Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ 2023-24 ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ ಎ ಮತ್ತು ಬಿ ವೃಂದದ ಒಟ್ಟು 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆಗಳು ಡಿಸೆಂಬರ್ 29 ರಂದು ಜಿಲ್ಲೆಯಲ್ಲಿ ನಿಗಧಿಪಡಿಸಿರುವ ಒಟ್ಟು 05 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು, ಸುತ್ತಲೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 ರ ಕಲಂ 163 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾಸ್ ಪಿಯು ಕಾಲೇಜಿನ ದ್ವಿತೀಯ ಪಿಯು ವಾಣಿಜ್ಯ ವಿದ್ಯಾರ್ಥಿಗಳಿಗೆ ಒಂದು ದಿನದ ಕೈಗಾರಿಕಾ ಭೇಟಿ ಹಮ್ಮಿಕೊಳ್ಳಲಾಯಿತು. ಉಡುಪಿ ಜಿಲ್ಲೆಯ ಪ್ರತಿಷ್ಠಿತ ಕೈಗಾರಿಕೆ ಸಂಸ್ಥೆಗಳಿಗೆ 70 ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರು ಭೇಟಿ ನೀಡಿ, ವಿವಿಧ ದಿನ ಬಳಕೆಯ ಗ್ರಹೋಪಯೋಗಿ ವಸ್ತುಗಳ ಉತ್ಪಾದನೆ, ನೂತನ ತಂತ್ರಗಾರಿಕೆಯ ಬಳಕೆ, ಪ್ರೊಡಕ್ಷನ್ ಮತ್ತು ಪ್ರೋಸೆಸ್ಸಿಂಗ್, ಕಚ್ಚಾವಸ್ತುಗಳ ಬಳಕೆಯಿಂದ ಉತ್ಪಾದನೆಯಾಗುವ ತ್ಯಾಜ್ಯಗಳ ಮರುಬಳಕೆ, ಉದಯವಾಣಿ ದಿನಪತ್ರಿಕೆಯ ಉತ್ಪಾದನೆಯನ್ನು ಪ್ರಾಯೋಗಿಕವಾಗಿ ನೋಡಿ ಹೆಚ್ಚಿನ ತಿಳುವಳಿಕೆಯನ್ನು ಪಡೆದುಕೊಂಡರು ವಿದ್ಯಾರ್ಥಿಗಳೊಂದಿಗೆ ಉಪನ್ಯಾಸಕರಾದ ಗೀತಾ, ರಸಿಕ ಮತ್ತು ಸುಮಾ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ವಿವಿಧ ಗ್ರಾಮ ಪಂಚಾಯತ್, ಪಟ್ಟಣ ಪಂಚಾಯತ್ ಹಾಗೂ ಪುರಸಭೆ ವ್ಯಾಪ್ತಿಯಲ್ಲಿ ಖಾಲಿಯಿರುವ ಒಟ್ಟು 31 ಅಂಗನವಾಡಿ ಕಾರ್ಯಕರ್ತೆ ಹಾಗೂ 52 ಅಂಗನವಾಡಿ ಸಹಾಯಕಿಯರ ಗೌರವಸೇವೆ ಹುದ್ದೆಗಳಿಗೆ ಆಗಸ್ಟ್ 16 ರಂದು ನೇಮಕಾತಿ ಅಧಿಸೂಚನೆ ಹೊರಡಿಸಿ, ಸೆಪ್ಟಂಬರ್ 19 ರ ವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿರುತ್ತದೆ. ಪ್ರಸ್ತುತ ಅರ್ಜಿ ಸಲ್ಲಿಸುವ ಕಾಲಾವಧಿ ಮುಗಿದಿದ್ದು, ಅರ್ಜಿ ಸಲ್ಲಿಸುವಾಗ ವೆಬ್‌ಸೈಟ್‌ನಲ್ಲಿ ಒಟ್ಟು 4 