Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಗರ್ಭಿಣಿ ಮಹಿಳೆಯರಿಗೆ ಆರಂಭದಲ್ಲಿಯೇ ತಾಯಿ ಕಾರ್ಡ್ ಅನ್ನು ನೀಡುವುದರೊಂದಿಗೆ ಕಾಲಕಾಲಕ್ಕೆ ಅವರ ಆರೋಗ್ಯ ತಪಾಸಣೆ ನಡೆಸುವುದರ ಜೊತೆಗೆ ಪೌಷ್ಠಿಕ ಆಹಾರಗಳ ಸೇವನೆ ಸೇರಿದಂತೆ ಮತ್ತಿತರ ಮಾಹಿತಿಗಳನ್ನು ಅವರುಗಳಿಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ತಾಯಿ ಮರಣ ತನಿಖಾ ಸಮಿತಿ ಸಭೆ, ಜಿಲ್ಲಾ ಲಸಿಕಾ ಕಾರ್ಯಪಡೆ ಸಮಿತಿ ಸಭೆ ಹಾಗೂ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಯಿ ಮತ್ತು ಮಕ್ಕಳ ಮರಣವನ್ನು ತಡೆಗಟ್ಟಲು ಎಲ್ಲಾ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸಬೇಕು. ಗರ್ಭಿಣಿ ಹಾಗೂ ಬಾಣಂತಿಯರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ, ಅವುಗಳ ಪ್ರಯೋಜನ ಪಡೆದುಕೊಳ್ಳುವಂತೆ ನೋಡಿಕೊಳ್ಳಬೇಕು. ಇವುಗಳ ಜೊತೆಗೆ ತಮ್ಮ ಮಗುವಿನ ಆರೈಕೆ ಕೈಗೊಳ್ಳುವ ಕುರಿತು ಮಾಹಿತಿಗಳನ್ನು ಒದಗಿಸಬೇಕು ಎಂದರು. ಬಾಲ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಉಡುಪಿಯ ರನ್ನರ್ಸ್ ಕ್ಲಬ್ ಮತ್ತು  ಲೊಂಬಾರ್ಡ್ ಸ್ಮಾರಕ ಆಸ್ಪತ್ರೆಯ ಸಹಯೋಗದಲ್ಲಿ ಆಸ್ಪತ್ರೆಯ 101 ನೇ ವಾರ್ಷಿಕೋತ್ಸವದ ಪ್ರಯುಕ್ತ ಆಯೋಜಿಸಿದ ‘ಉಡುಪಿ ಮ್ಯಾರಥಾನ್-2024’ ಸ್ಪರ್ಧೆಯಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದು, 14 ವರ್ಷದೊಳಗಿನವರ ವಿಭಾಗದಲ್ಲಿ 8 ನೇ ತರಗತಿಯ ಸಿದ್ದಲಿಂಗ ವಾಲೀಕಾರ್ ತೃತೀಯ ಸ್ಥಾನದೊಂದಿಗೆ 2000 ರೂಪಾಯಿಗಳ ನಗದು ಬಹುಮಾನವನ್ನು ಪಡೆದರು. ದೇಶದಾದ್ಯಂತ ಸುಮಾರು 1500 ಸ್ಪರ್ಧಿಗಳು ವಿವಿಧ ವಿಭಾಗಗಳಲ್ಲಿ ಇದರಲ್ಲಿ ಸ್ಪರ್ಧಿಸಿದ್ದು, ಮುಂಜಾನೆ 5 ಗಂಟೆಗೆ ಮಲ್ಪೆಯ ಸೀವಾಕ್ ನಿಂದ ಆರಂಭಗೊಂಡು ಪಡುಕೆರೆ, ಉದ್ಯಾವರ, ಮಟ್ಟು ಮಾರ್ಗವಾಗಿ ಸಾಗಿ, ಪುನಃ ಮಲ್ಪೆ ಸೀ ವಾಕ್ ನಲ್ಲಿ ಮುಕ್ತಾಯಗೊಂಡಿತು. ಈ ಸಂದರ್ಭದಲ್ಲಿ ಮಾತನಾಡಿದ ಲೊಂಬಾರ್ಡ್ ಸ್ಮಾರಕ ಆಸ್ಪತ್ರೆಯ ನಿರ್ದೇಶಕ ಡಾ ಸುಶೀಲ್ ಜಾತಣ್ಣ “ಚಿಕಿತ್ಸೆಯ ಜೊತೆಗೆ ನಾವು ರೋಗಗಳನ್ನು ತಡೆಗಟ್ಟುವ ಬಗ್ಗೆಯೂ ಗಮನ ಹರಿಸುತ್ತೇವೆ. ವ್ಯಾಯಾಮವು ಅನೇಕ ಪ್ರಯೋಜನಗಳನ್ನು ಹೊಂದಿದೆ. ಮುಖ್ಯವಾಗಿ ಇಂದಿನ ಜೀವನಶೈಲಿಯಿಂದ ಹೃದ್ರೋಗ ಹೆಚ್ಚುತ್ತಿದೆ. ಈ ಮ್ಯಾರಥಾನ್ ಮೂಲಕ ದೈಹಿಕ ಮತ್ತು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ತಗ್ಗರ್ಸೆ ಹೆಗ್ಡೆಯವರ ಮನೆ ಕಂಬಳಗದ್ದೆಯಲ್ಲಿ ಅನುವಂಶಿಕವಾಗಿ ನಡೆದು ಬಂದ “ಸಾಂಪ್ರದಾಯಕ ಕಂಬಳೋತ್ಸವ”ವು ಡಿಸೆಂಬರ್ 06ರ ಶುಕ್ರವಾರದಂದು ವಿಜೃಂಭಣೆಯಿಂದ ಜರುಗಲಿದೆ. ಕಂಬಳದಲ್ಲಿ ಹಗ್ಗ ಅತೀ ಕಿರಿಯ ವಿಭಾಗ, ಹಗ್ಗ ಕಿರಿಯ ವಿಭಾಗ, ಹಗ್ಗ ಹಿರಿಯ ವಿಭಾಗ ಹಾಗೂ ಹಲಗೆ ಮುಕ್ತ ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು, ವಿಜೇತ ಕೋಣಗಳಿಗೆ ಹಾಗೂ ಕೋಣ ಓಡಿಸುವವರಿಗೆ ಬಹುಮಾನ ನೀಡಲಾಗುತ್ತದೆ. ಈ ವೇಳೆ ಕಂಬಳಾಭಿಮಾನಿಗಳು ಭಾಗವಹಿಸುವಂತೆ ತಗ್ಗರ್ಸೆ ಕಂಠದಮನೆ ಟಿ. ನಾರಾಯಣ ಹೆಗ್ಡೆ ಹಾಗೂ ಕುಟುಂಬಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ನಡೆಯುತ್ತಿರುವ ಬ್ರಹತ್ ವಿಜ್ಞಾನ ವಾಣಿಜ್ಯ ಕಲೆ ಪರಿಸರ ಸಾಮಾನ್ಯ ಜ್ಞಾನ ಮತ್ತು ಶೈಕ್ಷಣಿಕ ವಸ್ತು ಪ್ರದರ್ಶನದಲ್ಲಿ ಕೈಗಾರಿಕಾ ಮಾಹಿತಿ ಮತ್ತು ವೃತ್ತಿ ಮಾರ್ಗದರ್ಶನ ಶಿಬಿರ, ವಿದ್ಯಾರ್ಥಿಗಳ ವ್ಯಾಪಾರ ಮಳಿಗೆ ಮತ್ತು ಗ್ರಂಥಾಲಯದ ಕಲಾ ಗ್ಯಾಲರಿಯನ್ನು ಗಂಗೊಳ್ಳಿ ಉದ್ಯಮಿಯಾದ ದತ್ತಾನಂದ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪುರಸಭಾ ಸದಸ್ಯ ಪ್ರಭಾಕರ, ಭಂಡಾರ್ಕಾರ್ಸ್ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ. ಶಾಂತಾರಾಮ್ ಪ್ರಭು, ಆಡಳಿತ ಮಂಡಳಿಯ ಸದಸ್ಯರಾದ ಯು.ಎಸ್.ಶೆಣೈ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಮ್.ಗೊಂಡ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳ ನೂರು ಮೀಟರ್ ವ್ಯಾಪ್ತಿಯ ಅಂತರದಲ್ಲಿ ಯಾವುದೇ ಅಂಗಡಿ, ಹೋಟೆಲ್‌ಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಅವರ ಉದ್ದಿಮೆ ಪರವಾನಿಗೆಯನ್ನು ರದ್ದು ಪಡಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕೋಟ್ಪಾ-2003 ಕಾಯಿದೆಯ ಕುರಿತ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಳೆದ ಜಿಲ್ಲಾ ತಂಬಾಕು ನಿಯಂತ್ರಣ ಹಾಗೂ ಕೋಟ್ಪಾ ಕಾಯಿದೆ ಅನುಷ್ಠಾನ ಸಭೆಯಲ್ಲಿ ಶಾಲಾ- ಕಾಲೇಜುಗಳ ವ್ಯಾಪ್ತಿಯ ನೂರು ಮೀಟರ್ ಅಂತರದಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡಿದ್ದಲ್ಲಿ ಕ್ರಮ ಕೈಗೊಳ್ಳಲು ಸೂಚನೆ ನೀಡಿದೆ. ಆದರೆ ಬೈಂದೂರು ತಾಲೂಕಿನ ನಾವುಂದ, ಶಿರೂರು, ಹಕ್ಲಾಡಿ, ಉಪ್ಪುಂದ ಗ್ರಾಮ ಪಂಚಾಯಿತಿ ಗಳ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವುದು ಕಂಡು ಬಂದಿದ್ದರು ಸಹ ಬರಿ ಎಚ್ಚರಿಕೆ ಹಾಗೂ ತಿಳುವಳಿಕೆ ನೋಟಿಸ್ ಅನ್ನು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ರಾಮಮಂದಿರ ರಸ್ತೆಯಲ್ಲಿರುವ ವಿಜಯಾ ಟೆಕ್ಸ್‌ಟೈಲ್ಸ್ ಸಮೀಪ ರಾಘವೇಂದ್ರ (46) ಎಂಬವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ಪರೀಕ್ಷಿಸಿದ ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಕುಂದಾಪುರ ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯಿತಿಯ 33 ಸದಸ್ಯ ಸ್ಥಾನಗಳಿಗೆ ರಾಜ್ಯ ಚುನಾವಣೆ ಆಯೋಗದ ಆದೇಶದಂತೆ ಡಿ.8ರಂದು ಮತದಾನ ನಡೆಯಲಿದೆ. ಈ ಸಂದರ್ಭ ಸಾರ್ವಜನಿಕ ಶಾಂತಿ ಸುವ್ಯವಸ್ಥೆ ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಡಿ.6ರ ಬೆಳಗ್ಗೆ 6 ಗಂಟೆಯಿಂದ ಡಿ.8ರಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಚುನಾವಣೆ ನಡೆಯಲಿರುವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರದೇಶದ ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಮಾದಕ ವಸ್ತುಗಳ ಬಳಕೆಯಿಂದ ಆರೋಗ್ಯದ ಆಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಅರಿವು ಮೂಡಿಸಿ, ಅವುಗಳಿಂದ ದೂರವಿರುವ ಹಾಗೇ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್.ಸಿ.ಓ.ಆರ್.ಡಿ (Narco Co-ordination Center) ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಮಾನ್ಯವಾಗಿ ಯುವಜನರು ಹೆಚ್ಚು ಮಾದಕ ವಸ್ತುಗಳಿಗೆ ವ್ಯಾಸನಿಗಳಾಗುತ್ತಿದ್ದಾರೆ. ಶಾಲಾ- ಕಾಲೇಜುಗಳಲ್ಲಿ ಅವುಗಳ ಬಳಕೆಯಿಂದ ಆಗುವ ಪರಿಣಾಮಗಳು ಹಾಗೂ ಭವಿಷ್ಯದಲ್ಲಿ ಆಗುವ ಅನಾನುಕೂಲಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಗಿಂದಾಗ್ಗೆ ನಡೆಸುವುದರ ಜೊತೆಗೆ ಪ್ರಬಂಧ ಸ್ಪರ್ಧೆ, ಆಶುಭಾಷಣ ಸ್ಪರ್ಧೆ ಸೇರಿದಂತೆ ಮತ್ತಿತರ ಚಟುವಟಿಕೆಗಳನ್ನು ಸಹ ಹಮ್ಮಿಕೊಳ್ಳಬೇಕು ಎಂದರು. ದುಶ್ಚಟಗಳಿಗೆ ಕಾರ್ಮಿಕರು ಸಹ ಬಲಿಯಾಗುತ್ತಿದ್ದಾರೆ. ಅವರಿಗೂ ಸಹ ಅರಿವು ಮೂಡಿಸುವುದರ ಜೊತೆಗೆ ಸಮಾಲೋಚನೆಗಳನ್ನು ನಡೆಸಿ, ಅವರುಗಳಿಗೆ ಮನಮುಟ್ಟುವ ರೀತಿ ತಿಳಿಸಿ, ದುಶ್ಚಟದಿಂದ ಮುಕ್ತರಾಗಿಸಲು ಮುಂದಾಗಬೇಕು ಎಂದರು. ಕಾಡಂಚಿನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಶೈಕ್ಷಣಿಕ ವರ್ಷಕ್ಕೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ವಿದೇಶಿ ವಿಶ್ವವಿದ್ಯಾನಿಲಯಗಳಲ್ಲಿ ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದೇಶಿ ವಿದ್ಯಾರ್ಥಿವೇತನ, ಬಿ.ಎಸ್ಸಿ/ ಜಿ.ಎನ್.ಎಂ ನರ್ಸಿಂಗ್, ಐ.ಐ.ಟಿ, ಐ.ಐ.ಐ.ಟಿ, ಎನ್.ಐ.ಟಿ, ಐ.ಐ.ಎಂ, ಐ.ಐ.ಎಸ್.ಇ.ಆರ್, ಎ.ಐ.ಐ.ಎಂ.ಎಸ್, ಎನ್.ಎಲ್.ಯು, ಐ.ಎನ್.ಐ ಮತ್ತು ಐ.ಯು.ಎಸ್.ಎಲ್.ಎ ಇತ್ಯಾದಿ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ, ಅಂಗಿಕೃತವಾದ ವಿಶ್ವವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ ಪಿ.ಹೆಚ್.ಡಿ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಫೆಲೋಶಿಪ್‌ಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 31 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣೀಪಾಲ ದೂ.ಸಂಖ್ಯೆ: 0820-2573596 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ವಿಕಲಚೇತನರು ಸಮಾಜದಲ್ಲಿ ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿ ಆತ್ಮವಿಶ್ವಾಸದಿಂದ ಜೀವನ ನಡೆಸುವಂತೆ ಅವಕಾಶ ಕಲ್ಪಿಸುವುದು ಸಮಾಜ ಹಾಗೂ ಸರಕಾರದ ಜವಾಬ್ದಾರಿ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನ (ಮಿನಿಹಾಲ್) ದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ವಿಕಲಚೇತನರ ಸಂಘಟನೆಗಳು ಮತ್ತು ಪಾಲಕರ ಸಂಘಟನೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವಿಕಲಚೇತನ ಮಕ್ಕಳ ಸಬಲೀಕರಣಕ್ಕಾಗಿ ಅನೇಕ ಶಾಲಾ- ಕಾಲೇಜು ಹಾಗೂ ಸಂಘ-ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಕಾಲದಲ್ಲಿ ವಿಕಲಚೇತನರಿಗೆ ವಿಧ್ಯಾಭ್ಯಾಸದ ಅವಕಾಶಗಳ ಜೊತೆಗೆ…

Read More