Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಜ್ಞಾನ, ತಂತ್ರಜ್ಞಾನ, ಇಂಜಿನಿಯರಿಂಗ್, ಕೃಷಿ ಮತ್ತು ವೈದ್ಯಕೀಯ (ಸ್ಟೀಮ್) ವಿಷಯಗಳ ಸಂವಹನಕ್ಕೆ ದಿವ್ಯಾಂಗ ವ್ಯಕ್ತಿಯ ಅತ್ಯುತ್ತಮ ಪ್ರಯತ್ನಗಳನ್ನು ಗುರುತಿಸುವ ಉದ್ದೇಶದಿಂದ ಕೆ.ಎಸ್.ಟಿ.ಎ ವಾರ್ಷಿಕ ಬಹುಮಾನ (ದಿವ್ಯಾಂಗ) ಕ್ಕೆ ಅರ್ಹರಿಂದ ಅರ್ಜಿ ಹಾಗೂ ನಾಮನಿರ್ದೇಶನಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 2025 ರ ಜನವರಿ 28 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ ವೆಬ್‌ಸೈಟ್ www.kstacademy.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ,.ಉಡುಪಿ: ನವೆಂಬರ್ 19 ರಿಂದ ಡಿಸೆಂಬರ್ 10 ರವೆರೆಗೆ ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನ ಹಮ್ಮಿಕೊಳ್ಳಲಾಗಿದೆ. ಸದರಿ ದಿನಾಚರಣೆ ಬಯಲು ಬಹಿರ್ದೆಸೆ ಮುಕ್ತ ಸ್ಥಿತಿಯ ಸ್ಥಾನಮಾನವನ್ನು ಉಳಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ವಿಶ್ವ ಶೌಚಾಲಯ ದಿನಾಚರಣೆ ಪ್ರಯುಕ್ತ ನಡೆದ ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮೀಣ ಭಾಗದಲ್ಲಿ ಸುರಕ್ಷಿತ ನೈರ್ಮಲ್ಯ, ಶುಚಿತ್ವ ಕುರಿತು ಜಾಗೃತಿ ಮೂಡಿಸುವುದು ಸೇರಿದಂತೆ ಪ್ರತಿನಿತ್ಯ ನಿರಂತರವಾಗಿ ಶೌಚಾಲಯಗಳನ್ನು ಬಳಸುವಂತೆ ಜನಸಾಮಾನ್ಯರಿಗೆ ಪ್ರೇರೇಪಿಸುವ ಉದ್ದೇಶದಿಂದ ಪ್ರತಿವರ್ಷ ನವೆಂಬರ್ 19 ರಂದು ವಿಶ್ವ ಶೌಚಾಲಯ ದಿನವನ್ನು ಆಚರಿಸಲಾಗುತ್ತಿದೆ ಎಂದರು. ವಿಶ್ವ ಶೌಚಾಲಯ ಮತ್ತು ವಿಶ್ವ ಮಾನವ ಹಕ್ಕುಗಳ ದಿನಾಚರಣೆಯ ಪ್ರಯುಕ್ತ ಪ್ರಸಕ್ತ ವರ್ಷ ನಮ್ಮ ಶೌಚಾಲಯ ನಮ್ಮ ಗೌರವ ಎಂಬ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಬಸ್ರೂರು  ಶ್ರೀ ಮಹಾಲಸಾ ನಾರಾಯಣ ದೇವಸ್ಥಾನದ ಜೀರ್ಣೋದ್ಧಾರ ಪುನಃ ಪ್ರತಿಷ್ಠಾ ರಜತ ಮಹೋತ್ಸವವು ಡಿ.15 ರಿಂದ ಡಿ.18ರ ತನಕ ನಡೆಯಲಿದೆ. ಡಿ.18ರಂದು ಶ್ರೀದೇವಿಗೆ ಸಹಸ್ರಾಧಿಕ ಅಷ್ಟೋತ್ತರ ಶತ ಸ್ವರ್ಣ ನಾಣ್ಯ ಸಹಿತ ರಜತ ಕುಂಭಾಭಿಷೇಕವು ಶ್ರೀ ಕಾಶೀ ಮಠಾಧೀಶ ಶೀಮದ್ ಸಂಯಮೀಂದ್ರ ತೀರ್ಥ ಶ್ರೀಪಾದರ ಅಮೃತ ಹಸ್ತಗಳಿಂದ ನೆರವೇರಲಿದೆ. ಈ ಕುರಿತು ಗುರುವರ್ಯರು ತಮ್ಮ ಚೇಂಪಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಳ ಮೊಕ್ಕಾಮಿನಲ್ಲಿ ನ.18ರಂದು ಆಮಂತ್ರಣ ಪತ್ರಿಕೆಯನ್ನು ವಿದ್ಯುಕ್ತವಾಗಿ ಬಿಡುಗಡೆಗೊಳಿಸಿ ಮಹೋತ್ಸವಕ್ಕೆ ಚಾಲನೆಯೊಂದಿಗೆ ಶುಭ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ಬಸ್ರೂರು ದೇವಾಲಯದ ಧರ್ಮದರ್ಶಿ ಮಂಡಳಿಯ  ಟಿ. ನಾರಾಯಣ ಎಂ. ಪೈ ಮಣಿಪಾಲ, ದಿನಕರ ಭಗವಂತ ಶೆಣೈ ಕುಂದಾಪುರ, ಕೆ. ಗೋಕುಲ್ ದಾಸ್ ಪೈ ಮಣಿಪಾಲ, ಎಸ್. ಗೋಪಾಲಕೃಷ್ಣ ಪೈ ಕುಂದಾಪುರ, ಡಾ. ಎಂ. ವಿಶ್ವನಾಥ ಪೈ ಉಡುಪಿ, ಎಸ್. ಪ್ರಭಾಕರ್ ಪೈ, ಬಾರ್ಕೂರು, ವೇ|  ಚೇಂಪಿ ಶ್ರೀಕಾಂತ್ ಭಟ್, ಚೇಂಪಿ ದೇವಳದ ಆಡಳಿತ ಮಂಡಳಿಯ ಸದಸ್ಯರು ಹಾಗೂ ಊರಿನ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿವೇಚನೆ ಮಾಡುವ ಶಕ್ತಿಯನ್ನು ಭಗವಂತನು ಮನುಷ್ಯನಿಗೆ ವಿಶೇಷವಾಗಿ ನೀಡಿದ್ದಾನೆ. ದೇವರ ಆರಾಧನೆಯಿಂದ ಮನುಕುಲದ ಅಭಿವೃದ್ಧಿಯಾಗುತ್ತದೆ. ಸಾಧು ಸಂತರು ಋಷಿಮುನಿಗಳು ನೀಡಿದ ವಿಶಿಷ್ಠ ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ಇಂದು ಪ್ರತಿಯೊಂದು ದೇವಳವನ್ನು ಉಳಿಸುವ ಜವಬ್ದಾರಿ ನಮ್ಮೆಲ್ಲರ ಕರ್ತವ್ಯವಾಗಿದೆ. ಈ ನೆಲೆಯಲ್ಲಿ ಶೃಂಗೇರಿ ಜಗದ್ಗುರುಗಳ ಮಾರ್ಗದರ್ಶನದಲ್ಲಿ ನಡೆಯಲಿರುವ ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸಂಪೂರ್ಣವಾಗಿ ತಮ್ಮನ್ನು ತೊಡಗಿಸಿಕೊಂಡು ದೇವತಾ ಕಾರ್ಯಗಳನ್ನು ಯಶಸ್ಸಿಗೊಳಿಸೋಣ ಎಂದು ಕುಂಭಾಸಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದ ವಿಶ್ರಾಂತ ಆಡಳಿತ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ ಹೇಳಿದರು.  ಕುಂಭಾಸಿ ನಾಗಾಚಲ ಶ್ರೀ ಅಯ್ಯಪ್ಪ ಸ್ವಾಮಿ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನೂತನವಾಗಿ ಶೃಂಗೇರಿ ಶಂಕರ ಮಠ ಸ್ಥಾಪಿಸುವ ನಿಮಿತ್ತ ಲೋಕಕಲ್ಯಾಣಾರ್ಥವಾಗಿ ಜರುಗಲಿರುವ ಕೋಟಿ ಮಂಗಳ ಗೌರೀ ಜಪ, ಪಂಚಾಕ್ಷರೀ ಜಪ ಯಜ್ಞದ ಸಂಕಲ್ಪದ ಜಪ ಪತ್ರಿಕೆಯನ್ನು ದೇವಳದ ಸಭಾಭವನದಲ್ಲಿ ಶನಿವಾರ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಶ್ರೀ ಶೃಂಗೇರಿ ಪೀಠದ ಪ್ರಾಂತೀಯ ಧರ್ಮಧಿಕಾರಿ ವೇದಮೂರ್ತಿ ನಾಗಪಾತ್ರಿಗಳಾದ ಲೋಕೇಶ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಡಿಸೆಂಬರ್ 2ರಿಂದ 5ರ ತನಕ ನಡೆಯಲಿರುವ ಬೃಹತ್ ಶೈಕ್ಷಣಿಕ ಮಾಹಿತಿ ಮತ್ತು ವಸ್ತು ಪ್ರದರ್ಶನದ  ಬಗ್ಗೆ ಪೂರ್ವಭಾವಿ ಸಭೆಯು  ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 19ರಂದು ಕಾಲೇಜಿನ ಆರ್.ಎನ್. ಶೆಟ್ಟಿ ಸಬಾಂಗಣದಲ್ಲಿ ನಡೆಯಿತು. ಕುಂದಾಪುರ –ಬೈಂದೂರು ವಿಧಾನಸಭಾ ಕ್ಷೇತ್ರದ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಸಾಮಾನ್ಯ ಜ್ಞಾನ ಶೈಕ್ಷಣಿಕ ಮಾಹಿತಿ , ವಸ್ತು ಪ್ರದರ್ಶನ ವೃತ್ತಿ ಮಾರ್ಗದರ್ಶನ ನೀಡಲು ನಿರ್ಧರಿಸಲಾಗಿದ್ದು, ಸರ್ವ ಸರಕಾರಿ ಇಲಾಖೆಗಳ ಸಹಭಾಗಿತ್ವದಲ್ಲಿ ಈ ಬ್ರಹತ್ ಶೈಕ್ಷಣಿಕ ಮತ್ತು ವಸ್ತು ಪ್ರದರ್ಶನ ನಡೆಯಲಿದೆ. ವಿದ್ಯಾರ್ಥಿಗಳಿಗೆ ಬಹಳಷ್ಟು ವಿಷಯಗಳ ಬಗ್ಗೆ ಮಾಹಿತಿಗಳ ಕೊರತೆ ಇದ್ದು, ಅವರ ಭವಿಷ್ಯದ ದೃಷ್ಟಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಎಲ್ಲಾ ಇಲಾಖೆಗಳ ಅಧಿಕಾರಿಗಳು ಈ ಶೈಕ್ಷಣಿಕ ವಸ್ತು ಪ್ರದರ್ಶನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು.…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸುಣ್ಣಾರಿಯ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯ ಚಿತ್ರಕಲೆ ಸ್ಪರ್ಧೆಯಲ್ಲಿ  ಆರ್. ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿ ಮಂಜುನಾಥ್ ಪ್ರಥಮ ಸ್ಥಾನಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಚಿತ್ರಕಲಾ ಕ್ಷೇತ್ರದಲ್ಲಿ  ಸಾಧನೆಗೈದ ವಿದ್ಯಾರ್ಥಿ ಮಂಜುನಾಥ್ ಗೆ ಕಾಲೇಜಿನ‌ ಸಂಚಾಲಕರಾದ ಬಿ.ಎಮ್ ಸುಕುಮಾರ ಶೆಟ್ಟಿ ಅವರು, ಆಡಳಿತ ಮಂಡಳಿ‌ ಕುಂದಾಪುರ ಎಜುಕೇಶನ್ ಸೊಸೈಟಿಯ ಸದಸ್ಯರು, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಹಾಗೂ ಕಾಲೇಜಿನ ಬೋಧಕ- ಬೋಧಕೇತರ ಸಿಬ್ಬಂಧಿಯವರು ಅಭಿನಂದನೆ‌ ಸಲ್ಲಿಸಿರುತ್ತಾರೆ. 

