Author: ನ್ಯೂಸ್ ಬ್ಯೂರೋ

ಪತ್ರಿಕಾಗೋಷ್ಠಿಯಲ್ಲಿ ಮನಸ್ಮಿತ ಫೌಂಡೇಶನ್‌ನ ಆಡಳಿತ ನಿರ್ದೇಶಕ ಡಾ. ಪ್ರಕಾಶ್ ಸಿ. ತೋಳಾರ್, ನಿರ್ದೇಶಕ ಡಾ. ಸತೀಶ್ ಪೂಜಾರಿ, ಕಾರ್ಯಕ್ರಮ ಸಹ ಪ್ರಾಯೋಜಕರಾದ ಯುವ ಮೆರೀಡಿಯನ್ ಆಡಳಿತ ಪಾಲುದಾರರಾದ ಉದಯ ಕುಮಾರ್ ಶೆಟ್ಟಿ, ವಿನಯ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ, ಗ್ರಾಮ ಪಂಚಾಯತ್ ಮರವಂತೆ, ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ, ಆಸರೆ ಚಾರಿಟೇಬಲ್ ಟ್ರಸ್ಟ್ (ರಿ) ಮರವಂತೆ, ಕೆಎಂಸಿ ಆಸ್ಪತ್ರೆ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ ಇಲ್ಲಿ ಕೆ ಎಂ ಸಿ ಮಣಿಪಾಲದ ಖ್ಯಾತ ದಂತ ವೈದ್ಯರ ತಂಡದಿಂದ ಉಚಿತ ದಂತ ಚಿಕಿತ್ಸಾ ಶಿಬಿರ ಜರುಗಿತು. ಕಾರ್ಯಕ್ರಮವನ್ನು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾಕ್ಟರ್ ಗಣೇಶ್ ಭಟ್ ಉದ್ಘಾಟಿಸಿದರು. ದಂತ ಚಿಕಿತ್ಸೆಯ ಕುರಿತು ಡಾ. ರಾಜಾರಾಮ್ ಶೆಟ್ಟಿ ಮಾಹಿತಿಯನ್ನು ನೀಡಿದ್ದಾರೆ, ಕೆಎಂಸಿ ಮಣಿಪಾಲ ಆಸ್ಪತ್ರೆಯ ಡಾ. ಹರಿಣಿ ಇವರು ಶಿಬಿರದ ಬಗ್ಗೆ ಮಾಹಿತಿಯನ್ನು ನೀಡಿದರು. ರೋಟರಿ ಕ್ಲಬ್ ಅಧ್ಯಕ್ಷ ವೆಂಕಟೇಶ್ ನಾವುಂದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ವೇದಿಕೆಯಲ್ಲಿ ಗಣೇಶ್ ಐತಾಳ್, ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ, ಕಾರ್ಯದರ್ಶಿ ನಾಗರಾಜ್ ಶೆಟ್ಟಿ, ಆಸರೆ ಚಾರಿಟೇಬಲ್ ಟ್ರಸ್ಟ್ ನ ರಾಜೇಶ್ ಆಚಾರ್ಯ ಗ್ರಾಮ ಪಂಚಾಯತ ಸದಸ್ಯರಾದ ಕರುಣಾಕರ್ ಆಚಾರ್ಯ ಉಪಸ್ಥಿತರಿದ್ದರು. ರಾಜಾರಾಮ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಮ್ಮ ಭಾರತೀಯ ಸಂಸ್ಕೃತಿಯ ಬುನಾದಿ ನಾಥಪಂಥ. ಇದು ಕ್ರಿಸ್ತಪೂರ್ವದ ಅಂಚಿನಿಂದಲೂ ಆರಾಧನೆಯಿತ್ತು. ವಸ್ತುತಃ ಭೈರವನ ಆರಾಧನೆ ವೈದಿಕ ಸಂಸ್ಕೃತಿಯಲ್ಲಿಲ್ಲ. ಇದು ದ್ರಾವಿಡ ಪರಂಪರೆಯಿಂದ ಬಂದಿರುವ ಆತ್ಮಸಾಧನೆಗೆ ಮೂಲವಾಗಿರುವ ತಂತ್ರ ಸಂಸ್ಕೃತಿಯಲ್ಲಿದೆ. ಇದರ ಮೂಲ ತತ್ವ ಸಿದ್ದಾಂತ ಹಾಗೂ ಅನ್ವೇಷಣೆಯನ್ನು ಸರಿಯಾಗಿ ಅಧ್ಯಯನ ಮಾಡಿದರೆ ಈ ಪಂಥದಲ್ಲಿರುವ ಅನೇಕ ವಿಚಾರಧಾರೆಗಳ ಬಗ್ಗೆ ಅರ್ಥವಾಗುತ್ತದೆ ಎಂದು ಆದಿಚುಂಚನಗಿರಿ ಕಾವೂರು ಶಾಖಾ ಮಠಾಧೀಶ ಡಾ.