ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣದ ಇತಿಹಾಸದಲ್ಲೇ ಆಳ್ವಾಸ್ ಪದವಿ ಪೂರ್ವ ಕಾಲೇಜು ದಾಖಲೆ ಸೃಷ್ಟಿಸಿದ್ದು, ಕಾಲೇಜಿನ ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗದ ಅನನ್ಯಾ ಕೆ. ಎ. 600ಕ್ಕೆ 600 ಅಂಕ ಪಡೆದಿದ್ದಾಳೆ. ಇಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ‘ಪಿಯುಸಿ ಇತಿಹಾಸದಲ್ಲಿ (ಕೋವಿಡೇತರ) ವಿದ್ಯಾರ್ಥಿಯೊಬ್ಬರು ಪೂರ್ಣಾಂಕ (ಶೇ100) ಪಡೆದಿರುವುದು ಸಾರ್ವಕಾಲಿಕ ಹಾಗೂ ಶಾಶ್ವತ ದಾಖಲೆಯಾಗಿದೆ’ ಎಂದರು. ಆಳ್ವಾಸ್ ಪದವಿ ಪೂರ್ವ ಕಾಲೇಜು 99.74% ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 2658 ವಿದ್ಯಾರ್ಥಿಗಳಲ್ಲಿ 2651 ವಿದ್ಯಾರ್ಥಿಗಳು ಉತ್ತೀರ್ಣರಾಗಿ, ವಿಜ್ಞಾನ ವಿಭಾಗದಲ್ಲಿ 11 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 35 ವಿದ್ಯಾರ್ಥಿಗಳು ಕಲಾ ವಿಭಾಗದಲ್ಲಿ ಓರ್ವ ವಿದ್ಯಾರ್ಥಿನಿ ಸೇರಿದಂತೆ ಕಾಲೇಜಿನ ಒಟ್ಟು 47 ವಿದ್ಯಾರ್ಥಿಗಳು ರಾಜ್ಯದ ಟಾಪ್ 10ರ ಒಳಗೆ ಸ್ಥಾನಗಳನ್ನು ಪಡೆಯುವ ಮೂಲಕ ಆಳ್ವಾಸ್ ಸಂಸ್ಥೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಮಹತ್ಸಾಧನೆ ಮೆರೆಯುವಂತೆ ಮಾಡಿದ್ದಾರೆ ಎಂದರು. ವಾಣಿಜ್ಯ ವಿಭಾಗದಲ್ಲಿ ಅನನ್ಯಾ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಏ.21: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬAದಿಸಿದAತೆ, ಕೇಂದ್ರ ಮತ್ತು ರಾಜ್ಯ ಚುನಾವಣಾ ಆಯೋಗ ನೀಡುವ ಎಲ್ಲಾ ನಿರ್ದೇಶನಗಳನ್ನು ಪಾಲಿಸುವುದರ ಮೂಲಕ ಮುಕ್ತ, ನ್ಯಾಯ ಸಮ್ಮತ ಮತ್ತು ಪಾರದರ್ಶಕ ಚುನಾವಣೆಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಉಡುಪಿ ಮತ್ತು ಕಾಪು ವಿಧಾನಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕ ತುಕಾರಾಂ ಹರಿಬಾಹು ಮುಂಡೆ ಹೇಳಿದರು. ಅವರು ಇಂದು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಜಿಲ್ಲೆಯಲ್ಲಿ ನಡೆದಿರುವ ಚುನಾವಣಾ ಪೂರ್ವ ಸಿದ್ದತೆಗಳನ್ನು ಬಗ್ಗೆ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚುನಾವಣಾ ಪ್ರಕ್ರಿಯೆಯ ಯಾವುದೇ ಹಂತದಲ್ಲಿ ಲೋಪಗಳು ಉಂಟಾಗದAತೆ ಅಗತ್ಯ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳುವಂತೆ ತಿಳಿಸಿದ ಅವರು ಮತಗಟ್ಟೆಗಳಲ್ಲಿ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಮತ್ತು ಮತದಾರರಿಗೆ ಅಗತ್ಯ ವ್ಯವಸ್ಥೆಗಳನ್ನು ಮಾಡುವಂತೆ ತಿಳಿಸಿದರು. ಚುನಾವಣಾ ಆಯೋಗವು ಇದೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟವರು, ವಿಕಲಚೇತನರು ಮತ್ತು ಕೋವಿಡ್ ಪೀಡಿತರಿಗೆ ಮನೆಯಿಂದಲೇ ಮತದಾನ ಮಾಡಲು ನೀಡಿರುವ ಸೌಲಭ್ಯವನ್ನು ಯಾವುದೇ ಗೊಂದಲಗಳಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ, ಬೈಂದೂರು ತಾಲೂಕು ಬಿಜೂರು ನಿವಾಸಿ ಗುರುರಾಜ್ ಶೆಟ್ಟಿ ಗಂಟಿಹೊಳೆ (42) ಅವರ ಒಟ್ಟು ಆದಾಯ 7.63 ಕೋಟಿ ರೂ. ಆಗಿದ್ದರೆ, ಪತ್ನಿ ಅನುರಾಧ ಶೆಟ್ಟಿ ಅವರ ಆದಾಯ 2.12 ಕೋಟಿ ರೂ. ಇದೆ. ಗುರುರಾಜ ಅವರು ವೈಯಕ್ತಿಕವಾಗಿ 1.64 ಕೋಟಿ ರೂ. ಸಾಲವನ್ನು ಹೊಂದಿದ್ದರೆ, 45ಶೇ. ಶೇರನ್ನು ಹೊಂದಿರುವ ಶ್ರೀ ಕ್ಯಾಶ್ಯೂ ಫರ್ಮ್ನಲ್ಲಿ 9,10,63,000 ಸಾಲವನ್ನು ಹೊಂದಿದ್ದಾರೆ ಎಂದು ನಾಮಪತ್ರದೊಂದಿಗೆ ಸಲ್ಲಿಸಿರುವ ಅಫಿದವಿಟ್ನಲ್ಲಿ ತಿಳಿಸಲಾಗಿದೆ. ಗುರುರಾಜ್ ಅವರ ಬಳಿ 1,76,844 ರೂ. ಚರಾಸ್ಥಿ ಇದ್ದರೆ, ಸ್ಥಿರಾಸ್ಥಿಯ ಮೌಲ್ಯ 7,61,40,000ರೂ. ಆಗಿದೆ. ಇದರಲ್ಲಿ ಪಿತ್ರಾರ್ಜಿತ ಆಸ್ತಿಯ ಮೌಲ್ಯ 32,70,000 ರೂ. ಆಗಿದ್ದರೆ, ಸ್ವಯಾರ್ಜಿತ ಆಸ್ತಿ ಮೌಲ್ಯ 7,28,70,00ರೂ. ಎಂದು ತಿಳಿಸಲಾಗಿದೆ. ಗುರುರಾಜರ ಪತ್ನಿ ಅನುರಾಧ ಅವರಲ್ಲಿ 18,74,166 ರೂ. ಚರಾಸ್ಥಿ ಇದ್ದರೆ, ಸ್ಥಿರಾಸ್ಥಿಯ ಮೌಲ್ಯ 1,93,50,000 ರೂ. ಆಗಿದೆ. ಅವರಲ್ಲಿ 8.65 ಲಕ್ಷ ರೂ. ಮೌಲ್ಯದ 346ಗ್ರಾಂ ಚಿನ್ನಾಭರಣಗಳಿವೆ. ಇಬ್ಬರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕೇಂದ್ರ ಹಾಗೂ ರಾಜ್ಯ ಸರಕಾರದ ಸಾಧನೆಗಳು ಜನಸಾಮಾನ್ಯರ ಮನಸ್ಸಿನಲ್ಲಿದೆ. ಯುವಕರ, ದಮನಿತರ ಧ್ವನಿಯಾಗಿ ಸಂಘದ ಒಬ್ಬ ಸಾಮಾನ್ಯ ಕಾರ್ಯಕರ್ತ ಗುರುರಾಜ ಗಂಟಿಹೊಳೆಯವರಿಗೆ ಪಕ್ಷ ಅವಕಾಶ ನೀಡಿದೆ.