ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ನಿವಾಸಿ ರೈನಿಶ್ ರಿಹಾನ್ (33) ಮದ್ಯಪಾನಕ್ಕೆ ತಾಯಿ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮೃತಪಟ್ಟಿದ್ದಾನೆ. ಅವನು ಮದ್ಯಪಾನದ ಚಟ ಹೊಂದಿದ್ದು, ತಾಯಿಯಲ್ಲಿ ಆಗಾಗ ಹಣ ಕೇಳಿ ಗಲಾಟೆ ಮಾಡುತ್ತಿದ್ದ. ಅ.29ರಂದು ತಲ್ಲೂರಿನ ಪಾರ್ತಿಕಟ್ಟೆ ಎಂಬಲ್ಲಿರುವ ಮನೆಯಿಂದ ಗಲಾಟೆ ಮಾಡಿ ಹೋಗಿದ್ದ. ನ.8ರಂದು ಕುಂದಾಪುರ ಸರಕಾರಿ ಆಸ್ಪತ್ರೆಯಿಂದ ತಾಯಿಗೆ ಕರೆ ಬಂದಿದ್ದು ಇಲಿ ಪಾಷಾಣ ಸೇವಿಸಿರುವುದಾಗಿ ವೈದ್ಯರು ತಿಳಿಸಿದ್ದರು. ನಂತರ ಆತನನ್ನು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ವೆನ್ಸಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮೃತಪಟ್ಟಿದ್ದಾರೆ. ಮೃತನ ತಾಯಿ ಸ್ಟೆಲ್ಲಾ ನೀಡಿದ ದೂರಿನಂತೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ವೈದ್ಯಕೀಯ, ಶಿಕ್ಷಣ ಮತ್ತು ಕೈಗಾರಿಕಾ ಕ್ಷೇತ್ರದಲ್ಲಿ ಮಹತ್ತರ ಸಾಧನೆಗೈದ ಪ್ರಮುಖರಲ್ಲಿ ಡಾ| ಬಿ. ಬಿ. ಹೆಗ್ಡೆ ಅವರು ಅಗ್ರಪಂಕ್ತಿಯಲ್ಲಿದ್ದಾರೆ. ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ ಮಾಡುವುದರ ಜೊತೆಗೆ ನೂರಾರು ಜನರಿಗೆ ಬದುಕನ್ನು ಕಟ್ಟಿಕೊಳ್ಳಲು ಡಾ| ಬಿ. ಬಿ. ಹೆಗ್ಡೆಯವರ ಹೆಸರಿನಲ್ಲಿ ಸ್ಥಾಪಿಸಲ್ಪಟ್ಟ ಈ ಸಂಸ್ಥೆಯಲ್ಲಿ ಡಾ| ಬಿ. ಬಿ. ಹೆಗ್ಡೆಯವರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಮತ್ತು ಕರ್ತವ್ಯ ಎಂದು ಕಾಲೇಜಿನ ಪ್ರಾಂಶುಪಾಲರಾದ ಕೆ. ಉಮೇಶ ಶೆಟ್ಟಿ ಹೇಳಿದರು. ಅವರು ಕುಂದಾಪುರದ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗ ಆಯೋಜಿಸಿದ ಡಾ| ಬಿ. ಬಿ. ಹೆಗ್ಡೆ ಅವರ ಸಂಸ್ಮರಣ ಕಾರ್ಯಕ್ರಮದಲ್ಲಿ ಮಾತನಾಡಿದರು. ಉಪ-ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿ, ಕನ್ನಡ ವಿಭಾಗದ ಪ್ರಾಧ್ಯಾಪಕರಾದ ರೇಷ್ಮಾ ಶೆಟ್ಟಿ ಸ್ವಾಗತಿಸಿ, ಸುಕುಮಾರ್ ಶೆಟ್ಟಿ ಕಮಲಶಿಲೆ ವಂದಿಸಿ, ಪ್ರವೀಣಾ ಎಮ್. ಪೂಜಾರಿ ಕಾರ್ಯಕ್ರಮವನ್ನು ನಿರೂಪಿಸಿದರು.
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಡೇರಹೋಬಳಿ ಕಾರಂತರ ಮನೆ ಎದುರು ರಾಜ್ಯ ಹೆದ್ದಾರಿಯಲ್ಲಿ ಬಸ್ರೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ 407 ಟೆಂಪೊ ಅತಿ ವೇಗ ಮತ್ತು ಅಜಾಗರೂಕತೆಯಿಂದ ಸ್ಕೂಟರ್ಗೆ ಡಿಕ್ಕಿ ಹೊಡೆದು ನಂತರ ಟಿಪ್ಪರ್ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಸ್ಕೂಟರ್ ಸವಾರ ಪ್ರಸಾದ(47) ಹಾಗೂ ಸಹಸವಾರ ಶಿಶಿಮೀಂದ್ರ(13) ಗಾಯಗೊಂಡಿದ್ದಾರೆ. 407 ಟೆಂಪೊ ಚಾಲಕ ನೀಲಕಂಠ ಎಂಬಾತನ ವಿರುದ್ಧ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಗ್ರಾಮ ಪಂಚಾಯತ್ಗಳ ಸಾರ್ವತ್ರಿಕ ಉಪ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯ ಗ್ರಾಮ ಪಂಚಾಯತ್ಗಳಲ್ಲಿ ಸದಸ್ಯರ ರಾಜೀನಾಮೆ, ನಿಧನ ಮುಂತಾದ ಕಾರಣಗಳಿಂದ ಆಕಸ್ಮಿಕವಾಗಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ಮೂಲಕ ಭರ್ತಿ ಮಾಡಲು ಕುಂದಾಪುರ ತಾಲೂಕಿನ ಅಮಾಸೆಬೈಲು, ಬ್ರಹ್ಮಾವರ ತಾಲೂಕಿನ ಕೋಟ, ಉಡುಪಿ ತಾಲೂಕಿನ ಬೊಮ್ಮಾರಬೆಟ್ಟು ಹಾಗೂ ಕೊಡಿಬೆಟ್ಟು ಹಾಗೂ ಕಾರ್ಕಳ ತಾಲೂಕಿನ ಈದು, ನಲ್ಲೂರು, ನಿಟ್ಟೆ, ನೀರೆ, 5-ಕೆರ್ವಾಶೆ ಹಾಗೂ ಕಡ್ತಲ ಗ್ರಾಮ ಪಂಚಾಯತಿಗಳ ಖಾಲಿ ಇರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ವೇಳಾಪಟ್ಟಿಯನ್ನು ನಿಗಧಿಪಡಿಸಿ, ನವೆಂಬರ್ 23 ರಂದು ಮತದಾನ ನಡೆಸಲು ರಾಜ್ಯ ಚುನಾವಣಾ ಆಯೋಗವು ಆದೇಶಿಸಿರುತ್ತದೆ. ಈ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸುವ ನಿಟ್ಟಿನಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 1963 ರ ಕಲಂ 35 ರಡಿ ಪ್ರದತ್ತವಾದ…
ಕುಂದಾಫ್ರ ಡಾಟ್ ಕಾಂ ಸುದ್ದಿ.ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ನವೆಂಬರ್ 13 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಗ್ರಾಫಿಕ್ ಡಿಸೈನ್, (ಕಂಪ್ಲಿಟೇಡ್ ಪೋಟೋ ಶ್ಯಾಪ್ ಕೋರ್ಸ್) ಮತ್ತು ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ, 8105618291, 9945856670, 9901472710 ಹಾಗೂ 8105774936 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಕಚೇರಿ ಪ್ರಕಟಣೆ ತಿಳಿಸಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಮೂಡುಬಿದಿರೆ: ನವೆಂಬರ್ 08 ರಿಂದ 10ರವರೆಗೆ ನಡೆದ ಶಾಲಾ ಶಿಕ್ಷಣ ಇಲಾಖೆ, ಕೋಲಾರ ಜಿಲ್ಲೆ, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಕೋಲಾರ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ 17 ವರ್ಷ ವಯೋಮಿತಿಯ ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು ಒಟ್ಟು 14 ಚಿನ್ನ, 08 