Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತೆಕ್ಕಟ್ಟೆ, ವಿಶ್ವ ವಿನಾಯಕ ಸಿ.ಬಿ.ಎಸ್.ಇ ಶಾಲೆಯ 19ನೇ ವಾರ್ಷಿಕೋತ್ಸವವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಿ.ಎಮ್ ವಿದ್ಯಾಸಂಸ್ಥೆಗಳ ಆಡಳಿತ ಮುಖ್ಯಸ್ಥರಾದ ಪ್ರಕಾಶ್ಚಂದ್ರ ಶೆಟ್ಟಿಯವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಶಾಲೆಯಲ್ಲಿ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಿಗೆ ಮೌಲ್ಯಗಳನ್ನು ಕಲಿಸಿದರೆ ಅಂತಹ ವಿದ್ಯಾರ್ಥಿಗಳು ಸಮಾಜಕ್ಕೆ ಮಾದರಿ ವ್ಯಕ್ತಿಗಳಾಗಿ ರೂಪುಗೊಳ್ಳುತ್ತಾರೆ ಎಂದು ತಿಳಿಸಿದರು. ಮಕ್ಕಳು ಮನೆಯಲ್ಲಿ ತಂದೆ ತಾಯಿಯಿಂದ ಸಂಸ್ಕಾರ ಕಲಿಯುತ್ತಾರೆ ತಂದೆ ತಾಯಿಗಳು ಹಾಗೂ ಗುರು ಹಿರಿಯರು ಮಕ್ಕಳಿಗೆ ಆದರ್ಶರೂಪವಾಗಿದ್ದರೆ ನಾವು ಉತ್ತಮ ಸಮಾಜವನ್ನು ಕಟ್ಟಬಹುದು ಎಂದು ತಿಳಿಸಿದರು. ಕಾರ್ಯಕ್ರಮದ ಗೌರವ ಅತಿಥಿಗಳಾದ ಡಾ. ಶರಣ್ಯ ಶೆಟ್ಟಿಯವರು ಮಾತನಾಡಿ ಮಕ್ಕಳ ಯೌವನಾವಸ್ಥೆಯಲ್ಲಿ ಮಕ್ಕಳ ಮನಸ್ಸನ್ನು ಅರಿತು ಮಕ್ಕಳಲ್ಲಿನ ಆತಂಕ ಭಯವನ್ನು ಹೋಗಲಾಡಿಸುವುದು ಶಿಕ್ಷಕರ ಹಾಗೂ ಪೋಷಕರ ಕರ್ತವ್ಯವಾಗಿದೆ. ಹದಿಹರೆಯದ ಮಕ್ಕಳ ಮಾನಸಿಕ ತುಮುಲಗಳನ್ನು ದೂರವಾಗಿಸಲು ಆತ್ಮೀಯ ಸಂವಹನದಿಂದ ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಸುವ ಕೆಲಸ ಪೋಷಕರಿಂದ ಆಗಬೇಕಾಗಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲಾ ಮ್ಯಾನೇಜಿಂಗ್ ಡೈರೆಕ್ಟರ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಮದರ್ ತೆರೇಸಾ ಮೆಮೋರಿಯಲ್ ಸ್ಕೂಲಿನ 3ರಿಂದ 7ನೇ ತರಗತಿ ವಿದ್ಯಾರ್ಥಿಗಳು ಡಿ.8ರಂದು ಈಡಿಗರ ಸಭಾಭವನ ಹೊಸನಗರ  ಶಿಮೊಗ್ಗದಲ್ಲಿ ನಡೆದ ರಾಜ್ಯಮಟ್ಟದ ಐಕೀ ಸ್ಕೂಲ್ ಆಫ್ ಮಾರ್ಟಿಯಲ್ ಆರ್ಟ್ಸ್ ಶೊಟೋಕಾನ್ ಕರಾಟೆ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವುದರೊಂದಿಗೆ ರಾಜ್ಯ ಮಟ್ಟದ ಕರಾಟೆ ಚಾಂಪಿಯನಶಿಪ್ ಟ್ರೋಫಿ ತಮ್ಮದಾಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ಸರ್ವಾಂಗೀಣ ಪ್ರಗತಿಗೆ ಸಂಸ್ಥೆಯ ಆಡಳಿತಾಧಿಕಾರಿಧ್ವಯರಾದ ಕುಮಾರಿ ಶಮಿತಾ ರಾವ್ ಮತ್ತು ಕುಮಾರಿ ರೆನಿಟಾ ಲೋಬೊ, ಮುಖ್ಯಶಿಕ್ಷಕ ರವಿದಾಸ್ ಶೆಟ್ಟಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಶುಭಕೋರಿರುತ್ತಾರೆ. ವಿಜೇತರ ಯಾದಿ : ವೈಯಕ್ತಿಕ ವಿಭಾಗಪ್ರಥಮ ಸ್ಥಾನ1.ಸಮೃದ್ I2.ಸಿಂಧು I3.ಹಿಮಾನಿ I4.ಆರಾಧ್ಯ I5.ಆಧ್ಯಾಪ್ರಭು I6.ತನುಶ್ರೀ I7.ಧಕ್ಷಯ್ Iದ್ವಿತೀಯ ಸ್ಥಾನ8.ಧನ್ವಂತ II9.ಅನ್ವಿತಾ II10.ರಶ್ವಿ II11.ನಿಹಾಲ್ II12.ಬ್ರಾಹ್ಮೀ II13.ಸಮನ್ವಿ II14.ಸಿದ್ರಾ II15.ಸುಹಾಸ್ II16.ಸೈಫ್ IIತೃತೀಯ ಸ್ಥಾನ17.ಸಾಯಿಶ್ III18.ಗ್ರೀಷ್ಮ III19.ತನ್ವಿ III20.ಸ್ಪಂದನಾ III21.ಅಮೂಲ್ಯ III22.ತನ್ಮಯ್ III23.ಅಹಾನ್ III24.ಪ್ರಗತಿ III25.ಪ್ರಣತಿ III26.ದಶಮಿ III27.ದೀಪ್ತಾ III28.ಸಾಥ್ವಿಕ್ III29.ಮೆಹರಾನ್ III30.ಸಮೃದ್ಧಿ III31.ರಾಣಿ ಮನಸ್ವಿ III32.ನಿಧಿಕಾ III33.ಅಫಹ್ವಾನ್ III34.ಅಶ್ವಿನ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಕೋಟೇಶ್ವರ ರಾಷ್ಟ್ರಿಯ ಹೆದ್ದಾರಿ 66ರ ಸಹನಾ ಹಾಲ್ ಎದುರುಗಡೆ ಪ್ಲಾಸ್ಟಿಕ್ ತಯಾರಿಸುವ ಕಚ್ಚಾ ವಸ್ತು ಸಾಗಿಸುತ್ತಿದ್ದ ಲಾರಿವೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿಹೊಡೆದು ಪಲ್ಟಿಯಾದ ಘಟನೆ ಡಿ.10ರ ಮಂಗಳವಾರದಂದು ಮುಂಜಾನೆ ನಡೆದಿದೆ. ಮಂಗಳೂರುನಿಂದ ಸೋಲಾಪುರಕ್ಕೆ ಪ್ಲಾಸ್ಟಿಕ್ ತಯಾರಿಸುವ ಕಚ್ಚಾ ವಸ್ತು ಸಾಗಿಸುತ್ತಿದ್ದ ಲಾರಿವು ಬೆಳಗಿನ ಜಾವ ಚಾಲಕ ನಿದ್ರೆ ಮಂಪರಿನಲ್ಲಿ ಡಿವೈಡರ್‌ಗೆ ಡಿಕ್ಕಿಹೊಡೆದು ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಚಾಲಕ ಪ್ರಾಣಪಾಯದಿಂದ ಪಾರಾಗಿದ್ದು ಲಾರಿ ಜಖಂಗೊಂಡಿದೆ. ಕುಂದಾಪುರ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಕುಂದಾಪುರ: ಇಲ್ಲಿನ ಕೋಟೇಶ್ವರದ ಹಾಲಾಡಿ ಮಾರ್ಗದ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿಯಾಗಿ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ಗುಲ್ವಾಡಿ ಗ್ರಾಮದ ನಿವಾಸಿ ಶಶಿಧರ (56) ಮೃತಪಟ್ಟಿದ್ದಾರೆ. ಶಶಿಧರ ಅವರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಾರು ಚಾಲಕ ಕೋಟೇಶ್ವರ ಕಡೆಯಿಂದ ಹಾಲಾಡಿ ಕಡೆಗೆ ಅತೀ ವೇಗ ಚಾಲನೆ ಮಾಡಿಕೊಂಡು ತೀರ ಎಡಕ್ಕೆ ಚಲಾಯಿಸಿ ರಸ್ತೆ ದಾಟಲು ನಿಂತಿದ್ದ ಶಶಿಧರ ಅವರಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭಿರ ಗಾಯಗೊಂಡಿದ್ದರು. ಅವರನ್ನು ಕೂಡಲೇ ಚಿಕಿತ್ಸೆಗೆ ಕುಂದಾಪುರ ಸರಕಾರಿ ಆಸ್ಪತ್ರಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಪರೀಕ್ಷೀಸಿದ ವೈದ್ಯರು ಮೃತಪಟ್ಟಿರುದಾಗಿ ತಿಳಿಸುತ್ತಾರೆ. ಈ ಬಗ್ಗೆ ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಲಾ ಪ್ರಕಾರಗಳು ಮನುಷ್ಯನ ಬದುಕಿಗೆ ಸುಖ, ಸಂತೋಷ, ನೆಮ್ಮದಿಯನ್ನು ತಂದುಕೊಟ್ಟು ಆಯುಷ್ಯ ಮತ್ತು ಆರೋಗ್ಯವನ್ನು ವೃದ್ಧಿಸುವ ಸಾಧನವಾಗಿದೆ. ಈ ನಿಟ್ಟಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಂಘಟಿಸುತ್ತಿರುವ ಕಲಾಕ್ಷೇತ್ರ-ಕುಂದಾಪುರ ಟ್ರಸ್ಟ್ ಕುಂದಾಪುರದಲ್ಲಿ ಕಲಾಸಿರಿವಂತಿಕೆಯನ್ನು ಹಾಗೂ ಪ್ರೇಕ್ಷಕರ ಮನಸ್ಸನ್ನು ಪ್ರಫುಲ್ಲಗೊಳಿಸುತ್ತಿದ್ದಾರೆ ಎಂದು ಯಕ್ಷಗಾನ ಭಾಗವತ ರಾಘವೇಂದ್ರ ಮಯ್ಯ ಹೇಳಿದರು. ಅವರು ಕಲಾಕ್ಷೇತ್ರ ಕಛೇರಿಯಲ್ಲಿ ಇನಿದನಿ ಆಹ್ವಾನ ಪತ್ರಿಕೆ ಅನಾವರಣಗೊಳಿಸಿ ಮಾತನಾಡಿದರು. ಇನಿದನಿ ಎಂಬ ಸಂಗೀತ ಕಾರ್ಯಕ್ರಮವು ಕರಾವಳಿ ಜಿಲ್ಲೆಯಲ್ಲೇ ಅತೀದೊಡ್ಡ ಕಾರ್ಯಕ್ರಮವೆಂಬುವುದು ಕುಂದಾಪುರದವರಾದ ನಮಗೆ ಹೆಮ್ಮೆಯ ವಿಚಾರ ಜೊತೆಗೆ, ಯಕ್ಷಗಾನ ಭಾಗವತನಿಂದ ಇನಿದನಿಗೆ ಚಾಲನೆ ನೀಡಿರುವುದು ಅದು ಯಕ್ಷಗಾನ ಕ್ಷೇತ್ರಕ್ಕೆ ನೀಡಿದ ಗೌರವವೆಂದು ನಾನು ಭಾವಿಸುತ್ತೇನೆ ಎಂದರು. ಅತಿಥಿಯಾಗಿದ್ದ ಡಾ. ಚಿಂತನಾ ರಾಜೇಶ್ ಮಾತನಾಡಿ, ಮಕ್ಕಳಲ್ಲಿ ಹಲವು ಪ್ರತಿಭೆಗಳಿದ್ದರೂ ಅದನ್ನು ಗುರುತಿಸದೆ ಕೇವಲ ಶಿಕ್ಷಣ ಕ್ಷೇತ್ರದಲ್ಲಿ ಮಾತ್ರ ಅವರನ್ನು ಮುನ್ನುಗ್ಗುವಂತೆ ಒತ್ತಾಯಿಸುತ್ತಿರುವುದು ಇತೀಚೆಗೆ ಕಾಣುತ್ತಿದ್ದೇವೆ ಇದು ಸರಿಯಲ್ಲ. ಕಲೆ ಮತ್ತು ಸಂಸ್ಕೃತಿಗಳು ವಿದ್ಯಾಭ್ಯಾಸಕ್ಕೆ ಪೂರಕ. ಇದು ಮಕ್ಕಳ ಭವಿಷ್ಯತ್ತಿಗೆ ಪರಿಣಾಮಕಾರಿ.ಇನಿದನಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ,ಡಿ.10: ಕರ್ನಾಟಕ ರಾಜಕಾರಣದ ಮುತ್ಸದ್ದಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವ ಎಸ್. ಎಂ. ಕೃಷ್ಣ ಅವರು ನಿಧನರಾಗಿದ್ದಾರೆ. ಡಿ.10ರ ನಸುಕಿನ ಜಾವ 2:30ರ ಸುಮಾರಿಗೆ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು. ಎಸ್ಎಂ ಕೃಷ್ಣ ಅವರ ನಿಧನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಇಂದಿನಿಂದ ಮೂರು ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಿದೆ. ಇದೇ ವೇಳೆ ಬುಧವಾರ (ಡಿಸೆಂಬರ್ 11) ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಡಿಸೆಂಬರ್ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದೆ. ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಅಗಲಿದ ಹಿರಿಯ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಾಗುವುದು. ಡಿಸೆಂಬರ್ 11 ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಖಾಸಗಿ ಶಾಲೆಗಳಿಗೂ ರಜೆಬುಧವಾರ ಖಾಸಗಿ ಶಾಲಾ-ಕಾಲೇಜುಗಳಿಗೂ ರಜೆ ಘೋಷಣೆ ಮಾಡಲಾಗಿದೆ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಡಿ. 08 ರಂದು ಶ್ರೀ ಭಗವದ್ಗೀತಾ ಅಭಿಯಾನ-ಕರ್ನಾಟಕ 2024  ಶ್ರೀ ಸೋಂದಾ ಸ್ವರ್ಣವಲ್ಲೀ  ಮಹಾಸಂಸ್ಥಾನ ಆಯೋಜಿಸಿದ  ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ದಿವೀಶ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ತೆಕ್ಕಟ್ಟೆ, ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್‍ನಲ್ಲಿ ಮಕ್ಕಳಿಗೆ ಏರ್ಪಡಿಸಿದ ಸಾಂಸ್ಕ್ರತಿಕ ಮತ್ತು ಸಾಹಿತ್ಯಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಖ್ಯಾತ ಪತ್ರಕರ್ತ ಜಾನ್ ಡಿ’ಸೋಜಾ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳಿಗೆ ಬಹುಮಾನ ವಿತರಣೆಯನ್ನು ಮಾಡಿ ಮಾತನಾಡಿ, ಸ್ಪರ್ಧೆಗಳಲ್ಲಿ ಭಾಗವಹಿಸಿ ಗೆಲುವು ಸಾಧಿಸಿದ ಸ್ಪರ್ಧಿಗಳಷ್ಟೇ ಶ್ರೇಷ್ಟರೆಂದು ಭಾವಿಸಬಾರದು. ಅವರ ಗೆಲುವಿಗೆ ಕಾರಣರಾದ ಹಾಗೂ ಸಮಾನ ಸ್ಪರ್ಧೆಯನ್ನು ನೀಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸ ಬೇಕು. ಪ್ರತೀ ಸೋಲಿನಿಂದ ಗೆಲುವಿನ ದಾರಿಯನ್ನು ಕಂಡುಕೊಂಡು ಮುನ್ನಡೆಯಬೇಕು. ವಿದ್ಯಾರ್ಥಿಗಳಲ್ಲಿ ಧನಾತ್ಮಕ ಸ್ಪರ್ಧಾ ಮನೋ ಭಾವನೆ ಇರಬೇಕೆಂದು ಪ್ರತೀಯೊಬ್ಬ ವಿದ್ಯಾರ್ಥಿಯೂ ವಿವಿಧ ಕ್ಷೇತ್ರಗಳಲ್ಲಿ ಪ್ರತಿಭೆ ಹೊಂದಿರುತ್ತಾರೆ, ಅದನ್ನು ಗುರುತಿಸಿ ಸರಿಯಾದ ಮಾರ್ಗದರ್ಶನ ದೊರೆತರೆ ಜೀವನದಲ್ಲಿ ಸಾಧನೆಯನ್ನು ಮಾಡಬಹುದು ಎಂದು ತಿಳಿಸಿದರು. ಶಾಲಾ ಅಕಾಡೆಮಿಕ್ ಡೈರೆಕ್ಟರ್ ದಿವಾಕರ ಶೆಟ್ಟಿ ಅವರು ಮಾತನಾಡಿ, ಜೀವನದಲ್ಲಿ ಸಾಧನೆ ಹಾಗೂ ಯಶಸ್ಸುಗಳಿಸಿದ ವ್ಯಕ್ತಿಗಳಿಂದ ವಿದ್ಯಾರ್ಥಿಗಳು ಪ್ರೇರಿತರಾಗಬೇಕೆಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಮ್ಯಾನೇಜಿಂಗ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಕ್ಕಳು