ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಳಾವರ ಗ್ರಾಮ ಪಂಚಾಯತ್ ಎರಡನೆಯ ಅವಧಿಗೆ ಅಧ್ಯಕ್ಷರಾಗಿ ಸಿಪಿಎಂ ಬೆಂಬಲಿತ ಮಂಜುನಾಥ್ ಶೆಟ್ಟಿಗಾರ್, ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಪಾರ್ವತಿ ಶೇರಿಗಾರ್ ಆಯ್ಕೆಯಾಗಿದ್ದಾರೆ. ಒಟ್ಟು 17 ಮಂದಿ ಸದಸ್ಯ ಬಲವಿರುವ ಕಾಳಾವರ ಪಂಚಾಯತಿಯಲ್ಲಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆಮಾಡಲಾಯಿತು.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಿಘಂಟು ಬ್ರಹ್ಮ ಜಿ. ವೆಂಕಟಸುಬ್ಬಯ್ಯ ಭಾಷಾ ಸಮ್ಮಾನ್ 2023ನೇ ಸಾಲಿನ ಈ ಪುರಸ್ಕಾರಕ್ಕೆ ‘ಕುಂದಾಪ್ರ ಕನ್ನಡ’ ನಿಘಂಟು ಸಂಪಾದಕ ಪಂಜು ಗಂಗೊಳ್ಳಿ ಅವರು ಆಯ್ಕೆಯಾಗಿದ್ದಾರೆ. ಸುಮಾರು 20 ವರ್ಷಗಳ ಅವಿರತ ಶ್ರಮ, ಅಧ್ಯಯನ, ಸಂಶೋಧನೆ ಮತ್ತು ಸಂಘಟನೆಯಿಂದ ಸಿದ್ಧವಾಗಿರುವ ಕುಂದಾಪ್ರ ಕನಡ ನಿಘಂಟು, ಕನ್ನಡ ಭಾಷೆಗೆ ಅತ್ಯುತ್ತಮ ಕೊಡುಗೆ. ಜಿ.ವಿ ಅವರ 111ನೇ ಹುಟ್ಟುಹಬ್ಬದ ದಿನವಾದ ಆ.23ರಂದು ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ಕಥೆಕೂಟದ ಗೋಪಾಲಕೃಷ್ಣಕುಂಟನಿ ತಿಳಿಸಿದ್ದಾರೆ. ‘ಕಥೆಕೂಟ’ ಬಳಗವು ನಿಘಂಟು ಬ್ರಹ್ಮ ಜಿ. ವೆಂಕಟಸುಬ್ಬಯ್ಯ ಸ್ಮರಣಾರ್ಥ, ಭಾಷೆಯಲ್ಲಿ ವಿಶಿಷ್ಟ ಪ್ರಯೋಗಗಳನ್ನು ಮಾಡಿದ, ಭಾಷೆಗೆ ಸೃಜನಶೀಲ ಕೊಡುಗೆ ನೀಡಿದ ಮತ್ತು ಭಾಷೆಯ ಸಾಧ್ಯತೆಗಳನ್ನು ವಿಸ್ತರಿಸುವ ಕೆಲಸದಲ್ಲಿ ನಿರತರಾಗಿರುವ ಪ್ರತಿಭಾವಂತರಿಗೆ ಪ್ರತಿವರ್ಷ ಜಿ. ವೆಂಕಟಸುಬ್ಬಯ್ಯ ಭಾಷಾ ಸಮ್ಮಾನ್ ಪುರಸ್ಕಾರ ನೀಡಿ ಗೌರವಿಸಲು ನಿರ್ಧರಿಸಿದೆ. ಪ್ರಶಸ್ತಿಯು 10 ಸಾವಿರ ರೂ. ನಗದು, ಫಲಕವನ್ನು ಒಳಗೊಂಡಿರುತ್ತದೆ. ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ, ಗಿರೀಶ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಾವುಂದ ಗ್ರಾಮ ಪಂಚಾಯತ್ ಎರಡನೇ ಅವಧಿಯ ನೂತನ ಅಧ್ಯಕ್ಷರಾಗಿ ನರಸಿಂಹ ದೇವಾಡಿಗ ಹಾಗೂ ಉಪಾಧ್ಯಕ್ಷರಾಗಿ ಸುಲೋಚನಾ ಗಾಣಿಗ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಬೆಂಬಲಿತ 12 ಹಾಗೂ ಬಿಜೆಪಿ ಬೆಂಬಲಿತ 3 ಸದಸ್ಯ ಬಲವಿರುವ ನಾವುಂದ ಪಂಚಾಯತಿಯಲ್ಲಿ, ಎರಡನೇ ಅವಧಿಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಅ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲಾತಿ ಬಂದಿತ್ತು. ನರಸಿಂಹ ದೇವಾಡಿಗ ಅವರು 5ನೇ ಭಾರಿ ನಾವುಂದ ಗ್ರಾಮ ಪಂಚಾಯತ್ ಸದಸ್ಯರಾಗಿದ್ದು, 3ನೇ ಭಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗೋಳಿಹೊಳೆ ಗ್ರಾಮ ಪಂಚಾಯತಿಯ ಎರಡನೇ ಅವಧಿಯ ನೂತನ ಅಧ್ಯಕ್ಷರಾಗಿ ವಸಂತ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ಇಂದಿರಾ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಬೆಂಬಲಿತ 9 ಹಾಗೂ ಬಿಜೆಪಿ ಬೆಂಬಲಿತ 7 ಸದಸ್ಯ ಬಲವಿರುವ ಗೋಳಿಹೊಳೆ ಪಂಚಾಯತಿಯಲ್ಲಿ, ಎರಡನೇ ಅವಧಿಯ ಅಧ್ಯಕ್ಷರ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಅ ಮಹಿಳೆ ಮೀಸಲಾತಿ ಬಂದಿತ್ತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಲ್ತೋಡು ಗ್ರಾಮ ಪಂಚಾಯತಿಯ ಅಧ್ಯಕ್ಷರಾಗಿ ಬಿ. ಅಣ್ಣಪ್ಪ ಶೆಟ್ಟಿ ಭಟ್ನಾಡಿ ಅವರು 3ನೇ ಭಾರಿಗೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷೆಯಗಿ ಗೌರಿ ಪೂಜಾರಿ ಅವಿರೋಧವಾಗಿ ಆಯ್ಕೆಯಾದರು..13 ಸದಸ್ಯ ಬಲದ ಕಾಲ್ತೋಡು ಗ್ರಾಪಂನಲ್ಲಿ 10ಕಾಂಗ್ರೇಸ್ ಬೆಂಬಲಿತ ಹಾಗೂ 3 ಬಿಜೆಪಿ ಬೆಂಬಲಿತ ಸದಸ್ಯರಿದ್ದಾರೆ ಅಣ್ಣಪ್ಪ ಶೆಟ್ಟಿ ಅವರು ನಾಲ್ಕು ಭಾರಿ ಕಾಲ್ತೋಡು ಗ್ರಾಮ ಪಂಚಾಯತಿಯ ಸದಸ್ಯರಾಗಿ ಆಯ್ಕೆಯಾಗಿದ್ದು ಈ ಅವಧಿಯಲ್ಲಿ ಒಂದು ಭಾರಿ ಉಪಾಧ್ಯಕ್ಷರಾಗಿ, ಮೂರು ಭಾರಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 10 ಕಾಂಗ್ರೆಸ್ ಹಾಗೂ 3 ಬಿಜೆಪಿ ಬೆಂಬಲಿತ ಸದಸ್ಯ ಬಲವಿರುವ ಕಾಲ್ತೋಡು ಪಂಚಾಯತಿಯಲ್ಲಿ, ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮೀಸಲಾತಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲಾತಿ ಬಂದಿತ್ತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಂಕರನಾರಾಯಣ ಗ್ರಾಮ ಪಂಚಾಯತಿಯ ಎರಡನೇ ಅವಧಿಯ ಅಧ್ಯಕ್ಷರಾಗಿ ಉಮೇಶ್ ಶೆಟ್ಟಿ ಕಲ್ಗದ್ದೆ ಹಾಗೂ ಉಪಾಧ್ಯಕ್ಷರಾಗಿ ವತ್ಸಲಾ ಆಯ್ಕೆಯಾಗಿದ್ದಾರೆ ಬಿಜೆಪಿ ಬೆಂಬಲಿತ 16 ಹಾಗೂ ಕಾಂಗ್ರೆಸ್ ಬೆಂಬಲಿತ 2 ಸದಸ್ಯ ಬಲವಿರುವ ಶಂಕರನಾರಾಯಣ ಪಂಚಾಯತಿಯಲ್ಲಿ, ಎರಡನೇ ಅವಧಿಯಲ್ಲಿ ಅಧ್ಯಕ್ಷರ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಬಿ ಮಹಿಳೆ ಮೀಸಲಾತಿ ಬಂದಿತ್ತು. ಶಂಕರನಾರಾಯಣ ಪ್ರ.ದ. ಕಾಲೇಜು ಗಂಗರಾಜು ಚುನಾವಣಾಧಿಕಾರಿಯಾಗಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮೂರ್ತೆದಾರರ ಸೇವಾ ಸಹಕಾರಿ ಸಂಘ ನಿ, ಉಪ್ಪುಂದ ಇದರ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಆಯ್ಕೆ ಪ್ರಕ್ರಿಯೆ ಆ.17ರಂದು ಸಂಘದ ಆಡಳಿತ ಕಛೇರಿಯಲ್ಲಿ ನಡೆಯಿತು. ಸಂಘದ ಅಧ್ಯಕ್ಷರಾಗಿ ಮೋಹನ್ ಪೂಜಾರಿ ಉಪ್ಪುಂದ ಹಾಗೂ ಉಪಾಧ್ಯಕ್ಷರಾಗಿ ತಿಮ್ಮಪ್ಪ ಪೂಜಾರಿ ಅವಿರೋಧವಾಗಿ ಪುನರಾಯ್ಕೆಯಾಗಿದ್ದಾರೆ. ಆಡಳಿತ ಮಂಡಳಿಯ ಹತ್ತು ಸ್ಥಾನಗಳಿಗೆ ನಿರ್ದೇಶಕರ ಅವಿರೋಧ ಆಯ್ಕೆಯಾಗಿತ್ತು. ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ಆಯ್ಕೆ ಪ್ರಕ್ರಿಯೆ ವೇಳೆ ನಿರ್ದೇಶಕರುಗಳಾದ ಸುರೇಶ್ ಪೂಜಾರಿ, ಬಿ. ನಾರಾಯಣ ಪೂಜಾರಿ, ಹೆಚ್. ನರಸಿಂಹ ಪೂಜಾರಿ, ರಾಜು ಪೂಜಾರಿ, ಸಂತೋಷ್, ಮಂಜ ಪೂಜಾರಿ, ಶಾರದಾ, ಲಕ್ಷ್ಮೀ ಹಾಗೂ ಸಂಘದ ಪ್ರಧಾನ ವ್ಯವಸ್ಥಾಪಕ ಮಹೇಶ್ ಹೆಚ್. ಉಪಸ್ಥಿತರಿದ್ದರು. ಚುನಾವಣಾ ಪ್ರಕ್ರಿಯೆಯನ್ನು ಕಿರಣ್ ಕುಮಾರ್ ಅವರು ನಡೆಸಿಕೊಟ್ಟರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕೋಣಿ ಗ್ರಾಮ ಪಂಚಾಯತಿಯ ಎರಡನೇ ಅವಧಿಗೆ ಅಧ್ಯಕ್ಷರಾಗಿ ಅಶೋಕ ಭಂಡಾರಿ ಹಾಗೂ ಉಪಾಧ್ಯಕ್ಷರಾಗಿ ಸೌಮ್ಯ ಆಯ್ಕೆಯಾಗಿದ್ದಾರೆ ಕಾಂಗ್ರೆಸ್ ಬೆಂಬಲಿತ 7 ಹಾಗೂ ಬಿಜೆಪಿ ಬೆಂಬಲಿತ 3 ಸದಸ್ಯ ಬಲವಿರುವ ಕೋಣಿ ಪಂಚಾಯತಿಯಲ್ಲಿ, ಎರಡನೇ ಅವಧಿಯಲ್ಲಿ ಅಧ್ಯಕ್ಷರ ಸ್ಥಾನಕ್ಕೆ ಹಿಂದುಳಿದ ಅ ವರ್ಗ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲಾತಿ ಬಂದಿತ್ತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ಕುಂಜೆ ಗ್ರಾಮ ಪಂಚಾಯತ್ ಮುಂದಿನ ಸಾಲಿನ ಅವಧಿಯ ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರಾಗಿ ರಾಜೀವ ಶೆಟ್ಟಿ ಬಿಜ್ರಿ ಅವಿರೋಧವಾಗಿ ಆಯ್ಕೆಯಾಗಿದ್ದು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಾಗರತ್ನ ಇವರು ಆಯ್ಕೆಯಾಗಿರುತ್ತಾರೆ. 11 ಸದಸ್ಯ ಬಲದ ಕರ್ಕುಂಜೆ ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮೀಸಲಾತಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲಾತಿ ದೊರೆತಿತ್ತು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪರಸ್ಪರ ವಿಚಾರ, ಯೋಜನೆಗಳ ವಿನಿಮಯದಿಂದ ರೋಟರಿ ಕ್ಲಬ್ಗಳಲ್ಲಿ ಗುಣಾತ್ಮಕ ಬದಲಾವಣೆಗಳನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಆ ನೆಲೆಯಲ್ಲಿ ಜಂಟಿ ಸಭೆ ನಮ್ಮ ವಿಚಾರ, ಸಂಸ್ಕೃತಿ ವಿನಿಮಯದ ವೇದಿಕೆಯಾಗಿರುವುದು ಸಂತಸದ ಸಂಗತಿಯಾಗಿದೆ ಎಂದು ಭಟ್ಕಳ ರೋಟರಿ ಕ್ಲಬ್ ಅಧ್ಯಕ್ಷ ಡಾ. ಎಂ.ಎ. ಭಾವಿಕಟ್ಟಿ ಹೇಳಿದರು. ಅವರು ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ಬುಧವಾರ ಆಯೋಜಿಸಲಾಗಿದ್ದ ರೋಟರಿ ಕ್ಲಬ್ ಬೈಂದೂರು ಹಾಗೂ ರೋಟರಿ ಕ್ಲಬ್ ಭಟ್ಕಳದ ಅಂತರ್ಜಿಲ್ಲಾ ಜಂಟಿ ಸಭೆ ಹಾಗೂ ಕುಟುಂಬ ಸಮ್ಮಿಲನ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಝೋನ್ 1ರ ಸಹಾಯಕ ಗವರ್ನರ್ ಡಾ. ಸಂದೀಪ್ ಶೆಟ್ಟಿ ಮಾತನಾಡಿ, ರೋಟರಿ ಚಟುವಟಿಕೆಯಲ್ಲಿ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ಮಾತ್ರವೇ ರೋಟರಿ ಆಪ್ತವಾಗುತ್ತದೆ ಹಾಗೂ ಉತ್ತಮ ಸ್ನೇಹ ಸಂಬಂಧಗಳು ಬೆಳೆಯುತ್ತದೆ ಎಂದರು. ಊಭಯ ರೋಟರಿ ಕ್ಲಬ್ಗಳ ಧ್ವಜ ವಿನಿಯಮ ಮಾಡಿಕೊಳ್ಳಲಾಯಿತು. ಕಾರ್ಯದರ್ಶಿಗಳು ಮಾಸಿಕ ವರದಿಯ ವಾಚಿಸಿದರು. ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಪ್ರಸಾದ ಪ್ರಭು ಅಧ್ಯಕ್ಷತೆ ವಹಿಸಿದ್ದರು. ಪೂರ್ವಾಧ್ಯಕ್ಷ ಶ್ರೀಧರ್…
