Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬದುಕಿನಲ್ಲಿ ಕಷ್ಟದ ದಿನಗಳನ್ನು ಎದುರಿಸುತ್ತಾ ಎದ್ದು ಬಿದ್ದು ಗೆದ್ದವರು ಮಾತ್ರವೇ ನಡೆದುಬಂದ ದಾರಿಯ ಬಗ್ಗೆ ಸರಿಯಾದ ಮಾರ್ಗದರ್ಶನ ಮಾಡಬಲ್ಲರು. ಶ್ರಮದಿಂದ ಮಾತ್ರ ಸಾಧನೆ ಸಾಧ್ಯ ಎಂಬುದನ್ನು ಅರಿತರೆ ಗೆಲುವಿನ ದಾರಿ ಸುಲಭ ಎಂದು ರಂಗಭೂಮಿ ಹಾಗೂ ಸಿನಿಮಾ ನಟ ರಘು ಪಾಂಡೇಶ್ವರ ಹೇಳಿದರು. ಸುರಭಿ ರಿ. ಬೈಂದೂರು ಆಶ್ರಯದಲ್ಲಿ ಇಲ್ಲಿನ ಶಾರದಾ ವೇದಿಕೆಯಲ್ಲಿ ಆಯೋಜಿಸಲಾದ ರಂಗಸುರಭಿ – 2023ರ ನಾಲ್ಕು ದಿನಗಳ ರಾಜ್ಯಮಟ್ಟದ ನಾಟಕೋತ್ಸವದ ಮೂರನೇ ದಿನದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿ ರಂಗಭೂಮಿ ಪ್ರತಿ ಕಲಾವಿದನಿಗೂ ಧೈರ್ಯ ತುಂಬಿಕೊಡುತ್ತದೆ. ರಂಗ ಚಟುವಟಿಕೆಗಳು ಜಿಲ್ಲಾ ಕೇಂದ್ರದಷ್ಟೇ ವಿಜೃಂಭಣೆಯಿಂದ ಬೈಂದೂರಿನಂತಹ ಗ್ರಾಮೀಣ ಪ್ರದೇಶದಲ್ಲಿ ಜರುಗುತ್ತಿರುವುದು ಮತ್ತು ಅದಕ್ಕೆ ತಕ್ಕಂತೆ ಪ್ರಜ್ಞಾವಂತ ಪ್ರೇಕ್ಷಕರೂ ಹುಟ್ಟಿಕೊಂಡಿರುವುದು. ಈ ಎಲ್ಲದಕ್ಕೂ ಪುರಕ ವಾತಾವರಣ ನಿರ್ಮಿಸಿದ ಸಂಸ್ಥೆಗಳ ಶ್ರಮ ದೊಡ್ಡದು ಎಂದರು. ಜಿಪಂ ಮಾಜಿ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪ್ರತಿಷ್ಠಿತ 14ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಉಪ ಕಲಾತ್ಮಕ ನಿರ್ದೇಶಕ (ಡೆಪ್ಯುಟಿ ಆರ್ಟಿಸ್ಟಿಕ್ ಡೈರೆಕ್ಟರ್)ರನ್ನಾಗಿ ಡಾ. ಪ್ರದೀಪ ಕುಮಾರ ಶೆಟ್ಟಿ ಕೆಂಚನೂರು ಇವರನ್ನು ಕರ್ನಾಟಕ ಸರ್ಕಾರ ನೇಮಿಸಿ ಆದೇಶ ಹೊರಡಿಸಿದೆ. ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯಡಿಯಲ್ಲಿ ಬರುವ ಕರ್ನಾಟಕ ಚಲನಚಿತ್ರ ಅಕಾಡೆಮಿಯು ಈ ಉತ್ಸವವನ್ನು ಮಾರ್ಚ್ 16ರಿಂದ 23ರ ವರೆಗೆ ಬೆಂಗಳೂರಿನ ಒರಿಯನ್ ಮಾಲ್ನಲ್ಲಿರುವ ಪಿ.ವಿ.ಆರ್ನಲ್ಲಿ ಸಂಘಟಿಸಲಿದೆ. ಪ್ಯಾರಿಸ್ನಲ್ಲಿರುವ FIAP ಸಂಸ್ಥೆಯು ಮನ್ನಿಸಿರುವ ಭಾರತದ 5 ಫಿಲಂ ಫೆಸ್ಟಿವಲ್ನಲ್ಲಿ ಒಂದಾಗಿರುವ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವವು (ಬಿಫೆಸ್) ಅಂತರಾಷ್ಟ್ರೀಯ ಮನ್ನಣೆಯನ್ನು ಹೊಂದಿರುವ ಕೆಲವೇ ಕೆಲವು ಮುಖ್ಯ ಫೆಸ್ಟಿವಲ್ಗಳಲ್ಲಿ ಒಂದಾಗಿದೆ. ಪುಣೆಯ ಫಿಲಂ ಆ್ಯಂಡ್ ಟೆಲಿವಿಷನ್ ಇನ್ಸ್ಟಿಟ್ಯೂಟ್ ನಲ್ಲಿ ಅಪ್ರಿಸಿಶಿಯೇಶನ್ (ಸಿನೆಮಾ ರಸಗ್ರಹಣ) ಮತ್ತು ಕೊಲ್ಕತ್ತಾದ ಸತ್ಯಜಿತ್ ರೇ ಫಿಲಂ ಇನ್ಸ್ಟಿಟ್ಯೂಟ್ನಿಂದ ಸೌಂಡ್ ಅಥವಾ ಶಬ್ದಗ್ರಹಣದಲ್ಲಿ ತರಬೇತಿ ಹೊಂದಿರುವ ಪ್ರದೀಪ ಅವರು ಅಹ್ಮದಾಬಾದಿನಲ್ಲಿರುವ ಕೇಂದ್ರ ಸರ್ಕಾರದ ಪ್ರತಿಷ್ಠಿತ ಸಂಸ್ಥೆಯಾದ ಎನ್.ಐ.ಡಿ., ಆರ್.ವಿ. ವಿಶ್ವವಿದ್ಯಾಲಯ, ಮಣಿಪಾಲ ವಿಶ್ವವಿದ್ಯಾಲಯ, ಕೇರಳ ಕೇಂದ್ರೀಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಲಾ ಪ್ರೌಡಿಮೆಯ ಜೊತೆಗೆ ಸಮಾಜದಲ್ಲಿ ಹೆಮ್ಮೆಯಿಂದ ಬದುಕಲು ಸಾಧ್ಯವಾಗಿಸುವುದೇ ಕಲಾಸಂಸ್ಥೆಯ ಗುರಿಯಾದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗಲಿದೆ ಎಂದು ಬೈಂದೂರು ಶ್ರೀ ರಾಮ ವಿವಿದೋದ್ದೇಶ ಟ್ರಸ್ಟ್ ಆಡಳಿತ ಟ್ರಸ್ಟೀ ಬಿ. ರಾಮಕೃಷ್ಣ ಶೇರೆಗಾರ್ ಅವರು ಭಾನುವಾರ ಇಲ್ಲಿನ ಶಾರದಾ ವೇದಿಕೆಯಲ್ಲಿ ಸುರಭಿ ರಿ. ಬೈಂದೂರು ಆಶ್ರಯದಲ್ಲಿ ಜರುಗುತ್ತಿರುವ ರಂಗಸುರಭಿ 2023 – ನಾಲ್ಕು ದಿನಗಳ ರಾಜ್ಯಮಟ್ಟದ ನಾಟಕೋತ್ಸವದ ಎರಡನೇ ದಿನ ಸಾಧಕರಿಗೆ ಸನ್ಮಾನಿಸಿ ಮಾತನಾಡಿ 23 ವರ್ಷಗಳ ಪ್ರಯಾಣದಲ್ಲಿ ಸುರಭಿ ಸಂಸ್ಥೆ ಸಾಕಷ್ಟು ಯಶಸ್ಸಿನ ಮೈಲುಗಲ್ಲುಗಳನ್ನು ದಾಖಲಿಸಿ ಮುನ್ನಡೆಯುತ್ತಿರುವುದು ಸಂತೋಷದ ಸಂಗತಿ ಎಂದರು. ತಾ.ಪಂ ಮಾಜಿ ಸದಸ್ಯ ಸದಾಶಿವ ಡಿ. ಪಡುವರಿ, ಉಪ್ಪುಂದ ಮೂರ್ತೇದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಕೆ. ಮೋಹನ ಪೂಜಾರಿ, ವತ್ತಿನಕಟ್ಟೆ ಶ್ರೀ ಮಹಾಸತಿ ದೇವಸ್ಥಾನದ ಅಧ್ಯಕ್ಷರಾದ ನಾಗರಾಜ ಶೆಟ್ಟಿ ನಾಕಟ್ಟೆ, ಉದ್ಯಮಿ ನಾಗರಾಜ ಗಾಣಿಗ ಬಂಕೇಶ್ವರ, ಸ.ಮಾ.ಹಿ.ಪ್ರಾ ಶಾಲೆಯ ಪದವೀಧರ ಮುಖ್ಯೋಪಾಧ್ಯಾಯರಾದ ಜನಾರ್ದನ, ಸುರಭಿ ಕಾರ್ಯದರ್ಶಿ ಭಾಸ್ಕರ ಬಾಡ ಉಪಸ್ಥಿತರಿದ್ದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಫೆ.06: ಲಯನ್ಸ್ ಕ್ಲಬ್ ಕುಂದಾಪುರ ಸಿಟಿ ಸೆಂಟರ್, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಸಹಯೋಗದೊಂದಿಗೆ ಆದಿತ್ಯವಾರ ಇಲ್ಲಿನ ಕಲಾಮಂದಿರಲ್ಲಿ ಜರುಗಿದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಲಯನ್ಸ್ ಕ್ಲಬ್ ರಾಜೀವ್ ಕೋಟ್ಯಾನ್ ಉದ್ಘಾಟಿಸಿದರು. ಸುರೇಶ್ ಸಾಲಿಯಾನ್ ಅಧ್ಯಕ್ಹರು ಲಯನ್ಸ್ ಕ್ಲಬ್ ಕುಂದಾಪುರ ಸಿಟಿ ಸೆಂಟರ್ ಇವರು ಅಧ್ಯಕ್ಹತೆ ವಹಿಸಿದರು. ಮುಖ್ಯ ಅತಿಥಿಯಾಗಿ ಜಯಕರ್ ಶೆಟ್ಟಿ, ಸಭಾಪತಿಗಳು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ, ರಕ್ತದ ಆಪತ್ಭಾಂದವ ಸತೀಶ್ ಸಾಲ್ಯಾನ್ ಮಣಿಪಾಲ್ ಅಧ್ಯಕ್ಷ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ) ಉಡುಪಿ ಹಾಗೂ ಅಭಯಹಸ್ತ ಚಾರಿಟೇಬಲ್ ಚಾರಿಟೇಬಲ್ ಟ್ರಸ್ಟ್ ನ ಶರತ್ ಕಾಂಚನ್ ಆನಗಳ್ಳಿ, ಪ್ರಶಾಂತ್ ತಲ್ಲೂರು, ಕಿರಣ್ ಕುಂದಾಪುರ ಇತರರು ಉಪಸ್ಥಿತ್ತರಿದ್ದರು. ಕಾರ್ಯಕ್ರಮದಲ್ಲಿ ರಕ್ತದಾನಿಗಳು ಹಾಗೂ ರೋಗಿಗಳ ತುರ್ತು ಕರೆಗೆ ಸ್ಪಂದಿಸಿ ಸಕಾಲದಲ್ಲಿ ರಕ್ತದಾನಿಗಳನ್ನು ಉಡುಪಿ ಜಿಲ್ಲೆಯ ವಿವಿಧ ಆಸ್ಪತ್ರೆಗೆ ಪೊರೈಸಲು ಸಹಕರಿಸುತ್ತಿರುವ ಅಭಯಹಸ್ತ ದಿನೇಶ್ ಕಾಂಚನ್ ಬಾರಿಕೆರೆ ಹಾಗೂ ಅಭಯಹಸ್ತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ರಿ. ಬೈಂದೂರು ತಾಲೂಕು