ವಿವಿಧ ಹಂತಗಳಿದ್ದು, ಇದರಲ್ಲಿ ಕೆಲವು ಅರ್ಜಿದಾರರಿಗೆ 1ನೇ ಹಂತದಲ್ಲಿಯೇ “Application Successfully Uploaded’’ ಎಂಬ ಮೇಸೆಜ್ ಅವರುಗಳ ಮೊಬೈಲ್‌ಗೆ ಸ್ವೀಕೃತವಾಗಿರುವುದರಿಂದ ಅರ್ಜಿಗಳನ್ನು ಪೂರ್ಣಗೊಳಿಸಿರುವುದಿಲ್ಲ. ಕುಂದಾಪುರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ 225 ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗೆ 101 ಅಪೂರ್ಣ ಅರ್ಜಿಗಳು ಸ್ವೀಕೃತವಾಗಿರುತ್ತದೆ. ಅರ್ಜಿ ಸಲ್ಲಿಸುವ 4 ಹಂತಗಳನ್ನು ಪೂರ್ಣಗೊಳಿಸದೇ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ಡಿಸೆಂಬರ್ 26 ರಿಂದ ಜನವರಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಭಾರತದ ಮಾಜಿ ಕ್ರಿಕೆಟ್ ತಾರೆ ವಿ. ವಿ. ಎಸ್. ಲಕ್ಷ್ಮಣ್ ದಂಪತಿಗಳು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಭೇಟಿ ನೀಡಿದರು. ಈ ವೇಳೆ ಅವರು ಶ್ರೀ ಮೂಕಾಂಬಿಕೆಯ ದರ್ಶನ ಪಡೆದು ಚಂಡಿಕಾ ಹೋಮ ನೆರವೇರಿಸಿದರು. ದೇವಳದಿಂದ ಅವರನ್ನು ಗೌರವಿಸಲಾಯಿತು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೆಂಗಳೂರು,ಡಿ.26: ದೇಶದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ 92 ವರ್ಷ ವಯಸ್ಸಾಗಿತ್ತು. ಇಂದು ರಾತ್ರಿ 8:06 ಗಂಟೆ ಸುಮಾರಿಗೆ ಏಮ್ಸ್‌ ಆಸ್ಪತ್ರೆಗೆ ದಾಖಲಾದ ಮನಮೋಹನ್ ಸಿಂಗ್ ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗಿಲ್ಲ. ರಾತ್ರಿ 9:51ಕ್ಕೆ ಅವರು ನಿಧನರಾದರು ಎಂದು ಏಮ್ಸ್ ತಿಳಿಸಿದೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಸಂಸದೆ ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ರಾಜಕೀಯ ನಾಯಕರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಡಾ. ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. 