ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಪ್ರಕೃತಿ ಚಿಕಿತ್ಸಾ ಪದ್ಧತಿಯು ಅತ್ಯುತ್ತಮ ಜೀವನವನ್ನು ನಡೆಸಲು ರಹದಾರಿಯಾಗಿದ್ದು ಇದರ ಮೂಲ ತತ್ವಗಳನ್ನು ಪಾಲಿಸುವುದರಿಂದ ಜೀವನ ಶೈಲಿ ಬದಲಾವಣೆಯಾಗುವುದಲ್ಲದೇ ಯೋಗಭ್ಯಾಸಗಳಿಂದ ಆಯುಷ್ಯ ವೃದ್ಧಿಯಾಗುತ್ತದೆ ಎಂದು ಪ್ರಕೃತಿ ಚಿಕಿತ್ಸಾ ತಜ್ಞ ಡಾ. ಮಹಮ್ಮದ್ ರಫೀಕ್ ತಿಳಿಸಿದರು. ಅವರು ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ಕಾಲೇಜು ಆಯೋಜಿಸಿದ್ದ 7ನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನದ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಪ್ರಕೃತಿ ಚಿಕಿತ್ಸೆ ಮತ್ತು ಯೋಗವನ್ನು ಸರಿಯಾಗಿ ಪಾಲಿಸುವುದರಿಂದ ಮಾನಸಿಕ ಸ್ಥಿತಿಗತಿಗಳನ್ನು ಸಮತೋಲನದಲ್ಲಿಟ್ಟುಕೊಳ್ಳಬಹುದು. ಆ ಮೂಲಕ ಎಲ್ಲಾ ವರ್ಗದ ಮತ್ತು ವಯೋಮಾನದವರಿಗೂ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಡಾ. ಗ್ರೀಷ್ಮಾ ವಿವೇಕ್ ಆಳ್ವ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಶಿಕ್ಷಣವನ್ನು ಪ್ರತಿಯೊಬ್ಬರು ಅಳವಡಿಸಿಕೊಂಡಲ್ಲಿ ಜೀವನವನ್ನು ಅನುಭವಿಸಲು ಮತ್ತು ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಪ್ರಥಮ ವರ್ಷದ ವಿದ್ಯಾರ್ಥಿ ಯೋಗೀಶ್ವರನ್ ಕಾರ್ಯಕ್ರಮ ನಿರೂಪಿಸಿ, ಯೋಗ ವಿಭಾಗದ ಮುಖ್ಯಸ್ಥೆ ಡಾ. ಅರ್ಚನಾ ಸ್ವಾಗತಿಸಿ,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಮೊಳಹಳ್ಳಿ ಗ್ರಾಮದ ನಿವಾಸಿ ವಿಶ್ವನಾಥ್ (53) ಅವರು ಭಾನುವಾರದಂದು ಎದೆನೋವಿಗೊಳಗಾಗಿ ಮೃತಪಟ್ಟಿದ್ದಾರೆ. ಅವರು ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದು ಮಧ್ಯಾಹ್ನದ ವೇಳೆ ಎದೆನೋವು ಕಾಣಿಸಿದ್ದು, ಕೂಡಲೇ ಸ್ಥಳೀಯ ಕ್ಲಿನಿಕ್ಗೆ ಕರೆದುಕೊಂಡು ಹೋಗಲಾಗಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಕೋಟ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಕಾರ್ತಿಕ ಸಂಕಷ್ಟಹರ ಚತುರ್ಥಿ ದೀಪೋತ್ಸವವು ನ.18ರಂದು ನಡೆಯಿತು. ಬೆಳಗ್ಗೆ ಪ್ರಾತಃಪೂಜೆ, ಪಂಚಾಮೃತಾಭಿಷೇಕ ಪೂರ್ವಕ ಉಪನಿಷತ್ ಕಲಶಾಭಿಷೇಕ, 1008 ತೆಂಗಿನಕಾಯಿ ಗಣಪತಿ ಹೋಮ, ಮಧ್ಯಾಹ್ನ ಮಹಾಪೂಜೆ, ಅನ್ನ ಸಂತರ್ಪಣೆ ಹಾಗೂ ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನಗೊಂಡಿತು. ರಾತ್ರಿ ಮಹಾರಂಗ ಪೂಜೆ, ರಜತ ರಥೋತ್ಸವ, ದೀಪೋತ್ಸವ ಹಾಗೂ ಸುಡುಮದ್ದು ಪ್ರದರ್ಶನ ನಡೆಯಿತು. ಈ ಸಂದರ್ಭದಲ್ಲಿ ಆಡಳಿತ ಧರ್ಮದರ್ಶಿ ಕೆ. ಶ್ರೀರಮಣ ಉಪಾಧ್ಯಾಯ, ವಿಶ್ರಾಂತ ಆಡಳಿತ ಧರ್ಮದರ್ಶಿ ಕೆ. ಸೂರ್ಯನಾರಾಯಣ ಉಪಾಧ್ಯಾಯ, ಧರ್ಮದರ್ಶಿ ಕೆ. ನಿರಂಜನ ಉಪಾಧ್ಯಾಯ, ಪರ್ಯಾಯ ಅರ್ಚಕ ಕೆ. ಕೃಷ್ಣಾನಂದ ಉಪಾಧ್ಯಾಯ, ಸಹೋದರರು, ವ್ಯವಸ್ಥಾಪಕ ನಟೇಶ್ ಕಾರಂತ್ ತೆಕ್ಕಟ್ಟೆ ಇನ್ನಿತರರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಶಿಕ್ಷಣ ಕ್ಷೇತ್ರದಲ್ಲಿ ಸದಾ ನಾವಿನ್ಯತೆಯನ್ನು ಅಳವಡಿಸಿ ಶಿಕ್ಷಕರಲ್ಲಿ ವೃತ್ತಿಪರ ಮನೋಸ್ಥೈರ್ಯವನ್ನು ಬಲಪಡಿಸಿ ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆಗೆ ಶ್ರಮಿಸುತ್ತಿರುವ ಶಂಕರನಾರಾಯಣ ಮದರ್ ತೆರೇಸಾ ಎಜುಕೇಶನ್ ಟ್ರಸ್ಟ್ ಸೋಮವಾರದಂದು ಎಲ್ ಕೆಜಿ ಯಿಂದ ಹತ್ತನೇ ತರಗತಿ ಶಿಕ್ಷಕರಿಗೆ ಒಂದು ದಿನದ ವ್ಯಕ್ತಿತ್ವ ವಿಕಸನ ಮತ್ತು ವೃತ್ತಿಪರ ಬೆಳವಣಿಗೆ ಕಾರ್ಯಾಗಾರವನ್ನು ಆಯೋಜಿಸಿತು. ಸಂಸ್ಥೆಯ ಆಡಳಿತಾಧಿಕಾರಿ ಶಮಿತಾ ರಾವ್ ದೀಪ ಬೆಳಗಿಸುವುದರ ಮೂಲಕ ಕಾರ್ಯಾಗಾರಕ್ಕೆ ಚಾಲನೆ ನೀಡಿದರು. ರಾಷ್ಟ್ರಮಟ್ಟದ ಸಂಪನ್ಮೂಲ ವ್ಯಕ್ತಿಗಳಾದ ಮನೋಜ್ ಎಮ್. ಭಟ್ (ಪ್ರಾಂಶುಪಾಲರು ಎನ್ಆಯ್ಈಎಸ್ ರೋಟರಿ ಪಬ್ಲಿಕ್ ಸ್ಕೂಲ್ ಹುಬ್ಬಳ್ಳಿ ) ಹಲವು ಪ್ರಾತ್ಯಕ್ಷಿಕೆಗಳ ಮೂಲಕ ಶಿಕ್ಷಕರಿಗೆ ಚಟುವಟಿಕೆಗಳನ್ನು ನಡೆಸಿದರು. ವಿದ್ಯಾರ್ಥಿಗಳಲ್ಲಿ ಹೇಗೆ ಸಾಮಾಜಿಕ ಜವಾಬ್ದಾರಿ ಮತ್ತು ಸಾಮಾಜಿಕ ಸವಾಲುಗಳನ್ನು ಎದುರಿಸಲು ನೈತಿಕ ಪ್ರಜ್ಞೆಯನ್ನು ಬೆಳೆಸಬಹುದು. ಸಂಕೇತ, ಮಾರ್ಗದರ್ಶನ, ನಾಯಕತ್ವದ ಕೌಶಲ್ಯ, ಹೊಸ ಹೊಸ ಆಲೋಚನೆ, ಆತ್ಮವಿಶ್ವಾಸ, ದೇಹಭಾಷೆ, ವಿಷಯಜ್ಞಾನ, ಚರ್ಚೆ, ಕೀಳರಿಮೆ, ಕಲಿಕೆಯ ಆಸಕ್ತಿ ಮುಂತಾದ ವಿಷಯಗಳ ಕುರಿತು ಸುಧೀರ್ಘ ಚರ್ಚೆ ನಡೆಸಿದರು. ಎಲ್ಲಾ ಶಿಕ್ಷಕರಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಶಟಲ್ ಬ್ಯಾಡ್ಮಿಂಟನ್ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾರ್ಥನಾ ಪೈ ಅವರನ್ನು ಗಂಗೊಳ್ಳಿಯ 6 ಎಎಮ್ ಬ್ಯಾಡ್ಮಿಂಟನ್ ಫ್ರೆಂಡ್ಸ್ ಇವರ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಒಳಾಂಗಣದಲ್ಲಿ ಭಾನುವಾರ ನಡೆದ ಸನ್ಮಾನ ಕಾರ್ಯಕ್ರಮ ಮತ್ತು ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ರಾಘವೇಂದ್ರ ಶೇರುಗಾರ್ ಅವರು ಪ್ರಾರ್ಥನಾ ಪೈ ಅವರನ್ನು ಸನ್ಮಾನಿಸಿ ಗೌರವಿಸಿದರು. 