ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯೋಗಾಸನ ಭಾರತ್ ಸಂಸ್ಥೆಯು ಮಹಾರಾಷ್ಟ್ರದ ಸಂಗಮ್ ನರ್ನಲ್ಲಿ ಆಯೋಜಿಸಿದ್ದ 6ನೇ ಜ್ಯೂನಿಯರ್ ಮತ್ತು ಸೀನಿಯರ್ ರಾಷ್ಟ್ರೀಯ ಯೋಗಾಸನ ಚಾಂಪಿಯನ್ಶಿಪ್ನಲ್ಲಿ ಶಂಕರನಾರಾಯಣ ಪೊಲೀಸ್ ಠಾಣೆಯ ಸಿಬ್ಬಂದಿ ಗುರುದಾಸ್ ಅವರು ಪ್ರಥಮ ಸ್ಥಾನದೊಂದಿಗೆ ಗೋಲ್ಡ್ ಮೆಡಲ್ ಪಡೆದು ಅಂತರಾಷ್ಟ್ರೀಯ ಯೋಗ ಚಾಂಪಿಯನ್ಶಿಪ್ಗೆ ಆಯ್ಕೆಯಾಗಿದ್ದಾರೆ. ಅಂತರಾಷ್ಟ್ರೀಯ ಯೋಗಾಸನ ಸ್ಪರ್ಧೆಗೆ ಭಾರತವನ್ನು ಪ್ರತಿನಿಧಿಸಲಿರುವ ಯೋಗಪಟುಗಳ ತಂಡದಲ್ಲಿ, ಗುರುದಾಸ್ ಅವರು ಕರ್ನಾಟಕದಿಂದ ಆಯ್ಕೆಯಾದ ಏಕೈಕ ಪೊಲೀಸ್ ಸಿಬ್ಬಂದಿಯಾಗಿದ್ದಾರೆ. ಉತ್ತಮ ಯೋಗಪಟುವಾಗಿರುವ ಗುರುದಾಸ್ ಅವರು ಈ ಹಿಂದೆಯೂ ಅನೇಕ ಯೋಗಾಸನ ಕ್ರೀಡಾಕೂಟದಲ್ಲಿ ಪಾಲ್ಗೊಂಡು ರಾಜ್ಯ, ರಾಷ್ಟ್ರಮಟ್ಟದಲ್ಲಿ ಪದಕ ಗೆದ್ದುಕೊಂಡಿದ್ದರು. ಇದೀಗ ಅಂತರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುವುದು, ಅವರ ಪ್ರತಿಭಾ ಸಂಪನ್ನತೆಗೆ ಗರಿ ಮೂಡಿದಂತಾಗಿದೆ. ಗುರುದಾಸ್ ಅವರು ತಗ್ಗರ್ಸೆ ಗ್ರಾಮದ ಮಂಜುನಾಥ ಜಿ ಹಾಗೂ ಕಾವೇರಿ ದಂಪತಿಗಳ ಪುತ್ರರಾಗಿದ್ದು, ಪತ್ನಿ ರೂಪಾ ಅವರೊಂದಿಗೆ ಕುಂದಾಪುರದಲ್ಲಿ ವಾಸವಾಗಿದ್ದಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಹಿಳೆಯರು ಸ್ವಾವಲಂಬಿ ಬದಕನ್ನು ಕಾಣುತ್ತಿದ್ದಾರೆ. ಇದು ಆಶಾದಾಯಕ ಬೆಳವಣಿಗೆಯಾಗಿದೆ ಎಂದು ಕೋಟದ ಮಣೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸತೀಶ್ ಹೆಚ್. ಕುಂದರ್ ಹೇಳಿದರು. ಅವರು ಭಾನುವಾರ ಕೋಟದ ಮಣೂರು ಶ್ರೀ ರಾಜಲಕ್ಷ್ಮಿ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕೋಟ ವಲಯ ಹಮ್ಮಿಕೊಂಡ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಕೋಟ ವಲಯಗಳ ಪದಗ್ರಹಣ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮನೆಯಿಂದಲೇ ಹೊರಬಾರದಿದ್ದ ಕಾಲಘಟ್ಟವೊಂದಿತ್ತು ಆದರೆ ಶ್ರೀ ಕ್ಷೇತ್ರದ ಖಾವಂದರ ಗ್ರಾಮಾಭಿವೃದ್ಧಿ ಯೋಜನೆಯಿಂದ ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ದೊರಕಿದೆ ಎಂದರಲ್ಲದೆ ಇಂತಹ ಯೋಜನೆಗಳು ಮಹಿಳೆಯರ ಉನ್ನತಿಗೆ ಮತ್ತಷ್ಟು ಪ್ರೇರಕ ಶಕ್ತಿಯಾಗಿ ಕಾರ್ಯನಿರ್ವಹಿಸಲಿ ಎಂದು ಶುಭಹಾರೈಸಿದರು. ಇದೇ ವೇಳೆ ಕೋಟ ವಲಯದ ವಿವಿಧ ಒಕ್ಕೂಟಗಳ ಅಧ್ಯಕ್ಷರಾದ ಗೀತಾ, ಸುಮತಿ, ರೇವತಿ ಶೆಟ್ಟಿ, ಮಾಲಿನಿ, ಲಲಿತಾ ಭಾಸ್ಕರ್, ಸವಿತಾ, ಜಯಂತಿ ಒಟ್ಟು ಎಂಟು ಒಕ್ಕೂಟಗಳಿಂದ ಅಧಿಕಾರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಕುಂಭಾಸಿ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನದಲ್ಲಿ ಜ.6 ಮಂಗಳವಾರದಂದು ಅಂಗಾರಕ ಸಂಕಷ್ಟಹರ ಚತುರ್ಥಿ ಪ್ರಯುಕ್ತ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಈ ಪ್ರಯುಕ್ತ ದೇವಳದಲ್ಲಿ ಲೋಕಕಲ್ಯಾಣಾರ್ಥ ಸಹಸ್ರ ನಾರಿಕೇಳ ಗಣಯಾಗ ನಡೆಯಲಿದ್ದು ಮಹಾ ಅನ್ನಸಂತರ್ಪಣೆ ಹಾಗೂ ರಾತ್ರಿ 8ಕ್ಕೆ ರಜತ ರಥೋತ್ಸವ ನಡೆಯಲಿದೆ. ಅಂಗಾರಕ ಸಂಕಷ್ಟಹರ ಚತುರ್ಥಿ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ 4.30ರಿಂದ 6ರತನಕ ಕುಂಭಾಸಿ ಶ್ರೀವಿಶ್ವೇಶ್ವರ ಮಹಿಳಾ ಭಜನಾ ಮಂಡಳಿ ಆನೆಗುಡ್ಡೆ ಕುಂಭಾಸಿ ಅವರಿಂದ ಭಜನಾ ಕಾರ್ಯಕ್ರಮ, ಉಡುಪಿ ನಾಗರಾಜ ಶೇಟ್ ಹಾಗೂ ಬಳಗದವರಿಂದ ಭಕ್ತಿ ಸಂಗೀತ ಕಾರ್ಯಕ್ರಮ ಜರುಗಲಿದೆ ಎಂದು ದೇವಳದ ಆಡಳಿತ ಅನುವಂಶಿಕ ಧರ್ಮದರ್ಶಿ ಕೆ. ಶ್ರೀರಮಣ ಉಪಧ್ಯಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಕ್ಕಳಿಗೆ ಬಾಲ್ಯದಿಂದಲೇ ನಮ್ಮ ಕೌಟುಂಬಿಕ ವ್ಯವಸ್ಥೆಗಳು, ಸಂಸ್ಕೃತಿ, ಸಂಸ್ಕಾರಗಳ ಬಗ್ಗೆ ತಿಳಿಸಬೇಕು. ದೇಶದಲ್ಲಿನ ಪದ್ಧತಿ, ಅನ್ಯೋನ್ಯತೆ ಉಳಿದರೆ ಮಾತ್ರ ದೇಶ ಉಳಿಯುತ್ತದೆ. ದೇಶದ, ಸಮಾಜದ ಬೆಳವಣಿಗೆಗೆ ಪ್ರತಿಯೊಂದು ಸಮಾಜದ ಕೊಡುಗೆ ಇದೆ. ಜಾತಿ ಮನೆಯ ಹಾಗೂ ಸಮಾಜದ ಸಾಮರಸ್ಯ, ಸ್ವಾಸ್ಥ್ಯವನ್ನು ಗಟ್ಟಿ ಮಾಡಬೇಕೇ ಹೊರತು ಅದರ ಹೆಸರಿನಲ್ಲಿ ಬೇಧ ಮಾಡಬಾರದು ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಗಳೂರು ವಿಭಾಗ ಸಹ ಕಾರ್ಯವಾಹ ಹರಿಕೃಷ್ಣ ಹೇಳಿದರು. ಅವರು ಸೇವಾ ಸಂಗಮ ಟ್ರಸ್ಟ್ ಕುಂದಾಪುರ ಇವರ ಆಶ್ರಯದಲ್ಲಿ ಕುಂದಾಪುರ ರೋಟರಿ ಲಕ್ಷ್ಮೀ ನರಸಿಂಹ ಕಲಾ ಮಂದಿರದಲ್ಲಿ ಭಾನುವಾರ ನಡೆದ ಬಾಲಸಂಗಮ- ಮಾತೃಸಂಗಮ 2026 ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ವಕ್ತಾರರಾಗಿ ಮಾತನಾಡಿದರು. ಪ್ರಕೃತಿ ಉಳಿಸುವ ಜವಾಬ್ದಾರಿ ಎಲ್ಲರದ್ದಾಗಬೇಕು. ಸ್ವದೇಶಿ ವಸ್ತುಗಳನ್ನು ಉಪಯೋಗಿಸಿದರೆ ದೇಶದ ಏಳಿಗೆ, ಪ್ರಗತಿ ಸಾಧ್ಯವಿದೆ. ನಮ್ಮ ದೇಶದಲ್ಲಿ ಹೆಣ್ಣು ಮಕ್ಕಳನ್ನು ಮತ್ತು ತಾಯಂದಿರನ್ನು ಗೌರವಿಸಿ ಪೂಜೆ ಮಾಡುತ್ತೇವೆ. ಮಕ್ಕಳ ಮುಂದಿನ ಭವಿಷ್ಯ ರೂಪಿಸುವಲ್ಲಿ ತಾಯಂದಿರ ಪಾತ್ರ ಮಹತ್ವದ್ದಾಗಿದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಸಲ್ಲ ಬದಲಾಗಿ ಜಾಗೃತರಾಗಿ ಕಾಪಾಡಿಕೊಳ್ಳಿ ಎಂದು ಕೋಟ ವಿವೇಕ ವಿದ್ಯಾಸಂಸ್ಥೆಯ ನಿವೃತ್ತ ಪ್ರಾಂಶುಪಾಲರಾದ ಚಿತ್ರಾ ಕಾರಂತ ಹೇಳಿದರು. ಅವರು ಭಾನುವಾರ ಪ್ರಾಥಮಿಕ ಆರೋಗ್ಯ ಕೇಂದ್ರ, ಕಾರ್ಕಡ ಸಾಲಿಗ್ರಾಮ ಇಲ್ಲಿ ಯೆನೆಪೋ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಗೆಳೆಯರ ಬಳಗ ಕಾರ್ಕಡ, ಸಾಲಿಗ್ರಾಮ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ, ಕಾರ್ಕಡ – ಸಾಲಿಗ್ರಾಮ ಇವರ ಸಂಯುಕ್ತ ಆಶ್ರಯದಲ್ಲಿ ಡಾ. ಕೋಟ ಶಿವರಾಮ ಕಾರಂತರ ಸ್ಮರಣಾರ್ಥ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಕಾರಂತರ ಬಗ್ಗೆ ಗೆಳೆಯರ ಬಳಗಕ್ಕೆ ಅಗಾಧ ಅಭಿಮಾನದ ಹಿನ್ನಲ್ಲೆಯಲ್ಲಿ ಕಳೆದ ಸಾಕಷ್ಟು ವರ್ಷಗಳಿಂದ ಇಂತಹ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುತ್ತಾ ಬಂದಿದ್ದಾರೆ ಇದು