ಇದು ಕಾರ್ಯಕರ್ತರ ಗೆಲುವಾಗಬೇಕು. ಬೈಂದೂರು ಸೇರಿದಂತೆ ರಾಜ್ಯದಲ್ಲಿ ಬಿಜೆಪಿ ನಿಶ್ಚಿತವಾದ ಬಹುಮತ ಗಳಿಸಲಿದೆ ಎಂದು ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯ ಹೇಳಿದರು. ಅವರು ಬೈಂದೂರು ಬಿಜೆಪಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ ಬಹುತೇಕ ಹೊಸ ಅಭ್ಯರ್ಥಿಗಳಿಗೆ ಬಿಜೆಪಿ ಅವಕಾಶ ನೀಡಿದೆ.ಮರವಂತೆ ಮೀನುಗಾರರ ಚುನಾವಣೆ ಬಹಿಷ್ಕಾರ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಕೇಂದ್ರ ಹಾಗೂ ರಾಜ್ಯ ಸರಕಾರ ಮೀನುಗಾರರ ಅಭಿವೃದ್ದಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ.ಕರಾವಳಿ ಭಾಗದ ಅಭಿವೃದ್ದಿಗೆ ವಿಶೇಷ ಆದ್ಯತೆ ನೀಡಲಾಗಿದೆ.ಮೀನುಗಾರರ ವಿಶ್ವಾಸದೊಂದಿಗೆ ಬಿಜೆಪಿ ಭರವಸೆ ಈಡೇರಿಸಲಿದೆ ಎಂದರು. ಬಿಜೆಪಿ ಸ್ಟಾರ್ ಪ್ರಚಾರಕಿ ಶ್ರುತಿ ಮಾತನಾಡಿ ಬಂದೂರು ಕ್ಷೇತ್ರ ಈ ಬಾರಿ ರಾಜ್ಯಮಟ್ಟದಲ್ಲಿ ಸುದ್ದಿಯಾಗಿದೆ.ಸಂಘದ ಒಬ್ಬ ಸಾಮಾನ್ಯ ಕಾರ್ಯಕರ್ತನಿಗೆ ಅವಕಾಶ ನೀಡಿರುವುದು ಅದು ಬಿಜೆಪಿಯಿಂದ ಮಾತ್ರ ಸಾಧ್ಯ. ಹೀಗಾಗಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜನಸಾಮಾನ್ಯರ ನೋವು, ನಲಿವುಗಳನ್ನು ವಿಧಾನಸಭೆಯಲ್ಲಿ ಸಮರ್ಥವಾಗಿ ಮಂಡಿಸುವ ಚಾಕಚಕ್ಯತೆ ಹೊಂದಿರುವ, ರಾಷ್ಟ್ರೀಯತೆ ಮೈಗೂಡಿಸಿಕೊಂಡು ಕೆಲಸವನ್ನು ಮಾಡುತ್ತಿರುವ ಬೈಂದೂರು ಚೌಕಿದಾರ್ ಗುರುರಾಜ್ ಗಂಟಿಹೊಳೆಯವರ ವಿಜಯಕ್ಕೆ ಕಾರ್ಯಕರ್ತರು ಶಕ್ತಿಮಿರಿ ಕೆಲಸ ಮಾಡಬೇಕು ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಬೈಂದೂರು ವಿಧಾನಸಭೆ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಗುರುರಾಜ ಗಂಟಿಹೊಳೆ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಅಂಗವಾಗಿ ಗುರುವಾರ ಬೈಂದೂರು ಹೊಸ ಬಸ್ ನಿಲ್ದಾಣದಲ್ಲಿ ನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು. ಯುವಜನರ ರಣೋತ್ಸವ ಕಂಡಾಗ ನಮ್ಮ ಅಭ್ಯರ್ಥಿ ಗಂಟಿಹೊಳೆ ಅವರು ಸುಮಾರು ಒಂದು ಲಕ್ಷ ಮತಗಳ ಅಂತರದಿಂದ ಗೆಲುವು ಸಾಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಚಿವ ಸುನಿಲ್ ಕುಮಾರ್ ಮಾತನಾಡಿ, ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅವರ ಕಾಲದಲ್ಲಿ ಬೈಂದೂರು ಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕೆಲಸಗಳು ನಡೆದಿದೆ ಅವರ ಕಾರ್ಯಗಳು ಮುಂದುವರಿಯಬೇಕಾದರೆ ಬಿಜೆಪಿ ಅಭ್ಯರ್ಥಿ ಶಾಸಕನಾಗ ಬೇಕು ಎಂದು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ನಾಲ್ಕು ಭಾರಿ ಶಾಸಕ, ಒಮ್ಮೆ ಕೆಎಸ್ಆರ್ಟಿಸಿ ಅಧ್ಯಕ್ಷ ಆದರೂ ಈ ಸುಧೀರ್ಘ ರಾಜಕೀಯ ಬದುಕಿನಲ್ಲಿ ಬೈಂದೂರಿನ ಹಾಲಿ ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಅವರು ಗಳಿಸಿದ್ದಕ್ಕಿಂತ ಕಳೆದುಕೊಂಡದ್ದೇ ಹೆಚ್ಚು! ಸಾಮಾನ್ಯ ಹೋಟೆಲ್ ಕಾರ್ಮಿಕನಾಗಿ ವೃತ್ತಿ ಬದುಕು ಆರಂಭಿಸಿದ ಗೋಪಾಲ ಪೂಜಾರಿ ಅವರು ಮುಂದೆ ಹತ್ತಾರು ಹೋಟೆಲ್ಗಳ ಒಡೆಯರಾಗಿದ್ದವರು. ಈ ಮಧ್ಯೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಪ್ರಭಾವವು ಅವರನ್ನು ರಾಜಕೀಯದತ್ತ ಸೆಳೆಯಿತು. ಒಟ್ಟು ಏಳು ಭಾರಿ ಸ್ವರ್ಧಿಸಿ ನಾಲ್ಕು ಭಾರಿ ವಿಜಯದ ಮಾಲೆ ತೊಟ್ಟರು. ಆದರೆ ಪ್ರತಿ ಸೋಲು – ಗೆಲುವಿನ ನಡುವೆಯೂ ಅವರ ಆಸ್ತಿ ಮೌಲ್ಯ ಕ್ಷೀಣಿಸುತ್ತಲೇ ಬಂದಿದೆ. 2013ರಲ್ಲಿ ಅವರ ಒಟ್ಟು ಆಸ್ತಿ ಮೌಲ್ಯ 13 ಕೋಟಿಗಳಷ್ಟಿದ್ದರೆ, 2018ಕ್ಕೆ ಅದು 8 ಕೋಟಿ ಇಳಿದಿತ್ತು. 2023ರಲ್ಲಿ ಕೇವಲ 1.35 ಕೋಟಿ ಮೌಲ್ಯದ ಒಟ್ಟು ಆಸ್ತಿ ಉಳಿದಿದೆ. ಒಂದೊಂದು ಭಾರಿ ಸ್ವರ್ಧಿಸಿದಾಗಲೂ ಒಂದೊಂದು ಹೋಟೆಲ್ ಕಳೆದುಕೊಂಡಿದ್ದಾರೆ ಎಂಬ ಮಾತನ್ನು ಕ್ಷೇತ್ರದ ಜನರೇ ಹೇಳುತ್ತಾರೆ.…
ಕುಂದಾಪ್ರ ಡಾಟ್ ಕಾಂ ಸುದ್ದಿಉಡುಪಿ: ಚುನಾವಣಾ ಕಾರ್ಯಗಳನ್ನು ನಿರ್ವಹಿಸುವಾಗ ಪಾರದರ್ಶಕತೆಯನ್ನು ಕಾಪಾಡುವುದರಿಂದ ಅನಾವಶ್ಯಕ ದೂರುಗಳಿಂದ ದೂರವಿರಲು ಸಾಧ್ಯವಾಗುತ್ತದೆ ಎಂದು ಪ್ರಾದೇಶಿಕ ಆಯುಕ್ತ ಪ್ರಕಾಶ್ ಹೇಳಿದರು. ಅವರು ಇಂದು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಚುನಾವಣಾ ಪೂರ್ವ ತಯಾರಿ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚುನಾವಣಾ ಕಾರ್ಯಗಳಲ್ಲಿ ನಿಯೋಜನೆಗೊಂಡಿರುವ ಪ್ರತಿಯೊಬ್ಬ ಅಧಿಕಾರಿ ಸಿಬ್ಬಂದಿಯೂ ಚುನಾವಣಾ ಆಯೋಗ ಆಗಿಂದಾಗ್ಗೆ ನೀಡುವ ನಿರ್ದೇಶನಗಳನ್ನು ಹಾಗೂ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಿದಾಗ ಚುನಾವಣಾ ಕಾರ್ಯಗಳನ್ನು ಸರಳವಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದರು. ಪ್ರತಿಯೊಂದು