ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಆಸ್ಪತ್ರೆಯ ಮಹಿಳಾ ಸಹೋದ್ಯೋಗಿ ಮೇಲೆ ಲೈಂಗಿಕ ದೌರ್ಜನ್ಯ, ಬೆದರಿಕೆ ಸೇರಿದಂತೆ ವಿವಿಧ ಆರೋಪಗಳನ್ನು ಎದುರಿಸುತ್ತಿರುವ, ಇಲ್ಲಿನ ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿದ್ದ ಡಾ. ರಾಬರ್ಟ್ ರೆಬೆಲ್ಲೋಗೆ ಶುಕ್ರವಾರ ರಾತ್ರಿ ಜಾಮೀನು ಮಂಜುರಾಗಿದೆ. ಪ್ರಕರಣ ದಾಖಲಾದ ತಕ್ಷಣ ತಲೆಮರೆಸಿಕೊಂಡಿದ್ದ ವೈದ್ಯ ಮುಂಬಯಿಯ ಐಷಾರಾಮಿ ರೆಸಾರ್ಟ್ ಒಂದರಲ್ಲಿ ಇರುವುದನ್ನು ಪತ್ತೆ ಮಾಡಿದ ಪೊಲೀಸರು ಅಲ್ಲಿಗೆ ತೆರಳಿ ಬಂಧಿಸಿದ್ದರು. ಆರೋಪಿಯನ್ನು ಕುಂದಾಪುರಕ್ಕೆ ಕರೆತಂದು ಶುಕ್ರವಾರ ತಡರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಇದನ್ನೂ ಓದಿ: ► ಪೋಕ್ಸೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಗಳ ಬಂಧನ – https://kundapraa.com/?p=72895 . ಆರೋಪಿಯ ಪರ ವಾದಿಸಿದ ವಕೀಲರು, ದೂರು ನೀಡಿರುವ ವೈದ್ಯೆ ಕೆಲಸದ ವೈಷ್ಯಮ್ಯದಿಂದ ಹೀಗೆ ಮಾಡಿದ್ದಾರೆ. ಆಕೆ ಕೆಲಸದಲ್ಲಿ ನಿರ್ಲಕ್ಷ್ಯ ವಹಿಸಿದ ಬಗ್ಗೆ ವೈದ್ಯಾಧಿಕಾರಿಯಾಗಿದ್ದ ಡಾ. ರಾಬರ್ಟ್ ನೋಟಿಸ್ ನೀಡಿದ್ದರು. ಅದೇ ಕಾರಣಕ್ಕೆ ಡಾ. ರಾಬರ್ಟ್ ವಿರುದ್ದ ಪ್ರಕರಣ ದಾಖಲಿಸಿದ್ದಾರೆ ಎಂದಿದ್ದರು. ಈ ಹಿನ್ನೆಲೆಯಲ್ಲಿ ಜಾಮೀನು ಮಂಜೂರಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟಿಸುತ್ತಿದ್ದು, ಕಳೆದೊಂದು ದಿನದಿಂದ ಗಾಳಿ ಸಹಿತ ಮಳೆಗೆ ಅಲ್ಲಲ್ಲಿ ಹಾನಿಯಾಗುತ್ತಿದೆ. ಧಾರಾಕಾರ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ. ಮುಂದಿನ 24 ಗಂಟೆಗಳಿಗೆ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಸಮುದ್ರದಲ್ಲಿ ಗಾಳಿಯ ಒತ್ತಡವಿದ್ದು, ಮೀನುಗಾರರು ಜು.11ರ ತನಕ ಸಮುದ್ರಕ್ಕಿಳಿಯದಂತೆ ಸೂಚಿಸಲಾಗಿದೆ. ಶನಿವಾರ ಬೆಳಿಗ್ಗೆಯಿಂದ ಸುರಿದ ಗಾಳಿ ಮಳೆಗೆ ಉಡುಪಿ ಜಿಲ್ಲಾದ್ಯಂತ ವಿವಿಧೆಡೆ ಹಾನಿಯಾಗಿದೆ. ಹಾಳೆ ಮಳೆಗೆ ಅಲ್ಲಲ್ಲಿ ರಸ್ತೆಗೆಯಲ್ಲಿ ಮರ ಹಾಗೂ ವಿದ್ಯುತ್ ಕಂಬಗಳು ಬಿದ್ದಿರುವುದು, ಮನೆ ಹಾನಿ ಪ್ರಕರಣಗಳು ದಾಖಲಾಗಿದೆ. ಶಿರೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಮರ ಬಿದ್ದುದರಿಂದ 15 ನಿಮಿಷಗಳ ಕಾಲ ಸಂಚಾರ ವ್ಯತ್ಯಯವಾಯಿತು. ಇನ್ನು ಗದ್ದೆಗಳಲ್ಲಿ ಉಳುವೆಗಾಗಿ ಹಾಕಿದ್ದ ಗೊಬ್ಬರ, ಬೀಜ ಮಳೆ ನೀರಿನ ರಭಸಕ್ಕೆ ಕೊಚ್ಚಿಹೋಗಿ ಹಾನಿಯುಂಟಾಗಿದೆ. ಯಡ್ತರೆ ಸರ್ಕಾರಿ ಶಾಲೆಯ ಮೂರು ತರಗತಿಗಳಿಗೆ ನೀರು ನುಗ್ಗಿ ಹಾನಿಯುಂಟಾಗಿದೆ. ಮಳೆಯಬ್ಬರಕ್ಕೆ ಅಲ್ಲಲ್ಲಿ ವಿದ್ಯುತ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸ. ಪ.ಪೂ ಕಾಲೇಜು ಪ್ರೌಢ ಶಾಲಾ ವಿಭಾಗದಿಂದ 2023-24ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ 40 ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವನ್ನು ರೋಟರಿ ನರಸಿಂಹ ಕಲಾಮಂದಿರದಲ್ಲಿ ಆಯೋಜಿಸಲಾಗಿತ್ತು. 614 ಅಂಕ ಪಡೆದ ಶಾಲೆಗೆ ಪ್ರಥಮ ಸ್ಥಾನ ಪಡೆದ ಅಕ್ಷತಾ ವಿ ಮತ್ತು ಆಂಗ್ಲ ಮಾಧ್ಯಮದಲ್ಲಿ 603 ಅಂಕ ಪಡೆದ ಕ್ಷಿಪಲಿ ಮತ್ತು ಕನ್ನಡ ಮಾದ್ಯಮದಲ್ಲಿ ಪ್ರಥಮ ಸ್ಥಾನ ಪಡೆದ ಎನ್ ವಿಶ್ವಾಸ್ ನಾಯಕ್ ಇವರಿಗೆ ಪೋಷಕರ ಸಮುಖದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸತೀಶ ಕುಮಾರ್, ಉಪ ಪ್ರಾಂಶುಪಾಲ ಕಿರಣ್ ಹೆಗ್ಡೆ ಕೆ. ಹಿರಿಯ ಸಹಶಿಕ್ಷಕಿ ವಿನುತಾ ಗಾಂವ್ಕರ್, ತರಗತಿ ಶಿಕ್ಷಕರಾದ ಶಾರದಾ ಮಯ್ಯ, ಶಂಕರನಾರಾಯಣ ಮಿತ್ಯಂತ, ಮತ್ತು ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದರು. ಬೋರ್ಡ್ ಹೈಸ್ಕೂಲ್‍ನ ಪರೀಕ್ಷೆ ಬರೆದ 154 ವಿದ್ಯಾರ್ಥಿಗಳಲ್ಲಿ 153 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 40 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ ಪಡೆದಿದ್ದರು. ಇಂಗ್ಲಿಷ್ ಶಿಕ್ಷಕ ಗಣೇಶ್ ಕಾಂಚಾನ್ ಕಾರ್ಯಕ್ರಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜಿಲ್ಲಾದ್ಯಂತ ಮುಂಗಾರು