6 ಎಎಮ್ ಬ್ಯಾಡ್ಮಿಂಟನ್ ಫ್ರೆಂಡ್ಸ್ನ ಮನೋಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪತ್ರಕರ್ತ ಬಿ. ರಾಘವೇಂದ್ರ ಪೈ, ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸೂರಜ್ ಸಾರಂಗ್, ಎಸ್.ವಿ. ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ದೀಕ್ಷಿತ್ ಮೇಸ್ತ, ಸಂಘದ ಸದಸ್ಯರಾದ ಲಿಪ್ಟನ್ ಒಲಿವೇರಾ, ರಾಮ ಪೂಜಾರಿ, ನಿಶಾಕಾಂತ್, ಚೇತನ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: “12ನೇ ಶತಮಾನದಲ್ಲಿ ಬಸವಣ್ಣ ಕಂಡ ಸಮಾಜ ಸುಧಾರಣೆ ಕನಸು ಕುಂದಾಪುರ ತಾಲೂಕಿನ ಜನ್ನಾಡಿ ಮತ್ತು ಮಣಿಗೇರಿಯಲ್ಲಿ ಸಮಾಜಸೇವಕ ಎಚ್.ಎಸ್.ಶೆಟ್ಟಿ ಮೂಲಕ ಸಾಕಾರಗೊಂಡಿದೆ. ಕೊರಗ ಸಮಾಜದ 14 ಕುಟುಂಬಗಳಿಗೆ ತಲಾ 14 ಲಕ್ಷ ರೂ. ವೆಚ್ಚದಲ್ಲಿ ಅವರು ನಿರ್ಮಿಸಿರುವ 14 ಮನೆಗಳು ಕೊರಗ ಸಮಾಜದ ಪರಿವರ್ತನೆಗೆ ದಿಕ್ಯೂಚಿಯಾಗಲಿದೆ,” ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ನುಡಿದರು. ಹಾರ್ದಳ್ಳಿ-ಮಂಡಳ್ಳಿ ಗ್ರಾಮದ ಜನ್ನಾಡಿ ಮತ್ತು ಮಣಿಗೇರಿ ಕೊರಗರ ಕಾಲೊನಿಯಲ್ಲಿ ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೊರಗ ಕುಟುಂಬಗಳಿಗೆ ನಿರ್ಮಿಸಿ ಕೊಟ್ಟಿರುವ ಮನೆಗಳ ಹಸ್ತಾಂತರ ಸಮಾರಂಭವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು. “ಉಡುಪಿ ಪೇಜಾವರ ಮಠದ ಯತಿಗಳಮಾರ್ಗದರ್ಶನದಲ್ಲಿ ಮನೆ ನಿರ್ಮಾಣಗೊಂಡಿರುವುದು ಸಂತಸ ನೀಡಿದೆ. ಮಠದ ಹಿರಿಯ ಯತಿ ಶ್ರೀ ವಿಶ್ವೇಶತೀರ್ಥ ಶ್ರೀಪಾದರು 18 ವರ್ಷ ಹಿಂದೆ ಚನ್ನಪಟ್ಟಣದಲ್ಲಿ ದಲಿತ ಕೇರಿಯಲ್ಲಿ ಸಹಭೋಜನಕ್ಕೆ ಚಾಲನೆ ನೀಡಿ ಕ್ರಾಂತಿ ಮಾಡಿದ್ದರು. ಅವರ ಹೆಜ್ಜೆಯಲ್ಲೇ ಈಗಿನ ಯತಿಗಳು ಸಾಗುತ್ತಿದ್ದಾರೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಷ್ಟ್ರೀಯ ಸೇವಾ ಯೋಜನೆ ಘಟಕ ಸರಕಾರಿ ಪದವಿ ಪೂವ೯ ಕಾಲೇಜು ಬೈಂದೂರು, ಹಸ್ತ ಚಿತ್ರ ಫೌಂಡೇಶನ್ ವಕ್ವಾಡಿ, ಜನಸೇವಾ ಟ್ರಸ್ಟ್ ಮೂಡುಗಿಳಿಯಾರು, ಉಸಿರು