ಮತದಾನ ಕೇಂದ್ರಗಳಲ್ಲಿಯೂ ಅಗತ್ಯ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ವಿದ್ಯುತ್ ಸಂಪರ್ಕ ಸೇರಿದಂತೆ ಮತ್ತಿತರ ಸೌಲಭ್ಯಗಳನ್ನು ಕಲ್ಪಿಸುವುದರ ಜೊತೆಗೆ ತುರ್ತು ಸಂದರ್ಭದಲ್ಲಿ ಪ್ರಥಮ ಚಿಕಿತ್ಸೆ ನೀಡಲು ಹೆಲ್ತ್ ಕಿಟ್ UಳÀನ್ನೂ ಸಹ ಹೊಂದಬೇಕು ಎಂದರು. ಚುನಾವಣಾ ಕಾರ್ಯ ನಿರ್ವಹಿಸುತ್ತಿರುವವವರ ಬಗ್ಗೆ ದೂರುಗಳು ಬಂದಾಗ ಅವುಗಳ ಬಗ್ಗೆ ಸಾಕ್ಷö್ಯಧಾರಗಳನ್ನು ಪಡೆಯುವುದು ಅವಶ್ಯ,ಅನಾಮಧೇಯ ಪತ್ರಗಳಿಗೆ ಹೆಚ್ಚಿನ ಒತ್ತು ನೀಡುವುದು ಅವಶ್ಯವಿಲ್ಲ ಎಂದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ನಾಗನೂರ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ನಿಯೋಗ ಉಡುಪಿ ಜಿಲ್ಲೆಯ ಪ್ರತಿಷ್ಠಿತ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ಸಂಘಕ್ಕೆ ಸೋಮವಾರ ಭೇಟಿ ನೀಡಿತು. ಸಹಕಾರಿಯ ಅಭಿವೃದ್ಧಿಗೋಸ್ಕರ ಅಧ್ಯಯನ ಪ್ರವಾಸದ ನಿಮಿತ್ತ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿಗೆ ಭೇಟಿ ನೀಡಿದ ನಾಗನೂರ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರು, ನಿರ್ದೇಶಕರು, ಪ್ರಧಾನ ವ್ಯವಸ್ಥಾಪಕರು ಹಾಗೂ ೧೦ ಶಾಖೆಗಳ ಶಾಖಾ ವ್ಯವಸ್ಥಾಪಕರನ್ನೊಳಗೊಂಡ ತಂಡ, ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ಸಂಘದಲ್ಲಿ ಸಾಲ ನೀಡುವ ದಾಖಲೆ ಪತ್ರಗಳ ಮಾಹಿತಿ, ಸಾಲ ವಸೂತಿ, ಸಹಕಾರಿಯ ಬೆಳವಣಿಗೆ ಕೈಗೊಳ್ಳಲಾದ ಕ್ರಮಗಳು, ಠೇವಣಿ ಸ್ವೀಕಾರ, ಸಂಘವನ್ನು ಅಭಿವೃದ್ಧಿಪಡಿಸುವ ಬಗ್ಗೆ ಸವಿಸ್ತಾರವಾಗಿ ಚರ್ಚೆ ನಡೆಸಿ ಮಾಹಿತಿಗಳನ್ನು ಪಡೆದುಕೊಂಡರು. ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಣೇಶ ನಾಯಕ್ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ನಾಗನೂರ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್ ಮತ್ತು ಎನ್. ಎಸ್. ಎಸ್ ಘಟಕಗಳು, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ಬೈಂದೂರು ಸಮುದಾಯ ಅರೋಗ್ಯ ಕೆಂದ್ರದ ಸಹಯೋಗದೊಂದಿಗೆ ಎಚ್.ಐ.