ಬೆಳ್ಳಿ ಮತ್ತು 05 ಕಂಚಿನ ಪದಕಗಳೊಂದಿಗೆ 27 ಪದಕ ಪಡೆದುಕೊಂಡಿದೆ. ಅದರಲ್ಲಿ ನಾಗಿಣಿ 800ಮೀ, 1500ಮೀ ನಲ್ಲಿ ನೂತನ ದಾಖಲೆ, ಜಾಸ್ಮಿನ ಹ್ಯಾಮರ್ ತ್ರೋನಲ್ಲಿ ಕ್ರೀಡಾಕೂಟದ ನೂತನ ಕೂಟ ದಾಖಲೆಯೊಂದಿಗೆ 17 ವರ್ಷ ವಯೋಮಿತಿಯ ಬಾಲಕ ಬಾಲಕಿಯರ ತಂಡ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.ಪ್ರೌಢ ಶಾಲಾ 17 ವರ್ಷ ವಯೋಮಿತಿಯ ಬಾಲಕಿಯರ ವೈಯಕ್ತಿಕ ಚಾಂಪಿಯನ್ ಪ್ರಶಸ್ತಿ:ಬಾಲಕಿಯರ ವಿಭಾಗ: ನಾಗಿಣಿ – 10 ಅಂಕಫಲಿತಾಂಶ:ಪ್ರೌಢ ಶಾಲಾ 17 ವರ್ಷ ವಯೋಮಿತಿಯ ಬಾಲಕ ಮತ್ತು ಬಾಲಕಿಯರ ಫಲಿತಾಂಶ : ಇಶಾನಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಒನಕೆ ಓಬವ್ವಳ ನಿಸ್ವಾರ್ಥ ನಾಡಪ್ರೇಮ, ವೀರ ನಾಡೆನಿಸಿದ ಚಿತ್ರದುರ್ಗದ ಉಕ್ಕಿನ ಕೋಟೆಯನ್ನು ಶತ್ರುಗಳ ಆಕ್ರಮಣದಿಂದ ರಕ್ಷಿಸಲು ಒನಕೆಯನ್ನು ಆಯುಧವಾಗಿ ಹಿಡಿದು ಶತ್ರುಗಳನ್ನು ಸಂಹಾರ ಮಾಡಿದ್ದರಿಂದ ಚರಿತ್ರೆಯಲ್ಲಿ ಅಜರಾಮರಳಾಗಿ, ಸ್ತ್ರೀ ಶಕ್ತಿಯ ಸಂಕೇತವಾಗಿ ಜನಮಾನಸದಲ್ಲಿ ಇಂದಿಗೂ ಅಚ್ಚಳಿಯದೇ ಉಳಿದಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆಯನ್ನು ಉದ್ಘಾಟಿಸಿ, ಒನಕೆ ಓಬವ್ವ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಒನಕೆ ಓಬವ್ವ 18 ನೇ ಶತಮಾನದ ಓರ್ವ ವೀರ ವನಿತೆ ಮಹಿಳೆ. ಹೈದರಾಲಿಯ ಸೈನಿಕರು ಕೋಟೆಯನ್ನು ಮುತ್ತಿಗೆ ಹಾಕಿದ ಸಂದರ್ಭದಲ್ಲಿ, ಒಬ್ಬ ಸಾಮಾನ್ಯ ಹೆಣ್ಣುಮಗಳು, ಅಸಾಮಾನ್ಯವಾಗಿ ಯುದ್ಧಕಲೆಯ ಆಳ, ಅಗಲದ ಅರಿವಿಲ್ಲದೆ, ಊಟ ಮಾಡುತ್ತಿರುವ ಗಂಡನನ್ನು ಎಬ್ಬಿಸದೇ, ಶತ್ರು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಉಡುಪಿ: ಮಳೆಯಾಶ್ರಿತ ಕೃಷಿಯನ್ನು ಸುಸ್ಥಿರ ಕೃಷಿಯನ್ನಾಗಿ ರೂಪಾಂತರಗೊಳಿಸುವ ನಿಟ್ಟಿನಲ್ಲಿ, ಸಮರ್ಪಕ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆ ಪದ್ಧತಿಯಿಂದ ಕೃಷಿ ಉತ್ಪಾದಕತೆಯನ್ನು ಉತ್ತಮ ಪಡಿಸಿ ಆದಾಯವನ್ನು ಹೆಚ್ಚಿಸುವ ಸಲುವಾಗಿ ಮತ್ತು ಮಳೆ ನೀರನ್ನು ವ್ಯರ್ಥ ಮಾಡದೆ ಆಯ್ದ ಸ್ಥಳದಲ್ಲಿ ಕೃಷಿ ಹೊಂಡ ತೆಗೆದು ಜಲ ಸಂಗ್ರಹಿಸಿ, ಬೆಳೆಗಳ ಸಂದಿಗ್ಧ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವ ಸಲುವಾಗಿ ಕೃಷಿ ಭಾಗ್ಯ ಯೋಜನೆಯನ್ನು ತಾಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಕೃಷಿ ಭಾಗ್ಯ ಯೋಜನೆಯಡಿ ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ, ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ, ಹೊಂಡದಿಂದ ನೀರು ಎತ್ತಲು ಡೀಸೆಲ್/ ಪೆಟ್ರೋಲ್/ ಸೋಲಾರ್ ಪಂಪ್ ಸೆಟ್ ಹಾಗೂ ಸೂಕ್ಷ್ಮ (ತುಂತುರು/ ಹನಿ) ನೀರಾವರಿ ಘಟಕಗಳ ಅನುಷ್ಠಾನಕ್ಕೆ ಸಾಮಾನ್ಯ ವರ್ಗದ ರೈತರಿಗೆ ಶೇ. 