ಕುಂದಾಪ್ರ ಡಾಟ್ ಕಾಂ ಸುದ್ದಿ.ಗಲ್ಫ್: ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ವತಿಯಿಂದ ಯುಎಇ ನಲ್ಲಿ ನೆಲೆಸಿರುವ ಕುಂದಗನ್ನಡಿಗರಿಗಾಗಿ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಸ್ಪರ್ದೆಗಳು ಭಾನುವಾರ ದುಬಾಯಿನ ಜಬಿಲ್ ಪಾರ್ಕ್ ನಲ್ಲಿ ನಡೆಯಿತು. ಅನಿವಾಸಿ ಕುಂದಗನ್ನಡಿಗರು ಗಲ್ಫ್ ರಾಷ್ಟ್ರಗಳಲ್ಲಿ ತಮ್ಮ ಭಾಷಿಗರನ್ನು ಒಗ್ಗೂಡಿಸುದರ ಜೊತೆಗೆ ಭಾಷೆಯ ಅಸ್ಥಿತ್ವವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ನಮ್ಮ ಕುಂದಾಪ್ರ ಕನ್ನಡ ಬಳಗ ಗಲ್ಫ್ ಹಲವಾರು ವರ್ಷಗಳಿಂದ ಕೊಲ್ಲಿ ರಾಷ್ಟ್ರದಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡುಬರುತ್ತಿದೆ. ಅಂತೆಯೇ ಪ್ರತಿ ವರ್ಷದಂತೆ ಈ ವರ್ಷವು ಕೂಡ ವಿಶೇಷ ರೀತಿಯಲ್ಲಿ ಫಾಮಿಲಿ ವಿಹಾರ ಕೂಟ ಮತ್ತು ಗ್ರಾಮೀಣ ಆಟೋಟ ಸ್ಫರ್ಧೆಗಳು ಅದ್ದೂರಿಯಾಗಿ ನಡೆಯಿತು.ಕಾರ್ಯಕ್ರಮದಲ್ಲಿ 100ಕ್ಕೂ ಹೆಚ್ಚು ಅರಬ್ಬ ನಾಡಿನಲ್ಲಿ ನೆಲೆಸಿರುವ ಕುಂದಗನ್ನಡಿಗರು ಭಾಗವಹಿಸಿದ್ದರು. ಆಟೋಟ ಸ್ಫರ್ಧೆಗಳಿಗೆ ಐದು ತಂಡಗಳಾಗಿ ಮಾಡಲಾಗಿದ್ದು ಪ್ರತೀ ತಂಡಗಳಿಗೆ ಕುಂದಾಪುರದ ವಿಶೇಷತೆಗಳಲ್ಲಿ ಒಂದಾದ ಪಂಚಗಂಗಾವಳಿ ನದಿಗಳಾದ ಸೌರ್ಪಣಿಕ , ವರಾಹಿ , ಖೇಟಾ , ಕುಬ್ಜಾ ಮತ್ತು ಚಕ್ರಾ ಎಂದು ಕುಂದಾಪುರದಲ್ಲಿ ಸಂಗವಿಸುವ ಐದು…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕೊಡ ಮಾಡುವ 2024ನೇ ಸಾಲಿನ ಡಾ. ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಗಂಗೊಳ್ಳಿಯ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಶಾಮ್ ಜಿ. ಎನ್. ಪೂಜಾರಿ ಆಯ್ಕೆಯಾಗಿದ್ದಾರೆ. ಈತ ಗಂಗೊಳ್ಳಿಯ ಛಾಯಾಗ್ರಾಹಕ ಗಣೇಶ್ ಪೂಜಾರಿ ಮತ್ತು ಪ್ರಾಧ್ಯಾಪಕಿ ಮಾಲತಿ ಗಣೇಶ ದಂಪತಿಯ ಪುತ್ರ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಿಂದ ಉಪ್ಪಿನಕುದ್ರು ಗೊಂಬೆಯಾಟ ರಂಗಭೂಮಿಯ ಹರಿಕಾರ ಕೊಗ್ಗ ದೇವಣ್ಣ ಕಾಮತ್ ಅವರ ಸ್ಮರಣಾರ್ಥ ನೀಡಲಾಗುತ್ತಿರುವ 2024-25ನೇ ಸಾಲಿನ ‘ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ’ಗೆ ಖ್ಯಾತ ಜಾದೂ ಕಲಾವಿದ, ಲೇಖಕ, ನಟ ಓಂ ಗಣೇಶ್ ಉಪ್ಪುಂದ ಅವರನ್ನು ಸಮಿತಿ ಆಯ್ಕೆ ಮಾಡಿದೆ. ಓಂ ಗಣೇಶ್ ಉಪ್ಪುಂದ ಅವರದ್ದು ಸೃಜನಶೀಲ ವ್ಯಕ್ತಿತ್ವ. ನಾಟಕದಲ್ಲಿ ಅಭಿನಯ, ಆರ್ಕೆಸ್ಟ್ರಾ ತಂಡ ಕಟ್ಟಿ ಹಿನ್ನೆಲೆ ಸಂಗೀತ ನುಡಿಸುವುದರಿಂದ ಆರಂಭಿಸಿ ವಿಶ್ವದಾದ್ಯಂತ ಜಾದೂ ಪ್ರದರ್ಶನ ನೀಡಿ ಜಾದೂ ರಂಗದಲ್ಲಿ ಅಪಾರ ಖ್ಯಾತಿ ಗಳಿಸಿದರು. ಜಾದೂವಿನೊಂದಿಗೆ ಅವರ ಬೆರಳ ನೆರಳಿನಾಟ ಪ್ರದರ್ಶನವೂ ಖ್ಯಾತಿ ಗಳಿಸಿತ್ತು. ಈ ಮಧ್ಯೆ ಹಲವಾರು ಸಿನೆಮಾಗಳಲ್ಲಿ ನಟನೆ, ಪತ್ರಕರ್ತರಾಗಿ ಸೇವೆ, ಉತ್ತಮ ವಾಗ್ಮಿಯಾಗಿ ನೂರಾರು ಕಾರ್ಯಕ್ರಮಗಳಲ್ಲಿ ಪ್ರೇರಣಾದಾಯಕ ಮಾತು, ಲೇಖಕರಾಗಿ ಹಲವು ಪುಸ್ತಕಗಳ ಪ್ರಕಟಣೆ. ಹೀಗೆ ವಿವಿಧ ರಂಗದಲ್ಲಿ ಓಂಗಣೇಶ್ ಅವರು ತೊಡಗಿಕೊಂಡವರು. ಓಂಗಣೇಶ್ ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ಪುರಸ್ಕಾರ,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಕೊಡೇರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಮತ್ತು ಹಳೆ ವಿದ್ಯಾರ್ಥಿಗಳ ವಾರ್ಷಿಕೋತ್ಸವ ಸಮಾರಂಭವು ಶನಿವಾರದಂದು ಕೊಡೇರಿ ಶಾಲಾ ಆವರಣದಲ್ಲಿ ಜರಗಿತು. ಅಂದು ಪೂರ್ವಾಹ್ನ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೇಖರ ಖಾರ್ವಿ ಧ್ವಜಾರೋಹಣಗೈದು ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿದರು. ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಸುರೇಶ ಎಚ್. ಖಾರ್ವಿ ಈ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರು ಮತ್ತು ಗ್ರಾಮ ಪಂಚಾಯತ್ ಸದಸ್ಯರಾದ ಆನಂದ ಪೂಜಾರಿ ಕೊಡೇರಿ, ಹಿರಿಯರು ಕೊಡುಗೈದಾನಿಗಳಾದ ಕೆ. ವಾಸುದೇವ ಕಾರಂತ, ಉದ್ಯಮಿ ಹರಿದಾಸ್ ಪ್ರಭು, ಪಂಚಾಯತ್ ಸದಸ್ಯರುಗಳಾದ ಕೃಷ್ಣ ಖಾರ್ವಿ, ರಮೇಶ ಖಾರ್ವಿ, ನೇತ್ರಾವತಿ, ಶಶಿಕಲಾ, ಶಿಕ್ಷಣ ಇಲಾಖೆಯ ಸಮನ್ವಯಾಧಿಕಾರಿ ಮಂಜುನಾಥ ದೇವಾಡಿಗ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಜೇಶ ಮೊಗವೀರ, ಕಾರ್ಯದರ್ಶಿ ಚಂದ್ರ ಶೆಟ್ಟಿ, ಮುಖ್ಯ ಶಿಕ್ಷಕಿ ಮರ್ಲಿ ಮೊಗವೀರ ವಿದ್ಯಾರ್ಥಿ ನಾಯಕ ರಕ್ಷಕ್ ದೇವಾಡಿಗ ಉಪಸ್ಥಿತರಿದ್ದರು. ಹಲವಾರು ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಮಾಜ ಸಸೂತ್ರವಾಗಿ ನಡೆಯಲು ಸಾಂಸ್ಕೃತಿಕ ವಾತಾವರಣ ಅತ್ಯಗತ್ಯ. ಅದು ಎಷ್ಟು ಮುಖ್ಯ ಎಂಬುದನ್ನು ಹಿರಿಯರು ಕಂಡುಕೊಂಡು ಪೋಷಿಸುತ್ತಾ ಬಂದಿದ್ದರು. ಮುಂದೆಯೂ ಕಥೆ, ಸಂಗೀತ, ನಾಟಕ ಮೊದಲಾದ ಪ್ರಕಾರಗಳನ್ನು ಪೋಷಿಸುವ ಕಾರ್ಯವಾಗಬೇಕಿದೆ ಎಂದು ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ನವೀನ್ ಹೆಚ್. ಜೆ ಹೇಳಿದರು. ಅವರು ಶನಿವಾರ ಯುಸ್ಕೋರ್ಡ್ ಟ್ರಸ್ಟ್ ರಿ. ಬೈಂದೂರು ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಇಲ್ಲಿನ ಶಾರದಾ ವೇದಿಕೆಯಲ್ಲಿ ಆಯೋಜಿಸಲಾದ ವರ್ಷ ವೈಭವ – 3 ದಿನಗಳ ಯಕ್ಷ – ನಾಟಕೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ ಕಲಾಸಕ್ತರೂ ಸಮಾಜವನ್ನು ನೋಡುವ ದೃಷ್ಟಿಕೋನವೂ ಬೆರೆಯಾದದ್ದು. ಅದನ್ನು ಪೋಷಿಸುವುದು ಮುಖ್ಯ. ಬುದ್ದಿ ಮತ್ತು ಮನಸ್ಸು ಒಟ್ಟಾಗಿ ಆಸ್ವಾದಿಸಿದರೆ ಅದೇ ಸುಂದರ ವಾತಾವರಣ ಎಂದರು. ಯಕ್ಷಗಾನ ಭಾಗವತ ಮಂಜುನಾಥ ದಾಸ್ ಅವರನ್ನು ಸನ್ಮಾನಿಸಲಾಯಿತು. ಯುಸ್ಕೋರ್ಡ್ ಕಾರ್ಯದರ್ಶಿ ಕೃಷ್ಣಮೂರ್ತಿ ಉಡುಪ ಅಧ್ಯಕ್ಷತೆ ವಹಿಸಿದ್ದರು. ಜೆಸಿಐ ಉಪ್ಪುಂದ ಅಧ್ಯಕ್ಷ ಮಂಜುನಾಥ ದೇವಾಡಿಗ, ಡಾ. ಬಿ.ಆರ್.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರ್ಕಾರಿ ಶಾಲೆ ಉಳಿದರೆ ಮಾತ್ರ ನಮ್ಮ ಖುಷಿ, ನೆನಪು ಹಾಗೂ ಸುಮಧುರ ಬಾಂಧವ್ಯ ಶಾಶ್ವತವಾಗಿರಲಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳನ್ನು ಉಳಿಸಿ, ಸೂಕ್ತ ಸೌಲಭ್ಯ ಕಲ್ಪಿಸುವ ದೊಡ್ಡ ಕಾರ್ಯ ಆಗಬೇಕಿದೆ. ಎಲ್ಲಾ ಸರ್ಕಾರಿ ಶಾಲೆಗಳು ಉಳಿಯಬೇಕು. ಇದಕ್ಕೆ ಸ್ಥಳೀಯರ ಪ್ರೋತ್ಸಾಹದ ಜೊತೆಗೆ ಶಾಲಾ ಶಿಕ್ಷಕರು ಹಳೆ ವಿದ್ಯಾರ್ಥಿಗಳ ಉತ್ಸಾಹವು ಅಗತ್ಯವಾಗಿದೆ ಎಂದು ಉದ್ಯಮಿ ಎಚ್. ಜಯಶೀಲ ಎನ್. ಶೆಟ್ಟಿ ಹೇಳಿದರು. ಖಂಬದಕೋಣೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸೋಮವಾರ ತಮ್ಮ ಸಂಸ್ಥೆಯ ವತಿಯಿಂದ ಕೊಡುಗೆಯಾಗಿ ನೀಡಿದ ಶಾಲಾ ವಾಹನವನ್ನು ಹಸ್ತಾಂತರಿಸಿ ಮಾತನಾಡಿದರು. ಸರ್ಕಾರಿ ಶಾಲೆಯಲ್ಲಿ ಓದಿದ ಅನೇಕರು ಇಂದು ದೊಡ್ಡ ದೊಡ್ಡ ಹುದ್ದೆಯಲ್ಲಿದ್ದಾರೆ. ಅದಕ್ಕೆ ಸರ್ಕಾರಿ ಶಾಲೆಯೇ ಕಾರಣವಾಗಿದ್ದು, ಪ್ರಸ್ತುತ ಕಾಲಘಟ್ಟದಲ್ಲಿ ಕೆಲವು ಶಾಲೆಗಳ ಅಭಿವೃದ್ಧಿಗೆ ಶಿಕ್ಷಕರು, ಪಾಲಕರು ಉತ್ಸಾಹ ತೋರಿದರೆ ಇನ್ನು ಕೆಲವು ಶಾಲೆಯಲ್ಲಿ ವ್ಯವಸ್ಥೆಯನ್ನು ಉಪಯೋಗಿಸಿಕೊಳ್ಳಲು ಯಾರೂ ಮುಂದಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಅವರು, ಇಲ್ಲಿನ ಶಿಕ್ಷಕ ವೃಂದ, ಶಾಲಾ ಎಸ್ಡಿಎಂಸಿ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: “ಪ್ರತಿಭೆ ನಿಮ್ಮದು ವೇದಿಕೆ ನಮ್ಮದು” ಕಾರ್ಯಕ್ರಮದಡಿ ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ 102 ನೇ ತಿಂಗಳ ಕಾರ್ಯಕ್ರಮ ಇತ್ತೀಚೆಗೆ ಯಶಸ್ವಿಯಾಗಿ ನಡೆಯಿತು. ಇದೇ ವೇದಿಕೆಯಲ್ಲಿ ಫಣಿಗಿರಿ ಪ್ರತಿಷ್ಠಾನ, ಶಿರೂರು ಇವರಿಂದ ಪ್ರಕಟಿತ ಡಾ. 11 ಶಿವಕುಮಾರ ಅಳಗೋಡು ವಿರಚಿತ ಪೌರಾಣಿಕ ಯಕ್ಷಗಾನ ಪ್ರಸಂಗಗಳ ಕೃತಿ ಬಿಡುಗಡೆ ಕಾರ್ಯಕ್ರಮವೂ ಜರಗಿತು. ಕೃತಿ ಪರಿಚಯವನ್ನು ನಾಗರತ್ನ ಹೇರ್ಳೆ ಅವರು ಮಾಡಿದರು. ಕೃತಿಯನ್ನು ಸುಜಯೀಂದ್ರ ಹಂದೆ ಅವರು ಬಿಡುಗಡೆಗೊಳಿಸಿದರು. ವೇದಿಕೆಯಲ್ಲಿ ಫಣಿಗಿರಿ ಪ್ರತಿಷ್ಠಾನದ ಅಧ್ಯಕ್ಷ ಉಮೇಶ್ ಶಿರೂರು ಹಾಗೂ ಅಕಾಡೆಮಿ ಅಧ್ಯಕ್ಷ ಭಾಸ್ಕರ್ ಕೊಗ್ಗ ಕಾಮತ್ ಅವರು ಉಪಸ್ಥಿತರಿದ್ದರು. ತರಂಗಿಣಿ ಭಜನಾ ಮಂಡಳಿ ಉಡುಪಿ, ಇದರ ಮುಖ್ಯಸ್ಥೆ ಸುಲೇಖಾ ದಯಾನಂದ ಅವರನ್ನು ಅಕಾಡೆಮಿ ವತಿಯಿಂದ ಸಮ್ಮಾನಿಸಲಾಯಿತು. ನಂತರ ತರಂಗಿಣಿ ಭಜನಾ ಮಂಡಳಿ, ಉಡುಪಿ ಇವರು “ಭಜನ್ ಸಂಧ್ಯಾ ಕಾರ್ಯಕ್ರಮ ನಡೆಸಿಕೊಟ್ಟರು. ನಿವೃತ್ತ ಶಿಕ್ಷಕ ನಾಗೇಶ್ ಶ್ಯಾನುಭಾಗ್ ಅವರು ಕಾರ್ಯಕ್ರಮ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಇಲ್ಲಿನ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆಯ ಪ್ರಯುಕ್ತ ಪೋಕ್ಸೋ ಕಾಯ್ದೆ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆ ಬಗ್ಗೆ ಮಾಹಿತಿ ಕಾರ್ಯಕ್ರಮ ಶನಿವಾರ ನಡೆಯಿತು. ಗಂಗೊಳ್ಳಿ ಕರಾವಳಿ ಕಾವಲು ಪೊಲೀಸ್ ಠಾಣೆಯ ಪಿಎಸ್ಐ ಮುಕ್ತ ಅವರು ಪೋಕ್ಸೋ ಕಾಯ್ದೆ ಹಾಗೂ ಮಕ್ಕಳ ಹಕ್ಕುಗಳ ರಕ್ಷಣೆ ಬಗ್ಗೆ ಮಾಹಿತಿ ನೀಡಿದರು. ಶಾಲೆಯ ಎಸ್. ಡಿ. ಎಂ. ಸಿ. ಅಧ್ಯಕ್ಷ ರವಿಶಂಕರ್ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಸ್.ಡಿ.ಎಂ.ಸಿ. ಸದಸ್ಯ ಅಶೋಕ್ ಪೂಜಾರಿ, ಎಎಸ್ಐ ರಾಘವೇಂದ್ರ ಪ್ರಸಾದ್, ಕರಾವಳಿ ಕಾವಲು ಪಡೆಯ ಸಿಬ್ಬಂದಿಗಳಾದ ಸಂತೋಷ್, ಕೃಷ್ಣ, ಅಮರ್, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಯಶೋಧ, ಸಹಶಿಕ್ಷಕರು ಉಪಸ್ಥಿತರಿದ್ದರು, ಶಿಕ್ಷಕಿಯರಾದ ಶಾಂತಿ ಸ್ವಾಗತಿಸಿದರು. ಅನುಷಾ ಸಿ. ಬಂಗೇರ ಕಾರ್ಯಕ್ರಮ ನಿರ್ವಹಿಸಿದರು. ನಾಗರತ್ನ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಬೆಂಗಳೂರಿನ ಕ್ರೆಸ್ಟ್ ವಿವಿಯಲ್ಲಿ ನಡೆದ 38ನೇ ಅಂತರ್ ವಿವಿ ಆಗ್ನೇಯ ವಲಯದ ಸಾಂಸ್ಕೃತಿಕ ಯುವಜನೋತ್ಸವ – ‘ಕ್ರೆಸೆಂಡೋ’ದಲ್ಲಿ ಮಂಗಳೂರು ವಿವಿ ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು ಸಂಗೀತ ವಿಭಾಗದಲ್ಲಿ ಸಮಗ್ರ ಪ್ರಶಸ್ತಿಗಳಿಸಿ, ಸಮಗ್ರ ವಿಭಾಗದಲ್ಲಿ ರನ್ನರ್ ಅಪ್ ಸ್ಥಾನ ಪಡೆದಿದ್ದಾರೆ. ಜಾನಪದ ವಾದ್ಯ ಮೇಳ ಪ್ರಥಮ, ಭಾರತೀಯ ಶಾಸ್ತ್ರೀಯ ಸ್ವರ ವಾದ್ಯ (ಬಾನ್ಸೂರಿ)ದಲ್ಲಿ ಪ್ರಥಮ, ಸಮೂಹ ಗೀತೆಯಲ್ಲಿ ದ್ವಿತೀಯ, ಜಾನಪದ ನೃತ್ಯ (ಗುಂಪು) ದ್ವಿತೀಯ, ಶಾಸ್ತ್ರೀಯ ಗಾಯನ ವೈಯಕ್ತಿಕದಲ್ಲಿ ದ್ವಿತೀಯ, ಶಾಸ್ತ್ರೀಯ ನೃತ್ಯದಲ್ಲಿ ತೃತೀಯ, ಭಾರತೀಯ ಲಘು ಶಾಸ್ತ್ರೀಯ ಸಂಗೀತದಲ್ಲಿ ತೃತೀಯ, ಪಾಶ್ಚಾತ್ಯ ವಾದ್ಯ ವೈಯಕ್ತಿಕ- ಐದನೇ ಸ್ಥಾನ, ಪಾಶ್ಚಾತ್ಯ ಗಾಯನ ವೈಯಕ್ತಿಕ ಐದನೇ ಸ್ಥಾನ, ಪಾಶ್ಚಾತ್ಯ ಗಾಯನ ಸಮೂಹ ಐದನೇ ಸ್ಥಾನ, ಏಕಾಂಕ ನಾಟಕದಲ್ಲಿ ಐದನೇ ಸ್ಥಾನ ಪಡೆದು ರನ್ಸ್ ಅಪ್ ಪಟ್ಟ ತನ್ನದಾಗಿಸಿಕೊಂಡಿತು. ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಆಳ್ವಾಸ್ ವಿದ್ಯಾರ್ಥಿಗಳುಭಾರತೀಯ ಶಾಸ್ತ್ರೀಯ ಸ್ವರ ವಾದ್ಯ(ಬಾನ್ಸೂರಿ)ದಲ್ಲಿ ಸ್ವಯಂ ಪ್ರಕಾಶ ಪ್ರಭು ಪ್ರಥಮ, ಶಾಸ್ತ್ರೀಯ ಗಾಯನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಬ್ಯಾರೀಸ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪ್ರೇರಣೆ, ಜ್ಞಾಪಕಶಕ್ತಿ ಮತ್ತು ಅಧ್ಯಯನ ಕೌಶಲ್ಯಗಳ ಕುರಿತು ಕಾರ್ಯಾಗಾರ ಸೋಮವಾರದಂದು ನಡೆಯಿತು. ಕಾರ್ಯಾಗಾರದ ಸಂಪನ್ಮೂಲ ಬೆಂಗಳೂರಿನ ಸಿ.ಇ.ಒ ಮತ್ತು ಸಂಸ್ಥಾಪಕರಾದ ಅಮೀನ್ ಇ ಮುದಸ್ಸರ್ ಅವರು ಆಗಮಿಸಿದ್ದರು. ಸಿಗ್ಮಾ ದ್ವಿತೀಯ ಪಿಯುಸಿ ತರಗತಿಗಳಿಗೆ ಬಹುವಿಧದ ಜ್ಞಾಪಕಶಕ್ತಿಯ ತಂತ್ರಗಳನ್ನು ಮತ್ತು ವಿದ್ಯಾರ್ಥಿಗಳ ವ್ಯಕ್ತಿತ್ವ ಅಭಿವೃದ್ಧಿಗೆ ಪೂರಕವಾದ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ನಡೆಸಿದರು. ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳು ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ಪುನಶ್ಚೇತನ ಶಿಬಿರವನ್ನು ನಡೆಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ ಕೆ.ಎಂ ಅಬ್ದುಲ್ ರೆಹಮಾನ್ ಬ್ಯಾರಿ ವಹಿಸಿಕೊಂಡಿದ್ದರು. ಟ್ರಸ್ಟಿಗಳಾದ ಕಾರ್ಯಕ್ರಮದ ವೇದಿಕೆಯಲ್ಲಿ ಬ್ಯಾರೀಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಅಶ್ವಿನಿ ಶೆಟ್ಟಿ, ಉಪಪ್ರಾಂಶುಪಾಲೆ ಝಿಯಾನ, ವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ. ಪೂರ್ಣಿಮಾ .ಟಿ, ಬ್ಯಾರೀಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ಶಬೀನಾ ಹೆಚ್. ಉಪಸ್ಥಿತರಿದ್ದರು. ಡಾ. ಆಸಿಫ್ ಬ್ಯಾರಿ ಪ್ರಸ್ತಾವಿಕವಾಗಿ ಮಾತನಾಡಿದರು. ಮನಃಶಾಸ್ತ್ರ ಉಪನ್ಯಾಸಕಿ ಲಾಮಿಸ್…
