Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಮಹಾಸತಿ ಪ್ರಾಥಮಿಕ ಮೀನುಗಾರರ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘ ಗಂಗೊಳ್ಳಿ ಇದರ 2023 – 24ನೇ ಸಾಲಿನ ಮಹಾಸಭೆ ಗಂಗೊಳ್ಳಿಯ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ಗುರುವಾರ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷೆ ನೀಲಾವತಿ ಎಸ್. ಖಾರ್ವಿ ಮಾತನಾಡಿ, ವರದಿ ವರ್ಷದಲ್ಲಿ ಒಟ್ಟು 4519 ಸದಸ್ಯರೊಂದಿಗೆ 21.80 ಲಕ್ಷ ರೂ. ಪಾಲು ಬಂಡವಾಳವನ್ನು ಹೊಂದಿದೆ. ವರ್ಷ ಅಂತ್ಯಕ್ಕೆ 17.35 ಕೋಟಿಗೂ ಮಿಕ್ಕಿ ಠೇವಣಿಯನ್ನು ಹೊಂದಿದ್ದು, ಹೊರಬಾಕಿ ಸಾಲ 11.08 ಕೋಟಿ ರೂ. ಇದೆ. 9.91 ಕೋಟಿ ರೂ.ಗಳನ್ನು ವಿವಿಧ ಸಂಘ/ಬ್ಯಾಂಕುಗಳಲ್ಲಿ ಹೂಡಿಕೆ ಮಾಡಲಾಗಿದ್ದು, ವರ್ಷಾಂತ್ಯಕ್ಕೆ ಸಂಘವು 15.16 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ. ಸದಸ್ಯರಿಗೆ ಶೇ.10 ಪಾಲು ಮುನಾಫೆ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಸಹಕಾರಿ ಸಂಘದ ಸದಸ್ಯರ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ತೇರ್ಗಡೆಯಾದ ಮಕ್ಕಳಿಗೆ ಶೇಕಡವಾರು ಆಧಾರದಲ್ಲಿ ಒಟ್ಟು 31 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಸಂಘದ ಉಪಾಧ್ಯಕ್ಷೆ ಶೈಲಾ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉತ್ತಮ ಶೈಕ್ಷಣಿಕ ಜ್ಞಾನ ಮತ್ತು ಸಂಶೋಧನಾ ಪ್ರವೃತ್ತಿಯು ಶಿಕ್ಷಕರಲ್ಲಿ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಷನ್ ಇದರ (ತಂತ್ರಜ್ಞಾನ ಮತ್ತು ವಿಜ್ಞಾನ) ಉಪಕುಲಪತಿ ಡಾ. ನಾರಾಯಣ ಸಭಾಹಿತ ಹೇಳಿದರು. ಅವರು ಶನಿವಾರದಂದು ಕುಲಪತಿಗಳ ಹುಟ್ಟಿದ ಹಬ್ಬದ ಪ್ರಯುಕ್ತ ನಡೆದ ಎ.ಜಿ.ಇ ಅಧೀನ ಕಾಲೇಜುಗಳ ಮೂರನೇ ಸಮಾವೇಶದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಇರುವಂತಹ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬೇಕು. ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ ಇದರ ಅಧೀನ ಕಾಲೇಜುಗಳ ಉಪನ್ಯಾಸಕರುಗಳಿಗೆ ಒಳ್ಳೆಯ ಅವಕಾಶವಿದೆ. ಅವರುಗಳು ದೇಶದಲ್ಲಿ ಅತ್ಯುತ್ತಮ ಗುಣಮಟ್ಟದ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಮಾಹೆಯಲ್ಲಿ ಶೈಕ್ಷಣಿಕ ಜ್ಞಾನ ಮತ್ತು ಸಂಶೋಧನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬಹುದು. ಈ ಮೂಲಕ ನಿಮ್ಮ ಶೈಕ್ಷಣಿಕ ಅರ್ಹತೆಯನ್ನು ಹೆಚ್ಚಿಸಿಕೊಳ್ಳಿ ಎಂದು ಕರೆ ನೀಡಿದರು. ಅಲ್ಲದೆ ಎ.