Author: ನ್ಯೂಸ್ ಬ್ಯೂರೋ

ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಡ್ರೋನ್ ಆಧಾರಿತ ಫೋಟೋಗ್ರಾಫಿ ಮತ್ತು ವೀಡಿಯೋಗ್ರಾಫಿ ತರಬೇತಿಗಾಗಿ (ಮೂಲನಿವಾಸಿ, ಅಲೆಮಾರಿ, ಅರೆಅಲೆಮಾರಿ ಸೂಕ್ಷ್ಮ/ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಆದ್ಯತೆ) ಪರಿಶಿಷ್ಟ ಪಂಗಡ ಯುವಕ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 12 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಐ.ಟಿ.ಡಿ.ಪಿ ಕಚೇರಿ, ರಜತಾದ್ರಿ, ಮಣಿಪಾಲ ಉಡುಪಿ ದೂ.ಸಂಖ್ಯೆ: 0820-2574814 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ತಾಲೂಕಿನ ಜಪ್ತಿಯ ಸಮೀಪದ ರಸ್ತೆ ಬದಿಯಲ್ಲಿದ್ದ ತಗಡು ಶೀಟಿನ ಸಣ್ಣ ದಿನಸಿ ಅಂಗಡಿಗೆ ಬೆಂಕಿ ತಗುಲಿ ರೂ. 2ಲಕ್ಷಕ್ಕೂ ಅಧಿಕ ನಷ್ಟವಾದ ಘಟನೆ ನಡೆದಿದೆ.. ಅಂಬಿಕಾ ಮತ್ತು ಅವರ ಪತಿ ನಡೆಸುತ್ತಿದ್ದ ದಿನಸಿ ಅಂಗಡಿಯಲ್ಲಿ ದಿನಸಿ ಸಾಮಗ್ರಿ, ತಿಂಡಿ, ಕೋಲ್ಡ್‌ ಡ್ರಿಂಕ್ಸ್‌, ತರಕಾರಿ ಇನ್ನಿತರ ಸಾಮಗ್ರಿಗಳಿದ್ದವು. ಅಂಗಡಿ ಮಾಲೀಕರು ರಾತ್ರಿ ಬಾಗಿಲು ಹಾಕಿ ಮನೆಗೆ ಹೋದ ಬಳಿಕ ರಾತ್ರಿ 10 ಗಂಟೆಗೆ ಸುಮಾರಿಗೆ ಬೆಂಕಿ ಬಿದ್ದಿದೆ. ಅಂಗಡಿ ಸಮೀಪದ ಮನೆಯ ಅಭಿ ಅವರು ಫೋನ್‌ ಮಾಡಿ ಅಂಗಡಿಗೆ ಬೆಂಕಿ ಬಿದ್ದಿರುವುದಾಗಿ ತಿಳಿಸಿದ್ದರು. ಅಕ್ಕಪಕ್ಕದವರು ಹಾಗೂ ಇತರರು ಸೇರಿ ನೀರು ಹಾಕಿ ಬೆಂಕಿ ನಂದಿಸಿದ್ದರೂ ಅಂಗಡಿಯಲ್ಲಿದ್ದ ಸೊತ್ತುಗಳು ಸುಟ್ಟು ಹೋಗಿವೆ. ಬಳಿಕ ಪರಿಶೀಲಿಸಿದಾಗ ಅಂಗಡಿಯ ಹಿಂಬದಿಯ ತಗಡನ್ನು ಎತ್ತಿ ಒಳಗೆ ಬೆಂಕಿ ಹಾಕಿರುವುದು ಕಂಡು ಬಂದಿದೆ. ಫ್ರಿಜ್‌, ವಿವಿಧ ಎಣ್ಣೆಗಳ ಪೆಟ್ಟಿಗೆಗಳು ಹಾಗೂ ಪ್ರತಿನಿತ್ಯ ಮಾರಾಟಕ್ಕೆ ಇಟ್ಟಿದ್ದ ಸಾಮಗ್ರಿಗಳು ಸುಟ್ಟು ಹೋಗಿ ಅಂದಾಜು 2 ಲಕ್ಷ ರೂ.