80 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುವುದು. ರೈತರುಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಉಡುಪಿಯ ಶಾರದಾ ವಸತಿ ಶಾಲೆಯಲ್ಲಿ ನಡೆದ ಉಡುಪಿ ಜಿಲ್ಲಾ ಅಂತರ್ ಶಾಲಾ ಬಾಸ್ಕೆಟ್ ಬಾಲ್ ಪಂದ್ಯಾವಳಿಯಲ್ಲಿ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು ಅವಳಿ ರನ್ನರ್ ಅಪ್ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿತು. 14 ವರ್ಷದೊಳಗಿನ ಬಾಲಕ ಮತ್ತು 17 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನದೊಂದಿಗೆ ರನ್ನರ್ ಅಪ್ ಪ್ರಶಸ್ತಿ ಹಾಗೂ 17 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಮೂರನೇ ಸ್ಥಾನ ಪಡೆದು ಸಂಭ್ರಮಿಸಿತು. 14 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಪ್ರಕಾಶ್ ಬೆಸ್ಟ್ ಶೂಟರ್ ಹಾಗೂ 17 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಅಪೂರ್ವ ಶಿಂದೆ ಬೆಸ್ಟ್ ಡಿಫೆಂಡರ್ ಗೌರವಕ್ಕೆ ಪಾತ್ರರಾದರು. ವಿದ್ಯಾರ್ಥಿಗಳ ಈ ಅಭೂತಪೂರ್ವ ಸಾಧನೆಗೆ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳೂ ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ ಅಭಿನಂದನೆಗಳನ್ನು ಸಲ್ಲಿಸುತ್ತಾ “ಕಳೆದ ಹಲವಾರು ವರ್ಷಗಳಿಂದ ನಮ್ಮ ಸಂಸ್ಥೆಯು ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆಗೈಯುತ್ತಿದೆ. ನಮ್ಮ ವಿದ್ಯಾರ್ಥಿಗಳು ದೈಹಿಕ ಮತ್ತು ಮಾನಸಿಕ ಸದೃಢತೆಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಪತ್ನಿ ಮನೆಗೆ ಬಾರದೆ ಇರುವುದರಿಂದ ಮನ ನೊಂದು ವಿವಾಹಿತ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಕ್ಕಟ್ಟೆಯ ಬೇಳೂರಿನಲ್ಲಿ ನಡೆದಿದೆ. ಕುಮಟಾ ಮೂಲದ ತಾಲೂಕಿನ ಲೀಲಾ ಅವರ ಪುತ್ರ ಆನಂದ (30) ಆತ್ಮಹತ್ಯೆ ಮಾಡಿಕೊಂಡವರು. ಆತನ ಪತ್ನಿ ಮನೆಗೆ ಬಾರದಿರುವುದರಿಂದ ಮನ ನೊಂದು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕೋಟ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