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ನ. 17 ರಂದು ಶ್ರೀ ಭಗವದ್ಗೀತಾ ಅಭಿಯಾನ-ಕರ್ನಾಟಕ 2024  ಶ್ರೀ ಸೋಂದಾ ಸ್ವರ್ಣವಲ್ಲೀ  ಮಹಾಸಂಸ್ಥಾನ ಆಯೋಜಿಸಿದ ಭಾಷಣ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ದಿವೀಶ್ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು  ಹಾಗೂ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ   ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹಟ್ಟಿಅಂಗಡಿ ವಸತಿಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟವು ಸಂಪನ್ನಗೊಂಡಿತು. 14 ಮತ್ತು 17 ರ ವಯೋಮಿತಿಯ ಬಾಲಕ ಮತ್ತು ಬಾಲಕಿಯರ ವಿಭಾಗಗಳಲ್ಲಿ ಉದ್ದಜಿಗಿತ, ಗುಂಡೆಸೆತ, 100ಮೀ, 200ಮೀ, 400ಮೀ, 800ಮೀ, 1500ಮೀ ಓಟ ಮತ್ತು ರಿಲೇ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿದ್ಯಾರ್ಥಿಗಳು ಅತ್ಯುತ್ಸಾಹದಿಂದ ಪಾಲ್ಗೊಂಡಿದ್ದರು. ಈ ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಗಳ ನೆಲೆಯಲ್ಲಿ ಉಪಸ್ಥಿತರಿದ್ದ ಹಟ್ಟಿಅಂಗಡಿ ಗ್ರಾಮ ಪಂಚಾಯತ್ ನ ಉಪಾಧ್ಯಕ್ಷರಾದ ಪ್ರತಾಪ್ ಶೆಟ್ಟಿ ಅವರು ಉದ್ಘಾಟನೆಗೈದು ವಿದ್ಯಾರ್ಥಿಗಳಿಗೆ ” ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿಶಾಲೆಯು ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಗಣನೀಯ ಪ್ರಗತಿಯನ್ನು ಸಾಧಿಸುತ್ತಿರುವುದು ಇಡೀ ಊರಿಗೆ ಒಂದು ಹೆಮ್ಮೆಯ ಸಂಗತಿಯಾಗಿದೆ. ವಿಶ್ವದಾಖಲೆಗಳು ಕೂಡ ಇಲ್ಲಿ ಸೃಷ್ಟಿಯಾಗುತ್ತಿವೆ ಎಂದರೆ ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಅವರ ತಂಡ ಮಕ್ಕಳ ಬೆಳವಣಿಗೆ ಮತ್ತು ಸಾಧನೆಗೆ ಅದೆಷ್ಟು ಮಹತ್ವವನ್ನು ನೀಡುತ್ತಾರೆಂಬುದಕ್ಕೆ ನೈಜ ಸಾಕ್ಷಿಯಾಗಿದೆ. ನಿತ್ಯದ ಪಾಠ ಪ್ರವಚನಗಳನ್ನು ತನ್ಮಯತೆಯಿಂದ ಕಲಿತು, ಆಟೋಟಗಳಲ್ಲಿ ವಿದ್ಯಾರ್ಥಿಗಳು ಮುಕ್ತವಾಗಿ ಪಾಲ್ಗೊಂಡರೆ ಭವಿಷ್ಯದಲ್ಲಿ ಯಶಸ್ವಿ ಜೀವನವನ್ನು ನಡೆಸಲು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಜೆಸಿಐ ಸಿಟಿಯ 2025ನೇ ಸಾಲಿನ ಅಧ್ಯಕ್ಷರಾಗಿ ರಾಜು ಮೊಗವೀರ ಹಾಗೂ ಕಾರ್ಯದರ್ಶಿಯಾಗಿ ರಾಘವೇಂದ್ರ ಸೂರ್ಕುಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅವರಿಗೆ ಬೈಂದೂರು ಜೆಸಿಐ ಸಿಟಿಯ ಅಧ್ಯಕ್ಷರು, ಸ್ಥಾಪಕಾಧ್ಯಕ್ಷರು, ಪೂರ್ವಾಧ್ಯಕ್ಷರು, ಪದಾಧಿಕಾರಿಗಳು ಮತ್ತು ಸರ್ವಸದಸ್ಯರು ಅಭಿನಂದನೆಯನ್ನು ಸಲ್ಲಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದಿರೆ: ಪ್ರಕೃತಿ ಚಿಕಿತ್ಸಾ ಪದ್ಧತಿಯು ಅತ್ಯುತ್ತಮ ಜೀವನವನ್ನು ನಡೆಸಲು ರಹದಾರಿಯಾಗಿದ್ದು ಇದರ ಮೂಲ ತತ್ವಗಳನ್ನು ಪಾಲಿಸುವುದರಿಂದ ಜೀವನ ಶೈಲಿ ಬದಲಾವಣೆಯಾಗುವುದಲ್ಲದೇ ಯೋಗಭ್ಯಾಸಗಳಿಂದ ಆಯುಷ್ಯ ವೃದ್ಧಿಯಾಗುತ್ತದೆ ಎಂದು ಪ್ರಕೃತಿ ಚಿಕಿತ್ಸಾ ತಜ್ಞ ಡಾ. ಮಹಮ್ಮದ್ ರಫೀಕ್ ತಿಳಿಸಿದರು. ಅವರು ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಕಾಲೇಜು ಆಯೋಜಿಸಿದ್ದ 7ನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನದ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಪ್ರಕೃತಿ ಚಿಕಿತ್ಸೆ ಮತ್ತು ಯೋಗವನ್ನು ಸರಿಯಾಗಿ ಪಾಲಿಸುವುದರಿಂದ ಮಾನಸಿಕ ಸ್ಥಿತಿಗತಿಗಳನ್ನು ಸಮತೋಲನದಲ್ಲಿಟ್ಟುಕೊಳ್ಳಬಹುದು. ಆ ಮೂಲಕ ಎಲ್ಲಾ ವರ್ಗದ ಮತ್ತು ವಯೋಮಾನದವರಿಗೂ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಡಾ. ಗ್ರೀಷ್ಮಾ ವಿವೇಕ್ ಆಳ್ವ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಶಿಕ್ಷಣವನ್ನು ಪ್ರತಿಯೊಬ್ಬರು ಅಳವಡಿಸಿಕೊಂಡಲ್ಲಿ ಜೀವನವನ್ನು ಅನುಭವಿಸಲು ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಪ್ರಥಮ ವರ್ಷದ ವಿದ್ಯಾರ್ಥಿ ಯೋಗೀಶ್ವರನ್ ಕಾರ್ಯಕ್ರಮ ನಿರೂಪಿಸಿ, ಯೋಗ ವಿಭಾಗದ ಮುಖ್ಯಸ್ಥೆ ಡಾ. ಅರ್ಚನಾ ಸ್ವಾಗತಿಸಿ,…

Read More