಿದರು. ಆಕಾಶ್ ಪೂಜಾರಿ ವಂದಿಸಿದರು.

Read More