Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಮಕ್ಕಳಲ್ಲಿ ಉತ್ತಮ ಸಂಸ್ಕೃತಿ, ಸಂಸ್ಕಾರ ಬೆಳೆಸಲು ಶಿಕ್ಷಣ ಸಹಕಾರಿಯಾಗಿದೆ. ಹೀಗಾಗಿ ಎಲ್ಲ ಪೋಷಕರು, ಶಿಕ್ಷಕರು ಕಾಳಜಿ ವಹಿಸಬೇಕು. ಸೀಮಿತ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದರ ಜೊತೆಗೆ ಇತರೆ ಎಲ್ಲಾ ಸಮುದಾಯದ ಬಡ ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹ ನೀಡುವ ಕೆಲಸ ಹೆಚ್ಚಾಗಬೇಕಿದೆ ಎಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಕಿರಣ್ ಕುಮಾರ್ ಕೊಡ್ಗಿ ಅವರು ಹೇಳಿದರು. ಹೆಗ್ಗುಂಜೆ ರಾಜೀವ ಶೆಟ್ಟಿ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಲಾಡಿ ವಾರ್ಷಿಕ ಪ್ರತಿಭಾ ಪುರಸ್ಕಾರ 2024- 25 ಮತ್ತು ಗಣಕಯಂತ್ರ ವಿಭಾಗ ಇದರ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚೋರಾಡಿ ಗ್ರಾಮ ಪಂ. ಅಧ್ಯಕ್ಷರಾದ ಅಶೋಕ್ ಶೆಟ್ಟಿ ಹಾಲಾಡಿ ಅವರು ವಹಿಸಿದ್ದರು. ಈ ಸಂದರ್ಭದಲ್ಲಿ ಹಾಲಾಡಿ ಗ್ರಾಮ ಪಂಚಾಯಿತಿ ಸದಸ್ಯರಾದ ಜನಾರ್ದನ್‌ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಮಂಜುನಾಥ್ ಕಾಮತ್ ಹಾಲಾಡಿ, ನಿವೃತ್ತ ಬ್ಯಾಂಕ್ ಅಧಿಕಾರಿಗಳು ಮತ್ತು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಉದ್ಯಮಿಯಾದ ಗಣೇಶ್…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಮುಂಬಯಿ ನಗರದ ಎಸ್‌ಎಫ್‌ಇ ಸಂಸ್ಥೆ ಹಾಗೂ ಮಹಾರಾಷ್ಟ್ರ ಸರಕಾರದ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಶಿಕ್ಷಣ ಪುರಸ್ಕಾರದಲ್ಲಿ ಅತ್ಯುತ್ತಮ ಗುಣಮಟ್ಟದ ಶಿಕ್ಷಣದ ಸೇವೆಗಾಗಿ ಕೋಟೇಶ್ವರದ ಬೀಜಾಡಿಯ ಕೆನರಾ ಕಿಡ್ಸ್ ಶಾಲೆಗೆ ಸ್ಟಾರ್ ಎಜುಕೇಶನ್ ಅವಾರ್ಡ್ ದೊರೆತಿದೆ. ಮುಂಬಯಿ ಬಿಕೆಸಿ ಎಂಎಂಆರ್‌ಡಿಎ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ದೇಶದ ಹಲವು ಉತ್ತಮ ಪ್ರಿ ಸ್ಕೂಲ್ ವಿಭಾಗದಲ್ಲಿ ಕರ್ನಾಟಕದಿಂದ ಆಯ್ಕೆಯಾಗಿ ಪ್ರಶಸ್ತಿಯನ್ನು ಪಡೆದುಕೊಂಡ ಈ ಸಂಸ್ಥೆಗೆ ಸ್ಟಾರ್ ಎಜುಕೇಶನ್ ಅವಾರ್ಡ್ ಸಮಿತಿ ನಿರ್ದೆಶಕ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರು ಸ್ಟಾರ್ ಎಜುಕೇಶನ್ ಅವಾರ್ಡ್ ನೀಡಿ ಗೌರವಿಸಿದರು. ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರಾದ ವಿನಂತಿ ಎಸ್. ಶೆಟ್ಟಿ ಮತ್ತು ಗೌರವ ಸಲಹೆಗಾರ ಸುಬ್ರಮಣ್ಯ ಶೆಟ್ಟಿ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗ ಜಂಟಿ ಆಶ್ರಯದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ದೇಹದಾರ್ಢ್ಯ ಸ್ಪರ್ಧೆ 2024-25  ಆಳ್ವಾಸ್ ಕಾಲೇಜು ಪ್ರಥಮ ಎಸ್ ಡಿ ಎಂ ಸಿ ಬಿ ಎಂ ಮಂಗಳೂರು ದ್ವಿತೀಯ ಮತ್ತು ಸೇಕ್ರೆಡ್ ಹಾರ್ಟ್ ಮಡಂತ್ಯಾರು ತೃತೀಯ. ಆಳ್ವಾಸ್ ಕಾಲೇಜಿನ ಕಿಶನ್ ಅವರು “ಮಿಸ್ಟರ್ ಮಂಗಳೂರು ವಿಶ್ವವಿದ್ಯಾಲಯ 2024-25” ಮತ್ತು ಪಿಪಿಸಿ ಕಾಲೇಜಿನ ಚಿರಾಗ್ ಮೋಸ್ಟ್ ಮಾಸ್ಕುಲರ್ ಪ್ರಶಸ್ತಿ ಪಡೆದರು. ಭಂಡಾರ್ಕರ್ಸ್ ಕಾಲೇಜು ಮಾಜಿ ಅಂತರ್ ವಿಶ್ವವಿದ್ಯಾಲಯ ಮಟ್ಟದ ಕುಸ್ತಿ ಪಟು ಮತ್ತು ಬಾಡಿ ಬಿಲ್ಡಿಂಗ್ ಚಾಂಪಿಯನ್ ಮತ್ತು ಉದ್ಯಮಿ ಕೃಷ್ಣಮೂರ್ತಿ ಶೆಟ್ಟಿ ಅವರು ಉದ್ಘಾಟಿಸಿ ದೇಹದಾರ್ಢ್ಯ ಪಟುಗಳು ತಮ್ಮ ದೇಹದಾರ್ಡ್ಯತೆ ಮತ್ತು ಆರೋಗ್ಯವನ್ನು ಸದಾ ಕಾಪಾಡಿಕೊಳ್ಳುವಂತೆ ಹೇಳಿ ಶುಭ ಹಾರೈಸಿದರು. ಮಂಗಳೂರು ವಿಶ್ವವಿದ್ಯಾನಿಲಯ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಬಾ. ಸಂತೋಷ್ ಜೆರಾಲ್ಡ್ ಡಿಸೋಜಾ ಅವರು ಸ್ಪರ್ಧಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಭಾರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಮೂಡುಬಿದಿರೆ:  ತುಳು ಕಾದಂಬರಿ ಪ್ರಕಾರದ ದಿಕ್ಕನ್ನೇ ಬದಲಾಯಿಸಿದ ಕೃತಿ ’ನಾಣಜ್ಜೆರ್ ಸುದೆ ತಿರ್ಗಾಯೆರ್ ಎಂದು ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುಲಸಚಿವ (ಶೈಕ್ಷಣಿಕ) ಡಾ. ಟಿ. ಕೆ. ರವೀಂದ್ರನ್ ಹೇಳಿದರು. ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಸ್ನಾತಕೋತ್ತರ ಸಭಾಂಗಣದಲ್ಲಿ ಬುಧವಾರ ಆಳ್ವಾಸ್ ತುಳು ಸಂಸ್ಕೃತಿ ಅಧ್ಯಯನ ಕೇಂದ್ರದ ವತಿಯಿಂದ ನಡೆದ ’ಡಾ. ಮಹಾಲಿಂಗ ಭಟ್ ಬರೆದ ನಾಣಜ್ಜೆರ್ ಸುದೆ ತಿರ್ಗಾಯೆರ್’ಕಾದಂಬರಿಯ ಅವಲೋಕನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತುಳು ಭಾಷೆಯು ತಮಿಳಿನಷ್ಟೇ ಪುರಾತನವಾದ ಭಾಷೆ. ಪ್ರಪಂಚದಾದ್ಯಂತ ಒಂದು ಕೋಟಿಗೂ ಹೆಚ್ಚು ತುಳು ಭಾಷಿಕರಿದ್ದಾರೆ. ಸಂಗಮ ಸಾಹಿತ್ಯದಲ್ಲೂ ತುಳು ಭಾಷೆಯ ಉಲ್ಲೇಖವಿದೆ ಎಂದರು.  ತಮ್ಮ ಭಾಷೆಯ ಮೇಲೆ ಯಾರಿಗೂ ಕೀಳರಿಮೆ ಇರಬಾರದು. ತುಳು ಭಾಷಿಕರು ಸಾಹಿತ್ಯಕ್ಕೆ ಹೆಚ್ಚಿನ ಒಲವು ನೀಡದೇ ಇರುವುದರಿಂದ ಸಾಹಿತ್ಯದಲ್ಲಿ ತುಳು ಭಾಷೆಯು ಹಿಂದುಳಿದಿದೆ. ತುಳು ಭಾಷಿಕರು ತುಳು ಭಾಷೆಯನ್ನು ಉತ್ತೇಜಿಸಬೇಕು ಎಂದು ತಿಳಿಸಿದರು. ನಾಣಜ್ಜೆರ್ ಸುದೆ ತಿರ್ಗಾಯೆರ್’ ಕೃತಿಯು ತುಳು ಸಾಹಿತ್ಯದ ಸ್ಥಿತಿಯನ್ನೇ ಬದಲಾಯಿಸಿದ ಕೃತಿಯಾಗಿದೆ. ತುಳು ಸಾಹಿತ್ಯ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಸಂವಿಧಾನ ದೇಶದ ಸರ್ವಶ್ರೇಷ್ಠ ಕಾನೂನಾಗಿದ್ದು, ಇಡೀ ದೇಶದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ. ಯುವ ಸಮುದಾಯ ಸಂವಿಧಾನದ ಆದರ್ಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಹಕ್ಕುಗಳನ್ನು ನಕಾರಾತ್ಮಕವಾಗಿ ಬಳಸಿಕೊಳ್ಳದೆ ಧನಾತ್ಮಕವಾಗಿ ಬಳಸಿಕೊಂಡು ಸತ್ಪ್ರಜೆಗಳಾಗಬೇಕು  ಎಂದು ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ್ ಶೆಟ್ಟಿ  ಹೇಳಿದರು. ಅವರು ಕಾಲೇಜಿನಲ್ಲಿ ನಡೆದ  ಸಂವಿಧಾನ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ  ಡಾ| ಚೇತನ್ ಶೆಟ್ಟಿ ಕೋವಾಡಿ  ಪ್ರಾಸ್ತಾವಿಕ ಮಾತುಗಳನ್ನಾಡಿ, ಸ್ವಾಗತಿಸಿದರು. ಕಾಲೇಜಿನ ವ್ಯವಹಾರ ಆಡಳಿತ ವಿಭಾಗದ ಸಹ ಪ್ರಾಧ್ಯಾಪಕರಾದ ಪ್ರವೀಣ್ ಮೊಗವೀರ ಗಂಗೊಳ್ಳಿ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು. ಕಾಲೇಜಿನ ವಾಣಿಜ್ಯ ವಿಭಾಗದ ಸಹ ಪ್ರಾಧ್ಯಾಪಕರಾದ ರಾಜೇಶ್ ಶೆಟ್ಟಿ ವಕ್ವಾಡಿ, ಸಹಾಯಕ ಪ್ರಾಧ್ಯಪಕರಾದ ಜೋಸ್ಲಿನ್ ಆರ್. ಅಲ್ಮೆಡಾ, ಪ್ಲೇಸ್ಮೆಂಟ್ ಆಫೀಸರ್ ಸುರೇಶ ಕಾಮತ್, ಕಛೇರಿ ಸಿಬ್ಬಂದಿ ರಮೇಶ್ ಮೊಗವೀರ ಉಪಸ್ಥಿತರಿದ್ದರು. ರೇಂಜರ್ಸ್ ಘಟಕದ  ಸಂಯೋಜಕರಾದ ಪೂಜಾ ಕುಂದರ್ ವಂದಿಸಿದರು. ಕಾಲೇಜಿನ ಎನ್ಎಸ್ಎಸ್ ಘಟಕ-2ರ  ಸಂಯೋಜಕರಾದ ದೀಪಾ ಪೂಜಾರಿ ನಿರೂಪಿಸಿದರು.

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ “ಯುವನಿಧಿ” ಯೋಜನೆಗೆ 2022-23 ಹಾಗೂ 2023-24 ರಲ್ಲಿ ಉತ್ತೀರ್ಣರಾದ ಪದವಿ, ಸ್ನಾತಕೋತರ ಪದವಿ ಮತ್ತು ಡಿಪ್ಲೋಮಾಗಳ ವಿಧ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಪ್ರತಿ ತಿಂಗಳು ಪದವೀಧರರಿಗೆ 3,000 ರೂ. ಹಾಗೂ ಡಿಪ್ಲೋಮಾದವರರಿಗೆ 1500 ರೂ. ಗಳ ನಿರುದ್ಯೋಗ ಭತ್ಯೆಯನ್ನು ನೀಡಲಾಗುವುದು. ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೊರೈಸಿದ ಅಭ್ಯರ್ಥಿಗಳು ಕೂಡ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಪ್ರತಿ ತಿಂಗಳು ಈ ಪ್ರಯೋಜನ ಪಡೆಯಬೇಕಿದ್ದರೆ, ಪ್ರತಿ ತಿಂಗಳಲ್ಲಿ ತಾನು ನಿರುದ್ಯೋಗಿಯೆಂದು, ವ್ಯಾಸಂಗ ಮುಂದುವರೆಸುತ್ತಿಲ್ಲವೆಂದು ಹಾಗೂ ಸ್ವಯಂ ಉದ್ಯೋಗಿಯಲ್ಲ ವೆಂದು ಸ್ವಯಂ ಘೋಷಣೆ ಮಾಡುವುದು ಕಡ್ಡಾಯವಾಗಿರುತ್ತದೆ. ಪ್ರಸಕ್ತ ಪ್ರತೀ ಗ್ರಾಮದಲ್ಲಿ ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅಭ್ಯರ್ಥಿಗಳು ನೋಂದಣಿಯನ್ನು ಮಾಡಿಕೊಳ್ಳಬಹುದು ಹಾಗೂ ಸ್ವಯಂ ಘೋಷಣೆಯನ್ನು ಪ್ರತೀ ತಿಂಗಳು 25 ನೇ ತಾರೀಕಿನ ಒಳಗಾಗಿ ಸಲ್ಲಿಸಬೇಕು. ಪ್ರಯೋಜನ ಪಡೆಯುತ್ತಿರುವ ಅಭ್ಯರ್ಥಿಗಳು ಪ್ರತೀ ತಿಂಗಳು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಉಡುಪಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ವಾಹನಗಳು ಸುಗಮವಾಗಿ ಸಂಚರಿಸಲು