ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಬೈಂದೂರು ವಿಧಾನಸಭಾ ಕ್ಷೇತ್ರದ ರೈತರ ಹಿತರಕ್ಷಣೆ ಹಾಗೂ ಕೃಷಿ ಭೂಮಿಗೆ ಸಮರ್ಪಕ ನೀರಾವರಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಅವರು ಸೋಮವಾರ ಬೆಂಗಳೂರಿನಲ್ಲಿ ಮಾನ್ಯ ಜಲಸಂಪನ್ಮೂಲ ಸಚಿವರಾದ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ರಾಜಕೀಯ ದುರುದ್ದೇಶ ಹಾಗೂ ತಪ್ಪು ಮಾಹಿತಿಯಿಂದಾಗಿ ಅರ್ಧಕ್ಕೆ ಸ್ಥಗಿತಗೊಂಡಿರುವ ಬೈಂದೂರಿನ ಸಿದ್ಧಾಪುರ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ಈ ಹಿಂದೆ ಅನುಮೋದನೆಯಾದ ರೀತಿಯಲ್ಲಿಯೇ ತಕ್ಷಣವೇ ಮುಂದುವರಿಸಲು ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಸಂಸದರು ಸಚಿವರಿಗೆ ಅಧಿಕೃತ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದ್ದಾರೆ. ಈಗಾಗಲೇ ಶೇ. 56% ರಷ್ಟು ಕಾಮಗಾರಿ ಪೂರ್ಣಗೊಂಡಿರುವ ಸಿದ್ಧಾಪುರ ಏತ ನೀರಾವರಿ ಯೋಜನೆಯು ತಜ್ಞರ ತಂಡದ ವರದಿಯ ಆಧಾರದ ಮೇಲೆಯೇ ಅನುಮೋದನೆಗೊಂಡು ಕಾರ್ಯಾರಂಭವಾಗಿತ್ತು ಎಂದು ಬಿ.ವೈ.ರಾಘವೇಂದ್ರ ಅವರು ಸಚಿವರಿಗೆ ವಿವರಿಸಿದರು. ವರಾಹಿ ನದಿಯಲ್ಲಿ ಸದ್ಯ 3,000 ಕ್ಯೂಸೆಕ್ಸ್ ನೀರಿನ ಹರಿವಿದ್ದು, ಈ ಯೋಜನೆಗೆ…
Author: ನ್ಯೂಸ್ ಬ್ಯೂರೋ
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆಯು 2026ರ ಮೇ. ತಿಂಗಳಲ್ಲಿ ನಡೆಸಿದ ಸಿ.ಎ. ಅಂತಿಮ ಪರೀಕ್ಷೆಯಲ್ಲಿ ಸಿಎ ಅದಿತಿ ಮೊಗವೀರ ಉತ್ತೀರ್ಣರಾಗಿದ್ದಾರೆ. ಅವರು ಸವಿತಾ ಮತ್ತು ಈಶ್ವರ ಮೊಗವೀರ ಅವರ ಪುತ್ರಿ.
ಕುಂದಾಪ್ರ ಡಾಟ್ ಕಾಂ ಸುದ್ದಿಕುಂದಾಪುರ: ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಸರಿಯಾದ ಮಾಹಿತಿಗಾಗಿ ಮತ್ತು ಶಿಸ್ತು – ಸಂಯಮ ಮತ್ತು ನಾಯಕತ್ವದ ಗುಣಗಳನ್ನು ಬೆಳೆಸುವ ನಿಟ್ಟಿನಲ್ಲಿ 2026-27ನೇ ಸಾಲಿನ ವಿದ್ಯಾರ್ಥಿ ನಾಯಕರುಗಳ ಪದಗ್ರಹಣ ಮತ್ತು ವಿವಿಧ ವಿದ್ಯಾರ್ಥಿ ಸಂಘಗಳ ಉದ್ಘಾಟನಾ ಸಮಾರಂಭ ನೆರವೇರಿತು. ಹತ್ತನೇ ತರಗತಿಯ ಸಂಗಮೇಶ ವ್ಯಾಪಾರಿ ಮತ್ತು ಸಂಶಿತಾ ಶೆಟ್ಟಿ ವಿದ್ಯಾರ್ಥಿ ನಾಯಕ ಮತ್ತು ವಿದ್ಯಾರ್ಥಿ ನಾಯಕಿಯರಾಗಿ ಆಯ್ಕೆಗೊಂಡರು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಗಳ ನೆಲೆಯಲ್ಲಿ ಉಪಸ್ಥಿತರಿದ್ದ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ತಿನ ಉಪಾಧ್ಯಕ್ಷರಾದ ರಮೇಶ ಎಚ್.ಎಸ್. ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಕಲಿಕೆಯು ಕೇವಲ ಅಂಕಗಳಿಗೆ ಮಾತ್ರ ಸೀಮಿತವಾಗಿರಬಾರದು. ಬದುಕಿನಲ್ಲಿ ಸಾಧನೆ ಮಾಡಬೇಕಾದರೆ ಏನೆಲ್ಲ ಬೇಕೋ ಆ ಎಲ್ಲಾ ವಿದ್ಯೆಗಳನ್ನೂ ಕಲಿಯಬೇಕು. ಸಮಾಜವನ್ನು ಸರಿಯಾದ ಮಾರ್ಗದಲ್ಲಿ ಮುನ್ನಡೆಸಬೇಕಾದರೆ ಮಕ್ಕಳು ತಿಳಿಯಲೇ ಬೇಕಾದ ಎಲ್ಲಾ ವಿಚಾರಗಳನ್ನೂ ಅಭ್ಯಾಸ ಮಾಡಬೇಕು. ಅಂತಹ ವಿದ್ಯೆ ಇಂತಹ ವಸತಿ ಶಾಲೆಗಳಲ್ಲಿ ಸಿಗುತ್ತಿದ್ದು, ಸಮಯ ಹಾಳು ಮಾಡದೇ ಉತ್ತಮ ನಾಯಕತ್ವಾದಿಗುಣಗಳನ್ನು ಬೆಳೆಸಿಕೊಳ್ಳಿ ಎಂದು ಕಿವಿಮಾತುಗಳನ್ನಾಡಿದರು. ಇನ್ನೊರ್ವ ಮುಖ್ಯ ಅತಿಥಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ರೋಟರಿ ಕೋಟ ಸಿಟಿ ಹಾಗೂ ರೋಟರಿ ಕೋಟ ಸಾಲಿಗ್ರಾಮ ಇವರ ಜಂಟಿ ಆಯೋಗದಲ್ಲಿ ಕೋಟ ಸಮುದಾಯ ಕೇಂದ್ರದಲ್ಲಿ ನಡೆದ ಪಲ್ಸ್ ಪೋಲಿಯೋ ಲಸಿಕ ಅಭಿಯಾನ ಕಾರ್ಯಕ್ರಮಕ್ಕೆ ಉಡುಪಿ ಚಿಕ್ಕಮಂಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಚಾಲನೆ ನೀಡಿ ಪೋಲಿಯೋ ಮುಕ್ತ ಭಾರತದ ಬಗ್ಗೆ ರೋಟರಿಯ ಕೊಡುಗೆಯನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ ಕೋಟ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಾಧವ ಪೈ, ಸಿಟಿಯ ನಿಯೋಜಿತ ಅಧ್ಯಕ್ಷ ರಾಧಾಕೃಷ್ಣ ಬ್ರಹ್ಮಾವರ, ಅಸಿಸ್ಟೆಂಟ್ ಗವರ್ನರ್ ಶ್ಯಾಮ್ ಸುಂದರ್ ನಾಯರಿ, ವಲಯ ತರಬೇತುದಾರರಾದ ಸತೀಶ್ ಶೆಟ್ಟಿ, ಕೋಟ ಸಾಲಿಗ್ರಾಮ ರೋಟರಿ ಕ್ಲಬ್ ಮಾಜಿ ಅಸಿಸ್ಟೆಂಟ್ ಗವರ್ನರ್ ರಾಜೇಂದ್ರ ಸುವರ್ಣ, ಕೋಟ ಸಿಟಿಯ ಸದಸ್ಯರಾದ ಶರತ್ ಕುಮಾರ್ ಶೆಟ್ಟಿ, ನಿತ್ಯಾನಂದ ನಾಯರಿ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಕೋಟ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ನಮ್ಮ ಸಂಸದರಿಗೆ ರಾಷ್ಟ್ರೀಯ ಹೆದ್ದಾರಿ 66ನ್ನು ಚತುಷಟ್ಪತಗೊಳಿಸಲು ಮನವಿ ಸಲ್ಲಿಸಲಾಯಿತು ಹಾಗೂ ಕೋಟ ಸಿಟಿಯ ಕಾರ್ಯದರ್ಶಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ವಿಶ್ವಕರ್ಮ ಗೆಳೆಯರ ಬಳಗ ರಿ. ಭಟ್ಕಳ ಇವರ ಆಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮದ ಮನೆಗೊಂದು ಗಿಡ ಅಭಿಯಾನದ ಈ ವರ್ಷದ ಉದ್ಘಾಟನಾ ಕಾರ್ಯಕ್ರಮವು ಭಟ್ಕಳದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಅನೇಕ ಗಣ್ಯರ ಸಮ್ಮುಖದಲ್ಲಿ ನೆರವೇರಿತು. ವನಮಹೋತ್ಸವದ ದಶಮಾನೋತ್ಸವ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ಎಮ್.ಎನ್. ನಾಯ್ಕ್ ಗಿಡ ನೆಡುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಉಲ್ಲಾಸ ನಾಯ್ಕ ಹಾಗೂ ತಾಲೂಕು E.C.O ಪ್ರೌಢ ಶ್ರೀನಿವಾಸ ನಾಯ್ಕ ಸಂಘದ ಪರಿಸರ ಕಾಳಜಿಯ ಬಗ್ಗೆ ಹಮ್ಮಿಕೊಂಡಿರುವ ವಿನೂತನ ಕಾರ್ಯಕ್ರಮ ತಿಳಿದು ಸ್ಫೂರ್ತಿದಾಯಕ ಮಾತುಗಳನ್ನಾಡಿದರು. ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ ಉಮೇಶ ಕೆರೆಕಟ್ಟೆ ಅವರು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಹಿತ ನುಡಿಗಳನ್ನಾಡಿದರು. ನಿವೃತ್ತ ಯೋಧರು, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಭಟ್ಕಳದ ನಿರ್ದೇಶಕರಲ್ಲೊಬ್ಬರಾ ದ ಶ್ರೀಕಾಂತ್ ನಾಯ್ಕ್ ಮಾತನಾಡಿ ಈ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೊಲ್ಲೂರು: ಮುಜರಾಯಿ ಇಲಾಖೆಯ ದೇವಸ್ಥಾನಗಳಿಗೆ ಸಂಬಂಧಿಸಿ ಒತ್ತುವರಿಯಾಗಿರುವ ಜಮೀನನ್ನು ತೆರವುಗೊಳಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಸಂಬಂಧಪಟ್ಟ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೂ ಈ ಕುರಿತು ಸೂಚನೆ ನೀಡಲಾಗಿದ್ದು ಈ ಬಗ್ಗೆ ಸೂಕ್ತ ಕ್ರಮ ವಹಿಸಿರುವ ಬಗ್ಗೆ ಮಾಹಿತಿ ಪಡೆದುಕೊಂಡು, ಮುಂದಿನ ಕ್ರಮ ವಹಿಸಲಾಗುವುದೆಂದು ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ. ಅವರು ರವಿವಾರ ಪತ್ನಿ ಕನ್ನಿಕಾ ಪರಮೇಶ್ವರಿ ಅವರೊಂದಿಗೆ ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ಚಂಡಿಕಾ ಹೋಮ ನೆರವೇರಿಸಿ, ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಕೊಲ್ಲೂರು ದೇವಸ್ಥಾನಕ್ಕೆ ದೇಶ-ವಿದೇಶಗಳಿಂದ ಬರುವ ಭಕ್ತರಿಗೆ ದರ್ಶನ, ವಸತಿ, ಪಾರ್ಕಿಂಗ್ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯ ವ್ಯವಸ್ಥೆಯನ್ನು ಕಲ್ಪಿಸಲು ಮಾಸ್ಟರ್ ಪ್ಲಾನ್ ಸಿದ್ಧಪಡಿಸಿ ಶೀಘ್ರದಲ್ಲಿ ಅದನ್ನು ಕಾರ್ಯಗತ ಗೊಳಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು. ದೇವಾಲಯದ ಹಿರಿಯ ಅರ್ಚಕರಾದ ಎನ್. ನರಸಿಂಹ ಅಡಿಗ ಹಾಗೂ ಸುಬ್ರಮಣ್ಯ ಅಡಿಗ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಮುಂದಿನ ತಲೆಮಾರಿಗಾಗಿ ಪರಿಸರವನ್ನು ಉಳಿಸಿ ಬೆಳೆಸುವ ಕಾರ್ಯ ಪ್ರತಿಯೊಬ್ಬರು ಮಾಡಬೇಕು ಆ ಮೂಲಕ ಹಸಿರು ಕ್ರಾಂತಿ ಸೃಷ್ಟಿ ಸಾಧ್ಯ ಎಂದು ಶಿಕ್ಷಣ ತಜ್ಞ ಮಣೂರು ನರಸಿಂಹ ಮಧ್ಯಸ್ಥ ಹೇಳಿದರು. ಅವರು ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ಇವರ ನೇತೃತ್ವದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘ ಮಣೂರು,ಗೀತಾನಂದ ಫೌಂಡೇಶನ್ ಮಣೂರು, ಅನ್ನಪೂರ್ಣ ನರ್ಸರಿ ಪೇತ್ರಿ, ಸ್ಥಳೀಯ ಸಂಘಟನೆಯ ಸಹಯೋಗದೊಂದಿಗೆ 307ನೇ ವಾರದ ಪರಿಸರಸ್ನೇಹಿ ಹಸಿರುಹೆಜ್ಜೆ ಅಭಿಯಾನ ಕಾರ್ಯಕ್ರಮವನ್ನು ಮಕ್ಕಳಿಗೆ ಗಿಡ ಹಸ್ತಾಂತರಿಸಿ ಮಾತನಾಡಿದರು. ಪರಿಸರದ ಬಗ್ಗೆ ಇಂದಿನ ಯುವ ಸಮುದಾಯಕ್ಕೆ ಜಾಗೃತಿ ಮೂಡಿಸುವ ಅಗತ್ಯತೆಯನ್ನು ಒತ್ತಿ ಹೇಳಿದ ಅವರು ಪಂಚವರ್ಣ ಸಂಘಟನೆ ಪರಿಸರದ ಬಗೆಗಿನಕಾಳಜಿಯನ್ನು ಪ್ರಶಂಸಿದರು. ಮುಖ್ಯ ಅಭ್ಯಾಗತರಾಗಿ ಸ್ನೇಹಕೂಟ ಮಣೂರು ಅಧ್ಯಕ್ಷೆ ಭಾರತಿ ವಿ ಮಯ್ಯ ಮನಮನೆಗೆ ಗಿಡ ನಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪಂಚವರ್ಣದ ಸದಸ್ಯ ಮಹೇಶ್ ಬೆಳಗಾವಿ ನೆರೆದಿದ್ದ ಪರಿಸರಾಸಕ್ತರಿಗೆ ಪ್ರತಿಜ್ಞಾವಿಧಿ ಭೋದಿಸಿದರು.