ಜಿ.ಇ ಅಧೀನ ಕಾಲೇಜುಗಳೊಂದಿಗೆ ಉತ್ತಮ ಸಂಪರ್ಕ ಕಲ್ಪಿಸುವುದು ಮತ್ತು ಮಾಹಿತಿ ಮತ್ತು ಜ್ಞಾನವನ್ನು ವಿನಿಮಯ ಮಾಡಿಕೊಳ್ಳುವ ಮೂಲಕ ಪರಸ್ಪರ ಬೆಳೆಯಬಹುದು…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು,21: ತಾಲೂಕಿನ ಪಡುವರಿ ನಿವಾಸಿ ಹೊಸಾಡು ಸುಬ್ರಾಯ ಶೇರುಗಾ‌ರ್ (92) ಅವರು ಶನಿವಾರದಂದು ಮೃತಪಟ್ಟಿದ್ದಾರೆ. ವಯೋಸಹಜವಾಗಿ ಅವರು ಇಂದು ಬೆಳಗ್ಗೆ ನಿಧನರಾದರು. ಬೈಂದೂರು ಮಾಜಿ ಪುರಸಭಾಧ್ಯಕ್ಷರು, ಬೈಂದೂರು ಕಾ೦ಗ್ರೆಸ್ಸಿನ ಪ್ರಮುಖ ನಾಯಕರಾಗಿದ್ದರು. ಸಮಾಜದ ಮತ್ತು ರಾಜಕೀಯ, ವಿವಿಧ ಕ್ಷೇತ್ರದಲ್ಲಿಯೂ ಕಾರ್ಯ ನಿರ್ವಹಿಸಿ ಜನಮನ್ನಣೆ ಪಡೆದಿದ್ದರು. ಸಮಾಜ ಸೇವಕರು ಉತ್ತಮ ವಾಗ್ನಿಗಳಾಗಿದ್ದ ಅವರು ರಾಮಕ್ಷತ್ರಿಯ ಸಮಾಜ ಪ್ರಮುಖ ನಾಯಕಾಗಿದ್ದರು. ಅವರ ಧರ್ಮಪತ್ನಿ ಪಾರ್ವತಿ, ಖ್ಯಾತ ಹೃದಯ ತಜ್ಞರಾದ ಡಾಕ್ಟರ್ ಹೆಚ್. ಪ್ರಭಾಕರ್ ಮಂಗಳೂರು, ಸುಧಾಕರ್, ಪುತ್ರಿಯರಾದ ಪ್ರೇಮ, ಸುಜಾತರ, ಬಂಧುಗಳನ್ನು ಅಗಲಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ವಿಧಾನಪರಿಷತ್ ಉಪ ಚುನಾವಣೆ ಘೋಷಣೆಯಾಗಿದ್ದು, ರಾಜಕೀಯ ಪಕ್ಷಗಳು ಮಾದರಿ ನೀತಿ ಸಂಹಿತೆ ಹಾಗೂ ಚುನಾವಣಾ ಆಯೋಗ ನೀಡುವ ಮಾರ್ಗಸೂಚಿಗಳನ್ನು ಚಾಚೂ ತಪ್ಪದೇ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಧಾನಪರಿಷತ್ ಉಪ ಚುನಾವಣೆಯನ್ನು ನಿಷ್ಪಕ್ಷಪಾತ, ನ್ಯಾಯಸಮ್ಮತವಾಗಿ ನಡೆಸಲು ಚುನಾವಣೆ ಆಯೋಗದ ನಿರ್ದೇಶನದ ಅನ್ವಯ ಕಾರ್ಯಚಟುವಟಿಕೆಗಳನ್ನು ನಡೆಸಿ ಜಿಲ್ಲಾಡಳಿತಕ್ಕೆ ಯಶಸ್ವಿ ಚುನಾವಣೆ ನಡೆಸಲು ಎಲ್ಲ ಪಕ್ಷದವರು ಸಹಕರಿಸಬೇಕೆಂದರು. ಜನಪ್ರತಿನಿಧಿಗಳು ಸ್ಥಳೀಯ ಪ್ರಾಧಿಕಾರಗಳ ಕ್ಷೇತ್ರದ ಮತದಾರರ ಭಾಗವಾಗಿರುವ ಯಾವುದೇ ಸ್ಥಳೀಯ ಪ್ರಾಧಿಕಾರದ ಸದಸ್ಯರನ್ನು, ಯಾವುದೇ ಸಚಿವರು, ಅಧಿಕೃತವಾಗಿ ಸಭೆ, ವೀಡಿಯೋ ಕಾನ್ಫರೆನ್ಸ್ ಕರೆಯುವಂತಿಲ್ಲ. ಸ್ಥಳೀಯ ಸಂಸ್ಥೆಗಳ ವಾಡಿಕೆಯ ಸಭೆಗಳು ಅಗತ್ಯವಿದ್ದಾಗ ಸಂಬಂಧಪಟ್ಟ ಜಿಲ್ಲೆಯ ಜಿಲ್ಲಾ ಚುನಾವಣಾ ಅಧಿಕಾರಿಗಳ ಪೂರ್ವಾನುಮತಿ ಪಡೆದು ನಡೆಸಬಹುದಾಗಿದೆ ಎಂದರು. ಮತದಾರರ ಮೇಲೆ ನೇರವಾಗಿ ಅಥವಾ ಪರೋಕ್ಷವಾಗಿ ಪ್ರಭಾವ ಬೀರುವ ಯಾವುದೇ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ವರ್ಗದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯದ ಪ್ರವೇಶಾತಿಗೆ ಸಾಮಾನ್ಯ ಪದವಿ ಮಟ್ಟದ ಕೋರ್ಸ್, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸಿನ ವಿದ್ಯಾರ್ಥಿಗಳಿಂದ ಸ್ಟೇಟ್ ಹಾಸ್ಟೆಲ್ ಪೋರ್ಟಲ್ ತಂತ್ರಾಂಶದ ವೆಬ್‌ಸೈಟ್  https://shp.