Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಕುಂದಾಪುರ ತಾಲೂಕು ಘಟಕದ ವತಿಯಿಂದ ತ್ರಾಸಿಯ ಮಸ್ಜಿದ್ ಎ ರಹಮತ್ ನಲ್ಲಿ ತಾಲೂಕು ಅಧ್ಯಕ್ಷರಾದ ಎಸ್. ದಸ್ತಗೀರ್ ಕಂಡ್ಲೂರು ರವರ ಅಧ್ಯಕ್ಷತೆಯಲ್ಲಿ ಪವಿತ್ರ ರಮಝಾನ್ ತಿಂಗಳ ಪ್ರಯುಕ್ತ “ಸೌಹಾರ್ದ ಇಫ್ತಾರ್ ಕೂಟ” ಮತ್ತು ಅಂಬೇಡ್ಕರ್ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಜಿಲ್ಲಾ ಸಮಿತಿ ಸದಸ್ಯರಾದ ಹುಸೇನ್ ಕೊಡಿಬೇಂಗ್ರೆ ವಿಷಯ ಮಂಡಿಸಿದರು. ಅತಿಥಿಗಳು ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲಾ ಉಪಾಧ್ಯಕ್ಷರಾದ ಮುಹಮ್ಮದ್ ರಫೀಕ್ ಗಂಗೊಳ್ಳಿ, ಜಮಾಅತುಲ್ ಮುಸ್ಲಿಮೀನ್ ಗಂಗೊಳ್ಳಿಯ ಅಧ್ಯಕ್ಷರಾದ ಹಸೈನಾರ್ ಗಂಗೊಳ್ಳಿ, ಮಸ್ಜಿದ್ ಎ ರಹಮತ್ ತ್ರಾಸಿಯ ಕಾರ್ಯದರ್ಶಿ ಮಾಸ್ಟರ್ ರಫೀಕ್, ಜೈ ಭೀಮ್ ಅಧ್ಯಕ್ಷರಾದ ಜಗದೀಶ್ ಗಂಗೊಳ್ಳಿ ವೇದಿಕೆ ಮೇಲೆ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ತಾಲೂಕು ಕೋಶಾಧಿಕಾರಿ ಮುಜಾವರ್ ಅಬು ಮುಹಮ್ಮದ್ ಕುಂದಾಪುರ, ಜಿಲ್ಲಾ ಸಮಿತಿ ಸದಸ್ಯರಾದ ಶಾಬಾನ್ ಹಂಗಳೂರು, ಜಿ. ರೆಹಾನ್ ತ್ರಾಸಿ, ತಾಲೂಕು ಸಮಿತಿ ಸದಸ್ಯರಾದ ಝಹೀರ್ ನಾಖುದಾ ಗಂಗೊಳ್ಳಿ, ಅಬ್ದುಲ್ ಖಾದರ್ ಮೂಡಗೋಪಾಡಿ, ಮುಹಮ್ಮದ್ ರಫೀಕ್ ವಂಡ್ಸೆ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಐಶ್ವರ್ಯ ಖಾರ್ವಿ 591 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ 6ನೇ ರ‍್ಯಾಂಕ್ ಪಡೆದಿರುತ್ತಾಳೆ. ಕಾಲೇಜಿನ ವಿಧ್ಯಾರ್ಥಿಗಳು 2022-23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದ್ದಾರೆ. ಇವರಿಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜು 2022-23ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದ್ದಾರೆ. ಕಾಲೇಜಿನ ವಿಜ್ಞಾನ ವಿಭಾಗದ 116 ವಿದ್ಯಾರ್ಥಿಗಳಲ್ಲಿ 55 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 56 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ 5 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ವಾಣಿಜ್ಯ ವಿಭಾಗದ 15 ವಿದ್ಯಾರ್ಥಿಗಳಲ್ಲಿ 4 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 11 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ವಿಜ್ಞಾನ ವಿಭಾಗದ ಐಶ್ವರ್ಯ ಖಾರ್ವಿ 591 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ 6ನೇ ರ‍್ಯಾಂಕ್ ಪಡೆದಿರುತ್ತಾಳೆ. ಕಾಲೇಜು ಪ್ರಾರಂಭದ ಪ್ರಥಮ ವರ್ಷದಲ್ಲಿಯೇ ವಿವಿಧ ಕಾಲೇಜುಗಳಲ್ಲಿ ಪ್ರಥಮ ಪಿ.ಯು.ಸಿ ಪೂರ್ಣಗೊಳಿಸಿ, ದ್ವೀತಿಯ ಪಿ.ಯು.ಸಿ.ಗೆ ನೇರವಾಗಿ ನಮ್ಮ ಕಾಲೇಜಿನಲ್ಲಿ ದಾಖಲಾತಿ ಪಡೆದ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಶಂಕರನಾರಾಯಣ ಮದರ್ ತೆರೆಸಾಸ್ ಪಿಯು ಕಾಲೇಜು ಕಾಮರ್ಸ್ ವಿಭಾಗದ ವಿದ್ಯಾರ್ಥಿನಿ ಚಂದ್ರ ಎಸ್. ಕೆ. ದ್ವಿತೀಯ ಪಿಯು ಪರೀಕ್ಷೆಯಲ್ಲಿ ರಾಜ್ಯಕ್ಕೆ 10ನೇ ರ್ಯಾಂಕ್ ಪಡೆದಿದ್ದಾಳೆ. ವಿದ್ಯಾರ್ಥಿನಿ ಚಂದ್ರ ಎಸ್.ಕೆ., ಕನ್ನಡ 99, ಇಂಗ್ಲಿಷ್ 92, ಎಕನಾಮಿಕ್ಸ್ 97, ಬಿಸಿನೆಸ್ ಸ್ಟಡಿಸ್ 100, ಅಕೌಂಟೆನ್ಸಿ 100, ಸ್ಟ್ಯಾಟ್ 100 ಅಂಕ ಪಡೆದಿದ್ದಾಳೆ. ಇವರಿಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳು 2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಶಂಕರನಾರಾಯಣ ಮದರ್ ತೆರೆಸಾಸ್ ಪಿಯು ಕಾಲೇಜು ವಿದ್ಯಾರ್ಥಿಗಳು 2022-23ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ದಾಖಲಿಸಿದ್ದಾರೆ. ಕಾಲೇಜಿನ ವಾಣಿಜ್ಯ ವಿಭಾಗದ 46 ವಿದ್ಯಾರ್ಥಿಗಳಲ್ಲಿ 26 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 20 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ವಿಜ್ಞಾನ ವಿಭಾಗದ 64 ವಿದ್ಯಾರ್ಥಿಗಳಲ್ಲಿ 38 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 26 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರಿಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣದ ಇತಿಹಾಸದಲ್ಲೇ ಆಳ್ವಾಸ್ ಪದವಿ ಪೂರ್ವ ಕಾಲೇಜು ದಾಖಲೆ ಸೃಷ್ಟಿಸಿದ್ದು, ಕಾಲೇಜಿನ ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗದ ಅನನ್ಯಾ ಕೆ. ಎ. 600ಕ್ಕೆ 600 ಅಂಕ ಪಡೆದಿದ್ದಾಳೆ. ಇಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ‘ಪಿಯುಸಿ ಇತಿಹಾಸದಲ್ಲಿ (ಕೋವಿಡೇತರ) ವಿದ್ಯಾರ್ಥಿಯೊಬ್ಬರು ಪೂರ್ಣಾಂಕ (ಶೇ100) ಪಡೆದಿರುವುದು ಸಾರ್ವಕಾಲಿಕ ಹಾಗೂ ಶಾಶ್ವತ ದಾಖಲೆಯಾಗಿದೆ’ ಎಂದರು. ಆಳ್ವಾಸ್ ಪದವಿ ಪೂರ್ವ ಕಾಲೇಜು 99.74% ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 2658 ವಿದ್ಯಾರ್ಥಿಗಳಲ್ಲಿ 2651 ವಿದ್ಯಾರ್ಥಿಗಳು ಉತ್ತೀರ್ಣರಾಗಿ, ವಿಜ್ಞಾನ ವಿಭಾಗದಲ್ಲಿ 11 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 35 ವಿದ್ಯಾರ್ಥಿಗಳು ಕಲಾ ವಿಭಾಗದಲ್ಲಿ ಓರ್ವ ವಿದ್ಯಾರ್ಥಿನಿ ಸೇರಿದಂತೆ ಕಾಲೇಜಿನ ಒಟ್ಟು 47 ವಿದ್ಯಾರ್ಥಿಗಳು ರಾಜ್ಯದ ಟಾಪ್ 10ರ ಒಳಗೆ ಸ್ಥಾನಗಳನ್ನು ಪಡೆಯುವ ಮೂಲಕ ಆಳ್ವಾಸ್ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ಸಾಧನೆ ಮೆರೆಯುವಂತೆ ಮಾಡಿದ್ದಾರೆ ಎಂದರು. ವಾಣಿಜ್ಯ ವಿಭಾಗದಲ್ಲಿ ಅನನ್ಯಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಏ.21: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬAದಿಸಿದAತೆ, ಕೇಂದ್ರ ಮತ್ತು ರಾಜ್ಯ ಚುನಾವಣಾ ಆಯೋಗ ನೀಡುವ ಎಲ್ಲಾ ನಿರ್ದೇಶನಗಳನ್ನು ಪಾಲಿಸುವುದರ ಮೂಲಕ ಮುಕ್ತ, ನ್ಯಾಯ ಸಮ್ಮತ ಮತ್ತು ಪಾರದರ್ಶಕ ಚುನಾವಣೆಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಉಡುಪಿ ಮತ್ತು ಕಾಪು ವಿಧಾನಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕ ತುಕಾರಾಂ ಹರಿಬಾಹು ಮುಂಡೆ ಹೇಳಿದರು. ಅವರು ಇಂದು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಜಿಲ್ಲೆಯಲ್ಲಿ ನಡೆದಿರುವ ಚುನಾವಣಾ ಪೂರ್ವ ಸಿದ್ದತೆಗಳನ್ನು ಬಗ್ಗೆ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚುನಾವಣಾ ಪ್ರಕ್ರಿಯೆಯ ಯಾವುದೇ ಹಂತದಲ್ಲಿ ಲೋಪಗಳು ಉಂಟಾಗದAತೆ ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳುವಂತೆ ತಿಳಿಸಿದ ಅವರು ಮತಗಟ್ಟೆಗಳಲ್ಲಿ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಮತ್ತು ಮತದಾರರಿಗೆ ಅಗತ್ಯ ವ್ಯವಸ್ಥೆಗಳನ್ನು ಮಾಡುವಂತೆ ತಿಳಿಸಿದರು. ಚುನಾವಣಾ ಆಯೋಗವು ಇದೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟವರು, ವಿಕಲಚೇತನರು ಮತ್ತು ಕೋವಿಡ್ ಪೀಡಿತರಿಗೆ ಮನೆಯಿಂದಲೇ ಮತದಾನ ಮಾಡಲು ನೀಡಿರುವ ಸೌಲಭ್ಯವನ್ನು ಯಾವುದೇ ಗೊಂದಲಗಳಿಗೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ, ಬೈಂದೂರು ತಾಲೂಕು ಬಿಜೂರು ನಿವಾಸಿ ಗುರುರಾಜ್ ಶೆಟ್ಟಿ ಗಂಟಿಹೊಳೆ (42) ಅವರ ಒಟ್ಟು ಆದಾಯ 7.63 ಕೋಟಿ ರೂ. ಆಗಿದ್ದರೆ, ಪತ್ನಿ ಅನುರಾಧ ಶೆಟ್ಟಿ ಅವರ ಆದಾಯ 2.12 ಕೋಟಿ ರೂ. ಇದೆ. ಗುರುರಾಜ ಅವರು ವೈಯಕ್ತಿಕವಾಗಿ 1.64 ಕೋಟಿ ರೂ. ಸಾಲವನ್ನು ಹೊಂದಿದ್ದರೆ, 45ಶೇ. ಶೇರನ್ನು ಹೊಂದಿರುವ ಶ್ರೀ ಕ್ಯಾಶ್ಯೂ ಫರ್ಮ್ನಲ್ಲಿ 9,10,63,000 ಸಾಲವನ್ನು ಹೊಂದಿದ್ದಾರೆ ಎಂದು ನಾಮಪತ್ರದೊಂದಿಗೆ ಸಲ್ಲಿಸಿರುವ ಅಫಿದವಿಟ್‌ನಲ್ಲಿ ತಿಳಿಸಲಾಗಿದೆ. ಗುರುರಾಜ್ ಅವರ ಬಳಿ 1,76,844 ರೂ. ಚರಾಸ್ಥಿ ಇದ್ದರೆ, ಸ್ಥಿರಾಸ್ಥಿಯ ಮೌಲ್ಯ 7,61,40,000ರೂ. ಆಗಿದೆ. ಇದರಲ್ಲಿ ಪಿತ್ರಾರ್ಜಿತ ಆಸ್ತಿಯ ಮೌಲ್ಯ 32,70,000 ರೂ. ಆಗಿದ್ದರೆ, ಸ್ವಯಾರ್ಜಿತ ಆಸ್ತಿ ಮೌಲ್ಯ 7,28,70,00ರೂ. ಎಂದು ತಿಳಿಸಲಾಗಿದೆ. ಗುರುರಾಜರ ಪತ್ನಿ ಅನುರಾಧ ಅವರಲ್ಲಿ 18,74,166 ರೂ. ಚರಾಸ್ಥಿ ಇದ್ದರೆ, ಸ್ಥಿರಾಸ್ಥಿಯ ಮೌಲ್ಯ 1,93,50,000 ರೂ. ಆಗಿದೆ. ಅವರಲ್ಲಿ 8.65 ಲಕ್ಷ ರೂ. ಮೌಲ್ಯದ 346ಗ್ರಾಂ ಚಿನ್ನಾಭರಣಗಳಿವೆ. ಇಬ್ಬರ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕೇಂದ್ರ ಹಾಗೂ ರಾಜ್ಯ ಸರಕಾರದ ಸಾಧನೆಗಳು ಜನಸಾಮಾನ್ಯರ ಮನಸ್ಸಿನಲ್ಲಿದೆ. ಯುವಕರ, ದಮನಿತರ ಧ್ವನಿಯಾಗಿ ಸಂಘದ ಒಬ್ಬ ಸಾಮಾನ್ಯ ಕಾರ್ಯಕರ್ತ ಗುರುರಾಜ ಗಂಟಿಹೊಳೆಯವರಿಗೆ ಪಕ್ಷ ಅವಕಾಶ ನೀಡಿದೆ.