ಅನುಕೂಲವಾಗುವಂತೆ ರಸ್ತೆಯ ನಿರ್ವಹಣೆಯನ್ನು ಕಾಲಕಾಲಕ್ಕೆ ಮಾಡಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಗುತ್ತಿಗೆದಾರರ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು. ಅವರು ಅಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಳೆಯಿಂದಾಗಿ ಉಂಟಾದ ಹೊಂಡ ಗುಂಡಿಗಳನ್ನು ದುರಸ್ಥಿ ಮಾಡುವ ಬಗ್ಗೆ ಹಾಗೂ ಇತರೆ ಸಮಸ್ಯೆಗಳ ಬಗ್ಗೆ ಚರ್ಚಿಸುವ ಸಲುವಾಗಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನಗಳು ಶುಲ್ಕವನ್ನು ಕಟ್ಟಿ ಸಂಚರಿಸುತ್ತವೆ. ಸದರಿ ವಾಹನಗಳು ಸರಾಗವಾಗಿ ಸಂಚರಿಸಲು ಅನುಕೂಲವಾಗುವಂತೆ ಹೆದ್ದಾರಿ ನಿರ್ವಹಣೆಯನ್ನು ಮಾಡಬೇಕು. ಮಾನ್ಸೂನ್ ಮಳೆಯಿಂದಾಗಿ ರಸ್ತೆಯಲ್ಲಿ ಹೊಂಡಗಳು ಬಿದ್ದಿವೆ ಹಾಗೂ ರಸ್ತೆ ಬದಿಯ ಬೀದಿದೀಪಗಳು ನಿರ್ವಹಣೆ ಸರಿಯಿಲ್ಲ ಎನ್ನುವ ದೂರುಗಳು ಸಾರ್ವಜನಿಕವಾಗಿ ಕೇಳಿ ಬರುತ್ತಿವೆ. ಕೂಡಲೇ ಈ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ತಿಳಿಸಿದರು. ಸ್ಥಳೀಯ ಜನರು ರಸ್ತೆ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಯಡಾಡಿ- ಮತ್ಯಾಡಿ ಇದರ ವಾರ್ಷಿಕ ಕ್ರೀಡಾಕೂಟವು ಕುಂದಾಪುರ ಗಾಂಧಿ ಮೈದಾನದಲ್ಲಿ ನಡೆಯಿತು. ಉಡುಪಿ ಲೋಕಸಭಾ ಕ್ಷೇತ್ರ ಸಂಸದ ಕೋಟ ಶ್ರೀನಿವಾಸ್‌ ಪೂಜಾರಿ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, ” ಸಾಧನೆಯಲ್ಲಿ ಛಲವಿದ್ದವರಿಗೆ ಯಾವುದೂ ಹಿನ್ನಡೆಯಾಗುವುದಿಲ್ಲ. ನಿರ್ದಿಷ್ಟವಾದ ಗುರಿ ಉದ್ದೇಶದಿಂದ ಸ್ಪಷ್ಟವಾದ ದಾರಿಯಲ್ಲಿ ಸಾಗಿದಾಗ ಯಶಸ್ಸು ಖಂಡಿತ ಸಿಗುತ್ತದೆ. ಕ್ರೀಡಾ ಕ್ಷೇತ್ರದಲ್ಲಿ ಸೋಲು ಮತ್ತು ಗೆಲುವು ಸಾಮಾನ್ಯ. ಅವೆರಡನ್ನೂ ಸಮಾನವಾಗಿ ಸ್ವೀಕರಿಸಿ ನಿರಂತರ ಪ್ರಯತ್ನ ಮಾಡಬೇಕು.