ಬೈಂದೂರು ವಲಯ ನೇತೃತ್ವದಲ್ಲಿ, ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಜನಜಾಗೃತಿ ವೇದಿಕೆ ಬೈಂದೂರು ವಲಯ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಬೈಂದೂರು ವಲಯದ ಸಹಯೋಗದೊಂದಿಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮ ಇಲ್ಲಿನ ಯಡ್ತರೆ ಜೆ.ಎನ್.ಆರ್ ಕಲಾಮಂದಿರದಲ್ಲಿ ಜರುಗಿತು. ಮಾಜಿ ಶಾಸಕರಾದ ಕೆ. ಗೋಪಾಲ ಪೂಜಾರಿ ಅವರು ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ತಾಲೂಕಿನಲ್ಲಿ ಮಹಿಳೆಯರ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಾತ್ರ ದೊಡ್ಡದಾಗಿದೆ. ಯೋಜನೆಯಿಂದಾಗಿ ಜನರು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ ಎಂದರು. ನಿವೃತ್ತ ಶಿಕ್ಷಕ ಗೋವಿಂದ ಬಿಲ್ಲವ ಅವರು ಧಾರ್ಮಿಕ ಪ್ರವಚನ ನೀಡಿದರು. ಉಡುಪಿ ಪ್ರಾದೇಶಿಕ ವಿಭಾಗದ ಆಡಳಿತ ಯೋಜನಾಧಿಕಾರಿ ಪುರಂದರ ಪೂಜಾರಿಯವರು ಒಕ್ಕೂಟದ ಪದಾಧಿಕಾರಿಗಳಿಗೆ ತಮ್ಮ ಜವಾಬ್ದಾರಿಗಳ ಕುರಿತು ತಿಳಿಸಿದರು. ತಾಲೂಕು ಯೋಜನಾಧಿಕಾರಿ ಕೆ. ವಿನಾಯಕ ಪೈ, ಮುಖಂಡರಾದ ದೀಪಕ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಊರಿನ ಸಾಧಕರನ್ನು ಗುರುತಿಸಿ ಗೌರವಿಸಿರುವುದು ಗ್ರಾಮಕ್ಕೆ ನೀಡಿದ ದೊಡ್ಡ ಗೌರವವಾಗಿದೆ. ಇತಂಹ ಪುಣ್ಯಭೂಮಿಯಲ್ಲಿ ಸಾಧಕರ ನಡುವೆ ನಾವಿರುವುದು ದೊಡ್ಡ ಸೌಭಾಗ್ಯವೆನಿಸಿದೆ. ಇಲ್ಲಿನ ಸಾಧಕರು ಹಾಗೂ ಸೇವೆ ಮಾಡುವ ಸಂಸ್ಥೆಯ ಕಾರ್ಯಗಳು ಮಾದರಿಯಾಗಿದೆ. 