Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬ್ರಹ್ಮಾವರ: ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್) ಸಂಸ್ಥೆ, ಬ್ರಹ್ಮಾವರ ಇವರ ಆಶ್ರಯದಲ್ಲಿ ವಸ್ತ್ರ ಚಿತ್ರ ಕಲಾ ಲಘು ಉದ್ಯಮಿ (ಎಂಬ್ರಾಯ್ಡರಿ )ತರಬೇತಿಯ ಉದ್ಘಾಟನಾ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು. ಕರ್ನಾಟಕ ರಾಜ್ಯ ಟೈಲರಿಂಗ್ ಅಸೋಸಿಯೇಷನ್‌ನ ಉಡುಪಿ ಜಿಲ್ಲಾಧ್ಯಕರು ಹಾಗೂ ಮಾಲಕರು, ಔಟ್ ಫಿಟ್ ಲೇಡೀಸ್ ಟೈಲರ್ ದಯಾನಂದ ಕೋಟ್ಯಾನ್ ಅವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ, ಮಹಿಳೆಯರು ತಮ್ಮ ಆಸಕ್ತಿಯ ಕ್ಷೇತ್ರವಾಗಿರುವ ಟೈಲರಿಂಗ್ ಹಾಗೂ ಎಂಬ್ರಾಯ್ಡರಿ ಉದ್ಯಮವು ಅತ್ಯಂತ ಲಾಭದಾಯಕ ಹಾಗೂ ಬಹಳ ಬೇಡಿಕೆಯಿರುವ ಕ್ಷೇತ್ರವಾಗಿದೆ. ಇದರಿಂದ ಮಹಿಳೆಯರಿಗೆ ಸ್ವ ಉದ್ಯೋಗವನ್ನು ಕೈಗೊಂಡು ಆರ್ಥಿಕವಾಗಿ ಸಬಲತೆಯನ್ನು ಹೊಂದಲು ಸಾಧ್ಯವಾಗುತ್ತದೆ. ಸ್ವಾಭಿಮಾನದಿಂದ ಬದುಕಲು ಪ್ರೇರಣೆ ನೀಡುತ್ತದೆ. ಇನ್ನೊಬ್ಬರ ಮುಂದೆ ನಿಂತು ಕೈ ಚಾಚುವ ಪ್ರಮೇಯ ತಪ್ಪುತ್ತದೆ. ಹಾಗಾಗಿ ಸ್ವ ಉದ್ಯೋಗ ಆರ್ಥಿಕ ಭದ್ರತೆ ಜೊತೆಗೆ ಆತ್ಮವಿಶ್ವಾಸದ ಕೊಂಡಿಯಾಗಲಿದೆ ಎಂದರು.  ಸಮಾಜದಲ್ಲಿ ಗೌರವಯುತವಾದ ಸ್ಥಾನ ಮಾನವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶದ ಯುವ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಕರಾದ ಜೀವನ್ ಕುಮಾರ್ ಶೆಟ್ಟಿ ಅವರನ್ನು 2006-2007 ಬ್ಯಾಚ್‌ನ ವಿದ್ಯಾರ್ಥಿಗಳಿಂದ ಸನ್ಮಾನ ಹಾಗೂ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳಾದ ಪ್ರದೀಪ್ ಬಡಾಕೆರೆ, ವಿಘ್ನೇಶ್ ನಾವುಂದ, ಯೋಗೀಶ್ ನಾವುಂದ ಸತೀಶ್ ನಾವುಂದ, ವಿನೀತ್ ಬಡಾಕೆರೆ, ಉಪನ್ಯಾಸಕ ವರ್ಗದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಜೀವನದ ಬಹುಮುಖ್ಯವಾದ ಘಟ್ಟ. ಈ ಸಂದರ್ಭದಲ್ಲಿ ತೆಗೆದುಕೊಳ್ಳುವ ನಿರ್ಧಾರವು ಜೀವನದ ಮುಂದಿನ ಹಾದಿಯನ್ನು ನಿರ್ಧರಿಸುತ್ತದೆ. ಯಾವುದೇ ನಿರ್ಧಾರವನ್ನು ತೆಗೆದುಕೊಳ್ಳಬೇಕಾದರೂ ಕಷ್ಟಪಟ್ಟು ತೆಗೆದುಕೊಳ್ಳದೆ ಇಷ್ಟಪಟ್ಟು ತೆಗೆದುಕೊಳ್ಳಬೇಕು. ಇಷ್ಟವಾದ ಕ್ಷೇತ್ರವನ್ನು, ಕೋರ್ಸ್‌ನ್ನು ಆಯ್ಕೆ ಮಾಡಿಕೊಂಡರೆ ಅದರಲ್ಲಿ ಯಶಸ್ಸು ಸಿಗುತ್ತದೆ. ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡರೆ ಮುಂದಿನ ಜೀವನದಲ್ಲಿ ಅಭಿವೃದ್ಧಿ ಹೊಂದಲು ಸಾಧ್ಯವಿದೆ. ಮಾಡಿದ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಕ್ಕೆ ಸಿಗುತ್ತದೆ ಎಂದು ಗಂಗೊಳ್ಳಿಯ ಉದ್ಯಮಿ ಜಿ. ವೆಂಕಟೇಶ ಶೆಣೈ  ಹೇಳಿದರು. ಅವರು ಜಿ.ಎಸ್.ವಿ.ಎಸ್.ಅಸೋಸಿಯೇಶನ್ ಗಂಗೊಳ್ಳಿ ಇದರ ವತಿಯಿಂದ ಗಂಗೊಳ್ಳಿಯ ಎಸ್.ವಿ. ಪದವಿಪೂರ್ವ ಕಾಲೇಜು, ಎಸ್.ವಿ. ಕನ್ನಡ ಮಾಧ್ಯಮ ಪ್ರೌಢಶಾಲೆ, ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ ಗಂಗೊಳ್ಳಿ ಇಲ್ಲಿನ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳಾಂಗಣದಲ್ಲಿ ಶನಿವಾರ ಜರಗಿದ ಸಮ್ಮಾನ ಸಮಾರಂಭದಲ್ಲಿ ಅತಿಥಿಯಾಗಿ ಅವರು ಮಾತನಾಡಿದರು. ಎಸ್.ವಿ. ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತೆಕ್ಕೆಟ್ಟೆಯ ವಿಶ್ವವಿನಾಯಕ ಪಿಯು ಕಾಲೇಜಿನಲ್ಲಿ ಶನಿವಾರದಂದು ವಿದ್ಯಾರ್ಥಿಗಳ ಪ್ರತಿಭಾ ದಿನಾಚಾರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲೆಯ ಮ್ಯಾನೇಜಿಂಗ್ ಡೈರೆಕ್ಟರ್ ಎಂ. ಪ್ರಭಾಕರ್ ಶೆಟ್ಟಿ ಅವರು ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಹೇಗೆ ತೋರ್ಪಡಿಸಿಕೊಳ್ಳಬೇಕು ಮತ್ತು ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿ ಬೆಳೆಸಿಕೊಳ್ಳುವಂತೆ ಕರೆ ನೀಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಗಾಯನ, ನೃತ್ಯ, ಮಿಮಿಕ್ರಿ ಹಾಗೂ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಉತ್ಸಾಹದಿಂದ ಭಾಗವಹಿಸಿದರು. ವಿದ್ಯಾರ್ಥಿಗಳಲ್ಲಿರುವ ಸೃಜನಶೀಲತೆ ಆತ್ಮವಿಶ್ವಾಸ ಮತ್ತು ನಾಯಕತ್ವ ಗುಣಗಳನ್ನು ಬೆಳೆಸಲು ಸಹಕಾರಿಯಾಯಿತು. ಕಾರ್ಯಕ್ರಮದಲ್ಲಿ ಮ್ಯಾನೇಜಿಂಗ್ ಟ್ರಸ್ಟಿಗಳು, ಕಾಲೇಜು ಉಪನ್ಯಾಸಕರು, ಕಾಲೇಜು ಸಿಬ್ಬಂದಿ ವರ್ಗದವರು, ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಆಯಿಷಾ ಸೈಯದ್ ಕಾರ್ಯಕ್ರಮ ನಿರೂಪಿಸಿ, ಸಾಕೇತ್ ಸ್ವಾಗತಿಸಿ ಹಾಗೂ ಆಯಿಷಾ ನುಹಾ ವಂದಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕುಂಭಾಸಿ ಆನೆಗುಡ್ಡೆ ವಿನಾಯಕ ಸಭಾಗೃಹದಲ್ಲಿ ಜೂ.28ರಂದು 20ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ʼನುಡಿಬೆಳಕು-2026ʼ ನಡೆಯಲಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಉಮೇಶ್ ಪುತ್ರನ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿ, ಪ್ರಸ್ತುತ ಘಟಕವು ಸರಕಾರದ ಯಾವುದೇ ನೆರವಿಲ್ಲದೆ ಕಳೆದ ನಾಲ್ಕುವರೆ ವರ್ಷಗಳಲ್ಲಿ 4 ತಾಲೂಕು ಸಮ್ಮೇಳನ, 1 ಜಿಲ್ಲಾ ಸಮ್ಮೇಳನ, ವಿಜಯಕರ್ನಾಟಕ ಸಹಯೋಗದೊಂದಿಗೆ ವೈದ್ಯ ಸಾಹಿತ್ಯ ಸಮ್ಮೇಳನ ನಡೆಸಿದೆ. ನವಂಬರ್‌ನಲ್ಲಿ ಹಾಲಿ ಘಟಕದ ಪದಾಧಿಕಾರಿಗಳ ಅವಧಿ ಮುಗಿಯಲಿದ್ದು, ಅದರೊಳಗೆ ಇನ್ನೊಂದು ವಿಶಿಷ್ಟ ಸಮ್ಮೇಳನ ನಡೆಸಲು ತೀರ್ಮಾನಿಸಿದ್ದೇವೆ ಎಂದರು. ಹಿರಿಯ ಪತ್ರಿಕೋದ್ಯಮಿ ಯು.ಎಸ್. ಶೆಣೈ ಅವರು ಸಮ್ಮೇಳನದ ಸರ್ವಾಧ್ಯಕ್ಷರಾಗಿರುವ ಹಿನ್ನೆಲೆಯಲ್ಲಿ ಸಮ್ಮೇಳನಕ್ಕೆ ನುಡಿಬೆಳಕು ಶೀರ್ಷಿಕೆ ಇರಿಸಿದ್ದೇವೆ. ಸಮ್ಮೇಳನದ ಪೂರ್ವ ತಯಾರಿ ನಡೆದಿದೆ. ಈ ಬಾರಿ ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಿದ್ದೇವೆ. ಕುಂಭಾಸಿ, ಕೊಲ್ಲೂರು ದೇವಸ್ಥಾನ ಅಲ್ಲದೆ ಸಾರ್ವಜನಿಕ ಸೇವಾ ಸಂಸ್ಥೆಗಳು ಸಮ್ಮೇಳನದ ಯಶಸ್ಸಿಗೆ ಸಹಕರಿಸು ತ್ತಿದ್ದಾರೆ. ಸಮ್ಮೇಳನದ ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಆನೆಗುಡ್ಡೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಮಣಿಪಾಲದ ಮಾಹೆ ವಿಶ್ವವಿದ್ಯಾನಿಲಯದ‌ ಸಹಯೋಗದಲ್ಲಿ ʼಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಾಟ ವಿರೋಧಿ ದಿನʼ ಪ್ರಯುಕ್ತ ಮಾದಕ ವಸ್ತುಗಳ ಸೇವನೆ ಮತ್ತು ಅಕ್ರಮ ಸಾಗಾಟ ಇದರ ಬಗ್ಗೆ ಅರಿವು ಕಾರ್ಯಕ್ರಮ ನಡೆಯಿತು. ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರ ಆಚಾರಿ ಅಧ್ಯಕ್ಷತೆ ವಹಿಸಿದ್ದರು. ಮಾಹೆ ವಿಶ್ವವಿದ್ಯಾನಿಲಯ ಮಣಿಪಾಲದ ಸ್ಟುಡೆಂಟ್ ಅಫೇರ್ಸ್ ನಿರ್ದೇಶಕರಾದ ಡಾ. ಪೂರ್ಣಿಮಾ ಪಿ ಕುಂದಾಪುರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾದಕ ವಸ್ತುಗಳ ಸೇವನೆ ಮತ್ತು ಸಾಗಾಟದ ನಕಾರಾತ್ಮಕ ದುಷ್ಪರಿಣಾಮಗಳು ಬಗ್ಗೆ ವಿಶೇಷ ಉಪನ್ಯಾಸ ನೀಡಿದರು. ಸಂಪನ್ಮೂಲ ವ್ಯಕ್ತಿಗಳಾದ ಮಾಹೆ ವಿಶ್ವವಿದ್ಯಾನಿಲಯ ಮಣಿಪಾಲದ ಸ್ಟುಡೆಂಟ್ ಅಫೇರ್ಸ್ ಇದರ ಉಪನಿರ್ದೇಶಕರಾದ ಡಾ. ರಶ್ಮಿ ಮತ್ತು ಡಾ. ಅರವಿಂದ್ ಅವರು ಮಾದಕ ವಸ್ತು ಸೇವನೆಯ ದುಷ್ಪರಿಣಾಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಉಪನ್ಯಾಸ ನೀಡಿದರು. ಸಲಹೆಗಾರರಾದ ಡಾ. ರಯಾನ್, ಅಚಲಾ, ಜೀವನ್ ಲೆವಿಸ್ ಮತ್ತು ಕರುಣಾ ಮಾದಕ ವಸ್ತುಗಳ ಸೇವನೆ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಸ್ತ್ರೀಎಂಬುದು ಪರಿಪೂರ್ಣತೆಯ ಸಂಕೇತ. ಆಕೆಯ ಅಂತರಂಗದ ಶಕ್ತಿ, ಸಂವೇದನೆ ಮತ್ತು ಚಿಂತನೆ ಅಕ್ಷರ ರೂಪದಲ್ಲಿ ಅಭಿವ್ಯಕ್ತಿಯಾದಾಗ ಅದು ಸಮಾಜದ ಮೌಲ್ಯಗಳನ್ನು ಶ್ರೀಮಂತಗೊಳಿಸುತ್ತದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ನುಡಿದರು. ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಳ್ವಾಸ್‌ನ ಕುವೆಂಪು ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸೌಮ್ಯ ತಿಲಕ್ ಶೆಟ್ಟಿಯವರ ‘ಮಸಿಯ ಮಾತು’ ಕವನ ಸಂಕಲನವನ್ನು ಲೋಕಾರ್ಪಣೆ ಮಾಡಿ ಮಾತನಾಡಿದರು. ಈ ಸಂಕಲನದಲ್ಲಿರುವ ಎಲ್ಲಾ ಕವನಗಳೂ ಕವಯಿತ್ರಿ ಸೌಮ್ಯರವರ ಹೆಸರಿನಂತೆಯೇ ಮೃದುತ್ವ, ಸಂಯಮ ಮತ್ತು ಸಂವೇದನಾಶೀಲತೆಯಿಂದ ಕೂಡಿವೆ. ಸಮತೆ, ಮಾನವೀಯತೆ ಮತ್ತು ಸಹಬಾಳ್ವೆಯ ತತ್ವವೇ ಈ ಕವನಗಳ ಜೀವಾಳವಾಗಿದೆ. ಆದ್ದರಿಂದ ಇಲ್ಲಿ ರೋಷ, ಆವೇಶ, ಸೇಡು ಅಥವಾ ದ್ವೇಷದ ಅಭಿವ್ಯಕ್ತಿಗಳಿಗೆ ಅವಕಾಶವಿಲ್ಲ, ಬದಲಾಗಿ ಪ್ರೀತಿ, ಕರುಣೆ, ಸಹಾನುಭೂತಿ ಮತ್ತು ಜೀವನದ ಸಕಾರಾತ್ಮಕ ದೃಷ್ಟಿಕೋನವೇ ಪ್ರಧಾನವಾಗಿ ಹರಿದುಬರುತ್ತದೆ. ಕವನಗಳಲ್ಲಿ ಪ್ರತಿಫಲಿಸಿರುವ ಚಿಂತನೆಗಳು ಮೌಲ್ಯಾಧಾರಿತ ಬದುಕಿನತ್ತ ಓದುಗರನ್ನು ಕರೆದೊಯ್ಯುತ್ತವೆ. ಮಹತ್ವಾಕಾಂಕ್ಷೆಯ ಅಂಧ ಓಟಕ್ಕಿಂತ ಬದುಕಿನ ಸರಳತೆ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಯಕ್ಷಗಾನ ಕಲಿಕೆಯು ವ್ಯಕ್ತಿತ್ವ ವಿಕಸನಕ್ಕೆ ದಾರಿದೀಪ ಇಂತಹ ಯಕ್ಷಗಾನವನ್ನು ಮಕ್ಕಳಿಗೆ ಕಲಿಸುವುದರಿಂದ ಸಮಾಜಕ್ಕೆ ಒಳ್ಳೆಯ ವ್ಯಕ್ತಿಗಳನ್ನು ಕಾಣಿಕೆಯಾಗಿ ನೀಡಬಹುದಾಗಿದೆ ಎಂದು ಯಕ್ಷಗಾನ ಕಲಾಕೇಂದ್ರ ಹಂಗರಕಟ್ಟೆಯ ಕಾರ್ಯದರ್ಶಿ ರಾಜಶೇಖರ ಹೆಬ್ಬಾರ್ ಅಭಿಪ್ರಾಯಪಟ್ಟರು. ಅವರು ಇತ್ತೀಚಿಗೆ ಕೋಟದ ವಿವೇಕ ಬಾಲಕಿಯರ ಪ್ರೌಢಶಾಲೆ, ವಿವೇಕ ಪದವಿಪೂರ್ವ ಕಾಲೇಜು ಹೈಸ್ಕೂಲ್ ವಿಭಾಗ, ವಿವೇಕ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಜಂಟಿ ಆಶ್ರಯದಲ್ಲಿ ನಡೆದ ಯಕ್ಷ ಶಿಕ್ಷಣ ಟ್ರಸ್ಟ್, ಉಡುಪಿ ಇವರು ಏರ್ಪಡಿಸುವ ಯಕ್ಷಗಾನ ತರಬೇತಿಯ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಯಕ್ಷಗಾನ ಕಲಾರಂಗದ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್ ಅವರು ಯಕ್ಷ ಶಿಕ್ಷಣ ಟ್ರಸ್ಟ್ ನ ಕಾರ್ಯ ಚಟುವಟಿಕೆಗಳ ಬಗ್ಗೆ ಸ್ಥೂಲ ಪರಿಚಯ ನೀಡಿ ವಿದ್ಯಾರ್ಥಿಗಳು ಇದರಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಿದರು. ವಿವೇಕ ಪದವಿಪೂರ್ವ ಕಾಲೇಜಿನ ಹಿಂದಿನ ವಿದ್ಯಾರ್ಥಿಯಾದ ಎಸ್ ವಿಶ್ವೇಶ್ವರ ಭಟ್ ಇವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ವಿವೇಕ ಪದವಿ ಪೂರ್ವ ಕಾಲೇಜಿನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಯಡಾಡಿ ಮತ್ಯಾಡಿಯ ಸುಜ್ಞಾನ ಪಿಯು ಕಾಲೇಜು, ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಹಾಗೂ ವಿದ್ಯಾರಣ್ಯ ಗ್ಲೋಬಲ್ ಸ್ಕೂಲ್ ಇವುಗಳ ಜಂಟಿ ಆಶ್ರಯದಲ್ಲಿ ಶ್ರೀ ಭ್ರಾಮರೀ ನಾಟ್ಯಾಲಯದ ‘ಗೆಜ್ಜೆಯೊಂದಿಗೆ ಬೆಳ್ಳಿ ಹೆಜ್ಜೆ -9’ ಭರತನಾಟ್ಯ ಪ್ರಾತ್ಯಕ್ಷಿಕೆ ಕಾರ್ಯಕ್ರಮವು ಇತ್ತೀಚೆಗೆ ಅತ್ಯಂತ ಯಶಸ್ವಿಯಾಗಿ ಜರುಗಿತು. ಭ್ರಾಮರೀ ನಾಟ್ಯಾಲಯದ ಗುರುಗಳಾದ ವಿದ್ವಾನ್ ಕೆ. ಭವಾನಿ ಶಂಕರ್ ಅವರು ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉದ್ಘಾಟನೆಯ ನಂತರ ನಾಟ್ಯಾಲಯದ ವಿದ್ಯಾರ್ಥಿಗಳಿಂದ ಆಕರ್ಷಕ ನೃತ್ಯ ಪ್ರಾತ್ಯಕ್ಷಿಕೆ ಆರಂಭವಾಯಿತು. ಭರತನಾಟ್ಯ ಎಂದರೇನು? ಅದರ ಉಗಮ ಹಾಗೂ ಇಂದಿನ ತಲೆಮಾರಿನಲ್ಲಿ ಕಲೆ ಮತ್ತು ಸಂಸ್ಕೃತಿಗಳನ್ನು ಉಳಿಸಿ ಬೆಳೆಸುವಲ್ಲಿ ವಿದ್ಯಾರ್ಥಿಗಳ ಪಾತ್ರವೇನು? ಎಂಬ ಬಗ್ಗೆ ಸುದೀರ್ಘವಾಗಿ ವಿವರಿಸಲಾಯಿತು. ಭರತನಾಟ್ಯಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಸಂವಾದ ಹಾಗೂ ಚರ್ಚೆಯನ್ನು ಏರ್ಪಡಿಸಲಾಗಿತ್ತು. ಇದೇ ಸಂದರ್ಭದಲ್ಲಿ ನೆರೆದಿದ್ದ ಶಾಲಾ ವಿದ್ಯಾರ್ಥಿಗಳಿಗೆ ಭರತನಾಟ್ಯದ ಮೂಲಭೂತವಾದ ಕೆಲವು ಹೆಜ್ಜೆಗಳನ್ನು ಹೇಳಿಕೊಡುವ ಮೂಲಕ ಕಲೆಯ ಪ್ರಾಯೋಗಿಕ ಅನುಭವವನ್ನು ನೀಡಲಾಯಿತು. ಈ ಅಪೂರ್ವ ಪ್ರಾತ್ಯಕ್ಷಿಕೆಯಲ್ಲಿ ನಾಟ್ಯಾಲಯದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸೈಂಟ್ ಥಾಮಸ್ ಶಾಲೆಯಲ್ಲಿ 2026–27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಚಿವ ಸಂಪುಟದ ಪದಗ್ರಹಣ ಸಮಾರಂಭವು ಶಾಲಾ ಸಭಾಂಗಣದಲ್ಲಿ ಅತ್ಯಂತ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಜಯ ಭಂಡಾರ್ಕರ್ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ , ವಿದ್ಯಾರ್ಥಿಗಳಿಗೆ ನಾಯಕತ್ವ, ಶಿಸ್ತು ಹಾಗೂ ಸೇವಾ ಮನೋಭಾವದ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲರಾದ ವಂದನೀಯ ಫಾದರ್ ಫಿಲಿಪ್ ನೆಲ್ಲಿವಿಳಾ ವಹಿಸಿದ್ದರು. ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ವಿದ್ಯಾರ್ಥಿಗಳು ಜವಾಬ್ದಾರಿಯುತ ನಾಯಕರಾಗಿ ಬೆಳೆಯಬೇಕೆಂದು ಕರೆ ನೀಡಿದರು. ಬಳಿಕ ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ಸಚಿವ ಸಂಪುಟದ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಲಾಯಿತು. ಈ ಸಂದರ್ಭದಲ್ಲಿ ಉಪಪ್ರಾಂಶುಪಾಲೆ ಸಿಸ್ಟರ್ ಕಾರ್ಮೆಲ್ ಅವರು ವಿದ್ಯಾರ್ಥಿಗಳನ್ನು ವೇದಿಕೆಗೆ ಆಹ್ವಾನಿಸುವ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿ. ಶಾಲಾ ನಾಯಕನಾಗಿ ಅಮನ್ ಹಾಗೂ ಶಾಲಾ ನಾಯಕಿಯಾಗಿ ವೀಕ್ಷಾ , ಹಾಗೂ ವಿವಿಧ ಕ್ಲಬ್ ನ ನಾಯಕರುಗಳು ಅಧಿಕಾರ ಸ್ವೀಕರಿಸಿದರು. ನೂತನ…

Read More