Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜನತಾ ಪದವಿಪೂರ್ವ ಕಾಲೇಜು ಹೆಮ್ಮಾಡಿ ಹಾಗೂ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರ ಜಂಟಿಯಾಗಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ಕಿರಿಮಂಜೇಶ್ವರದಲ್ಲಿ ಆಚರಿಸಲಾಯಿತು. ಶಾಲಾ ಯೋಗ ಶಿಕ್ಷಕಿ ಅನ್ವಿತಾ ಯೋಗ ಪ್ರಾತ್ಯಕ್ಷಿಕೆಯನ್ನು ನಡೆಸಿದರು. ಜನತಾ ಪದವಿಪೂರ್ವ ಕಾಲೇಜಿನ ಅಂತರರಾಷ್ಟ್ರೀಯ ಮಟ್ಟದ ಯೋಗ ಪ್ರತಿಭೆಗಳಾದ ಧನ್ವಿ ಮರವಂತೆ, ತನ್ವಿತಾ, ನಿರೀಕ್ಷಾ ಇವರಿಂದ ಹಾಗೂ ಶಾಲಾ ಆಯ್ದ ವಿದ್ಯಾರ್ಥಿಗಳಿಂದ ಯೋಗ ಪ್ರಾತ್ಯಕ್ಷಿಕೆ ನಡೆಯಿತು. ಕಾರ್ಯಕ್ರಮದಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಶಾಲಾ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ, ಜನತಾ ಸಮೂಹ ವಿದ್ಯಾ ಸಂಸ್ಥೆಗಳ ವಿದ್ಯಾರ್ಥಿಗಳು, ಬೋಧಕ/ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ‌ ಸುದ್ದಿ.ಕುಂದಾಪುರ: ಸತತ ನಾಲ್ಕನೇ ಬಾರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸದಸ್ಯನಾಗಿ ಎರಡು ಲಕ್ಷಗಳ ಅಧಿಕ ಮತಗಳ ಅಂತರದಿಂದ ಚುನಾಯಿತನಾಗಲು ಪಕ್ಷದ ಎಲ್ಲಾ ಕಾರ್ಯಕರ್ತರ ತಳ ಹಂತದ ಪರಿಶ್ರಮ ಬೆಲೆ ಕಟ್ಟಲಾಗದು. ನನ್ನ ಮೇಲೆ ನೀವು ಇಟ್ಟಿರುವ ಅಚಲ ವಿಶ್ವಾಸಕ್ಕೆ ನಾನು ಸದಾ ಚಿರಋಣಿಯಾಗಿದ್ದೇನೆ. ನಿಮ್ಮ ನಿರೀಕ್ಷೆಗೆ ತಕ್ಕಂತೆ ಕ್ಷೇತ್ರದಲ್ಲಿ ಮತ್ತಷ್ಟು ಹುಮ್ಮಸ್ಸಿನಿಂದ ಅಭಿವೃದ್ಧಿ ಕಾರ್ಯಗಳನ್ನು ಜಾರಿಗೆ ತರುವ ಮೂಲಕ ಕಾರ್ಯನಿರ್ವಹಿಸುತ್ತೇನೆ ಜೊತೆಗೆ ನಿಮ್ಮ ಆಶೋತ್ತರಗಳನ್ನು ನೆರೆವೇರಿಸುವ ಸಂಕಲ್ಪ ತೊಡುತ್ತೇನೆ‌ ಎಂದು ಸಂಸದ ಬಿ. ವೈ. ರಾಘವೇಂದ್ರ ಹೇಳಿದರು. ಬಿಜೆಪಿ ಬೈಂದೂರು ಮಂಡಲ ವತಿಯಿಂದ ಶುಕ್ರವಾರ ಹೆಮ್ಮಾಡಿಯ ಜಯಶ್ರೀ ಸಭಾಭವನದಲ್ಲಿ ಲೋಕಸಭಾ ಚುನಾವಣೆಯಲ್ಲಿ ಹಮ್ಮಿಕೊಳ್ಳಲಾಗಿದ್ದ “ಕೃತಜ್ಞತಾ – ಅಭಿನಂದನಾ ಸಮಾರಂಭ” ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಅನುಷ್ಠಾನಕ್ಕೆ ತಂದಿರುವ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿಕೊಂಡು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಅಂತ್ಯೋದ್ಯಯ ಪರಿಕಲ್ಪನೆಯಡಿ ಜನರ ಜೀವನ ಮಟ್ಟ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಮದರ್ ತೆರೇಸಾ ಮೆಮೋರಿಯಲ್ ಸ್ಕೂಲ್‌ನಲ್ಲಿ ಯೋಗ ಶಿಕ್ಷಣವನ್ನು 2024-25ನೇ ಶೈಕ್ಷಣಿಕ ವರ್ಷದಿಂದ ಶಾಲಾ ಪಠ್ಯಕ್ರಮದಲ್ಲಿ ಅಳವಡಿಸಲಾಗಿದ್ದು ಅಂತರಾಷ್ಟ್ರೀಯ ಯೋಗದಿನಾಚರಣೆಯ ಕಾರ್ಯಕ್ರಮದಲ್ಲಿ ಅದರ ಉದ್ಘಾಟನೆ ನೆರವೇರಿಸಲಾಯಿತು. ಮುಖ್ಯಶಿಕ್ಷಕ ರವಿದಾಸ್ ಶೆಟ್ಟಿ, ಸಂಯೋಜಕರಾದ ಉಮೇಶ ಶೆಟ್ಟಿ,ಅವಿನಾ,ದಿವ್ಯಾ ಪೂಜಾರಿ ಮತ್ತು ಕುಸುಮಾ ಶೆಟ್ಟಿ ಜಂಟಿಯಾಗಿ ವಿದ್ಯಾರ್ಥಿಗಳಿಗೆ ಯೋಗ ಸಮವಸ್ತ್ರ ನೀಡುವುದರ ಮೂಲಕ ಉದ್ಘಾಟಿಸಿದರು. ಎಲ್.ಕೆ.ಜಿ ಯಿಂದ ಹತ್ತನೇ ತರಗತಿ ವಿದ್ಯಾರ್ಥಿಗಳು ಹೊಸ ಯೋಗ ಸಮವಸ್ತ್ರದೊಂದಿಗೆ ಸಂಭ್ರಮದಿಂದ ಯೋಗಾಸನದ ವಿವಿಧ ಆಸನಗಳನ್ನು ಪ್ರದರ್ಶಿಸಿದರು. ಯೋಗ ಶಿಕ್ಷಕ ರತ್ನಕುಮಾರ್ ಯೋಗದ ವಿವಿಧ ಆಸನಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ವಿದ್ಯಾರ್ಥಿಗಳಿಗೆ ತಿಳಿಸಿ ಯೋಗವನ್ನು ನಿತ್ಯಜೀವನದಲ್ಲಿ ಅಳವಡಿಕೊಳುವಂತೆ ಮಾಹಿತಿ ನೀಡಿದರು . ಕಾರ್ಯಕ್ರಮದಲ್ಲಿ ಎಲ್ಲಾ ಶಿಕ್ಷಕರು ವಿದ್ಯಾರ್ಥಿಗಳೊಂದಿಗೆ ಯೋಗಾಸನ ಮಾಡುವುದರ ಮೂಲಕ ಕಾರ್ಯಕ್ರಮಕ್ಕೆ ಕಳೆಯನ್ನು ನೀಡಿದರು

Read More

ಕುಂದಾಪ್ರ ಡಾಟ್ ಕಾಂ‌ ಸುದ್ದಿ.ಬೈಂದೂರು,ಜೂ 21: ಪಟ್ಟಾ ಸ್ಥಳದಲ್ಲಿದ್ದ ಹಲಸಿನ ಮರ ಕಡಿಯಲು ಪರವಾನಿಗೆಗೆ ಲಂಚದ ಬೇಡಿಕೆಯಿಟ್ಟ ಆರೋಪಿಗಳನ್ನು ಲೋಕಾಯುಕ್ತರು ತಮ್ಮ ಬಲೆಗೆ ಬೀಳಿಸಿದ್ದಾರೆ. ಬೈಂದೂರು ವಲಯ ಉಪವಲಯ ಅರಣ್ಯಾಧಿಕಾರಿ ಬಂಗಾರಪ್ಪ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದು, ಅರಣ್ಯ ವೀಕ್ಷಕ ವಿನಾಯಕ ತಪ್ಪಿಸಿಕೊಂಡಿದ್ದಾನೆ. ಬೈಂದೂರು ತಾಲೂಕಿನ ಶಿರೂರು ನಿವಾಸಿ ಮಹಮ್ಮದ್ ಅನ್ವರ್ ಹಸನ್ ಎಂಬುವರ ಪಟ್ಟಾ ಸ್ಥಳದಲ್ಲಿದ್ದ ಹಲಸಿನ ಮರವನ್ನು ತೆರವು ಗೊಳಿಸಲು ಅರಣ್ಯ ಇಲಾಖೆಯಿಂದ ಅನುಮತಿ ನೀಡುವ ಬಗ್ಗೆ ಆರೋಪಿಗಳಿಗೆ ಅರ್ಜಿ ನೀಡಿದ್ದರು. ಈ ಸಂಬಂಧ ಪರವಾನಿಗೆ ನೀಡಲು ನಾಲ್ಕು ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಮಹಮ್ಮದ್ ಅನ್ವರ್ ಹಸನ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರಿನ ಆಧಾರದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಹಣದ ಸಮೇತ ಆರೋಪಿ ಬಂಗಾರಪ್ಪನನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಮಂಗಳೂರು ವಿಭಾಗ ಲೋಕಾಯುಕ್ತ ಪೊಲೀಸ್ ಅಧಿಕ್ಷಕ ನಟರಾಜ್ ಎಂ.ಎ ಮಾರ್ಗದರ್ಶನದಲ್ಲಿ ಉಡುಪಿ ಲೋಕಾಯುಕ್ತ ಡಿವೈಎಸ್ಪಿ ಪ್ರಕಾಶ್ ಕೆ.ಸಿ ಹಾಗೂ ಕರ್ನಾಟಕ ಲೋಕಾಯುಕ್ತ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಅಧ್ಯಾಪಕರಾಗಿ  ಮತ್ತು ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನಲ್ಲಿ ಇತಿಹಾಸ ವಿಭಾಗದ ಉಪನ್ಯಾಸಕರಾಗಿ ಒಟ್ಟಾರೆ 34 ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಿ  ವಯೋನಿವೃತ್ತಿ ಹೊಂದಿದ ಹೆಚ್ ಭಾಸ್ಕರ ಶೆಟ್ಟಿ  ಮತ್ತು ನಿವೃತ್ತಿಯ ಬಳಿಕ ಎರಡು ವರ್ಷಗಳ ಕಾಲ  ದೈಹಿಕ ಶಿಕ್ಷಣ ಉಪನ್ಯಾಸಕರಾಗಿ  ವಿಶೇಷ ಸೇವೆಯನ್ನು ಸಲ್ಲಿಸಿದ ನಾಗರಾಜ ಶೆಟ್ಟಿ ಅವರ ಬೀಳ್ಕೊಡುಗೆ ಸಮಾರಂಭವು ಸರಸ್ವತಿ ವಿದ್ಯಾಲಯದ ಗುಜ್ಜಾಡಿ ಗೋಪಾಲ ನಾಯಕ್ ರೋಟರಿ ಸಭಾಂಗಣದಲ್ಲಿ ನಡೆಯಿತು. ಜಿಎಸ್‌ವಿಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ. ಕಾಶಿನಾಥ್ ಪೈ, ಜಿಎಸ್​​ವಿಎಸ್ ಅಸೋಸಿಯೇಷನ್ ಕಾರ್ಯದರ್ಶಿ ಎಚ್. ಗಣೇಶ್ ಕಾಮತ್, ಸರಸ್ವತಿ ವಿದ್ಯಾಲಯ ಸಮೂಹ ಸಂಸ್ಥೆಗಳ ಸಂಚಾಲಕ ಎನ್. ಸದಾಶಿವ ನಾಯಕ್,  ವಾಣಿಜ್ಯ ಶಾಸ್ತ್ರ ಉಪನ್ಯಾಸಕ ನರೇಂದ್ರ ಎಸ್., ಗಂಗೊಳ್ಳಿ  ನಿವೃತ್ತ ಉಪನ್ಯಾಸಕರನ್ನು  ಅಭಿನಂದಿಸಿ ಮಾತನಾಡಿದರು. ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಂ ಸಿ, ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಮಾಧ್ಯಮ ಪ್ರೌಢಶಾಲೆಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಕುಂದಾಪುರದ ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಂದ ಕೋಡಿ ಸಮುದ್ರ ತೀರದ ಸೀವಾಕ್‌ನಲ್ಲಿ ಯೋಗ ಪ್ರದರ್ಶನ ನಡೆಯಿತು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಮ್ ಶೆಟ್ಟಿ ಅವರ ನೇತೃತ್ವದಲ್ಲಿ ನಡೆದ ಈ ಯೋಗ ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಯೋಗ ಮನುಷ್ಯನ ಶರೀರ ಮತ್ತು ಮನಸ್ಸನ್ನು ಸಮತೋಲನದಲ್ಲಿರಿಸಲು ಸಹಕಾರಿಯಾಗುತ್ತದೆ. ಯೋಗವನ್ನು ಪ್ರಾಣಯಾಮ, ದೈಹಿಕ ಕಸರತ್ತು ಎನ್ನುವ ಸೀಮಿತ ಅರ್ಥದಲ್ಲಿ ಗ್ರಹಿಸದೆ, ಅದು ಬದುಕಿನ ಸರ್ವಾಂಗೀಣ ವಿಕಸನಕ್ಕೆ ಕಾರಣವಾಗುತ್ತದೆ ಎನ್ನುವುದನ್ನು ತಿಳಿಯಬೇಕು. ಯೋಗ ಆತ್ಮ ದರ್ಶನಕ್ಕೆ ಹೊರತು ಪ್ರದರ್ಶನಕ್ಕೆ ಅಲ್ಲ ಎಂದು ನಿವೃತ್ತ ಶಿಕ್ಷಕ, ಯೋಗ ತರಬೇತುದಾರ ಕರುಣಾಕರ ಶೆಟ್ಟಿ ಕಟ್ಕೇರಿ ಹೇಳಿದರು. ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಎನ್.ಸಿ.ಸಿ. ಘಟಕ ಹಾಗೂ ಯೋಗ ಮತ್ತು ಫಿಟ್‌ನೆಸ್ ಸರ್ಟಿಫಿಕೇಟ್ ಕೋರ್ಸ್ನ ಸಂಯುಕ್ತ ಆಶ್ರಯದಲ್ಲಿ ನಡೆದ ‘ವಿಶ್ವಯೋಗ ದಿನʼವನ್ನು ಉದ್ದೇಶಿಸಿ ಮಾತನಾಡಿದರು. ಇದೇ ಸಂದರ್ಭ ಯೋಗದಿಂದಾಗುವ ಪ್ರಯೋಜನಗಳನ್ನು ತಿಳಿಸಿ, ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ನೀಡಿದರು.                ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ-ಪ್ರಾಂಶುಪಾಲ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ಡಾ| ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಾಸ್ತಾವಿಸಿದರು.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಜಾನುವಾರು ಆರೋಗ್ಯ ಮತ್ತು ರೋಗ ನಿಯಂತ್ರಣ ಕಾರ್ಯಕ್ರಮದ ಯೋಜನೆಯಡಿ ಜಿಲ್ಲೆಯಾದ್ಯಂತ ಚರ್ಮಗಂಟು ರೋಗ ತಡೆಗಟ್ಟುವ ನಿಟ್ಟಿನಲ್ಲಿ ಜಾನುವಾರುಗಳಿಗೆ ಉಚಿತ ಲಸಿಕೆ ನೀಡುವ ಕಾರ್ಯಕ್ರಮವನ್ನು ಜುಲೈ 27 ರವರೆಗೆ ಆಯೋಜಿಸಲಾಗಿದೆ. ನಾಲ್ಕು ತಿಂಗಳ ಮೇಲ್ಪಟ್ಟ ಎಲ್ಲಾ ಜಾನುವಾರುಗಳಿಗೆ ಈ ಹಿಂದೆ ಲಸಿಕೆ ಹಾಕಿಸಿದ್ದರೂ ಕೂಡಾ ಈ ಬಾರಿಯೂ ಜಾನುವಾರು ಮಾಲೀಕರು ಜಾನುವಾರುಗಳಿಗೆ ಲಸಿಕೆ ಹಾಕಿಸುವುದರ ಮೂಲಕ ಜಿಲ್ಲೆಯಲ್ಲಿರುವ ಜಾನುವಾರುಗಳನ್ನು ಚರ್ವಗಂಟು ರೋಗದಿಂದ ರಕ್ಷಿಸಬೇಕು. ಈ ಬಗ್ಗೆ ಹೈನುಗಾರರು ಲಸಿಕೆಗಾಗಿ ಹತ್ತಿರದ ಪಶುವೈದ್ಯಕೀಯ ಸಂಸ್ಥೆಗಳನ್ನು ಅಥವಾ ಹಾಲು ಉತ್ಪಾದಕರ ಸಹಕಾರಿ ಸಂಘಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್, ಗೈಡ್ಸ್ ಮತ್ತು ಎನ್.