ಪೌಷ್ಠಿಕಾಂಶದಿಂದ ಕೂಡಿದ ಆಹಾರವನ್ನು ಸೇವಿಸಿದರೂ ಸಹ ಜಂತುಹುಳುಗಳ ಭಾದೆಯಿಂದ ಅಪೌಷ್ಟಿಕತೆ ಹಾಗೂ ರಕ್ತಹೀನತೆ ಉಂಟಾಗಿ ಮಕ್ಕಳ ಶಾರೀರಿಕ ಮತ್ತು ಬೌದ್ಧಿಕ ಬೆಳವಣಿಗೆ ಮೇಲೆ ಪರಿಣಾಮ ಬೀರಲಿದೆ. ಜಂತುಹುಳುಗಳ ಬಾಧೆಯಿಂದ ಮಕ್ಕಳ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ 1 ರಿಂದ 19 ವರ್ಷದೊಳಗಿನ ಜಿಲ್ಲೆಯ ಎಲ್ಲಾ ಮಕ್ಕಳಿಗೆ ಅಲ್ಬೆಂಡಾಝೋಲ್ ಮಾತ್ರೆಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಒಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಪದವಿ ಶಿಕ್ಷಣ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆ, ಕೈಗಾರಿಕಾ ಶಿಕ್ಷಣ ಮತ್ತು ಉದ್ಯೋಗ ಇಲಾಖೆ, ಕಾರ್ಮಿಕ ಇಲಾಖೆ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಶಿಕ್ಷಣ ಕ್ಷೇತ್ರದಲ್ಲಿ ಸದಾ ನವೀನತೆ ಅಳವಡಿಸಿ ವಿದ್ಯಾರ್ಥಿಗಳಿಗೆ ದೈಹಿಕ ಮತ್ತು ಮಾನಸಿಕ ಮನೋಸ್ಥೈರ್ಯವನ್ನು ಬಲಪಡಿಸಿ ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆಗೆ ಶ್ರಮಿಸುತ್ತಿರುವ ಮದರ್ ತೆರೇಸಾ ಎಜುಕೇಶನ್ ಟ್ರಸ್ಟ್ 3ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಜೀವನ ಕೌಶಲ್ಯಗಳು ಕುರಿತು ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ಸಂಸ್ಥೆಯ ಆಡಳಿತಾಧಿಕಾರಿ ಶಮಿತಾ ರಾವ್ ದೀಪ ಬೆಳಗಿಸುವುದರ ಮೂಲಕ ಕಾರ್ಯಾಗಾರಕ್ಕೆ ಚಾಲನೆ ನೀಡಿದರು. ರಾಷ್ಟ್ರಮಟ್ಟದ ಸಂಪನ್ಮೂಲ ವ್ಯಕ್ತಿಗಳಾದ ಪ್ರೊಫೆಸರ್ ಆಶಾದೇವಿ ಎಮ್ (ಶಿಕ್ಷಣತಜ್ಞೆ, ಮನಶಾಸ್ತ್ರಜ್ಞರು, ನರ್ಸರಿ ಮತ್ತು ಮೊಂಟೆಸ್ಸರಿ ತರಬೇತುದಾರರು ಹಾಗೂ ಸಲಹೆಗಾರರು, ಬೆಂಗಳೂರು) ಇವರು ಹಲವಾರು ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳಲ್ಲಿ ಹೇಗೆ ಸಾಮಾಜಿಕ ಜವಾಬ್ದಾರಿ ಮತ್ತು ಸಾಮಾಜಿಕ ಸವಾಲುಗಳನ್ನು ಎದುರಿಸಲು ನೈತಿಕ ಪ್ರಜ್ಞೆ ಸಹಾಯಕ, ವರ್ತನೆ, ಭಾವನಾತ್ಮಕ ಬುದ್ಧಿವಂತಿಕೆ, ಸ್ವಯಂ ನಿಯಂತ್ರಣ, ಧನಾತ್ಮಕ ಮನೋವೈಜ್ಞಾನಿಕ ಮಾರ್ಗದರ್ಶನ, ಸಾಮಾಜಿಕ ಬುದ್ಧಿವಂತಿಕೆ, ನಾಯಕತ್ವದ ಕೌಶಲ್ಯ, ಹೊಸ ಹೊಸ ಆಲೋಚನೆ, ಆತ್ಮವಿಶ್ವಾಸ, ಸಾಮಾಜಿಕ ರೂಢಿಗಳು, ವಿಷಯಜ್ಞಾನ, ಚರ್ಚೆ, ಕೀಳರಿಮೆ, ಕಲಿಕೆಯ ಆಸಕ್ತಿ, ಅಭ್ಯಾಸದಲ್ಲಿ ಅಭಿಪ್ರೇರಣೆ, ಕಲಿಕಾ ಹವ್ಯಾಸಗಳು, ಸಮಯನಿರ್ವಹಣೆ,…

Read More