ಕ್ರೀಡಾ ಕ್ಷೇತ್ರದಲ್ಲಿ ಅಸಕ್ತಿಯುಳ್ಳ ಮಕ್ಕಳಿಗೆ ಹಿಮಾಲಯ ಪರ್ವತ ಏರಿದ ತೇನ್ ಸಿಂಗ್ ಮಾದರಿಯಾಗಬೇಕು. ಗ್ರಾಮೀಣ ಪ್ರದೇಶದ ಮಕ್ಕಳು ಕೂಡ ಕ್ರೀಡಾ ವಿಭಾಗದಲ್ಲಿ ಹೆಚ್ಚಿನ ಸಾಧನೆ ಮಾಡುವಂತಾಗಬೇಕು. ಡಾ. ರಮೇಶ್ ಶೆಟ್ಟಿ ಅವರ ಸಮರ್ಥವಾದ ನೇತೃತ್ವದಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ ಪದವಿ ಪೂರ್ವ ಕಾಲೇಜು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿದ್ದು,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಆಯೋಜನೆಯಲ್ಲಿ ರೋಟರಿ ಜಿಲ್ಲೆ 3182 ಇದರ ಜಿಲ್ಲಾ ಸಾಂಸ್ಕೃತಿಕ ಉತ್ಸವ ದಿಗಣ ಕಾರ್ಯಕ್ರಮ ಇತ್ತೀಚಿಗೆ ಜರುಗಿತು. ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ರೋಟರಿ ಕ್ಲಬ್ ಬೈಂದೂರು ಚಾಂಪಿಯನ್ ಆಗಿ ಹೊರಹೊಮ್ಮಿತು. ಭಾವಗೀತೆ, ಯುಗಳ ಗೀತೆ ಹಾಗೂ ಸಮೂಹ ನೃತ್ಯ ವಿಭಾಗದಲ್ಲಿ ಬೈಂದೂರು ರೋಟರಿ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ರೋಟರಿ ಕ್ಲಬ್ ಕುಂದಾಪುರ ರನ್ನರ್‌ಅಪ್ ಆಯಿತು. ಪ್ರಶಸ್ತಿ ಸ್ವೀಕರಿಸುವ ವೇಳೆ ರೋಟರಿ ಕ್ಲಬ್ ಬೈಂದೂರು ಅಧ್ಯಕ್ಷರಾದ ಮೋಹನ್ ರೇವಣ್ಕರ್, ಪೂರ್ವಾಧ್ಯಕ್ಷರುಗಳಾದ ಐ. ನಾರಾಯಣ, ಡಾ. ಪ್ರವೀಣ್ ಶೆಟ್ಟಿ, ಪ್ರಸಾದ್ ಪ್ರಭು, ಸುಧಾಕರ ಪಿ, ಮಂಜುನಾಥ ಮಹಾಲೆ, ಉದಯ್ ಆಚಾರ್, ಕಾರ್ಯದರ್ಶಿ ಸುನಿಲ್ ಹೆಚ್. ಜಿ., ವಿವಿಧ ಸ್ಪರ್ಧಿಗಳು ಹಾಗೂ ಬೈಂದೂರು ರೋಟರಿ ಕುಟುಂಬದ ಸದಸ್ಯರುಗಳು ಉಪಸ್ಥಿತರಿದ್ದರು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಅಧ್ಯಕ್ಷ ಶೇಖರ್ ಎನ್. ಶೆಟ್ಟಿ ವಹಿಸಿದ್ದರು. ರೋಟರಿ ಜಿಲ್ಲಾ ಗವರ್ನರ್ ದೇವ್ ಆನಂದ್, ಮಾಜಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಅಂಪಾರು ಗ್ರಾಮದ ಹೆಬ್ರಿಯ ನೆಲ್ಲಿಕಟ್ಟೆಯ ನಿವಾಸಿ ಮನೋಜ್‌ (48) ಅವರು ತಲಕಲ್‌ಗುಡ್ಡೆಯ ರಾಜ್ಯ ಹೆದ್ದಾರಿಯಲ್ಲಿ ಬೈಕ್‌ ಸ್ಕಿಡ್‌ ಆಗಿ ಬಿದ್ದು ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನ. 26ರಂದು ಮೃತಪಟ್ಟರು. ಈ ಬಗ್ಗೆ ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More