ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಾನ್ಯುಯಲ್ ಸ್ಕ್ಯಾವೆಂಜರ್ಸ್ ವೃತ್ತಿಯನ್ನು ಈ ಹಿಂದೆ ನಿರ್ವಹಿಸುತ್ತಿದ್ದವರಿಗೆ ಸರಕಾರದ ವಿವಿಧ ಸೌಲಭ್ಯಗಳು ಸೇರಿದಂತೆ ಪುನರ್ವಸತಿ ಯೋಜನೆಗಳನ್ನು ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಡಾ. ಕೆ. ವಿದ್ಯಾ ಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾನ್ಯುಯಲ್ ಸ್ಕ್ಯಾವೆಂಜರ್ಸ್ ಪದ್ಧತಿಯು ಈಗಾಗಲೇ ದೇಶಾದ್ಯಂತ ನಿಷೇಧವಿದೆ. ನಗರ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಾನ್ಯುಯಲ್ ಸ್ಕ್ಯಾವೆಂಜರ್ ಅನ್ನು ನೇಮಿಸಿಕೊಂಡು ಕೆಲಸ ಕಾರ್ಯವನ್ನು ಮಾಡಿಸಿದ್ದಲ್ಲಿ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಜಿಲ್ಲೆಯಲ್ಲಿ ಗುರುತಿಸಲಾದ ಮಾನ್ಯುಯಲ್ ಸ್ಕ್ಯಾವೆಂಜರ್ಸ್ಗಳಿಗೆ ಹಾಗೂ ಮೃತಪಟ್ಟ ಮಾನ್ಯುಯಲ್ ಸ್ಕ್ಯಾವೆಂಜರ್ಸ್ಗಳ ಕುಟುಂಬದ ಅವಲಂಬಿತರಿಗೆ ಗುರುತಿನ ಚೀಟಿ, ಒಂದು ಬಾರಿ ನಗದು ಸಹಾಯ, ಮನೆ, ನಿವೇಶನ, ಶಿಕ್ಷಣ, ವಿದ್ಯಾರ್ಥಿ ವೇತನ, ಉದ್ಯೋಗ, ಸಾಲ ಸೌಲಭ್ಯ ಇತ್ಯಾದಿ ರೀತಿಯಲ್ಲಿ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಉಡುಪಿ ಇವರು ವತಿಯಿಂದ ಒಂದು ತಿಂಗಳ ಉದ್ಯೋಗಾಧಾರಿತ ಆರೋಗ್ಯ ನಿಗಾ ಸಹಾಯಕರ ತರಬೇತಿಗಾಗಿ 18 ರಿಂದ 30 ವರ್ಷದವರೆಗಿನ ವಯೋಮಿತಿಯ ಎಸ್.ಎಸ್.ಎಲ್.ಸಿ ಅಥವಾ ಪಿಯುಸಿ ಉತ್ತೀರ್ಣ ಮತ್ತು ಅನುತ್ತೀರ್ಣರಾದ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ಅಕ್ಟೋಬರ್ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ರೆಡ್ ಕ್ರಾಸ್ ಕಛೇರಿ ಅಜ್ಜರಕಾಡು ಉಡುಪಿ, ದೂ.ಸಂಖ್ಯೆ: 0820–2532222, ಮೊ.ನಂ:8310311448 ಅಥವಾ 9741762007 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಗರ್ಭಿಣಿ ಮಹಿಳೆಯರು ಹಾಗೂ ನವಜಾತ ಶಿಶುಗಳ ನಿರಂತರ ಕಾಳಜಿಯನ್ನು ವೈದ್ಯರುಗಳು ಹಾಗೂ ಸಿಬ್ಬಂದಿಗಳು ಮಾಡಿದ್ದಲ್ಲಿ ಮಾತ್ರ ತಾಯಿ ಮರಣ ಪ್ರಮಾಣವನ್ನು ತಡೆಗಟ್ಟಿ, ಶೂನ್ಯ ಗೊಳಿಸಲು ಸಾಧ್ಯ. ಇದಕ್ಕೆ ಒತ್ತು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಸಮನ್ವಯ ಸಮಿತಿ ಸಭೆಗಳ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರಕಾರ ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸಲು ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಇವುಗಳ ಅನುಷ್ಠಾನವನ್ನು ಸರಕಾರದ ಮಾರ್ಗಸೂಚಿ ಅನ್ವಯ ನಿಗದಿತ ಕಾಲಾವಧಿಯಲ್ಲಿ ಕಾಲಕಾಲಕ್ಕೆ ಕೈಗೊಂಡು ಜನರ ಆರೋಗ್ಯ ಸುಧಾರಣೆಗೆ ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಆರೋಗ್ಯ ಸಂಸ್ಥೆಗಳಲ್ಲಿ ಉತ್ಪತ್ತಿಯಾಗುವ ಜೈವಿಕ ವೈದ್ಯಕೀಯ ತ್ಯಾಜ್ಯ ವಿಲೇವಾರಿಯನ್ನು ವೈಜ್ಞಾನಿಕವಾಗಿ ಮಾಡಬೇಕು. ಇವುಗಳನ್ನು ಸಂಗ್ರಹಿಸುವ ಏಜೆನ್ಸಿಗಳು ವೈಜ್ಞಾನಿಕವಾಗಿ ವಿಲೇವಾರಿ ಮಾಡುತ್ತಿರುವ ಬಗ್ಗೆ ಪರಿಶೀಲನೆ ಮಾಡಬೇಕು. ಅಲ್ಲದೆ ಔಷಧಿ ಬಾಟಲ್ಗಳು,…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಯಾವುದೇ ಸಂಸ್ಥೆ ಬೆಳೆಯಬೇಕಾದರೆ ಸಮಾನ ಮನಸ್ಕ ಸದಸ್ಯರು ಮುಖ್ಯವಾಗಿರಬೇಕು. ಅವರೆಲ್ಲರ ಸತ್ಚಿಂತನೆಗಳ ಜತೆಗೆ ಆಸಕ್ತಿ ಹಾಗೂ ಛಲವಿದ್ದರೆ ಅಸಾಧ್ಯವೆಂಬುವುದು ಯಾವುದೂ ಇಲ್ಲ. ಮನಃಪೂರ್ವಕವಾಗಿ ಮಾಡುವ ಉತ್ತಮ ಸೇವೆಗಳಿಂದ ಸಿಗುವ ಸಂತೋಷ ಶಾಶ್ವತವಾಗಿರುತ್ತದೆ ಎಂದು ಇನ್ನರ್ವೀಲ್ ಕ್ಲಬ್ ಡಿಸ್ಟಿಕ್ಟ್ ಛೇರ್ಮನ್ ವೈಶಾಲಿ ವಿ. ಕುಡ್ವಾ ಹೇಳಿದರು. ಇಲ್ಲಿನ ಇನ್ನರ್ವೀಲ್ ಕ್ಲಬ್ಗೆ ಗುರುವಾರ ಅಧೀಕೃತ ಭೇಟಿ ನೀಡಿ ನಂತರ ಶ್ರೀ ಶಾರದಾ ಕನ್ವೆನ್ಷನ್ ಹಾಲ್ನಲ್ಲಿ ನಡೆದ ಸಮಾರಂಭ ಉದ್ಘಾಟಿಸಿ, ಸನ್ಮಾನ ಸ್ವೀಕರಿಸಿ ಮಾತನಾಡಿದರು. ಕಳೆದ 26 ವರ್ಷಗಳಿಂದ ತನ್ನ ಕಾರ್ಯ ಚಟುವಟಿಕೆಯಿಂದ ಬೈಂದೂರು ಇನ್ನರ್ವೀಲ್ ಕ್ಲಬ್ ಬಹಳ ಎತ್ತರಕ್ಕೆ ಬೆಳೆದಿದೆ. ಈ ವರ್ಷದ ಸಂಸ್ಥೆಯ ಧ್ಯೇಯವಾಕ್ಯ ’ಹಾರ್ಟ್ ಬೀಟ್ ಆಫ್ ಹ್ಯುಮಾನಿಟಿ’ ಅದರಂತೆಯೇ ಒಂದು ಜೀವಕ್ಕೆ ಹೃದಯ ಬಡಿತ ಎಷ್ಟು ಮುಖ್ಯವೋ ಮನುಕುಲದ ಒಳಿತಿಗಾಗಿ ನಾವು ಮಾಡುವ ಪ್ರತಿ ಕಾರ್ಯವು ಚಿಕ್ಕದಿರಲಿ ದೊಡ್ಡದಿರಲಿ ಅಷ್ಟೇ ಮುಖ್ಯ ಎಂಬುದನ್ನು ಬಲವಾಗಿ ನಂಬಬೇಕು. ಇದರೊಂದಿಗೆ ಸಾಕುಪ್ರಾಣಿಗಳ ರಕ್ಷಣೆಯೂ ಅಗತ್ಯ ಎಂದರು. ಕ್ಲಬ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮತ್ತು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜು ಗಂಗೊಳ್ಳಿ ಇವರ ಜಂಟಿ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ ಬಾಲಕಿಯರ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರ ತಂಡವು ದ್ವಿತೀಯ ಸ್ಥಾನವನ್ನು ಪಡೆದಿದೆ. ಬಾಲಕರ ತಂಡದಲ್ಲಿ ಅಕ್ಷಯ್ ಬಿಲ್ಲವ, ಪ್ರಜ್ವಲ್ ಪೈ, ರಿತಿಕ್ ಆರ್ ಪೂಜಾರಿ, ಸನ್ಮಿತ್, ನಿಹಾಲ್ ಎಸ್. ಪೂಜಾರಿ, ಸಂಕೇತ್, ಕೀರ್ತನ್ ಡಿ. ಪೂಜಾರಿ, ಪ್ರಥಮ್ ಯು ಮೇಸ್ತ, ರಜತ್ ಮತ್ತು ಆದಿತ್ಯ ಶೆಟ್ಟಿ ಹಾಗೂ ಬಾಲಕಿಯರ ತಂಡದಲ್ಲಿ ಕ್ಷಮಾ ಆಚಾರ್ಯ, ಸನ್ನಿಧಿ ಕರ್ಣಿಕ್, ಸಹನಾ ಖಾರ್ವಿ, ಸುನಿಧಿ ಕರ್ಣಿಕ್, ಖುಷಿ, ಶ್ರೇಷ್ಠ ಮೇಸ್ತ, ಮಾನ್ಯ ಖಾರ್ವಿ, ಶ್ರೀನಿಧಿ ವಿ. ಖಾರ್ವಿ, ಸಾಪೇಕ್ಷಾ ಖಾರ್ವಿ ಮತ್ತು ಭೂಮಿಕಾ ಖಾರ್ವಿ ಪ್ರತಿನಿಧಿಸಿದ್ದರು. ಕ್ಷಮ ಆರ್ ಆಚಾರ್ಯ, ಸುನಿಧಿ ಕರ್ಣಿಕ್, ಸಹನಾ ಖಾರ್ವಿ, ಅಕ್ಷಯ್ ಬಿಲ್ಲವ, ಪ್ರಜ್ವಲ್ ಪೈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು,ಸೆ.27: ರಾಜ್ಯದ ಪಶ್ಚಿಮಘಟ್ಟದ 20,668 ಚ.ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಿರುವ ಡಾ. ಕೆ. ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸುವ ರಾಜ್ಯ ಸರಕಾರದ ಈ ಹಿಂದಿನ ನಿರ್ಧಾರವನ್ನೇ ಸಚಿವ ಸಂಪುಟ ಸಭೆ ಎತ್ತಿ ಹಿಡಿದಿದೆ. ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆ ಈ ಮಹತ್ವದ ನಿರ್ಣಯ ಕೈಗೊಂಡಿದೆ ಎಂದು ಸಭೆ ಬಳಿಕ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಹೇಳಿದ್ದಾರೆ. ಮಾನವನ ಹಸ್ತಕ್ಷೇಪ ಮಾಡುತ್ತಿರುವುದರಿಂದಾಗಿ ಪರಿಸರಕ್ಕೆ ಧಕ್ಕೆ ಉಂಟಾಗುತ್ತಿದೆ. ಆ ಮೂಲಕ ಜೀವ ಸಂಕುಲಕ್ಕೂ ಅಪಾಯ ಎದುರಾಗಲಿದೆ ಎನ್ನುವುದು ಪರಿಸರ ತಜ್ಞರ ಆತಂಕಕ್ಕೆ ಕಾರಣವಾಗಿತ್ತು. ಹಾಗಾಗಿ ಇದಕ್ಕಾಗಿ ಕಸ್ತೂರಿ ರಂಗನ್ ವರದಿಯನ್ನು ಸಿದ್ಧಪಡಿಸಲಾಗಿತ್ತು. ಆದರೆ ಭಾರಿ ವಿರೋಧದ ಮಧ್ಯೆ ಸಂಪುಟ ಸಭೆಯಲ್ಲಿ ವರದಿಯನ್ನು ತಿರಸ್ಕಾರ ಮಾಡಲಾಗಿದೆ. ಕಸ್ತೂರಿ ರಂಗನ್ ಸಮಿತಿ ವರದಿ ಹೀಗಿದೆಕಸ್ತೂರಿ ರಂಗನ್ ಸಮಿತಿಯು ಪಶ್ಚಿಮ ಘಟ್ಟ ವ್ಯಾಪ್ತಿಯ 59,949 ಚದರ ಕಿ.