25 ವರ್ಷಗಳಿಂದ ಗ್ರಾಮದ ಅಭಿವೃದ್ಧಿಗೆ ಹಾಗೂ ಸಮಾಜಕ್ಕೆ ಸೇವೆ ನೀಡುತ್ತಿರುವ ಮಿತ್ರಸಂಗಮದ ಕಾರ್ಯ ಶ್ಲಾಘನೀಯವಾದದ್ದು ಎಂದು ಕನಾ೯ಟಕ ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಜಿಲ್ಲಾ ಪ್ರಶಸ್ತಿ ಪುರಸ್ಕೃತ ಬೀಜಾಡಿ-ಗೋಪಾಡಿ ಮಿತ್ರಸಂಗಮದ ರಜತಮಹೋತ್ಸವ ಸಮಾರಂಭದ ರಜತಪಥ ನೆರಳು ಬೆಳಿಕಿನ ಸಹಯಾನದ 2ನೇ ದಿನದ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಿ ವಿದ್ಯಾಥಿ೯ಗಳಿಗೆ ಪ್ರತಿಭಾ ಪುರಸ್ಕಾರ ವಿತರಿಸಿ ಅವರು ಮಾತನಾಡಿದರು. ಮಕ್ಕಳಲ್ಲಿ ಕೇವಲ ಶಿಕ್ಷಣದ ಗುರಿಯನ್ನು ಇರಿಸದೇ ಸಂಸ್ಕಾರದ ಪಾಠವನ್ನು ಹೇಳಿ ಕೊಡಬೇಕು. ತಂದೆ-ತಾಯಿ ಋಣ, ಸಮಾಜದ ಋಣ, ಶಾಲೆ ಋಣ, ಊರ ಋಣವನ್ನು ಯಾರಿದಂಲೂ ತೀರಿಸಲು ಸಾಧ್ಯವಾಗುವುದಿಲ್ಲ. ನಾವು ಮನುಷ್ಯನಾಗಿ ಹುಟ್ಟಿದ ಮೇಲೆ ಸಮಾಜಕ್ಕಾಗಿ ನಾವು ಸೇವೆ ಮಾಡಲೇಬೇಕು. ಇದರಿಂದ ಅದೆಷ್ಟೂ ಮಂದಿ ಬಡವರಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಹೇಳಬೇಕಾದ್ದನ್ನು ಗಟ್ಟಿಯಾಗಿ ಹೇಳುವ ತಾಕತ್ತು ರಂಗಭೂಮಿಯಲ್ಲಿರುವುದರಿಂದ ಇಲ್ಲಿ ತೊಡಗಿಸಿಕೊಳ್ಳುವವರ ಜವಾಬ್ದಾರಿ ಹೆಚ್ಚಿದೆ. ರಂಗಭೂಮಿಯ ಕಲಾವಿದರು ಜೊತೆ ಸೇರುವ ಬದುಕು ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಬಗೆಗೆ ಯೋಚಿಸುವ, ನಮ್ಮ ಹಾಗೂ ಜನರ ಸಮಸ್ಯೆಗಳನ್ನು ಹೇಳಿ ಪರಿಹಾರ ಕಂಡುಕೊಳ್ಳುವ ಅಗತ್ಯತೆ ಇದೆ ಎಂದು ರಂಗನಟ ಹಾಗೂ ಶಿವಮೊಗ್ಗ ಸಾಹಿತ್ಯ ಸಮುದಾಯದ ಕಾರ್ಯದರ್ಶಿ ಕೆ. ಪ್ರಭಾಕರನ್ ಹೇಳಿದರು. ಶನಿವಾರ ಸುರಭಿ ರಿ. ಬೈಂದೂರು ಆಶ್ರಯದಲ್ಲಿ ಶ್ರೀ ಶಾರದಾ ವೇದಿಕೆಯಲ್ಲಿ ಆಯೋಜಿಸಲಾದ ರಂಗಸುರಭಿ – ೨೦೨೩ರ ನಾಲ್ಕು ದಿನಗಳ ರಾಜ್ಯಮಟ್ಟದ ನಾಟಕೋತ್ಸವ ಉದ್ಘಾಟಿಸಿ ಮಾತನಾಡಿ ಇಂದಿನ ಕಾಲಘಟ್ಟದಲ್ಲಿ ಸಮಾಜದಲ್ಲಿ ನಡೆಯುತ್ತಿರುವ ವಿದ್ಯಮಾನ, ದುಸ್ತರತೆ, ಜನರ ನೋವು, ನಲಿವಿನ ಬಗ್ಗೆ ಏನು ಹೇಳಬೇಕೋ ಅದನ್ನು ಅಂಜಿಕೆ, ಅಳುಕಿಲ್ಲದೇ ಧೈರ್ಯವಾಗಿ ಹೇಳಲು ರಂಗಭೂಮಿ ಒಂದೇ ಮಾಧ್ಯಮ. ಜನಗಳಿಗೆ ಅರಿವಿಗೆ ಬರುವಂತಹ ವಿಷಯಗಳನ್ನು