ಚುರುಕುಗೊಂಡಿದ್ದು ಎಲ್ಲೆಡೆಯೂ ಭಾರಿ ಮಳೆಯಾಗುತ್ತಿದೆ. ಶನಿವಾರ ಬೆಳಿಗ್ಗೆಯಿಂದ ನಿರಂತರವಾಗಿ ಸುರಿದ ಮಳೆಗೆ ಯಡ್ತರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ತರಗತಿಗಳಿಗೆ ನೀರು ನುಗ್ಗಿದ್ದು, ಮಕ್ಕಳಿಗೆ ರಜೆ ಘೋಷಿಸಲಾಗಿದೆ. ನಿರಂತರ ಮಳೆಯಿಂದಾಗಿ ರಸ್ತೆಯಿಂದ ತಗ್ಗು ಪ್ರದೇಶದಲ್ಲಿರುವ ಯಡ್ತರೆ ಶಾಲೆಯ ಆವರಣಕ್ಕೆ ನೀರು ನುಗ್ಗಿದ್ದು ಹೊರ ಹರಿವು ಇಲ್ಲದೇ ಇದ್ದುದರಿಂದ ವಿದ್ಯಾರ್ಥಿಗಳ ಮೊಣಕಾಲಿನ ತನಕವೂ ನೀರು ತುಂಬಿಕೊಂಡಿತ್ತು. ಎರಡು ತರಗತಿ ಕೊಠಡಿಗಳು ಹಾಗೂ ಶಾಲಾ ಶಿಕ್ಷಕರ ಕಛೇರಿ ಸಂಪೂರ್ಣ ಜಲಾವೃತಗೊಂಡು ಅಪಾಯಕಾರಿ ಸ್ಥಿತಿ ಎದುರಾಗಿದೆ. ಶಾಲೆ ಎದುರಿನ ಚರಂಡಿ ಬ್ಲಾಕ್ ಕಾರಣ:ಶಾಲೆ ಎದುರಿನ ಚರಂಡಿಯನ್ನು ಮುಚ್ಚಿರುವುದರಿಂದ ಶಾಲೆಯೊಳಕ್ಕೆ ಕೃತಕ ನೆರೆ ನಿರ್ಮಾಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಹಿಂದಿನಿಂದಲೂ ಶಾಲೆ ಕಾಂಪೌಂಡ್ ಎದುರಿನ ಚರಂಡಿಯ ಮೂಲಕ ನೀರು ಹರಿದು ಹೋಗಿ ನದಿ ಸೇರುತ್ತಿತ್ತು. ಅದಕ್ಕೆ ತಡೆ ಉಂಟಾಗಿದ್ದು ನೀರು ಹರಿದು ಹೋಗಲು ದಾರಿ ಇಲ್ಲದಾಗಿದೆ. ಸದ್ಯ ತಾತ್ಕಾಲಿಕವಾಗಿ ಶಾಲೆಯ ಹಿಂಭಾಗದ ಗದ್ದೆಗೆ ನೀರು ಹರಿದು ಹೋಗಲು ದಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಂಗ ಅಭಿನಯ, ಅಭಿನಯ ಕಲೆ, ರಂಗ ಕೌಶಲ್ಯಗಳಿಗೆ ನಿಕಟವಾದ ಸಂಬಂಧವಿದ್ದು, ಜಾಗತೀಕರಣ ಮತ್ತು ಜಾಗತೀಕರಣೋತ್ತರ ಸಂದರ್ಭದ ಪ್ರಪಂಚದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಕೌಶಲ್ಯಗಳಿಗೆ ಪ್ರಾಶಸ್ತ್ಯ ಸಿಗುತ್ತಿದೆ. ಕಲಿಕೆ ನಿಂತ ನೀರಾಗಬಾರದು, ನಿರಂತರವಾಗಿದ್ದರೆ ಮಾತ್ರ ಕೌಶಲ್ಯವನ್ನು ಗಳಿಸಲು ಸಾಧ್ಯ ಎಂದು ಡಾ. ಜಿ. ಶಂಕರ್ ಕಾಲೇಜಿನ ಪ್ರಾಂಶುಪಾಲ ಡಾ. ಭಾಸ್ಕರ್ ಶೆಟ್ಟಿ.ಎಸ್ ಹೇಳಿದರು. ಅವರು ಯಕ್ಷ ರಂಗಾಯಣ ಕಾರ್ಕಳ ವತಿಯಿಂದ ನಗರದ ಅಜ್ಜರಕಾಡು ಡಾ.ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪಿ.ಜಿ.ಎ.ವಿ. ಸಭಾಂಗಣದಲ್ಲಿ ನಡೆದ ಅಭಿನಯ ಕಲೆಯಿಂದ ಕೌಶಲ್ಯ ಅಭಿವೃದ್ಧಿ- ಒಂದು ದಿನದ ರಂಗ ತರಬೇತಿ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಮ್ಮ ಬದುಕಿನ ವಿವಿಧ ಸ್ತರಗಳಲ್ಲಿ, ಅರ್ಥಗರ್ಭಿತ ಜೀವನ ಕಟ್ಟಿಕೊಳ್ಳಲು ರಂಗ ತರಬೇತಿ ಶಿಬಿರಗಳು ಉಪಯುಕ್ತವಾಗಿವೆ. ಅಂತಹ ಕೌಶಲ್ಯವನ್ನು ಬೆಳೆಸಿಕೊಂಡು ಸುಂದರ ಬದುಕು ಕಟ್ಟಿಕೊಳ್ಳಿ ಎಂದು ಹೇಳಿದರು. ರಂಗ ತರಬೇತಿ ಶಿಬಿರವು ರಂಗ ನಿರ್ದೇಶಕ ಬಾಸುಮ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜೂನ್ 11 ರಂದು ಬೆಳಗ್ಗೆ 10.30ಕ್ಕೆ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್‍ನೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 9901472710 ಹಾಗೂ 8105774936 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದ, ಉದ್ಯಮಿ ಶ್ರೇಯಸ್ ನಾಯ್ಕ (25) ಎಂಬಾತನನ್ನು ಅಮಾಸೆಬೈಲು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಲೈಂಗಿಕ ದೌರ್ಜನ್ಯ ಎಸಗುವ ದೃಶ್ಯಗಳನ್ನು ಸೆರೆ ಹಿಡಿದು ತನ್ನ ಖಾಸಗಿ ಲ್ಯಾಪ್ಟಾಪ್ನಲ್ಲಿ ಇರಿಸಿಕೊಳ್ಳುತ್ತಿದ್ದ. ಈತ ಶಾಲೆ, ಕಾಲೇಜು ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ. ಈತ ವಿದ್ಯಾರ್ಥಿನಿಯೊಬ್ಬಳ ಮೇಲೆ ಕಳೆದ ಒಂದು ವರ್ಷದಿಂದ ನಿರಂತರ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಭವತಿ ಆಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿ ತನ್ನ ಪ್ರಭಾವ ಬಳಸಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಮೇ.18ರಂದು ದೂರು ದಾಖಲಾಗಿತ್ತು. ಇದನ್ನೂ ಓದಿ ► ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಶ್ರೇಯಸ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – https://kundapraa.com/?p=72901 . ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ಪರಾರಿಯಾಗಿದ್ದ. ಶ್ರೇಯಸ್ ಬಂಧನಕ್ಕೆ ವಿಶೇಷ ತನಿಖಾ ತಂಡ ರಚನೆ ಮಾಡಿ ಹುಡುಕಲಾಗುತ್ತಿತ್ತು. ಅಂತಿಮವಾಗಿ ಸಿದ್ಧಾಪುರದಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ…
ಕುಂದಾಪ್ರ ಡಾಟ್ ಕಾಂ ಸುದ್ದಿಮೂಡುಬಿದಿರೆ: ಆಳ್ವಾಸ್ ಪ್ರಗತಿ 2024 – 14ನೇ ಆವೃತ್ತಿಯ ಬೃಹತ್ ಉದ್ಯೋಗ ಮೇಳದ ಉದ್ಘಾಟನಾ ಸಮಾರಂಭ ವಿದ್ಯಾಗಿರಿ ಆಳ್ವಾಸ್ ಕಾಲೇಜು ಆವರಣದಲ್ಲಿ ಜರುಗಿತು. ಎಂಆರ್‌ಜಿ ಗ್ರೂಪ್‌ನ ಸ್ಥಾಪಕಾಧ್ಯಕ್ಷ ಪ್ರಕಾಶ್ ಶೆಟ್ಟಿ ಆಳ್ವಾಸ್ ಪ್ರಗತಿ ಉದ್ಘಾಟಿಸಿ ಮಾತನಾಡಿ, ಜೀವನದಲ್ಲಿ ಅದೃಷ್ಟದ ಜೊತೆಗೆ ಪ್ರಯತ್ನವಿದ್ದಾಗ ಯಾವುದೇ ಕಾರ್ಯದಲ್ಲೂ ಯಶಸ್ಸು ಕಾಣಲು ಸಾಧ್ಯ ಎಂದು ಹೇಳಿದರು. ಸಾಂಸ್ಕೃತಿಕ,ಕ್ರೀಡೆ, ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಛಾಪನ್ನು ಮೂಡಿಸಿರುವ ಮೂಡಬಿದ್ರೆಯ ಆಳ್ವಾಸ್ ಸಂಸ್ಥೆ ಹಲವು ವರ್ಷಗಳಿಂದ ಅನೇಕ ಉದ್ಯೋಗಾಕಾಂಕ್ಷಿಗಳಿಗೆ ಸೂಕ್ತ ಉದ್ಯೋಗದ ಸದಾವಕಾಶವನ್ನು ಕಲ್ಪಿಸುತ್ತಿರುವುದು ಹೆಮ್ಮೆಯ ಸಂಗತಿ. ವಿದ್ಯೆ ಬೇಕು ಆದರೆ, ಅದರ ಜೊತೆಗೆ ಸಾಮಾನ್ಯ ಜ್ಞಾನವು ಹೆಚ್ಚು ಅವಶ್ಯಕ. ಯೋಜನೆ, ಆಡಳಿತ, ವ್ಯವಹಾರದ ಕೌಶಲ್ಯವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಯಾವುದೇ ಸವಾಲನ್ನು ಸುಲಭವಾಗಿ ಎದುರಿಸಬಹುದು ಎಂದು ಹೇಳಿದರು. ಪ್ರತಿ ಉದ್ಯೋಗಾಕಾಂಕ್ಷಿ ಕಾರ್ಯಪ್ರವೃತ್ತಿ ಮತ್ತು ದೂರದೃಷ್ಟಿಯನ್ನು ಹೊಂದಿರಬೇಕು ಎಂದು ಸಲಹೆ ನೀಡಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಮಾತನಾಡಿ, ಇದು ಸಂಪೂರ್ಣವಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉತ್ತರಾಖಂಡದ ಸಹಸ್ತ್ರ ತಾಲ್ (ಲೇಕ್) ಗೆ ಚಾರಣ ಹೋಗಿ ಹವಾಮಾನ ವೈಪರೀತ್ಯಕ್ಕೆ ಸಿಲುಕಿ ರಾಜ್ಯದ 9 ಜನರು ಮೃತಪಟ್ಟಿದ್ದು, ಈ ಪೈಕಿ ಕುಂಭಾಶಿ ಮೂಲದ, ಬೆಂಗಳೂರು ವಾಸಿ ಪದ್ಮನಾಭ ಭಟ್ (50) ಅವರೂ ಇದ್ದಾರೆ. ಕುಂಭಾಶಿಯ ಕೊರವಡಿ ರಸ್ತೆಯ ಲ್ಲಿರುವ ಶ್ರೀ ಹರಿಹರ ನಿಲಯವು ಮೃತ ಪದ್ಮನಾಭ ಭಟ್ಟರ ಹಿರಿಯರ ಮೂಲ ಮನೆ. ಪದ್ಮನಾಭ ಅವರ ಹುಟ್ಟು, ವಿದ್ಯಾ ಭ್ಯಾಸ ಬೆಂಗಳೂರಿನಲ್ಲೇ ನಡೆದಿತ್ತು. ಸಿಎ ವ್ಯಾಸಂಗ ಮಾಡಿದ ಅನಂತರ ಖಾಸಗಿ ಕಂಪೆನಿಯೊಂದಕ್ಕೆ ಸೇರಿದ್ದು ಆ ಸಂಸ್ಥೆಯ ವತಿಯಿಂದ ಅಮೆರಿಕಕ್ಕೆ ತೆರಳಿದ್ದರು. ಅಲ್ಲಿನ ಸಿಪಿಎ ತೇರ್ಗಡೆಯಾದರು. ಬೆಂಗಳೂರಿಗೆ ಮರಳಿದ ಬಳಿಕ ಖಾಸಗಿ ಕಂಪೆನಿ ಸೇವೆ ಯಲ್ಲಿ ಮುಂದುವರಿಸಿದ್ದರು. ಕುಂಭಾಶಿಯಲ್ಲಿ ಅವರ ಚಿಕ್ಕಪ್ಪನ ಕುಟುಂಬದವರು ವಾಸ್ತವ್ಯ ಇದ್ದಾರೆ. ಪದ್ಮನಾಭರಿಗೆ ಪ್ರವಾಸ, ಚಾರಣ ಇತ್ಯಾದಿ ಆಸಕ್ತಿ. ಆಗಾಗ ಸಹೋದ್ಯೋಗಿಗಳು, ಸ್ನೇಹಿತರೊಡನೆ ಪ್ರವಾಸ ಹೋಗುತ್ತಿದ್ದರು. ಮೇ 29ರಂದು 22 ಜನರ ತಂಡದೊಂದಿಗೆ ಉತ್ತರಾಖಂಡದ ಉತ್ತರ ಕಾಶಿಯ ಬೆಟ್ಟ ಪ್ರದೇಶಕ್ಕೆ ಚಾರಣ ಹೋಗಿದ್ದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ತಾಲೂಕಿನ ಶಿರೂರು ಸೇರಿದಂತೆ ವಿವಿಧ ಭಾಗಗಳಲ್ಲಿ ನಿರಂತರವಾಗಿ ಗೋವು ಕಳ್ಳತನ ಹಾಗೂ ದುಷ್ಕರ್ಮಿಗಳಿಂದ ಜೀವ ಬೇದರಿಕೆ ಒಡ್ಡುತ್ತಿರುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ನಮೋ ಬಳಗ ಬೈಂದೂರು ಬೈಂದೂರು ತಹಶಿಲ್ದಾರರು ಹಾಗೂ ಪೊಲೀಸರಲ್ಲಿ ಮನವಿ ಮಾಡಿದೆ. ಜೂನ್ 6ರ ಬೆಳಗಿನ ಜಾವ 4ಗಂಟೆಯ ವೇಳೆಯ ಶಿರೂರು ಪೇಟೆಯ ಮಂಜುನಾಥ ಹೋಟೆಲ್ ಎದುರಿನ ಖಾಲಿ ಜಾಗದಲ್ಲಿ ಮಲಗಿದ್ದ ಗೋವುಗಳನ್ನು ದುಷ್ಕರ್ಮಿಗಳು ಮಹೇಂದ್ರ ಎಸ್.ಯು.ವಿ ವಾಹನದಲ್ಲಿ ತೆರಳಿ ಕದ್ದೊಯ್ದಿದ್ದಾರೆ. ಇದನ್ನು ಪ್ರಶ್ನಿಸಿದ ವ್ಯಕ್ತಿಯೋರ್ವರಿಗೆ ಚಾಕು ತೋರಿಸಿ ಬೆದರಿಕೆಯೊಡ್ಡಿದ್ದಾರೆ. ಒಂದು ವಾರದ ಹಿಂದೆಯೂ ಶಿರೂರು ಮಾರ್ಕೆಟ್ ಅಂಡರ್ ಪಾಸ್ ಬಳಿ ವಾಹನದಲ್ಲಿ ಬಂದು ಗೋವುಗಳನ್ನು ಹೊತ್ತೊಯ್ದಿರುವ ಬಗ್ಗೆ ಅವರು ದೂರಿನಲ್ಲಿ ತಿಳಿಸಿದ್ದಾರೆ. ಕೆಲ ಸಮಯದಿಂದ ಶಿರೂರು, ಬೈಂದೂರು, ಯಡ್ತರೆ, ಬಾಡ ಹಾಗೂ ಸೂರ್ಕುಂದ ಭಾಗಗಳಲ್ಲಿನ ಮನೆಯ ಕೊಟ್ಟಿಗೆಯಲ್ಲಿನ ದನಕರುಗಳ ಕಳವಾಗುತ್ತಿದ್ದು, ಕೃಷಿ ಹಾಗೂ ಹೈನುಗಾರಿಕೆಯನ್ನು ನಂಬಿ ಬದುಕುತ್ತಿರುವ ಕುಟುಂಬಗಳಿಗೆ ಅನ್ಯಾಯವಾಗುತ್ತಿದೆ. ಅಲ್ಲದೇ ದುಷ್ಕರ್ಮಿಗಳು ಘಟನೆಯನ್ನು ತಡೆಯಲು ಬರುವವರಿಗೂ ಬೆದರಿಸುವ…