ಮೀ. ವ್ಯಾಪ್ತಿಯ ಪ್ರದೇಶ ಅಂದರೆ ಶೇಕಡಾ 36.4ರಷ್ಚು ಪರಿಸರ ಸೂಕ್ಷ್ಮ ಪ್ರದೇಶಕ್ಕೆ ಒಳಪಡುತ್ತದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟುವುದರ ಮೂಲಕ ರೇಬಿಸ್ ರೋಗ ನಿಯಂತ್ರಣಕ್ಕೆ ಸ್ಥಳೀಯ ಸಂಸ್ಥೆಯವರು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಾಣಿ ಸಂತಾನ ನಿಯಂತ್ರಣ, ಅನುಷ್ಠಾನ ಮೇಲ್ವಿಚಾರಣೆ ಸಮಿತಿ ರಚನೆ ಮತ್ತು ಸ್ಥಳೀಯ ಮಟ್ಟದ ಸಮಿತಿ ರಚನೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ನಾಯಿ ಕಡಿತದ ಪ್ರಕರಣಗಳಿಗೆ ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ, ಸಮುದಾಯ ಆರೊಗ್ಯ ಕೇಂದ್ರಗಳಲ್ಲಿ, ತಾಲೂಕು ಆಸ್ಪತ್ರೆ ಮತ್ತು ಜಿಲ್ಲಾ ಆಸ್ಪತ್ರೆಯಲ್ಲಿ ಪೂರ್ಣ ಪ್ರಮಾಣದ ಲಸಿಕೆಗಳು ಲಭ್ಯವಿರುವಂತೆ ನೋಡಿಕೊಳ್ಳಬೇಕು ಎಂದರು. ಜಿಲ್ಲೆಯಲ್ಲಿ ಸಂತಾನ ಹರಣ ಶಸ್ತ್ರಚಿಕಿತ್ಸೆ ಅಡಿಯಲ್ಲಿ ಪುರಸಭೆ, ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ನಲ್ಲಿ 3007 ನಾಯಿಗಳಿಗೆ, ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ 447 ನಾಯಿಗಳು ಸೇರಿದಂತೆ ಒಟ್ಟಾರೆ 3454 ನಾಯಿಗಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಪ್ರದೇಶದ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿ ಸ್ವಾಧೀನ ಪ್ರಕ್ರಿಯೆಯನ್ನು ಆದ್ಯತೆಯ ಮೇಲೆ ಕೈಗೊಂಡು ಕೈಗಾರಿಕಾ ಪ್ರದೇಶವನ್ನು ವಿಸ್ತೀರ್ಣ ಮಾಡಲು ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಕ್ಲಸ್ಟರ್ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ಜಿಲ್ಲಾ ಮಟ್ಟದ ರಫ್ತು ಉತ್ತೇಜನಾ ಸಮಿತಿ ಸಭೆ ಹಾಗೂ ಪ್ರಧಾನಮಂತ್ರಿಗಳ ಉದ್ಯೋಗ ಸೃಜನಾ ಯೋಜನೆಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೈಗಾರಿಕಾ ಪ್ರದೇಶ ನಿರ್ಮಾಣಕ್ಕೆ ಈಗಾಗಲೇ ಕೆರೆಬೆಟ್ಟು ಗ್ರಾಮದಲ್ಲಿ 31.28 ಎಕ್ರೆ, ಶಿವಪುರ ಗ್ರಾಮದಲ್ಲಿ 45.75 ಎಕ್ರೆ ಸೇರಿದಂತೆ ಒಟ್ಟು 77.03 ಎಕ್ರೆ ಖಾಸಗಿ ಜಮೀನನ್ನು ಭೂ ಮಾಲೀಕರಿಂದ ಪರಿಹಾರ ಧನವನ್ನು ಪಾವತಿಸಿ, ನಿಯಮಾನುಸಾರ ಸ್ವಾಧೀನಪಡಿಸಿಕೊಳ್ಳಲಾಗಿದೆ. ಆದರೆ, 36.56 ಎಕ್ರೆ ಸರ್ಕಾರಿ ಜಮೀನು ಮಂಜೂರಾತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಂಗಳೂರು ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೂಡುಬಿದಿರೆಯ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಚಾಂಪಿಯನ್ ಆಗಿದೆ. ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಆಶ್ರಯದಲ್ಲಿ ಮಂಗಳೂರಿನ ಕಣಚೂರ್ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪಂದ್ಯಾಟ ನಡೆದಿದ್ದು, ಫೈನಲ್ ನಲ್ಲಿ ಮಂಗಳೂರಿನ ಕರಾವಳಿ ಫಾರ್ಮಸಿ ಕಾಲೇಜಿನ ವಿರುದ್ಧ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ಅಲೈಡ್ ಹೆಲ್ತ್ ಸೈನ್ಸಸ್ 2-0 ಅಂತರದಿಂದ ಗೆಲುವು ಸಾಧಿಸಿದೆ. ಅತ್ಯುತ್ತಮ ಹೊಡೆತಗಾರ ಪ್ರಶಸ್ತಿಗೆ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ನ ವಿದ್ಯಾರ್ಥಿ ರಕ್ಷಿತ್ ಎಸ್. ಕೆ ಭಾಜನರಾಗಿದ್ದಾರೆ . ಶಿವಮೊಗ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ನಡೆಯಲಿರುವ ಅಂತರ ವಲಯ ಟೂರ್ನಿಗೆ ಆಳ್ವಾಸ್ ಕಾಲೇಜ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಅರ್ಹತೆಯನ್ನು ಪಡೆದಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಸಪ್ಟೆಂಬರ್ 29 ರಂದು ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷೆ ಪರೀಕ್ಷೆ ಜರುಗಲಿದ್ದು, ಪರೀಕ್ಷೆಯನ್ನು ಪಾರದರ್ಶಕವಾಗಿ ಯಾವುದೇ ಅವ್ಯವಹಾರಗಳಿಗೆ ಆಸ್ಪದ ನೀಡದೇ ಸುವ್ಯವಸ್ಥಿತವಾಗಿ ಜರುಗಿಸಬೇಕೆಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚಿಸಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ನೇರ ನೇಮಕಾತಿಗೆ ನಡೆಸುವ ಕನ್ನಡ ಭಾಷೆ ಪರೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲಾ ಕೇಂದ್ರದಲ್ಲಿ ಮೇಲ್ವಿಚಾರಣೆ ನಡೆಸಲು ನೇಮಕ ಮಾಡಲಾದ ತಂಡಗಳು ಕೈಗೊಳ್ಳಬೇಕಾದ ಪೂರ್ವ ತಯಾರಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ್ಯಾದಂತ 17 ಪರೀಕ್ಷಾ ಕೇಂದ್ರಗಳಲ್ಲಿ ಸಪ್ಟೆಂಬರ್ 29 ರಂದು ಪರೀಕ್ಷೆ ಜರುಗಲಿದ್ದು ಕಡ್ಡಾಯ ಕನ್ನಡ ಭಾಷೆ ಪರೀಕ್ಷೆ ಬೆಳಿಗ್ಗೆ 10.30 ರಿಂದ ಮ. 12.30 ರವರೆಗೆ ಸುಗಮವಾಗಿ, ಯಾವುದೇ ಲೋಪದೋಷಗಳಿಲ್ಲದಂತೆ ನ್ಯಾಯಸಮ್ಮತವಾಗಿ ಹಾಗೂ ನಿಷ್ಪಕ್ಷಪಾತವಾಗಿ ಪರೀಕ್ಷೆ ನಡೆಸಬೇಕು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೀಡಿರುವ ಸೂಚನೆಗಳನ್ನು…
