ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮರಣ ಬಲೆಯ ಮೀನುಗಾರಿಕೆಗೆ ತೆರಳಿದ್ದ ಸ್ಥಳೀಯ ನಿವಾಸಿ ಭಾಸ್ಕರ (51) ಅವರು ಸಮುದ್ರದ ಸೆಳೆತಕ್ಕೆ ಸಿಕ್ಕಿ ಸಾವನ್ನಪ್ಪಿದ ಘಟನೆ ಸಾಲಿಗ್ರಾಮ ಪಾರಂಪಳ್ಳಿ- ಪಡುಕರೆಯಲ್ಲಿ ಸೋಮವಾರ ಸಂಭವಿಸಿದೆ. ಅವರು ಸಮುದ್ರದಲ್ಲಿ ಬಲೆ ಹಾಕಿ ಮರಳುತ್ತಿದ್ದಾಗ ಸಮುದ್ರದ ಸೆಳೆತಕ್ಕೆ ಸಿಲುಕಿದ್ದು, ಇವರನ್ನುಕೋಸ್ಟ್ ಗಾರ್ಡ್ನ ಸತೀಶ್ ಮತ್ತು ಸುದರ್ಶನ್ ಅವರು ಭಾಸ್ಕರ ಅವರನ್ನು ಸಾಕಷ್ಟು ಪ್ರಯತ್ನಪಟ್ಟು ದಡಕ್ಕೆ ತಂದು ಉಪಚರಿಸಿ ಕೋಟ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಪರಿಕ್ಷೀಸಿದ ವೈದ್ಯರು ಪರೀಕ್ಷಿಸಿ ಭಾಸ್ಕರ ಮೃತಪಟ್ಟಿರುವುದನ್ನು ಧೃಢಪಡಿಸಿರುತ್ತಾರೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಶಂಕರನಾರಾಯಣ: ಇಲ್ಲಿನ ಉಳ್ಳೂರು ಗ್ರಾಮದ ನಿವಾಸಿ ಸುನೀತಾ (42) ಅವರು ಸೋಮವಾರದಂದು ಸಮೀಪದ ಕಾಲುವೆಗೆ ಹಾರಿ ಸಿಮೆಂಟ್ ದಂಡೆಯ ಮೇಲೆ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರು ಮಾನಸಿಕ ಖಾಯಿಲೆಯಿಂದ ಮನನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2023-24 ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ದ್ವಿತೀಯ ಪಿ.ಯು.ಸಿ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಮೆಡಿಕಲ್ ಇಂಜಿನಿಯರಿಂಗ್ ಸೇರಿದಂತೆ ಮುಂತಾದ ಕೋರ್ಸುಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಬಹುಮಾನ ಹಣವನ್ನು ಮಂಜೂರು ಮಾಡುವ ಸಲುವಾಗಿ ಅರ್ಹ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್ಸೈಟ್ twd.karnataka.gov.in (Post matric(PUC/ Degree/PG) prize money) ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಒಂದು ವಾರದ ಒಳಗಾಗಿ ಅರ್ಜಿಯನ್ನು ಹಾಗೂ ಸಂಬಂಧಿಸಿದ ಎಲ್ಲಾ ದಾಖಲಾತಿಗಳನ್ನು ಕಾಲೇಜಿನ ಪ್ರಾಂಶುಪಾಲರಿಂದ ದೃಢೀಕರಿಸಿ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ, ಐ.ಟಿ.ಡಿ.ಪಿ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಇಲ್ಲಿಗೆ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2574814 ಅನ್ನು ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸಮಗ್ರ ಬುಡಕಟ್ಟು ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಗೊಳಿಸುವ ನಿಟ್ಟಿನಲ್ಲಿ, ಸಮರ್ಪಕ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆ ಪದ್ಧತಿಯಿಂದ ಕೃಷಿ ಉತ್ಪಾದಕತೆಯನ್ನು ಉತ್ತಮ ಪಡಿಸಿ ಆದಾಯವನ್ನು ಹೆಚ್ಚಿಸುವ ಸಲುವಾಗಿ ಮತ್ತು ಮಳೆ ನೀರನ್ನು ವ್ಯರ್ಥ ಮಾಡದೆ ಆಯ್ದ ಸ್ಥಳದಲ್ಲಿ ಕೃಷಿ ಹೊಂಡ ತೆಗೆದು ಜಲ ಸಂಗ್ರಹಿಸಿ, ಬೆಳೆಗಳ ಸಂದಿಗ್ಧ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವ ಸಲುವಾಗಿ ಕೃಷಿ ಭಾಗ್ಯ ಯೋಜನೆಯನ್ನು ತಾಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಕೃಷಿ ಭಾಗ್ಯ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ, ಹೊಂಡದಿಂದ ನೀರು ಎತ್ತಲು ಡೀಸೆಲ್/ ಪೆಟ್ರೋಲ್/ ಸೋಲಾರ್ ಪಂಪ್ ಸೆಟ್ ಹಾಗೂ ನೀರನ್ನು ಬೆಳೆಗೆ ಹಾಯಿಸಲು ಸೂಕ್ಷ್ಮ (ತುಂತುರು/ ಹನಿ) ನೀರಾವರಿ ಘಟಕಗಳ ಅನುಷ್ಠಾನಕ್ಕೆ ಸಾಮಾನ್ಯ ವರ್ಗದ ರೈತರಿಗೆ ಶೇ. 