Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಿಯಂತ್ರಣ ತಪ್ಪಿದ ಸ್ಕೂಟರ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಸಹಸವಾರ ಮೃತಪಟ್ಟು, ಸವಾರ ಗಂಭೀರ ಗಾಯಗೊಂಡ ಘಟನೆ ಅ.14ರ ಸೋಮವಾರ ಇಲ್ಲಿನ ಬಾರ್ ಮುಂಭಾಗದ ಫೈ ಓವರ್‌ ರಸ್ತೆಯಲ್ಲಿ ನಡೆದಿದೆ. ಅಬ್ದುಲ್ ಮುನೀರ್ ಮೃತಪಟ್ಟವರು ಎಂದು ತಿಳಿದು ಬಂದಿದೆ. ಗಂಭೀರ ಗಾಯಗೊಂಡಿರುವ ಸವಾರ ಅಬ್ದುಲ್ ನಝೀರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಉಪ್ಪುಂದದಿಂದ ಶಿರೂರಿಗೆ ಹೋಗುತ್ತಿದ್ದ ಸ್ಕೂಟಿ ಸವಾರನ ನಿಯಂತ್ರಣ ತಪ್ಪಿ ರಸ್ತೆಯ ಮಧ್ಯದಲ್ಲಿರುವ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಸವಾರರಿಬ್ಬರೂ ರಸ್ತೆಗೆ ಬಿದ್ದಿದ್ದು, ಗಂಭೀರ ಗಾಯಗೊಂಡ ಅಬ್ದುಲ್ ಮುನೀರ್ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎನ್ನಲಾಗಿದೆ. ಈ ಘಟನೆಯ ಕುರಿತು ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಭಾರತ ಸರ್ಕಾರದ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಮಂತ್ರಾಲಯದ ಅಧೀನದಲ್ಲಿ ಬರುವ ಸ್ವಾಯತ್ತ ವೈಜ್ಞಾನಿಕ ಸಂಸ್ಥೆಯಾದ ರಾಷ್ಟ್ರೀಯ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಂಸ್ಥೆ (NIELIT) ಯು ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯದ ನ್ಯಾಶನಲ್ ಕೆರಿಯರ್ ಸರ್ವಿಸ್ (NCS) ಕರ್ನಾಟಕ ಸರ್ಕಾರದ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಸಹಕಾರದೊಂದಿಗೆ ಬೆಂಗಳೂರು ನಗರ ಜಿಲ್ಲೆಯ ರಾಜಾಜಿನಗರದ ಕೆ.ಎಲ್.ಇ ಸಂಸ್ಥೆಯ ಎಸ್.ನಿಜಲಿಂಗಪ್ಪ ಮಹಾವಿದ್ಯಾಲಯ,  ಇಲ್ಲಿ ಅಕ್ಟೋಬರ್ 20 ರಂದು ಉದ್ಯೋಗ ಮೇಳವನ್ನು ಆಯೋಜಿಸಲಾಗಿರುತ್ತದೆ. ಈ ಪ್ರಯುಕ್ತ ಎಲ್ಲಾ ರೀತಿಯ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ರಾಜ್ಯದ ಎಲ್ಲಾ ವಲಯಗಳಿಂದ 100 ಕ್ಕೂ ಹೆಚ್ಚಿನ ಪ್ರತಿಷ್ಠಿತ ಬೃಹತ್/ಮಾಧ್ಯಮ /ಸಣ್ಣ ಉದ್ಯೋಗದಾತರ ಸಂಸ್ಥೆಗಳು ಭಾಗವಹಿಸುವ ನಿರೀಕ್ಷೆಯಿದ್ದು ರಾಜ್ಯದ ಯುವಜನತೆಗೆ ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಉದ್ಯೋಗಾಕಾಂಕ್ಷಿ ಹಾಗೂ ಉದ್ಯೋಗದಾತರು https://jobfair.calicut.nielit.in/ ಗೆ ಭೇಟಿ ನೀಡಿ ತಮ್ಮ ಸ್ವ -ವಿವರಗಳನ್ನು ಉಚಿತವಾಗಿ ನೋಂದಣಿ ಮಾಡಿಕೊಂಡು, ಮೇಳದಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದರೆ:  ಇಂದಿನ ಕಾಲದಲ್ಲಿ ಅರ್ಥಪೂರ್ಣವಾದ ಶ್ರೇಷ್ಠ ಬದುಕನ್ನು ಬದುಕುವುದು ಸವಾಲಿನ ಕೆಲಸ. ಅಂತಹ ಸವಾಲನ್ನು ನಾವೆಲ್ಲ ಸ್ವೀಕರಿಸಬೇಕು   ಎಂದು ಮಂಗಳೂರಿನ ಎಂಆರ್‌ಪಿಎಲ್- ಒಎನ್‌ಜಿಸಿ ಪ್ರಧಾನ ವ್ಯವಸ್ಥಾಪಕ (ಕಾರ್ಪೊರೇಟ್ ಸಂವಹನ) ಡಾ. ರೊಡಲ್ ನೊರಾನ್ಹಾ ಅಭಿಪ್ರಾಯಪಟ್ಟರು. ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ವಿಭಾಗ ಮತ್ತು ಐಕ್ಯೂಎಸಿ ಆಶ್ರಯದಲ್ಲಿ ಕುವೆಂಪು ಸಭಾಂಗಣ ಮಂಗಳವಾರ ನಡೆದ ’ಸ್ಫಟಿಕ’ ವೇದಿಕೆಯ 2024-25ರ ಶೈಕ್ಷಣಿಕ ವರ್ಷದ ಚಟುವಟಿಕೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮೊಳಗಿನ ಬ್ರಹ್ಮಾಂಡವನ್ನು ಅವಲೋಕಿಸುವ ರೀತಿಯಲ್ಲಿ ನಮ್ಮ ಮೌಲ್ಯಯುತ ಜೀವನ ನಿರ್ಧರಿತವಾಗಬೇಕು. ಸಾಮಾನ್ಯರಾಗಿ ಉಳಿಯುವವರು ಋಣಾತ್ಮಕ ವಿಚಾರಗಳಿಗೆ ಒತ್ತು ನೀಡಿದರೆ, ಅಸಾಮಾನ್ಯರು ಧನಾತ್ಮಕ ವಿಚಾರಗಳನ್ನು ಅನುಸರಿಸುತ್ತಾರೆ ಎಂದು ಅವರು ವಿವರಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ, ಸಮಾಜ ಕಾರ್ಯವು ವಿದ್ಯಾರ್ಥಿಗಳಲ್ಲಿ ಅಂತರ್ಗತವಾಗಬೇಕು. ವಿದ್ಯಾರ್ಥಿ ಜೀವನದಲ್ಲಿ ದೊರಕುವ ಹಲವಾರು ವಿಷಯಗಳನ್ನು ಸದುಪಯೋಗಗೊಳಿಸಬೇಕು ಎಂದು ಅವರು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ಮಾತನಾಡಿ, ಮನುಷ್ಯನ ಬಗ್ಗೆ ಯೋಚಿಸುವ ವೃತ್ತಿಯೇ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿ ದಸರಾ ಎಂದೇ ಖ್ಯಾತಿ ಪಡೆದ ಗಂಗೊಳ್ಳಿ ಸೇವಾ ಸಂಘ ಶ್ರೀ ಶಾರದೋತ್ಸವ ಸಮಿತಿಯ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ಹಾಗೂ ನವರಾತ್ರಿ ಉತ್ಸವಕ್ಕೆ ಸೋಮವಾರ ಸಂಜೆ ತೆರೆ ಬಿದ್ದಿದೆ. ಶ್ರೀ ಶಾರದಾ ಮಹೋತ್ಸವದ ಸುವರ್ಣ ಮಹೋತ್ಸವ ಪ್ರಯುಕ್ತ ಈ ಬಾರಿಯ ಶ್ರೀ ಶಾರದಾ ಮಹೋತ್ಸವ ವಿಶೇಷ ಆಕರ್ಷಣೆ ಪಡೆದುಕೊಂಡಿತ್ತು. ವಿವಿಧ ಜಿಲ್ಲೆಗಳ ಕಲಾ ತಂಡಗಳು, ಆಕರ್ಷಕ ಸ್ತಬ್ಧಚಿತ್ರಗಳು, ಹುಲಿವೇಷ ತಂಡಗಳು ಶೋಭಾಯಾತ್ರೆಯ ಮೆರಗು ಹೆಚ್ಚಿಸಿದವು. ಗಂಗೊಳ್ಳಿಯ ಶ್ರೀ ಶಾರದಾ ಮಂಟಪದ ಬಳಿಯಿಂದ ಆರಂಭಗೊಂಡ ಶೋಭಾಯಾತ್ರೆಯು ಸರಸ್ವತಿ ವಿದ್ಯಾಲಯ ವಿದ್ಯಾಸಂಸ್ಥೆಗೆ ಸಾಗಿ ಬಂದು ಅಲ್ಲಿಂದ ನಾಯಕವಾಡಿ ಸರ್ಕಲ್‌ವರೆಗೆ ಸಾಗಿ ಮರಳಿ ಗಂಗೊಳ್ಳಿ ಮುಖ್ಯರಸ್ತೆ ಮೂಲಕ ಸಾಗಿ ಬಂದು ಗಂಗೊಳ್ಳಿ ಮೀನುಗಾರಿಕೆ ಬಂದರಿನಲ್ಲಿ ಕೊನೆಗೊಂಡಿತು. ಶೋಭಾಯಾತ್ರೆಯಲ್ಲಿ ನವದುರ್ಗೆಯರನ್ನು ಕಾಣಲು ಜನತೆ ಸಾವಿರಾರು ಸಂಖ್ಯೆಯಲ್ಲಿ ರಸ್ತೆಯ ಇಕ್ಕೆಲಗಳಲ್ಲಿ ಸೇರಿದ್ದರು. ಕೇರಳದ ಆಕರ್ಷಕ ಚಂಡೆ ವಾದನ, ಡೊಳ್ಳು ಕುಣಿತ, ಗೊಂಬೆಗಳು, ಛದ್ಮವೇಷಗಳ ತಂಡ ಸೇರಿದಂತೆ ಹಲವು ವೇಷಗಳು ಅದ್ಭುತ ಪ್ರದರ್ಶನದ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ,ಅ.15: ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಹೆಚ್ಚಿನ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆಯೆಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದೆ. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ನಿಯೋಜನೆಗೊಂಡ ನೋಡಲ್ ಅಧಿಕಾರಿಗಳು, ಸ್ಥಳೀಯ ಸಂಸ್ಥೆಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರುಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತನ್ನು ನಿಭಾಯಿಸಬೇಕು. ಪ್ರವಾಸಿಗರು, ಸಾರ್ವಜನಿಕರು, ಮೀನುಗಾರರು ನದಿ, ಜಲಪಾತ, ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ವಿದ್ಯುತ್ಕಂಬದ ಹತ್ತಿರ ಸುಳಿಯಬಾರದು ಮತ್ತು ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರಬೇಕು. ದುರ್ಬಲವಾದ, ಹಳೆಯ ಕಟ್ಟಡ ಅಥವಾ ಮರಗಳ ಹತ್ತಿರ ಹಾಗೂ ಮರಗಳ ಕೆಳಗೆ ನಿಲ್ಲಬಾರದು. ಈ ಮೇಲ್ಕಂಡ ಅಂಶಗಳನ್ನು ಮಳೆಗಾಲದ ಎಲ್ಲಾ ಸಂದರ್ಭಗಳಲ್ಲಿ ಚಾಚುತಪ್ಪದೇ ಕಡ್ಡಾಯವಾಗಿ ಪಾಲಿಸಬೇಕು. ತುರ್ತುಸೇವೆಗೆ ಶುಲ್ಕರಹಿತ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೋಟ: ಇಲ್ಲಿನ ಮಣೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರು ಹಾಗೂ ಕೆ.