ಧರ್ಮಪಾಲನಾಥ ಸ್ವಾಮೀಜಿ ಹೇಳಿದರು. ಖಂಬದಕೋಣೆ ಗ್ರಾಮದ ಶ್ರೀ ಕ್ಷೇತ್ರ ಹಳಗೇರಿ ಶ್ರೀ ಕಾಲಭೈರೇಶ್ವರ ದೇವಸ್ಥಾನದ ಪುನರ್ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವದ 48ನೇ ದಿನದ ಪ್ರಯುಕ್ತ ಧೃಡಸಂಪ್ರೋಕ್ಷಣೆ ಹಾಗೂ ದೇವರ ಉತ್ಸವಮೂರ್ತಿ ಸಮರ್ಪಣಾ ಮಹೋತ್ಸವದಲ್ಲಿ ಆಶೀರ್ವಚನ ನೀಡಿದರು. ಉತ್ತರ ಭಾರತದಲ್ಲಿ ನಾಥ ಪರಂಪರೆ ಬಹಳ ಚೆನ್ನಾಗಿ ಬೆಳೆಯುತ್ತಿದ್ದು, ಈ ಭಾಗದಲ್ಲಿ ಮಾತ್ರ ಕುಂಟಿತವಾಗುತ್ತಿದೆ. ಕರ್ನಾಟಕದಲ್ಲಿ ಬಹಳ ವರ್ಷಗಳ ಹಿಂದಿನ ಇತಿಹಾಸವುಳ್ಳ ಭೈರವ ದೇವಾಲಯಗಳಿದ್ದು, ತನ್ನದೇ ಆದ ಅಂತರ್ಹಿತಗಳನ್ನು ಹೊಂದಿದೆ. ದುದೃಷ್ಟವಶಾತ್ ಇವುಗಳಲ್ಲಿ ಕೆಲವಾರು ದೇವಸ್ಥಾನಗಳು ಅವಸಾನದ ಅಂಚಿನಲ್ಲಿವೆ. ಧರ್ಮ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನವೀಕರಣಗೊಂಡ ನಗರದ ಹೂವಿನ ಮಾರುಕಟ್ಟೆ, ಶೆಣೈ ಪಾರ್ಕ್ ಇತ್ತೀಚಿಗೆ ಉದ್ಘಾಟನೆಗೊಂಡಿತು. ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪುರಸಭೆ ಅಧ್ಯಕ್ಷೆ ವೀಣಾ ಭಾಸ್ಕರ ಮೆಂಡನ್ ಮಾತನಾಡಿ, ಕುಂದಾಪುರ ಪುರಸಭೆಗೆ ಲಭ್ಯವಾದ 6.5 ಕೋಟಿ ನಗರೋತ್ಥಾನ ಯೋಜನೆಯ ಅನುದಾನದ ಕ್ರಿಯಾಯೋಜನೆ ಸಿದ್ಧಪಡಿಸುವ ಸಂದರ್ಭ ಸ್ಥಳೀಯ ಸದಸ್ಯೆ ದೇವಕಿ ಸಣ್ಣಯ್ಯ ಅವರು ಹೂವಿನ ಮಾರುಕಟ್ಟೆ ನವೀಕರಣಕ್ಕೆ ಸಲಹೆ ನೀಡಿದಂತೆ ನವೀಕರಣ ಕಾರ್ಯ ಕೈಗೊಳ್ಳಲಾಯಿತು ಎಂದರು. ಕುಂದಾಪುರ ಪುರಸಭೆಯ ಸದಸ್ಯೆ ಹಾಗೂ ಮಾಜಿ ಅಧ್ಯಕ್ಷೆ ದೇವಕಿ ಸಣ್ಣಯ್ಯ ಉದ್ಘಾಟಿಸಿ, ನಗರೋತ್ಥಾನ ಯೋಜನೆಯ ಅನುದಾನ ಬಳಸಿಕೊಂಡು ಹೂವಿನ ಮಾರುಕಟ್ಟೆ ನವೀಕರಣ ಮಾಡಲಾಗಿದೆ. ಕುಂದಾಪುರ ಪೇಟೆಯ ನಡುವೆ ಇರುವ ಹೂವಿನ ಮಾರುಕಟ್ಟೆಯನ್ನು ಸುಂದರವಾಗಿ ನವೀಕರಣ ಮಾಡಲಾಗಿದೆ ಎಂದರು. ಈ ಸಂದರ್ಭದಲ್ಲಿ ಶೆಣೈ ಪಾರ್ಕನ್ನು ಪುರಸಭಾ ಉಪಾಧ್ಯಕ್ಷ ಸಂದೀಪ್ ಖಾರ್ವಿ ಉದ್ಘಾಟಿಸಿದರು. ಪುರಸಭೆಯ ಸದಸ್ಯರಾದ ಪ್ರಭಾಕರ, ಶ್ರೀಧರ ಶೇರುಗಾರ್, ಚಂದ್ರಶೇಖರ ಖಾರ್ವಿ, ಪ್ರಭಾವತಿ ಶೆಟ್ಟಿ, ಶೇಖರ ಪೂಜಾರಿ, ರಾಘವೇಂದ್ರ ಖಾರ್ವಿ, ನಾಮನಿರ್ದೇಶನ ಸದಸ್ಯರಾದ ಪುಷ್ಪಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಉಳ್ಳೂರು – 74 ಪುಟ್ಟುಕೊಮೆ ಬಸು ನಿಲ್ದಾಣವನ್ನು ಪುಟ್ಟುಕೋಮೆ ರಾಮ ಪೂಜಾರಿ ಮತ್ತು ಲಕ್ಷ್ಮಿ ಪೂಜಾರ್ತಿ ಅವರ ಸವಿನೆನಪಿಗಾಗಿ, ಅವರ ಮಕ್ಕಳು ಕೊಡುಗೆ ಆಗಿ ನೀಡಿದರು

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಸನ್ಮಾನ ಎನ್ನುವುದು ಎಂದಿಗೂ ನನಗೆ ಖುಷಿ ಕೊಡುವುದಿಲ್ಲ. ನಿಮ್ಮ ಜೊತೆ ಸೇರಿ ನನಗೆ ಇನ್ನಷ್ಟು ಸಮಾಜ ಸೇವೆ ಮಾಡಲು ಅವಕಾಶ ಸಿಕ್ಕಿರುವುದು ಸಂತೋಷದ ವಿಷಯವಾಗಿದೆ. ಗ್ರಾಮಗಳ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಪಾತ್ರ ಬಹಳ ಮುಖ್ಯವಾದದ್ದು. ಈ ನಿಟ್ಟಿನಲ್ಲಿ ಮಿತ್ರಸಂಗಮ ಸಂಸ್ಥೆ ಜನಪರ ಕಾರ್ಯಗಳನ್ನು ಸಮಾಜಕ್ಕೆ ನೀಡುತ್ತಾ ಆಶಕ್ತರಿಗೆ ನೆರವು ನೀಡಿ ಸಮಾಜ ಮುಖಿಯಾಗಿ ತನ್ನದೇ ಆದ ವಿಶಿಷ್ಠ ಸೇವೆಯನ್ನು ನೀಡಿ ಮಾದರಿ ಸಂಸ್ಥೆಯಾಗಿ ಗುರುತಿಸಿಕೊಂಡಿದೆ ಎಂದು ದುಬೈ ಉದ್ಯಮಿ ವಕ್ವಾಡಿ ಪ್ರವೀಣ್ ಕುಮಾರ್ ಶೆಟ್ಟಿ ಹೇಳಿದರು. ಜಿಲ್ಲಾ ಅತ್ಯುತ್ತಮ ಯುವಕ ಮಂಡಲ ಪ್ರಶಸ್ತಿ ಪುರಸ್ಕೃತ ಸಂಸ್ಥೆಯಾದ ಬೀಜಾಡಿ ಗೋಪಾಡಿ ಮಿತ್ರಸಂಗಮದ ರಜತ ಮಹೋತ್ಸವದ ಅಂಗವಾಗಿ ಊರ ಗೌರವದ ನಮ್ಮೂರ ಪ್ರಶಸ್ತಿಯನ್ನು ಸ್ವೀಕರಿಸಿ ಅವರು ಮಾತನಾಡಿದರು. ಮಿತ್ರಸಂಗಮದ ಗೌರವಧ್ಯಕ್ಷ ವಾದಿರಾಜ್ ಹೆಬ್ಬಾರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದಶಿ೯ ರಾಜೇಶ್ ಆಚಾರ್, ರಜತ ಮಹೋತ್ಸವ ಸಮಿತಿ ಅಧ್ಯಕ್ಷ ದೀಪಾನಂದ ಉಪಾಧ್ಯಾಯ ಉಪಸ್ಥಿತರಿದ್ದರು. ಗಣೇಶ್ ಐಶ್ವರ್ಯ ಬೀಜಾಡಿ ಸ್ವಾಗತಿಸಿದರು. ಮಿತ್ರಸಂಗಮದ ಅಧ್ಯಕ್ಷ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಂಗಳೂರು ವಿಶ್ವವಿದ್ಯಾನಿಲಯ 2021-22ನೇ ಸಾಲಿನ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಬೈಂದೂರು ಸೂರ್ಕುಂದದ ಚೈತ್ರ ಶೆಟ್ಟಿ ಅವರು ಮೂರು ಚಿನ್ನದ ಪದಕವನ್ನು ಪಡೆದು ಅಪ್ರತಿಮ ಸಾಧನೆಗೈದಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎಂಎಸ್ಪಿ ಸಸ್ಯಶಾಸ್ತ್ರ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದ ಚೈತ್ರಾ ಪ್ರತಿಭಾವಂತ ವಿದ್ಯಾರ್ಥಿನಿ. ಈಕೆ ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಹಿರಿಯ ವ್ಯವಸ್ಥಾಪಕ ಚಂದಯ್ಯ ಶೆಟ್ಟಿ ಹಾಗೂ ಮೂಕಾಂಬು ದಂಪತಿಗಳ ಪುತ್ರಿ

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಸಂತೆ ಮಾರ್ಕೇಟ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ಸಿಗೆ ಲಾರಿಯೊಂದು ಹಿಂದಿನಿಂದ ಢಿಕ್ಕಿ ಹೊಡೆದ ಬಸ್ ಪಲ್ಟಿಯಾದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಕುಂದಾಪುರ ಕೆಎಸ್‌ಆರ್‌ಟಿಸಿ ಡಿಪ್ಪೋದಿಂದ ಹೊರಟು ಬಸ್ ನಿಲ್ದಾಣಕ್ಕೆ ತೆರಳುವ ವೇಳೆ ಡಿವೈಡರ್ನಲ್ಲಿ ಯೂಟರ್ನ್ ತೆಗೆದುಕೊಳ್ಳುವಾಗ ಬೈಂದೂರಿನತ್ತ ಸಾಗುತ್ತಿದ್ದ ಲಾರಿಯೊಂದು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿದ್ದು ಬಸ್ ಚಾಲಕ ಭಾಸ್ಕರ್ ಎನ್. ನಾಯ್ಕ ಗಾಯಗೊಂಡಿದ್ದಾರೆ. ನಿರ್ಲಕ್ಷ್ಯ ಹಾಗೂ ಅತಿ ವೇಗದ ಚಾಲನೆ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನೆಯಲ್ಲಿ ಎರಡೂ ವಾಹನಗಳು ಜಖಂಗೊಂಡಿವೆ. ಕುಂದಾಪುರ ಸಂಚಾರ ಪೊಲೀಸ್ ಠಾಣೆ ಪಿಎಸ್ಐ ನಾಸೀರ್ ಹುಸೇನ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಘಟನೆಯಿಂದಾಗಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ಥವಾಯಿತು. ಕುಂದಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ನೈಕಂಬ್ಳಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಸಮಿತಿಯ ಆಯ್ಕೆ ಸಭೆ ನೆಡೆಯಿತು. ಅಧ್ಯಕ್ಷರಾಗಿ ಪ್ರೀತಮ್ ಶೆಟ್ಟಿ ಹಿಂಡೆಲ್ಸು ಮತ್ತು ಕಾರ್ಯದರ್ಶಿಯಾಗಿ ಚಂದ್ರ ಶೆಟ್ಟಿ ಕೊಳೂರು ಆಯ್ಕೆಯಾದರು. ಸಮಿತಿಯ ಸದಸ್ಯರಾಗಿ ಕರುಣಾಕರ ಶೆಟ್ಟಿ ನಿರ್ಕೋಡ್ಲು, ಚಂದ್ರ ಶೆಟ್ಟಿ ನಾಯ್ಕರಮನೆ, ಸತೀಶ್ ಆಚಾರ್ಯ, ಸಂಜೀವ ಶೆಟ್ಟಿ ಗಾಣದಾಡಿ, ಮಂಜುನಾಥ ಪೂಜಾರಿ, ರಾಜೀವ ಶೆಟ್ಟಿ ಆಸೂರು, ಕೊರಗಯ್ಯ ಶೆಟ್ಟಿ ಮಲ್ಲೋಡು, ಆನಂದ ಶೆಟ್ಟಿ ಕೆಳಾಮನೆ, ಶೇಖರ ಶೆಟ್ಟಿ ಬೆಟ್ಟಿನಮನೆ, ಮಂಜುನಾಥ ಮಡಿವಾಳ, ರಮೇಶ್ ಆಚಾರ್ಯ ಆಯ್ಕೆಯಾದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಈ ಹಿಂದೆ ಬಿಜೆಪಿ ಅಧಿಕಾರ ನಡೆಸಿದ್ದರೂ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯಲಾಗಿರಲಿಲ್ಲ. ಈ ಭಾರಿ ಬಿಜೆಪಿ ಕಾರ್ಯಕರ್ತರ ಉತ್ಸಾಹವನ್ನು ಕಂಡಾಗ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 150ಕ್ಕೂ ಅಧಿಕ ಸ್ಥಾನ ದೊರೆಯುವ ಭರವಸೆ ಮೂಡಿದೆ ಎಂದು ಮಾಜಿ ಉಪಮುಖ್ಯ ಮಂತ್ರಿ ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಕರ್ನಾಟಕದ ಆಯೋಜಿಸಿರುವ ವಿಜಯ ಸಂಕಲ್ಪ ಯಾತ್ರೆಯು ಭಾರತೀಯ ಜನತಾ ಪಕ್ಷ ಬೈಂದೂರು ಮಂಡಲಕ್ಕೆ ಆಗಮಿಸಿದ್ದು, ಈ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಪ್ರತಿಯೊಬ್ಬ ಜನ ಸಾಮಾನ್ಯರಿಗೂ ಬಿಜೆಪಿ ಪಕ್ಷದ ಸಾಧನೆಗಳನ್ನು ತಿಳಿಸುವ ಉದ್ದೇಶದ ಈ ವಿಜಯ ಸಂಕಲ್ಪ ಯಾತ್ರೆ ಸಂಘಟಿಸಲಾಗಿದ್ದು, ಅದು ಅತ್ಯಂತ ಯಶಸ್ವಿಯಾಗಿದೆ. ನಿರೀಕ್ಷೆಗೂ ಮೀರಿ ಜನರಿಂದ ಸ್ಪಂಧನೆ ದೊರೆತಿದೆ. ಬಿಜೆಪಿ ಸಂಘಟನಾತ್ಮಕವಾಗಿ ಚುನಾವಣೆಗೆ ಸಜ್ಜಾಗಿದ್ದು, ರಾಷ್ಟ್ರರಕ್ಷಣೆ ಹಾಗೂ ಧರ್ಮ ರಕ್ಷಣೆಯನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ ಎಂದರು. ಶಿವಮೊಗ್ಗ ಲೋಕಸಭಾ ಸಂಸದ ಬಿ. ವೈ. ರಾಘವೇಂದ್ರ ಮಾತನಾಡಿ, ರಾಹುಲ್ ಗಾಂಧಿ ಭಾರತದಲ್ಲಿ ಪ್ರಜಾಪ್ರಭುತ್ವ ಕಣ್ಮರೆಯಾಗಿದೆ ಎಂದು ಬ್ರಿಟನ್‌ನಲ್ಲಿ…

Read More