Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.         ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕದ ಆಶ್ರಯದಲ್ಲಿ, ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘ, ಕುಂದಾಪುರ ತಾಲೂಕು ಇವರ ಸಹಯೋಗದೊಂದಿಗೆ ಮಧುಮೇಹ ಅರಿವು ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬಿಗ್ ಮೆಡಿಕಲ್ ಸೆಂಟರ್ ಉಡುಪಿ ಸಿಟಿ ಇಲ್ಲಿನ ವೈದ್ಯರಾದ ಡಾ| ಶ್ರುತಿ ಬಲ್ಲಾಳ್ ಕಾರ್ಯಕ್ರಮವನ್ನು ಉದ್ದೇಶಿಸಿ ಇತಿ-ಮಿತಿ ಆಹಾರ ಪದ್ಧತಿ ಹಾಗೂ ದೈನಂದಿನ ವ್ಯಾಯಾಮದ ಬದುಕು ಆರೋಗ್ಯವನ್ನು ಸುಸ್ಥಿರದಲ್ಲಿಡುವುದಲ್ಲದೆ, ಮಧುಮೇಹದಂತಹ ಖಾಯಿಲೆ ಬಾರದಂತೆ ತಡೆಯುತ್ತದೆ ಎಂದು ವಿದ್ಯಾರ್ಥಿಗಳಿಗೆ ಸವಿವರವಾಗಿ ಹೇಳಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘ, ಕುಂದಾಪುರ ತಾಲೂಕು ಇದರ ಅಧ್ಯಕ್ಷರಾದ ಭಾಸ್ಕರ್ ಶೆಟ್ಟಿ ಚಿಕ್ಕ ವಯಸ್ಸಿನಲ್ಲೇ ಆರೋಗ್ಯದ ಬಗ್ಗೆ ಸಕಲ ಅರಿವು ಅವಶ್ಯಕ ಎಂದು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕಾಲೇಜು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ತಾಲೂಕು ಸಾಹಿತ್ಯ ಪರಿಷತ್ತಿನ 19ನೇ ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆಯಾದ ಪ್ರೊಫೆಸರ್ ಮೊಳಹಳ್ಳಿ ಬಾಲಕೃಷ್ಣ ಶೆಟ್ಟಿ ಅವರನ್ನು ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕುಂದಾಪುರ ತಾಲೂಕು ಘಟಕ ಮತ್ತು ಸ್ವಾಗತ ಸಮಿತಿಯ ಅಧ್ಯಕ್ಷ ಪದಾಧಿಕಾರಿಗಳು ಅವರ ಮನೆಯಲ್ಲಿ ವಿದ್ಯುಕ್ತವಾಗಿ ಆಮಂತ್ರಣ ಪತ್ರವನ್ನು ನೀಡುವುದರ ಮುಖೇನ ಸಮ್ಮೇಳನಕ್ಕೆ ಆಹ್ವಾನಿಸಿ ಯಶಸ್ವಿಯಾಗಿ ನಡೆಸಿಕೊಡಲು ಕೋರಿಕೊಂಡರು. ಆಹ್ವಾನ ಸ್ವೀಕರಿಸಿದ ಪ್ರೊಫೆಸರ್ ಮೊಳಹಳ್ಳಿ ಬಾಲಕೃಷ್ಣ ಶೆಟ್ಟಿ ಅವರು ಮಾತನಾಡುತ್ತಾ, ತಾಲೂಕಿನಲ್ಲಿ ಸಾಹಿತ್ಯ ಸೇವೆಯಲ್ಲಿ ಗಣನೀಯವಾಗಿ ತೊಡಗಿಸಿಕೊಂಡಿರುವ ಅನೇಕ ಹಿರಿಯರ ನಡುವೆ ನನ್ನನ್ನು ಸಮ್ಮೇಳನ ಅಧ್ಯಕ್ಷರಾಗಿ ಆಯ್ಕೆ ಮಾಡಿರುವುದಕ್ಕೆ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕುಂದಾಪುರ ತಾಲೂಕು ಘಟಕಕ್ಕೆ ಚಿರಋಣಿಯಾಗಿದ್ದೇನೆ ಎಂದರು. ಕನ್ನಡ ಸಾಹಿತ್ಯ ಪರಿಷತ್ತಿನ ಆಶಯಗಳಂತೆ ಸಾಹಿತ್ಯ ಸಮ್ಮೇಳನವನ್ನು ಬಹು ಜವಾಬ್ದಾರಿಯಿಂದ ಅಧ್ಯಕ್ಷತೆ ವಹಿಸಿ ನಡೆಸಿಕೊಡುತ್ತೇನೆಂದು ಹೇಳಿದರು. ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ಉಡುಪಿ ತಾಲೂಕು ಸಮ್ಮೇಳನದ ಪೂರ್ವ ಅಧ್ಯಕ್ಷರಾದ ಪ್ರೊಫೆಸರ್ ಉಪೇಂದ್ರ ಸೋಮಯಾ ಜಿ,…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಗಂಗೊಳ್ಳಿ: ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಹಿಂದಿ ಉಪನ್ಯಾಸಕರ ಸಂಘದ 2024 -25 ನೇ  ಶೈಕ್ಷಣಿಕ ಸಾಲಿನ ಅಧ್ಯಕ್ಷರಾಗಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಹಿಂದಿ ಉಪನ್ಯಾಸಕರಾದ ನಾರಾಯಣ ಈ ನಾಯ್ಕ್ ಆಯ್ಕೆ ಆಗಿರುತ್ತಾರೆ. ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು, ಭೋದಕ ಮತ್ತು ಬೋಧಕೇತರ ವರ್ಗದವರು ಅಭಿನಂದಿಸಿದರು.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂ‍ದಾಪುರ: ಫಲವತ್ತಾದ ಮಣ್ಣೇ ಶ್ರೇಷ್ಠ ಸಂಪತ್ತು. ಆ ಮಣ್ಣಿನೊಂದಿಗೆ ನಮಗೆ ಅವಿನಾಭಾವ ಸಂಬಂಧ ಇದ್ದಾಗ ಮಾತ್ರ ಕೆಸರೆಂಬುದು ಆಪ್ತವಾಗುತ್ತಾ ಹೋಗುತ್ತದೆ. ರೈತನೇ ದೇಶವನ್ನು ಕಟ್ಟಬಲ್ಲವನು. ರೈತಾಪಿ ವರ್ಗ ನಿಷ್ಕ್ರಿಯವಾದರೆ ಬದುಕೇ ಇಲ್ಲ. ಆದ್ದರಿಂದ ವಿದ್ಯಾರ್ಥಿಗಳು ರೈತರ ಕಷ್ಟ, ಕೃಷಿಯಿಂದ ಸಿಗುವ ಆನಂದ ಅನುಭವದ ಮೂಲಕ ಪಡೆಯಬೇಕು ಎಂದು ಹಿರ್ಗಾನ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಸಂತೋಷ ಶೆಟ್ಟಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದ ಪಶು ವೈದ್ಯರಾದ ಸಾಣೂರಿನ ಜ್ಞಾನದೇವ ಅವರು ಇಂದು ಜಗತ್ತೇ ವಿಷಮಯವಾಗುತ್ತಿದೆ. ಆಹಾರ ಪದಾರ್ಥಗಳೆಲ್ಲ ಕಲುಷಿತಗೊಂಡಿವೆ. ಇಂದಿನ ತುರ್ತು ಅಗತ್ಯ ಸಂಪೂರ್ಣ ಸಾವಯವ ಪ್ರಧಾನವಾದ ಕೃಷಿ ನಡೆಸುವುದಾಗಿದೆ. ಕೃಷಿ ಕಷ್ಟಕರವಾದರೂ ಅದನ್ನು ಇಷ್ಟಪಟ್ಟು ಮಾಡಬೇಕಾಗಿದೆ ಎಂದು ನುಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕರಾದ ಅಶ್ವಥ್ ಎಸ್. ಎಲ್. ಅವರು ಮಾತನಾಡಿ ಕೃಷಿ ಮೂಲವೇ ನಾಗರಿಕತೆಯ ಮೂಲ. ಮಣ್ಣು ಕೇವಲ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಈ ಸಂಸ್ಥೆಯ ಹಳೇ ವಿದ್ಯಾರ್ಥಿಗಳು ಹಾಗೂ ಪೋಷಕರಾದವರು ವಿದ್ಯಾಭ್ಯಾಸಕ್ಕೆ ಇತಂಹ ಸರಕಾರಿ ಸಂಸ್ಥೆಗೆ ಸೇರಿಸಬೇಕೆಂದು ಹೇಳಿ ಇಲ್ಲಿರುವ ಶೈಕ್ಷಣಿಕ ಗುಣಮಟ್ಟದ ಬಗ್ಗೆ ಬೇರೆ ಪೋಷಕರಿಗೆ ಮನವರಿಕೆ ಮಾಡಿದರೆ ಈ ಸಂಸ್ಥೆಗೆ ಸೇರಿಸಬೇಕೆಂದು ಬೇರೆ ಪೋಷಕರಿಗೆ ಭರವಸೆ ಬರುತ್ತದೆ. ಹನ್ನೆರಡು