ಶ್ಲಾಘನಾರ್ಹ ಕಾರ್ಯ ಎಂದರು. ಸಭೆಯ ಅಧ್ಯಕ್ಷತೆಯನ್ನು ಗೆಳೆಯರ ಬಳಗ ಕಾರ್ಕಡ ಅಧ್ಯಕ್ಷ ಕೆ. ತಾರಾನಾಥ ಹೊಳ್ಳ ವಹಿಸಿ ಸ್ವಾಗತಿಸಿದರು. ಸಾಲಿಗ್ರಾಮ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಜಯಶೀಲಾ ಆಚಾರ್ಯ ಶುಭಾಶಂಸನೆಗೈದರು ಮುಖ್ಯ ಅತಿಥಿಗಳಾಗಿ ಯೆನೆಪೋಯ ವೈದ್ಯಕೀಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಹೆಬ್ರಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಪ್ರಾಥಮಿಕ ವಿಭಾಗದ ಕೊಂಕಣಿ ಕಂಠಪಾಠ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಹಿರಿಯ ಪ್ರಾಥಮಿಕ ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿ ಸನ್ನಿಧಿ ಖಾರ್ವಿ ದ್ವಿತೀಯ ಸ್ಥಾನ ಪಡೆದಿರುತ್ತಾಳೆ. ಈಕೆ ಅರುಣ್ ಖಾರ್ವಿ ಹಾಗೂ ಭವಾನಿ ಖಾರ್ವಿ ದಂಪತಿಯ ಪುತ್ರಿ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅಕ್ಕಪಡೆ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿದ್ದು, ಇದು ಸಂಕಷ್ಟದಲ್ಲಿರುವ ಮಕ್ಕಳು ಮತ್ತು ಮಹಿಳೆಯರಿಗೆ ನೆರವಾಗುವುದರೊಂದಿಗೆ ರಕ್ಷಣೆ ನೀಡಿ, ಭಯಮುಕ್ತ ವಾತಾವರಣ ಕಲ್ಪಿಸಲಿದೆ ಎಂದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಕ್ಕ ಪಡೆ ಯೋಜನೆಯ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು. ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಭಾಗಿತ್ವದಲ್ಲಿ ಅಕ್ಕಪಡೆ ಕಾರ್ಯನಿರ್ವಹಿಸಲಿದ್ದು, ಹೆಣ್ಣು ಮಕ್ಕಳನ್ನು ದೌರ್ಜನ್ಯಕ್ಕೊಳಗಾಗದಂತೆ ಅವರುಗಳಿಗೆ ಸುರಕ್ಷತಾ ಭಾವನೆ ಮೂಡಿಸಿ, ಸ್ವತಂತ್ರ್ಯವಾಗಿ ಬದುಕಲು ಧೈರ್ಯ ತುಂಬಿಸುವ ಕೆಲಸ ಅಕ್ಕಪಡೆ ಮಾಡಲಿದೆ. ಮಹಿಳೆಯರ ಮತ್ತು ಮಕ್ಕಳ ಸಮಗ್ರ ಅಭಿವೃದ್ಧಿಗೆ ಹಾಗೂ ಸುರಕ್ಷತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಅಕ್ಕಪಡೆ ಕಾರ್ಯನಿರ್ವಹಿಸಲಿದೆ ಎಂದರು. ವಾಹನದಲ್ಲಿ 4 ಜನ ಗೃಹ ರಕ್ಷಕಿಯರು ಮತ್ತು ಪೊಲೀಸ್ ಇಲಾಖೆಯ ಒಬ್ಬರು ಡ್ರೈವರ್ ಅನ್ನು ನಿಯೋಜಿಸಲಾಗಿದ್ದು, ಎರಡು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದ ಅವರು, ತರಬೇತಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿ ಜಿಲ್ಲಾ ಪಂಚಾಯತ್ ನ ವಿಎಸ್ ಆಚಾರ್ಯ ಸಭಾಂಗಣದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರ ಅಧ್ಯಕ್ಷತೆಯಲ್ಲಿ ಸಂಜೀವಿನಿ ಯೋಜನೆಯ ಪ್ರಗತಿ ಸಭೆ ನೆಡೆಯಿತು. ನಂತರ ಅವರು ಮಾತನಾಡಿ, ಗ್ರಾಮೀಣ ಮಹಿಳೆಯರ ಸಾಮಾಜಿಕ ಸಬಲೀಕರಣಕ್ಕಾಗಿ ಸಂಜೀವಿನಿ ಸ್ವ ಸಹಾಯ ಗುಂಪುಗಳನ್ನು ರಚಿಸಲಾಗಿದೆ. ಈಗಾಗಲೇ ಮಹಿಳೆಯರು ಸಮುದಾಯ ಬಂಡವಾಳ ನಿಧಿ, ಬ್ಯಾಂಕ್ ಸಾಲ, ಇಲಾಖೆಗಳ ಸಾಲ ಸೌಲಭ್ಯ ಪಡೆದು ಸ್ವ ಉದ್ಯೋಗ ಚಟುವಟಿಕೆ ನೆಡೆಸುತ್ತಿದ್ದಾರೆ. ಈ ಮಹಿಳೆಯರನ್ನು ಮಾದರಿಯಾಗಿಸಿ ಪ್ರತಿ ಗ್ರಾಮದ ಸಂಜೀವಿನಿ ಮಹಿಳೆಯರು ಸ್ಥಳೀಯ ಸಂಪನ್ಮೂಲಗಳನ್ನು ಬಳಸಿಕೊಂಡು ಉದ್ಯಮಿಗಳನ್ನಾಗಿಸಲು ಸಿಬ್ಬಂದಿಗಳು ಕ್ರಮ ಕೈಗೊಳ್ಳಬೇಕು. ಕೃಷಿ, ಕೃಷಿಯೇತರ, ಪ್ರವಾಸೋದ್ಯಮ ಹಾಗೂ ಎಲ್ಲಾ ಕ್ಷೇತ್ರಗಳಲ್ಲೂ ಮಹಿಳೆಯರು ಪ್ರತಿನಿಧಿಸಬೇಕು. ಇಂದು ಗ್ರಾಮೀಣ ಜನರು ನಿರುದ್ಯೋಗದ ಸಮಸ್ಯೆಯಿಂದ ಬೇರೆ ಕಡೆಗೆ ವಲಸೆ ಹೋಗುತ್ತಿದ್ದಾರೆ. ಸ್ಥಳೀಯವಾಗಿ ಮಹಿಳೆಯರಿಗೆ ಉದ್ಯೋಗ ಕಲ್ಪಿಸುವ ವ್ಯವಸ್ಥೆ ನಿರ್ಮಾಣವಾಗಬೇಕು ಎಂದು ತಿಳಿಸಿದರು. ಪ್ರತಿ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೋತ್ಸವ ನಡೆಸಲಾಗುತ್ತಿದ್ದು ಸಂಜೀವಿನಿ ಸ್ವ ಸಹಾಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಸಾಲಿಗ್ರಾಮದ ಚಿತ್ರಪಾಡಿಯ ಪಿ.