Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸಂಘ ಸಂಸ್ಥೆಗಳ ಸಹಭಾಗಿತ್ವದಿಂದ ಸ್ಥಳೀಯ ಸಂಸ್ಥೆಗಳು ಜನಸಾಮಾನ್ಯರಿಗೆ ಹೆಚ್ಚಿನ ಮೂಲ ಅವಶ್ಯಕತೆಯನ್ನು ಒದಗಿಸಲು ಸಾಧ್ಯವಾಗುತ್ತದೆ. ದೀರ್ಘ ಕಾಲದಿಂದ ನಿರ್ಲಕ್ಷ್ಯಕ್ಕೊಳಗಾಗಿದ್ದ ಹಿಂದೂ ರುದ್ರಭೂಮಿಯನ್ನು ಅಭಿವೃದ್ಧಿಪಡಿಸಲು ಮುಕ್ತಿಧಾಮ ಟ್ರಸ್ಟ್ ರಿ. ಪಟ್ಟಣ ಪಂಚಾಯತ್ ಜತೆ ಕೈ ಜೋಡಿಸಿ ಶ್ರಮಿಸಿದ ಕಾರ್ಯ ಶ್ಲಾಘನೀಯ ಎಂದು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನವೀನ ಕುಮಾರ್ ಹೇಳಿದರು. ಅವರು ಇಲ್ಲಿನ ಹಿಂದೂ ರುದ್ರಭೂಮಿಯಲ್ಲಿ ಪಟ್ಟಣ ಪಂಚಾಯತ್ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಕಾರದಿಂದ ತಲಾ ಒಂದೊಂದು ಸಿಲಿಕಾನ್ ಚೇಂಬರ್ ಅಳವಡಿಸಿ ನವೀಕರಿಸಿದ ರುದ್ರಭೂಮಿಯ ಲೋಕಾರ್ಪಣೆ ಮತ್ತು ನಿರ್ವಹಣೆಯ ಹೊಣೆ ಹೊತ್ತಿರುವ ಮುಕ್ತಿಧಾಮ ಟ್ರಸ್ಟಿಗೆ ಕೀ ಹಸ್ತಾಂತರಣ ಸಮಾರಂಭದಲ್ಲಿ ಮಾತನಾಡಿದರು. ಬೈಂದೂರು ಬಾಜಪ ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮಾತನಾಡಿ ರುದ್ರಭೂಮಿ ಜನರ ಮೂಲ ಅವಶ್ಯಕತೆಗಳಲ್ಲಿ ಒಂದಾಗಿದೆ. ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಕ್ಕೆ ಅನುದಾನ ಒದಗಿಸಲಾಗುವುದು. ಈಗಾಗಲೇ ಬೈಂದೂರಿನಲ್ಲಿ ಬಸ್ ತಂಗುದಾಣ, ಇ ಶೌಚಾಲಯಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು. ಮುಕ್ತಿಧಾಮ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 108ನೇ ವಾರ್ಷಿಕ ಮಹಾಸಭೆಯಲ್ಲಿ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ 2021-22 ಸಾಲಿನ ವಾರ್ಷಿಕ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದೆ. ಸಂಘದ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಅವರಿಗೆ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ. ಏನ್. ರಾಜೇಂದ್ರ ಕುಮಾರ್ ಅವರು ಪ್ರಶಸ್ತಿ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಎಂ. ಚಂದ್ರಶೀಲ ಶೆಟ್ಟಿ, ನಿರ್ದೇಶಕರಾದ ಎಂ. ವಿನಾಯಕ ರಾವ್, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ ಅಳ್ವೆಗದ್ದೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಪ್ರವೀಣ್ ಬಿ ನಾಯಕ್, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಲಕ್ಷ್ಮೀ ನಾರಾಯಣ, ಕುಂದಾಪುರ ತಾಲೂಕು ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಲಾವಣ್ಯ, ಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷರಾದ ವಿನಯ ಕುಮಾರ್ ಸೂರಿಂಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಬಿ. ಹಾಗೂ ಎಲ್ಲಾ ನಿರ್ದೇಶಕರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಶುಕ್ರವಾರ ವರಮಹಾಲಕ್ಷ್ಮೀ ವ್ರತ, ಸಾರ್ವಜನಿಕ ವರಮಹಾಲಕ್ಷ್ಮೀ ಪೂಜೆ ನಡೆಯಿತು. ಇದೇ ಸಂದರ್ಭ ವೇ.ಮೂ. ಚೆನ್ನಕೇಶವ ಗಾಯತ್ರಿಭಟ್ಟ ಆನಗಳ್ಳಿ ಅವರ ನೇತೃತ್ವದಲ್ಲಿ ಲಕ್ಷ್ಮೀ ಹೃದಯ ಹೋಮ ನೆರವೇರಿತು. ಬಳಿಕ ಸಾರ್ವಜನಿಕರಿಗೆ ಮಹಾ ಅನ್ನಸಂತರ್ಪಣೆ ಜರುಗಿತು. ದೇವಸ್ಥಾನದ ಅರ್ಚಕರಾದ ಕೃಷ್ಣಮೂರ್ತಿ ನಾವಡ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಎನ್. ನಾಗರಾಜ ಶೆಟ್ಟಿ, ಗೌರವಾಧ್ಯಕ್ಷ ಎಸ್. ರಾಜು ಪೂಜಾರಿ, ಕಾರ್ಯದರ್ಶಿ ಶಿವರಾಮ ಪೂಜಾರಿ, ಶಂಕರ ಮೊಗವೀರ, ಮಂಜುನಾಥ ಆಚಾರ್ಯ, ಸತ್ಯಪ್ರಸನ್ನ, ಅಣ್ಣಪ್ಪ ಪೂಜಾರಿ (ಪಾತ್ರಿ) ಮೊದಲಾದವರು ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ,ಅ.05: ಪ್ರಾಕೃತಿಕ ವಿಕೋಪದಿಂದಾಗಿ ಮೀನುಗಾರರರು ಸಾಕಷ್ಟು ನಷ್ಟ ಅನುಭವಿಸಿದ್ದರೂ ಯಾವೊಬ್ಬ ಅಧಿಕಾರಿ, ಜನಪ್ರತಿನಿಧಿಗಳು ಸ್ಥಳಕ್ಕೆ ಬಂದು ಮೀನುಗಾರರ ಸಂಕಷ್ಟ ತಿಳಿಯುವ ಕೆಲಸ ಮಾಡಿಲ್ಲ. ಸರಕಾರ, ಅಧಿಕಾರಿಗಳು, ಜನಪ್ರತಿನಿಧಿಗಳು ಪ್ರತಿಭಾರಿಯೂ ಮೀನುಗಾರರನ್ನು ಕಡೆಗಣಿಸುತ್ತಲೇ ಬಂದಿದ್ದಾರೆ. ನಮ್ಮ ಬದುಕಿಗೆ ಅಷ್ಟೂ ಕೂಡ ಕಿಮ್ಮತ್ತಿಲ್ಲವೇ ಎಂದು ಮೀನುಗಾರ ಮುಖಂಡ ಎಸ್. ಮದನಕುಮಾರ್ ಉಪ್ಪುಂದ ಪ್ರಶ್ನಿಸಿದ್ದಾರೆ. ಅಗಸ್ಟ್ 2ರಂದು ಶಿರೂರು ಭಾಗದಲ್ಲಿ ನಡೆದ ಜಲಸ್ಪೋಟದಂತಹ ಪ್ರಾಕೃತಿಕ ವಿಕೋಪದಿಂದಾಗಿ ಮೀನುಗಾರರು ಸಾಕಷ್ಟು ನಷ್ಟ ಅನುಭವಿದ ಸಂದರ್ಭ ಅವರಿಗೆ ಸ್ಪಂದಿಸದೇ ಮೀನುಗಾರ ಸಮುದಾಯವನ್ನು ಕಡೆಗಣಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸರಕಾರದ ನಡೆಯನ್ನು ಖಂಡಿಸಿ ಉಪ್ಪುಂದ ಭಾಗದ ಮೀನುಗಾರರು ಶುಕ್ರವಾರ ಬೈಂದೂರು ತಾಲೂಕು ಕಛೇರಿ ಮುಂಭಾಗದಲ್ಲಿ ಹಮ್ಮಿಕೊಂಡ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಕಡಲ ಮಕ್ಕಳನ್ನು ರೋಡಿಗೆ ಬರಲು ಬಿಡಬೇಡಿ. ನಾವು ರೋಡಿಗಿಳಿದಾಗ ಏನೇನು ಆಗಿದೆ ಎಂದು ಚರಿತ್ರೆಯನ್ನು ತಿರುಗಿ ನೋಡಿ. ನಮ್ಮ ಹಕ್ಕು ಹಾಗೂ ಬೇಡಿಕೆಗಳಿಗಾಗಿ ಪದೇ ರೋಡಿಗೆ ಬಂದು ನಿಲ್ಲುವ ಸನ್ನಿವೇಶ ಸೃಷ್ಠಿಯಾಗೋದು ಬೇಡ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಜನನ-ಮರಣ ನೋಂದಣಿ ಪ್ರಕರಣಗಳನ್ನು ಜೆ.ಎಂ.ಎಫ್.ಸಿ. ನ್ಯಾಯಾಲಯದಿಂದ ಉಪವಿಭಾಗಾಧಿಕಾರಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡುವ ರಾಜ್ಯ ಸರಕಾರದ ಅಧಿಸೂಚನೆಯ ವಿರುದ್ಧ ಗುರುವಾರ ಕುಂದಾಪುರ ಬಾರ್ ಅಸೋಸಿಯೇಷನ್ ಎದುರು ವಕೀಲರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬಾರ್ ಅಸೋಸಿಯೇಷನ್ ಅಧ್ಯಕ್ಷರಾದ ಬನ್ನಾಡಿ ಸೋಮನಾಥ್ ಹೆಗ್ಡೆ ಮಾತನಾಡಿ, ಜನನ-ಮರಣ ನೋಂದಣಿ ಪ್ರಕರಣಗಳನ್ನು ಎಸಿ ಕೋರ್ಟಿಗೆ ವರ್ಗಾವಣೆ ಮಾಡಿದರೆ ಜನಸಾಮಾನ್ಯರಿಗೆ ಹೆಚ್ಚಿನ ತೊಂದರೆಯಾಗುತ್ತದೆ ಮತ್ತು ಈ ಪ್ರಕ್ರಿಯೆಯೇ ಕಾನೂನು ಬಾಹಿರವಾಗಿದೆ. ಎಸಿ ಕೋರ್ಟಿನಲ್ಲಿ ಈಗಾಗಲೇ ಇರುವ ಪ್ರಕರಣಗಳು ಮತ್ತಷ್ಟು ವಿಳಂಬವಾಗಲಿದೆ. ಸರಕಾರ ಈ ಬಗ್ಗೆ ಗಮನಹರಿಸಿ ಅಧಿಸೂಚನೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ವಕೀಲರ ಸಂಘದ ಹಿರಿಯ ಕಿರಿಯ ಮಹಿಳಾ ವಕೀಲರು ಪಾಲ್ಗೊಂಡಿದ್ದರು. ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಜೆ. ಶ್ರೀನಾಥ್ ರಾವ್, ಉಪಾಧ್ಯಕ್ಷರಾದ ಬೀನಾ ಜೊಸೆಫ್, ಕೋಶಾಧಿಕಾರಿ ಹಾಲಾಡಿ ದಿನಕರ್ ಕುಲಾಲ್ ಮತ್ತು ಜತೆ ಕಾರ್ಯದರ್ಶಿ ರಿತೇಶ್ ಬಿ. ಉಪಸ್ಥಿತರಿದ್ದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಗಂಗೊಳ್ಳಿಯ ಎಸ್. ವಿ. ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ನಡೆದ ಕುಂದಾಪುರ ವೃತ್ತ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಗಂಗೊಳ್ಳಿ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ಗಂಗೊಳ್ಳಿಯ ಎಸ್. ವಿ. ಹಿರಿಯ ಪ್ರಾಥಮಿಕ ಶಾಲೆಯ ತಂಡವನ್ನು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ. ಕೊಂಚಾಡಿ ರಾಧಾ ಶೆಣೈ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡದ ನಾಯಕಿ ಅಂಶು ಖಾರ್ವಿ ಉತ್ತಮ ಆಟಗಾರ್ತಿ ಹಾಗೂ ಸಿಂಚನಾ ಖಾರ್ವಿ ಉತ್ತಮ ಹಿಡಿತಗಾರ್ತಿ ಪ್ರಶಸ್ತಿಯನ್ನು ಪಡೆದುಕೊಂಡರು. ದೈಹಿಕ ಶಿಕ್ಷಣ ಶಿಕ್ಷಕ ಉಮೇಶ್ ತರಬೇತಿ ನೀಡಿದರು. ಸಹಶಿಕ್ಷಕಿ ಸರಿತಾ ಕೆ. ಎಸ್. ತಂಡದ ವ್ಯವಸ್ಥಾಪಕರಾಗಿ ಭಾಗವಹಿಸಿದ್ದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಸುಮತಿ ಎಂ. ಹಾಗೂ ಶಿಕ್ಷಕ ವೃಂದ ಹಾಗೂ ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು ಮತ್ತು ಪೋಷಕರು ವಿಜೇತ ತಂಡದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಸಮೃದ್ಧ ಯುವಶಕ್ತಿಯನ್ನು ಹೊಂದಿರುವ ನಮ್ಮ ದೇಶದಲ್ಲಿ ಯುವ ಜನರು ಮಾದಕ ವಸ್ತುಗಳಿಗೆ, ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಸುಮಾರು 18-24 ವರ್ಷದೊಳಗಿನ ಯುವಕರು ಮದ್ಯಪಾನ ಸೇರಿದಂತೆ ಗಾಂಜಾ, ಅಪೀಮು ಮುಂತಾದ ಮಾದಕ ವಸ್ತುಗಳಿಗೆ ದಾಸರಾಗಿ ತಮ್ಮ ಜೀವನವನ್ನೇ ಬಲಿ ಕೊಡುತ್ತಿದ್ದಾರೆ. ಕ್ಯಾನ್ಸರ್ ಮತ್ತಿತರ ಗಂಭೀರ ಕಾಯಿಲೆಗಳಿಗೆ ತುತ್ತಾಗಿ ಇಡೀ ಕುಟುಂಬ ಬೀದಿ ಪಾಲಾಗುವ ಸ್ಥಿತಿ ನಿರ್ಮಾಣವಾಗುತ್ತಿದೆ. ಆದ್ದರಿಂದ ಯುವ ಜನತೆ ದಾರಿ ತಪ್ಪದಂತೆ, ದುಶ್ಚಟಗಳಿಗೆ ಬಲಿಯಾಗದಂತೆ ಸನ್ಮಾರ್ಗದಲ್ಲಿ ಮುನ್ನಡೆಯಲು ಅವರಿಗೆ ಸೂಕ್ತ ಮಾಹಿತಿ ಮಾರ್ಗದರ್ಶನ ನೀಡಬೇಕಾಗಿದೆ ಎಂದು ಬೈಂದೂರು ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷ ಸುಧಾಕರ ಆಚಾರ್ಯ ತ್ರಾಸಿ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ಮಾದಕ ವಸ್ತು ವಿರೋಧಿ ದಿನಾಚರಣೆ ಅಂಗವಾಗಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಶನಿವಾರ ಜರಗಿದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸ.ವಿ.ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಸಂಶೋಧನೆಗಳು ಕುತೂಹಲಗಳನ್ನು ತಣಿಸುತ್ತದೆ, ಶಿಕ್ಷಣ ಸಂಶೋಧನೆಗೆ ವೈಜ್ಞಾನಿಕ ಚೌಕಟ್ಟು ಒದಗಿಸುತ್ತದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಹೇಳಿದರು. ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಆಳ್ವಾಸ್ ಟ್ರೆಡಿ?ನಲ್ ಮೆಡಿಸಿನ್ ಆರ್ಕೈವ್ (ಎಟಿಎಂಎ) ಅಂಡ್ ರಿಸರ್ಚ್ ಸೆಂಟರ್ ಹಾಗೂ ಬೆಂಗಳೂರಿನ ಹಿಮಾಲಯ ವೆಲ್ ನೆಸ್ ಕಂಪೆನಿ ಸಹಯೋಗದಲ್ಲಿ ನಡೆದ ‘ಸಂವೇದ – ೨೦೨೨’ ಸಂಶೋಧನಾ ಕ್ರಮದ ಕುರಿತ ರಾ? ಮಟ್ಟದ ಸೆಮಿನಾರ್ ಉದ್ಘಾಟಿಸಿ ಮಾತನಾಡಿದ ಅವರು, ವಿಜ್ಞಾನ ಹುಟ್ಟಿಕೊಳ್ಳುವುದು ಮಿಥ್ಯದಿಂದ ಆದರೆ ಉಳಿಯುವುದು ಸತ್ಯದಿಂದ. ಸಂಶೋಧನೆಯ ಮೂಲಕ ಸತ್ಯದ ಅನ್ವೇ?ಣೆ ಸಾಧ್ಯ. ವಿದ್ಯಾರ್ಥಿಗಳು ಪೂರ್ಣಾವಧಿ ಸಂಶೋಧನೆ ಕೈಗೊಳ್ಳುವುದರಿಂದ ದೇಶ ಆತ್ಮ ನಿರ್ಭರದೆಡೆಗೆ ಸಾಗುತ್ತದೆ ಎಂದು ಹೇಳಿದರು. ಆಯುರ್ವೇದಕ್ಕೆ ಸಂಶೋಧನೆಯ ಅಗತ್ಯವಿಲ್ಲ ಆದರೆ ಚಿಕಿತ್ಸಾ ಕೌಶಲ್ಯ, ಔ?ಧೀಯ ಗುಣಧರ್ಮಗಳನ್ನು ತಿಳಿದುಕೊಳ್ಳಲು ಸಂಶೋಧನೆ ಅಗತ್ಯ. ಒಂದು ದೇಶದ ಅಭಿವೃದ್ಧಿಯನ್ನು ಅಳೆಯಲು ಅಲ್ಲಿನ ಸಂಶೋಧನಾ ಗುಣಮಟ್ಟ ಹಾಗೂ ಶಕ್ತಿಯನ್ನು ಅರಿತುಕೊಳ್ಳುವುದು ಉತ್ತಮ, ಸಂಶೋಧನೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ,ಜು.29: ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆ ಹಾಗೂ ಗೋವರ್ಧನ ಗಿರಿ ಟ್ರಸ್ಟ್ ಸಹಯೋಗದಲ್ಲಿ ಸಾವಯವ ಸಿರಿ ಯೋಜನೆಯಡಿ ಜಿಲ್ಲಾಮಟ್ಟದಲ್ಲಿ ಸಾವಯವ ಕೃಷಿ ವಿಷಯಕ್ಕೆ ಸಂಬAಧಿಸಿದ 2 ದಿನಗಳ ಉಚಿತ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಹೊಸದಾಗಿ ಸಾವಯವ ಹಾಗೂ ನೈಸರ್ಗಿಕ ಕೃಷಿಯಲ್ಲಿ ತೊಡಗಿಕೊಂಡಿರುವ ಯುವಕ ರೈತರು, ಮಹಿಳೆಯರು ಹಾಗೂ ಸಾವಯವ ಹಾಗೂ ನೈಸರ್ಗಿಕ ಕೃಷಿಯಲ್ಲಿ ಈ ಹಿಂದೆ ತರಬೇತಿ ಪಡೆಯದೇ ಇರುವ ರೈತರೂ ಸಹ ಪಾಲ್ಗೊಳ್ಳಬಹುದಾಗಿದೆ. ಆಸಕ್ತರು ರೈತ ಸಂಪರ್ಕ ಕೇಂದ್ರದಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಲು ಆಗಸ್ಟ್ 17 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಆಳ್ವಾಸ್ ಕಾಲೇಜು ಜಂಟಿ ಸಹಯೋಗದಲ್ಲಿ ಇಲ್ಲಿನ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆದ ವಿವಿ ಮಟ್ಟದ ಅಂತರ್ ಕಾಲೇಜು ವೈಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನ ಪುರುಷ ಹಾಗೂ ಮಹಿಳೆಯರ ಎರಡೂ ವಿಭಾಗಗಳಲ್ಲಿ ಅತಿಥೇಯ ಆಳ್ವಾಸ್ ಕಾಲೇಜು ಸಮಗ್ರ ಪ್ರಶಸ್ತಿ ಗಳಿಸಿದೆ. ಒಟ್ಟು ಕ್ರೀಡಾಕೂಟದಲ್ಲಿ 19 ನೂತನ ಕೂಟ ದಾಖಲೆ ನಿರ್ಮಾಣಗೊಂಡಿದ್ದು, ಅವುಗಳಲ್ಲಿ ಆಳ್ವಾಸ್ ವಿದ್ಯಾರ್ಥಿಗಳು 13 ಕೂಟ ದಾಖಲೆ ನಿರ್ಮಿಸಿರುವುದು ಗಮನಾರ್ಹ. ಮಹಿಳಾ ವಿಭಾಗದಲ್ಲಿ ಆಳ್ವಾಸ್ ಸತತ 18ನೇ ಬಾರಿಗೆ ಸಮಗ್ರ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಪುರುಷರ ವಿಭಾಗದಲ್ಲಿ ಆಳ್ವಾಸ್ ವಿದ್ಯಾರ್ಥಿಗಳ ಸಾಧನೆ:ಪುರುಷರ 55 ಕೆಜಿ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ಪ್ರಶಾಂತ (ಸ್ನಾö್ಯಚ್-80ಕೆ.ಜಿ. ಕ್ಲೀನ್&ಜರ್ಕ್-113ಕೆಜಿ ಒಟ್ಟು-193) ಕೆ.ಜಿ ಪ್ರಥಮ ಹಾಗೂ ಸುಶಾಂತ (ಸ್ನಾö್ಯಚ್-85ಕೆ.ಜಿ. ಕ್ಲೀನ್&ಜರ್ಕ್-107 ಕೆಜಿ ಒಟ್ಟು-192 ಕೆ.ಜಿ) ದ್ವಿತೀಯ, 61 ಕೆಜಿ ವಿಭಾಗದಲ್ಲಿ ಅರವಿಂದ್ (ಸ್ನಾö್ಯಚ್-109ಕೆ.ಜಿ. ಕ್ಲೀನ್&ಜರ್ಕ್-135ಕೆಜಿ ಒಟ್ಟು-244 ಕೆ.ಜಿ) ಪ್ರಥಮ ಹಾಗೂ ನಾಗರಾಜ್ (ಸ್ನಾö್ಯಚ್-107ಕೆ.ಜಿ. ಕ್ಲೀನ್&ಜರ್ಕ್-132ಕೆಜಿ ಒಟ್ಟು-239 ಕೆ.ಜಿ ) ದ್ವಿತೀಯ, 67…

Read More