ಎಸ್.ಆರ್.ಟಿ.ಸಿ ವೋಲ್ವೋ ಬಸ್ ನಡುವೆ ನಡೆದ ಅಪಘಾತದಲ್ಲಿ ಓರ್ವ ಗಂಭೀರ ಗಾಯಗೊಂಡ ಘಟನೆ ಕೋಟದ ಮಣೂರಿನಲ್ಲಿ ನಡೆದಿದೆ. ಗಂಭೀರ ಗಾಯಗೊಂಡ ವ್ಯಕ್ತಿ ಉಡುಪಿ ಮೂಲದ ಗೌತಮ್ ಪಿ. ಪ್ರಭು (35) ಎಂದು ಗುರುತಿಸಲಾಗಿದೆ. ಇನ್ನೋವಾ ಕಾರಿನಲ್ಲಿ ಗಂಗೊಳ್ಳಿಯಿಂದ ಉಡುಪಿ ಕಡೆ ಹೋಗುತ್ತಿದ್ದ ವೇಳೆ ಕೋಟ ಮಣೂರು ಸಮೀಪ ಮುಂಬೈಯಿಂದ ಮಂಗಳೂರು ಹೋಗುತ್ತಿದ್ದ ಸರ್ಕಾರಿ ವೋಲ್ವೋ ಬಸ್ ಹಿಂದಿನಿಂದ ಓವರ್ ಟೇಕ್ ಮಾಡುವ ಭರದಲ್ಲಿ ಕಾರಿಗೆ ಡಿಕ್ಕಿಯಾಗಿದೆ. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್ ನಲ್ಲಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಜಖಂಗೊಂಡಿದೆ. ಗಂಭೀರ ಗಾಯಗೊಂಡ ಕಾರು ಗೌತಮ್ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಬಸ್ಸಿನಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯಗಳಾಗಿಲ್ಲ. ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದರೆ: ’ಕಠಿಣ ಪರಿಶ್ರಮ, ಶ್ರಮದಲ್ಲಿನ ಭಕ್ತಿ, ಸಮರ್ಪಣಾ ಭಾವ ಮತ್ತು ಕಾರ್ಯ ಬದ್ಧತೆಯಿಂದ ಮಾತ್ರ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ. ನಿರ್ದಿಷ್ಟ ಗುರಿಯೆಡೆಗೆ ಸ್ಪಷ್ಟತೆ ಇರಲಿ. ಗೊಂದಲ ಬೇಡ’ಎಂದು   ಅರ್ಜುನ ಪ್ರಶಸ್ತಿ ಪುರಸ್ಕೃತ ಒಲಂಪಿಯನ್, ಕೋಲ್ಕತ್ತಾದಲ್ಲಿನ ಯೂನಿಯನ್ ಬ್ಯಾಂಕ್ ಇಂಡಿಯಾದ ಸಹಾಯಕ ಮಹಾಪ್ರಬಂಧಕ ಸತೀಶ್ ರೈ ಹೇಳಿದರು. ವಿದ್ಯಾಗಿರಿಯ ಮೋಹಿನಿ ಅಪ್ಪಾಜಿ ನಾಯಕ್ ಸಭಾಂಗಣದಲ್ಲಿ ಸೋಮವಾರ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ’ ಕೀರ್ತಿಶೇಷ ಲೋಕನಾಥ ಬೋಳಾರ್ ವೆಯ್ಟ್ ಲಿಫ್ಟಿಂಗ್ ತರಬೇತಿ ಕೇಂದ್ರ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭವಿಷ್ಯದ ಗುರಿಯನ್ನು ಈಡೇರಿಸಲು ಇಂದೇ ಶ್ರಮವಹಿಸಿ ಹೆಜ್ಜೆ ಇಡಬೇಕು. ಪ್ರತಿ ಕ್ರೀಡಾಪಟುವಿನಲ್ಲೂ ಶಿಸ್ತು, ಸಂಯಮ, ಸಮಯಪಾಲನೆ ಅತ್ಯವಶ್ಯಕ. ಕ್ರೀಡಾ ಮನೋಭಾವದಿಂದ ಕ್ರೀಡೆ, ಸಂಸ್ಥೆ ಹಾಗೂ ದೇಶಕ್ಕೂ ಹೆಮ್ಮೆಯ ವಿದ್ಯಾರ್ಥಿಗಳಾಬೇಕು ಎಂದು ಹಾರೈಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಮಾತನಾಡಿ, ಪ್ರತಿಯೊಬ್ಬರಲ್ಲೂ ಇಚ್ಛಾ ಶಕ್ತಿ ಇದ್ದೆ ಇರುತ್ತದೆ. ಅದನ್ನು ಸರಿಯಾದ ದಾರಿಯಲ್ಲಿ ವಿನಿಯೋಗಿಸಿಕೊಳ್ಳಬೇಕು. ಹಲವಾರು ನುರಿತ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ:  ಮಣಿಪಾಲ್ ಆರೋಗ್ಯ ಕಾರ್ಡ್ 2024ರ ನೋಂದಣಿಯು ಆರಂಭಗೊಂಡಿದೆ. ಭಾರತೀಯ  ಆರೋಗ್ಯ ವ್ಯವಸ್ಥೆಯು ದೂರದರ್ಶಿತ್ವದ ನಾಯಕ  ಡಾ. ಟಿ.ಎಂ.ಎ. ಪೈ ಅವರ ಸಮರ್ಪಣೆ ಮತ್ತು ಸಮಾಜ ಸೇವೆಯಲ್ಲಿ ಬದ್ಧತೆ ಅಸಾಧಾರಣವಾಗಿ ಅಪರೂಪ. ಅವರ ಕನಸನ್ನು ನನಸಾಗಿಸುವಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಕೈಗೆಟಕುವಂತೆ ಮಾಡುವುದು ಈ ಕಾರ್ಡ್‌ನ ಉದ್ದೇಶವಾಗಿದೆ. ಮಣಿಪಾಲ್ ಆರೋಗ್ಯ ಕಾರ್ಡ್ “ಇಡೀ ಕುಟುಂಬಕ್ಕಾಗಿ, ಉತ್ತಮ ಮೌಲ್ಯ, ವಿಶ್ವಾಸಾರ್ಹ ಸೇವೆ ” ಎಂಬ ಅಡಿಬರಹದ ಅಡಿಯಲ್ಲಿ, ಎಲ್ಲಾ ಸದಸ್ಯರಿಗೆ ಸಮಗ್ರ ಆರೋಗ್ಯ ಪ್ರಯೋಜನಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕರಾದ ಮೋಹನ್ ಶೆಟ್ಟಿ ಹೇಳಿದರು. ಅವರು ಅ.15ರಂದು ಕುಂದಾಪುರ ಪ್ರೆಸ್‌ ಕ್ಲಬ್‌ನಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. ಮಾಹೆಯ ಕುಲಾಧಿಪತಿ ಡಾ. ರಾಮದಾಸ್ ಪೈ ಅವರ ನೇತೃತ್ವದಲ್ಲಿ 2000ರಲ್ಲಿ ಪ್ರಾರಂಭವಾದ ಮಣಿಪಾಲ್ ಆರೋಗ್ಯ  ಕಾರ್ಡ್ ಸಾರ್ವಜನಿಕರಿಗೆ ಕೈಗೆಟುಕುವ ದರದಲ್ಲಿಆರೋಗ್ಯ ಸೇವೆಯನ್ನು ಒದಗಿಸಲು ಶ್ರಮಿಸುತ್ತಿದೆ. ಉಚಿತ ಆರೋಗ್ಯ ಸೇವೆಯನ್ನು ನೀಡುವುದು ಸವಾಲಿನದ್ದಾಗಿದ್ದರೂ, ಈ ಉಪಕ್ರಮವು ರಿಯಾಯಿತಿ …

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಿಜೆಪಿಯ ನಿರಂತರ ಸುಳ್ಳು ಅಪಾದನೆಗಳಿಂದ ಜನಪರ ರಾಜ್ಯ ಸರ್ಕಾರವನ್ನು ಅಸ್ಥಿರ ಗೊಳಿಸುವುದು ಅಸಾಧ್ಯ ವಿಧಾನಪರಿಷತ್ತಿನಲ್ಲಿ ಸ್ಥಳೀಯ ಆಡಳಿತ ಸಂಸ್ಥೆಗಳ ಜನಪ್ರತಿನಿಧಿಗಳ ಧ್ವನಿ ಆಗಬಲ್ಲ ರಾಜು ಪೂಜಾರಿ ಅವರನ್ನು ಬೆಂಬಲಿಸಿದರೆ ,ಕರಾವಳಿಯ ಸ್ಥಳೀಯ ಆಡಳಿತಕ್ಕೆ ಶಕ್ತಿ ಬಂದಂತಾಗುತ್ತದೆ, ಮಾತ್ರವಲ್ಲದೆ ಸಿದ್ದರಾಮಯ್ಯನವರ ಕೈ ಬಲಪಡಿಸಿದಂತಾಗುತ್ತದೆ ಎಂದು ಉಡುಪಿ ಜಿಲ್ಲಾ ಕೆಪಿಸಿಸಿ ಉಸ್ತುವಾರಿ ಮತ್ತು ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜಾ ಹೇಳಿದರು. ಕೋಟೇಶ್ವರ ಸಹನಾ ಹೋಟೆಲ್ ಸುಮುಖ ಹಾಲಿನಲ್ಲಿ ನಡೆದ ವಿಧಾನ ಪರಿಷತ್ ಚುನಾವಣೆಯ ಕುಂದಾಪುರ ಕಾಂಗ್ರೆಸ್ ಉಸ್ತುವಾರಿಗಳನ್ನು ಉದ್ದೇಶಿಸಿ ಇವರು ಮಾತನಾಡಿ, ಪ್ರತಿಯೊಂದು ಮನೆಗೆ ಆರ್ಥಿಕ ಶಕ್ತಿಯನ್ನು ನೀಡಿದ ಕಾಂಗ್ರೆಸ್ ಆಡಳಿತದಿಂದ ಮಾತ್ರ ಅಭಿವೃದ್ಧಿ ಸಾಧ್ಯ ಎಂದು ಮಾಜಿ ಸಂಸದರಾದ ಕೆ. ಜಯಪ್ರಕಾಶ್ ಹೆಗ್ಡೆಯವರು ನುಡಿದರು. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರು ವಹಿಸಿದ್ದರು. ವೇದಿಕೆಯಲ್ಲಿ ಅಭ್ಯರ್ಥಿ ಎಸ್. ರಾಜು ಪೂಜಾರಿ, ಕುಂದಾಪುರ ಬ್ಲಾಕ್ ಅಧ್ಯಕ್ಷರಾದ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಕಿಶನ್ ಹೆಗ್ಡೆ, ದಿನೇಶ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗ್ರಾಮೀಣ ವಿಕಾಸಕ್ಕಾಗಿ ವಿಧಾನಪರಿಷತ್ ಚುನಾವಣೆಯಾಗಿದೆ. ಇದಕ್ಕೆ ಶಕ್ತಿ ತುಂಬುವ ಕೆಲಸಕ್ಕಾಗಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಬೇಕು. ಸಾಮಾನ್ಯ ಕಾರ್ಯಕರ್ತರನ್ನು ಸ್ಥಳೀಯ ಮಟ್ಟದಿಂದ ದಿಲ್ಲಿಯ ಮಟ್ಟದವರೆಗೆ ಬೆಳೆಸುವ ಪಕ್ಷ ಇದ್ರೆ ಅದು ಬಿಜೆಪಿ ಪಕ್ಷ ಮಾತ್ರ. ಸಾಮಾನ್ಯ ಕಾರ್ಯಕರ್ತನನ್ನು ಪರಿಷತ್‌ಗೆ ಕಳಿಸುವ ಕೆಲಸವನ್ನು ಸ್ಥಳೀಯಾಡಳಿತ ಸದಸ್ಯರು ಒಗ್ಗಟ್ಟಿನ ಮೂಲಕ ಮಾಡಬೇಕು ಎಂದು ಸಂಸದ ಬಿ. ವೈ ರಾಘವೇಂದ್ರ ಹೇಳಿದರು. ಅವರು ಸಿದ್ದಾಪುರ ಶ್ರೀ ರಂಗನಾಥ ಸಭಾಭವನದಲ್ಲಿ ಸೋಮವಾರ ವಿಧಾನಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿಯ ಪರವಾಗಿ ಸಿದ್ದಾಪುರ ಬಿಜೆಪಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಸ್ಥಳೀಯಾಡಳಿತ ಸದಸ್ಯರ ಪ್ರಚಾರ ಸಭೆಯಲ್ಲಿ ಮಾತನಾಡಿದರು. ಅವೈಜ್ಞಾನಿಕ ಕಸ್ತೂರಿರಂಗನ್ ವರದಿ ಬಗ್ಗೆ ಕೇಂದ್ರ ಸರಕಾರದ ಗಮನಕ್ಕೆ ತರಲಾಗಿದೆ. ಪ್ರಕೃತಿಯ ಜತೆಯಲ್ಲಿ ಜನ ಜೀವನ ಉಳಿಯಬೇಕು. ಪ್ರಕೃತಿ ಉಳಿದರೆ ಮನುಷ್ಯ ಕೂಡ ಬದುಕುತ್ತಾನೆ. ಕಸ್ತೂರಿರಂಗನ್ ವರದಿಯಲ್ಲಿ ಜನ ವಸತಿ ಪ್ರದೇಶವನ್ನು ಬಿಟ್ಟು, ಅರಣ್ಯ ಪ್ರದೇಶವನ್ನು ವರದಿಗೆ ಸೇರಿಸಲು ಅಭ್ಯಂತರ ಇಲ್ಲ ಎಂದರು. ಉಡುಪಿ ಚಿಕ್ಕಮಗಳೂರು ಸಂಸದ…

Read More