ಕೋಟ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಬೈಂದೂರು ತಾಲೂಕು ಘಟಕ, ಸಮೃದ್ಥ ಜನಸೇವಾ ಚಾರಿಟೇಬಲ್ ಟ್ರಸ್ಟ್ ಬೈಂದೂರು ತಂಡದೊಂದಿಗೆ ಸ್ವರಾಜ್ಯ 75 ತಂಡದ 33ನೇ ಸ್ವಾತಂತ್ರ್ಯ ಹೋರಾಟಗಾರರ ಮನೆ ನಾಮಫಲಕ ಅನಾವರಣ ಕಾಯ೯ಕ್ರಮವು ನಡೆಯಿತು. ಪತ್ರಕರ್ತ ಅರುಣ ಶಿರೂರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗಣ್ಯರು ಪುಷ್ಪಾರ್ಚನೆ ಗೈದರು. ವಾಗ್ಮಿ ಆದಶ೯ ಕೆಲ ನಾಮಫಲಕ ಅನಾವರಣ ಮಾಡಿದರು. ಭಾರತ ಸ್ವಾತಂತ್ರ್ಯ ಸಂಗ್ರಾಮಕ್ಕೆ ಕರಾವಳಿಯರ ಕೊಡುಗೆಯೊಂದಿಗೆ ಉಪ್ಪುಂದ ವೆಂಕಟ ಖಾವಿ೯ ಸ್ವಾತಂತ್ರ್ಯ ಹೋರಾಟದ ವಿಚಾರವನ್ನು ಕವಿತಾ ಆಚಾಯ೯ ಮುದೂರು ಪ್ರಸ್ತುತಪಡಿಸಿದರು. ಕಾಯ೯ಕ್ರಮ ದ ಅಧ್ಯಕ್ಷತೆಯನ್ನು ಕುಂದ ಅಧ್ಯಯನ ಕೇಂದ್ರದ ಉಪ್ಪುಂದ ಚಂದ್ರಶೇಖರ ಹೊಳ್ಳರು ವಹಿಸಿದ್ದರು. ಗಣ್ಯರಾಗಿ ಪ್ರಸನ್ನ ಮಯ್ಯ, ಅಕ್ಷತಾ ಗಿರೀಶ್ ಐತಾಳ್, ಆಶಾಲತಾ ಮರವಂತೆ, ಗಣೇಶ್ ಖಾವಿ೯ ಕಿರಿಮಂಜೇಶ್ವರ ಮಾತನಾಡಿದರು. ಕಾಯ೯ಕ್ರಮ ಸಂಚಾಲಕರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಂದು ಬ್ಯಾಂಕಿಂಗ್ ಕ್ಷೇತ್ರ ದೊಡ್ಡ ಮಟ್ಟದಲ್ಲಿ ವಿಸ್ತರಣೆಗೊಂಡರು, ಅವುಗಳಿಗೆ ಸವಾಲೆಸುವ ರೀತಿಯಲ್ಲಿ ಸಹಕಾರಿ ಕ್ಷೇತ್ರ ಬೆಳೆದಿದೆ, ಸಹಕಾರಿರಂಗ ಗ್ರಾಮೀಣ ಜನರ ಒಡನಾಡಿಯಾಗಿ ಕೆಲಸಮಾಡುತ್ತಿದ್ದು ಇದು ಸಾಲಶೂಲಕ್ಕೆ ಬದಲಾಗಿ ಉದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಹೊಸತನ ತಂದು ಅದರ ಲಾಭದಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಜನರಿಗೆ ಸ್ಪಂದಿಸುವ ಕೆಲಸಮಾಡಬೇಕು ಎಂದು ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು. ಭಾನುವಾರ ನಾಗೂರು ಲಲಿತಾಕೃಷ್ಣ ಸಭಾಭವನದಲ್ಲಿ ಕರ್ನಾಟಕ ಸಹಕಾರಿ ಮಹಾಮಂಡಲ ರಿ. ಬೆಂಗಳೂರು, ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ ಕಂಬದಕೊಣೆ ರೈತರ ಸೇವಾ ಸಹಕಾರಿ ಸಂಘ ಉಪ್ಪುಂದ ಇದರ ಸಂಯುಕ್ತ ಆಶ್ರಯದಲ್ಲಿ ನಡೆದ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಹಾಗೂ ಪ್ರತಿಭಾ ಪುರಸ್ಕಾರ, ಸನ್ಮಾನ, ಗೌರವಧನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಹಕಾರಿರಂಗವು ಸಹಕಾರ ಮತ್ತು ನಂಬಿಕೆಯ ಮೇಲೆ ನಡೆಯುತ್ತಿದ್ದು, ಬ್ಯಾಂಕಿಂಗ್ ಕ್ಷೇತ್ರಕ್ಕಿಂತಲೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಬಿಗಿ ಕಾನೂನಿನ ಹಿಡಿತಕ್ಕೆ ಒಳಪಟ್ಟಿದೆ. ಸಂಘಗಳು ಬಡವರಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಕುಂದಾಪುರ ತಾಲೂಕು ಶಾಖೆಯ ನೂತನ ಅಧ್ಯಕ್ಷರಾಗಿ ಡಾ.ನಾಗೇಶ್ ಆಯ್ಕೆಯಾಗಿದ್ದಾರೆ. ಸರಕಾರಿ ನೌಕರರ ಸಂಘದ ತಾಲೂಕು ಶಾಖೆಯ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಶನಿವಾರ ಚುನಾವಣೆ ನಡೆದಿದ್ದು, ಆರೋಗ್ಯ ಇಲಾಖೆಯಿಂದ ಪ್ರತಿನಿಧಿಸಿ ಆಯ್ಕೆಯಾಗಿದ್ದ ಕುಂದಾಪುರ ಉಪವಿಭಾಗೀಯ ಆಸ್ಪತ್ರೆಯಲ್ಲಿ ವೈದ್ಯಾಧಿಕಾರಿ ಡಾ. ನಾಗೇಶ್ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಖಜಾಂಚಿಯಾಗಿ ಕಂದಾಯ ಇಲಾಖೆಯ ಕಾಂತರಾಜ, ರಾಜ್ಯ ಪರಿಷತ್ ಸದಸ್ಯರಾಗಿ ಅಬಕಾರಿ ಇಲಾಖೆಯ ರಂಗನಾಥ ಎ ಆಯ್ಕೆಯಾದರು. ► ಬೈಂದೂರು ತಾಲೂಕು ಘಟಕದ ಅಧ್ಯಕ್ಷರಾಗಿ ಶೇಖರ ಪೂಜಾರಿ – https://kundapraa.com/?p=79172
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಸಂದರ್ಭದಲ್ಲಿ ಹೊಸದಾಗಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಹೆಸರು ತೆಗೆದು ಹಾಕುವ ಕಾರ್ಯಗಳನ್ನು ಯಾವುದೇ ಲೋಪದೋಷಗಳಿಲ್ಲದಂತೆ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ ರೇಜು ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ ಮತದಾರರ ಪಟ್ಟಿಯ ವೀಕ್ಷಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಈಗಾಗಲೇ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವು ಚುನಾವಣೆ ಆಯೋಗದ ಸೂಚನೆ ಮೇರೆಗೆ ಪ್ರಕ್ರಿಯೆಯನ್ನು ಕೈಗೊಳ್ಳಲಾಗುತ್ತಿದೆ. ಒಂದು ತಿಂಗಳ ಕಾಲ ಬೂತ್ ಮಟ್ಟದ ಮತಗಟ್ಟೆ ಅಧಿಕಾರಿಗಳು ಸಾರ್ವಜನಿಕರಿಂದ ಹೆಸರು ಸೇರ್ಪಡೆ, ತಿದ್ದುಪಡಿ, ಹೆಸರನ್ನು ತೆಗೆದು ಹಾಕುವಂತಹ ಡೇಟಾವನ್ನು ಪರಿಶೀಲಿಸಲು ಮನೆಗಳಿಗೆ ಭೇಟಿ ನೀಡುತ್ತಾರೆ. ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರುಗಳನ್ನು ನಿಯೋಜಿಸಿ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಬೇಕು ಎಂದು ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಮನವಿ ಮಾಡಿದರು. ಜಿಲ್ಲೆಯ 5 ವಿಧಾನಸಭಾ…