ಎಂ ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡುದಿನಗಳ ಕಾಲ ನಡೆಯುವ ಶತಮಾನೋತ್ಸವ ಸಂಭ್ರಮದ ಕಾರ್ಯಕ್ರಮ ಶನಿವಾರ ಶಾಲಾ ವಠಾರದಲ್ಲಿ ಪ್ರಾರಂಭಗೊಂಡಿತು. ಶತಮಾನೋತ್ಸವ ಸಭಾ ಕಾರ್ಯಕ್ರಮವನ್ನು ಬೆಂಗಳೂರಿನ ಉದ್ಯಮಿ ರವೀಂದ್ರ ನಾಯಕ್ ಸಾಲಿಗ್ರಾಮ ಉದ್ಘಾಟಿಸಿ ಮಾತನಾಡಿ, ನಾವು ಉದ್ಯಮರಂಗದಲ್ಲಿ ಗುರುತಿಸಿಕೊಳ್ಳಲು ಅಥವಾ ಈ ಹಂತದಲ್ಲಿ ಬೆಳೆಯಲು ಶಿಕ್ಷಕರ ಪಾತ್ರ ಗಣನೀಯವಾದದ್ದು, ಆದರೆ ಪ್ರಸ್ತುತ ವಿದ್ಯಾಮಾನದಲ್ಲಿ ಮಕ್ಕಳು ಆಧುನಿಕತೆಯಲ್ಲೆ ಮುಳುಗಿ ಅವರ ಸ್ಥಿತಿಗತಿ ಶೋಚನೀಯವಾಗಿದೆ. ಇದಕ್ಕೆ ಪೋಷಕರ ಹೊಣೆಗಾರಿ ಬಹುಪಾಲಾಗಿದೆ ಈ ನಿಟ್ಟಿನಲ್ಲಿ ಮಕ್ಕಳ ಭವಿಷ್ಯವನ್ನು ಪೋಷಕರೇ ಜಾಗೃತರಾಗಿ ಕ್ರಮಿಸುವಾಗೆ ನೋಡಿಕೊಳ್ಳಿ ಎಂದು ಕರೆಕೊಟ್ಟರು. ಸಭೆಯ ಅಧ್ಯಕ್ಷತೆಯನ್ನು ಕೋಟ ಸಹಕಾರಿ ಸಂಘದ ಅಧ್ಯಕ್ಷ ಡಾ. ಕೃಷ್ಣಕಾಂಚನ್ ವಹಿಸಿದ್ದರು. ಮುಖ್ಯ ಅಭ್ಯಾಗತರಾಗಿ ಉಡುಪಿ ಇಂಡಸ್ಟ್ರಿಯಲ್ ಕೋ. ಅಪರೇಟಿವ್ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಹೆಗ್ಡೆ, ಬ್ರಹ್ಮಾವರ ಪತ್ರಕರ್ತಸಂಘದ ಅಧ್ಯಕ್ಷ ರಾಜೇಶ್ ಗಾಣಿಗ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷೆ ಸುಕನ್ಯಾ ಜೆ. ಶೆಟ್ಟಿ, ಪಟ್ಟಣಪಂಚಾಯತ್ ಮುಖ್ಯಾಧಿಕಾರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಗಣರಾಜ್ಯೋತ್ಸವದ ದಿನಾಚರಣೆಯ ಅಂಗವಾಗಿ 2026ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ. 50ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ಸಂಪರ್ಕ ಸಂಖ್ಯೆ:080-22107705), ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ, ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ಲೈನ್ https://kpp.karnataka.gov.in ನಲ್ಲಿ ರಿಯಾಯಿತಿ ಸೌಲಭ್ಯ ಲಭ್ಯವಿದ್ದು, ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದ್ದು, ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 700ಕ್ಕೂ ಹೆಚ್ಚಿನ ಶೀರ್ಷಿಕೆಗಳನ್ನು…