1991 ರಲ್ಲಿ ರಾಜ್ಯಸಭೆಗೆ ಪ್ರವೇಶ ಮಾಡುವ ತಮ್ಮ ರಾಜಕೀಯ ಇನ್ನಿಂಗ್ಸ್ ಆರಂಭಿಸಿದ್ದ ಸಿಂಗ್, 2024ರ ಏಪ್ರಿಲ್​ನಲ್ಲಿ ಅವರ ರಾಜ್ಯಸಭೆ ಅಧಿಕಾರವಧಿ ಅಂತ್ಯವಾಗಿತ್ತು. ಈ ಮೂಲಕ ಅವರು ಸಂಸತ್ತಿನ ಮೇಲ್ಮನೆಯಲ್ಲಿ 33 ವರ್ಷಗಳ ಕಾಲ ಇದ್ದರು. ದೇಶದ ಆರ್ಥಿಕ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.25: ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಟಿ. ನಾರಾಯಣ ಹೆಗ್ಡೆ ನೇತೃತ್ವದಲ್ಲಿ ಕಾಂಗ್ರೆಸ್‌ ಪಕ್ಷದ ಬೆಂಬಲಿತರು ಹಾಗೂ ಸಮನ್ವಯ ಸಹಕಾರಿ ಬಳಗ ಎಲ್ಲಾ 13 ಸ್ಥಾನಗಳನ್ನು ಗೆದ್ದು ಮೇಲುಗೈ ಸಾಧಿಸಿದೆ. ಸಾಮಾನ್ಯ ಕ್ಷೇತ್ರದಿಂದ ಟಿ. ನಾರಾಯಣ ಹೆಗ್ಡೆ, ಎಮ್.‌ ಎಚ್.‌ ಗುರುದತ್ತ, ಅರುಣ ಕುಮಾರ್‌, ವಸಂತ ಕುಮಾರ್‌ ಶೆಟ್ಟಿ, ವೆಂಕ್ಟ ಪೂಜಾರಿ, ಡಿ. ಸದಾಶಿವ ಶೇರುಗಾರ್‌, ಹೆರಿಯ ದೇವಾಡಿಗ, ಹಿಂದುಳಿದ ವರ್ಗ ಎ ಕ್ಷೇತ್ರದಿಂದ ಚಿಕ್ಕು ಪೂಜಾರಿ, ಹಿಂದುಳಿದ ವರ್ಗ ಬಿ ಕ್ಷೇತ್ರದಿಂದ ನಾಗರಾಜ ಶೆಟ್ಟಿ, ಪರಿಶಿಷ್ಟ ಪಂಗಡ ಕ್ಷೇತ್ರದಿಂದ ಶಂಕರ ನಾಯ್ಕ್‌, ಪರಿಶಿಷ್ಟ ಜಾತಿ ಕ್ಷೇತ್ರದಿಂದ ಸತೀಶ್‌, ಮಹಿಳಾ ಕ್ಷೇತ್ರದಿಂದ ಜ್ಯೋತಿ ಪೂಜಾರಿ, ಎಚ್.‌ ವಿಜಯ ಶೇರುಗಾರ್‌ ಆಯ್ಕೆಯಾದರು. /ಕುಂದಾಪ್ರ ಡಾಟ್ ಕಾಂ/ ಯಡ್ತರೆ ಬಂಟರ ಭವನದಲ್ಲಿ ಸಂಘದ ಚುನಾವಣೆ ನಡೆದಿದ್ದು ಚುನಾವಣಾ ಅಧಿಕಾರಿಯಾಗಿ, ಸಹಕಾರ ಅಭಿವೃದ್ಧಿ ಅಧಿಕಾರಿ ಸುನೀಲ್ ಕುಮಾರ್ ಸಿ,ಎಂ ಚುನಾವಣೆಯನ್ನು ನಡೆಸಿಕೊಟ್ಟರು. ಸದಸ್ಯರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ರಿ. ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ ರಿ. ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕೋಟ ಶಿವರಾಮ ಕಾರಂತ ಥೀಮ್ ಪಾರ್ಕ್ ನಲ್ಲಿ ಕೊಡ ಮಾಡುವ ನಾಲ್ಕನೇ ವರ್ಷದ ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಏಳಜಿತ್‌ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿ ವಿದ್ಯಾರ್ಥಿನಿ ಸಾನ್ವಿ ವಿ.ಎಸ್. ವಿಶೇಷ ಪುರಸ್ಕಾರಕ್ಕೆ ಆಯ್ಕೆಯಾಗಿರುತ್ತಾರೆ. ಈಕೆ ರಾಜ್ಯ ಮತ್ತು ಜಿಲ್ಲಾಮಟ್ಟದ ಹಲವು ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿರುತ್ತಾಳೆ. ಬೈಂದೂರು ಸುರಭಿ ಕಲಾ ಸಂಸ್ಥೆಯ ವಿದ್ಯಾರ್ಥಿನಿಯಾಗಿದ್ದು ಮಕ್ಕಳ ನಾಟಕ, ನೃತ್ಯ, ಹಾಗೂ ಯಕ್ಷಗಾನದಲ್ಲಿ ರಾಜ್ಯಮಟ್ಟದಲ್ಲಿ ಹಲವಾರು ಕಾರ್ಯಕ್ರಮಗಳನ್ನು ನೀಡಿರುತ್ತಾಳೆ. ಸಾನ್ವಿ ಏಳಜಿತದ ವಸಂತ ಗೌಡ ಮತ್ತು ಶಾಂತಿ ಅವರ ಪುತ್ರಿ. ಡಾ. ಶಿವರಾಮ ಕಾರಂತ  ಬಾಲ ಪುರಸ್ಕಾರವನ್ನು ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ ನಲ್ಲಿ ಡಿ. 28ರಂದು ಮಧ್ಯಾಹ್ನ 2:30ಕ್ಕೆ ಪ್ರಧಾನ ಮಾಡಲಾಗುತ್ತದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.25: ಸೇನಾ ಟ್ರಕ್ ಅಪಘಾತದಲ್ಲಿ ಮರಣ ಹೊಂದಿದ ಯೋಧ, ಹವಾಲ್ದಾರ್ ಅನೂಪ್ ಪೂಜಾರಿ ಅವರ ಪಾರ್ಥಿವ ಶರೀರವನ್ನು ಗುರುವಾರ ಜಮ್ಮುವಿನಿಂದ ಸೇನಾ ವಿಮಾನ ಮೂಲಕ ರಾತ್ರಿ ಹೊತ್ತಿಗೆ ಮಂಗಳೂರು ತಲುಪಿತ್ತು. ಅಲ್ಲಿ ಗೌರವ ಸಲ್ಲಿಸಿ ಅಂಬ್ಯುಲೆನ್ಸ್‌ನಲ್ಲಿ ಉಡುಪಿ ಮೂಲಕ ಬೀಜಾಡಿಯ ನಿವಾಸಕ್ಕೆ ಕರೆತಂದು ಸಕಲ ಸರಕಾರಿ ಗೌರವಗಳನ್ನು ಸಲ್ಲಿಸಿ ಅಂತಿಮ ಸಂಸ್ಕಾರ ನಡೆಸಲಾಯಿತು. ಬೆಳಿಗ್ಗೆ 10 ಗಂಟೆಗೆ ತೆಕ್ಕಟ್ಟೆ ತಲುಪಿದ ಪಾರ್ಥೀವ ಶರೀರವನ್ನು ಮೆರವಣಿಗೆ ಮೂಲಕ ಕೋಟೇಶ್ವರ ಮೂಲಕವಾಗಿ ಬೀಜಾಡಿಯ ಅನೂಪ್‌ ಪೂಜಾರಿ ಅವರ ನಿವಾಸಕ್ಕೆ ಕೊಂಡೊಯ್ಯಲಾಯಿತು. ದಾರಿಯುದ್ದಕ್ಕೂ ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಸಾರ್ವಜನಿಕರು ಮೃತ ಯೋಧನಿಗೆ, ಪುಪ್ಪನಮನಗೈದು, ಅಂತಿಮ ನಮನ ಸಲ್ಲಿಸಿ ಕಂಬನಿ ಮಿಡಿದರು. ಮೆರವಣಿಗೆಯ ಮೂಲಕ ಪಾರ್ಥಿವ ಶರೀರವನ್ನು ಬೀಜಾಡಿಯ ಅನೂಪ್‌ ಅವರ ನಿವಾಸಕ್ಕೆ ಕರೆತಂದು ಅಲ್ಲಿ ಅಂತಿಮ ವಿಧಿವಿಧಾನಗಳನ್ನು ಪೂರೈಸಿ ಬಳಿಕ ಸರಕಾರಿ ಗೌರವ ಸಲ್ಲಿಸಲಾಯಿತು. ಈ ವೇಳೆ ಎಡಿಸಿ ಹಾಗೂ ಎಎಸ್ಪಿ ಅವರು ಉಪಸ್ಥಿತರಿದ್ದರು. ಬಳಿಕ ಬಿಜಾಡಿ ಪಡು ಶಾಲೆಯ ಆವರಣದಲ್ಲಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಸಮೀಪ ಉಳ್ಳೂರು ಅಬ್ಬಿಬೇರು ಬಳಿ ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸಾವನಪ್ಪಿದ ಘಟನೆ ನಡೆದಿದೆ. ಅಬ್ಬಿಬೇರು ಎಂಬಲ್ಲಿ ಬಿಜು ಅಗಸ್ಟಿನ್‌ ಅವರ ತೋಟದಲ್ಲಿ ಅಡಿಕೆ ಕೊಯ್ಯುತ್ತಿರುವಾಗ ಅಲ್ಯುಮೀನಿಯಂ ಕೊಕ್ಕೆ (ದೋಟಿ) ಯು ವಿದ್ಯುತ್‌ ತಂತಿಗೆ ಸ್ಪರ್ಶಿಸಿ ಝಾರ್ಖಂಡ್‌ ರಾಜ್ಯದ ಕಾರ್ಮಿಕ ರಾಮ್‌ ಕಿಶುನ್‌ ಓರಾನ್‌ (34) ಮೃತಪಟ್ಟವರು. ವಿದ್ಯುತ್‌ ಆಘಾತಕ್ಕೊಳಗಾಗಿ ನೆಲಕ್ಕೆ ಬಿದ್ದ ಅವರನ್ನು ಕೂಡಲೇ ಸ್ಥಳೀಯರು ಸಿದ್ದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದರು. ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದ್ದಾಗಿ ತಿಳಿಸಿದರು. ಈ ಬಗ್ಗೆ ಶಂಕರನಾರಾಯಣ ಪೊಲೀಸ್‍ ಠಾಣೆಗೆ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಡಿ.25: ಸೇನಾ ಟ್ರಕ್ ಅಪಘಾತದಲ್ಲಿ ಮೃತಪಟ್ಟ ಯೋಧ ಅನೂಪ್ ಪೂಜಾರಿ ಅವರ ಪಾರ್ಥಿವ ಶರೀರ ಗುರುವಾರ ಜಮ್ಮುವಿನಿಂದ ಸೇನಾ ವಿಮಾನದಲ್ಲಿ ರಾತ್ರಿ ಹೊತ್ತಿಗೆ ಉಡುಪಿ ತಲುಪಿದೆ, ರಾತ್ರಿ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬ್ರಿಜೇಶ್‌ ಚೌಟ ಅವರು ಸ್ವತಃ ವಿಮಾನ ನಿಲ್ದಾಣದಲ್ಲಿ ಸ್ವೀಕರಿಸಿ ಗೌರವ ಸಲ್ಲಿಸಿದರು. ಬೆಳಿಗ್ಗೆ 10 ಗಂಟೆಗೆ ತೆಕ್ಕಟ್ಟೆಯಿಂದ ಪಾರ್ಥೀವ ಶರೀರವನ್ನು ತೆರೆದ ವಾಹನದಲ್ಲಿ ಕೋಟೇಶ್ವರ ಮೂಲಕವಾಗಿ ಮೆರವಣಿಗೆ ನಡೆಸಿ ಅನೂಪ್‌ ಪೂಜಾರಿ ಅವರ ಬೀಜಾಡಿ ನಿವಾಸಕ್ಕೆ ಕೊಂಡೊಯ್ಯಲಾಯಿತು. ಬೀಜಾಡಿ ಪಡುಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ತೆ ಕಲ್ಪಿಸಲಾಗಿದೆ. ದಾರಿಯುದ್ದಕ್ಕೂ ಸಾರ್ವಜನಿಕರು ಮೃತ ಯೋಧನಿಗೆ ಅಂತಿಮ ನಮನ ಸಲ್ಲಿಸಿದರು. ಮಂಗಳವಾರ ಸಂಜೆ ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್ ಗ್ರಾಮದ ಗಡಿ ನಿಯಂತ್ರಣ ರೇಖೆಯ ಬಳಿ ಯೋಧರು ಪ್ರಯಾಣಿಸುತ್ತಿದ್ದ ಟ್ರಕ್ ರಸ್ತೆಯಿಂದ 350 ಅಡಿ ಆಳದ ಕಣಿವೆಗೆ ಉರುಳಿದ ಪರಿಣಾಮ ಸೇನಾ ಟ್ರಕ್ ಅಪಘಾತದಲ್ಲಿ ಐವರು ಯೋಧರು‌ ಮೃತಪಟ್ಟಿದ್ದು, ಈ ಪೈಕಿ ತಾಲೂಕಿನ ಬೀಜಾಡಿಯ ಅನೂಪ್…

Read More