ಸಿ.ಸಿ ಕೆಡೆಟ್ರವರ ಸಹಭಾಗಿತ್ವದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಓಂ ಯೋಗ ವಿದ್ಯಾಮಂದಿರದ ಯೋಗ ಗುರುಗಳಾದ ಬಿ.ಅಣ್ಣಪ್ಪ ಶೆಟ್ಟಿಗಾರ   ಮುಖ್ಯ ಅತಿಥಿಗಳಾಗಿ ಆಗಮಿಸಿ, ದೀಪಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು ಹಾಗೂ  ವಿದ್ಯಾರ್ಥಿ ಜೀವನದಲ್ಲಿ ಯೋಗವನ್ನು ಅಳವಡಿಸುವಂತೆ ಮಕ್ಕಳಿಗೆ ತಿಳಿಸಿದರು. ಪತಂಜಲಿ ಯೋಗ ವಿದ್ಯಾಕೇಂದ್ರದ ಯೋಗ ಗುರುಗಳಾದ ರಘುವೀರ ನಗರಕರ್ ನ್ನೋರ್ವ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಸಂಸ್ಥೆಯ ಹಿರಿಯ ದೈಹಿಕ ಶಿಕ್ಷಣ ಶಿಕ್ಷಕರಾದ ಸುಬ್ರಮಣ್ಯ ಉಪಸ್ಥಿತರಿದ್ದರು. ಶಾಲಾ ಮುಖ್ಯೋಪಾಧ್ಯಾಯರಾದ  ಕೃಷ್ಣ ಅಡಿಗರವರು ಸರ್ವರನ್ನು ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕರಾದ ವಸಂತರವರು ವಂದನಾರ್ಪಣೆಗೈದರು. ದೈಹಿಕ ಶಿಕ್ಷಣ ಶಿಕ್ಷಕರಾದ ನಾಗೇಂದ್ರ ಕಾರ್ಯಕ್ರಮವನ್ನು ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ಎನ್.ಸಿ.ಸಿ ಸ್ಕೌಟ್ಸ್ ಮತ್ತು ಗೈಡ್ಸ್ ರವರಿಂದ ಯೋಗಾಭ್ಯಾಸ ನಡೆಯಿತು. ಸಂಸ್ಥೆಯ ಎಲ್ಲಾ ದೈಹಿಕ ಶಿಕ್ಷಣ ಶಿಕ್ಷಕರು ಈ ಕಾರ್ಯಕ್ರಮದಲ್ಲಿ ಭಾಗಿಗಳಾಗಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಹಿರಿಯ ನಾಗರಿಕರು ಸಾಮಾಜಿಕ, ದೈಹಿಕ, ಸಾಂಸಾರಿಕ, ಮಾನಸಿಕವಾಗಿ, ದೌರ್ಜನ್ಯ, ಕಿರುಕುಳ, ಹಿಂಸೆ, ಶೋಷಣೆಗೆ ಒಳಗಾಗಿದ್ದಲ್ಲಿ ಅಥವಾ ಕೌಟುಂಬಿಕ ಸಮಸ್ಯೆ, ಮಕ್ಕಳ ಬೇಜವಬ್ದಾರಿತನ, ದುರ್ಬಲತೆ, ಅಸಹಾಯಕತೆ, ಅಭದ್ರತೆ ಮುಂತಾದ ರಕ್ಷಣೆಯಿಲ್ಲದ ಸಂದಿಗ್ಧ ಪರಿಸ್ಥಿತಿಗೆ ಒಳಗಾದ ಸಂದರ್ಭದಲ್ಲಿ ಹಿರಿಯ ನಾಗರಿಕರ ಉಚಿತ ಸಹಾಯವಾಣಿ (ಟೋಲ್ ಫ್ರೀ ನಂಬರ್) 1090 ಅಥವಾ ದೂ.ಸಂಖ್ಯೆ: 0820-2526394 ಅನ್ನು ಸಂಪರ್ಕಿಸಿ ದೂರು ನೀಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ, ಬನ್ನಂಜೆ, ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More