…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಳೆದ ಹತ್ತು ವರ್ಷಗಳಿಂದ ಯುವ ಬಂಟರ ಸಂಘ ನಡೆದು ಬಂದ ಹಾದಿ ಅತ್ಯಂತ ಸ್ಮರಣೀಯವಾದದ್ದು. ಕಳೆದ ಎರಡು ವರ್ಷದ ದಶಮ ಸಂಭ್ರಮದ ಕಾಲಘಟ್ಟದಲ್ಲಿ ತನ್ನ ವಿಶಿಷ್ಟ ಕಾರ್ಯಕ್ರಮಗಳ ಮೂಲಕ ಕರ್ನಾಟಕದ ಎಲ್ಲಾ ಸಂಘಗಳಿಗೆ ಮಾದರಿಯಾಗಿ ತೋರಿಸಿ ಕೊಟ್ಟಿದ್ದಲ್ಲದೆ, ಜಾಗತಿಕ ಮಟ್ಟದಲ್ಲೂ ಸಹ ಮನ್ನಣೆಯನ್ನು ಪಡೆದುಕೊಂಡಿದೆ ಎಂದು ಮುಂಬೈನ ಯುವ ಉದ್ಯಮಿ, ಯುವ ಬಂಟರ ಸಂಘದ ನಿರ್ದೇಶಕರು ಆದ ಬೆಳ್ಳಾಡಿ ಅಶೋಕ್ ಶೆಟ್ಟಿ ಹೇಳಿದರು. ಕುಂದಾಪುರ ತಾಲೂಕು ಯುವ ಬಂಟರ ಸಂಘದ 2024 – 26ನೇ ಸಾಲಿನ ನೂತನ ಅಧ್ಯಕ್ಷರ ಆಡಳಿತಾವಧಿಯ ಕಾರ್ಯಕ್ರಮಗಳ ರೂಪುರೇಷೆಗಳ ಕೈಪಿಡಿಯನ್ನು ಬೆಳ್ಳಾಡಿಯಲ್ಲಿ ಅನಾವರಣಗೊಳಿಸಿ ಅವರು ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ನಿತೀಶ್ ಶೆಟ್ಟಿ ಬಸ್ರೂರು ವಹಿಸಿದ್ದರು. ಸ್ಥಾಪಕಾಧ್ಯಕ್ಷ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಶುಭ ಹಾರೈಸಿ ಈ ಹಿಂದೆ ಸಂಘಕ್ಕೆ ಉದಾರ ಮನಸ್ಸಿನಿಂದ ದೇಣಿಗೆಗಳನ್ನು ನೀಡಿದ ದಾನಿಗಳನ್ನು ಸ್ಮರಿಸಿಕೊಂಡರು. ನಿಕಟ ಪೂರ್ವ ಅಧ್ಯಕ್ಷರಾದ ಸುನಿಲ್ ಶೆಟ್ಟಿ ಹೇರಿಕುದ್ರು, ನಿಕಟ ಪೂರ್ವ ಕಾರ್ಯದರ್ಶಿ ಉದಯ್…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಮೂಡುಬಿದರೆ: ವಿದ್ಯಾರ್ಥಿಗಳ ಪ್ರತೀ ಹೆಜ್ಜೆಯಲ್ಲೂ ಗುರುವಿನ ಸ್ಥಾನ ಇರಬೇಕು ಎಂದು ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟ್ರೀಸ್ ಆಫ್ ಇಂಡಿಯಾದ (ಐಸಿಎಸ್‌ಐ) ಕೇಂದ್ರ ಸಮಿತಿ ಸದಸ್ಯ ಸಿ. ಎಸ್. ದ್ವಾರಕಾನಂದ್ ಹೇಳಿದರು. ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟ್ರೀಸ್ ಆಫ್ ಇಂಡಿಯಾ ಸಹಯೋಗದಲ್ಲಿ ಆಳ್ವಾಸ್ (ಸ್ವಾಯತ್ತ) ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಗುರುವಾರ ನಡೆದ ’ಶಿಕ್ಷಣ ತಜ್ಞರ ಸಶಕ್ತೀಕರಣ – ಶಿಕ್ಷಕರ ಸಮ್ಮೇಳನ’ದಲ್ಲಿ ಅವರು ಮಾತನಾಡಿದರು. ಇಷ್ಟಪಟ್ಟು ಓದಬೇಕು. ಕಷ್ಟ ಪಟ್ಟು ಓದುವ ಹಾಗೆ ಆಗಬಾರದು. ವಿದ್ಯಾರ್ಥಿಗಳಿಗೆ ಗುರಿ ಅತಿ ಮುಖ್ಯ. ಯಾವುದಕ್ಕಾಗಿ ಓದುತ್ತಿದ್ದೇವೆ ಎನ್ನುವ ಜ್ಞಾನ ನಿಮ್ಮಲ್ಲಿರಬೇಕು. ನಿಮ್ಮ ಸಮಯವನ್ನು ಓದಿಗೆ ಮೀಸಲಿಡಬೇಕು. ಇಷ್ಟ ಪಟ್ಟು ಕೆಲಸ ಮಾಡಿದಾಗ ಅದು ಕಷ್ಟ ವೆನಿಸುವುದಿಲ್ಲ’ ಎಂದರು. ಎಸ್. ಕೆ. ಎಫ್. ಎಲಿಕ್ಸರ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನಿರ್ದೇಶಕ ಪ್ರಜ್ವಲ್ ಆಚಾರ್ ಮಾತನಾಡಿ, ಶಿಕ್ಷಕರು ತುಂಬಾ ಸವಾಲುಗಳನ್ನು ಎದುರಿಸಬೇಕಾಗಿದೆ. ಶಿಕ್ಷಣ ನೀಡುವ ಜೊತೆಗೆ ತಂತ್ರಜ್ಞಾನಕ್ಕೆ ಸ್ಪಂದಿಸಬೇಕು. ನಾಳೆಯ ಸಮಾಜಕ್ಕೆ ನಾಯಕರನ್ನು ನೀಡುವ ದೊಡ್ಡ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಹಟ್ಟಿಅಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಪ್ರಾಂಶುಪಾಲರಾದ ಶರಣ ಕುಮಾರ ಸ್ಟಾರ್ ಎಜ್ಯುಕೇಷನ್ ಅವಾರ್ಡ್‌ನವರು ಕೊಡಮಾಡುವ 2024ನೇ ಸಾಲಿನ ರಾಷ್ಟ್ರೀಯಮಟ್ಟದ ‘ಬೆಸ್ಟ್ ಪ್ರಿನ್ಸಿಪಾಲ್’ ಪ್ರಶಸ್ತಿಗೆ ಭಾಜನರಾದರು. 2024ರ ಶೈಕ್ಷಣಿಕ ವರ್ಷದಲ್ಲಿ ಶಿಕ್ಷಣಕ್ಷೇತ್ರದಲ್ಲಿ ಉತ್ಕೃಷ್ಟ ಸಾಧನೆ, ಅಸಾಧಾರಣ ನಾಯಕತ್ವ, ಕರ್ತವ್ಯದಲ್ಲಿ ಅಚಲ ನಿಷ್ಠೆ, ಸೃಜನಾತ್ಮಕತೆ, ಪ್ರಕೃತಿ ಸಂರಕ್ಷಣೆಗೆ ವಿನೂತನ ಶೈಕ್ಷಣಿಕ ಕಾರ್ಯಕ್ರಮಗಳು ಇತ್ಯಾದಿ ಮಾನದಂಡಗಳ ಮೇಲೆ ಕೊಡಮಾಡುವ ಪ್ರಶಸ್ತಿ ಇದಾಗಿದ್ದು, ನ.26 ರಂದು ಮುಂಬೈನ ಎಂ ಎಂ ಆರ್ ಡಿ ಎ ಮೈದಾನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಮುಂಬೈನ ಎಫ್ ಎಫ್ ಟಿ ಪ್ರೈವೆಟ್ ಲಿಮಿಟೆಡ್‌ನ ನಿರ್ದೇಶಕರಾದ ಅಲಾಖ್ ಸಿಂಗ್ ಪ್ರಶಸ್ತಿಯನ್ನು ವಿತರಿಸಿದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಶರಣಕುಮಾರ “ಈ ಗೌರವವು ನನ್ನ ವೈಯಕ್ತಿಕ ಸಾಧನೆಯಲ್ಲ, ಈ ಗೌರವವು ನಮ್ಮ ತಂಡದ ಶ್ರೇಷ್ಠ ಪ್ರಯತ್ನಗಳ ಸಾಧನೆಯ ಸಮರ್ಪಣೆಯ ಪ್ರತಿಫಲವಾಗಿದೆ. ಈ ಪ್ರಶಸ್ತಿಯು ದೇಶಾದಾದ್ಯಂತ ಶಿಕ್ಷಣ ಕ್ಷೇತ್ರದಲ್ಲಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ಮಹತ್ವವನ್ನು ಮತ್ತಷ್ಟು…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕ್ರೀಡೆ ವಿದ್ಯಾರ್ಥಿಗಳ ಆರೋಗ್ಯ ವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಕ್ರೀಡೆಯಲ್ಲಿ ಭಾಗವಹಿಸುವುದು ಪದಕ ಗಳಿಸುವುದಕ್ಕೆ ಸೀಮಿತವಾಗಬಾರದು ಎಂದು ಉಪ್ಪುಂದ ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕರಾದ ಮಂಜುನಾಥ್ ಶೆಟ್ಟಿ ಅವರು ತಿಳಿಸಿದ್ದಾರೆ. ಅವರು ನ. 29ರಂದು ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಶ್ರೀ ವೆಂಕಟರಮಣ ದೇವ್ ಎಜುಕೇಶನಲ್ & ಕಲ್ಚರಲ್ ಟ್ರಸ್ಟ್ ನ ಕಾರ್ಯದರ್ಶಿ ಕೆ.ರಾಧಾಕೃಷ್ಣ ಶೆಣೈ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಆರೋಗ್ಯವೇ ಭಾಗ್ಯವಾಗಿರುವುದರಿಂದ ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸಿಸುವುದರ ಮೂಲಕ ಸದೃಢ ಆರೋಗ್ಯವನ್ನು ಹೊಂದಿ ಎಂದು ಶುಭ ಹಾರೈಸಿದರು. ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಶ್ರೀ ವೆಂಕಟರಮಣ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ ರೇಷ್ಮಾ ಡಿಸೋಜಾ, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥರಾದ ಪ್ರಮೀಳಾ ಡಿಸೋಜಾ ಉಪಸ್ಥಿತರಿದ್ದರು. ಕ್ರೀಡಾ ಕಾರ್ಯದರ್ಶಿ ಶಬರೀಶ್ ಪ್ರತಿಜ್ಞಾ ವಿಧಿ ಬೋಧಿಸಿದನು. ವಿದ್ಯಾರ್ಥಿಗಳನ್ನು ಶ್ರದ್ಧಾ, ವಿದ್ಯಾ, ಉನ್ನತಿ…

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಷ್ಟೀಯ ಮತದಾರರ ದಿನಾಚರಣೆಯ ಪ್ರಯುಕ್ತ ಕಾಲೇಜು ವಿದ್ಯಾರ್ಥಿಗಳಿಗೆ ನ.26 ರಂದು ಬಿ. ಆರ್ ಸಿ. ಕುಂದಾಪುರದಲ್ಲಿ ನಡೆದ ತಾಲೂಕು ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಶಂಕರನಾರಾಯಣ ಮದರ್ ತೆರೇಸಾಸ್ ಪಿಯು ಕಾಲೇಜಿನ ವಿದ್ಯಾರ್ಥಿಗಳಾದ ಅಮೂಲ್ಯ ಇಂಗ್ಲಿಷ್ ಪ್ರಬಂಧ ತಾಲೂಕು ಮಟ್ಟದಲ್ಲಿ ಪ್ರಥಮ, ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಗತಿ ಮತ್ತು ಆದಿತ್ಯ ಬಿ. ತಾಲೂಕು ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳಿಗೆ ಆಡಳಿತಮಂಡಳಿ, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳು ಶುಭಕೋರಿದ್ದಾರೆ.