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 5 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಕಛೇರಿ ಮಣಿಪಾಲ ದೂ.ಸಂಖ್ಯೆ: 0820-2573596, ಸಹಾಯವಾಣಿ ಸಂಖ್ಯೆ: 8277799990, ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ನೆಲ ಮಹಡಿ, ಮೌಲಾನಾ ಅಜಾದ್ ಭವನ, ಪಶು ಚಿಕಿತ್ಸಾಲಯದ ಹತ್ತಿರ ಅಲೆವೂರು ರಸ್ತೆ, ಶಿವಳ್ಳಿ ಗ್ರಾಮ, ಮಣಿಪಾಲ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಪ್ರಕಟಣೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿದ್ಯಾರ್ಥಿ ದೆಸೆಯಲ್ಲಿ ಸೇವಾ ಮನೋಭಾವವನ್ನು ಬೆಳೆಸುವ ಮಹತ್ವದ ಸಂಸ್ಥೆ ಎನ್.ಎಸ್.ಎಸ್. ಈ ಘಟಕಗಳ ಮೂಲಕ ನಡೆಯುವ ವಿವಿಧ ಕ್ರಿಯಾ ಚಟುವಟಿಕೆಗಳಲ್ಲಿ ಸ್ವಯಂ ಸೇವಕರು ಸಕ್ರಿಯವಾಗಿ ತೊಡಗಿಸಿಕೊಂಡರೆ ಭವಿಷ್ಯದಲ್ಲಿ ಸತ್ಪçಜೆಗಳಾಗಲು ಸಾಧ್ಯ. ನಾಯಕತ್ವ ಗುಣಗಳೊಂದಿಗೆ ಬದುಕಿನ ಶಿಕ್ಷಣವನ್ನು ವಿದ್ಯಾರ್ಥಿಗಳು ಈ ಮೂಲಕ ಪಡೆದುಕೊಳ್ಳಬೇಕೆಂದು ಎಂದು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಸುಗುಣಾ ಆರ್.ಕೆ. ಹೇಳಿದರು. ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಸಕ್ತ ಶೈಕ್ಷಣಿಕ ವರ್ಷದ ಎನ್.ಎಸ್.ಎಸ್. ಘಟಕ 1 & 2ರ ವಾರ್ಷಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಕೆ.ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಜೀವನ ಕೌಶಲ್ಯಗಳನ್ನು ರೂಪಿಸಿಕೊಳ್ಳಲು ಎನ್.ಎಸ್.ಎಸ್. ಅತ್ಯುತ್ತಮ ವೇದಿಕೆ ಎಂದರು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಹಾಗೂ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಾಸ್ತಾವಿಸಿದರು. ಈ ಸಂದರ್ಭ ಎನ್.ಎಸ್.ಎಸ್. ಸ್ವಯಂ ಸೇವಕ ಪ್ರತಿನಿಧಿಗಳಾದ ನಿತೇಶ್ ಶೇಟ್, ಆಕಾಶ್ ಬಿ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ(ಪದವಿಪೂರ್ವ ಶಿಕ್ಷಣ ಇಲಾಖೆ ಉಡುಪಿ) ಹಾಗೂ ವೆಂಕಟರಮಣ ಪದವಿಪೂರ್ವ ಕಾಲೇಜು ಕುಂದಾಪುರ ಸಂಯುಕ್ತ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಬಾಲಕ/ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪಂದ್ಯಕ್ಕೆ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ವಿದ್ಯಾರ್ಥಿಗಳು