ಪುರಾಣ, ಇತಿಹಾಸ ಅಥವಾ ಇನ್ಯಾವುದರಲ್ಲಿ ಸಿಗುವ ಕಥಾವಸ್ತುವನ್ನು ಬಳಸಿಕೊಂಡು ನಾಟಕದ ಮೂಲಕ ಜನರಿಗೆ ತಲುಪಿಸಬೇಕು. ವಿಶ್ವದ ಅನೇಕ ನಾಟಕ ಸಂಸ್ಥೆಗಳು ಈಗಾಗಲೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಹಳಗೇರಿ ಕೆಳಾಮನೆಯ ನಿವೃತ್ತ ಮುಖ್ಯ ಶಿಕ್ಷಕ ಕೆ. ಆನಂದ ಶೆಟ್ಟಿ (80 ವ) ಅವರು ಅಲ್ಪ ಕಾಲದ ಅಸೌಖ್ಯದಿಂದ ಶನಿವಾರ ನಿಧನರಾಗಿದ್ದಾರೆ. ಕಂಬದಕೋಣೆ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ 25 ವರ್ಷಗಳ ಕಾಲ ಸುಧೀರ್ಘ ಸೇವೆ ಸಲ್ಲಿಸಿದ್ದ ಆನಂದ ಶೆಟ್ಟಿ ಅವರು, ಶಿರೂರು ಪ್ರೌಢಶಾಲೆಯಲ್ಲಿಯೂ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಕುಟುಂಬಿಕರೊಂದಿಗೆ ಕಂಬದಕೋಣೆಯಲ್ಲಿಯೇ ನೆಲೆಸಿದ್ದರು. ಮೃತರು ಪತ್ನಿ, ಮೂವರು ಹೆಣ್ಣು ಮಕ್ಕಳು, ಬಂಧು ಬಳಗ ಹಾಗೂ ಶಿಷ್ಯ ವರ್ಗವನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಿ. ಶಂಕರ್ ಪ್ಯಾಮಿಲಿ ಟ್ರಸ್ಟ್ನಂತೆ ಮಿತ್ರ ಸಂಗಮ ಜನಪರ ಕಾರ್ಯಕ್ರಮಗಳನ್ನು ನೀಡುತ್ತಾ ಸಮಾಜದಲ್ಲಿ ಮಾದರಿ ಸಂಘಟನೆಯಾಗಿ ಗುರುತಿಸಿಕೊಂಡಿದೆ. ಮನುಷ್ಯನ ಹುಟ್ಟು ಸಾವುಗಳ ನಡುವೆ ಕೇವಲವಾಗಿ ಬದುಕುವುದಕ್ಕಿಂತ ಸಮಾಜದಲ್ಲಿ ಬಡವರ ಕಣ್ಣೀರು ಒರೆಸುವ ಕೆಲಸಗಳನ್ನು ಮಾಡಬೇಕು. ಜನರ ಸೇವೆಯೇ ದೊಡ್ಡ ದೇವರ ಸೇವೆ. ನಾವು ಗಳಿಸಿದ ಸಂಪತ್ತಿನಲ್ಲಿ ಕೆಲವೊಂದು ಭಾಗವನ್ನು ಸಮಾಜಕ್ಕೆ ನೀಡಿದಾಗ ದೊಡ್ಡ ಪುಣ್ಯಫಲ ಪ್ರಾಪ್ತಿಯಾಗುತ್ತದೆ ಎಂದು ಉಡುಪಿ ಜಿ.ಶಂಕರ್ ಪ್ಯಾಮಿಲಿ ಟ್ರಸ್ಟ್ ನ ಪ್ರವರ್ತಕ ನಾಡೋಜ ಡಾ.ಜಿ.