Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜ್ಞಾನ ಎಂಬುದು ಒಂದು ಶಕ್ತಿ, ಪುಸ್ತಕಗಳನ್ನು ಓದುವುದರಿಂದ ನಾವು ಜ್ಞಾನ ಸಂಪಾದನೆ ಮಾಡಬಹುದು. ಓದುವಿಕೆ ನಮ್ಮ ಭಾಷಾ ಕೌಶಲ್ಯ ಮತ್ತು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುತ್ತದೆ. ಎಲ್ಲರೂ ಪುಸ್ತಕ ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಎಲ್ಲಮ್ಮ ಹೇಳಿದರು. ಅವರು ಬುಧವಾರ ಅಜ್ಜರಕಾಡು ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯ ನಗರ ಕೇಂದ್ರ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆಯ ನಿಮಿತ್ತ ನಡೆದ ಪುಸ್ತಕ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು. ದೇಶದ ಸ್ವಾತಂತ್ರ‍್ಯ ಹೋರಾಟದಲ್ಲಿ ಪುಸ್ತಕಗಳು ಮತ್ತು ಲೇಖನಗಳು ಅತ್ಯಂತ ಪ್ರಮುಖ ಪಾತ್ರ ವಹಿಸಿವೆ. ಮಹಾನ್ ಕ್ರಾಂತಿಕಾರಿಗಳ ಲೇಖನಗಳನ್ನು ಓದಿ ಪ್ರಭಾವಿತರಾಗಿ ಅದೆಷ್ಟೋ ಮಂದಿ ಸ್ವಾತಂತ್ರ ಹೋರಾಟದಲ್ಲಿ ಧುಮುಕಿದ್ದಾರೆ. ಪುಸ್ತಕಗಳು ಸಮಾಜ ಪರಿವರ್ತನೆಯಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತದೆ. ಸಾರ್ವಜನಿಕರು ಕೂಡ ಗ್ರಂಥಗಳನ್ನು ಬರೆಯಬೇಕು ಅವುಗಳನ್ನು ವಿದ್ಯಾರ್ಥಿಗಳು ಓದುವಂತಾಗಬೇಕು ಎಂದರು. ಪುಸ್ತಕಗಳು ಗುಣಪಡಿಸುವ ಶಕ್ತಿಯನ್ನು ಹೊಂದಿದೆ ಪುಸ್ತಕಗಳನ್ನು ಓದುವಾಗ ನಾವು ಅದರ ಲೇಖಕನ ಜೊತೆ ಒಂದು ಸಂಬಂಧವನ್ನು ಬೆಳೆಸಿಕೊಳ್ಳುತ್ತೇವೆ. ನಮ್ಮ ಹೆತ್ತವರು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಕೋಟ ಮೆಸ್ಕಾಂ ಉಪ ವಿಭಾಗದ ಜನಸಂಪರ್ಕ ಸಭೆ ಬುಧವಾರ ಕೋಟ ಮೆಸ್ಕಾಂ ಉಪವಿಭಾಗದ ಸಭಾಂಗಣದಲ್ಲಿ ಜರಗಿತು. ಕೋಟ ಹೋಬಳಿ ವ್ಯಾಪ್ತಿಯ ವಿವಿಧ ಭಾಗಗಳಲ್ಲಿ ಹಲವು ಸಮಸ್ಯೆಗಳಿಗೆ ಮೆಸ್ಕಾಂ ಜಿಲ್ಲಾ ಅಧೀಕ್ಷಕ ಇಂಜಿನಿಯರ್ ಬಿ. ರಾಕೇಶ್ ಅಧಿಕಾರಾವಧಿಯಲ್ಲಿ ಪರಿಹಾರ ಕಂಡುಕೊಂಡ ಬಗ್ಗೆ ಸಾಮಾಜಿಕ ಕಾರ್ಯಕರ್ತರು ಪ್ರಶಂಸೆ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಮೆಸ್ಕಾಂ ಅಧೀಕ್ಷಕ ಬಿ. ರಾಕೇಶ್ ಗ್ರಾಮೀಣ ಭಾಗದಿಂದ ಪಟ್ಟಣ ವ್ಯಾಪ್ತಿಯನ್ನು ಹೊಂದಿರುವ ಈ ಕೋಟ ಮೆಸ್ಕಾಂನ ವ್ಯಾಪ್ತಿಯ ಯಾವುದೇ ಸಮಸ್ಯೆಗಳಿಗೆ ನಮ್ಮ ಮೆಸ್ಕಾಂ ಪರಿಹಾರ ಕಂಡಕೊಳ್ಳಲಿದೆ ಜನಸಂಪರ್ಕ ಸಭೆಗಳು ಗ್ರಾಹಕರ ಸಮಸ್ಯೆಗಳಿಗೆ ಸ್ಪಂದಿಸುವ ಸಭೆಗಳಾಗಿ ರೂಪುಗೊಂಡಿದೆ ಇದರಿಂದ ಇಲ್ಲಿ ಪ್ರತಿಹಂತದಲ್ಲೂ ಸಮಸ್ಯೆಗಳಿಂದ ಮುಕ್ತಿಗಾಣುವ ಸಭೆಗಳಾಗಿ ರೂಪುಗೊಂಡಿದೆ ಎಂದರಲ್ಲದೆ ರಾಜ್ಯ ಸರಕಾರದ ಯೋಜನೆಯಾದ ಗೃಹಜ್ಯೋತಿ ಪುನರ್ ನವೀಕರಣ ಶೇಕಡಾ 90ರಷ್ಟು ಪೂರ್ಣಗೊಂಡಿದ್ದು ಬಾಕಿ ಇರಿಸಿಕೊಂಡವರು ಕೂಡಲೇ ತಮ್ಮ ಮೆಸ್ಕಾಂ ಮೂಲಕ ಗೃಹಜ್ಯೋತಿಯ ಫಲಾಭನುಭವಿಗಳಾಗಿ ಎಂದು ಕರೆ ನೀಡಿದರು. ಸಾಮಾಜಿಕ ಕಾರ್ಯಕರ್ತರಾದ ಪ್ರತಾಪ್ ಶೆಟ್ಟಿ ಸಾಸ್ತಾನ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ಕಲ್ಯಾಣಪುರದ ಮಿಲಾಗ್ರಿಸ್‌ ಪದವಿಪೂರ್ವ ಕಾಲೇಜಿನ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ 2026-2027ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಇಲ್ಲಿನ ಸುಜ್ಞಾನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದಿದ್ದಾರೆ. ರಾಜ್ಯ ಮಟ್ಟಕ್ಕೆ ಆಯ್ಕೆ:ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಮಹಮ್ಮದ್‌ ಫೈಜ್‌ ಸಾದಿಕ್‌ ಬಾಲಕರ 74 ಕೆಜಿ ವಿಭಾಗದಲ್ಲಿ ಪ್ರಥಮ ಸ್ಥಾನಗಳಿಸುವ ಮೂಲಕ ರಾಜ್ಯ ಮಟ್ಟದ ಕರಾಟೆ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಮಹಮ್ಮದ್‌ ಇಬ್ರಾಹಿಂ ಸಾದಿಕ್‌ ಹಾಗೂ ಯಸೀರಾ ಸಾದಿಕ್‌ ದಂಪತಿಯ ಪುತ್ರ. ಹಾಗೇ, 68 ಕೆಜಿ ವಿಭಾಗದಲ್ಲಿ ದ್ವಿತೀಯ ಪಿಯುಸಿಯ ಧನ್ವಿ ದ್ವಿತೀಯ ಸ್ಥಾನ, 54 ಕೆಜಿ ವಿಭಾಗದಲ್ಲಿ ಹರ್ಷಿತ್‌ ತೋಳಾರ್ ದ್ವಿತೀಯ ಸ್ಥಾನ, 78 ಕೆಜಿ ವಿಭಾಗದಲ್ಲಿಅನೂಪ್‌ ಡಿ. ಗಾಣಿಗ ದ್ವಿತೀಯ ಸ್ಥಾನ, 62ಕೆಜಿ ವಿಭಾಗದಲ್ಲಿ ಮಿಥೇಶ್‌ ದ್ವಿತೀಯ ಸ್ಥಾನ ಪಡೆದಿದ್ದಾರೆ ಹಾಗೂ 60 ಕೆಜಿ ವಿಭಾಗದಲ್ಲಿ ಪ್ರಥಮ ಪಿಯುಸಿಯ ವೈಷ್ಣವಿ ಶೆಟ್ಟಿ ದ್ವಿತೀಯ ಸ್ಥಾನ,…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ) ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜು ಕಲ್ಯಾಣಪುರ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ- ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಫಾನ್ ಚಿನ್ನದ ಪದಕವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿನಿಯರಾದ ವೃಷ್ಟಿ ಮತ್ತು ಸನ್ನಿಧಿ ಬೆಳ್ಳಿ ಪದಕವನ್ನು ಪಡೆದಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮರವಂತೆಯ ನದಿ-ಕಡಲು ನಡುವಿನ, ಹೆದ್ದಾರಿ ಅಂಚಿನ ಮಾರಸ್ವಾಮಿಯ ಮಹಾರಾಜಸ್ವಾಮಿ ವರಾಹ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಬುಧವಾರ ಸಂಪನ್ನಗೊಂಡಿತು. ಬೆಳಗಿನಿಂದಲೇ ಜಿಲ್ಲೆಯ ವಿವಿಧೆಡೆಗಳಿಂದ ಭಕ್ತರ ಮಹಾಪೂರವೇ ಹರಿದು ಬಂದಿತು. ಕೆಲವರು ಸಮುದ್ರ ಮತ್ತು ನದಿಗಳಲ್ಲಿ ಪವಿತ್ರ ಸ್ನಾನ ಮಾಡಿ ಶ್ರೀ ದೇವರ ದರ್ಶನ ಪಡೆದು ಅಭಿಷೇಕ, ಪೂಜೆ, ಅರ್ಪಣೆ ಸಲ್ಲಿಸಿದರು. ಸಹಸ್ರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ಒಂದೆಡೆ ಸಮುದ್ರ, ಇನ್ನೊಂದೆಡೆ ನದಿ, ನಡುವೆ ಹಾದು ಹೋಗುವ ಹೆದ್ದಾರಿ ಕಾರಣದಿಂದ ತೀರ ಕಿರಿದಾದ ಭೂಪ್ರದೇಶದ ಇಲ್ಲಿ ಅಮಾವಾಸ್ಯೆಯ ಪರ್ವದಲ್ಲಿ ಪಾಲ್ಗೊಳ್ಳಲು ಬರುವ ಸಹಸ್ರಾರು ಭಕ್ತರ ಸುರಕ್ಷತೆಗಾಗಿ ಮತ್ತು ಹೆದ್ದಾರಿಯಲ್ಲಿ ಎಡೆಬಿಡದೆ ಸಂಚರಿಸುವ ವಾಹನಗಳ ಜತೆಗೆ ಜಾತ್ರೆಗೆ ಬರುವ ಅಸಂಖ್ಯ ವಾಹನಗಳ ಸುಗಮ ಸಂಚಾರ, ನಿಲುಗಡೆ ಮತ್ತು ಜನದಟ್ಟಣೆಯ ನಿಯಂತ್ರಣ, ಸಮುದ್ರ ಮತ್ತು ನದಿಸ್ನಾನ ಮಾಡುವವರ ಬಗೆಗೆ ವಹಿಸಬೇಕಾದ ಎಚ್ಚರದ ಕುರಿತು ಗಂಗೊಳ್ಳಿ ಪೊಲೀಸರು, ಕರಾವಳಿ ಕಾವಲು ಪಡೆ ಪೊಲೀಸರು, ಕುಂದಾಪುರ ಸಂಚಾರಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಪಡುವರಿ ಶ್ರೀ ಸೋಮೇಶ್ವರ ದೇವಸ್ಥಾನದ ಕರ್ಕಾಟಕ ಅಮಾವಾಸ್ಯೆ ಜಾತ್ರೆ ಬುಧವಾರ ಸಂಪನ್ನಗೊಂಡಿತು. ಸೋಮೇಶ್ವರ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆಯಂದು ಇಲ್ಲಿನ ನಾಗತೀರ್ಥಕ್ಕೆ ವಿಶೇಷವಾದ ಪ್ರಾಮುಖ್ಯತೆಯಿದೆ. ಅಮಾವಾಸ್ಯೆಯಂದು ಇಲ್ಲಿನ ನಾಗತೀರ್ಥದಲ್ಲಿ ಕಾಶಿಯಿಂದ ತೀರ್ಥ ಬರುತ್ತದೆ ಎನ್ನುವ ನಂಬಿಕೆಯಿದೆ. ಕರ್ಕಾಟಕ ಅಮಾವಾಸ್ಯೆಯ ಪ್ರಯುಕ್ತ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯುತ್ತದೆ. ನವ ದಂಪತಿಗಳು ಸಮುದ್ರ ಸ್ನಾನ ಮಾಡಿ ದೇವರ ದರ್ಶನ ಮಾಡಿದರೆ ಪುಣ್ಯ ಪ್ರಾಪ್ತಿಯಾಗುತ್ತದೆ ಎನ್ನುವ ಪ್ರತೀತಿ ಇದೆ. ಹೀಗಾಗಿ ಬೇರೆ ಬೇರೆ ಊರುಗಳಿಂದ ಸಹಸ್ರಾರು ಭಕ್ತರು ಆಗಮಿಸುತ್ತಾರೆ. ಬೆಳಿಗ್ಗೆ ದೇವಳದಲ್ಲಿ ರುದ್ರಾಭಿಷೇಕ ಮಹಾಮಂಗಳಾರತಿ ಮುಂತಾದ ಪೂಜಾ ವಿಧಿ ವಿಧಾನಗಳು ನಡೆಯಿತು. ಈ ಸಂದರ್ಭದಲ್ಲಿ ಸಾವಿರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು. ಇದನ್ನೂ ಓದಿ ► ಮರವಂತೆ: ಮಹಾರಾಜಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿ ಕರ್ಕಾಟಕ ಅಮಾವಾಸ್ಯೆ ಜಾತ್ರೆ, ಸಹಸ್ರಾರು ಮಂದಿ ಭಾಗಿ – https://kundapraa.com/?p=100768 .

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಜನ ಜಾಗೃತಿಗಾಗಿ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನಾಚರಣೆ ಅಂಗವಾಗಿ ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನದ ವತಿಯಿಂದ ಸಾರ್ವಜನಿಕರಿಗಾಗಿ ಮಾಹಿತಿ ಕರಪತ್ರ ಬಿಡುಗಡೆ ಸಮಾರಂಭದಲ್ಲಿ ಸಾಸ್ತಾನ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಾಘವೇಂದ್ರ ರಾವ್ ಅವರು ಜಂತು ಹುಳುಗಳಿಂದ 18 ವರ್ಷಗಳ ಒಳಗಿನ ಮಕ್ಕಳಿಗೆ ಆಗುವ ಆರೋಗ್ಯ ತೊಂದರೆಗಳ ಬಗ್ಗೆ ಮಾಹಿತಿ ನೀಡಿದರು. ರೋಟರಿ ಅಧ್ಯಕ್ಷ ಕುಸುಮಾ ಮನೋಜ್, ಜ್ಯೋತಿ ಉದಯ್ ಕುಮಾರ್, ಕಾರ್ಯದರ್ಶಿ ರಾಜಾರಾಮ ಐತಾಳ, ನೈನಾ ಜೆ. ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ನಗರದ ನಿಟ್ಟೂರು ರಾ.ಹೆ 66ರ ಆಭರಣ ಮೋಟಾರ್ಸ್ ಪ್ರೈವೇಟ್ ಲಿ.ನಲ್ಲಿ ಆಗಸ್ಟ್ 14ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿಯುಸಿ, ಐ.ಟಿ.ಐ ಮತ್ತು ಡಿಪ್ಲೋಮಾ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತೀರ್ಣರಾದ ಆಭ್ಯರ್ಥಿಗಳು ತಮ್ಮ ಸ್ವ-ವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಗಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 9901472710 ಹಾಗೂ 8150961875 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಪಾಂಚಜನ್ಯ ಸಂಘ ಪಾರಂಪಳ್ಳಿ – ಹಂದಟ್ಟು ಇವರ ನೇತೃತ್ವದಲ್ಲಿ ಚಿತ್ರಪಾಡಿ ಶಾಲಾ ವಠಾರ ಹಾಗೂ ಅಂಬಾಗಿಲ ಕೆರೆ ರಸ್ತೆ ಸ್ವಚ್ಛತಾ ಕಾರ್ಯಕ್ರಮ ಮಂಗಳವಾರ ನಡೆಯಿತು. ಸಂಘದ ಅಧ್ಯಕ್ಷರಾದ ಕೃಷ್ಣಮೂರ್ತಿ ಮರಕಾಲ, ಪ್ರಧಾನ ಕಾರ್ಯದರ್ಶಿ ಕೃಷ್ಣ ಆಚಾರ್ಯ, ಚಿತ್ರಪಾಡಿ ಶಾಲಾ ಮುಖ್ಯೋಪಾಧ್ಯಾಯಿನಿ ಶಾಲಿನಿ ಎಸ್‌ಡಿಎಂಸಿ ಅಧ್ಯಕ್ಷ ಶಂಕರ ದೇವಾಡಿಗ, ದೈಹಿಕ ಶಿಕ್ಷಕ ಸತೀಶ್ಚಂದ್ರ ಶೆಟ್ಟಿ ಸಹಶಿಕ್ಷಕರಾದ ಪ್ರಶಾಂತ, ಜ್ಯೋತಿ, ಶಾಲಾ ಶಿಕ್ಷಕ ಹಾಗೂ ಶಿಕ್ಷಕಿ ವೃಂದದವರು ಉಪಸ್ಥಿತರಿದ್ದರು. ಡಾ. ಗಣೇಶ ಬೆಳಕು ಮನೆ ಹಾಗೂ ಅರುಣ ಐತಾಳ್ ಸಹಕಾರ ನೀಡಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಬಾಲ ನ್ಯಾಯ ಕಾಯ್ದೆಯನ್ವಯ ನೋಂದಣಿಯಾಗಿರುವ ಸಂಸ್ಥೆ/ವಸತಿ ನಿಲಯಗಳನ್ನು ಹೊರತುಪಡಿಸಿ 6 ರಿಂದ 18 ವರ್ಷದೊಳಗಿನ ಮಕ್ಕಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸರ್ಕಾರೇತರ ಸಂಸ್ಥೆಗಳು, ನಾಗರಿಕ ಸಮಾಜ ಸಂಸ್ಥೆಗಳು, ಟ್ರಸ್ಟ್, ಧಾರ್ಮಿಕ, ಖಾಸಗಿ, ವೈಯಕ್ತಿಕವಾಗಿ ನಡೆಸಲ್ಪಡುವ ಯಾವುದೇ ಔಪಚಾರಿಕ, ಅನೌಪಚಾರಿಕ ಶೈಕ್ಷಣಿಕ ವಸತಿ ನಿಲಯ, ವಸತಿ ಶಾಲೆ, ಕಾಲೇಜುಗಳನ್ನು ಕಡ್ಡಾಯವಾಗಿ ನೋಂದಾಯಿಸಬೇಕಾಗಿದ್ದು, ಅರ್ಜಿ ನಮೂನೆಗಳನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಇವರಿಂದ ಪಡೆದು ಸೆಪ್ಟೆಂಬರ್ 4 ರ ಒಳಗಾಗಿ ಭರ್ತಿ ಮಾಡಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 204, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ ದೂ.ಸಂ: 0820-2574978 ಅನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More