ಸೂರಜ್ ಪೂಜಾರಿ, ಅಕ್ರಮ್‍, ಯತೀಶ್, ರೋನಿತ್ ಪೂಜಾರಿ, ನವನೀತ್, ಆಕಾಶ್, ಸುಮೀತ್ ಆಯ್ಕೆಯಾಗಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆಯ ವತಿಯಿಂದ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪಂಡಿತ ಪ್ರಶಸ್ತಿ ಬಹುಮಾನ ಯೋಜನೆಯಡಿ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ವಿನೂತನ/ ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಆಸಕ್ತ ರೈತರು ಹಾಗೂ ರೈತ ಮಹಿಳೆಯರು ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್‌ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಎಫ್.ಐ.ಡಿ ಬಳಸಿಕೊಂಡು ಸೆಪ್ಟಂಬರ್ 30 ರ ಒಳಗಾಗಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಗುರುಕುಲ  ಪದವಿ ಪೂರ್ವ ಕಾಲೇಜು ವಕ್ವಾಡಿ ಕೋಟೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ತಾಲೂಕು  ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ – ಬಾಲಕಿಯರ ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನ ಪಡೆದಿದೆ. ವಿದ್ಯಾರ್ಥಿಗಳೊಂದಿಗೆ ಕಾಲೇಜು ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ ದೈಹಿಕ ಶಿಕ್ಷಣ ಉಪನ್ಯಾಸಕ ರಾಘವೇಂದ್ರ ಗಾಣಿಗ ಉಪಸ್ಥಿತರಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತುಂತುರು ನೀರಾವರಿ ಘಟಕಗಳು ಲಭ್ಯವಿದ್ದು, ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತರು ಜಮೀನಿನ ಆರ್.ಟಿ.ಸಿ, ಆಧಾರ್ ಪ್ರತಿ, 2 ಪಾಸ್ ಪೋರ್ಟ್ ಸೈಜಿನ ಭಾವಚಿತ್ರ, ಬ್ಯಾಂಕ್ ಖಾತೆ ಪುಸ್ತಕದ ಪ್ರತಿ, ನೀರಿನ ಮೂಲ ದೃಢೀಕರಣ ಪತ್ರ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಇದ್ದಲ್ಲಿ ಪ್ರಮಾಣ ಪತ್ರ ಹಾಗೂ ಛಾಪಾ ಕಾಗದಗಳೊಂದಿಗೆ, ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಸೌಲಭ್ಯದ ಪ್ರಯೋಜನ ಪಡೆಯಲು ರೈತರು ಕಡ್ಡಾಯವಾಗಿ ಪ್ರೂಟ್ಸ್ ಐಡಿಯನ್ನು ಹೊಂದಿರಬೇಕು. ರೈತರು ಈಗಾಗಲೇ ಪ್ರೂಟ್ಸ್ ಐಡಿಯನ್ನು ಹೊಂದಿದ್ದಲ್ಲಿ ಅಥವಾ ಹೊಂದಿರದೆ ಇದ್ದಲ್ಲಿ ತಮ್ಮ ಎಲ್ಲಾ ಆರ್.ಟಿ.ಸಿಗಳನ್ನು ಪ್ರೂಟ್ಸ್ ಐಡಿಗೆ ಜೋಡಣೆ ಮಾಡಿಕೊಳ್ಳಬೇಕು ಎಂದು ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Read More