ಇದು ಕಾರ್ಯಕರ್ತರ ಗೆಲುವಾಗಬೇಕು. ಬೈಂದೂರು ಸೇರಿದಂತೆ ರಾಜ್ಯದಲ್ಲಿ ಬಿಜೆಪಿ ನಿಶ್ಚಿತವಾದ ಬಹುಮತ ಗಳಿಸಲಿದೆ ಎಂದು ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿದರು. ಅವರು ಬೈಂದೂರು ಬಿಜೆಪಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಬಹುತೇಕ ಹೊಸ ಅಭ್ಯರ್ಥಿಗಳಿಗೆ ಬಿಜೆಪಿ ಅವಕಾಶ ನೀಡಿದೆ.ಮರವಂತೆ ಮೀನುಗಾರರ ಚುನಾವಣೆ ಬಹಿಷ್ಕಾರ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಕೇಂದ್ರ ಹಾಗೂ ರಾಜ್ಯ ಸರಕಾರ ಮೀನುಗಾರರ ಅಭಿವೃದ್ದಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ.ಕರಾವಳಿ ಭಾಗದ ಅಭಿವೃದ್ದಿಗೆ ವಿಶೇಷ ಆದ್ಯತೆ ನೀಡಲಾಗಿದೆ.ಮೀನುಗಾರರ ವಿಶ್ವಾಸದೊಂದಿಗೆ ಬಿಜೆಪಿ ಭರವಸೆ ಈಡೇರಿಸಲಿದೆ ಎಂದರು. ಬಿಜೆಪಿ ಸ್ಟಾರ್ ಪ್ರಚಾರಕಿ ಶ್ರುತಿ ಮಾತನಾಡಿ ಬಂದೂರು ಕ್ಷೇತ್ರ ಈ ಬಾರಿ ರಾಜ್ಯಮಟ್ಟದಲ್ಲಿ ಸುದ್ದಿಯಾಗಿದೆ.ಸಂಘದ ಒಬ್ಬ ಸಾಮಾನ್ಯ ಕಾರ್ಯಕರ್ತನಿಗೆ ಅವಕಾಶ ನೀಡಿರುವುದು ಅದು ಬಿಜೆಪಿಯಿಂದ ಮಾತ್ರ ಸಾಧ್ಯ. ಹೀಗಾಗಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜನಸಾಮಾನ್ಯರ ನೋವು, ನಲಿವುಗಳನ್ನು ವಿಧಾನಸಭೆಯಲ್ಲಿ ಸಮರ್ಥವಾಗಿ ಮಂಡಿಸುವ ಚಾಕಚಕ್ಯತೆ ಹೊಂದಿರುವ, ರಾಷ್ಟ್ರೀಯತೆ ಮೈಗೂಡಿಸಿಕೊಂಡು ಕೆಲಸವನ್ನು ಮಾಡುತ್ತಿರುವ ಬೈಂದೂರು ಚೌಕಿದಾರ್ ಗುರುರಾಜ್ ಗಂಟಿಹೊಳೆಯವರ ವಿಜಯಕ್ಕೆ ಕಾರ್ಯಕರ್ತರು ಶಕ್ತಿಮಿರಿ ಕೆಲಸ ಮಾಡಬೇಕು ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಬೈಂದೂರು ವಿಧಾನಸಭೆ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಅಂಗವಾಗಿ ಗುರುವಾರ ಬೈಂದೂರು ಹೊಸ ಬಸ್ ನಿಲ್ದಾಣದಲ್ಲಿ ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು. ಯುವಜನರ ರಣೋತ್ಸವ ಕಂಡಾಗ ನಮ್ಮ ಅಭ್ಯರ್ಥಿ ಗಂಟಿಹೊಳೆ ಅವರು ಸುಮಾರು ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಚಿವ ಸುನಿಲ್ ಕುಮಾರ್ ಮಾತನಾಡಿ, ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅವರ ಕಾಲದಲ್ಲಿ ಬೈಂದೂರು ಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸಗಳು ನಡೆದಿದೆ ಅವರ ಕಾರ್ಯಗಳು ಮುಂದುವರಿಯಬೇಕಾದರೆ ಬಿಜೆಪಿ ಅಭ್ಯರ್ಥಿ ಶಾಸಕನಾಗ ಬೇಕು ಎಂದು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ…

Read More