ವರ್ಷದ ಹಿಂದೆ ಈ ಪರಿಸ್ಥಿತಿ ಇರಲಿಲ್ಲ. ಅತಂಹ ಕಾಲಘಟ್ಟದಲ್ಲಿ ಈ ಪ್ರತಿಭಾ ಪುರಸ್ಕಾರ ಶುರುಮಾಡಿ ದಶಕಗಳವರೆಗೆ ಮುನ್ನೆಡೆಸಿಕೊಂಡು ಬಂದಿರುವ ಸ್ನೇಹ ಸಂಗಮ ತಂಡದ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದು ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್ ಫ್ರೌಡಶಾಲಾ ವಿಭಾಗದ ವೈಸ್ ಪ್ರಿನ್ಸಿಪಾಲ್ ಚಂದ್ರಶೇಖರ ಶೆಟ್ಟಿ ಹೇಳಿದರು. ಅವರು 2002-03 ಸಾಲಿನ ಹಳೇ ವಿದ್ಯಾರ್ಥಿ ಸಂಘ ಸ್ನೇಹ ಸಂಗಮ ವತಿಯಿಂದ ಶಾಲಾ ಸಭಾಭವನದಲ್ಲಿ ಜರುಗಿದ 12ನೇ ವರ್ಷದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಸ್ನೇಹ ಸಂಗಮದ ಅಧ್ಯಕ್ಷ ಗಿರೀಶ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕೋಟೇಶ್ವರ ರೋಟರಿ ಕ್ಲಬ್ ಅಧ್ಯಕ್ಷ ಸತೀಶ್ ನಾಯ್ಕ್ ಪ್ರತಿಭಾನ್ವಿತರಿಗೆ ಪ್ರೂತ್ಸಾಹಧನ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದರೆ: ಆಳ್ವಾಸ್ ಸಹಕಾರ ಸಂಘವು 2023-24 ನೇ ಸಾಲಿನಲ್ಲಿ 3.36 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದ್ದು, ತನ್ನ ಸದಸ್ಯರಿಗೆ ಶೇ.17 ಲಾಭಾಂಶ (ಡಿವಿಡೆಂಟ್) ಘೋಷಿಸಿದೆ. ಆಳ್ವಾಸ್ ಕೃಷಿಸಿರಿ ಆವರಣದಲ್ಲಿನ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ವೇದಿಕೆಯಲ್ಲಿ ಶನಿವಾರ ನಡೆದ ಸಂಘದ 2023-24 ನೇ ಸಾಲಿನ 8ನೇ ವಾರ್ಷಿಕ ಮಹಾಸಭೆಯಲ್ಲಿ ಪ್ರಕಟಿಸಲಾಯಿತು. ವಾರ್ಷಿಕ ವರದಿ ವಾಚಿಸಿದ ಸಂಘದ ಕಾರ್ಯ ನಿರ್ವಹಣಾಧಿಕಾರಿ ಅರ್ಪಿತಾ ಶೆಟ್ಟಿ, ಸಂಘವು ಈ ಸಾಲಿನಲ್ಲಿ 150 ಕೋಟಿ ರೂಪಾಯಿ ವ್ಯವಹಾರ ನಡೆಸಿದ್ದು, ಕಳೆದ ವಿತ್ತೀಯ ವರ್ಷಕ್ಕಿಂತ ಈ ವರ್ಷ 50 ಲಕ್ಷದಷ್ಟು ಹೆಚ್ಚಿನ ಲಾಭ ಗಳಿಸಿದೆ. ಶೇ. 99.20 ಸಾಲ ವಸೂಲಾತಿ ಮಾಡಿದೆ. 2016ರ ಜುಲೈ 10 ರಂದು ಸಂಘ ಆರಂಭಗೊAಡಿದ್ದು, ಪ್ರಸ್ತುತ 3876 ಸದಸ್ಯರಿದ್ದಾರೆ ಎಂದು ಮಾಹಿತಿ ನೀಡಿದರು. ಆಳ್ವಾಸ್ ಸಹಕಾರಿ ಸಂಘದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಮಾತನಾಡಿ, ಆಳ್ವಾಸ್ ಸಂಸ್ಥೆಯು ಖಾಸಗಿ ದೋರಣೆಯೊಂದಿಗೆ ಕೆಲಸ ನಿರ್ವಹಿಸಿದರೂ, ಸಮಾಜದ ಪರಿಕಲ್ಪನೆಯಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ:  ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ಜೆಸಿಐ ಕುಂದಾಪುರ ಇವರ ಸಹಯೋಗದಲ್ಲಿ “ಯುವ ಧ್ವನಿ” ಎಂಬ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜೆಸಿಐ ಇದರ ರಾಷ್ಟ್ರೀಯ ಅಧ್ಯಕ್ಷ ಜೆಎಫ್ಎಸ್ ರಿಕೇಶ್ ಶರ್ಮಾ ಮಾತನಾಡಿ, ಯುವಜನತೆ ಕನಸುಗಳನ್ನು ಕಾಣಬೇಕು. ಕಂಡ ಕನಸುಗಳನ್ನು ನನಸಾಗಿಸುವಲ್ಲಿ ಪ್ರಯತ್ನವಿರಬೇಕು. ಹಾಗಿದ್ದಾಗ ಮಾತ್ರ ಯಶಸ್ಸು ಸಾಧ್ಯ ಎಂದು ಹೇಳಿದರು. ನಂತರ ವಿದ್ಯಾರ್ಥಿಗಳೊಂದಿಗೆ ನಡೆದ ಸಂವಾದದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಅವರು ಸಮರ್ಪಕವಾಗಿ ಉತ್ತರಿಸಿದರು. ವಿದ್ಯಾರ್ಥಿಗಳಾದ ಆಫ್ರಿಕಾ ಸರ್ಕಾರಿ ಶಾಲಾಕಾಲೇಜುಗಳಲ್ಲಿನ ಸಮಸ್ಯೆಗಳು ಸೌಲಭ್ಯಗಳು ಕುರಿತು, ಮನಸ್ವೀಯಶರು ಪದವಿ ನಂತರದ ಉದ್ಯೋಗಾವಕಾಶಗಳ ಕುರಿತು, ರೋಹಿತ್ ಅವರು ನಗರದಲ್ಲಿನ ಕ್ರೀಡಾ ಸೌಲಭ್ಯಗಳನ್ನು ಮತ್ತು ಗ್ರಾಮೀಣ ಪ್ರದೇಶದಲ್ಲಿ ತರಬೇತಿಯ ಕೊರತೆ ಯಾಕೆ ಎಂಬುದನ್ನು, ರಂಜಿತ್ ಅವರು ಕಂಪೆನಿಗಳಲ್ಲಿ ಇಂಟರ್ನಶಿಪ್ ಮಾಡುವುದಕ್ಕೆ ಇರುವಂತಹ ಅವಕಾಶಗಳನ್ನು ಕುರಿತು ಪ್ರಶ್ನೆಗಳನ್ನು ಕೇಳಿದರು. ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಶುಭಕರಾಚಾರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಜೆಸಿಐ ಇದರ ರಾಷ್ಟ್ರೀಯ ಉಪಾಧ್ಯಕ್ಷ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ವತಿಯಿಂದ ರಾಜ್ಯದ ಕ್ರೀಡಾ ಪೋಷಕರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಕ್ರೀಡಾ ಪೋಷಕ ಪ್ರಶಸ್ತಿಯನ್ನು ನೀಡುತ್ತಿದ್ದು, ಕ್ರೀಡಾ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡು, ಕ್ರೀಡಾ ಕ್ಷೇತ್ರದಲ್ಲಿ ಅಭಿವೃಧ್ಧಿಗೆ ನೆರವು ನೀಡಿ ಕಳೆದ ಐದು ವರ್ಷಗಳಲ್ಲಿ ರಾಜ್ಯ, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಕ್ರೀಡಾ ಕ್ಷೇತ್ರದಲ್ಲಿ ಕೊಡುಗೆ ನೀಡಿದ ಕ್ರೀಡಾಪೋಷಕರಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 5 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ದೂ.ಸಂ: 0820-2521324 ಅಥವಾ ಮೊ.