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ನೆರೆಯ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಮಾತೃಭಾಷಾಭಿಮಾನ ಕಡಿಮೆಯಾಗುತ್ತಿದೆ. ಐಶಾರಾಮಿ ಜೀವನ ಕ್ರಮಗಳು ನಮ್ಮನ್ನು ಕುಗ್ಗಿಸುತ್ತಿವೆ. ಈಗ ಕೃತಕ ಬುದ್ಧಿಮತ್ತೆ ಪ್ರವೇಶದಿಂದ ನಾವು ಜೀವಂತ ಶವಗಳಾಗುತ್ತಿದ್ದೇವೆ. ಮಾನವೀಯ ವಿಷಯಗಳು ಮರಿಚೀಕೆಯಾಗುತ್ತಿವೆ. ಪದವಿದರರ ಸೃಷ್ಟಿಯಾಗುತ್ತಿದೆಯೇ ಹೊರತು ಮನುಷ್ಯತ್ವದ ಸೃಷ್ಟಿ ಆಗುತ್ತಿಲ್ಲ. ನಮ್ಮನ್ನು ನಾವು ಅರ್ಥ ಮಾಡಿಕೊಂಡು ನಮ್ಮ ಆಚೆಯನ್ನು ನೋಡಬೇಕಾದರೆ ಅದು ಸಾಹಿತ್ಯದಿಂದ ಮಾತ್ರ ಸಾಧ್ಯ ಎಂದು ಖ್ಯಾತ ಲೇಖಕ ಡಾ. ನರೇಂದ್ರ ರೈ ದೇರ್ಲ ಹೇಳಿದರು. ಅವರು ರವಿವಾರ ಕುಂಭಾಶಿಯ ವಿನಾಯಕ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕುಂದಾಪುರ ತಾಲ್ಲೂಕು ಘಟಕ ತನ್ನ ಇಪ್ಪತ್ತನೆಯ ಕನ್ನಡ ಸಾಹಿತ್ಯ ಸಮ್ಮೇಳನ ನುಡಿ ಬೆಳಕು ಉದ್ಘಾಟಿಸಿ ಮಾತನಾಡಿದರು. ಇವತ್ತು ಪೋಷಕರು ಶಾಲೆಗಳ ಬಾಹ್ಯ ಆಡಂಬರವನ್ನು ನೋಡಿ ತಮ್ಮ ಮಕ್ಕಳನ್ನು ಅಲ್ಲಿಗೆ ಸೇರಿಸುವ ಕಾಲ ಬಂದಿದೆ. ಇವತ್ತು ನಮಗೆ ಸಂವೇದನೆ, ಬ೦ಧುತ್ವಗಳೊ೦ದಿಗೆರ ಮನಸ್ಸು ಕಟ್ಟುವ ಶಾಲೆಗಳು ಬೇಕು ಎ೦ದು ಹೇಳಿದ ಅವರು, ಮಾಧ್ಯಮ ಹಾಗೂ ಸಾಹಿತ್ಯಕ್ಕೂ ನಿಕಟ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ಶನಿವಾರ ಫ್ರೆಶರ್ಸ್ ಡೇ ಹಾಗೂ ವಿದ್ಯಾರ್ಥಿ ಸಂಸತ್ನ್ನು ದೀಪ ಪ್ರಜ್ವಲಿಸುವುದರ ಮೂಲಕ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿರುವ ಸೃಷ್ಟಿ ಇನ್ಫೋಟೆಕ್ ನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಪೂರ್ಣಪ್ರಜ್ಞ ಕಾಲೇಜಿನ ಅಕಾಡೆಮಿಕ್ ಕೌನ್ಸಿಲ್ ಸದಸ್ಯರಾಗಿರುವ ಹರ್ಷವರ್ಧನ್ ಶೆಟ್ಟಿ ಕಟ್ಕೇರಿ ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮವೇ ಯಶಸ್ಸು ಮತ್ತು ಸಾಧನೆಯ ಮೂಲ ಮಂತ್ರ. ದೃಢವಾದ ಗುರಿಯನ್ನು ಇಟ್ಟುಕೊಂಡು ಪ್ರತಿದಿನವೂ ಶ್ರಮಿಸುವುದರಿಂದ ಅಸಾಧ್ಯವಾದ್ದುದ್ದನ್ನು ಸಾಧಿಸಬಹುದು ಎಂದರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ವೆಂಕಟರಮಣ ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾ ಕೃಷ್ಣ ಶೆಣೈ ವಹಿಸಿ, ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಪಡೆದು ಅದ್ಭುತ ಪ್ರಜೆಗಳಾಗಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಸಿಇಟಿ ಪರೀಕ್ಷೆಯಲ್ಲಿ ಐದು ಸಾವಿರದ ಒಳಗಡೆ ರ್ಯಾಂಕ್ ಪಡೆದ 10 ವಿದ್ಯಾರ್ಥಿಗಳಿಗೆ ಬೆಳ್ಳಿಲೋಟ ಮತ್ತು ಅಭಿನಂದನಾ ಪತ್ರದೊಂದಿಗೆ ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಸಂಸ್ಥೆಯ ಖಜಾಂಚಿ ಕೆ. ಲಕ್ಷ್ಮೀ ನಾರಾಯಣ ಶೆಣೈ, ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಹಿರಿಯ ರಸಾಯನ ಶಾಸ್ತ್ರ ಉಪನ್ಯಾಸಕರಾದ ರಮಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಪಂಚವರ್ಣ ಸಂಘಟನೆಯಿಂದ ರೈತ ಪರಿಸರಸ್ನೇಹಿ ಕಾರ್ಯಕ್ರಮಗಳು ಜನಮನ್ನಣೆ ಗಳಿಸಿದೆ ಎಂದು ಕೋಟ ಸಹಕಾರಿ ವ್ಯವಸಾಯಕ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶರತ್ ಕುಮಾರ್ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಶುಕ್ರವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ರೈತಧ್ವನಿ ಸಂಘ ಕೋಟ,ಗೆಳೆಯರ ಬಳಗ ಕಾರ್ಕಡ, ಸ್ನೇಹಕೂಟ ಮಣೂರು, ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಇವರ ಸಹಯೋಗದೊಂದಿಗೆ 55ನೇ ರೈತರೆಡೆಗೆ ನಮ್ಮ ನಡಿಗೆ ಸರಣಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇಡೀ ದೇಶಕ್ಕೆ ಮಾದರಿ ಕಾರ್ಯಕ್ರಮಗಳನ್ನು ಈ ಪಂಚವರ್ಣ ಸಂಘಟನೆ ನೀಡುತ್ತಿದೆ.ಇಂತಹ ಸಂಘಟನೆ ರೈತಪರ ಅಥವಾ ತಳಮಟ್ಟದ ರೈತಸಮುದಾಯವನ್ನು ಗುರುತಿ ಗೌರವಿಸುತ್ತಿರುವುದು ಶ್ಲಾಘನೀಯ ಕಾರ್ಯ ಎಂದರಲ್ಲದೆ ಆನಂದ್ ಪೂಜಾರಿ ಕೃಷಿ ಕ್ಷೇತ್ರಕ್ಕೆ ಹೊಸ ಆವಿಷ್ಕಾರವನ್ನು ಧಾರೆ ಎರೆದಿದ್ದಾರೆ ಎಂದರು. ಇದೇ ವೇಳೆ 55ನೇ ರೈತ ಪುರಸ್ಕಾರವನ್ನು ಕೋಟತಟ್ಟು ನಿವಾಸಿ ಗುಳ್ಳಾಡಿ ಆನಂದ್ ಪೂಜಾರಿ ಇವರನ್ನು ಕೃಷಿ ಪರಿಕರವನ್ನಿತ್ತು ಗೌರವಿಸಲಾಯಿತು. ಪ್ರಾರಂಭದಲ್ಲಿ…