Read More

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಬಡ ಹಾಗೂ ಮಧ್ಯಮ ವರ್ಗದವರಿಗೆ ಕಡಿಮೆ ಬೆಲೆಯಲ್ಲಿ ಔಷಧ ಲಭ್ಯವಾಗಬೇಕೆಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಜನೌಷಧ ಕೇಂದ್ರಗಳನ್ನು ಪ್ರಾರಂಭಿಸಿದೆ. ಇದರ ಲಾಭವನ್ನು ಪ್ರತಿಯೊಬ್ಬರು ಪಡೆದುಕೊಳ್ಳಬೇಕು’ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಶೆಟ್ಟಿ ಗಂಟೆಹೊಳೆ ತಿಳಿಸಿದರು. ಅವರು ಉಡುಪಿ ಜಿಲ್ಲಾ ತೋಟಗಾರಿಕಾ ಬೆಳೆಗಾರರ ಸಹಕಾರ ಸಂಘ ಇವರ ಜನೌಷಧಿ ಕೇಂದ್ರದಿಂದ ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡದಲ್ಲಿ  ಆರಂಭಗೊಂಡ ಪ್ರಧಾನ ಮಂತ್ರಿ ಭಾರತೀಯ ಜನೌಷಧ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು. ಉದ್ಘಾಟನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಮಾತನಾಡಿ, ಬಡವರು ದುಬಾರಿ ಬೆಲೆಯ ಔಷದ ಖರೀದಿಸಲು ಆಗುವುದಿಲ್ಲ ಎಂಬ ಕಾರಣದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಈ ಜನೌಷದ ಕೇಂದ್ರವನ್ನ ಪ್ರಾರಂಭಿಸಿದ್ದು ಜನೌಷಧ ಕೇಂದ್ರದಲ್ಲಿ ಹಾಗೂ ಇತರ ಔಷಧ ಅಂಗಡಿಗಳಲ್ಲಿ ದೊರೆಯುವ ಔಷಧಿಗಳು ಒಂದೇ ಆಗಿರುತ್ತವೆ. ಬೇರೆ ಬೇರೆ ಹೆಸರು ಹೊಂದಿರುತ್ತವೆ. ಆದ್ದರಿಂದ ಔಷಧ…

Read More

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ,ನ.29: ಕುಂದಾಪುರ ತಾಲೂಕಿನ ಮುಳ್ಳಿಕಟ್ಟೆ ಸಮೀಪದ ಅರಾಟೆ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಸೌಪರ್ಣಿಕಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಹಳೆಯ ಸೇತುವೆ ಶಿಥಿಲಗೊಂಡ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಳೆ ಸೇತುವೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಆದೇಶ ಹೊರಡಿಸಿದೆ. 