ಶಂಕರ್ ಹೇಳಿದರು. ಜಿಲ್ಲಾ ಪ್ರಶಸ್ತಿ ಪುರಸ್ಕೃತ ಬೀಜಾಡಿ-ಗೋಪಾಡಿ ಮಿತ್ರಸಂಗಮದ ರಜತಮಹೋತ್ಸವ ಸಮಾರಂಭದ ರಜತಪಥ ನೆರಳು ಬೆಳಿಕಿನ ಸಹಯಾನ 3 ದಿನಗಳ ಕಾರ್ಯಕ್ರಮವನ್ನು ಶುಕ್ರವಾರ ಬೀಜಾಡಿಯ ಮಿತ್ರಸೌಧದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ ಆಡಳಿತ ಮೊಕ್ತೇಸರ ಶ್ರೀರಮಣ ಉಪಾಧ್ಯಾಯ ಸಂಸ್ಥೆಯ ವೆಬ್ಸೈಟ್ ನ್ನು ಬಿಡುಗಡೆಗೊಳಿಸಿ ಅಧ್ಯಕ್ಷತೆ ವಹಿಸಿದ್ದರು. ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಶಿಕ್ಷಣ ಪ್ರೇಮಿ ಬಿ.ಶೇಷಗಿರಿ ಗೋಟ, ಕೋಟಿಲಿಂಗೇಶ್ವರ ದೇವಳದ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ, ನವದೆಹಲಿ, ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಂತ್ರಜ್ಞಾನ ವಸ್ತು ಸಂಗ್ರಹಾಲಯ, ಬೆಂಗಳೂರು ಮತ್ತು ಕೇರಳ ಸರ್ಕಾರದ ಶಿಕ್ಷಣ ಸಚಿವಾಲಯವು ಕೇರಳದ ತ್ರಿಶೂರಿನಲ್ಲಿ ಜಂಟಿಯಾಗಿ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಭಾಗವಹಿಸಿದ ಸಿದ್ಧಾಪುರದ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಪೂರ್ಣಿಮಾ ಭಟ್ ದಕ್ಷಿಣ ಭಾರತ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ವಸ್ತು ಪ್ರದರ್ಶನದಲ್ಲಿ ರಾಜ್ಯವನ್ನು ಪ್ರತಿನಿಧಿಸಿದ ಪೂರ್ಣಿಮಾ ಭಟ್ ಅವರು ರೂಪಿಸಿದ ಗಣಿತದ ಸ್ವಕಲಿಕೆಯ ಸಾಮಗ್ರಿಗಳನ್ನು ಮೆಚ್ಚಿದ ತೀರ್ಪುಗಾರರು ಗಣಿತ ಕಲಿಕೆಯ ಕುರಿತು ಆಸಕ್ತಿ ಮತ್ತು ಪ್ರೀತಿ ಮೂಡಿಸಬಲ್ಲ ಈ ಸಾಮಗ್ರಿಗಳ ಬಳಕೆಯ ಕುರಿತು ಸಾಕಷ್ಟು ಪ್ರಶ್ನೆಗಳನ್ನು ಕೇಳಿದ್ದರು. ಸಂಕಲನ ಹಾಗೂ ಗುಣಾಕಾರದಲ್ಲಿ ಬರುವ ಚಿಹ್ನೆಗಳ ಪರಿಕಲ್ಪನೆ ಮೂಡಿಸುವುದು, ತ್ರಿಭುಜದ ಮೂರು ಕೋನಗಳ ಒಟ್ಟು ಮೊತ್ತ 180° ಎಂಬುದನ್ನು ಚಟುವಟಿಕೆಯ ಮೂಲಕ ತಿಳಿಸಿ ಕೊಡುವುದು, ಬೀಜೋಕ್ತಿಗಳ ಗುಣಾಕಾರ ಮಾಡುವುದು, ಬೀಜೋಕ್ತಿಗಳ ಸಾಮಾನ್ಯ ಅಪವರ್ತನ ಕಂಡು ಹಿಡಿಯುವುದು, ಭಿನ್ನರಾಶಿಗಳ ಕುರಿತು ಸ್ಪಷ್ಟ ಪರಿಕಲ್ಪನೆ ಮೂಡಿಸುವುದು,…

Read More