ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಬ್ರಹ್ಮಾವರ, ತೀರ್ಥಹಳ್ಳಿ, ಕೊಪ್ಪ ಮತ್ತು ಕೊಕ್ಕರ್ಣೆಯಲ್ಲಿ ವಸ್ತ್ರ ವೈವಿಧ್ಯಗಳ ಮಾರಾಟ ಮತ್ತು ಸೇವೆಗೆ ಹೆಸರುವಾಸಿಯಾದ 75 ವರ್ಷಗಳಿಂದ ಗ್ರಾಹಕರ ಮನೆಮಾತಾಗಿರುವ ಸತ್ಯನಾಥ ಸ್ಟೋರ್ಸ್ನಲ್ಲಿ ದೀಪಾವಳಿ ಹಾಗೂ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಡಿಸೆಂಬರ್ 31ರ ವರೆಗೆ ಅದೃಷ್ಟಶಾಲಿ ಗ್ರಾಹಕರಿಗೆ ವಿಶೇಷ ಬಹುಮಾನ ಗೆಲ್ಲುವ ಅವಕಾಶವಿದೆ. ಪ್ರತಿ 500 ರೂ. ಖರೀದಿಗೆ ಕೂಪನ್. ಅದೃಷ್ಟಶಾಲಿ ವಿಜೇತರಿಗೆ ಪ್ರಥಮ ದ್ವಿಚಕ್ರವಾಹನ, ದ್ವೀತಿಯ ಐಫೋನ್, ತೃತೀಯ ಲ್ಯಾಪ್ ಟಾಪ್ ಹಾಗೂ 75 ಸಮಾಧಾನಕರ ಬಹುಮಾನಗಳನ್ನು ನೀಡಲಾಗುತ್ತಿದೆ. ವೈವಿಧ್ಯಮಯ ವಸ್ತ್ರಗಳ ಅಪಾರ ಸಂಗ್ರಹ:ವೈವಿಧ್ಯಮಯ ವಸ್ತ್ರಗಳ ಅಪಾರ ಸಂಗ್ರಹದ ಪರಿಪೂರ್ಣ ಮದುವೆ ಜವಳಿ ಮಳಿಗೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಈ ಸಂಸ್ಥೆಯ ಎಲ್ಲ ಶಾಖೆಗಳಲ್ಲಿ ಕಾಂಚೀವರಂ, ಆರಣಿ, ಧರ್ಮಾವರಂ, ಸತ್ಯಮಂಗಳ, ಹಿಂದೂಪುರ, ಸೇಲಂ, ಬನಾರಸ್, ಕೋಲ್ಕತಾ, ಸೂರತ್, ಮಧುಬನಿ, ಚಾಪಾ, ಮೀನಾ, ಖಾತಾ, ಕೋಟಾ, ಪೋಚಂಪಲ್ಲಿ, ಇಕ್ಕತ್, ಪೈತನಿ, ನಾರಾಯಣಪೇಟ್ ಮುಂತಾದ ರೇಷ್ಮೆ ಸೀರೆಗಳ ಬೃಹತ್ ಸಂಗ್ರಹವಿದೆ. ಮಹಿಳೆಯರ ಕುರ್ತಿಸ್, ಬ್ರೈಡಲ್ ಲೆಹೆಂಗಾ, ಚೂಡಿದಾರ,…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನಗರದ ಹಂಗಳೂರು ಬ್ರಹ್ಮ ದೇವಸ್ಥಾನ ರಸ್ತೆಯ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಸಹಿತ ಪರಾರಿಯಾದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ಇಲ್ಲಿನ ನಿವಾಸಿ ಜಗದೀಶ್ ಚಂದ್ರ ನಾಯರ್ ಎಂಬುವವರ ಮನೆಯಲ್ಲಿ ಕಳವು ನಡೆದಿದೆ. ಜಗದೀಶ್ ರಾವ್ ಅವರು ಕೆಲಸ ಮುಗಿಸಿಕೊಂಡು ಮಧ್ಯಾಹ್ನ ಊಟ ಮಾಡಿ ತಮ್ಮ ಕೆಲಸಕ್ಕೆ ತೆರಳಿದ್ದರು. ಸುಮಾರು 4 ಗಂಟೆಗೆ ಜಗದೀಶ್ ಪತ್ನಿ ಮಗಳನ್ನು ಶಾಲೆಯಿಂದ ಕರೆದುಕೊಂಡು ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಹಗಲಲ್ಲಿಯೇ ಕಳ್ಳತನ ನಡೆದ ಬಗ್ಗೆ ಸುತ್ತಲಿನ ಜನರು ಆತಂಕಕ್ಕೊಳಗಾಗಿದ್ದಾರೆ. ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಕೆ ಕೈಗೆತ್ತಿಕೊಂಡಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮಂಗಳೂರು,ಅ.24: ದಕ್ಷಿಣ ಕನ್ನಡ ಸ್ಥಳೀಯಾಡಳಿತ ಕ್ಷೇತ್ರಕ್ಕೆ ನಡೆದ ವಿಧಾನ ಪರಿಷತ್ ಉಪಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು 1600 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ. ಬೆಳಗ್ಗೆ 8 ಗಂಟೆಯಿಂದಲೇ ಮಂಗಳೂರಿನ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ಆರಂಭಗೊಂಡಿತ್ತು. ಬಿಜೆಪಿ- 3654, ಕಾಂಗ್ರೆಸ್- 1957 ಮತ್ತು ಎಸ್‌ಡಿಪಿಐ-195 ಮತಗಳನ್ನು ಪಡೆಯುವುದರೊಂದಿಗೆ ಮತ ಎಣಿಕೆ ಮುಕ್ತಾಯಗೊಂಡಿದೆ. ಈ ವೇಳೆ ಕೇಂದ್ರ ಚುನಾವಣಾ ವೀಕ್ಷಕ ಪಂಕಜ್ ಕುಮಾರ್ ಪಾಂಡೆ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಂಪಾರು ಗ್ರಾಮದ ಅಕ್ಕಯ್ಯ ಅವರ ಮನೆಯಲ್ಲಿ ಕಳ್ಳರು ಅ. 10ರಿಂದ 21ರ ಮಧ್ಯೆ ಕಳ್ಳತನವಾದ ಘಟನೆಯ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಕಯ್ಯ ಅವರು ತಮ್ಮ ಮಗಳೊಂದಿಗೆ ಅ. 10ರಂದು ಮನೆಯಿಂದ ಹೋರ ಹೋದವರು, ಅ. 21ರಂದು ಮನೆಗೆ ವಾಪಸು ಬಂದಾಗ ಕಳ್ಳತನ ನಡೆದಿರುವುದು ಗೊತ್ತಾಗಿದೆ. ಕಳ್ಳರು ಮನೆಯ ಎದುರಿನ ಬೀಗ ಒಡೆದು ಒಳ ನುಗ್ಗಿದ್ದಾರೆ. ಮನೆಯ ಎದುರು ಕೋಣೆಯಲ್ಲಿದ್ದ 5 ದೇವರ ಕಾಣಿಕೆ ಡಬ್ಬಿಯಲ್ಲಿನ ಕಾಣಿಕೆ, 2 ಮೊಬೈಲು ಮತ್ತು ಚಾರ್ಜರನ್ನು ಕಳ್ಳತನ ಮಾಡಿದ್ದಾರೆ. ಮತ್ತೊಂದು ಕೋಣೆಯ ಕಬ್ಬಿಣದ ಕಪಾಟಿನ ಲಾಕ್ ಅನ್ನು ಮುರಿದು ಹಾನಿಕೊಳ್ಳಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜಪ್ತಿ ಗ್ರಾಮದ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಕಟ್ಟಡದಿಂದ ಬಿದ್ದು ಮೃತಪಟ್ಟಿದ್ದಾರೆ. ಜಾರ್ಖಂಡ್ ಲೋಹ ದರ್ಗಾನಾ ಜಿಲ್ಲೆಯ ಜೋಗಿಂದರ್ ಬರೋನ್ (29) ಮೃತಪಟ್ಟ ವ್ಯಕ್ತಿ. ಅವರು ಕೆಲಸಕ್ಕೆ ರಜೆ ಮಾಡಿ ಸರೋಜಾ ಬರೋನ್, ಶಬ್ಬೀರ್ ಹಾಗೂ ಮುನ್ನ ಬರೊನ್ ಜೊತೆ ಫ್ಯಾಕ್ಟರಿ ಕಟ್ಟಡದ ಸ್ಲಾಬ್ ನ ಮೇಲೆ ಮೊಬೈಲ್‌ನಲ್ಲಿ ಮಾತಾಡುತ್ತಿದ್ದಾಗ ಸುಮಾರು 15 ಅಡಿ ಎತ್ತರದಿಂದ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಅಕ್ಟೋಬರ್ 20 ರಂದು ಭಟ್ಕಳ ದ AKFA STRIKE ಅವರ ನೇತೃತ್ವದಲ್ಲಿ ನಡೆದ ರಾಷ್ಟ್ರ ಮಟ್ಟದ ಓಪನ್ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಕ್ಷಯ ಆರ್. ಕುಮಟೆ ವಿಭಾಗದಲ್ಲಿ ಚಿನ್ನ ಹಾಗೂ ಕಟಾ ವಿಭಾಗದಲ್ಲಿ ಕಂಚಿನ ಪದಕ ಪಡೆದು ಸಾಧನೆ ಮೆರೆದಿದ್ದಾರೆ. ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಂತ್ರಜ್ಞಾನ ಮುಂದುವರಿದ ಈ ಕಾಲಘಟ್ಟದಲ್ಲಿ ಅವುಗಳ ಸದ್ಬಳಕೆಯನ್ನು ಅರಿತು-ಬಳಕೆ ಮಾಡಿದಾಗ ಮಾತ್ರ ಅದು ಒಳಿತು ಎಂಬುದನ್ನು ಅರ್ಥೈಸಿಕೊಂಡು ವಿದ್ಯಾರ್ಥಿಗಳು ಬೆಳೆಯಬೇಕು ಎಂಬುದಾಗಿ ಸುಣ್ಣಾರಿ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ಶೆಟ್ಟಿ ಹೇಳಿದರು. ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಗಣಕ ವಿಜ್ಞಾನ ವಿಭಾಗ ಮತ್ತು ವಿಜ್ಞಾನ ವಿಭಾಗ ಆಯೋಜಿಸಿದ ‘ಟೆಕ್‌ಮಂಥನ್ 4.0’ವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ ಮಾತನಾಡಿ, ಟೆಕ್‌ಮಂಥನ್ ಆಯೋಜಿಸುವಲ್ಲಿ ಶ್ರಮಿಸಿದ ವಿದ್ಯಾರ್ಥಿ ಸಮುದಾಯವನ್ನು ಶ್ಲಾಘಿಸಿದರು. ಈ ಸಂದರ್ಭ ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಶುಭ ಹಾರೈಸಿದರು. ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಮಹೇಶ್ ಕುಮಾರ್ ಪ್ರಾಸ್ತಾವಿಸಿದರು. ಕಾರ್ಯಕ್ರಮದ ಸಂಯೋಜಕರಾದ ಪ್ರಣಮ್ ಆರ್. ಹಾಗೂ ರಶ್ಮಿ ಗಾವಡಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಅಭಿಷೇಕ್ ಸ್ವಾಗತಿಸಿ, ಸುಜನ ಅತಿಥಿಗಳನ್ನು ಪರಿಚಯಿಸಿ, ಆಕಾಶ್ ವಂದಿಸಿ, ಸಿಂಚನಾ ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಡಾ| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ, ಡಾ| ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ವತಿಯಿಂದ ಕೊಡಮಾಡುವ 2024ನೇ ಸಾಲಿನ ಕಾರಂತ ಪುರಸ್ಕಾರಕ್ಕೆ ಪ್ರಾಥಮಿಕ ಹಾಗೂ ಫ್ರೌಡಶಾಲಾ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಯನ್ನು ಕೋಟದ ಥೀಮ್ ಪಾರ್ಕ್‍ನಲ್ಲಿ ಪಡೆಯುವುದು ಅಥವಾ ಗ್ರಂಥಾಲಯ ಮೇಲ್ವಿಚಾರಕಿ ಶೈಲಜ ಕೆ. ಎನ್. (9663750499) ಅವರನ್ನು ಸಂಪರ್ಕಿಸಿ ಪಡೆಯುವುದು. ಭರ್ತಿ ಮಾಡಿದ ಅರ್ಜಿಯನ್ನು ನವೆಂಬರ್ 12 ಸಂಜೆ 5 ಗಂಟೆ ಒಳಗೆ ಕೋಟದ ಥೀಮ್ ಪಾರ್ಕ್ ಕಛೇರಿಗೆ ತಲುಪಿಸುವುದು ಅಥವಾ ಕಾರ್ಯದರ್ಶಿ, ಡಾ| ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ ಬ್ರಹ್ಮಾವರ ತಾಲ್ಲೂಕು ಉಡುಪಿ ಜಿಲ್ಲೆ ಇವರಿಗೆ ಅಂಚೆ ಮೂಲಕ ತಲುಪಿಸುವಂತೆ ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ. ಕುಂದರ್ ಕಾರ್ಯದರ್ಶಿನರೇಂದ್ರ ಕುಮಾರ್ ಕೋಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ದಿಟ್ಟ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ. ಅವರ ಹೋರಾಟದ ಮನೋಭಾವ, ಆತ್ಮವಿಶ್ವಾಸ, ಶೌರ್ಯ, ಪರಾಕ್ರಮಗಳ ವ್ಯಕ್ತಿತ್ವ ಪ್ರತಿಯೊಬ್ಬ ಮಹಿಳೆಯರಿಗೂ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅವರು ಬ್ರಿಟಿಷರ ವಿರುದ್ಧ ವಿಜಯ ಸಾಧಿಸಿ, 200 ವರ್ಷ ಪೂರೈಸಿರುವ ಹಿನ್ನೆಲೆ, ರಾಜ್ಯ ಸರ್ಕಾರವು ಕಿತ್ತೂರು ಉತ್ಸವ -2024 ರ ಪ್ರಯುಕ್ತ ವಿಜಯ ಜ್ಯೋತಿ ರಥಯಾತ್ರೆಯನ್ನು ಆಯೋಜಿಸಿದ್ದು, ರಥವು ರಾಜ್ಯದಾದ್ಯಂತ ಸಂಚರಿಸುವ ಮೂಲಕ ರಾಣಿ ಚೆನ್ನಮ್ಮರ ಸಂದೇಶ, ಸಾಹಸಗಾಥೆಯ ಬಗ್ಗೆ ಸಮಾಜಕ್ಕೆ ತಿಳಿಸುವ ಮೂಲಕ ಅರಿವು ಮೂಡಿಸಲಾಗಿದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಜಿಲ್ಲಾಡಳಿತ, ರಾಮನಗರ ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಛೇರಿ ಶಾಲಾ ಶಿಕ್ಷಣ ಇಲಾಖೆ ರಾಮನಗರ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕನಕಪುರ ಇವರ ವತಿಯಿಂದ ರಾಮನಗರ ಜಿಲ್ಲೆಯ ಕನಕಪುರದ ಟೌನ್ ಟೆನ್ನಿಸ್ ಕ್ಲಬ್‌ನಲ್ಲಿ ನಡೆದ ರಾಜ್ಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಮೈಸೂರು ವಿಭಾಗ ತಂಡವನ್ನು ಪ್ರತಿನಿಧಿಸಿದ್ದ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಪ್ರಾರ್ಥನಾ ಪೈ ಅವರು ಪ್ರಥಮ ಸ್ಥಾನ ಗಳಿಸಿ, ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮೈಸೂರಿನಲ್ಲಿ ಅ.7ರಂದು ನಡೆದ ಮೈಸೂರು ವಿಭಾಗದ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಉಡುಪಿ ಜಿಲ್ಲಾ ತಂಡವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದಲ್ಲಿ ಮೈಸೂರು ವಿಭಾಗದ ತಂಡವನ್ನು ಪ್ರತಿನಿಧಿಸಿಸಲು ಇವರು ಆಯ್ಕೆಯಾಗಿದ್ದರು. ಈಕೆ ಗಂಗೊಳ್ಳಿಯ ಪತ್ರಕರ್ತ ಬಿ. ರಾಘವೇಂದ್ರ ಪೈ ಮತ್ತು ರಾಧಿಕಾ ಆರ್.ಪೈ ದಂಪತಿಯ ಪುತ್ರಿ. ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಅವರನ್ನು ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕರು…