615 ಮೀಟರ್ ಉದ್ದವಿರುವ ಸೇತುವೆ ಶಿಥಿಲಗೊಂಡ ಹಿನ್ನೆಲೆಯಲ್ಲಿ ವಾಹನ ಸಂಚಾರ ನಿಷೇಧಿಸುವಂತೆ ತಜ್ಞರ ಸಮಿತಿ ಶಿಪಾರಸ್ಸು ಮಾಡಿತ್ತು. ಜಿಲ್ಲೆಯ ಕುಂದಾಪುರ ತಾಲೂಕಿನ ಸೌಪರ್ಣಿಕಾ ನದಿಗೆ ಅಡ್ಡಲಾಗಿ ಕುಂದಾಪುರ-ಬೈಂದೂರು ರಾಷ್ಟ್ರೀಯ ಹೆದ್ದಾರಿ-66ರ ಮುಳ್ಳಿಕಟ್ಟೆ ಸಮೀಪದ ಅರಾಟೆಯಲ್ಲಿ 1966 ಇಸವಿಯಲ್ಲಿ ನಿರ್ಮಿಸಿರುವ ಹಳೆಯ ಸೇತುವೆಯು ಶಿಥಿಲಗೊಂಡಿರುವ ಹಿನ್ನೆಲೆ, ಸಾರ್ವಜನಿಕ ಹಿತ ದೃಷ್ಟಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿಗಳು 1989ರ ಕಲಂ 221(ಎ(2) & (5) ಅನ್ವಯ, ಕುಂದಾಪುರ-ಬೈಂದೂರು ರಾಷ್ಟ್ರೀಯ ಹೆದ್ದಾರಿ-66ರ ಮುಳ್ಳಿಕಟ್ಟೆ ಸಮೀಪದ ಅರಾಟೆ ಹಳೆ ಸೇತುವೆಯಲ್ಲಿ (ಏm 272-840) ವಾಹನ ಸಂಚಾರವನ್ನು ನಿಷೇಧಿಸಿ ಈ ಸೇತುವೆಯಲ್ಲಿ ಸಂಚರಿಸುವ ವಾಹನಗಳಿಗೆ ಪಕ್ಕದಲ್ಲೇ ಚತುಷ್ಪಥ ಹೆದ್ದಾರಿಯಲ್ಲಿ…

Read More

ಕುಂದಾಪ್ರ ಡಾಟ್‌ ಕಾಂ ಸುದಿ.ಕುಂದಾಪುರ: ತಾಲೂಕಿನ ಕಟ್ಕೆರೆ ಯುವಶಕ್ತಿ ಯುವಕ ಮಂಡಲ ಇದರ ನೂತನ ಅಧ್ಯಕ್ಷರಾಗಿ ದಯಾನಂದ ಶೆಟ್ಟಿ ಕಟ್ಕೆರೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗೌರವ ಅಧ್ಯಕ್ಷರಾಗಿ ಗಣೇಶ್ ಶೆಟ್ಟಿ ಕಟ್ಕೆರೆ, ಉಪಾಧ್ಯಕ್ಷರಾಗಿ ರಾಘವೇಂದ್ರ ಬಿ.ಕೆ., ಸಂತೋಷ್ ಪೂಜಾರಿ, ಮಧುಕರ್ ಕಟ್ಕೆರೆ, ಪ್ರಧಾನ ಕಾರ್ಯದರ್ಶಿಗಳಾಗಿ ಶ್ರೀಶಾ ಕೆ.ಎಸ್‌, ಜೊತೆ ಕಾರ್ಯದರ್ಶಿಯಾಗಿ ಮಂಜುನಾಥ್ ಪೂಜಾರಿ, ಕೋಶಾಧಿಕಾರಿಯಾಗಿ ರಮೇಶ್ ಕಟ್ಕೆರೆ, ಜೊತೆ ಕೋಶಾಧಿಕಾರಿಯಾಗಿ ಪ್ರಜ್ವಲ್ ಪೂಜಾರಿ, ಗೌರವ ಸಲಹೆಗಾರರಾಗಿ ಲಕ್ಷ್ಮಣ್‌ ಶೆಟ್ಟಿ ಕಟ್ಕೆರೆ, ಮಹೇಶ್ ಭಟ್ ಕಟ್ಕೆರೆ, ಪ್ರಶಾಂತ್ ಶೆಟ್ಟಿ ಕಟ್ಕೆರೆ, ಪ್ರವೀಣ್ ಶೆಟ್ಟಿ ಕಟ್ಕೆರೆ, ಉದಯ್ ಕಟ್ಕೆರೆ, ಎ. ಮೋಹನ್ ಕಟ್ಕೆರೆ, ಕ್ರೀಡಾ ಕಾರ್ಯದರ್ಶಿಯಾಗಿ ಶಿವರಾಜ್ ಪೂಜಾರಿ, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ರಾಜೇಂದ್ರ ಕಟ್ಕೆರೆ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ನಾಗರಾಜ್‌ ಕಟ್ಕೆರೆ, ಜೊತೆ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸತೀಶ್ ಕಟ್ಕೆರೆ ಅವರನ್ನು ಸರ್ವಾನುಮತದಿಂದ  ಆಯ್ಕೆ ಮಾಡಲಾಗಿದೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Read More