ವಿ ತಡೆಗಟ್ಟುವ ಕ್ರಮ ಮತ್ತು ಯುವಕರಲ್ಲಿ ಅರಿವು” ಎಂಬ ಮಾಹಿತಿ ಕಾರ್ಯಗಾರವನ್ನು ನಡೆಯಿತು. ಈ ಕಾರ್ಯಕ್ರಮದಲ್ಲಿ ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಕಿ ವಾಸಂತಿ, ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ “ಏಡ್ಸ್ ಹರಡುವಿಕೆಯನ್ನು ತಡೆಗಟ್ಟುವ ಕ್ರಮಗಳು, ಮುಂಜಾಗ್ರತೆ ಹಾಗೂ ಜನಸಾಮಾನ್ಯರಲ್ಲಿ ಈ ಕುರಿತು ಅರಿವು ಮೂಡಿಸುವ ಅವಶ್ಯಕತೆಯ ಬಗ್ಗೆ ಸವಿಸ್ತಾರವಾಗಿ ಮಾಹಿತಿಯನ್ನು ನೀಡಿದರು. ಜೊತೆಗೇ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಜಾಗೃತಿಗೊಳಿಸಿದರು. ಕಾಲೇಜಿನ ಪ್ರಾಂಶುಪಾಲರಾದ ನಾಗರಾಜ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷೀಯ ನುಡಿಗಳನ್ನಾಡಿದರು. ಯುವ ರೆಡ್ ಕ್ರಾಸ್ ಹಾಗೂ ರೆಡ್ ರಿಬ್ಬನ್ ಕ್ಲಬ್ ಸಂಚಾಲಕರಾದ ಡಾ. ಶಿವಕುಮಾರ ಪಿ.ವಿ, ಪ್ರಾಸ್ತಾವಿಕವಾಗಿ ಮಾತನಾಡಿದರು .…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಮಕುಮಾರ್ ಅವರು ಎ.23ರ ಭಾನುವಾರ ಮಧ್ಯಾಹ್ನ 2 ಗಂಟೆಗೆ ಬೈಂದೂರಿನಲ್ಲಿ ನಡೆಯಲಿರುವ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಬೈಂದೂರು ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಹೇಳಿದರು. ಅವರು ಬೈಂದೂರು ಕಾಂಗ್ರೆಸ್ ಕಛೇರಿಯಲ್ಲಿ ಆಯೋಜಿಸಲಾದ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿ, ಕ್ಷೇತ್ರದಲ್ಲಿ ಈಗಾಗಲೇ ಕಾಂಗ್ರೆಸ್ ಪರ ಅಲೆ ಇದ್ದು, ಡಿಕೆಶಿ ಅವರ ಕಾರ್ಯಕ್ರಮದಲ್ಲಿಯೇ ಬಿಜೆಪಿಯ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ ಎಂದರು. ರಾಜ್ಯ ಬಿಜೆಪಿ ಸರಕಾರ ಅಭಿವೃದ್ಧಿಯ ಭರವಸೆಯನ್ನಷ್ಟೇ ನೀಡುತ್ತಾ ಬಂದಿದ್ದು, ಯಾವುದನ್ನೂ ಕಾರ್ಯರೂಪಕ್ಕೆ ತಂದಿಲ್ಲ. ಕರಾವಳಿಕ ಮೀನುಗಾರರಿಗೆ ಅನ್ಯಾಯ ಎಸಗುತ್ತಲೇ ಬಂದಿದೆ. ಕಾಂಗ್ರೆಸ್ ಸರಕಾರದ ಅವಧಿಯಲ್ಲಿನ ಯೋಜನೆಗಳನ್ನು ಕಡಿತಗೊಳಿಸಿ ಜನರಿಗೆ ಮೋಸ ಮಾಡಿದ್ದು, ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಗ್ಯಾರೆಂಟಿ ಯೋಜನೆ ತಕ್ಷಣ ಜಾರಿಗೆ ಬರಲಿದೆ ಎಂದರು. ಈ ವೇಳೆ ಬೈಂದೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಬ್ಲಾಕ್…