80 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ. 90 ರಷ್ಟು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಸೆಪ್ಟಂಬರ್ 12ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 9945856670, 8105618291, ,9901472710 ಹಾಗೂ 8105774936 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಶ್ರೀ ಸಂಸ್ಥಾನ ಕಾಶೀ ಮಠದ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿ ಅವರ ಜನ್ಮ ಶತಾಬ್ದಿ ಉತ್ಸವದ ಅಂಗವಾಗಿ ದೇವಸ್ಥಾನದ ಶ್ರೀ ಮಹಾಗಣಪತಿಯ ಸನ್ನಿಧಾನದಲ್ಲಿ ವಿಶೇಷ ರಂಗಪೂಜೆ, ಪುಷ್ಪಾಲಂಕಾರ ಹಾಗೂ ದೀಪಾರಾಧನೆ ಸೇವೆಗಳು ಭಾನುವಾರ ವಿಜೃಂಭಣೆಯಿಂದ ಜರಗಿತು. ಶ್ರೀಗಳ ಜನ್ಮ ಶತಾಬ್ದಿ ಉತ್ಸವದ ಅಂಗವಾಗಿ ಸ್ವಾತಿ ನಕ್ಷತ್ರದ ಪರ್ವ ಕಾಲದಲ್ಲಿ ಸಂಜೆ ವ್ಯಾಸೋಪಾಸನೆ, ಭಜನೆ, ಗುರು ಗುಣಗಾನ, ಶ್ರೀ ಮಹಾಗಣಪತಿಯ ಸನ್ನಿಧಾನದಲ್ಲಿ ವಿಶೇಷ ರಂಗಪೂಜೆ, ಪುಷ್ಪಾಲಂಕಾರ ಹಾಗೂ ದೀಪಾರಾಧನೆ ಸೇವೆ ಹಾಗೂ ಪ್ರಸನ್ನ ಪೂಜೆ ದೇವಳದ ಪ್ರಧಾನ ಅರ್ಚಕ ಜಿ.ಮೋಹನದಾಸ ಭಟ್ ಮತ್ತು ಜಿ.ಪ್ರದೀಪ್ ಭಟ್ ನೇತೃತ್ವದಲ್ಲಿ ನಡೆಯಿತು. ಶ್ರೀ ವಿಠಲ ರಕುಮಾಯಿ ಸೇವಾ ಸಮಿತಿ ಸದಸ್ಯರು, ಅರ್ಚಕರು, ಸೇವಾದಾರರು, ಸಮಾಜಬಾಂಧವರು ಹಾಗೂ ಭಜಕರು ಉಪಸ್ಥಿತರಿದ್ದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ತನ್ನಲ್ಲಿರುವ 19 ವಿವಿಧ ಶಿಕ್ಷಣ ಸಂಸ್ಥೆಗಳ ಜೊತೆಗೆ ನೂತನ ಕಾನೂನು ಮಹಾವಿದ್ಯಾಲಯವನ್ನು ಆರಂಭಿಸುತ್ತಿದೆ. ಕಾನೂನು ಶಿಕ್ಷಣ ಎಲ್ಲಾ ಸ್ತರಗಳ ಹಾಗೂ ವಿವಿಧ ಜ್ಞಾನ ಶಾಖೆಗಳಿಗೆ ಪೂರಕವಾದ ವೃತ್ತಿ ಆಧಾರಿತ ಕೋರ್ಸ ಆಗಿದೆ. ಮೂಡುಬಿದಿರೆಗೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮನ್ನಣೆ ಇರುವ ಶೈಕ್ಷಣಿಕ ಕಾರ್ಯಕ್ರಮವನ್ನು ಪರಿಚಯಿಸಿ, ಮಧ್ಯಮ ಮತ್ತು ಕೆಳವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣದ ಹೊಸ ಸಾಧ್ಯತೆಗಳನ್ನು ಪರಿಚಯಿಸಿದ ಕೀರ್ತಿ ಆಳ್ವಾಸ್ಗೆ ಸಲ್ಲುತ್ತದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ತಿಳಿಸಿದರು. ಅವರು ಮೂಡುಬಿದಿರೆಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಹೊಸ ಕಾನೂನು ಮಹಾವಿದ್ಯಾಲಯವು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯಕ್ಕೆ (ಕೆಎಸ್ಎಲ್ಯು) ಸಂಯೋಜನೆಗೊಂಡಿದ್ದು, ಬಾರ್ ಕೌನ್ಸಿಲ್ ಆಫ್ ಇಂಡಿಯಾದಿಂದ ಅನುಮೋದನೆ ಪಡೆದಿದೆ ಎಂದರು. ಕರಾವಳಿ ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಅತೀ ಹೆಚ್ಚು ಉದ್ಯೋಗ ಸಾಧ್ಯತೆ ಇರುವ 5 ವರ್ಷಗಳ ಬಿಕಾಂ ಎಲ್ಎಲ್ಬಿ ಪದವಿಯನ್ನು 60 ವಿದ್ಯಾರ್ಥಿ ಪರಿಮಿತಿಯೊಂದಿಗೆ ಹಾಗೂ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ರೋಟರಿ ಕ್ಲಬ್ ಗಂಗೊಳ್ಳಿ ಇವರ ಆಶ್ರಯದಲ್ಲಿ ಕಿಶೋರಿ ಮಾಹಿತಿ ಕಾರ್ಯಾಗಾರ ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ರವಿಶಂಕರ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿ ರೋಟರಿ ಕ್ಲಬ್ ಅಧ್ಯಕ್ಷೆ ಚಂದ್ರಕಲಾ ತಾಂಡೇಲ ಮತ್ತು ಪತ್ರಕರ್ತ ಬಿ. ರಾಘವೇಂದ್ರ ಪೈ ಶುಭ ಹಾರೈಸಿದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಅಮಿತಾ ಮಾಹಿತಿ ನೀಡಿ ವಿದ್ಯಾರ್ಥಿನಿಯರೊಂದಿಗೆ ಚರ್ಚೆ ನಡೆಸಿದರು. ರೋಟರಿ ಕಾರ್ಯದರ್ಶಿ ಮಾಲಾಶ್ರೀ ಖಾರ್ವಿ, ಎಸ್ಡಿಎಂಸಿ ಉಪಾಧ್ಯಕ್ಷೆ ರೇಣುಕಾ ಮೊಗವೀರ, ಸದಸ್ಯ ಅಶೋಕ ಪೂಜಾರಿ ಉಪಸ್ಥಿತರಿದ್ದರು. ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಯಶೋಧಾ ಸ್ವಾಗತಿಸಿದರು. ಸಹಕಶಿಕ್ಷಕಿಯರಾದ ಅನುಷಾ ಸಿ. ಬಂಗೇರ ಕಾರ್ಯಕ್ರಮ ನಿರ್ವಹಿಸಿದರು. ಸಹಶಿಕ್ಷಕಿ ನಾಗರತ್ನ ವಂದಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಕ್ಕಳ ದಿನಾಚರಣೆಯಂದು ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ ಪ್ರದರ್ಶಿಸಿದ 6 ರಿಂದ 18 ವರ್ಷದೊಳಗಿನ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲು ಅರ್ಜಿ ಆಹ್ವಾನಿಸಲಾಗಿದೆ. ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.25,000 ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ.1,00,000 ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 27 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 204, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574978 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಬಹುದಾಗಿದೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಸ್ವಚ್ಛತಾ ಹೀ ಸೇವಾ ಪಾಕ್ಷಿಕ ವಿಶೇಷ ಆಂದೋಲನಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಸೆಪ್ಟಂಬರ್ 14 ರಿಂದ ಅಕ್ಟೋಬರ್ 02 ರ ವರೆಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ನ ಡಾ.ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ವಿಶೇಷ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜನರಲ್ಲಿ ನೈರ್ಮಲ್ಯ, ಶುಚಿತ್ವದ ಕುರಿತು ಅರಿವು ಮೂಡಿಸುವ ಉದ್ದೇಶದೊಂದಿಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಶಕ್ತಿ ಮಂತ್ರಾಲಯ ಹಾಗೂ ಕೇಂದ್ರ ನಗರ ವಸತಿ ವ್ಯವಹಾರಗಳ ಸಚಿವಾಲಯದ ವತಿಯಿಂದ ಸೆಪ್ಟೆಂಬರ್ 14 ರಿಂದ ಅಕ್ಟೋಬರ್ 2 ರ ವರೆಗೆ ಸ್ವಚ್ಛತಾ ಸೇವಾ ಪಾಕ್ಷಿಕ ಕಾರ್ಯಕ್ರಮವನ್ನು ಸ್ವಭಾವ ಸ್ವಚ್ಛತಾ, ಸಂಸ್ಕಾರ ಸ್ವಚ್ಛತಾ ಎಂಬ ಧ್ಯೇಯ ವಾಕ್ಯದೊಂದಿಗೆ ಹಮ್ಮಿಕೊಳ್ಳಲಾಗುವುದು ಎಂದರು.…