ನಂ: 9480886467 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜು ʼಜನತಾ ದಿಬ್ಬಣ 2024ʼ ಪ್ರತಿಭಾ ದಿನಾಚರಣೆ ಕಾರ್ಯಕ್ರಮವು ಕುಂದಾಪುರದ ಮೊಗವೀರ ಸಭಾ ಭವನದಲ್ಲಿ ಸಡಗರ ಸಂಭ್ರಮದಿಂದ ನೆರವೇರಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಅಂತರಾಷ್ಟ್ರೀಯ ಜಾದುಗಾರರು, ಸಾಹಿತಿಗಳು, ನಟ ನಿರ್ದೇಶಕರು ಆದ ಓಂ ಗಣೇಶ್ ಉಪ್ಪುಂದ ಅವರು ದೀಪ ಪ್ರಜ್ವಲನದ ಮೂಲಕ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿ, ಜನತಾ ಕಾಲೇಜು ವಿದ್ಯಾರ್ಥಿ ಪ್ರತಿಭೆಗಳನ್ನು ಗುರುತಿಸುವ ಕಾರ್ಯ ಜಗ ಮೆಚ್ಚುವಂತಹ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೀರಿ ಪ್ರತಿಭೆಗೆ ಪ್ರೋತ್ಸಾಹ ಕೊಡುವ ನಿಮ್ಮ ಕಾಯಕ ಮಹತ್ತರವಾದದ್ದು, ಗುಣಮಟ್ಟದ ಶಿಕ್ಷಣಕ್ಕಾಗಿ ವಿವಿಧ ರಾಜ್ಯಗಳಿಂದ ವಿವಿಧ ಜಿಲ್ಲೆಗಳಿಂದ ವಿದ್ಯಾರ್ಥಿಗಳು  ಬರುತ್ತಿದ್ದಾರೆ ಮುಂದಿನ ವರ್ಷಗಳಲ್ಲಿ ಬೇರೆ ಬೇರೆ ದೇಶಗಳಿಂದ ವಿದ್ಯಾರ್ಥಿಗಳು ಬರಲಿ ಎಂದು ಶುಭ ಹಾರೈಸಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರು ಜನತಾ ಕಾಲೇಜಿನ ಪ್ರಾಂಶುಪಾಲರಾದ ಗಣೇಶ ಮೊಗವೀರ ಅವರು ಮಾತನಾಡಿ ‘ದಿಬ್ಬಣ’ ಎಂಬ ಅರ್ಥಪೂರ್ಣ ಶೀರ್ಷಿಕೆಯ ಪ್ರತಿಭಾ ದಿನಾಚರಣೆಯ ಈ ಕಾರ್ಯಕ್ರಮವು, ನಿರಂತರ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಗಂಗೊಳ್ಳಿ:ಇಲ್ಲಿನ ಖಾರ್ವಿಕೇರಿಯ ಕೊಂಚಾಡಿ ರಾಧಾ ಶೆಣೈ ಸರಕಾರಿ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವದ ಲೋಗೋ ಅನಾವರಣ ಕಾರ್ಯಕ್ರಮ ಶಾಲೆಯ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಇಸ್ರೋ ನಿವೃತ್ತ ವಿಜ್ಞಾನಿ ಸುರೇಶ ಕರ್ಣಿಕ್, ಖಾರ್ವಿಕೇರಿ ಶಾಲೆ ನಡೆದು ಬಂದ ದಾರಿ ಹಾಗೂ ದಾನಿಗಳ ಸಹಕಾರದಿಂದ ಬೆಳೆದು ನಿಂತ ಪರಿ ಅತ್ಯದ್ಭುತ. ಎಸ್‌ಡಿಎಂಸಿ ಸದಸ್ಯರು ಹಾಗೂ ಶಿಕ್ಷಕರ ನಡುವಿನ ಸಮ್ವಯತೆ ಶಾಲೆಯ ಅಭಿವೃದ್ಧಿಗೆ ಪೂರಕವಾಗಿದೆ. ಶಾಲೆಯ ಬೆಳವಣಿಗೆ ಹಾಗೂ ಅಭಿವೃದ್ಧಿಗೆ ಗ್ರಾಮಸ್ಥರು ಹಾಗೂ ವಿದ್ಯಾಭಿಮಾನಿಗಳು ಕೈಜೋಡಿಸಬೇಕು. ಶಾಲೆಯ ಅಮೃತ ಮಹೋತ್ಸವ ಸಮಾರಂಭವನ್ನು ಎಲ್ಲರೂ ಸೇರಿ ಯಶಸ್ವಿಗೊಳಿಸಬೇಕಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷ ರವಿಶಂಕರ್ ಖಾರ್ವಿ ಶುಭ ಹಾರೈಸಿದರು. ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ, ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ದಿವಾಕರ ಖಾರ್ವಿ ಅಮೃತ ಮಹೋತ್ಸವದ ಲೋಗೋ ಅನಾವರಣಗೊಳಿಸಿ ಲೋಗೋದ ಪರಿಚಯ ಮಾಡಿದರು. ನಿವೃತ್ತ ಆಡಿಟರ್ ಕೇಶವ್ ಪ್ರಕಾಶ್, ಕೊಲ್ಲೂರು…

Read More